Tag: DEMISE

  • ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಮಹಾದೇವ ವೇಳಿಪ ನಿಧನ

    ಕಾರವಾರ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ರವರು ಇಂದು ನಿಧನರಾಗಿದ್ದಾರೆ.

    ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಇದನ್ನೂ ಓದಿ: ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ

    ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ ಬೆಳಸುವುದರ ಜೊತೆ ಅರಣ್ಯ ಸಂರಕ್ಷಣೆ ಸಹ ಮಾಡಿದ್ದ ಮಹಾದೇವ ವೇಳಿಪ ಅವರು ಜನಪದ ಹಾಡುಗಳನ್ನು ಸಾವಿರ ಲೆಕ್ಕದಲ್ಲಿ ನಿರಂತರವಾಗಿ ಹಾಡುತಿದ್ದರು. ನಾಟಿ ವೈದ್ಯ ಸಹ ಆಗಿದ್ದ ಇವರ ಸರಳ ಸಜ್ಜನಿಕೆ ಎಲ್ಲರನ್ನೂ ಸೆಳೆಯುತಿತ್ತು. ಕಳೆದ ಎರಡು ದಿನದಿಂದ ಅನಾರೋಗ್ಯ ಪೀಡಿತರಾಗಿದ್ದ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮಹಿಳೆ ಬೆನ್ನ ಮೇಲೆ ಎಸ್‍ಪಿ ಸ್ಟಿಕ್ಕರ್ ಅಂಟಿಸಿದ ವೀಡಿಯೋ ವೈರಲ್ – ಮಹಿಳೆ ಹೇಳಿದ್ದೇನು?

  • ಮಾಜಿ ಫುಟ್ಬಾಲ್ ಆಟಗಾರ ಸುಭಾಷ್ ಭೌಮಿಕ್ ನಿಧನ

    ಮಾಜಿ ಫುಟ್ಬಾಲ್ ಆಟಗಾರ ಸುಭಾಷ್ ಭೌಮಿಕ್ ನಿಧನ

    ಕೊಲ್ಕತ್ತಾ: ಲೆಜೆಂಡರಿ ಮಾಜಿ ಫುಟ್ಬಾಲ್ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್ ಭೌಮಿಕ್ (72) ಅವರು ಶನಿವಾರ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರೂವರೆ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. 1970ರ ಏಷ್ಯನ್ ಗೇಮ್ಸ್‍ನಲ್ಲಿ ಭಾರತದ ಫುಟ್ಬಾಲ್ ತಂಡದಲ್ಲಿ ಆಟಗಾರರಾಗಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದಿತ್ತು.

    ಭೌಮಿಕ್ ಅವರು ಮೊಹಮ್ಮದನ್ ಸ್ಪೋರ್ಟಿಂಗ್, ಸಲ್ಗೋಕರ್, ಈಸ್ಟ್ ಬೆಂಗಾಲ್ ಸೇರಿದಂತೆ ಹಲವಾರು ದೊಡ್ಡ ಕ್ಲಬ್‍ಗಳಿಗೆ ಸ್ಟ್ರೈಕರ್ ಮತ್ತು ಆಟಗಾರರಾಗಿ ಆಡಿದ್ದರು. ಭೌಮಿಕ್ 1979ರಲ್ಲಿ ತಮ್ಮ ಆಟದ ವೃತ್ತಿ ಜೀವನದಿಂದ ನಿವೃತ್ತಿಗೊಂಡು, ತರಬೇತಿ ನೀಡಲು ಪ್ರಾರಂಭಿಸಿದ್ದರು. 2003ರಲ್ಲಿ ಪೂರ್ವ ಬಂಗಾಳದ ಎಎಸ್‍ಇಎಎನ್ ಪ್ರಶಸ್ತಿ ಹಾಗೂ ರಾಷ್ಟ್ರೀಯ ಲೀಗ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

    ಭೌಮಿಕ್ ಅವರಿಗೆ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಂತರ ಕೋಲ್ಕತ್ತಾದ ಎಕ್ಬಲ್‍ಪುರದ ನಸಿರ್ಂಗ್ ಹೋಮ್‍ಗೆ ದಾಖಲಾಗಿದ್ದರು. ಇಂದು ನಿಧನರಾಗಿದ್ದಾರೆ.  ಇದನ್ನೂ ಓದಿ: ವಿಮಾನ ಪ್ರಯಾಣಿಕರು ಇನ್ಮುಂದೆ ಒಬ್ಬರು ಒಂದೇ ಹ್ಯಾಂಡ್ ಬ್ಯಾಗ್ ಒಯ್ಯಬೇಕು!

    ಈ ಬಗ್ಗೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‍ಎಫ್) ಅಧ್ಯಕ್ಷ ಪ್ರಫುಲ್ ಪಟೇಲ್ ಮಾತನಾಡಿ, ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಭೌಮಿಕ್ ಇನ್ನಿಲ್ಲ ಎಂದು ಕೇಳಲು ದುಃಖವಾಗಿದೆ. ಭಾರತೀಯ ಫುಟ್ಬಾಲ್‍ಗೆ ಅವರ ಅಮೂಲ್ಯ ಕೊಡುಗೆ ಯಾವಾಗಲೂ ನಮ್ಮೊಂದಿಗೆ ಇರುತ್ತದೆ ಮತ್ತು ಎಂದಿಗೂ ಮರೆಯಲಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಿಲ್ಲ: ಗಂಗೂಲಿ

  • ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್‌ ನಿಧನ

    ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್‌ ನಿಧನ

    ಲಾಸ್‌ ಏಂಜಲೀಸ್: ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಬಹಮಿಯನ್‌-ಅಮೆರಿಕನ್‌ ನಟ ಸಿಡ್ನಿ ಪೊಯ್ಟಿಯರ್‌ (94) ನಿಧನರಾಗಿದ್ದಾರೆ.

    1963ರಲ್ಲಿ ʻಲಿಲೀಸ್ ಆಫ್ ದಿ ಫೀಲ್ಡ್ʼ ಚಲನಚಿತ್ರ ತೆರೆಕಂಡು ದೊಡ್ಡ ಮೈಲಿಗಲ್ಲನ್ನೇ ಸೃಷ್ಟಿಸಿತು. ಸಿನಿಮಾದಲ್ಲಿ ಸಿಡ್ನಿ ಅವರ ಅತ್ಯುತ್ತಮ ನಟನೆಗೆ ಆಸ್ಕರ್‌ ಒಲಿಯಿತು. ಸಿನಿಮಾರಂಗದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಮೊದಲ ಕಪ್ಪು ವರ್ಣೀಯ ಎಂಬುದು ಮತ್ತೊಂದು ಇತಿಹಾಸ. ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಪುರಸ್ಕೃತ, ಹಾಲಿವುಡ್ ನಿರ್ದೇಶಕ ಪೀಟರ್ ಬಾಗ್ಡಾನವಿಚ್ ನಿಧನ

    ಪೊಯ್ಟಿಯರ್‌ ಒಬ್ಬ ಐಕಾನ್‌, ಹೀರೋ, ಮಾರ್ಗದರ್ಶಕ, ಹೋರಾಟಗಾರ, ನಿರ್ದೇಶಕ ಎಂದು ಬಹಮಿಯನ್‌ ಉಪ ಪ್ರಧಾನಿ ಚೆಸ್ಟರ್‌ ಕೂಪರ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

    ಸಿಡ್ನಿ ಅವರು 1927ರಲ್ಲಿ ಬಹಮಿಯನ್‌ ರೈತ ಕುಟುಂಬದಲ್ಲಿ ಜನಿಸುತ್ತಾರೆ. ನಂತರ 1940ರಲ್ಲಿ ಸಿನಿಮಾ ರಂಗದಲ್ಲಿ ನಟನಾಗಿ ಕಾಣಿಸಿಕೊಳ್ಳುತ್ತಾರೆ. ಲಿಲೀಸ್ ಆಫ್ ದಿ ಫೀಲ್ಡ್ ಸಿನಿಮಾದಲ್ಲಿ ಅತ್ಯುತ್ತಮ ನಟನೆಗಾಗಿ 1964ರಲ್ಲಿ ಆಸ್ಕರ್‌ ಪ್ರಶಸ್ತಿ ವಿಜೇತರಾದರು. ನಂತರ 2002ರಲ್ಲಿ ಅಕಾಡೆಮಿ ಗೌರವ ಪ್ರಶಸ್ತಿಗೂ ಭಾಜನರಾದರು. 2009ರಲ್ಲಿ ಬರಾಕ್‌ ಒಬಾಮರಿಂದ ಯುಎಸ್‌ ಅಧ್ಯಕ್ಷೀಯ ಸ್ವಾತಂತ್ರ್ಯ ಪದಕವನ್ನು ದೇಶದ ಅತ್ಯುನ್ನತ ನಾಗರಿಕ ಗೌರವವಾಗಿ ಪಡೆದರು. ಇದನ್ನೂ ಓದಿ: ಭೂಮಿಯ ಸಮೀಪದಿಂದ ಹಾದುಹೋಗಲಿದೆ ಪರಮಾಣು ಬಾಂಬ್‌ಗಿಂತ 30 ಪಟ್ಟು ಹೆಚ್ಚು ಶಕ್ತಿಯ ಕ್ಷುದ್ರಗ್ರಹ

  • ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

    ನವದೆಹಲಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್ ಇಂದು ಕೊನೆಯುಸಿರೆಳೆದರು. ಸೇನಾಧಿಕಾರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ದೇಶಕ್ಕಾಗಿ ಹೆಮ್ಮೆ, ಶೌರ್ಯ ಮತ್ತು ವೃತ್ತಿಪರತೆಯಿಂದ ಸೇವೆ ಸಲ್ಲಿಸಿದರು. ಅವರ ನಿಧನದಿಂದ ಮನಸ್ಸಿಗೆ ಅತೀವ ನೋವುಂಟಾಗಿದೆ. ದೇಶಕ್ಕೆ ಅವರು ನೀಡಿದ ಉತ್ಕೃಷ್ಟ ಸೇವೆಯನ್ನು ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಓಂ ಶಾಂತಿ.. ಎಂದು ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ನಿಧನ

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದರು ಎಂದು ತಿಳಿದು ದುಃಖವಾಯಿತು. ಶೌರ್ಯ ಮತ್ತು ಅದಮ್ಯ ಧೈರ್ಯದ ಸೈನಿಕ ಮನೋಭಾವವನ್ನು ಪ್ರದರ್ಶಿಸಿದ ಸೇನಾಧಿಕಾರಿ. ಅವರ ಸೇವೆಗೆ ದೇಶ ಆಭಾರಿಯಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

    ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿ, ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಇನ್ನಿಲ್ಲ ಎಂಬ ಸುದ್ದಿ ಕೇಳಿ ಅತೀವ ನೋವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬದವರಿಗೆ ಒದಗಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೀವನ್ಮರಣ ಹೋರಾಟ ನಡೆಸುತ್ತಿರುವ ವರುಣ್ ಸಿಂಗ್ ಬರೆದಿದ್ದ ಸ್ಫೂರ್ತಿದಾಯಕ ಪತ್ರ ವೈರಲ್

    ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಇದು ದೇಶಕ್ಕೆ ದುಃಖದ ಕ್ಷಣ. ಈ ದುಃಖದಲ್ಲಿ ನಾವೆಲ್ಲರೂ ನಿಮ್ಮೊಂದಿಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

    ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ – ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ

    ಡಿ.8ರಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರನ್ನು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟರು.

  • 30 ವರ್ಷದ ಒಡನಾಟ ಹೇಗೆ ಮರೆಯಲಿ: ಜಗ್ಗೇಶ್ ಕಣ್ಣೀರು

    30 ವರ್ಷದ ಒಡನಾಟ ಹೇಗೆ ಮರೆಯಲಿ: ಜಗ್ಗೇಶ್ ಕಣ್ಣೀರು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ನಟ ಜಗ್ಗೇಶ್ ಭಾವನಾತ್ಮಕ ಸಾಲುಗಳನ್ನು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    Puneet Jaggesh

    ಪುನೀತ್ ನಿನ್ನ 30ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ. ಅಪ್ಪ ನನ್ನನ್ನು ನಿನಗೆ ಪರಿಚಯಿಸಿದಾಗ ನಿನ್ನ ಆಶ್ಚರ್ಯದ ಮುದ್ದು ಮುಖ ಹೇಗೆ ಮರೆಯಲಿ? ನನ್ನ ಚಿತ್ರಗಳ ನೋಡಿ ಸಂಭ್ರಮಿಸಿ ನನಗೆ ಕರೆಮಾಡಿ ಹರಸುತ್ತಿದ್ದ ನಿನ್ನ ಗುಣ ಹೇಗೆ ಮರೆಯಲಿ? ನನ್ನ ಗ್ರಾಮದ ಭೈರವನ ನೋಡಲು ಬಂದು ನನ್ನ ಗ್ರಾಮೀಣ ಹಿನ್ನೆಲೆ ಬದುಕಿನ ಅನುಭವ ಕೇಳಿ ಮರುಗಿದ್ದು ಹೇಗೆ ಮರೆಯಲಿ? ನನ್ನ ಜೊತೆ ಮಂತ್ರಾಲಯಕ್ಕೆ ಬಂದು ಸಾಮಾನ್ಯನಂತೆ ರಸ್ತೆ ಬದಿಯ ಚಹಾದ ಅಂಗಡಿ ಮುಂದಿನ ಆನಂದಮಯ ಕ್ಷಣದ ದಿನ ಹೇಗೆ ಮರೆಯಲಿ ಎಂದು ಪ್ರಶ್ನೆ ಮಾಡುತ್ತಾ ಜಗ್ಗೆಶ್ ಅವರು ಅಪ್ಪು ಇನ್ನಿಲ್ಲ ಎನ್ನುವ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ – ಪುನೀತ್ ಕೊನೆಕ್ಷಣ ಹೀಗಿತ್ತು

    ಆನಂದರಾಮ ನನಗಾಗಿ ನಿರ್ದೇಶನ ಮಾಡುವ ಚಿತ್ರದ ಕಥೆ ಕೇಳಿ ನೀನು ನಗುತ್ತಿದ್ದ ಆ ನಗು ಮುಖ ಹೇಗೆ ಮರೆಯಲಿ? ಮಗ ಗುರುರಾಜನ ಚಿತ್ರಕ್ಕೆ ಶುಭ ಹಾರೈಸಿ, ಮಗನಿಗೆ ಭುಜ ತಟ್ಟಿದ ದಿನ ಹೇಗೆ ಮರೆಯಲಿ? ನಿನ್ನ ತಂದೆಯ ದ್ವನಿ ಅನುಕರಣೆ ಮಾಡಿದಾಗ ನೀ ಮಗುವಂತೆ ನಗುತ್ತಿದ್ದ ಆ ಮುದ್ದು ಮುಖ ಹೇಗೆ ಮರೆಯಲಿ? ಕೇವಲ ವಾರದ ಹಿಂದೆ ಅಣ್ಣ ಮಲ್ಲೇಶ್ವರಕ್ಕೆ ಬಂದಿರುವೆ ಬನ್ನಿ ಎಂದು ಕರೆದು ನನ್ನ ನಿನ್ನ ಬದುಕಿನ ಕಡೆಯ ಬೇಟಿ ಹೇಗೆ ಮರೆಯಲಿ. ಪ್ರೀತಿಯ ಆತ್ಮವೇ ಹೋಗಿ ಬಾ ಎಂದು ಹೇಳಲು ನನಗೆ ಮನಸ್ಸು ಒಪ್ಪುತ್ತಿಲ್ಲ. ನನ್ನ ಕಡೆ ಉಸಿರಿನವರೆಗು ನಿನ್ನ ನೆನಪು ಒಡನಾಟ ನನ್ನಮನದಲ್ಲಿ ಉಳಿಸಿಕೊಳ್ಳುವೆ ನಿನ್ನ ಆತ್ಮ ಎಲ್ಲೆ ಇರಲಿ ಶಾಂತಿಯಿಂದ ಉಳಿಯಲಿ ಲವ್‍ಯೂ ಚಿನ್ನ ಎಂದು ಭಾರದ ಮನಸ್ಸಿನಿಂದ ಬರೆದು ಸಂತಾಪ ವ್ಯಕ್ತಪಡಿಸಿದ್ದಾರೆ.

    ಚಂದನವನದ ಚಂದದ ನಟ ಪುನೀತ್‍ರಾಜ್ ಕುಮಾರ್ (46) ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದಾರೆ. ಸ್ಯಾಂಡ್‍ವುಡ್‍ನ ಅನೇಕ ಹಿರಿಯ ಕಿರಿಯ ಕಲಾವಿದರು ಅಪ್ಪು ನಿಧನಕ್ಕೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಗೆ ಕಂಬನಿ ಮೀಡಿಯುತ್ತಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನನ್ನು ನೋಡಲು ಬೇಗ ಹೋಗಿದ್ದಾನೆ: ರಾಘವೇಂದ್ರ ರಾಜ್ ಕುಮಾರ್

  • ಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ರು ಪುನೀತ್- ಸಿಎಂ

    ಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ರು ಪುನೀತ್- ಸಿಎಂ

    ಬೆಂಗಳೂರು: ಅತ್ಯಂತ ಕಿರಿಯ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಮೇರು ನಟನನ್ನು ಕರ್ನಾಟಕ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

    PUNEET RAJKUMAR

    ಹೃದಯಾಘಾತದಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್‍ಕುಮಾರ್ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಿಜಕ್ಕೂ ಇದೊಂದು ಆಘಾತಕಾರಿ ಸುದ್ದಿ. ಅತ್ಯಂತ ಕಿರಿಯ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಮೇರು ನಟನನ್ನು ಕರ್ನಾಟಕ ಕಳೆದುಕೊಂಡಿದೆ. ಅವರ ಕುಟುಂಬ ಹಾಗೂ ಇಡೀ ಕರ್ನಾಟಕದ ಜನ ದುಃಖದಲ್ಲಿದ್ದಾರೆ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ಪ್ರೀತಿಯ ಅಪ್ಪು ಇನ್ನಿಲ್ಲ

    ಪುನೀತ್ ಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ದರು. ನವೆಂಬರ್ 1ಕ್ಕೆ ವೆಬ್‍ಸೈಟ್‍ವೊಂದನ್ನು ಉದ್ಘಾಟನೆ ಮಾಡುವ ಸಂಬಂಧ ನಿನ್ನೆ ನನ್ನೊಂದಿಗೂ ಮಾತನಾಡಿದ್ದರು. ನಾನು ಅವರನ್ನು ಭೇಟಿಯಾಗಲು ಆಗಲಿಲ್ಲ. ಡಾ.ರಾಜ್‍ಕುಮಾರ್ ಅವರ ಸಂಸ್ಕಾರದಲ್ಲಿ ಪುನೀತ್ ಬೆಳೆದಿದ್ದರು. ತಂದೆಯಂತೆಯೇ ವಿನಯವಂತ. ನನಗೂ ರಾಜ್‍ಕುಮಾರ್ ಕುಟುಂಬಕ್ಕೂ ಹಳೆಯ ಬಾಂಧವ್ಯವಿದೆ. ಅಪ್ಪುನನ್ನು ಸಣ್ಣವಯಸ್ಸಿನಿಂದಲೂ ನೋಡಿದ್ದೇನೆ. ಬಹಳ ಎತ್ತರಕ್ಕೆ ಬೆಳೆದಿದ್ದ, ಇನ್ನೂ ಉಜ್ವಲ ಭವಿಷ್ಯವಿತ್ತು. ಅಪ್ಪು ಅಗಲಿಕೆಯಿಂದ ಕಲಾರಂಗಕ್ಕೆ ದೊಡ್ಡ ಪ್ರಮಾಣದ ನಷ್ಟವುಂಟಾಗಿದೆ. ಚಿತ್ರರಂಗದಲ್ಲಿ ನಾಯಕತ್ವದ ಗುಣವುಳ್ಳಂತಹ ವ್ಯಕ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ ಎಂದು ದುಃಖಿಸಿದರು. ಇದನ್ನೂ ಓದಿ: ತಂದೆ ಹಾದಿ ಹಿಡಿದ ಮಗ- ನೇತ್ರದಾನ ಮಾಡಿ ಸಾವಲ್ಲೂ ಸಾರ್ಥಕತೆ ಮೆರೆದ ಅಪ್ಪು
    PUNEET RAJKUMAR

    ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ರಾಜ್‍ಕುಮಾರ್ ಅಂತಿಮ ದರ್ಶನಕ್ಕೆ ಅಭಿಮಾನಿಗಳಿಗೆ ಸೂಕ್ತ ವ್ಯವಸ್ಥೆಯೊಂದಿಗೆ ಅವಕಾಶ ಮಾಡಿಕೊಡಲಾಗುವುದು. ಯಾರೂ ಸಹ ಅತಿಯಾದ ಭಾವನೆಗೆ ಒಳಗಾಗದೇ, ಸಂಯಮ ಕಳೆದುಕೊಳ್ಳದೆ ಶಾಂತಿಯಿಂದ ವರ್ತಿಸಬೇಕು. ಶಾಂತಿ, ಸುವ್ಯವಸ್ಥೆಯಿಂದ ಪುನೀತ್ ರಾಜ್‍ಕುಮಾರ್‍ರನ್ನು ಬೀಳ್ಕೊಡೋಣ. ಆಗ ಮಾತ್ರ ನಿಜವಾಗಿಯೂ ನಾವು ಅವರಿಗೆ ಸಲ್ಲಿಸುವ ಗೌರವವಾಗುತ್ತದೆ ಎಂದು ಮನವಿ ಮಾಡಿದರು.