Tag: dengue fever

  • ಉತ್ತರಕನ್ನಡದಲ್ಲಿ ಡೆಂಗ್ಯೂಗೆ ಇನ್ನೊಬ್ಬ ವ್ಯಕ್ತಿ ಬಲಿ- ಸಾವಿನ ಸಂಖ್ಯೆ 2ಕ್ಕೆ ಏರಿಕೆ

    ಉತ್ತರಕನ್ನಡದಲ್ಲಿ ಡೆಂಗ್ಯೂಗೆ ಇನ್ನೊಬ್ಬ ವ್ಯಕ್ತಿ ಬಲಿ- ಸಾವಿನ ಸಂಖ್ಯೆ 2ಕ್ಕೆ ಏರಿಕೆ

    ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ (Uttara Kannada) ಡೆಂಗ್ಯೂಗೆ ಇನ್ನೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

    ಭಟ್ಕಳದ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾರೆ. ಭಟ್ಕಳದ ಖಾಝಿಯಾ ಸ್ಟ್ರೀಟ್ ನಿವಾಸಿಯಾಗಿದ್ದ ಮೀರಾನ್ ಸಾದಾ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾದಾ ನಿಧನದ ಮೂಲಕ ಜಿಲ್ಲೆಯಲ್ಲಿ ಈವರೆಗೆ ಡೆಂಗ್ಯೂದಿಂದ ಇಬ್ಬರ ಸಾವಾಗಿದೆ.

    ಭಾನುವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಬಲಿಯಾಗಿದ್ದರು. ಇಬರು ಸಾಗರಶ್ರೀ ಬೋಟ್‍ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದರು.  ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ

    ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಭಟ್ಕಳ ಬಂದರಿನಲ್ಲಿ ಶುಚಿತ್ವ ಇಲ್ಲದ ಕಾರಣ ಹೆಚ್ಚು ಸೊಳ್ಳೆಗಳ ಉತ್ಪತ್ತಿಯಾಗುತಿದ್ದು, ಈ ಭಾಗದಲ್ಲಿ ಹಲವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳಲು ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಡೆಂಗ್ಯೂ ಜ್ವರದ ಲಕ್ಷಣಗಳು:
    * ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
    * ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
    * ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
    * ಕೆಮ್ಮು, ಗಂಟಲು ಕೆರೆತ ಬರುತ್ತದೆ.
    * ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.

    ಮುಂಜಾಗ್ರತಾ ಕ್ರಮಗಳೇನು?:
    * ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
    * ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
    * ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
    * ತೆಂಗಿನ ಚಿಪ್ಪು, ಟಯರ್‍ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
    * ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
    * ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
    * ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.

    ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆ ಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ

    ಡೆಂಗ್ಯೂ ಜ್ವರಕ್ಕೆ ನವವಿವಾಹಿತೆ ಬಲಿ

    ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ (Dengue Fever) ನವವಿವಾಹಿತೆಯೊಬ್ಬರು (Newly Married Woman) ಬಲಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿ ಘಟನೆ ನಡೆದಿದ್ದು, ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ ಒಂದು ವಾರದಿಂದ ಮಧುರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್

    ಅನಾರೋಗ್ಯ ಹಿನ್ನೆಲೆ ಮಧುರ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆ ತರುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಸಹೋದರಿಯರು

    ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಇದು ಪ್ರಪಂಚದ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಇದರ ರೋಗ ಲಕ್ಷಣಗಳು ಈ ಕೆಳಗಿನಂತಿವೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿ

    ರೋಗಲಕ್ಷಣಗಳು:
    *ತಲೆನೋವು
    *ಸ್ನಾಯು, ಮೂಳೆ ಅಥವಾ ಕೀಲು ನೋವು
    *ವಾಕರಿಕೆ
    *ವಾಂತಿ
    *ಕಣ್ಣುಗಳ ಹಿಂದೆ ನೋವು
    *ಊದಿಕೊಂಡ ಗ್ರಂಥಿಗಳು
    *ತುರಿಕೆ

    ಈ ರೀತಿಯಾದ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೇ ವೈದರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡರೆ ಒಳ್ಳೆಯದು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿ

    ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿ

    ಚಿಕ್ಕಬಳ್ಳಾಪುರ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸವಿತಾ ಹಾಗೂ ಮುನಿರಾಜು ದಂಪತಿಯ ಪುತ್ರಿ ಚಾರುಲತ(6) ಮೃತ ಬಾಲಕಿ. ಕಳೆದ ಒಂದು ವಾರದಿಂದ ತೀವ್ರ ತರವಾದ ಜ್ವರದಿಂದ ಬಳಲುತ್ತಿದ್ದ ಚಾರು ಲತಾಳನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮರಾಠಿ ಬೋರ್ಡ್ ಹಾಕಿ ಇಲ್ಲದಿದ್ದರೆ ಕನ್ನಡ ನಾಮಫಲಕ ಇರಲ್ಲ ಎಂದು MES ಪುಂಡಾಟ – ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು

    ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು, ಮೃತಳ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮಳೆಗಾಲದ ಸಂದರ್ಭದಲ್ಲಿ ನಿಂತ ನೀರಲ್ಲಿ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಸೊಳ್ಳೆಗಳು ಹೆಚ್ಚಾಗಲಿದ್ದು, ಮನೆಯ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿರಿಸಕೊಂಡು ಮುಂಜಾಗ್ರತಾ ಕ್ರಮ ವಹಿಸಬೇಕಿದೆ. ಇದನ್ನೂ ಓದಿ: ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ

    Live Tv

  • ರಾಯಚೂರಿನಲ್ಲಿ ಡೆಂಗ್ಯೂಗೆ ಎರಡನೇ ಮಗು ಬಲಿ

    ರಾಯಚೂರಿನಲ್ಲಿ ಡೆಂಗ್ಯೂಗೆ ಎರಡನೇ ಮಗು ಬಲಿ

    ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ, ದಿನೇ ಹೆಚ್ಚಾಗುತ್ತಿದ್ದು, ಸಿಂಧನೂರು ನಗರದ ಮಹಿಬೂಬಿಯಾ ಕಾಲೋನಿಯಲ್ಲಿ 6 ವರ್ಷದ ಮಗು ಡೆಂಗ್ಯೂಗೆ ಬಲಿಯಾಗಿದ್ದಾಳೆ.

    ಅಂಗನವಾಡಿ ಕಾರ್ಯಕರ್ತೆ ಅನಿತಾರವರ ಮಗಳು ಸೋನು(6) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಅಸುನೀಗಿದ್ದಾರೆ. ಒಂದು ವಾರದಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನುಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ:  ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

    ಕಳೆದ ವಾರವಷ್ಟೇ ಮಾನ್ವಿಯಲ್ಲಿ 5 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾಗಿದ್ದ. ಡೆಂಗ್ಯೂಗೆ ಜಿಲ್ಲೆಯಲ್ಲಿ ಇದುವರೆಗೂ 5 ಮಕ್ಕಳು ಬಲಿಯಾಗಿದ್ದಾರೆ ಅಂತ ಶಂಕಿಸಲಾಗಿದೆ. ಆದರೆ ಎರಡು ಪ್ರಕರಣಗಳು ಮಾತ್ರ ಧೃಡಪಟ್ಟಿವೆ. ಇಡೀ ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಡೆಂಗ್ಯೂ ಪ್ರಕರಣಗಳೂ ಸಹ ವಿಪರೀತವಾಗಿವೆ. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

    ರಿಮ್ಸ್ ಆಸ್ಪತ್ರೆಯೊಂದರಲ್ಲೇ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1,500ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದಾರೆ. ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳಿಂದ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

  • ಡೆಂಘೀ ಜ್ವರಕ್ಕೆ ಐದು ವರ್ಷದ ಕಂದಮ್ಮ ಬಲಿ

    ಡೆಂಘೀ ಜ್ವರಕ್ಕೆ ಐದು ವರ್ಷದ ಕಂದಮ್ಮ ಬಲಿ

    ರಾಯಚೂರು: ಡೆಂಘೀ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಮಾನವಿ ಪಟ್ಟಣದಲ್ಲಿ ನಡೆದಿದೆ.

    ಮಾನವಿ ಪಟ್ಟಣದ ಮಂಜುನಾಥ ಅವರ ಮಗು ಸಾವನ್ನಪ್ಪಿದೆ. ಜ್ವರದಿಂದ ಬಳಲುತ್ತಿದ್ದ ಮಗುವನ್ನು ತಪಾಸಣೆ ಮಾಡಿದಾಗ ಡೆಂಘೀ ಜ್ವರ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಮಗು ಸಾವನ್ನಪ್ಪಿದ್ದು, ಡೆಂಘೀ ಜ್ವರದಿಂದ ಮೃತಪಟ್ಟಿದೆ ಎಂದು ದೃಢಪಟ್ಟಿದೆ. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ

    ಮಗುವನ್ನು ಕಳೆದುಕೊಂಡ ಪೋಷಕರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದ ಬಳಿಕ ಮೃತ ಮಗುವಿನ ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಆದರೆ ಕಂದಮ್ಮ ಬಲಿಯಾಗಿರುವುದು ಕುಟುಂಬಸ್ಥರಲ್ಲಿ ತೀವ್ರ ದುಃಖ ಮನೆ ಮಾಡಿದೆ.

  • ಡೆಂಗ್ಯೂಗೆ ನರ್ಸ್ ಬಲಿ

    ಡೆಂಗ್ಯೂಗೆ ನರ್ಸ್ ಬಲಿ

    ಉಡುಪಿ: ಜಿಲ್ಲೆಯಾದ್ಯಂತ ಕೊರೊನಾ ಹಾವಳಿ ಜೋರಾಗಿದೆ. ರಾಜ್ಯಕ್ಕೆ ನಾಲ್ಕನೇ ಸ್ಥಾನದಲ್ಲಿರುವ ಉಡುಪಿಯಲ್ಲಿ 1,390 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ನಡುವೆ ಡೆಂಗ್ಯೂ ಮಹಾಮಾರಿ ಯುವತಿಯನ್ನು ಬಲಿ ಪಡೆದಿದೆ.

    ಬೆಳ್ಮಣ್ ನಿವಾಸಿ ದಿವ್ಯಾ (23) ಮೃತ ನರ್ಸ್. ದಿವ್ಯಾ ಉಡುಪಿ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ತಾನೇ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಿವ್ಯಾ ಸಾವನ್ನಪ್ಪಿದ್ದಾರೆ.

    ಸೋಮವಾರ ಜ್ವರವು ಉಬ್ಬಣಗೊಂಡ ಪರಿಣಾಮ ದಿವ್ಯಾರನ್ನು ನಗರದ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ದಾಖಲಿಸಿದ ಒಂದು ಗಂಟೆಯಲ್ಲಿ ದಿವ್ಯಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

    ಮಾನ್ಸೂನ್ ಅಬ್ಬರ ಜೋರಾಗಿದ್ದು, ಇದರಿಂದ ಸೊಳ್ಳೆ ಕಾಟ ಜಾಸ್ತಿಯಾಗಿದೆ. ಹಗಲು ಹೊತ್ತಿನ ಸೊಳ್ಳೆ ಕಡಿತ ಡೆಂಗ್ಯೂ ತರುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

  • ಸೆಕ್ಸ್‌ನಿಂದ ಕೂಡ ಡೆಂಗ್ಯೂ ಹರಡುತ್ತೆ ಎಚ್ಚರ!

    ಸೆಕ್ಸ್‌ನಿಂದ ಕೂಡ ಡೆಂಗ್ಯೂ ಹರಡುತ್ತೆ ಎಚ್ಚರ!

    ಮ್ಯಾಡ್ರಿಡ್: ಸಾಮಾನ್ಯವಾಗಿ ಡೆಂಗ್ಯೂ ಜ್ವರ ಈಡಿಸ್ ಈಜಿಪ್ಟಿ ಸೊಳ್ಳೆ ಕಚ್ಚಿದರೆ ಬರುತ್ತದೆ ಎಂದು ಬಹುತೇಕ ಮಂದಿಗೆ ತಿಳಿದಿದೆ. ಆದರೆ ಲೈಂಗಿಕ ಕ್ರಿಯೆಯಿಂದಲೂ ಡೆಂಗ್ಯೂ ಹರಡುತ್ತದೆ ಎನ್ನುವ ಅಚ್ಚರಿಯ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಸ್ಪೇನ್‍ನ ಆರೋಗ್ಯ ಇಲಾಖೆ ಲೈಂಗಿಕ ಕ್ರಿಯೆಯಿಂದ ಕೂಡ ಡೆಂಗ್ಯೂ ವೈರಾಣು ಹರಡಿ ಜ್ವರ ಬರುತ್ತದೆ ಎನ್ನುವುದನ್ನ ಪತ್ತೆಹಚ್ಚಿದೆ. ಸ್ಪೇನ್ ವೈದ್ಯರ ತಂಡ, ಕೇವಲ ಸೊಳ್ಳೆ ಕಚ್ಚಿದರೆ ಮಾತ್ರವಲ್ಲದೆ ಡೆಂಗ್ಯೂ ಪೀಡಿತ ವ್ಯಕ್ತಿಗಳ ಜೊತೆ ಲೈಂಗಿಕ ಕ್ರಿಯೆ ಮಾಡಿದರೂ ಡೆಂಗ್ಯೂ ಜ್ವರ ಹರಡುತ್ತೆ ಎನ್ನುವುದನ್ನ ಪತ್ತೆ ಮಾಡಿದ್ದಾರೆ. ಇದನ್ನೂ ಓದಿ:ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಈ ವಿಚಾರ ಬಯಲಾಗಿದ್ದು ಮ್ಯಾಡ್ರಿಡ್‍ನ 41 ವರ್ಷದ ವ್ಯಕ್ತಿಯಿಂದ. ಕಳೆದ ಸೆಪ್ಟೆಂಬರ್ ನಲ್ಲಿ ಈ ವ್ಯಕ್ತಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾನೆ ಎನ್ನುವ ಸಂಗತಿ ತಿಳಿದುಬಂದಿತ್ತು. ಆದರೆ ಈ ವ್ಯಕ್ತಿ ಡೆಂಗ್ಯೂ ಸೊಂಕು ಹರಡಿದ ಪ್ರದೇಶದಲ್ಲಿ ತಂಗಿಲ್ಲ. ಅಲ್ಲದೆ ಕೆಲವೊಂದು ಡೆಂಗ್ಯೂ ಪೀಡಿತ ಪ್ರದೇಶಕ್ಕೆ ಭೇಟಿಕೊಟ್ಟಿದ್ದರೂ ಡೆಂಗ್ಯೂ ವೈರಾಣು ಆತನ ದೇಹ ಸೇರಿರಲಿಲ್ಲ. ಆದರೂ ಈತನಿಗೆ ಡೆಂಗ್ಯೂ ಬಂದಿದ್ದು ಹೇಗೆ ಎಂಬುದೇ ವೈದ್ಯರಿಗೆ ಯಕ್ಷ ಪ್ರಶ್ನೆಯಾಗಿ ತಲೆಕೊರಿಯುತ್ತಿತ್ತು. ಆಗ ವೈದ್ಯರ ತಂಡ ಆ ವ್ಯಕ್ತಿಯನ್ನು ಸಂಪೂರ್ಣ ಪರೀಕ್ಷೆ ನಡೆಸಿದಾಗ, ಲೈಂಗಿಕ ಕ್ರಿಯೆ ಮೂಲಕ ಡೆಂಗ್ಯೂ ವೈರಾಣು ಆತನ ದೇಹ ಸೇರಿತು ಎನ್ನುವುದು ಪತ್ತೆಯಾಗಿದೆ. ಇದನ್ನೂ ಓದಿ:ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

    ಈ ವ್ಯಕ್ತಿಯ ಸಂಗಾತಿ ಕ್ಯೂಬಾ ದೇಶಕ್ಕೆ ಹೋಗಿದ್ದಾಗ ಡೆಂಗ್ಯೂ ವೈರಾಣು ಆಕೆಯ ದೇಹ ಸೇರಿತ್ತು. ಇಬ್ಬರೂ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಆ ವೈರಾಣು ಪುರುಷನ ದೇಹ ಸೇರಿತ್ತು. ಇದರಿಂದಲೇ ಆತನಿಗೆ ಡೆಂಗ್ಯೂ ವೈರಾಣು ಹರಡಿತ್ತು. ಈ ವ್ಯಕ್ತಿಯಲ್ಲಿ ಡೆಂಗ್ಯೂ ಪತ್ತೆಯಾಗುವ 10 ದಿನಗಳ ಮೊದಲೇ ಆತನ ಸಂಗಾತಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಕ್ಯೂಬಾ ಹಾಗೂ ಡೊಮಿನಿಕನ್ ರಿಪಬ್ಲಿಕ್ ದೇಶಗಳ ಪ್ರವಾಸ ಹೋಗಿದ್ದಾಗ ಆಕೆಯ ದೇಹಕ್ಕೆ ಡೆಂಗ್ಯೂ ವೈರಾಣು ಸೇರಿತ್ತು. ಇದನ್ನೂ ಓದಿ:ಬಾಣಂತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಡೆಂಗ್ಯೂಗೆ ಬಲಿ

    ಈ ವ್ಯಕ್ತಿಯ ವೈದ್ಯಕೀಯ ವರದಿಯನ್ನು ಸ್ಪೇನ್ ಆರೋಗ್ಯ ಇಲಾಖೆ ಎಎಫ್‍ಪಿಗೆ ಇ-ಮೇಲ್ ಕಳುಹಿಸಿತ್ತು. ಎಎಫ್‍ಪಿ ಒಂದು ಯೂರೇಪ್‍ನ ಸ್ಟಾಕ್ಹೋಮ್ ಮೂಲದ ರೋಗ ತಡಗಟ್ಟುವಿಕೆ ಹಾಗೂ ನಿಯಂತ್ರಣ ಕೇಂದ್ರವಾಗಿದೆ. ಯೂರೋಪ್‍ನ ಆರೋಗ್ಯ ಮತ್ತು ರೋಗಗಳ ಮೇಲ್ವಿಚಾರಣೆ ಮಾಡುವುದು ಇದರ ಕಾರ್ಯವಾಗಿದೆ. ವರದಿ ನೋಡಿದ ಬಳಿಕ, ಸೆಕ್ಸ್‌ನಿಂದ ಕೂಡ ಡೆಂಗ್ಯೂ ವೈರಾಣು ಹರಡಿರುವುದು ಇದೇ ಮೊದಲ ಪ್ರಕರಣ. ಹಿಂದೆ ಈ ಬಗ್ಗೆ ತಿಳಿದಿರಲಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದೆ.

  • ಬಾಣಂತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಡೆಂಗ್ಯೂಗೆ ಬಲಿ

    ಬಾಣಂತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಡೆಂಗ್ಯೂಗೆ ಬಲಿ

    ಹೈದರಾಬಾದ್: ತೆಲಂಗಾಣದಲ್ಲಿ ಮಾರಕ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದ್ದು, ಕೇವಲ 15 ದಿನಗಳಲ್ಲಿ ಒಂದೇ ಕುಟುಂಬದ ನಾಲ್ವರು ಡೆಂಗ್ಯೂಗೆ ಬಲಿಯಾಗಿದ್ದಾರೆ.

    ಮಂಚೇರಿಯಲ್ ಜಿಲ್ಲೆಯ ನಿವಾಸಿಗಳಾದ ರಾಜಗಟ್ಟು, ಪತ್ನಿ ಸೋನಿ(28), ಲಿಂಗಯ್ಯ, ಮಗಳು ಶ್ರೀವರ್ಷಿಣಿ ಮೃತ ದುರ್ದೈವಿಗಳು. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜಗಟ್ಟು ಅವರು ಕಳೆದ 15 ದಿನಗಳ ಹಿಂದೆ ಡೆಂಗ್ಯೂ ಜ್ವರದಿಂದ ಪ್ರಾಣಬಿಟ್ಟಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜಗಟ್ಟು ಅವರು ಅಕ್ಟೋಬರ್ 16ರಂದು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದರು. ರಾಜಗಟ್ಟು ಅವರು ನಿಧನರಾದ 5 ದಿನಗಳ ಬಳಿಕ ಸೋನಿ ಅವರ ತಾತ ಲಿಂಗಯ್ಯ ಡೆಂಗ್ಯೂ ಜ್ವರದಿಂದ ಬಳಲಿ ಮೃತಪಟ್ಟಿದ್ದರು.

    ಈ ಎರಡು ಸಾವುಗಳ ನೋವಿನಿಂದ ಮನೆಮಂದಿ ಇನ್ನೂ ಹೊರಬಂದಿರಲಿಲ್ಲ, ಅಷ್ಟರಲ್ಲೇ ದೀಪಾವಳಿ ಹಬ್ಬದಂದೇ ರಾಜಗಟ್ಟು ಮಗಳು ಶ್ರೀವರ್ಷಿಣಿ ಡೆಂಗ್ಯೂ ಜ್ವರಕ್ಕೆ ಬಲಿಯಾದಳು. ಗರ್ಭಿಣಿಯಾಗಿದ್ದ ರಾಜಗಟ್ಟು ಪತ್ನಿ ಸೋನಿ ಈ ಸಾವುಗಳಿಂದ ಬಹಳಷ್ಟು ನೊಂದಿದ್ದರು, ಅವರನ್ನು ಕೂಡ ಮಾರಕ ಡೆಂಗ್ಯೂ ಬಿಡಲಿಲ್ಲ. ಮಂಗಳವಾರ ಸಿಕಂದ್ರಾಬಾದ್‍ನ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಸೋನಿ ಜನ್ಮ ನೀಡಿದರು. ಆದರೆ ಹೆರಿಗೆ ಆದ ಮರುದಿನವೇ ಸೋನಿ ಮೃತಪಟ್ಟಿದ್ದಾರೆ. ಹೀಗೆ ಒಂದೇ ಕುಟುಂಬದ ನಾಲ್ವರು ಡೆಂಗ್ಯೂಗೆ ಬಲಿಯಾಗಿರುವುದು ವಿಷಾದನೀಯವಾಗಿದೆ.

    ಕಳೆದ ವಾರ ತೆಲಂಗಾಣ ಹೈಕೋರ್ಟ್ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ಜ್ವರದ ಹಾವಳಿಯನ್ನು ತಡೆಗಟ್ಟುವಂತೆ ಸಾರ್ವಜನಿಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡೆಸಿದ ದ್ವೀಸದಸ್ಯ ಪೀಠದ ನ್ಯಾಯಾಧೀಶರು, ಜನವರಿಯಲ್ಲಿ 85 ಸಂಖ್ಯೆಯಲ್ಲಿದ್ದ ಡೆಂಗ್ಯೂ ಪ್ರಕರಣಗಳು ಅಕ್ಟೋಬರ್ ವರೆಗೆ ಹೇಗೆ 3,500 ಪ್ರಕರಣವಾಯ್ತು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.

    ಅಷ್ಟೇ ಅಲ್ಲದೆ ಒಂದು ವೇಳೆ ಸರ್ಕಾರ ರಾಜ್ಯದಲ್ಲಿ ಡೆಂಗ್ಯೂ ಜ್ವರವನ್ನು ನಿಯಂತ್ರಣ ಮಾಡಲು ವಿಫಲವಾದರೆ, ಮಾರಕ ಡೆಂಗ್ಯೂ ಜ್ವರದಿಂದ ಸಾವನ್ನಪ್ಪುವ ರೋಗಿಗಳ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನವನ್ನು ನೀಡಬೇಕು ಎಂದು ಆದೇಶಿಸಿತ್ತು.

  • ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಡೆಂಗ್ಯೂ ಜ್ವರಕ್ಕೆ ಮನೆ ಮದ್ದು

    ಡೆಂಗ್ಯೂ ಜ್ವರ ಈ ಹೆಸರು ಕೇಳಿದ ತಕ್ಷಣವೇ ಎಲ್ಲರೂ ಬೆಚ್ಚಿಬೀಳುತ್ತಿದ್ದಾರೆ. ಈ ಜ್ವರವನ್ನು ಚಿಕಿತ್ಸೆಗಿಂತ ಆರೈಕೆಯಲ್ಲೇ ಓಡಿಸಬೇಕು. ಈ ಜ್ವರ ಹೆಚ್ಚಾಗಿ ಚಿಕ್ಕ ಮಕ್ಕಳು, ವಯೋವೃದ್ಧರನ್ನು ಬಾಧಿಸುತ್ತದೆ. ಯಾಕೆಂದರೆ ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಪಕ್ವಾವಾಗಿರುವುದಿಲ್ಲ. ವಯೋವೃದ್ಧರಲ್ಲಿ ರೋಗ ನಿರೋಧಕ ಶಕ್ತಿ ಕುಗ್ಗುತ್ತಿರುತ್ತದೆ.

    ಈ ಜ್ವರಕ್ಕೆ ಕಾರಣ ಈಡಿಸ್ ಈಜಿಪ್ತಿ (Aedes aegypti) ಎಂಬ ಹೆಸರಿನ ಭಯಾನಕ ಹೆಣ್ಣು ಸೊಳ್ಳೆ. ಇದು ಯಾವುದೇ ವಾತಾವರಣದಲ್ಲಿ ಬದುಕಬಲ್ಲದು. ಈ ಸೊಳ್ಳೆಗಳಿಗೆ ಸಂತಾನೋತ್ಪತ್ತಿ ವೇಳೆ ಅಗತ್ಯವಿರುವ ರಕ್ತಕ್ಕಾಗಿ ಮನುಷ್ಯರನ್ನು ಕಚ್ಚಿ ರಕ್ತವನ್ನು ಹೀರುತ್ತವೆ. ಈ ಸೊಳ್ಳೆಗಳು ಹೆಚ್ಚಾಗಿ ಹಗಲು ಹೊತ್ತಿನಲ್ಲಿ ಮೊಣ ಕೈ, ಮೊಣಕಾಲಿನ ಭಾಗದಲ್ಲಿ ಕಚ್ಚುತ್ತವೆ. ನೀವು ಇವನ್ನು ನೋಡಿ ಹೊಡೆಯುವಷ್ಟರಲ್ಲಿ ರಕ್ತ ಹೀರಿ ಓಡುತ್ತವೆ. ಆದ್ದರಿಂದ ಈ ಜ್ವರಕ್ಕೆ ಇಂತದ್ದೇ ಎಂಬ ಔಷಧಿ ಎಲ್ಲೂ ಇಲ್ಲ.

    ರಕ್ತದಲ್ಲಿನ ಪ್ಲೇಟ್‍ ಲೆಟ್ಸ್ ಗಳನ್ನು ಹೆಚ್ಚಿಸಿಕೊಳ್ಳುವ ಹೊರತು ಯಾವುದೇ ಚಿಕಿತ್ಸೆ ಇಲ್ಲ. ವೈರಸ್ ನಿಮ್ಮ ದೇಹ ಹೊಕ್ಕ ತಕ್ಷಣವೇ ನಿಮಗೆ ತಿಳಿಯದಂತೆ ರಕ್ತಕಣಗಳು ಕುಗ್ಗುತ್ತಾ ಹೋಗುತ್ತದೆ. ಆದರೆ ಸೂಕ್ತ ಎಚ್ಚರಿಕೆ ವಹಿಸುವುದರ ಜೊತೆ ತಕ್ಷಣಕ್ಕೆ ಚಿಕಿತ್ಸೆ ಪಡೆದರೆ ಭಯ ಪಡುವ ಅಗತ್ಯವಿಲ್ಲ. ಮುಖ್ಯವಾಗಿ ಇದು ಅಂಟುಜ್ವರ ಅಲ್ಲ ಅಂದರೆ ಜ್ವರ ಪೀಡಿತರಿಂದ ಇನ್ನೊಬ್ಬರಿಗೆ ನೇರವಾಗಿ ಹರಡುವುದಿಲ್ಲ. ಜ್ವರಪೀಡಿತರನ್ನು ಕಚ್ಚಿದ ಸೊಳ್ಳೆ ಇನ್ನೊಬ್ಬರಿಗೆ ಕಚ್ಚಿದಾಗ ಮಾತ್ರ ಹರಡುತ್ತದೆ.

    ಡೆಂಗ್ಯೂ ಜ್ವರದ ಲಕ್ಷಣಗಳು:
    * ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
    * ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
    * ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
    * ಕೆಮ್ಮು, ಗಂಟಲು ಕೆರೆತ ಬರುತ್ತದೆ.
    * ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.

    ಡೆಂಗ್ಯೂ ಜ್ವರಕ್ಕೆ ಮನೆ ಮದ್ದು: ಈ ಜ್ವರ ಇರುವ ಬಗ್ಗೆ ಗೊತ್ತಾದ ಮೇಲೆ ಸಾಮಾನ್ಯವಾಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಔಷಧಿ ಪಡೆದು ವಿಶ್ರಾಂತಿಗೆ ಸೂಚಿಸಲಾಗುತ್ತದೆ. ಜೊತೆಗೆ ಸಾಕಷ್ಟು ನೀರು ಮತ್ತು ದ್ರವ ಆಹಾರಗಳನ್ನು ಸೇವಿಸಬೇಕಾಗುತ್ತದೆ. ವಿಟಮಿನ್ ಸಿ, ಸಿಟ್ರಸ್ ಅಂಶ ಇರುವ, ನೀರಿನಾಂಶ ಜಾಸ್ತಿ ಇರುವ ಹಣ್ಣುಗಳ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು. ಆದರೆ ಎಣ್ಣೆ, ಮಸಾಲೆಯುಕ್ತ ಆಹಾರವನ್ನು ವರ್ಜಿಸಿದರೆ ಉತ್ತಮ.

    ಯಾವ ಆಹಾರಗಳನ್ನು ಸೇವಿಸಬೇಕು: 
    * ಕಿತ್ತಳೆ ಹಣ್ಣು ಸೇವನೆಯಿಂದ ಡೆಂಗ್ಯೂ ಬೇಗ ಗುಣವಾಗುತ್ತದೆ. ವಿವಿಧ ವಿಟಮಿನ್ ಮತ್ತು ಖನಿಜಾಂಶ ಭರಿತ ಪೌಷ್ಟಿಕ ಹಣ್ಣು, ಅಧಿಕ ನಾರಿನಂಶ, ವಿಟಮಿನ್ ಸಿ ಇರುವ ಮೂಸಂಬಿ, ನಿಂಬೆ ರಸ, ಅನಾನಸ್, ಕಿವಿ ಫ್ರೂಟ್, ದ್ರಾಕ್ಷಿ, ಚಕ್ಕೋತ ಹಣ್ಣುಗಳ ರಸ, ಹಣ್ಣು ಸೇವನೆಯಿಂದ ಅವಶ್ಯ ಪೋಷಕಾಂಶ ದೊರೆಯುತ್ತದೆ.
    * ಎಳನೀರು ಸೇವನೆಯಿಂದ ದೇಹದಲ್ಲಿ ಡೆಂಗ್ಯೂನಿಂದ ಕಡಿಮೆ ಆಗಿದ್ದ ನೀರಿನಾಂಶ ಹೆಚ್ಚಳವಾಗುತ್ತದೆ. ದಿನಕ್ಕೆ 2-3 ಎಳನೀರು ಕುಡಿಯಿರಿ.
    * ದಾಳಿಂಬೆ ಹಣ್ಣಿನ ಬೀಜಗಳು ಕಬ್ಬಿಣಾಂಶದ ಪ್ರಮುಖ ಮೂಲವಾಗಿವೆ. ದಾಳಿಂಬೆ ರಸ, ಹಣ್ಣು ಸೇವನೆಯಿಂದ ರಕ್ತಕಣಗಳನ್ನು ನಿಯಂತ್ರಣದಲ್ಲಿಡಬಹುದು. ಆಯಾಸವನ್ನೂ ಕಡಿಮೆಗೊಳಿಸುತ್ತದೆ.
    * ಡೆಂಗ್ಯೂದಿಂದ ಬಳಲುತ್ತಿರುವವರಿಗೆ ಪಪ್ಪಾಯ ಎಲೆ ಮತ್ತು ಬೀಜಗಳ ರಸವೂ ಅತ್ಯುತ್ತಮ ಔಷಧಿ. ಪಪ್ಪಾಯ ಎಲೆಯ ರಸ, ಪಪ್ಪಾಯ ಹಣ್ಣಿನ ಜ್ಯೂಸ್ ಸೇವನೆ ಉತ್ತಮ.
    * ಮೊಳಕೆ ಕಾಳುಗಳ ಸೇವನೆ ಉತ್ತಮ.
    * ಗಂಟೆಗೊಂದು ಲೋಟ ನೀರು ಕುಡಿಯುವುದು.
    * ಡೆಂಗ್ಯೂ ಜ್ವರ ಕಡಿಮೆ ಮಾಡಲು ಹರ್ಬಲ್ ಟೀ ಕುಡಿಯುವುದು ಒಳ್ಳೆಯದು.
    * ತರಕಾರಿ ಜ್ಯೂಸ್, ಸೂಪ್ ಸೇವನೆಯಿಂದ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ದೊರೆಯುತ್ತದೆ.

    ಮುಂಜಾಗ್ರತಾ ಕ್ರಮಗಳೇನು?:
    * ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
    * ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
    * ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
    * ತೆಂಗಿನ ಚಿಪ್ಪು, ಟಯರ್‍ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
    * ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
    * ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
    * ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.

    ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆ ಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.

  • ಶಂಕಿತ ಡೆಂಗ್ಯೂಗೆ ಒಂದೇ ಗ್ರಾಮದ ಮೂವರು ಬಲಿ

    ಶಂಕಿತ ಡೆಂಗ್ಯೂಗೆ ಒಂದೇ ಗ್ರಾಮದ ಮೂವರು ಬಲಿ

    ಗದಗ: ಶಂಕಿತ ಡೆಂಗ್ಯೂ ಜ್ವರ ದಿಂದ ಎರಡು ದಿನದಲ್ಲಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ನಾಗರಸಕೊಪ್ಪ ಗ್ರಾಮದಲ್ಲಿ ನಡೆದಿದೆ.

    ಶಂಕಿತ ಡೆಂಗ್ಯೂ ಜ್ವರಿಂದ ಇಂದು 28 ವರ್ಷದ ಹನುಮಂತ ಹಗೇದಾಳ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗುರುವಾರ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ 40 ವರ್ಷದ ಪರಸಪ್ಪ, 53 ವರ್ಷದ ಹೊಳಿಯವ್ವ ಲ್ಯಾವಕ್ಕಿ ಎಂಬ ಇಬ್ಬರು ಮೃತಪಟ್ಟಿದ್ದರು.

    ಇವರು ಕಳೆದ ಎರಡು ವಾರಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂಬುವುದಾಗಿ ಕುಟುಂಬದವರು ಹಾಗೂ ಸ್ಥಳಿಯರ ಆರೋಪಿಸಿದ್ದಾರೆ. ಈ ನಾಗರಸಕೊಪ್ಪ ಗ್ರಾಮದಲ್ಲಿ ಶೇ.60 ರಷ್ಟು ಜನ ಜ್ವರದಿಂದ ಬಳಲುತ್ತಿದ್ದು, ಸ್ಥಳಿಯ ಆಸ್ಪತ್ರೆ, ಗಜೇಂದ್ರಗಡ, ಗದಗ ಹಾಗೂ ಹುಬ್ಬಳ್ಳಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಷ್ಟಾದರೂ ಸ್ಥಳಕ್ಕೆ ಬಾರದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ. ಸಾವಿನ ಬಳಿಕ ಗ್ರಾಮಕ್ಕೆ ಬಂದ ಆರೋಗ್ಯ ಇಲಾಖೆ ಐದು ಜನ ಅಧಿಕಾರಿಗಳನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಪಿಡಿಓಗೆ ದಿಗ್ಬಂಧನ ಹಾಕಿದ್ದರು. ಸ್ಥಳಕ್ಕೆ ಡಿಸಿ ಹಾಗೂ ಡಿಎಚ್‍ಓ ಸ್ಥಳಕ್ಕೆ ಆಗಮಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದರು. ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.