Tag: Department of Health

  • 3,377 ಜನರಿಗೆ ಪಾಸಿಟಿವ್, 34 ಬಲಿ – 8,045 ಮಂದಿ ಡಿಸ್ಚಾರ್ಜ್

    3,377 ಜನರಿಗೆ ಪಾಸಿಟಿವ್, 34 ಬಲಿ – 8,045 ಮಂದಿ ಡಿಸ್ಚಾರ್ಜ್

    ಬೆಂಗಳೂರು: ಇಂದು ಕರ್ನಾಟಕದಲ್ಲಿ 3,377 ಮಂದಿಗೆ ಸೋಂಕು ಬಂದಿದ್ದು, 8,045 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 34 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಒಟ್ಟು ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆಯಾಗಿದೆ. ಈ ಪೈಕಿ 7,88,780 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 35,693 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,281 ಮಂದಿ ಸೋಂಕಿಗೆ ಬಲಿಯಾಗಿದ್ದು, ಐಸಿಯುನಲ್ಲಿ 928 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು 27,458 ಮಂದಿಗೆ ಆಂಟಿಜನ್ ಟೆಸ್ಟ್, 75,045 ಮಂದಿಗೆ ಆರ್.ಟಿ.ಪಿ.ಸಿ.ಆರ್ ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,02,503 ಜನರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 82,88,179 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರು ನಗರದಲ್ಲಿ 1953 ಮಂದಿಗೆ, ತುಮಕೂರು 95, ಮೈಸೂರು 168, ಹಾಸನದಲ್ಲಿ 172 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರದಲ್ಲಿ 464, ಬಳ್ಳಾರಿ 47, ತುಮಕೂರು 40, ಕೋಲಾರ 35 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • 2,756 ಪಾಸಿಟಿವ್, ಬಲಿ 26 – ಡಿಸ್ಚಾರ್ಜ್ 7,140

    2,756 ಪಾಸಿಟಿವ್, ಬಲಿ 26 – ಡಿಸ್ಚಾರ್ಜ್ 7,140

    ಬೆಂಗಳೂರು: ಇಂದು ಕರ್ನಾಟಕದಲ್ಲಿ 2,756 ಮಂದಿಗೆ ಸೋಂಕು ಬಂದಿದ್ದು, 7,140 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 26 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಒಟ್ಟು ಸೋಂಕಿತರ ಸಂಖ್ಯೆ 8,32,396ಕ್ಕೆ ಏರಿಕೆಯಾಗಿದೆ. ಈ ಪೈಕಿ 7,80,735 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 40,395 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,247 ಮಂದಿ ಸೋಂಕಿಗೆ ಬಲಿಯಾಗಿದ್ದು, ಐಸಿಯುನಲ್ಲಿ 932 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು 27,871 ಆಂಟಿಜನ್ ಟೆಸ್ಟ್, 66,668 ಆರ್.ಟಿ.ಪಿ.ಸಿ.ಆರ್ ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು ಕೋವಿಡ್-19 ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 81,85,676 ಕೊರೊನಾ ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರು ನಗರದಲ್ಲಿ 1,479, ತುಮಕೂರು 108, ಮೈಸೂರು 125, ಹಾಸನದಲ್ಲಿ 115 ಮಂದಿಗೆ ಸೋಂಕು ಬಂದಿದೆ. ಬೆಂಗಳೂರು ನಗರದಲ್ಲಿ 468, ಬಳ್ಳಾರಿ 47, ತುಮಕೂರು 40, ಕೋಲಾರ 36 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಕೊರೊನಾ ಕುಸಿತ- 101 ದಿನಗಳಲ್ಲೇ ಕನಿಷ್ಠ ಸಂಖ್ಯೆ ದಾಖಲು

    ಕೊರೊನಾ ಕುಸಿತ- 101 ದಿನಗಳಲ್ಲೇ ಕನಿಷ್ಠ ಸಂಖ್ಯೆ ದಾಖಲು

    ನವದೆಹಲಿ: ದೇಶದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಕುಸಿಯುತ್ತಿದ್ದು ಹೊಸ ದಾಖಲೆಯನ್ನು ಸೃಷ್ಟಿಸಿದೆ. ಕಳೆದ 24 ಗಂಟೆಯಲ್ಲಿ 36,604 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದು 101 ದಿನಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

    ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಜುಲೈ 17ರಂದು 35,065 ಪ್ರಕರಣಗಳು ದಾಖಲಾಗಿದ್ದವು. ಹಲವು ರಾಜ್ಯಗಳಲ್ಲಿ ನಿರಂತರವಾಗಿ ಕನಿಷ್ಠ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈ ಪ್ರಮಾಣದ ಇಳಿಕೆಗೆ ಕಾರಣ ಎನ್ನಲಾಗಿದೆ.

    ಓಆರ್‍ಜಿ ಅಂಕಿ ಅಂಶಗಳ ಪ್ರಕಾರ ಅಕ್ಟೋಬರ್ 25 ರಂದು 9,39,309 ಮಾದರಿಗಳ ಪರೀಕ್ಷೆ ನಡೆಸಲಾಗಿತ್ತು. ವಾರದ ಇತರ ದಿನಗಳಿಗೆ ಹೋಲಿಸಿದರೆ ಇದು ಕಡಿಮೆ. ಹಿಂದಿನ ಎರಡು ದಿನಗಳಲ್ಲಿ ತಲಾ 14 ಲಕ್ಷ ಪರೀಕ್ಷೆ ನಡೆದಿತ್ತು. ಭಾನುವಾರ ಪರೀಕ್ಷೆ ನಡೆಸುವ ಸಂಖ್ಯೆ ಕಡಿಮೆಯಾಗಿದ್ದರಿಂದ ಸೋಮವಾರ ಕಡಿಮೆ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದೆ ಎನ್ನಲಾಗಿದ್ದರು, ಹಿಂದಿನ ಹಲವು ಭಾನುವಾರದ ವೇಳೆಯೂ ಕಡಿಮೆ ಸಂಖ್ಯೆಯ ಪರೀಕ್ಷೆ ನಡೆದರೂ, ಸೋಮವಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿತ್ತು.

    ಸದಾ ಅಗ್ರಸ್ಥಾನದಲ್ಲಿದ್ದ ಮಹಾರಾಷ್ಟ್ರದಲ್ಲಿ ಸೋಮವಾರ 3,645 ಪ್ರಕರಣಗಳು ಪತ್ತೆಯಾಗಿದ್ದು, ಕೇರಳದಲ್ಲಿ 4,287 ಪಶ್ಚಿಮ ಬಂಗಾಳ 4,121 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದ 3645 ಪ್ರಕರಣಗಳು 125 ದಿನಗಳಲ್ಲೇ ಕನಿಷ್ಠವಾಗಿದ್ದು, 84 ಮಂದಿ ಸೋಮವಾರ ಸಾವನ್ನಪ್ಪಿದ್ದಾರೆ. ಇದು 146 ದಿನಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ.

  • 11ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

    11ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಪ್ರತಿಭಟನೆ

    ಮೈಸೂರು: ಕೊರೊನಾ ಸಂಕಷ್ಟ ಕಾಲದಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಇದೀಗ 11ನೇ ದಿನಕ್ಕೆ ಕಾಲಿಟ್ಟಿದೆ.

    ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಬಳಿ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, 11ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆರೋಗ್ಯ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ, ಸಮಾನ ವೇತನ ಹಾಗೂ ಸೇವಾ ಭದ್ರತೆ ಕಲ್ಪಿಸುವಲ್ಲಿ ವಿಫಲವಾಗಿದೆ. ಕೋವಿಡ್-19 ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿಗೆ ವಿಮಾ ಯೋಜನೆ ಕಲ್ಪಿಸಿಲ್ಲ. ನಮ್ಮ ನಿರಂತರ ಹೋರಾಟದ ಬಗ್ಗೆ ಗಮನಹರಿಸದೆ ನಿರ್ಲಕ್ಷ್ಯವಹಿಸಿದೆ. ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರತಿಭಟನೆ ಉಗ್ರರೂಪ ತಾಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಇಂದು 6,997 ಮಂದಿಗೆ ಕೊರೊನಾ- ರಾಜ್ಯದಲ್ಲಿ 94,652 ಸಕ್ರಿಯ ಪ್ರಕರಣಗಳು

    ಇಂದು 6,997 ಮಂದಿಗೆ ಕೊರೊನಾ- ರಾಜ್ಯದಲ್ಲಿ 94,652 ಸಕ್ರಿಯ ಪ್ರಕರಣಗಳು

    ಬೆಂಗಳೂರು: ರಾಜ್ಯದಲ್ಲಿಂದು 6,997 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ.

    ಇಂದು ಕೊರೊನಾದಿಂದ ಗುಣಮುಖರಾಗಿ 5,460 ಜನರು ಡಿಸ್ಚಾರ್ಜ್ ಆಗಿದ್ದು, 816 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಮಹಾಮಾರಿ 8,266 ಜನರನ್ನು ಬಲಿ ಪಡೆದುಕೊಂಡಿದೆ. ಇಂದು 56,398 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಇದುವರೆಗೂ 43,94,840 ಜನರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 50, ಬಳ್ಳಾರಿ 192, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 128, ಬೆಂಗಳೂರು ನಗರ 3547, ಬೀದರ್ 63, ಚಾಮರಾಜನಗರ 32, ಚಿಕ್ಕಬಳ್ಳಾಪುರ 84, ಚಿಕ್ಕಮಗಳೂರು 252, ಚಿತ್ರದುರ್ಗ 89, ದಕ್ಷಿಣ ಕನ್ನಡ 186, ದಾವಣಗೆರೆ 138, ಧಾರವಾಡ 120, ಗದಗ 59, ಹಾಸನ 315, ಹಾವೇರಿ 32, ಕಲಬುರಗಿ 100, ಕೊಡಗು 33, ಕೋಲಾರ 44, ಕೊಪ್ಪಳ 88, ಮಂಡ್ಯ 203, ಮೈಸೂರು 341, ರಾಯಚೂರು 37, ರಾಮನಗರ 57, ಶಿವಮೊಗ್ಗ 187, ತುಮಕೂರು 90, ಉಡುಪಿ 102, ಉತ್ತರ ಕನ್ನಡ 115, ವಿಜಯಪುರ 82 ಮತ್ತು ಯಾದಗಿರಿಯಲ್ಲಿ 40 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

    ಒಟ್ಟು ರಾಜ್ಯದಲ್ಲಿ 816 ಜನ ಕೊರೊನಾ ಸೋಂಕಿತರು ಐಸಿಯುನಲ್ಲಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ 259, ಬಳ್ಳಾರಿಯಲ್ಲಿ 74, ಧಾರವಾಡದಲ್ಲಿ 93 ಮತ್ತು ಹಾಸನದಲ್ಲಿ 62 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಇಂದು ಕೊರೊನಾ ಸೋಂಕಿನಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನ್ನಪ್ಪಿದ್ದಾರೆ.

  • ಒಂದೇ ದಿನ ಕೊರೊನಾಗೆ 1,115 ಮಂದಿ ಬಲಿ – 33,98 ಲಕ್ಷ ಮಂದಿ ಗುಣಮುಖ

    ಒಂದೇ ದಿನ ಕೊರೊನಾಗೆ 1,115 ಮಂದಿ ಬಲಿ – 33,98 ಲಕ್ಷ ಮಂದಿ ಗುಣಮುಖ

    ನವದೆಹಲಿ: ದೇಶದಲ್ಲಿ ಕೊರೊನಾ ಮರಣಮೃದಂಗ ಬಾರಿಸುತ್ತಿದ್ದು, ದಿನೇ ದಿನೇ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 1,115 ಮಂದಿ ಕೊರೊನಾಗೆ ಬಲಿ ಆಗಿದ್ದು, ಇವರಲ್ಲಿ ಬಹುತೇಕರು ಅನ್ಯ ರೋಗಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

    ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 1,115 ಮಂದಿ ಮೃತಪಟ್ಟಿದ್ದು, ಇದುವರೆಗೂ 73,890 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಂದೇ ದಿನ 89,706 ಮಂದಿಗೆ ಸೋಂಕು ದೃಢವಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 43,70,129ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    43,70,129 ಪೈಕಿ 8,97,394 ಸಕ್ರಿಯ ಪ್ರಕರಣಗಳಿದ್ದು, 33,98,845 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಎಂಆರ್ ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸಿದೆ. ಮಂಗಳವಾರ 11,54,549 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಈವರೆಗೆ 5,18,04,677 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.

  • ರಾಜ್ಯದಲ್ಲಿಂದು 7,866 ಕೊರೊನಾ ಪ್ರಕರಣ ಪತ್ತೆ- 146 ಜನ ಸಾವು

    ರಾಜ್ಯದಲ್ಲಿಂದು 7,866 ಕೊರೊನಾ ಪ್ರಕರಣ ಪತ್ತೆ- 146 ಜನ ಸಾವು

    – ಒಟ್ಟು ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು ಸಹ 7,866 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ.

    ರಾಜ್ಯದಲ್ಲಿ ಇಂದು ಕೊರೊನಾದಿಂದಾಗಿ 146 ಜನ ಪ್ರಾಣ ಬಿಟ್ಟಿದ್ದು, ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 6,680ಕ್ಕೆ ಹೆಚ್ಚಳವಾಗಿದೆ. ಇನ್ನೂ 784 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 7,803 ಜನ ಕೊರೊನಾದಿಂದ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಒಟ್ಟು ಸಂಖ್ಯೆ 3,08,573ಕ್ಕೆ ಹೆಚ್ಚಳವಾಗಿದೆ.

    ಸಿಲಿಕಾನ್ ಸಿಟಿಯಲ್ಲಿ ಇಂದು 3,102 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,53,625ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 55 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 2,266ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 40,386ಕ್ಕೆ ಹೆಚ್ಚಳವಾಗಿದೆ. ಇಂದು 2,330 ಜನ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು 1,10,972 ಜನ ಡಿಸ್ಚಾರ್ಜ್ ಆಗಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 212, ಬಳ್ಳಾರಿ 404, ಬೆಳಗಾವಿ 230, ಬೆಂಗಳೂರು ಗ್ರಾಮಾಂತರ 104, ಬೆಂಗಳೂರು ನಗರ 3,102, ಬೀದರ್ 52, ಚಾಮರಾಜನಗರ 42, ಚಿಕ್ಕಬಳ್ಳಾಪುರ 82, ಚಿಕ್ಕಮಗಳೂರು 162, ಚಿತ್ರದುರ್ಗ 23, ದಕ್ಷಿಣ ಕನ್ನಡ 374, ದಾವಣಗೆರೆ 240, ಧಾರವಾಡ 318, ಗದಗ 196, ಹಾಸನ 219, ಹಾವೇರಿ 165, ಕಲಬುರಗಿ 199, ಕೊಡಗು 29, ಕೋಲಾರ 30, ಕೊಪ್ಪಳ 269, ಮಂಡ್ಯ 273, ಮೈಸೂರು 337, ರಾಯಚೂರು 209, ರಾಮನಗರ 28, ಶಿವಮೊಗ್ಗ 00, ತುಮಕೂರು 153, ಉಡುಪಿ 250, ಉತ್ತರ ಕನ್ನಡ 24, ವಿಜಯಪುರ 61 ಮತ್ತು ಯಾದಗಿರಿಯಲ್ಲಿ 79 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ, ಮಾರ್ಗಸೂಚಿ ಪಾಲಿಸಿ: ಶ್ರೀರಾಮುಲು

    ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ, ಮಾರ್ಗಸೂಚಿ ಪಾಲಿಸಿ: ಶ್ರೀರಾಮುಲು

    – ಭಯ ಬೇಡ, ಮೆಟ್ರೋದಲ್ಲಿ ಸಂಚರಿಸಿ

    ಬೆಂಗಳೂರು: ಇಂದಿನಿಂದ ಮೆಟ್ರೋ ಸಂಚಾರ ಆರಂಭ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಇಂದು ಮೆಟ್ರೋದಲ್ಲಿ ಪರಿಶೀಲನೆ ನಡೆಸಿದರು. ವಿಧಾನಸೌಧದ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಖುದ್ದು ಮೆಟ್ರೋದಲ್ಲಿ ಪ್ರಯಾಣಿಸಿದರು.

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, 5 ತಿಂಗಳ ನಂತರ ಮೆಟ್ರೋ ಸಂಚಾರ ಪ್ರಾರಂಭವಾಗಿದೆ. ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪರಿಶೀಲನೆ ನಡೆಸಲು ನಾನೇ ಖುದ್ದು ಸಂಚಾರ ಮಾಡಿ ತಿಳಿದುಕೊಳ್ಳುತ್ತಿದ್ದೇನೆ. ಪ್ರಯಾಣಿಕರು ಯಾರು ಆತಂಕಗೊಳ್ಳುವ ಅಗತ್ಯವಿಲ್ಲ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಇದೆ. ಆರೋಗ್ಯ ಇಲಾಖೆ, ಮೆಟ್ರೋ ನೀಡಿರುವ ಮಾರ್ಗಸೂಚಿ ಫಾಲೋ ಮಾಡಿ ಎಂದು ಸಲಹೆ ನೀಡಿದರು.

    ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಸ್ಯಾನಿಟೈಸ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರದಲ್ಲಿ ಪ್ರಯಾಣ ಮಾಡಬೇಕು. ಸುರಕ್ಷಿತವಾಗಿ ಸಂಚಾರ ಮಾಡಿ. ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. 6 ಬೋಗಿಗಳಿಂದ ಸುಮಾರು 400 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು. ಡ್ರಗ್ಸ್ ಮಾಫಿಯಾ ವಿಚಾರ ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ತರುತ್ತಿದೆ. ನಮ್ಮ ಸರ್ಕಾರ ಈ ಬಗ್ಗೆ ತನಿಖೆ ಮಾಡುತ್ತಿದೆ. ಮಾಫಿಯಾವನ್ನು ಬುಡ ಸಮೇತ ನಮ್ಮ ಸರ್ಕಾರ ಕಿತ್ತು ಹಾಕುತ್ತೆ. ರಾಜಕೀಯ ರಂಗ, ರಾಜಕಾರಣಿಗಳ ಮಕ್ಕಳು, ಚಿತ್ರನಟರು ಯಾರೇ ಡ್ರಗ್ಸ್ ಮಾಫಿಯಾದಲ್ಲಿದ್ದರು ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಸ್ಪಷ್ಟಪಡಿಸಿದರು.

  • ಬೀದರ್ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು ದೃಢ

    ಬೀದರ್ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು ದೃಢ

    ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಅವರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

    ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ತಪಾಸಣೆ ಮಾಡಿಸಿದ್ದ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಬ್ರೀಮ್ಸ್ ವೈದ್ಯರ ಸಲಹೆಯಂತೆ ಜಿಲ್ಲಾಧಿಕಾರಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    ಕೆಲ ದಿನಗಳಿಂದ ಜಿಲ್ಲಾಧಿಕಾರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ತಪಾಸಣೆ ಮಾಡಿಸಿದ್ದು, ಇಂದು ಕೊರೊನಾ ಪಾಸಿಟಿವ್ ಇರುವುದು ಧೃಡವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ವಿ.ಜಿ.ರೆಡ್ಡಿ ಪಬ್ಲಿಕ್ ಟಿವಿಗೆ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ಮೂರು ತಿಂಗಳಿನಿಂದ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದು, ಕರ್ತವ್ಯ ಸಮಯದಲ್ಲೇ ಕೊರೊನಾ ಸೋಂಕಿತರ ಸಂಪರ್ಕದಿಂದಾಗಿ ಸೋಂಕು ತಗುಲಿರುವ ಸಾದ್ಯತೆ ಇದೆ.

  • ಇಂದು 9,058 ಕೊರೊನಾ ಪ್ರಕರಣ ಪತ್ತೆ- 135 ಜನ ಸಾವು

    ಇಂದು 9,058 ಕೊರೊನಾ ಪ್ರಕರಣ ಪತ್ತೆ- 135 ಜನ ಸಾವು

    – ಒಟ್ಟು ಸೋಂಕಿತರ ಸಂಖ್ಯೆ 3,51,481ಕ್ಕೆ ಏರಿಕೆ
    – ಬೆಂಗಳೂರಲ್ಲಿ ಇಂದು 40 ಜನ ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ಇಂದು 9,058 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,51,481ಕ್ಕೆ ಏರಿಕೆಯಾಗಿದೆ.

    ಇಂದು 9,058 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 90,999ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 3,51,481ಕ್ಕೆ ತಲುಪಿದೆ. ರಾಜ್ಯದಲ್ಲಿ ಇಂದು 135 ಜನ ಸಾವನ್ನಪ್ಪಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 5,837ಕ್ಕೆ ಏರಿಕೆಯಾಗಿದೆ. ಇನ್ನೂ 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 5,159 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 2,54,626 ಜನ ಡಿಸ್ಚಾರ್ಜ್ ಆಗಿದ್ದಾರೆ.

    ಬೆಂಗಳೂರಲ್ಲಿ ಇಂದು 2,967 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,32,092ಕ್ಕೆ ಏರಿಕೆಯಾಗಿದೆ. 40 ಜನ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇಂದು 1,137 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 91,180ಕ್ಕೆ ಏರಿಕೆಯಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 136, ಬಳ್ಳಾರಿ 393, ಬೆಳಗಾವಿ 316, ಬೆಂಗಳೂರು ಗ್ರಾಮೀಣ 145, ಬೆಂಗಳೂರು ನಗರ 2,967, ಬೀದರ್ 63, ಚಾಮರಾಜನಗರ 49, ಚಿಕ್ಕಬಳ್ಳಾಪುರ 106, ಚಿಕ್ಕಮಗಳೂರು 210, ಚಿತ್ರದುರ್ಗ 164, ದಕ್ಷಿಣ ಕನ್ನಡ 352, ದಾವಣಗೆರೆ 289, ಧಾರವಾಡ 199, ಗದಗ 194, ಹಾಸನ 461, ಹಾವೇರಿ 153, ಕಲಬುರಗಿ 220, ಕೊಡಗು 54, ಕೋಲಾರ 64, ಕೊಪ್ಪಳ 195, ಮಂಡ್ಯ 197, ಮೈಸೂರು 737, ರಾಯಚೂರು 245, ರಾಮನಗರ 105, ಶಿವಮೊಗ್ಗ 233, ತುಮಕೂರು 327, ಉಡುಪಿ 161, ಉತ್ತರ ಕನ್ನಡ 114, ವಿಜಯಪುರ 67 ಮತ್ತು ಯಾದಗಿರಿಯಲ್ಲಿ 142 ಪ್ರಕರಣಗಳು ವರದಿಯಾಗಿವೆ.