Tag: Department of Labor

  • 8 ಕೋಟಿ ಹಗರಣದಲ್ಲಿ ಯಾರು ತಪ್ಪೆಸಗಿದ್ದಾರೋ ಅವರ ಮೇಲೆ ಕ್ರಮ: ಸಂತೋಷ್ ಲಾಡ್

    8 ಕೋಟಿ ಹಗರಣದಲ್ಲಿ ಯಾರು ತಪ್ಪೆಸಗಿದ್ದಾರೋ ಅವರ ಮೇಲೆ ಕ್ರಮ: ಸಂತೋಷ್ ಲಾಡ್

    ಬಾಗಲಕೋಟೆ: ಕಾರ್ಮಿಕ ಇಲಾಖೆಯಲ್ಲಿ (Department of Labor) ನಡೆದಿರುವ 8 ಕೋಟಿ ಹಣ ಹಗರಣದ (Scam) ಬಗ್ಗೆ ನಡೆಯುತ್ತಿರುವ ತನಿಖೆ ಅಂತಿಮ ಹಂತದಲ್ಲಿದ್ದು ಯಾರು ತಪ್ಪೆಸಗಿದ್ದಾರೋ ಅವರ ಮೇಲೆ ಕ್ರಮ ಆಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ (Santosh Lad) ಹೇಳಿದ್ದಾರೆ.

    ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಣ ದುರ್ಬಳಕೆಯ ಹಗರಣದಲ್ಲಿ ಯಾರು ತಪ್ಪಿತಸ್ಥರಿದ್ದಾರೆ ಅವರಿಗೆ ಖಂಡಿತವಾಗಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ತನಿಖೆಯಾಗಬೇಕು ಅಂತ ನಾನೇ ಬರೆದಿದ್ದೆ. ಸ್ವಲ್ಪ ವಿಳಂಬವಾಗಿದೆ ನಿಜ. ಆದರೆ ತಪ್ಪಿತಸ್ಥರು ಯಾರೇ ಇದ್ಧರೂ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಜಾತಿ ತಾರತಮ್ಯ ನಿವಾರಿಸುವುದು ಗಣತಿಯ ಉದ್ದೇಶ: ಸಿಎಂ

     

    ಕಾರ್ಮಿಕರಿಗೆ ಉಚಿತ ಬಸ್ ಪಾಸ್ (Free Bus Pass) ವಿಚಾರಕ್ಕೆ ಪ್ರತಿಕ್ರಿಯಿಸಿ, ಇಡೀ ಕರ್ನಾಟಕದಲ್ಲೇ ಈಗ ಮಹಿಳೆಯರಿಗೆ ಉಚಿತ ಬಸ್ಸು ಇದೆ. ಕಾರ್ಮಿಕರಿಗೆ ಉಚಿತ ಮಾಡುವುದು ಕಷ್ಟ. ನಮ್ಮ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಕೊಡಲು ದುಡ್ಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆ ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ ಕಳ್ಳಾಟ: ರಾಹುಲ್ ಗಾಂಧಿ ಆರೋಪ

  • ಸರ್ಕಾರದಲ್ಲಿ ಹಣವಿಲ್ಲವೆಂದು ಕಾರ್ಮಿಕ ಇಲಾಖೆ ನಿಧಿ ದುರುಪಯೋಗ ಸರಿಯಲ್ಲ: ದೇಶಪಾಂಡೆ

    ಸರ್ಕಾರದಲ್ಲಿ ಹಣವಿಲ್ಲವೆಂದು ಕಾರ್ಮಿಕ ಇಲಾಖೆ ನಿಧಿ ದುರುಪಯೋಗ ಸರಿಯಲ್ಲ: ದೇಶಪಾಂಡೆ

    ಕಾರವಾರ: ಸರ್ಕಾರದಲ್ಲಿ ಹಣವಿಲ್ಲ ಎಂದು ಕಾರ್ಮಿಕ ಇಲಾಖೆ ನಿಧಿಯನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾರ್ಮಿಕ ಇಲಾಖೆಯ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಮಿಕ ಇಲಾಖೆಯಿಂದ ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯಧನದ ಮಂಜುರಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಕಾರ್ಮಿಕರಿಂದ ಸಂಗ್ರಹಿಸಲ್ಪಟ್ಟ ನಿಧಿಯು ಕಾರ್ಮಿಕರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ವರ್ಧನೆಗೆ ಉಪಯೋಗವಾಗಬೇಕು ಎಂದರು. ಇದನ್ನೂ ಓದಿ: ಅಭಿಮನ್ಯು ಟೀಂಗೆ ಹೊಸ ಮೆಂಬರ್ ಎಂಟ್ರಿ- ಅಶ್ವತ್ಥಾಮ ಭವಿಷ್ಯದ ಕ್ಯಾಪ್ಟನ್!

    ಸರ್ಕಾರದಲ್ಲಿ ಹಣವಿಲ್ಲವೆಂದು ಕಾರ್ಮಿಕ ಇಲಾಖೆಯ ನಿಧಿಯನ್ನು ದುರುಪಯೋಗಪಡಿಸಿಕೊಳ್ಳಬಾರದು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎಂದು ಸಲಹೆ ನಿಡಿದರು.

  • ಕಾರ್ಮಿಕರಿಗೆ ಹೇಳಿದ ಸಮಯಕ್ಕೆ ಇದ್ದಲ್ಲಿಯೇ ಸೀಗುತ್ತೆ ವ್ಯಾಕ್ಸಿನ್

    ಕಾರ್ಮಿಕರಿಗೆ ಹೇಳಿದ ಸಮಯಕ್ಕೆ ಇದ್ದಲ್ಲಿಯೇ ಸೀಗುತ್ತೆ ವ್ಯಾಕ್ಸಿನ್

    – ಮನೆಗೆ ತೆರಳಿ ಕಾರ್ಮಿಕ ಇಲಾಖೆಯಿಂದ ಲಸಿಕೆ

    ಯಾದಗಿರಿ: ಜಿಲ್ಲೆ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ, ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆಯಿಂದ ವಿಶೇಷ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೆ ಮನೆಯ ಬಳಿಗೆ ತೆರಳಿ ಲಸಿಕೆ ವಿತರಣೆ ಮಾಡಲಾಗುತ್ತಿದೆ.

    ಹೊಲಿಗೆ ಯಂತ್ರ ನಡೆಸುವವರು, ಮಡಿವಾಳ, ಸವಿತಾ ಸಮಾಜ ಮತ್ತು ಕಟ್ಟಡ ಕಾರ್ಮಿಕರಿಗೆ ಈ ಸೌಲಭ್ಯ ನೀಡಿದ್ದು, ಕಾರ್ಮಿಕರು ಇದ್ದಲ್ಲಿಗೇ ಹೇಳಿದ ಸಮಯಕ್ಕೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ. ಲಸಿಕೆ ಪಡೆಯಲು ಕಾರ್ಮಿಕರ ವರ್ಗ ಹಿಂದೇಟು ಹಾಕುತ್ತಿರುವ ಹಿನ್ನೆಲೆ ಅವರ ಮನವೊಲಿಸಿ ಅವರು ಇದ್ದ ಸ್ಥಳಕ್ಕೆ ತೆರಳಿ ಲಸಿಕೆ ಹಾಕಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

    ಕಾರ್ಮಿಕ ಇಲಾಖೆ ಉಪ ನಿರ್ದೇಶಕಿ ಕುಮಾರಿ ಶ್ವೇತ ಮತ್ತು ಇನ್‍ಸ್ಪೆಕ್ಟರ್ ಗಂಗಾಧರ್ ಪ್ರತಿ ತಾಲೂಕು ಮತ್ತು ಗ್ರಾಮಗಳಿಗೆ ತೆರಳಿ ಕಾರ್ಮಿಕರ ಮನವೊಲಿಸಿ ಲಸಿಕೆ ಹಾಕಿಸುತ್ತಿದ್ದಾರೆ.

  • 14 ವರ್ಷದೊಳಗಿನ ಮಕ್ಕಳನ್ನು ಕೂಲಿಗೆ ಕರೆದರೆ ಮಾಲೀಕನ ಮೇಲೆ ಕೇಸ್- ಕಾರ್ಮಿಕ ಇಲಾಖೆ ಎಚ್ಚರಿಕೆ

    14 ವರ್ಷದೊಳಗಿನ ಮಕ್ಕಳನ್ನು ಕೂಲಿಗೆ ಕರೆದರೆ ಮಾಲೀಕನ ಮೇಲೆ ಕೇಸ್- ಕಾರ್ಮಿಕ ಇಲಾಖೆ ಎಚ್ಚರಿಕೆ

    – ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಯಾದಗಿರಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ

    ಯಾದಗಿರಿ: 14 ವರ್ಷ ಒಳಗಿನ ಮಕ್ಕಳನ್ನು ಕೂಲಿ ಕೆಲಸಕ್ಕೆಂದು ಹೊಲಕ್ಕೆ ಕರೆದುಕೊಂಡು ಹೋಗುವುದು ಅಪರಾಧ, ನಮ್ಮ ಜಿಲ್ಲೆಯಲ್ಲಿ ಇದು ಕಂಡು ಬಂದರೆ ಹೊಲದ ಮಾಲೀಕರ ವಿರುದ್ಧ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಉಪ ನಿರ್ದೇಶಕಿ ಕುಮಾರಿ ಶ್ವೇತಾ ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೆ ಇದೇ ವೇಳೆ ಪಬ್ಲಿಕ್ ಟಿವಿ ಅಭಿಯಾನಕ್ಕೆ ಅಭಿನಂದನೆ ಸಹ ತಿಳಿಸಿದರು.

     ಕೊರೊನಾ ಲಾಕ್ ಡೌನ್ ಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳು ಬಂದ್ ಆಗಿರುವ ಹಿನ್ನೆಲೆ, ಯಾದಗಿರಿಯಲ್ಲಿ ವಿದ್ಯಾರ್ಥಿಗಳು ಪುಸ್ತಕ ಬಿಟ್ಟು ಕೂಲಿ ಕಾರ್ಮಿಕರಾಗಿ ಬದಲಾಗುತ್ತಿದ್ದಾರೆ. ವಿದ್ಯಾಗಮ ಯೋಜನೆ ಸಹ ನಿಂತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪಾಲಕರು ಜಮೀನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಇದರಿಂದಾಗಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಪಬ್ಲಿಕ್ ಟಿವಿ ಅಭಿಯಾನ ನಡೆಸಿತ್ತು.

    ಇದೀಗ ಯಾದಗಿರಿ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಮಕ್ಕಳನ್ನು ರಕ್ಷಿಸುತ್ತಿದ್ದಾರೆ. ಅಲ್ಲದೆ ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಬಿಡಿಸುವ ಸಮಯವಿದ್ದು, 150 ರೂ. ಕೂಲಿ ಆಸೆಗೆ ಪಾಲಕರು ತಮ್ಮ ಮಕ್ಕಳನ್ನು ಹೊಲಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಸದ್ಯ ಇದಕ್ಕೆ ಬ್ರೇಕ್ ಹಾಕುತ್ತಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಹೊಲದ ಮಾಲೀಕರ ವಿರುದ್ಧ ಕೇಸ್ ಹಾಕುತ್ತಿದ್ದಾರೆ.

    ಈ ಪ್ರಕರಣಗಳನ್ನು ಯಾದಗಿರಿ ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಂಡಿದೆ. ಹೀಗಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯ ನಿರ್ದೇಶನದಲ್ಲಿ ಕಾರ್ಮಿಕ ಕಲ್ಯಾಣ ಅಧಿಕಾರಿ ಕುಮಾರಿ ಶ್ವೇತಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದೆ. ಕಾರ್ಮಿಕ ನಿರೀಕ್ಷಕ ಗಂಗಾಧರ್, ಮಕ್ಕಳ ರಕ್ಷಣಾಧಿಕಾರಿ ಗೋವಿಂದ ರಾಠೋಡ್ ಮತ್ತು ಅಶೋಕ್ ರಾಜನ್ ಈ ತಂಡದಲ್ಲಿದ್ದು, ಈ ತಂಡ ವಿವಿಧ ಕಡೆ ದಾಳಿ ನಡೆಸಿ ಮಕ್ಕಳ ರಕ್ಷಣೆ ಜೊತೆ ಜಮೀನಿನ ಮಾಲೀಕರ ವಿರುದ್ಧ ಎಫ್‍ಐಆರ್ ದಾಖಲಿಸುತ್ತಿದೆ.

  • ಕಾರ್ಮಿಕ ಇಲಾಖೆಯ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

    ಕಾರ್ಮಿಕ ಇಲಾಖೆಯ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

    – 200 ಹಾಸಿಗೆಯ ಕೇರ್ ಸೆಂಟರ್ ಬಳಕೆಗೆ ಸಿದ್ಧ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೀಗಾಗಿ ತಮ್ಮ ಕ್ಷೇತ್ರದ ಜನರ ರಕ್ಷಣೆ ಹಾಗೂ ಸುರಕ್ಷತೆಗಾಗಿ ಹಾಗೂ ಸೋಂಕಿತರ ಆರೈಕೆಗಾಗಿ ಶಾಸಕರು ರಾಜ್ಯ ಕಾರ್ಮಿಕ ಇಲಾಖೆಯ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಿದ್ದಾರೆ.

    ಟಿ.ದಾಸರಹಳ್ಳಿಯ ಶಾಸಕ ಆರ್.ಮಂಜುನಾಥ್ ತಮ್ಮ ಕ್ಷೇತ್ರದ ಜನರ ರಕ್ಷಣೆಗಾಗಿ ಈ ಕೆಲಸ ಮಾಡಿದ್ದು, ಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯ ಬಗಲಗುಂಟೆ ವಾರ್ಡ್ ನಲ್ಲಿರುವ ರಾಜ್ಯದ ಕಾರ್ಮಿಕ ಇಲಾಖೆಯ ಸಮುದಾಯ ಭವನದಲ್ಲಿ ಸುಮಾರು 200 ಹಾಸಿಗೆಯ ಕೇರ್ ಸೆಂಟರ್ ಸಜ್ಜಾಗಿದೆ. ಕೇರ್ ಸೆಂಟರ್ ಸಿದ್ಧತೆಯನ್ನು ಆರ್.ಮಂಜುನಾಥ್ ಇಂದು ವೀಕ್ಷಿಸಿದರು.

    ಆಹಾರ ಸಚಿವ ಗೋಪಾಲಯ್ಯ ಸಹಕಾರದಿಂದ ನಿರ್ಮಾಣವಾಗಿರುವ ಈ ಕೇರ್ ಸೆಂಟರ್ ನಲ್ಲಿ, ಕೊರೊನಾ ವಾರಿಯರ್ಸ್ ಹಾಗೂ ಜನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಬೆಡ್ ಗಳು, ಹೊದಿಕೆ, ಫ್ಯಾನ್, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ, ಮನರಂಜನಾ ಕೊಠಡಿ ಹಾಗೂ ಪ್ರತ್ಯೇಕ ಊಟದ ಹಾಲ್ ನಿರ್ಮಾಣ ಮಾಡಲಾಗಿದೆ. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್, ಡಿ ಗ್ರೋಪ್ ನೌಕರರಿಗೆ ಪ್ರತ್ಯೇಕವಾಗಿ ಎಲ್ಲ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ.

  • ಕಂಬಳ ವೀರ ಶ್ರೀನಿವಾಸ್‍ಗೌಡಗೆ ಕಾರ್ಮಿಕ ಇಲಾಖೆಯಿಂದ ಸೌಲಭ್ಯ

    ಕಂಬಳ ವೀರ ಶ್ರೀನಿವಾಸ್‍ಗೌಡಗೆ ಕಾರ್ಮಿಕ ಇಲಾಖೆಯಿಂದ ಸೌಲಭ್ಯ

    ಬೆಂಗಳೂರು: ಕರಾವಳಿಯ ಕಂಬಳ ವೀರ ಶ್ರೀನಿವಾಸ್ ಗೌಡಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಕೇಂದ್ರ ಕ್ರೀಡಾ ಸಚಿವರು, ಉಪರಾಷ್ಟ್ರಪತಿ ಸೇರಿದಂತೆ ಆನೇಕರು ಪ್ರಶಂಸೆಯ ಸುರಿಮಳೆಯನ್ನೆ ಸುರಿಸುತ್ತಿದ್ದಾರೆ. ಕಂಬಳ ವೀರನ ಶರವೇಗದ ಓಟ ತಿಳಿದು ಕೇಂದ್ರ ಸಚಿವರು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

    ಓಟಗಾರ ಉಸೇನ್ ಬೋಲ್ಟ್ ಗಿಂತ ವೇಗವಾಗಿ ಓಡಿದ ಮೂಡು ಬಿದಿರೆಯ ಕಂಬಳ ವೀರನಿಗೆ ಒಲಂಪಿಕ್‍ನಲ್ಲಿ ಭಾಗವಹಿಸಲು ಪೂರ್ವ ತಯಾರಿಯಾಗಿ ಕೋಚಿಂಗ್ ನೀಡುವ ಮಾತುಗಳು ಕೇಳಿ ಬರುತ್ತಿವೆ.

    ಇದರ ಮಧ್ಯದಲ್ಲಿ ವಿಶ್ವ ದಾಖಲೆ ಮಾಡಿರುವ ಕಂಬಳ ವೀರನಿಗೆ ರಾಜ್ಯ ಕಾರ್ಮಿಕ ಇಲಾಖೆ ಸೌಲಭ್ಯ ನೀಡಲು ಮುಂದಾಗಿದೆ. ಈ ಹಿನ್ನೆಲೆ ಇಲಾಖೆಯ ಹಿರಿಯ ಅಧಿಕಾರಿಗಳು ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಾರ್ಮಿಕ ಇಲಾಖೆಯ ಹಿರಿಯ ತನಿಖಾಧಿಕಾರಿಗಳಾದ ಮೇರಿ ಹಾಗೂ ವಿರೇಂದ್ರ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೂಡುಬಿದರೆಯ ಮಿಯಾರಿನ ಯುವಕ ಶ್ರೀನಿವಾಸ್ ಗೌಡ ಅವರಿಗೆ ಕಾರ್ಮಿಕ ಇಲಾಖೆ ಸೌಲಭ್ಯ ನೀಡಲು ಮುಂದಾಗಿದೆ ಎಂಬುದನ್ನ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಮ್ಮ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಕರಾವಳಿಯ ಕಂಬಳ ಓಟಗಾರ ದೇಶಾದ್ಯಂತ ಟ್ರೆಂಡಿಂಗ್- ಕೇಂದ್ರವನ್ನೂ ತಲುಪಿದ ಸಾಧನೆ

    ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಐಕಳದಲ್ಲಿ ನಡೆದ ಕಂಬಳದ ಓಟದಲ್ಲಿ 145.5 ಮೀ ದೂರವನ್ನು 13.63 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ದೇಶದ ಗಮನ ಸೆಳೆದಿದೆ. ಅಲ್ಲದೆ ಕಂಬಳ ಗದ್ದೆಯಲ್ಲಿ ಕೋಣಗಳೊಂದಿಗೆ 100 ಮೀ ದೂರವನ್ನು 9.55 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಸಾಧನೆ ಮಾಡಿದ್ದಾರೆ. ಕ್ರೀಡಾ ಪೋತ್ಸಾಹ ನೀಡಲು ಮುಂದಾಗಿರುವ ಕಾರ್ಮಿಕ ಇಲಾಖೆಯು ಯಾವ ರೀತಿ ಸೌಲಭ್ಯ ಮತ್ತು ಪ್ರೋತ್ಸಾಹ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.