Tag: Department of Medical Education

  • ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

    ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

    -ಸಾಗಾಣೆ ಅನೂಕೂಲಕ್ಕಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯು (Department of Medical Education) ಸೌಲಭ್ಯಗಳನ್ನು ನವೀಕರಿಸಲು ಮತ್ತು ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರವನ್ನು ಬೆಂಗಳೂರಿನಲ್ಲಿ (Bengaluru) ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

    ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎಂಬ ಮಾತಿದೆ. ಅದರಂತೆ ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆಯು ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ.ಇದನ್ನೂ ಓದಿ:ವಿಜಯೇಂದ್ರನ ಚಮಚಾಗಳಿದ್ರೆ ಪ್ರಶ್ನೆ ಕೇಳ್ಬೇಡಿ – ಮಾಧ್ಯಮಗಳ ಮುಂದೆ ಸಿಡಿಮಿಡಿಗೊಂಡ ಯತ್ನಾಳ್

    ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Victoria Hospital) 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಅಂಗಾಂಗ ಮರು ಪಡೆಯುವ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.

    ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿ, ಮುಂದಿನ 4-6ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ. ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು, ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

    ಮೃತ ದಾನಿಗಳಿಂದ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯಗಳು ಮತ್ತು ವಿವಿಧ ಹಂತದ ತನಿಖಾ ಸಾಮರ್ಥ್ಯಗಳನ್ನು ಹೊಂದಿರುವ ಉದ್ದೇಶಿತ-ನಿರ್ಮಿತ ಸಮಗ್ರ ಸೇವೆ ದೊರೆಯಲಿದೆ ಎಂದರು.

    ದಕ್ಷಿಣ ಭಾರತದ ಅತಿ ದೊಡ್ಡ ಆಸ್ಪತ್ರೆ:
    ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸಂಸ್ಥೆ ಮತ್ತು ಮೂತ್ರಶಾಸ್ತ್ರ ಅಂಗಾಂಗ ಕಸಿ ಸಂಸ್ಥೆ, ಮಿಂಟೋ ಆಸ್ಪತ್ರೆಯಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಸಂಸ್ಥೆ ಮತ್ತು ಸ್ಕಿನ್ ಬ್ಯಾಂಕ್ ಹೀಗೆ ಎಲ್ಲವನ್ನೂ ಹೊಂದಿರುವ ಆಸ್ಪತ್ರೆಗಳ ಪೈಕಿ ನಮ್ಮ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ಇಲ್ಲಿ ಈಗ ನವೀಕೃತ ಕೇಂದ್ರ ಬರಲಿದೆ.

    ಸಂಭಾವ್ಯ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳು ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. ಈ ಯೋಜನೆಯು ಅತ್ಯಂತ ಅರ್ಥಪೂರ್ಣವಾಗಿದೆ. ಇದು ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

    ಸಮಗ್ರ ಕೇಂದ್ರವಾಗಿ ಕಾರ್ಯ ನಿರ್ವಹಣೆ:
    ಈ ಕುರಿತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್ ಮಾತನಾಡಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಮಗ್ರ ಅಂಗಾಂಗ ಮರುಪಡೆಯುವಿಕೆ ಕೇಂದ್ರವನ್ನು ಪ್ರಾರಂಭಿಸುವುದರಿಂದ ಅಂಗಾಂಗ ದಾನ ಕಾರ್ಯಕ್ರಮವನ್ನು ಹೆಚ್ಚಿಸಲು ನಮಗೆ ಅವಕಾಶ ಸಿಗುತ್ತದೆ. ಇದರಿಂದ ಬಡವರಿಗೆ ಅನುಕೂಲ ಕಲ್ಪಿಸಲಾಗುವುದು. ಈ ಕೇಂದ್ರವು ಮೀಸಲಾದ ಸಿಬ್ಬಂದಿ, ಐಸಿಯು ಮತ್ತು ಹಾಸಿಗೆಗಳನ್ನು ಹೊಂದಿರುತ್ತದೆ. ಬೇಡಿಕೆ ಬಂದ ಕೂಡಲೇ ಕುಟುಂಬವು ಅನುಮೋದನೆ ನೀಡಿದ ನಂತರ ಐಸಿಯುಗಳಿಂದ ಮೀಸಲಾದ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದರು.

    ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

    ಆಸ್ಪತ್ರೆಯ ವಿಶೇಷತೆಗಳು:
    – ಬಡವರಿಗೆ ಮತ್ತು ಹೆಚ್ಚು ಅರ್ಹರಿಗೆ ಉಪಯೋಗ
    – 70 ಐಸಿಯು ಹಾಸಿಗೆ ಲಭ್ಯ
    – 1000 ಸಾಮಾನ್ಯ ಹಾಸಿಗೆ ಸೌಲಭ್ಯ
    – 40 ಸಾಮೂಹಿಕ ಅಪಘಾತ ಚಿಕಿತ್ಸಾ ಹಾಸಿಗೆ ಸೌಲಭ್ಯ.ಇದನ್ನೂ ಓದಿ:Greater Noida| ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ – 3 ಕಾರ್ಖಾನೆಗಳು ಭಸ್ಮ

  • ಪಿಪಿಇ ಕಿಟ್ ಧರಿಸಿ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ

    ಪಿಪಿಇ ಕಿಟ್ ಧರಿಸಿ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ

    ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿಗಳು ಇಂದು ಬೆಳಗ್ಗೆ ಪಿಪಿಇ ಕಿಟ್ ಧರಿಸಿ ಸಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.

    ಪಿಂಚಣಿ ಯೋಜನೆ, ಜ್ಯೋತಿ ಸಂಜೀವಿನಿ ವಿಮೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಆಸ್ಪತ್ರೆ ಹೊರ ಆವರಣದಲ್ಲಿ ಪಿಪಿಇ ಕಿಟ್ ಧರಿಸಿ ಆಗಮಿಸಿದ್ದ ಖಾಯಂ ಶುಶ್ರೂಷಕರು ಪ್ರತಿಭಟನೆ ನಡೆಸಿದರು. ಕೈಯಲ್ಲಿ ತಮ್ಮ ಬೇಡಿಕೆ ಆಗ್ರಹಿಸಿ ಪ್ರದರ್ಶನ ಫಲಕಗಳನ್ನು ಹಿಡಿದು ಪ್ರತಿಭಟನೆ ಮಾಡಿದರು.

    ಸರ್ಕಾರ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ದಿನಗಳಿಂದ ಸಿಬ್ಬಂದಿ ಮನವಿ ಮಾಡಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ. ನೂತನ ಪಿಂಚಣಿ ಯೋಜನೆ (ಎನ್‍ಪಿಎಸ್) ಯಲ್ಲಿ ಶುಶ್ರೂಷಕರ ವೇತನ ಕಡಿತ ಮಾಡಲಾಗಿತ್ತು. ಆದರೆ ಈಗ ಏಕಾಏಕಿ ಯೋಜನೆಯನ್ನು ನಿಲ್ಲಿಸಲಾಗಿದ್ದು, ಹಣವನ್ನು ಮರುಪಾವತಿ ಮಾಡಿಲ್ಲ. ಬೇರೆ ಸ್ವಯತ್ತ ಸಂಸ್ಥೆಗಳಲ್ಲಿನ ಸಿಬ್ಬಂದಿಗೆ ಹಣ ಬರುತ್ತಿದೆ ಎಂಬುವುದು ಸಿಬ್ಬಂದಿಯ ಆರೋಪವಾಗಿದೆ. ಉಳಿದಂತೆ ಜ್ಯೋತಿ ಸಂಜೀವಿನಿ ಆರೋಗ್ಯ ವ್ಯವಸ್ಥೆಗೆ ಜಾರಿ ಹಾಗೂ ಪ್ರೋತ್ಸಾಹ ಭತ್ಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.