Tag: Department of Muzrai

  • ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಮೈಸೂರು ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿಯ ಪ್ರಸಾದ!

    ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಮೈಸೂರು ಚಾಮುಂಡೇಶ್ವರಿ, ಕಟೀಲು ದುರ್ಗಾಪರಮೇಶ್ವರಿಯ ಪ್ರಸಾದ!

    – ಮುಜರಾಯಿ ದೇವಸ್ಥಾನಗಳ ಇ-ಪ್ರಸಾದಕ್ಕೆ ಫುಲ್ ಡಿಮ್ಯಾಂಡ್
    – ಮತ್ತಷ್ಟು ದೇವಾಲಯಗಳ ಸೇರ್ಪಡೆಗೆ ನಿರ್ಧಾರ

    ಬೆಂಗಳೂರು: ಮುಜರಾಯಿ ಇಲಾಖೆಯ (Department Of Muzrai) ಇ-ಪ್ರಸಾದ (E-Prasad) ಯೋಜನೆಗೆ ಬೇಡಿಕೆ ಹೆಚ್ಚಾಗಿದ್ದು, ಇದೀಗ ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್‌ಲೈನ್ ಮೂಲಕ ಮನೆಮನೆಗೂ ತಲುಪಿಸಲು ಇಲಾಖೆ ಮುಂದಾಗಿದೆ.

    ಇತ್ತೀಚಿಗಷ್ಟೇ ಮುಜರಾಯಿ ಇಲಾಖೆ ದೇವಸ್ಥಾನಗಳ ಪ್ರಸಾದವನ್ನು ಆನ್‌ಲೈನ್ ಮೂಲಕ ಎಲ್ಲರ ಮನೆಗೆ ತಲುಪಿಸುವ `ಇ-ಪ್ರಸಾದ’ ಯೋಜನೆಯನ್ನು ಲೋಕಾರ್ಪಣೆ ಮಾಡಿದ್ದರು. ಈ ಯೋಜನೆಗೆ ರಾಜ್ಯದ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದ್ದು, ಏಳು ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚಾಗಿದೆ.

    ಕಾಮನ್ ಸರ್ವಿಸ್ ಸೆಂಟರ್‌ಗಳಿಂದ ಜನರು ಬುಕ್ ಮಾಡುತ್ತಿದ್ದು, ಯೋಜನೆ ಲೋರ್ಕಾಪಣೆಯಾದ ಬಳಿಕ ಇದುವರೆಗೂ 10 ಸಾವಿರ ಮಂದಿ ಪ್ರಸಾದವನ್ನು ಬುಕ್ ಮಾಡಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರದವರು ಕೂಡ ಬುಕ್ ಮಾಡುತ್ತಿದ್ದಾರೆ. ಪ್ರಾಯೋಗಿಕವಾಗಿ 14 ದೇವಸ್ಥಾನಗಳಲ್ಲಿ ಜಾರಿ ಮಾಡಲಾಗಿತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಈ ಯೋಜನೆಗೆ ಸೇರಿಸಲು ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.ಇದನ್ನೂ ಓದಿ: ಡಿವೋರ್ಸ್‌ ಬಳಿಕ ಪತ್ನಿಗೆ ಜೀವನಾಂಶ ಹೊಂದಿಸಲು ದರೋಡೆಗೆ ಯತ್ನ – ಮಾಜಿ ಪತಿ ಸೇರಿ ಮೂವರು ಅರೆಸ್ಟ್‌

    ಯಾವ ದೇವಸ್ಥಾನಗಳ ಪ್ರಸಾದಕ್ಕೆ ಬೇಡಿಕೆ ಹೆಚ್ಚು?
    1. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ
    2. ನಂಜನಗೂಡು ದೇವಸ್ಥಾನ
    3 ರೇಣುಕಾ ಯಲ್ಲಮ್ಮ
    4. ದತ್ತಾತ್ರೇಯ ದೇವಸ್ಥಾನ
    5. ಹುಲಿಗೆಮ್ಮ ದೇವಸ್ಥಾನ
    6. ಬೆಂಗಳೂರಿನ ದೊಡ್ಡ ಗಣಪತಿ ಟೆಂಪಲ್
    7. ಕೊಲ್ಲೂರು ಮೂಕಾಂಬಿ ದೇವಸ್ಥಾನ

    ಹೊಸದಾಗಿ ಸೇರ್ಪಡೆಗೊಳ್ಳಲಿರುವ ದೇವಸ್ಥಾನಗಳು:
    1. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ
    2. ಕಟೀಲು ದುರ್ಗಾಪರಮೇಶ್ವರಿ
    3. ಘಾಟಿ ಸುಬ್ರಮಣ್ಯ
    4. ಮಂಗಳೂರಿನ ಸೌತಡ್ಕ ಗಣಪತಿ. ಇದನ್ನೂ ಓದಿ: Breaking | ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

  • ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಜರಾಯಿ ತಹಶೀಲ್ದಾರ್ ಅರೆಸ್ಟ್

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಜರಾಯಿ ತಹಶೀಲ್ದಾರ್ ಅರೆಸ್ಟ್

    ಬೆಳಗಾವಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ತವರು ಜಿಲ್ಲೆಯಲ್ಲೇ ಮುಜರಾಯಿ ಇಲಾಖೆ ಭ್ರಷ್ಟಾಚಾರ ಬಟಾಬಯಲಾಗಿದೆ.

    ಬೆಳಗಾವಿ ಜಿಲ್ಲೆ ರಾಮದುರ್ಗದ ಯಕಲಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರಾಧನಾ ಯೋಜನೆ ಅಡಿಯಲ್ಲಿ 4 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು. ಈ ವೇಳೆ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ದಶರಥ ಜಾದವ್ ಮತ್ತು ಅಳಿಯ ಸಂತೋಷ್ ಮಂಜೂರಾದ ಹಣ ಬಿಡುಗಡೆ ಮಾಡಲು 5% ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

    BRIBE

    ದಶರಥ ಸಂತೋಷನ ಹಾಲಿನ ಡೈರಿಗೆ ತೆರಳಿ 20,000 ರೂ. ಹಣ ನೀಡಲು ತಿಳಿಸಿದ್ದ. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಸುಭಾಷ್ ಗೋಡಕೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇದನ್ನೂ ಓದಿ: ಅಧಿಕಾರಿಗಳ ಮುಂದೆ ಎರಡು ಕುಟುಂಬಗಳ ನಡುವೆ ಮಾರಾಮಾರಿ

    ನಿನ್ನೆ ರಾತ್ರಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

  • ಜೂನ್ 1ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನ ಓಪನ್: ಸಚಿವ ಪೂಜಾರಿ

    ಜೂನ್ 1ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನ ಓಪನ್: ಸಚಿವ ಪೂಜಾರಿ

    ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿ ಮಾಡಲಾಗಿದ್ದ ಲಾಕ್‍ಡೌನ್‍ನಿಂದ ದೇವಾಲಯಗಳನ್ನು ಬಂದ್ ಮಾಡಲಾಗಿತ್ತು. ಬರೋಬ್ಬರಿ 63 ದಿನಗಳ ಬಳಿಕ ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

    ದೇವಾಲಯಗಳನ್ನು ತೆರೆಯುವ ಕುರಿತ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭಾಗಿದ್ದರು. ಸಭೆಯಲ್ಲಿ ಜೂನ್ ತಿಂಗಳಲ್ಲಿ ದೇವಸ್ಥಾನಗಳಿಗೆ ಅವಕಾಶ ಕೊಡುವ ಬಗ್ಗೆ ಮಹತ್ವದ ಚರ್ಚೆ ನಡೆದಿತ್ತು.

    ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು, ಜೂನ್ 1 ರಿಂದ ದೇವಸ್ಥಾನ ತೆರೆಯುವ ನಿರ್ಧಾರ ಮಾಡಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳನ್ನು ತೆರೆದು ಪೂಜಾ ಕೈಂಕರ್ಯಗಳಿಗೆ ಅವಕಾಶ ನೀಡಲಾಗುತ್ತದೆ. ಆದರೆ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಮಸೀದಿ, ಚರ್ಚ್‍ಗಳನ್ನು ತೆರೆಯುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

    ದೇವಾಲಯಗಳನ್ನು ತೆರೆಯಲು ಮಾರ್ಚ್ 31ರ ವೇಳೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸಭೆ, ಜಾತ್ರೆ ಹಾಗೂ ದೇವರ ಉತ್ಸವಗಳನ್ನು ನಡೆಸಲು ಅನುಮತಿ ಇಲ್ಲ. ನಾಳೆಯಿಂದ ಆಯ್ದ 52 ದೇವಸ್ಥಾನಗಳಲ್ಲಿ ಆನ್‍ಲೈನ್ ಮೂಲಕ ದೇವರ ಸೇವೆಗಳ ಕಾರ್ಯಗಳ ಬುಕಿಂಗ್ ಆರಂಭ ಮಾಡಲಾಗುತ್ತದೆ. ಮೈಸೂರು ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮುಕಾಂಭಿಕಾ, ಧರ್ಮಸ್ಥಳ ಸೇರಿದಂತೆ ಪ್ರಮುಖ 52 ದೇವಾಲಯಗಳು ಜೂನ್ 1ರಿಂದ ತೆರೆಯಲಿವೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಹೆಗ್ಗಡೆ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ಮಂಜುನಾಥನ ದರ್ಶನ ಭಾಗ್ಯ ನೀಡಲಾಗುವುದು. ಮುಜರಾಯಿ ಇಲಾಖೆಯ ಸೂಚನೆಯಂತೆ ಧರ್ಮಸ್ಥಳದಲ್ಲೂ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಸಾಮಾಜಿಕ ಅಂತರ, ಸ್ಯಾನಿಟೈಜರ್, ಆರೋಗ್ಯ ತಪಾಸಣೆ ಸೇರಿದಂತೆ ಎಲ್ಲಾ ಸಿದ್ಧತೆ ನಡೆದಿದೆ. ಭಕ್ತರಿಗೆ ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.