Tag: Department of Revenue

  • ಕಂದಾಯ ಇಲಾಖೆಯಲ್ಲಿ ಸರ್ವರ್ ಡೌನ್- ಸಾರ್ವಜನಿಕರಿಗೆ ಕಿರಿಕಿರಿ

    ಕಂದಾಯ ಇಲಾಖೆಯಲ್ಲಿ ಸರ್ವರ್ ಡೌನ್- ಸಾರ್ವಜನಿಕರಿಗೆ ಕಿರಿಕಿರಿ

    ಬೆಂಗಳೂರು: ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ತಂದುಕೊಡುವ ಲಿಸ್ಟ್‍ನಲ್ಲಿ ಮೂರನೇ ಸ್ಥಾನದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವಿರುದ್ಧ ಸಾರ್ವಜನಿಕರು ರೋಸಿ ಹೋಗಿದ್ದಾರೆ.

    ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಕಾವೇರಿ ತಂತ್ರಾಂಶ ಸರ್ವರ್ ಡೌನ್ ಆಗಿದೆ. ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಯುಂಟಾಗಿ ಸಾರ್ವಜನಿಕರು ಪರದಾಡ್ತಿದ್ದಾರೆ. ರಾಜ್ಯವ್ಯಾಪಿ ಉಪ ನೋಂದಣಿ ಕಚೇರಿಗಳಲ್ಲಿ ಕ್ರಯ, ದಾನ, ಹಕ್ಕುಪತ್ರ ಬಿಡುಗಡೆ, ಮದ್ವೆ ನೋಂದಣಿ, ಇಸಿ, ಇತರೆ ದಾಖಲೆಗಳನ್ನ ಪಡೆಯಲು ಸಾರ್ವಜನಿಕರು ದಿನಪೂರ್ತಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

    ಬೆಂಗಳೂರಿನ ಗಾಂಧಿನಗರ, ರಾಜಾಜಿನಗರ, ಯಲಹಂಕ ಸೇರಿದಂತೆ ಹಲವು ಸಬ್ ರಿಜಿಸ್ಟರ್ ಆಫೀಸ್‍ಗಳಲ್ಲಿ ಸರ್ವರ್ ಡೌನ್‍ನಿಂದ ಜನ ಬೇಸತ್ತಿದ್ದು, 2004ರ ಹಳೆಯ ತಂತ್ರಾಂಶವನ್ನೇ ಇಲಾಖೆ ಮುನ್ನಡೆಸ್ತಿದೆ. ಅಪ್ ಗ್ರೇಡ್ ಮಾಡದ ಹಿನ್ನಲೆ, ಸರ್ವರ್ ಪ್ರಾಬ್ಲಂ ಆಗ್ತಿದೆ. ಸರ್ಕಾರ ಕೂಡ್ಲೇ ಈ ಬಗ್ಗೆ ಗಮನಹರಿಸಿ, ಸರಿಪಡಿಸಬೇಕು ಅಂತ ಜನರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್

    ಸದ್ಯ ಉಪನೊಂದಣಿ ಕಛೇರಿಗಳಲ್ಲಿರುವ ಕಂಪ್ಯೂಟರ್‍ಗಳನ್ನೇ ಬದಲಾಯಿಸಿ, ಕಾವೇರಿ ಸಾಫ್ಟ್‍ವೇರ್ ನ್ಯೂ ವರ್ಶನ್ ಕಾವೇರಿ 2.1 ಸಾಫ್ಟ್‍ವೇರ್ ಅಳವಡಿಸಲು ಇಲಾಖೆ ನಿರ್ಧಾರ ಮಾಡಿದೆ. ಈ ಹಿಂದೆಯೂ ಕಂದಾಯ ಇಲಾಖೆಯ ಸಚಿವ ಆರ್ ಅಶೋಕ್, ಕಾವೇರಿ ಸಾಫ್ಟ್‍ವೇರ್ ಅನ್ನು ನವೀಕರಿಸುವ ಭರವಸೆಯನ್ನ ನೀಡಿದ್ರು. 2014ರಲ್ಲೇ ಸಾಫ್ಟವೇರ್ ಮತ್ತು ಹಾರ್ಡ್‍ವೇರ್ ಬದಲಾವಣೆ ಮಾಡಬೇಕಿತ್ತು.

    ಕಾವೇರಿ ತಂತ್ರಾಂಶದಲ್ಲಿ ಸಮಸ್ಯೆಗಳಾಗುತ್ತಿವೆ. ಹೊಸ ಸಾಫ್ಟವೇರ್‍ಗೆ 12 ಕೋಟಿ ಬಿಡುಗಡೆ ಮಾಡಲಾಗಿದೆ. ಐಟಿ ಬಿಟಿ ಇಲಾಖೆ ಡಿಸೆಂಬರ್ ವೇಳೆಗೆ ಹೊಸ ಸಾಫ್ಟ್‍ವೇರ್ ಒದಗಿಸಲಿದೆ. ಇಲಾಖೆಯ ಸಿಬ್ಬಂದಿಗೆ ಹಾರ್ಡ್‍ವೇರ್ ಮತ್ತು ಸಾಫ್ಟವೇರ್ ತರಬೇತಿ ನೀಡಲಾಗಿದೆ. ಡಿಸೆಂಬರ್ ನಂತರ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದಿದ್ರು. ಆದ್ರೆ ಸಚಿವರ ಭರವಸೆ ಇವರೆಗೂ ಕಾರ್ಯರೂಪಕ್ಕೆ ಬಂದಿಲ್ಲ.

    Live Tv
    [brid partner=56869869 player=32851 video=960834 autoplay=true]

  • ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆ ಜಾರಿ: ಕಲಬುರಗಿ ಡಿಸಿ

    ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆ ಜಾರಿ: ಕಲಬುರಗಿ ಡಿಸಿ

    ಕಲಬುರಗಿ: ಜನರ ಬಾಗಿಲಿಗೆ ಕಂದಾಯ ಇಲಾಖೆಯ ಸೇವೆಗಳನ್ನು ಉಚಿತವಾಗಿ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಶನಿವಾರದಿಂದಲೇ ಜಿಲ್ಲೆಯಾದ್ಯಂತ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು.

    ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿ ಮಾಹಿತಿ ನೀಡಿದರು. ಈ ವೇಳೆ ಅವರು, ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಶನಿವಾರ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಗಡಿ ಭಾಗವಾದ ಸೇಡಂ ತಾಲೂಕಿನ ಮುಧೋಳ ಹೋಬಳಿಯ ಖಂಡೆರಾಯನಪಳ್ಳಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು. ಇದನ್ನೂ ಓದಿ:  ಕೆಲಸ ಬಿಟ್ಟು ಬಿರಿಯಾನಿ ಸ್ಟಾಲ್ ತೆರೆದ ಇಂಜಿನಿಯರ್ ಯುವಕರು 

    I-T Dept launches faceless penalty scheme; here's how it works - BusinessToday

    ಜಿಲ್ಲೆಯಲ್ಲಿ 5 ಲಕ್ಷ ಪಹಣಿ ಹಕ್ಕುಳ್ಳವರಿದ್ದು, ಈ ಪೈಕಿ ಪಿ.ಎಂ-ಕಿಸಾನ್ ಯೋಜನೆಯಡಿ ನೋಂದಾಯಿಸಿದ 1.5 ಲಕ್ಷ ಕುಟುಂಬಗಳಿಗೆ 2,77,867 ಪಹಣಿ, 1,04,264 ಅಟ್ಲಾಸ್ ಮ್ಯಾಪ್, 4,32,746 ಜಾತಿ-ಆದಾಯ ಪ್ರಮಾಣ ಪತ್ರಗಳನ್ನು ವಿಳಾಸ ಲೇಬಲ್ ಸಂಖ್ಯೆ ಜೊತೆಗೆ ಪ್ಲಾಸ್ಟಿಕ್ ಕವರ್ ರಕ್ಷೆಯೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿ ಜಿಲ್ಲೆಯಾದ್ಯಂತ ಶನಿವಾರದಿಂದ ಮನೆ ಬಾಗಿಲಿಗೆ ಹೋಗಿ ವಿತರಿಸಲಿದ್ದಾರೆ ಎಂದರು.

    ಈ ಎಲ್ಲ ದಾಖಲೆಗಳನ್ನು ಪಡೆಯಲು ಸಾಮಾನ್ಯವಾಗಿ ನೆಮ್ಮದಿ ಕೆಂದ್ರದಲ್ಲಿ ಸುಮಾರು 100 ರೂ. ತಗಲುತ್ತದೆ. ಆದರೆ ಸರ್ಕಾರ ಈ ಯೋಜನೆಯಡಿ ರೈತಾಪಿ ವರ್ಗ ಇವುಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ. ಕೆಲವೊಮ್ಮೆ ರೈತಾಪಿ ವರ್ಗಕ್ಕೆ ತಮ್ಮ ದಾಖಲೆಗಳ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲದೆ ಅಸ್ತಿ ಮಾರಾಟ, ವರ್ಗಾವಣೆ ಸಂದರ್ಭದಲ್ಲಿ ಅವರು ಅನುಭವಿಸುವ ತೊಂದರೆಗಳನ್ನು ಇದು ನಿವಾರಿಸಲಿದೆ ಎಂದು ವಿವರಿಸಿದರು. ಇದನ್ನೂ ಓದಿ: ಮೋದಿಯವರು ಈಗ ಪ್ಯಾನ್ ಇಂಡಿಯಾ ನಾಯಕ: ಬೊಮ್ಮಾಯಿ

    Bumpy ride ahead: Tax department in rush to fight faceless regime hurdles | Business Standard News

    ಕುಡಿಯುವ ನೀರಿಗೆ 35 ಲಕ್ಷ ರೂ.!
    ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಪ್ರದೇಶಕ್ಕೆ ನೀರು ಸರಬರಾಜು ಮಾಡಲು 35 ಲಕ್ಷ ರೂ. ಅನುದಾನ ಜಿಲ್ಲೆಯ ಎಲ್ಲ ಪೌರಸಂಸ್ಥೆಗಳು ಮತ್ತು ತಾಲೂಕು ಪಂಚಾಯತಿಗಳಿಗೆ ಬಿಡುಗಡೆ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

  • ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ

    ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ

    ಗದಗ: ಕಂದಾಯ ಇಲಾಖೆ ಕಂಪ್ಯೂಟರ್ ಆಪರೇಟರ್ ಓರ್ವ ಲಂಚ ಪಡೆಯುವ ವೇಳೆ ಎಸಿಬಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.

    ಗದಗ ಎಸಿಬಿ, ಡಿವೈಎಸ್ಪಿ, ಎಮ್‍ವಿ ಮಲ್ಲಾಪೂರ ನೇತೃತ್ವದಲ್ಲಿ ಬುಧವಾರ ದಾಳಿ ನಡೆದಿದ್ದು, ಈ ವೇಳೆ ಮುಂಡರಗಿ ತಹಶಿಲ್ದಾರ್ ಕಚೇರಿಯ ಕಂದಾಯ ವಿಭಾಗದ ಕಂಪ್ಯೂಟರ್ ಆಪರೇಟರ್ ಎಮ್‍ಐ ಉಪ್ಪಾರಡ್ಡಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಇಡಿಯಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅರೆಸ್ಟ್

    ಆರ್‍ಟಿಸಿ ಕಲಂ 11ರ ಜಮೀನು ಉತಾರದಲ್ಲಿ ಹೆಸರು ಬದಲಾವಣೆಗಾಗಿ ಫಲಾನುಭವಿಯಿಂದ 11 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು. ಕಳೆದ ವಾರ ಫಲಾನುಭವಿಯಿಂದ 5 ಸಾವಿರ ರೂ. ಪಡೆದಿದ್ದು, ಇಂದು ಇನ್ನುಳಿದ 6 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಇದನ್ನೂ ಓದಿ: ನಟ ಚೇತನ್ ಬೆನ್ನಿಗೆ ನಿಂತ ರಮ್ಯಾ

    ಉಪ್ಪಾರಡ್ಡಿಯನ್ನು ಎಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಎಸಿಬಿ ಸಿಪಿಐ ದೇಸಾಯಿ ಹಾಗೂ ಸಿಬ್ಬಂದಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸರ್ವೆ ವಿರೋಧಿಸಿ ರೈತ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

    ಸರ್ವೆ ವಿರೋಧಿಸಿ ರೈತ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

    ಬಾಗಲಕೋಟೆ: ಕಂದಾಯ ಇಲಾಖೆ ಹಾಗೂ ಬಿಡಿಡಿಎ ಅಧಿಕಾರಿಗಳ ಸರ್ವೆ ವಿರೋಧಿಸಿ ರೈತ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಮುಚಖಂಡಿ ತಾಂಡಾದಲ್ಲಿ ನಡೆದಿದೆ.

    ಬಾಗಲಕೋಟೆ ತಾಲೂಕಿನ ಮುಚಖಂಡಿ ಪಾಂಡಪ್ಪ ಚಾಹಾಣ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಕುಟುಂಬ. ಕುಟುಂಬದ ಆನಂದ ಹಾಗೂ ಬಾಬು ಎಂಬವರಿಂದ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕಿದ್ದಾರೆ. ಆಲಮಟ್ಟಿ ಜಲಾಶಯದ 524ರ ಎತ್ತರಕ್ಕನುಗುಣವಾಗಿ ಅಕ್ರಮವಾಗಿ ಭೂಮಿ ಮುಳಗಡೆಯಾಗಿದ್ದು, ಬಾಗಲಕೋಟೆ ಉಪವಿಭಾಗಾಧಿಕಾರಿಗಳು ಹಾಗೂ ತಂಡ ಜಮೀನು ಸರ್ವೆ ಮಾಡಲು ಬಂದಿದ್ದರು. ಇದನ್ನೂ ಓದಿ: ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು – ಮಹಿಳೆ ಸಾವು

    ಈ ಹಿಂದೆ ರೈತ ಕುಟುಂಬವು ಭೂಸ್ವಾದೀನ ಪ್ರಕ್ರಿಯೆಗೆ ಸ್ಟೇ ತರಲು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದು, ಆದರೆ ಸ್ಟೇ ರದ್ದಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ಸರ್ವೆಗೆ ಬಂದಿದ್ದರು. ಪಾಂಡಪ್ಪ ಅವರ 5 ಎಕರೆ ಗುಂಟೆ ಜಮೀನು ಮುಳುಗಡೆ ವ್ಯಾಪ್ತಿಗೆ ಬರಲಿದ್ದು, ಜಮೀನು ಕೊಡುವುದಕ್ಕೆ ರೈತ ಕುಟುಂಬವು ವಿರೋಧ ವ್ಯಕ್ತಪಡಿಸಿದೆ. ಇದನ್ನೂ ಓದಿ: ಬಡ್ಡಿ ಹಾವಳಿಗೆ ಬೆಂದು ಹೋದ ಶಿಕ್ಷಕಿಯ ಕುಟುಂಬ

    ಘಟನೆ ಕುರಿತು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಮಧ್ಯವರ್ತಿಗಳಿಗೆ ಅವಕಾಶವಿಲ್ಲ, ನೇರವಾಗಿ ರೈತರ ಖಾತೆಗಳಿಗೆ ಬೆಳೆ ಪರಿಹಾರ- ಅಶೋಕ್

    ಮಧ್ಯವರ್ತಿಗಳಿಗೆ ಅವಕಾಶವಿಲ್ಲ, ನೇರವಾಗಿ ರೈತರ ಖಾತೆಗಳಿಗೆ ಬೆಳೆ ಪರಿಹಾರ- ಅಶೋಕ್

    ಬೆಂಗಳೂರು: ಬೆಳೆ ಪರಿಹಾರದ ಮೊತ್ತವನ್ನು ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

    ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಪ್ರವಾಸ ನಡೆಸಿ ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ವಿತರಿಸುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನಪದರ ಬಾಯಲ್ಲಿ ಹಾಡಾದ ಪುನೀತ್ – ತಾಯಂದಿರ ಕಣ್ಣಲ್ಲಿ ನೀರು ತರಿಸ್ತಿದೆ ಹಾಡು

    ಬೆಳೆ ಪರಿಹಾರಕ್ಕೆ ಸಂಬಂಧಿಸಿದಂತೆ ‘ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಟ್ಟು 4.61 ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಮಧ್ಯವರ್ತಿಗಳಿಗೆ ಯಾವುದೇ ಅವಕಾಶ ಸಿಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.

    ಈ ಹಿಂದೆ ಮೂರು ತಿಂಗಳಿಗೊಮ್ಮೆ ಬೆಳೆ ಪರಿಹಾರ ವಿತರಿಸಲಾಗುತ್ತಿತ್ತು. ಈಗ ಈ ವ್ಯವಸ್ಥೆಯನ್ನು ಸಂಪೂರ್ಣ ಬದಲಾವಣೆ ಮಾಡಿದ್ದು, ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಕೇಂದ್ರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ವರದಿ ಸಿದ್ಧಪಡಿಸುತ್ತಿದ್ದೇವೆ. ಬೆಳೆ ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ. ರೈತರಿಗೆ ಅನುಕೂಲವಾಗಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದರು.

    ಸದ್ಯಕ್ಕಿಲ್ಲ ಲಾಕ್ ಡೌನ್
    ಲಾಕ್‍ಡೌನ್ ಕುರಿತು ಮಾತನಾಡಿದ ಅವರು, ಸದ್ಯಕ್ಕೆ ಲಾಕ್ ಡೌನ್ ಇಲ್ಲ. ರಾಜ್ಯದ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹೊರ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಪರೀಕ್ಷೆ ನಡೆಸಬೇಕು. ನಿರಂತರವಾಗಿ ಸರ್ಕಾರ ಕೋವಿಡ್ ಪರಿಸ್ಥಿತಿಯ ಅವಲೋಕನ ಮಾಡುತ್ತಿದೆ. ಹೊರದೇಶದಿಂದ ಬರುವವರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತೇವೆ. ಹೊರದೇಶಗಳ ಸ್ಥಿತಿ ಸಹ ನಮ್ಮ ಗಮನದಲ್ಲಿದೆ ಎಂದರು.

    ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾಕಷ್ಟು ಹಣ ಬಿಡುಗಡೆ ಮಾಡುತ್ತೇನೆ. ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಸಾರ್ವಜನಿಕರು ಸಹಕರಿಸಬೇಕು. ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಜನರು ಭಯ ಬಿಟ್ಟು ಜವಾಬ್ದಾರಿಯಿಂದ ಇರಬೇಕು ಎಂದು ಮನವಿ ಮಾಡಿದರು.

  • ಕಂದಾಯ ಇಲಾಖೆ ಅಧಿಕೃತ ವೆಬ್‍ಸೈಟ್ ನಲ್ಲಿ ಮಾಯವಾದ ಗ್ರಾಮ

    ಕಂದಾಯ ಇಲಾಖೆ ಅಧಿಕೃತ ವೆಬ್‍ಸೈಟ್ ನಲ್ಲಿ ಮಾಯವಾದ ಗ್ರಾಮ

    – ಸೌಲಭ್ಯಗಳು ಸಿಗದೇ ಗ್ರಾಮಸ್ಥರು ಕಂಗಾಲು
    – ನನಗೇನು ಗೊತ್ತಿಲ್ಲ ಎಂದ ತಹಶೀಲ್ದಾರ್

    ಕಾರವಾರ: ಪ್ರತಿ ಬಾರಿ ಸರ್ಕಾರಿ ಕಚೇರಿಗೆ ಅಲೆಯುವ ಜನರಿಗಾಗಿ ಸಕಾಲ ಸೇರಿದಂತೆ ಈ ಡಿಜಿಟಲ್ ಸೇವೆಗಳನ್ನು ಆರಂಭಿಸಿ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ ದಾಖಲಾತಿ ವೆಬ್‍ಸೈಟ್ ನಲ್ಲಿ ಮಜಿರೆಯೊಂದರ ಹೆಸರೇ ಮಾಯವಾಗಿದೆ. ಈ ಕಾರಣದಿಂದ ಇಲ್ಲಿನ ನಿವಾಸಿಗಳು ಅಗತ್ಯ ದಾಖಲೆಗಳ ಜತೆ ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

    ಶಿರಸಿ ತಾಲೂಕಿನ ದೇವನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸೇರಿದಂತೆ ಶಾಲೆ, ಅಂಗನವಾಡಿ, ಹತ್ತಾರು ಅಂಗಡಿಗಳನ್ನು ಹೊಂದಿರುವ ಡಿಪೂಬೈಲ್ ಮಜಿರೆ ಈಗ ಸರ್ಕಾರಿ ಅಧಿಕೃತ ವೆಬ್‍ಸೈಟ್ ನಲ್ಲಿ ಮಾಯವಾಗಿದೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆಯಿದ್ದು, ನೂರಾರು ಜನರು ತಮ್ಮ ನೆಲೆಯನ್ನು ದಾಖಲಿಸಲಾಗದೆ ಹೈರಾಣಾಗಿದ್ದಾರೆ.

    ಮಜಿರೆಯೇ ಮಾಯ: ಈ ಗ್ರಾಮದಲ್ಲಿ 35 ಕುಟುಂಬ ಹಾಗೂ 175 ಮತಗಳನ್ನು ಹೊಂದಿರುವ ಈ ಮಜಿರೆ ವರ್ಷದ ಹಿಂದೆ ಸರ್ಕಾರಿ ದಾಖಲೆಯಲ್ಲಿತ್ತು. ಆದರೆ ಏಕಾಏಕಿ ಕಂದಾಯ ಇಲಾಖೆ ವೆಬ್‍ಸೈಟ್ ನಲ್ಲಿ ಮಜಿರೆಯ ಹೆಸರು ನಮೂದಿಸಿದ ಯಾವುದೇ ಫಲಿತಾಂಶ ತೋರಿಸುತ್ತಿಲ್ಲ. ಸಮೀಪದ ಅಮ್ಮಿನಳ್ಳಿ ನೆಮ್ಮದಿ ಕೇಂದ್ರಕ್ಕೆ ತೆರಳಿ ವಾಸ್ತವ್ಯ ಪ್ರಮಾಣಪತ್ರಕ್ಕೆ ಅರ್ಜಿ ನೀಡಿದಾಗ ಡಿಪೂಬೈಲ್ ಮಜರೆ ಇಲ್ಲದಿರುವುದು ಸ್ಥಳೀಯರಿಗೆ ಶಾಕ್ ನೀಡಿದೆ. ಇದರಿಂದ ಮಜಿರೆಯ ನಿವಾಸಿಗಳು ಕಂಗಾಲಾಗಿದ್ದಾರೆ.

    ಜಾತಿ, ಆದಾಯ ಪ್ರಮಾಣಪತ್ರ, ಆದಾಯ, ವಂಶಾವಳಿ, ಆಧಾರ್ ಸೇರಿದಂತೆ ಆನ್‍ಲೈನ್ ಮುಖಾಂತರ ಅಟಲ್ ಜಿ ಜನಸ್ನೇಹಿ ಕೇಂದ್ರದಲ್ಲಿ ಪಡೆಯುವ ಸುಮಾರು 7 ಪ್ರಮಾಣಪತ್ರಗಳಿಗೆ ಮಜಿರೆ ಹೆಸರೇ ನಮೂದಾಗದ ಕಾರಣ ಇಲ್ಲಿನ ಗ್ರಾಮದವರು ತೊಂದರೆ ಎದುರಿಸುತ್ತಿದ್ದಾರೆ. ಇನ್ನು ಪ್ರಮಾಣಪತ್ರ ದೊರೆತರೂ ವಿಳಾಸ ಸರಿಯಾಗಿ ನಮೂದಾಗದೇ ಕೇವಲ ಗ್ರಾಮ ಮಾತ್ರ ಸಿಗಲಿದ್ದು, ಸರ್ಕಾರದ ಯೋಜನೆಗಳನ್ನು ಪಡೆಯಲು ಸಮಸ್ಯೆಯಾಗುತ್ತಿದೆ.

    ಸರ್ಕಾರದ ಯೋಜನೆಗಳು ಮರೀಚಿಕೆ: ದೇವನಹಳ್ಳಿ ಗ್ರಾಮದಲ್ಲಿ ಒಟ್ಟು 35 ಮಜರೆಗಳಿದ್ದು, ಅದರಲ್ಲಿ ಡಿಪೂಬೈಲ್ ಸಹ ಒಂದಾಗಿದೆ. ಆದರೆ ಈಗ 24 ಮಜರೆಗಳು ಮಾತ್ರ ಉಲ್ಲೇಖವಾಗಿದ್ದು, ಸರ್ಕಾರಿ ವೆಬ್‍ಸೈಟ್ ನಿಂದ ಡಿಪೂಬೈಲ್ ಮಾಯವಾಗಿದೆ. ಇದರಿಂದ ಈ ಮಜಿರೆಯ ನಿವಾಸಿಗಳು ಸರ್ಕಾರದ ಯಾವ ಯೋಜನೆಗಳಿಗೂ ಅರ್ಹರಲ್ಲ ಎನ್ನುವಂತಾಗಿದ್ದು, ಹೊಸದಾಗಿ ಯಾವ ದಾಖಲೆಗಳು ಬೇಕಿದ್ದರೂ ತೊಂದರೆಪಡುವಂತಾಗಿದೆ.

    ಚುನಾವಣೆಗೆ ಸ್ಪರ್ಧಿಸಲು ವಾಸ್ತವ್ಯ ಪ್ರಮಾಣಪತ್ರದ ಅಗತ್ಯವಿದ್ದು, ಪ್ರತಿ ಹಂತದಲ್ಲಿಯೂ ಗ್ರಾಮಸ್ಥರಿಗೆ ಸಮಸ್ಯೆ ಎನ್ನುವಂತಾಗಿದೆ. ಅಧಿಕಾರಿಗಳು ಪಕ್ಕದ ಗ್ರಾಮದಲ್ಲಿನ ವಾಸ್ತವ್ಯ ಪ್ರಮಾಣಪತ್ರ ನೀಡುವುದಾಗಿ ಹೇಳುತ್ತಾರೆ. ಆದರೆ ಆಯಾ ಗ್ರಾಮಸ್ಥರು ತಕರಾರು ಮಾಡಿದಲ್ಲಿ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಾರೆ.

    ನನಗೇನು ಗೊತ್ತಿಲ್ಲ: ಕಳೆದ ಒಂದು ವರ್ಷದಿಂದ ಈ ಗ್ರಾಮ ಕಂದಾಯ ಇಲಾಖೆ ವೆಬ್‍ಸೈಟ್ ನಿಂದ ಮಾಯಾವಾಗಿದೆ. ಈ ಕುರಿತು ಗ್ರಾಮದವರು ಪ್ರತಿಭಟನೆ ನಡೆಸಿ ಶಿರಸಿ ತಹಶೀಲ್ದಾರ್ ಡಾ.ಕುಲಕರ್ಣಿರವರಿಗೆ ಮನವಿ ನೀಡಿ ಸರಿಪಡಿಸುವಂತೆ ಕೇಳಿಕೊಂಡಿದ್ದಾರೆ. ಜೊತೆಗೆ ತಹಶೀಲ್ದಾರ್ ರವರು ಸ್ವೀಕೃತಿ ಪತ್ರದ ಜೊತೆ ಸಹಿ ಹಾಕಿ ನೀಡಿದ್ದಾರೆ. ಆದ್ರೆ ನಮಗೆ ಈ ಬಗ್ಗೆ ಯಾರು ಮಾಹಿತಿ ನೀಡಿಲ್ಲ ಎಂದು ಪಬ್ಲಿಕ್ ಟಿವಿ ಸಂಪರ್ಕಿಸಿದಾಗ ತಿಳಿಸಿದ್ದು ಮೊದಲು ಅರ್ಜಿ ಕೊಡಲಿ ನಂತರ ಸರಿಪಡಿಸುತ್ತೇವೆ ಎಂದು ಅಸಡ್ಡೆ ಮಾಡಿದ್ದಾರೆ.

    ಇನ್ನು ಈ ಗ್ರಾಮದವರಿಗೆ ಸದ್ಯ ಸರ್ಕಾರಿ ಸವಲತ್ತುಗಳು ದೂರದ ಬೆಟ್ಟದಂತಾಗಿದ್ದು ಯಾವ ಸೌಲಭ್ಯವೂ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶೀಘ್ರವೇ ಆದ ತಪ್ಪನ್ನು ಕಂದಾಯ ಇಲಾಖೆ ಸರಿಪಡಿಸದಿದ್ದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರೈತನ ಮೊಗದಲ್ಲಿ ಮಂದಹಾಸ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ರೈತನ ಮೊಗದಲ್ಲಿ ಮಂದಹಾಸ

    ಧಾರವಾಡ: ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ಧಾರವಾಡದಲ್ಲಿ ರೈತರೊಬ್ಬರ ಮೇಲೆ ಬ್ಯಾಂಕ್‍ನಲ್ಲಿ ಸಾಲ ಪಡೆಯದಿದ್ದರೂ ಪಹಣಿ ಪತ್ರದಲ್ಲಿ 24 ಲಕ್ಷ ರೂಪಾಯಿ ಸಾಲದ ಭೋಜಾ ಏರಿಸಲಾಗಿತ್ತು. ಪಬ್ಲಿಕ್ ಟಿವಿ ವರದಿ ಬೆನ್ನಲ್ಲೇ ಈ ಎಡವಟ್ಟನ್ನು ತಹಶೀಲ್ದಾರ್ ಅವರು ಸರಿಪಡಿಸಿ ರೈತರಿಗೆ ಸಹಾಯ ಮಾಡಿದ್ದಾರೆ.

    ಜಿಲ್ಲೆಯ ನರೇಂದ್ರ ಗ್ರಾಮದ ನಿವಾಸಿ ರೈತ ನಾಗಪ್ಪ ಅವರು, ಸಾಲ ಪಡೆಯದಿದ್ದರೂ 24 ಲಕ್ಷ ರೂಪಾಯಿ ಸಾಲ ಮಾಡಿದ್ದಾರೆ ಎಂದು ಅವರ ಜಮೀನಿನ ಪಹಣಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಾಗಪ್ಪ ಅವರ 7 ಎಕ್ರೆ ಜಮೀನಿನ ಪಹಣಿ ಪತ್ರದಲ್ಲಿ ಎಸ್‍ಬಿಐ ಬ್ಯಾಂಕ್‍ನಲ್ಲಿ ಸಾಲ ಪಡೆದಿದ್ದಾರೆ ಎಂದು ನಮೂದಿಸಲಾಗಿತ್ತು. ಆದರೆ ನಾಗಪ್ಪ ಅವರು ಎಸ್‍ಬಿಐನಲ್ಲಿ ಖಾತೆಯನ್ನೇ ಹೊಂದಿಲ್ಲ. ಆದರೂ ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟಿನಿಂದ ನಾಗಪ್ಪ ಅವರ ಮೇಲೆ ಬರೋಬ್ಬರಿ 24 ಲಕ್ಷ ರೂಪಾಯಿ ಸಾಲದ ಹೊರೆ ಹೊರೆಸಲಾಗಿತ್ತು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೆ ಪಹಣಿಯಲ್ಲಾಗಿದ್ದ ಎಡವಟ್ಟನ್ನು ಧಾರವಾಡ ತಹಶೀಲ್ದಾರ್ ಸರಿಪಡಿಸಿಕೊಟ್ಟಿದ್ದಾರೆ.

    ಪಡೆಯದ ಸಾಲದಿಂದ ಕಂಗಲಾಗಿದ್ದ ರೈತ ಈ ಬಗ್ಗೆ ತಹಶೀಲ್ದಾರ್ ಅವರ ಗಮನಕ್ಕೆ ತಂದಾಗ ಹೇಗೆ ಈ ಎಡವಟ್ಟು ನಡೆಯಿತು ಎಂಬುದು ಬೆಳಕಿಗೆ ಬಂದಿದೆ. ಸದ್ಯ ಧಾರವಾಡ ತಹಶೀಲ್ದಾರ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ, ನಾಗಪ್ಪ ಅವರ ಪಹಣಿ ಪತ್ರದಲ್ಲಿದ್ದ ಲೋಪ ದೋಷವನ್ನು ಸರಿಪಡಿಸಿದ್ದಾರೆ.

    ನಾಗಪ್ಪ ಅವರು 2013ರಲ್ಲಿ ತಮ್ಮ 7 ಏಕ್ರೆ ಜಮೀನಿನಲ್ಲಿ 5 ಗುಂಟೆ ಜಾಗವನ್ನು ಮಂಜುಳಾ ಎಂಬವರಿಗೆ ಮಾರಾಟ ಮಾಡಿದ್ದರು. ಮಂಜುಳಾ ಆ ಜಾಗದ ಮೇಲೆ ಸಾಲ ಪಡೆದಿದ್ದರಿಂದ ನಾಗಪ್ಪ ಅವರಿಗೆ ತೊಂದರೆಯಾಗಿತ್ತು. ಇದರಿಂದ ನಾಗಪ್ಪ ಅವರಿಗೆ ಎಲ್ಲೂ ಸಾಲ ಸಿಗುತ್ತಿರಲಿಲ್ಲ. ಹೀಗಾಗಿ ಸಾಲಕ್ಕಾಗಿ ನಾಗಪ್ಪ ಅವರು ತುಂಬಾ ಕಡೆ ಓಡಾಡಿ ಬೇಸತ್ತು ಹೋಗಿದ್ದರು.

    ಅಲ್ಲದೆ ಮಂಜುಳಾ ಅವರಿಗೆ ನಾಗಪ್ಪ ಅವರು ಮಾರಾಟ ಮಾಡಿದ್ದ ಜಾಗದ ಪಹಣಿ ಪತ್ರವನ್ನು ಕಂದಾಯ ಇಲಾಖೆಯವರು ಸರಿಯಾಗಿ ಪರಿಶೀಲಿಸದಿದ್ದಕ್ಕೆ ಈ ಎಡವಟ್ಟಾಗಿದೆ. ಸದ್ಯ ಅಧಿಕಾರಿಗಳು ಪಹಣಿ ಪತ್ರದಲ್ಲಿದ್ದ ತಪ್ಪನ್ನು ಸರಿಪಡಿಸಿ, ನಾಗಪ್ಪ ಅವರಿಗೆ ದಾಖಲೆಗಳನ್ನ ನೀಡಿದ್ದಾರೆ. ಇದರಿಂದ ಪಡೆಯದ ಸಾಲದಿಂದ ಕಂಗಾಲಾಗಿದ್ದ ರೈತ ನಿಟ್ಟುಸಿರು ಬಿಟ್ಟಿದ್ದಾರೆ.

  • ಐಎಂಎ ವಂಚನೆ ಪ್ರಕರಣ: ಕಂದಾಯ ಇಲಾಖೆ ಎಸಿ ಎಲ್.ಸಿ.ನಾಗರಾಜ್ ಅರೆಸ್ಟ್

    ಐಎಂಎ ವಂಚನೆ ಪ್ರಕರಣ: ಕಂದಾಯ ಇಲಾಖೆ ಎಸಿ ಎಲ್.ಸಿ.ನಾಗರಾಜ್ ಅರೆಸ್ಟ್

    ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಉತ್ತರ ವಿಭಾಗದ ಸಹಾಯಕ ಆಯುಕ್ತರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    ಎ.ಸಿ.ನಾಗರಾಜ್ ಬಂಧಿಯ ಅಧಿಕಾರಿ. ಐಎಂಎ ಪರ ಎನ್‍ಓಸಿ ನೀಡಲು 4.5 ಕೋಟಿ ಲಂಚ ಪಡೆದಿದ್ದ ಆರೋಪದ ಮೇಲೆ ಸಹಾಯಕ ಆಯುಕ್ತ ಎ.ಸಿ.ನಾಗರಾಜ್ ಬಂಧನವಾಗಿದೆ. ತನಿಖೆ ನಡೆಸುವಾಗಲೂ ತಪ್ಪು ಮಾಹಿತಿ ನೀಡಿ ನಾಗರಾಜ್ ಸರ್ಕಾರಕ್ಕೆ ವಂಚನೆ ಮಾಡಿರುವ ಮಾಹಿತಿ ಲಭ್ಯವಾಗಿದೆ.

    ಸರ್ಕಾರದಿಂದ ಎನ್‍ಓಸಿ ನೀಡುವ ಮೊದಲು 10 ಕೋಟಿ ರೂ. ಕೇಳಿದ್ದು, ಸಚಿವರೊಬ್ಬರ ಆದೇಶದ ಮೇರೆಗೆ ಹಣ ಸ್ವೀಕರಿಸಿದ್ದ ನಾಗರಾಜ್ ಕುರಿತು ಮನ್ಸೂರ್ ಖಾನ್ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಸಹ ಹೇಳಿಕೊಂಡಿದ್ದನು. ಹಣ ನೀಡಲು ತಡವಾಗಿತ್ತು ಎಂದು ವಿಡಿಯೋದಲ್ಲಿ ಮನ್ಸೂರ್ ಖಾನ್ ಹೇಳಿದ್ದಾನೆ.

    ಐಎಂಎ ವಂಚನೆ ಪ್ರಕರಣದ ಕರಿತು ಎಸ್‍ಐಟಿ ತಂಡ ಈಗಾಗಲೇ ವಜ್ರ, ಚಿನ್ನ, ಬೆಳ್ಳಿ, ಸೇರಿದಂತೆ ಐಎಂಎನ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಐಎಂಎ ಒಡೆತನದ ಫ್ರಂಟ್ ಲೈನ್ ಫಾರ್ಮಸಿಯ ನೀಲಸಂದ್ರ ಹಾಗೂ ವಿಜಯನಗರದ ಔಷಧಿ ಮಳಿಗೆಗಳ ಮೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 60 ಸಾವಿರ ನಗದು ಹಾಗೂ 40 ಲಕ್ಷ ರೂ. ಮೌಲ್ಯದ ಔಷಧಿ ಹಾಗೂ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿದ್ದು, ವಶಪಡಿಸಿಕೊಳ್ಳಲಾಗಿದೆ.

  • ಬ್ಯಾಂಕ್ ವ್ಯವಹಾರದ ಮೇಲೆ ಆಯೋಗದ ಕಣ್ಣು – ಹಣ ತೆಗೆಯೋ ಮುನ್ನ ಹುಷಾರು..!

    ಬ್ಯಾಂಕ್ ವ್ಯವಹಾರದ ಮೇಲೆ ಆಯೋಗದ ಕಣ್ಣು – ಹಣ ತೆಗೆಯೋ ಮುನ್ನ ಹುಷಾರು..!

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರದ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಡಿದೆ.

    ಚುನಾವಣಾ ಸಂದರ್ಭದಲ್ಲಿ ಬ್ಯಾಂಕ್ ವ್ಯವಹಾರ ಸೂಕ್ಷ್ಮವಾಗಿಸಲು ಆಯೋಗ ನೋಟಿಸ್ ನೀಡಿದೆ. ಈ ಪ್ರಕಾರ ಖಾತೆಯಿಂದ 1 ಲಕ್ಷಕ್ಕಿಂತ ಹೆಚ್ಚು ಹಣವನ್ನ ವಿತ್ ಡ್ರಾ ಮಾಡುವ ಖಾತೆದಾರರ ಮಾಹಿತಿಯನ್ನ ಚುನಾವಣಾ ಸಿಬ್ಬಂದಿ ಪಡೆಯಲಿದ್ದಾರೆ. ಹಾಗೇ 10 ಲಕ್ಷಕ್ಕಿಂತ ಹೆಚ್ಚು ಹಣವನ್ನ ವಾಪಸ್ ಪಡೆದರೆ ತೆರಿಗೆ ಇಲಾಖೆಗೆ ನೇರವಾಗಿ ಮಾಹಿತಿ ಹೋಗುತ್ತದೆ.

    ಈ ಪ್ರಕಾರ ಮುಂದಿನ ಒಂದುವರೆ ತಿಂಗಳು ಖಾತೆಗಳ ಮೇಲೆ ನಿಗಾ ಇಡಲಾಗುತ್ತದೆ. ಇನ್ನು ಅಭ್ಯರ್ಥಿಗಳ ದೈನಂದಿನ ಖರ್ಚನ್ನ ನೇರವಾಗಿ ಚುನಾವಣಾ ಕ್ಯಾಮಾರಾ ಸಿಬ್ಬಂದಿ ಸೆರೆ ಹಿಡಿದ ದೃಶ್ಯಗಳ ಆಧಾರದಲ್ಲಿ ಆಡಿಟ್ ಮಾಡಲಾಗುತ್ತದೆ. ನಿಗದಿಗಿಂತ ಹೆಚ್ಚು ಖರ್ಚು ಮಾಡಿದರೆ 24 ಗಂಟೆಯೊಳಗೆ ಕಠಿಣ ಕ್ರಮ ವಹಿಸಲಾಗುತ್ತದೆ.

    ಒಂದು ವೇಳೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಹಣವನ್ನು ಡ್ರಾ ಮಾಡಿದರೆ ಆದಾಯ ಇಲಾಖೆ ಖಾತೆದಾರರನ್ನು ಕರೆಸಿ ವಿಚಾರಣೆ ಮಾಡುತ್ತಾರೆ. ಯಾವ ಖರ್ಚಿಗೆ ಹಣ ಡ್ರಾ ಮಾಡಿದ್ದೀರ, ಯಾವುದಕ್ಕೆ ಎಷ್ಟೆಷ್ಟು ಖರ್ಚು ಮಾಡಿದ್ದೀರಾ? ಎಂದು ಅವರ ಬಳಿ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತದೆ.

  • ಉಡುಪಿ ಡಿಸಿ ಕೊಲೆ ಯತ್ನ: ಇಂದು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರಿ ನೌಕರರಿಂದ ಪ್ರತಿಭಟನೆ

    ಉಡುಪಿ ಡಿಸಿ ಕೊಲೆ ಯತ್ನ: ಇಂದು ಕರ್ತವ್ಯಕ್ಕೆ ಹಾಜರಾಗದೇ ಸರ್ಕಾರಿ ನೌಕರರಿಂದ ಪ್ರತಿಭಟನೆ

    ಉಡುಪಿ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್, ಅಂಪಾರು ಗ್ರಾಮದ ವಿಎ ಕಾಂತರಾಜ್, ಡಿಸಿ ಗನ್ ಮ್ಯಾನ್ ಸೇರಿದಂತೆ 7 ಮಂದಿ ಮೇಲೆ ಮರಳು ದಂಧೆಕೋರರು ಕೊಲೆಗೆ ಯತ್ನ ನಡೆಸಿ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಕಂದಾಯ ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೇ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.

    ಕೊಲೆ ಯತ್ನ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ತನಿಖೆಯಾಗಬೇಕು. ಕೂಡಲೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಎಸ್‍ಪಿ ಕೆ.ಟಿ.ಬಾಲಕೃಷ್ಣ ಅವರಲ್ಲಿ ಕಂದಾಯ ಸಿಬ್ಬಂದಿ ಒತ್ತಾಯಿಸಿದ್ದಾರೆ.

    ಉಡುಪಿಯ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಮೀಪದ ಪ್ರತಿಭಟನಾ ಕಟ್ಟೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಪ್ರತಿಭಟಿಸಿದ್ದಾರೆ. ಇಂದು ಕಂದಾಯ ಇಲಾಖೆಯ ಯಾವುದೇ ವಿಭಾಗಗಳಲ್ಲಿ ಸಾರ್ವಜನಿಕರ ಕೆಲಸ ಆಗುವುದಿಲ್ಲ. ಯಾವುದೇ ಫೈಲ್‍ಗಳು ಮೂವ್ ಆಗುವುದಿಲ್ಲ.

    ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿ ಒಂದೇ ದಿನ ತಮ್ಮ ಹಕ್ಕಿನ ರಜೆ ತೆಗೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಆರು ತಾಲೂಕಿನ ಎಲ್ಲಾ ಆಫೀಸರ್‍ಗಳು- ಕಚೇರಿಗಳ ಸಾವಿರಾರು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಮೇಲಾಧಿಕಾರಿಗಳಿಗೆ ಬೆಂಬಲ ನೀಡಿದ್ದಾರೆ.

    ತಪ್ಪಿತಸ್ಥರೆಲ್ಲರ ಬಂಧನವಾಗಬೇಕು, ಮರಳು ಮಾಫಿಯಾದ ಹಿಂದಿರುವ ಶಕ್ತಿಗಳಿಗೂ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ರೂಪುರೇಷೆ ಬದಲಾಯಿಸಿ- ಉಗ್ರ ಹೋರಾಟಕ್ಕೆ ಇಳಿಯಲು ಸರ್ಕಾರಿ ನೌಕರರ ಸಂಘ ನಿರ್ಧಾರ ಮಾಡಿದೆ.