ಅನುಮತಿ ಪಡೆಯದೇ ತಮ್ಮ ನಿರ್ಮಾಣ ಸಂಸ್ಥೆಯಿಂದ ತಯಾರಾದ ‘ಬ್ಯಾಚ್ಯುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ (MRT) ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ (Delhi, High Court) ಮೆಟ್ಟಿಲು ಏರಿತ್ತು. ಕಾಪಿ ರೈಟ್ ಉಲ್ಲಂಘನೆ ಆಗಿರೋ ವಿಚಾರವನ್ನು ಉಲ್ಲೇಖಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ (Rakshit Shetty) ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.
ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಎಂ.ಆರ್.ಟಿ ಹಕ್ಕು ಹೊಂದಿರೋ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಹಾಡು ಬಳಕೆ ಮಾಡಿದ್ದರು ರಕ್ಷಿತ್ ಶೆಟ್ಟಿ. ಅನುಪತಿ ಪಡೆಯದೇ ಬಳಸಿದ್ದನ್ನೂ ಒಪ್ಪಿಕೊಂಡಿದ್ದರು. ತುಣುಕು ಹಾಡುಗಳನ್ನು ಬಳಸಿಕೊಳ್ಳಲು ಅನುಮತಿ ಬೇಕಾ ಎಂದು ಪ್ರಶ್ನೆ ಮಾಡಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.
– 3,000 ಕೋಟಿ ಬೆಲೆಯ ನೋಟುಗಳು ಎಕ್ಸ್‌ಚೇಂಜ್ – ಮಾರುಕಟ್ಟೆಯ 20% ನೋಟುಗಳು ಎಸ್‌ಬಿಐನಲ್ಲಿ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇ 19 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಾದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (SBI) ಇದುವರೆಗೆ ಅಂದಾಜು 17,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿ ಹಾಗೂ ವಿನಿಮಯ ಮಾಡಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಆರ್‌ಬಿಐ ಮೇ 19 ರಂದು ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಂಡಿತು. ಸಾರ್ವಜನಿಕರು 2,000 ರೂ.ಯ ನೋಟುಗಳನ್ನು ತಮ್ಮ ಖಾತೆಗಳಲ್ಲಿ ಠೇವಣಿ ಇಡಲು ಹಾಗೂ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮೇ 23 ರಿಂದ ಅನುಮತಿ ನೀಡಿದ್ದು, ಸೆಪ್ಟೆಂಬರ್ 30ರ ವರೆಗೆ ಕಾಲಾವಕಾಶ ನೀಡಿದೆ.
ನೋಟುಗಳನ್ನು ಬದಲಿಸಿಕೊಳ್ಳಲು (Note Exchange) ಅನುಮತಿ ನೀಡಿದ ವಾರದ ಬಳಿಕ ಮಂಗಳವಾರ ಮಾಹಿತಿ ನೀಡಿರುವ ಎಸ್‌ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ, ತಮ್ಮ ಬ್ಯಾಂಕ್‌ನಲ್ಲಿ ಇಲ್ಲಿಯವರೆಗೆ ಸುಮಾರು 14,000 ಕೋಟಿ ರೂ. ಮೌಲ್ಯದ 2,000 ರೂ.ಯ ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಲಾಗಿದೆ. ಸುಮಾರು 3,000 ಕೋಟಿ ರೂ. ಮೌಲ್ಯದ ನೋಟುಗಳನ್ನು ಬದಲಾಯಿಸಿಕೊಳ್ಳಲಾಗಿದೆ. ಇದು ಮಾರುಕಟ್ಟೆಯಲ್ಲಿರುವ ಸುಮಾರು 20% ದಷ್ಟು ನೋಟುಗಳು ಈಗ ನಮ್ಮಲ್ಲಿದೆ ಎಂದು ತಿಳಿಸಿದ್ದಾರೆ.
ನೋಟು ಬದಲಾವಣೆ ಹಾಗೂ ಠೇವಣಿ ಇಡುವ ಬಗ್ಗೆ ಮಾಹಿತಿ ನೀಡಿರುವ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, 2,000 ರೂ. ನೋಟುಗಳನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಯಾವುದೇ ರೀತಿಯ ಆತಂಕ ಬೇಡ. ಈ ನೋಟುಗಳು ಕಾನೂನಾತ್ಮಕವಾಗಿ ಮುಂದುವರಿಯಲಿದೆ. ನಾವು ಒಟ್ಟು ಎಷ್ಟು ನೋಟುಗಳು ವಾಪಸಾಗುತ್ತವೆ ಎಂಬುದನ್ನು ಕಾದು ನೋಡಲಿದ್ದೇವೆ. ಸೆಪ್ಟೆಂಬರ್ 30ರ ವರೆಗೆ ಏನಾಗುತ್ತದೆ ಎಂಬುದನ್ನು ಈಗಲೇ ಊಹೆ ಮಾಡಲು ಸಾಧ್ಯವಿಲ್ಲ ಎಂದು ದಾಸ್ ತಿಳಿಸಿದ್ದಾರೆ.
ಆರ್‌ಬಿಐ ನೋಟು ಬದಲಾವಣೆಗೆ ಸೆಪ್ಟೆಂಬರ್ 30ರ ವರೆಗೆ ಸಮಯಾವಕಾಶ ನೀಡಿದ್ದು, ಒಂದು ಬಾರಿ 2,000 ರೂ. 10 ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ನೋಟುಗಳನ್ನು ಡೆಪಾಸಿಟ್ ಮಾಡಲು ಯಾವುದೇ ನಿರ್ಬಂಧವಿಲ್ಲ. ಒಂದು ಬಾರಿಗೆ ಡೆಪಾಸಿಟ್ ಮಾಡಬಹುದಾದ ಗರಿಷ್ಠ ಮಿತಿಯನ್ನು ಆರ್‌ಬಿಐ ನಿಗದಿಪಡಿಸಿಲ್ಲ. ಇದನ್ನೂ ಓದಿ: ಗಂಗಾ ನದಿಯಲ್ಲಿ ಪದಕ ವಿಸರ್ಜಿಸಲು ಮುಂದಾದ ಕುಸ್ತಿಪಟುಗಳನ್ನು ತಡೆದ ರೈತ ಹೋರಾಟಗಾರ
ಒಂದು ಖಾತೆಗೆ 50,000 ರೂ.ಗಿಂತಲೂ ಕಡಿಮೆ ಮೊತ್ತದ ಹಣವನ್ನು ಡೆಪಾಸಿಟ್ ಮಾಡಲು ಯಾವುದೇ ದಾಖಲೆಗಳ ಅಗತ್ಯವಿಲ್ಲ. ಆದರೆ ಅದಕ್ಕಿಂತಲೂ ಹೆಚ್ಚು ಹಣವನ್ನು ಡೆಪಾಸಿಟ್ ಮಾಡುವುದಾದರೆ ಆದಾಯ ತೆರಿಗೆ ನಿಯಮದ ಅನ್ವಯ ಮಾಡಲಾಗುತ್ತದೆ ಎಂಬುದು ತಿಳಿದಿರಬೇಕು. ಅಧಿಕ ಮೊತ್ತವನ್ನು ಡೆಪಾಸಿಟ್ ಮಾಡುವಾಗ ಪ್ಯಾನ್ ಕಾರ್ಡ್ ಸಲ್ಲಿಸಬೇಕಾಗುತ್ತದೆ ಎಂದು ಆರ್‌ಬಿಐ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಯ ‘ವಿದ್ಯಾಪೀಠ’ – ಜೂನ್ 3, 4ಕ್ಕೆ ಕರ್ನಾಟಕದ ಅತಿ ದೊಡ್ಡ ಶೈಕ್ಷಣಿಕ ಮೇಳ
ಮುಂಬೈ: ದೇಶದಲ್ಲೇ ಅತಿದೊಡ್ಡ ಬ್ಯಾಂಕಿಂಗ್ ಸಂಸ್ಥೆಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ.0.40 ರಿಂದ ಶೇ 0.90ರ ವರೆಗೆ ಹೆಚ್ಚಿಸಿದೆ. 2 ಕೋಟಿ ಹಾಗೂ ಅದಕ್ಕಿಂತ ಹೆಚ್ಚಿನ ಮೊತ್ತದ ಠೇವಣಿಗಳಿಗೆ ಅನ್ವಯಿಸುವ ಈ ನೀತಿ ಇಂದಿನಿಂದಲೇ ಜಾರಿಗೆ ಬಂದಿದೆ.
1 ವರ್ಷಕ್ಕಿಂತ ಹೆಚ್ಚಿನ ಹಾಗೂ 2 ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿ ಮೇಲಿನ ಬಡ್ಡಿ ದರವನ್ನು ಶೇ. 0.40ರಷ್ಟು ಹೆಚ್ಚಿಸಲಾಗಿದೆ. 2 ವರ್ಷಕ್ಕಿಂತ ಹೆಚ್ಚಿನ ಹಾಗೂ 3 ವರ್ಷದವರೆಗಿನ ಠೇವಣಿಯ ಬಡ್ಡಿ ದರ ಶೇ. 0.65ರಷ್ಟು, 3 ವರ್ಷಕ್ಕಿಂತ ಹೆಚ್ಚಿನ ಹಾಗೂ 10 ವರ್ಷದವರೆಗಿನ ಠೇವಣಿ ಬಡ್ಡಿ ದರವನ್ನು ಶೇ. 0.90ರಷ್ಟು ಹೆಚ್ಚಿಸಲಾಗಿದೆ.
Good news for SBI customers: Bank raises interest rates on fixed deposits, find out the latest rates Effect of RBI repo rate hike: increase in fixed deposit rates of SBI interest, find out FD best interest rates https://t.co/d5FCxdMBJG
ಈ ನಡುವೆ ಮತ್ತೊಂದು ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವ ಬ್ಯಾಂಕ್ ಆಫ್ ಬರೋಡಾ (BOB) ಆರ್‌ಬಿಐ ಬಡ್ಡಿದರವನ್ನು ಬಿಗಿಗೊಳಿಸಿದ ನಂತರ ತನ್ನ ಸಾಲದ ದರದಲ್ಲಿ 10 ಬೇಸಿಸ್ ಪಾಯಿಂಟ್‌ಗಳವರೆಗೆ ಹೆಚ್ಚಳ ಘೋಷಿಸಿದೆ.
ಡೆಹ್ರಾಡೂನ್: ಉತ್ತರಖಾಂಡ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ, 18 ವರ್ಷ ಮೇಲ್ಪಟ್ಟ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಪ್ರತಿ ತಿಂಗಳು 1,000 ರೂ. ಠೇವಣಿ ಇರಲಿಸಲಾಗುವುದು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಉತ್ತರಾಖಂಡದ ಬಜೆಟ್ 55,000 ಕೋಟಿ ರೂಪಾಯಿ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಶೇ. 60ರಿಂದ 80ರಷ್ಟು ಕಮಿಷನ್ ಪಡೆಯುತ್ತಾರೆಂದು ಹಲವರು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಒಂದು ವೇಳೆ ಶೇ. 20ರಷ್ಟು ಕಮಿಷನ್ ಪಡೆದರೂ, ಒಟ್ಟು ಬಜೆಟ್ ಮೊತ್ತದಲ್ಲಿ 11,000 ಕೋಟಿ ರೂಪಾಯಿ ರಾಜಕಾರಣಿಗಳ ಜೇಬು ಸೇರುತ್ತಿದೆ. ಅದನ್ನೆಲ್ಲ ಅವರು ಸ್ವಿಸ್ ಬ್ಯಾಂಕ್‌ನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ ಎಂದು ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.
ಉತ್ತರಾಖಂಡ ರಾಜ್ಯಕ್ಕೆ ಕೇಜ್ರಿವಾಲ್ ಅವರ 5ನೇ ಭೇಟಿ ಇದಾಗಿದೆ. ಈ ಹಿಂದಿನ ಭೇಟಿಗಳಲ್ಲೂ ಪ್ರತಿ ಮನೆಗೆ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ, ಆರು ತಿಂಗಳಿಗೊಮ್ಮೆ 1 ಲಕ್ಷ ಸರ್ಕಾರಿ ಉದ್ಯೋಗ ನೇಮಕಾತಿಗೆ ಅರ್ಜಿ ಆಹ್ವಾನ ಸೇರಿದಂತೆ ಹಲವು ಭರವಸೆಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ.
ಮುಂಬೈ: ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ) ಉಳಿತಾಯ ಖಾತೆಯಲ್ಲಿಡಬೇಕಾದ ಕನಿಷ್ಟ ಠೇವಣಿಯ ಮೊತ್ತವನ್ನು ಸಡಿಲಿಸಿದೆ. ಸೋಮವಾರ ಎಸ್‍ಬಿಐ ಹೇಳಿಕೆಯನ್ನು ಬಿಡುಗಡೆ ಮಾಡಿ ಬ್ಯಾಲೆನ್ಸ್ ಮೊತ್ತವನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದೆ. ಹೊಸ ಬದಲಾವಣೆ ಆಕ್ಟೋಬರ್ ನಿಂದ ಜಾರಿಗೆ ಬರಲಿದೆ.
ಯಾವ ಪ್ರದೇಶದಲ್ಲಿ ಎಷ್ಟು?
ಈ ಹಿಂದೆ ಮೆಟ್ರೋ ಪ್ರದೇಶದಲ್ಲಿ ತಿಂಗಳಿಗೆ 5 ಸಾವಿರ ರೂ. ಮಿನಿಮಮ್ ಹಣವನ್ನು ಇಡಬೇಕಿತ್ತು. ಆದರೆ ಈಗ 3 ಸಾವಿರ ರೂ. ಮಿನಿಮಮ್ ಬ್ಯಾಲೆನ್ಸ್ ಇಡಬಹುದು ಎಂದು ಹೇಳಿದೆ.
ನಗರ ಪ್ರದೇಶ, ಅರೆ ನಗರ, ಗ್ರಾಮೀಣ ಪ್ರದೇಶದಲ್ಲಿ ಅನುಕ್ರಮವಾಗಿ ಉಳಿತಾಯ ಖಾತೆಯಲ್ಲಿ 3 ಸಾವಿರ ರೂ., 2 ಸಾವಿರ ರೂ., 1 ಸಾವಿರ ರೂ. ಇಡಬೇಕಿತ್ತು. ಈ ವಿಭಾಗದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಈ ಹಿಂದೆ ಕನಿಷ್ಠ ಬ್ಯಾಲೆನ್ಸ್ ಇರದೇ ಇದ್ದರೆ ಮೆಟ್ರೋ ಪ್ರದೇಶದಲ್ಲಿ 50 ರೂ. ನಿಂದ 100 ರೂ. ವರೆಗೆ ದಂಡ ಮತ್ತು 18 ರೂ. ಜಿಎಸ್‍ಟಿ ತೆರಿಗೆ ಹಾಕಲಾಗುತಿತ್ತು. ಆದರೆ ಈಗ 30 ರೂ. ನಿಂದ 50 ರೂ. ವರೆಗೆ ದಂಡ ಹಾಕಬಹುದಾಗಿದೆ.
ಈ ಹಿಂದೆ ನಗರ ಪ್ರದೇಶದಲ್ಲಿ ಮಿನಿಮಮ್ ಬ್ಯಾಲೆನ್ಸ್ ಇರದೇ ಇದ್ದರೆ 40 ರೂ. -80 ರೂ. ದಂಡ ವಿಧಿಸಲಾಗುತಿತ್ತು. ಆದರೆ ಈಗ ಈ ಮೊತ್ತವನ್ನು 30 ರೂ. -50 ರೂ.ಗೆ ಇಳಿಸಲಾಗಿದೆ.
ಈ ಹಿಂದೆ ಅರೆ ನಗರ ಮತ್ತು ಗ್ರಾಮೀಣ ಭಾಗದಲ್ಲಿ 25 ರೂ. ನಿಂದ ಆರಂಭವಾಗಿ 75 ರೂ. ವರೆಗೆ ದಂಡದ ಶುಲ್ಕ ಇತ್ತು. ಈಗ 20 ರೂ. – 40 ರೂ.ಗೆ ಇಳಿಕೆಯಾಗಿದೆ.
ಎಸ್‍ಬಿಐಯಲ್ಲಿ 42 ಕೋಟಿ ಉಳಿತಾಯ ಖಾತೆ ಓಪನ್ ಆಗಿದ್ದು, ಇದರಲ್ಲಿ 13 ಕೋಟಿ ಜನ್ ಧನ್ ಖಾತೆಗಳಿವೆ. ಈ ಖಾತೆಗಳಿಗೆ ಯಾವುದೇ ದಂಡ ಇರುವುದಿಲ್ಲ ಎಂದು ಎಸ್‍ಬಿಐ ಹೇಳಿದೆ. ಏಪ್ರಿಲ್ 1ರಂದು ಮಿನಿಮಮ್ ಬ್ಯಾಲೆನ್ಸ್ ಮೊತ್ತವನ್ನು ಏರಿಸಿದ್ದಕ್ಕೆ ಭಾರೀ ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್‍ಬಿಐ ಈಗ ಠೇವಣಿಯ ಮೊತ್ತವನ್ನು ಸಡಿಲಿಸಿದೆ.