Tag: derailment

  • ಮೈಸೂರು-ದರ್ಭಾಂಗ ರೈಲು ದುರಂತ ಉದ್ದೇಶಿತ ದುಷ್ಕೃತ್ಯ

    ಮೈಸೂರು-ದರ್ಭಾಂಗ ರೈಲು ದುರಂತ ಉದ್ದೇಶಿತ ದುಷ್ಕೃತ್ಯ

    ಚೆನ್ನೈ: ಕಳೆದ ವರ್ಷ ಮೈಸೂರಿನಿಂದ (Mysuru) ದರ್ಭಾಂಗಗೆ (Darbhanga) ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್‌ (Bhagmati Express) ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿತ್ತು. ಆದರೆ ಇದು ಅಪಘಾತವಲ್ಲ, ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

    ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ ಅವರು, 2024ರ ಅ.11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ ನಿಲ್ದಾಣದಲ್ಲಿ ಭಾಗಮತಿ ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಎರಡು ಭೋಗಿಗಳು ಹೊತ್ತಿ ಉರಿದಿದ್ದವು. ಆದರೆ ಇದು ಸ್ವಯಂಚಾಲಿತ ಅಥವಾ ಯಾವುದೇ ಸಾಧನದ ದಿಢೀರ್ ವೈಫಲ್ಯದಿಂದ ಆಗಿಲ್ಲ. ಬದಲಾಗಿ ರೈಲು ಹಳಿಯ ಇಂಟರ್‌ಲಾಕ್ ಕಿತ್ತ ಹಿನ್ನೆಲೆಯಲ್ಲಿ ಸಂಭವಿಸಿದೆ. ಹೀಗಾಗಿ ಈ ರೈಲು ಅಪಘಾತವನ್ನು ವಿಧ್ವಂಸಕ ಕೃತ್ಯದ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

    ಹಳಿಯ ಇಂಟರ್‌ಲಾಕ್ ವ್ಯವಸ್ಥೆಯನ್ನು ಕಿಡಿಗೇಡಿಗಳು ಕಿತ್ತಿದ್ದ ಹಿನ್ನೆಲೆ ಭಾಗಮತಿ ಎಕ್ಸ್ಪ್ರೆಸ್ ರೈಲು ನಿಂತಿದ್ದ ಮುಖ್ಯ ಹಳಿ ಬಿಟ್ಟು ಪಕ್ಕದ ಹಳಿಯಲ್ಲಿ ನಿಂತಿದ್ದ ರೈಲಿಗೆ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ 13 ಬೋಗಿಗಳು ಹಳಿತಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಎಂದಿದ್ದಾರೆ.

    ದುಷ್ಕೃತ್ಯದ ಸಂಚು:
    ಇನ್ನೂ ಈ ದುಷ್ಕೃತ್ಯವು ರೈಲ್ವೆ ಇಲಾಖೆಯ ಒಳಗಿನವರಿಂದಲೇ ನಡೆದಿರುವ ಶಂಕೆ ಇದ್ದು, ರೈಲ್ವೆ ಇಲಾಖೆಯ ಗುಪ್ತಚರ ವಿಭಾಗವು ಈ ಕುರಿತು ಮಾಹಿತಿ ಕಲೆಹಾಕಬೇಕು ಎಂದು ಸಿಆರ್‌ಎಸ್ ಕೇಂದ್ರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ತಿಳಿಸಿದ್ದಾರೆ. ಜೊತೆಗೆ ರೈಲ್ವೆಯ ಮಹತ್ವದ ಸುರಕ್ಷತಾ ಕೆಲಸಗಳಿಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳ ನೇಮಕ ಮಾಡಿಕೊಳ್ಳಬಾರದು. ರೈಲ್ವೆಯ ಸುರಕ್ಷತಾ ವಿಭಾಗದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಈ ಕುರಿತ ಕೌಶಲ್ಯ ನೀಡುವ ಕೆಲಸ ಆಗಬೇಕು ಎಂದು ಸೂಚಿಸಿದ್ದಾರೆ.

    ಘಟನೆ ವೇಳೆ ಭಾಗಮತಿ ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲಟ್ ಜಿ.ಸುಬ್ರಮಣಿ ಅವರು ಸಮಯ ಪ್ರಜ್ಞೆ ಪ್ರದರ್ಶಿಸಿ, ತಕ್ಷಣ ತುರ್ತು ಬ್ರೇಕ್ ಹಾಕಿದ ಹಿನ್ನೆಲೆ ದುರಂತದ ತೀವ್ರತೆ ಕಡಿಮೆಯಾಗಿತ್ತು. ಹೀಗಾಗಿ ಚೆನ್ನೈ ಡಿವಿಜನ್‌ನ ಈ ಲೋಕೋ ಪೈಲಟ್ ಹೆಸರನ್ನು ಅತೀ ವಿಶಿಷ್ಟ ರೈಲು ಸೇವಾ ಪುರಸ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.ಇದನ್ನೂ ಓದಿ: Pakistan | ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ – 30 ಪ್ರಯಾಣಿಕರಿಗೆ ಗಾಯ, ಮೂವರು ಗಂಭೀರ

  • Pakistan | ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ – 30 ಪ್ರಯಾಣಿಕರಿಗೆ ಗಾಯ, ಮೂವರು ಗಂಭೀರ

    Pakistan | ಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ – 30 ಪ್ರಯಾಣಿಕರಿಗೆ ಗಾಯ, ಮೂವರು ಗಂಭೀರ

    ಇಸ್ಲಾಮಾಬಾದ್: ಲಾಹೋರ್‌ನಿಂದ (Lahore) ರಾವಲ್ಪಿಂಡಿಗೆ (Rawalpindi) ಹೊರಟಿದ್ದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು ಹಳಿತಪ್ಪಿರುವ ಘಟನೆ ಶೇಖುಪುರ ಜಿಲ್ಲೆಯ ಕಲಾ ಶಾ ಕಾಕು ಎಂಬಲ್ಲಿ ನಡೆದಿದೆ.

    ಶುಕ್ರವಾರ ಸಂಜೆ ಲಾಹೋರ್ ರೈಲು ನಿಲ್ದಾಣದಿಂದ ಹೊರಟ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ ಸುಮಾರು ಅರ್ಧ ಗಂಟೆಯ ಬಳಿಕ ಹಳಿತಪ್ಪಿದೆ. ಪರಿಣಾಮ ರೈಲಿನಲ್ಲಿದ್ದ 30 ಪ್ರಯಾಣಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ – ಡೊನಾಲ್ಡ್‌ ಟ್ರಂಪ್‌

    ಈ ಕುರಿತು ಪಾಕಿಸ್ತಾನ ರೈಲ್ವೆ ಮಾಹಿತಿ ಹಂಚಿಕೊಂಡಿದ್ದು, ಅವಘಡ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಕಾರ್ಯಾಚರಣೆ ನಡೆಸಿವೆ. ಇನ್ನೂ ಭೋಗಿಗಳ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಿಬ್ಬಂದಿ ರಾತ್ರಿಯಿಡಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದೆ.

    ಅವಘಡದಲ್ಲಿ 1,000ಕ್ಕೂ ಅಧಿಕ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾದವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿ ಮಾಡಿದೆ.

    ಈ ಕುರಿತು ರೈಲ್ವೆ ಸಚಿವ ಮುಹಮ್ಮದ್ ಹನೀಫ್ ಅಬ್ಬಾಸಿ (Muhammad Hanif Abbasi) ಮಾತನಾಡಿ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಭವಿಷ್ಯದಲ್ಲಿ ಈ ರೀತಿಯ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರೈಲ್ವೆ ಸೌಕರ್ಯವನ್ನು ಸುಧಾರಿಸುತ್ತೇವೆ. ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಜೊತೆಗೆ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ ಹಳಿತಪ್ಪಿದ ಘಟನೆ ಸಂಬಂಧ ತನಿಖೆ ನಡೆಸಿ 7 ದಿನಗಳ ಒಳಗೆ ಸಮಗ್ರ ವರದಿ ಸಲ್ಲಿಸಲು ಸೂಚಿಸಿದ್ದಾರೆ.ಇದನ್ನೂ ಓದಿ: ಕಿಡ್ನ್ಯಾಪ್‌ & ಮರ್ಡರ್ ಕೇಸ್‌ – ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ

  • ಗೂಡ್ಸ್ ರೈಲುಗಳ ನಡುವೆ ಅಪಘಾತ – ಹಳಿ ತಪ್ಪಿದ 12 ಬೋಗಿಗಳು

    ಗೂಡ್ಸ್ ರೈಲುಗಳ ನಡುವೆ ಅಪಘಾತ – ಹಳಿ ತಪ್ಪಿದ 12 ಬೋಗಿಗಳು

    ಕೋಲ್ಕತ್ತಾ: 2 ಗೂಡ್ಸ್ ರೈಲುಗಳ (Goods Train) ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ (Derail) ಘಟನೆ ಪಶ್ಚಿಮ ಬಂಗಾಳದ (West Bengal) ಬಂಕುರಾದಲ್ಲಿ (Bankura) ನಡೆದಿದೆ.

    ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್‌ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿ ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್ ಶಾಕ್‍ನಿಂದ ಮಹಿಳೆ ಸಾವು

    ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ (ADRA) ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೋ ಮತ್ತು ಸಿಂಗ್‌ಭೂಮ್‌ಗೆ ಸಂಚಾರ ಕಲ್ಪಿಸಲಾಗಿತ್ತು. ಇದನ್ನೂ ಓದಿ: 3 ವರ್ಷದ ಹಿಂದಿನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಮಹಿಳೆಯ ಅಸ್ತಿಪಂಜರ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಪತ್ತೆ

    ಪುರುಲಿಯಾ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್‌ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಆರ್ಡರ್‌ ಮಾಡಿದ 4 ವರ್ಷಗಳ ಬಳಿಕ ಟೆಕ್ಕಿ ಕೈ ಸೇರಿತು ಪ್ರಾಡಕ್ಟ್‌!

    ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಗಳಿಗೆ ವಿಚ್ಛೇದನ ಕೊಡಲು ಪ್ರೋತ್ಸಾಹಿಸಿದ ಅತ್ತೆಯನ್ನೇ ಹತ್ಯೆಗೈದ ಅಳಿಯ

  • ಕೋಲಾರದಲ್ಲಿ ಹಳಿ ತಪ್ಪಿದ ಡಬಲ್‌ಡೆಕ್ಕರ್ ರೈಲು – ತಪ್ಪಿದ ಭಾರೀ ದುರಂತ

    ಕೋಲಾರದಲ್ಲಿ ಹಳಿ ತಪ್ಪಿದ ಡಬಲ್‌ಡೆಕ್ಕರ್ ರೈಲು – ತಪ್ಪಿದ ಭಾರೀ ದುರಂತ

    ಕೋಲಾರ: ಡಬಲ್‌ಡೆಕ್ಕರ್ (Double Decker) ರೈಲೊಂದು ಹಳಿ ತಪ್ಪಿ ಲೋಕೋಪೈಲೆಟ್ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದ ಘಟನೆ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಬಿಸಾನತ್ತಂ ಬಳಿ ನಡೆದಿದೆ.

    ರೈಲು ಬೆಂಗಳೂರಿನಿಂದ (Bengaluru) ಚೆನ್ನೈಗೆ (Chennai) ತೆರಳುತ್ತಿದ್ದ ಸಂದರ್ಭ ರೈಲಿನ ಒಂದು ಕೋಚ್ ಹಳಿ ಬಿಟ್ಟು ಪಕ್ಕಕ್ಕೆ ಇಳಿದಿದೆ. ಹಳಿ ತಪ್ಪಿದ್ದನ್ನು ಗಮನಿಸಿದ ಲೋಕೋಪೈಲೆಟ್ ಕೂಡಲೇ ರೈಲನ್ನು ನಿಲ್ಲಿಸಿ ಅಧಿಕಾರಿಗಳಿಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ನಡೆಯುತ್ತಿದ್ದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

    ಘಟನೆ ನಡೆದ ಕೂಡಲೇ ತಾಂತ್ರಿಕ ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದು, ಬಂಗಾರಪೇಟೆ ರೈಲ್ವೇ ಸಿಬ್ಬಂದಿ ಸಮಸ್ಯೆ ಬಗೆಹರಿಸಿದ ಬಳಿಕ ರೈಲು ಸಂಚಾರ ಮುಂದುವರಿಸಿದೆ. ಇದನ್ನೂ ಓದಿ: ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ