Tag: derogatory statement

  • ಪ್ರವಾದಿಗೆ ಅವಹೇಳನ – ಭಾರತದ ನಿಲುವಿನ ಬಗ್ಗೆ ತೃಪ್ತಿಯಿದೆ ಎಂದ ಇರಾನ್

    ನವದೆಹಲಿ: ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆ ಜಾಗತಿಕವಾಗಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತ ತೆಗೆದುಕೊಂಡ ನಿರ್ಧಾರದ ಬಗ್ಗೆ ತೃಪ್ತಿಯಿದೆ ಎಂದು ಇರಾನ್ ಹೇಳಿದೆ.

    ಭಾರತಕ್ಕೆ ಭೇಟಿ ನೀಡಿದ ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದವರ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ಕ್ರಮ ಹಾಗೂ ಪ್ರಯತ್ನಗಳಿಂದ ನಮಗೆ ತೃಪ್ತಿ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು: ಬಿಜೆಪಿ

    ಕಳೆದ ವರ್ಷ ಅಧಿಕಾರ ವಹಿಸಿಕೊಂಡ ಬಳಿಕ ಬುಧವಾರ ಮೊದಲ ಬಾರಿ ಭಾರತಕ್ಕೆ ಭೇಟಿ ನೀಡಿದ ಅಬ್ದುಲ್ಲಾಹಿಯಾನ್ ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ರನ್ನು ಭೇಟಿಯಾದರು. ಈ ವೇಳೆ ಸಭೆಯಲ್ಲಿ ಮಾಜಿ ಬಿಜೆಪಿ ವಕ್ತಾರರ ವಿವಾದಾತ್ಮಕ ಹೇಳಿಕೆ ವಿಚಾರವನ್ನು ಪ್ರಸ್ತಾಪಿಸಲಾಯಿತು. ಇದನ್ನೂ ಓದಿ: ಎಂಟು ವರ್ಷಗಳಲ್ಲಿ ಭಾರತದ ಜೈವಿಕ ಆರ್ಥಿಕತೆ 8 ಪಟ್ಟು ಬೆಳೆದಿದೆ: ಪ್ರಧಾನಿ

    ವಿವಾದಾತ್ಮಕ ಹೇಳಿಕೆ ಬಗ್ಗೆ ಮಾತನಾಡಿದ ದೋವಲ್, ಪ್ರವಾದಿ ಮೊಹಮ್ಮದ್ ಬಗ್ಗೆ ಭಾರತ ಸರ್ಕಾರ ಹಾಗೂ ಅಧಿಕಾರಿಗಳಿಗೆ ಗೌರವವಿದೆ. ಅವರ ಬಗ್ಗೆ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವವರ ಬಗ್ಗೆ ಸರ್ಕಾರವೂ ತಕ್ಕ ರೀತಿಯಲ್ಲಿ ವ್ಯವಹರಿಸಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ಲಾಹಿಯಾನ್ ಭಾರತದ ನಿಲುವಿನ ಬಗ್ಗೆ ನಾವು ತೃಪ್ತರಾಗಿದ್ದೇವೆ ಎಂದಿದ್ದಾರೆ.

    ಬಿಜೆಪಿ ಪಕ್ಷದ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಇತ್ತೀಚೆಗೆ ಪ್ರವಾದಿ ಮೊಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಇದು ಗಲ್ಫ್ ದೇಶಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ಅವರನ್ನು ಭಾನುವಾರ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಯಿತು.

  • ಈಶ್ವರಪ್ಪ ಹೇಳಿಕೆಗೆ ಯೂತ್ ಕಾಂಗ್ರೆಸ್ ಗರಂ – ಪ್ರತಿಕೃತಿ ದಹಿಸಿ ಆಕ್ರೋಶ

    ಈಶ್ವರಪ್ಪ ಹೇಳಿಕೆಗೆ ಯೂತ್ ಕಾಂಗ್ರೆಸ್ ಗರಂ – ಪ್ರತಿಕೃತಿ ದಹಿಸಿ ಆಕ್ರೋಶ

    ಧಾರವಾಡ: ರಾಷ್ಟ್ರ ಧ್ವಜದ ಕುರಿತಾಗಿ ಸಚಿವ ಕೆಎಸ್ ಈಶ್ವರಪ್ಪ ನೀಡಿದ ಹೇಳಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಧಾರವಾಡದ ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ತೆರಳಿ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗಿ ಅಂತಾರೆ, ಪಾಕ್ ಇವರಪ್ಪನ ಮನೆನಾ..? – ರಾಜಕಾರಣಿಗಳ ವಿರುದ್ಧ ಉಡುಪಿ ವಿದ್ಯಾರ್ಥಿನಿಯರ ಕಿಡಿ

    ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಘೋಟಣೆ ಕೂಗಿದ್ದಾರೆ. ರಾಷ್ಟ್ರ ಧ್ವಜ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಈಶ್ವರಪ್ಪ ವಿರುದ್ಧ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗೋದಾದ್ರೆ ಸ್ವಾಗತಿಸುತ್ತೇನೆ: ರಘುಪತಿ ಭಟ್