Tag: Devara hipparagi

  • ಟ್ರ‍್ಯಾಕ್ಟರ್‌ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಭಾರತದ ನಕ್ಷೆ ಸೃಷ್ಟಿಸಿ ದೇಶಭಕ್ತಿ ಮೆರೆದ ಯುವಕರು

    ಟ್ರ‍್ಯಾಕ್ಟರ್‌ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಭಾರತದ ನಕ್ಷೆ ಸೃಷ್ಟಿಸಿ ದೇಶಭಕ್ತಿ ಮೆರೆದ ಯುವಕರು

    ವಿಜಯಪುರ: ಟ್ರ‍್ಯಾಕ್ಟರ್‌ನಲ್ಲಿ ಲೋಡ್ ಮಾಡಿದ್ದ ಕಬ್ಬಿನಿಂದ ಯುವಕರು ಭಾರತದ ನಕ್ಷೆ ಸೃಷ್ಟಿಸಿ ಘಟನೆ ಜಿಲ್ಲೆಯ ದೇವರಹಿಪ್ಪರಗಿ (Devara Hipparagi) ತಾಲೂಕಿನ ವಂದಾಲ ಗ್ರಾಮದ ಬಳಿ ನಡೆದಿದೆ.ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನ ಸಮಿತಿಗೆ ಸರ್ಕಾರದ ವೇತನ; ಸಮಿತಿ ರದ್ದಿಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

    ಕಬ್ಬು ಕಟಾವು ಮಾಡಿ ಟ್ರ‍್ಯಾಕ್ಟರ್‌ಗೆ ಲೋಡ್ ಮಾಡಿದ ಬಳಿಕ ಯುವಕರು ಅದರಲ್ಲಿ ಭಾರತ ನಕ್ಷೆ ರಚಿಸಿದ್ದಾರೆ. ಬಳಿಕ ನಕ್ಷೆಗೆ ಕೇಸರಿ, ಬಿಳಿ, ಹಸಿರು ಬಣ್ಣದಿಂದ ನಕ್ಷೆಗೆ ಅಲಂಕಾರ ಮಾಡಿ ಸಂತಸಪಟ್ಟಿದ್ದಾರೆ. ಜೊತೆಗೆ ನಕ್ಷೆಯೊಳಗಡೆ ರಾಯಣ್ಣ ಭಾವಚಿತ್ರವಿಟ್ಟು ದೇಶಭಕ್ತಿಯನ್ನು ಮೆರೆದಿದ್ದಾರೆ.

    ಕಳೆದ ಮೂರು ತಿಂಗಳಲ್ಲಿ ಕಬ್ಬು ಕಟಾವು ಮಾಡುವುದರಲ್ಲಿ ತೊಡಗಿದ್ದ ಯುವಕರು, ಒಟ್ಟು 20,151 ಟನ್ ಕಬ್ಬು ಕಟಾವು ಮಾಡಿ ಸಾಧನೆಗೈದಿದ್ದಾರೆ.ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ನನ್ನು ಪೊಲೀಸರ ವಶದಿಂದ ಬಿಡಿಸಲು ಯತ್ನ – ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಅಮನ್ ಸಾವೊ!

  • ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

    ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

    ವಿಜಯಪುರ: ಕೃಷಿ ಹೊಂಡದಲ್ಲಿ (Farm Pond) ಮುಳುಗಿ ತಾಯಿ ಹಾಗೂ ಇಬ್ಬರು ಮಕ್ಕಳ ಸಾವನ್ನಪ್ಪಿದ ಘಟನೆ ದೇವರಹಿಪ್ಪರಗಿ (Devara Hipparagi) ತಾಲೂಕಿನ ಹರನಾಳ ಗ್ರಾಮದಲ್ಲಿ ಘಟನೆ ನಡೆದಿದೆ.

    ಗೀತಾ ಬಡಗಿ (28) ಇಬ್ಬರು ಗಂಡು ಮಕ್ಕಳಾದ ಶ್ರವಣ (6) ಶರಣ (4) ಸಾವನ್ನಪ್ಪಿದ್ದಾರೆ. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿ ಅವರ ಜಮೀನಿನಲ್ಲಿದ್ದ ಕೃಷಿ ಹೊಂಡದ ಬಳಿ ಮಕ್ಕಳೊಂದಿಗೆ ತೆರಳಿದ್ದಾಗ ಮಕ್ಕಳೊಂದಿಗೆ ಕಾಲು ಜಾರಿ ಗೀತಾ ಬಿದ್ದಿದ್ದಾರೆ. ಆಗ ಮಕ್ಕಳ ಗೀತಾ ಜೊತೆ ಹೊಂಡಕ್ಕೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.  ಇದನ್ನೂ ಓದಿ: ಹೊಸ ವರ್ಷದಂದೇ ಮನೆಯಲ್ಲೇ ನೇಣು ಬಿಗಿದು ಯುವತಿ ಆತ್ಮಹತ್ಯೆ

     

    ಗಂಡನ ಜೊತೆಗೆ ಜಗಳವಾಡಿ ತವರಿಗೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸದ್ಯ ಮೂವರ ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

    ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

    ವಿಜಯಪುರ: ಜಾತ್ರಾ ರಥೋತ್ಸವದ (Rathotsava) ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ (Youth) ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿ (Devara Hipparagi) ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

    ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ: ಅಸ್ಸಾಂ ಸಿಎಂ ಘೋಷಣೆ

    ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ; 2 ಗುಂಪಿನ ನಡುವೆ ಮಾರಾಮಾರಿ

  • ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    ಸಿಗರೇಟ್ ಹೊಗೆ ವಿಚಾರಕ್ಕೆ ಮಾರಾಮಾರಿ – ಸಂಧಾನ ಮಾಡೋದಾಗಿ ಹೇಳಿ ಬಿಜೆಪಿ ಮುಖಂಡನಿಂದ ಥಳಿತ?

    – ಪೈಪ್, ಕೋಲು ಬಳಸಿ ಹಲ್ಲೆ

    ವಿಜಯಪುರ: ಸಿಗರೇಟ್ ಹೊಗೆ ವಿಚಾರದಲ್ಲಿ ನಾಲ್ವರ ಮಧ್ಯೆ ಗಲಾಟೆ ನಡೆದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ದಾಬಾದಲ್ಲಿ ನಡೆದಿದೆ. ಫೆಬ್ರುವರಿ 22ರ ರಾತ್ರಿ ಗಲಾಟೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಸತೀಶ್ ಬೂದಿಹಾಳ ಮತ್ತು ಈಶ್ವರ್ ಸವದಿ ಸಿಗರೇಟ್ ಸೇದಿ ದಿಲೀಪ್ ಚವ್ಹಾಣ್, ಮಹಾಂತೇಶ್ ಚವ್ಹಾಣ್ ಮುಂದೆ ಹೊಗೆ ಬಿಟ್ಟಿದ್ದಾರೆ. ಇದೇ ವಿಚಾರಕ್ಕೆ ನಾಲ್ವರ ಮಧ್ಯೆ ದಾಬಾದಲ್ಲಿ ಗಲಾಟೆ ನಡೆದಿದೆ. ಈ ಸಂಬಂಧ ದೇವರ ಹಿಪ್ಪರಗಿ ಠಾಣೆಗೆ ದೂರು ಸಲ್ಲಿಸಲು ದಿಲೀಪ್, ಮಹಾಂತೇಶ್ ಮುಂದಾಗಿದ್ದರು. ಈ ವೇಳೆ ಠಾಣೆಗೆ ಬಂದ ಬಿಜೆಪಿ ಮುಖಂಡ ರಮೇಶ್ ಮಸಬಿನಾಳ ಸಂಧಾನ ಮಾಡಿಸೋದಾಗಿ ಹೊರ ಕರೆತಂದ ಹಲ್ಲೆ ನಡೆಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.

    ಹಲ್ಲೆಗೊಳಗಾದ ದಿಲೀಪ್ ಮತ್ತು ಮಹಾಂತೇಶ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ. ಅಲ್ಲಿಗೆ ಬಂದ ಆರು ಜನರ ಗುಂಪು ಪೈಪ್, ಕೋಲು, ಕ್ಯಾನ್ ಬಳಸಿ ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ಆಸ್ಪತ್ರೆಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಇಬ್ಬರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

    ಫೆಬ್ರವರಿ 22ರಂದು ದೂರು ನೀಡಿದ್ರೂ ಪೊಲೀಸರು ಆರೋಪಿಗಳನ್ನ ಬಂಧಿಸಿಲ್ಲ. ರಮೇಶ್ ಮಸಬಿನಾಳ ಒತ್ತಡದಿಂದಾಗಿ ಪೊಲೀಸರು ಆರೋಪಿಗಳ ಬಂಧನಕ್ಕೆ ಮುಂದಾಗುತ್ತಿಲ್ಲ ಎಂದು ಹಲ್ಲೆಗೊಳಗಾದ ಮಹಾಂತೇಶ್, ದಿಲೀಪ್ ಪೋಷಕರು ಆರೋಪಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಇಲ್ಲದಿದ್ದg ಪೊಲೀಸ್ ಠಾಣೆ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರಗೆ ಕೊರೊನಾ

    ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರಗೆ ಕೊರೊನಾ

    ವಿಜಯಪುರ: ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಶಾಸಕರು ಫೇಸ್‍ಬುಕ್ ಮೂಲಕ ಕಾರ್ಯಕರ್ತರಿಗೆ ವಿಷಯ ತಿಳಿಸಿದ್ದು, ತಮ್ಮ ಸಂಪರ್ಕಕ್ಕೆ ಬಂದಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

    ಶಾಸಕರ ಪೋಸ್ಟ್: ಆತ್ಮೀಯ ದೇವರಹಿಪ್ಪರಗಿ ಮತಕ್ಷೇತ್ರದ ನನ್ನ ಹಿತೈಸಿ ಬಂಧುಗಳು, ಸಾರ್ವಜನಿಕರಲ್ಲಿ ನನ್ನ ವಿನಂತಿ. ದಿನಾಂಕ 14/08/2020 ರಂದು ನನ್ನ ಆರೋಗ್ಯ ತಪಾಷಣೆ ಮಾಡಿಸಲಾಗಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ನಾನು ಈಗಾಗಲೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವೆ. ನನ್ನ ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ ಯಾರೂ ಆತಂಕ ಪಡುವ ಅಗತ್ಯವಿಲ್ಲ.

    ಆದಷ್ಡು ಬೇಗನೆ ಗುಣಮುಖನಾಗಿ ಕ್ಷೇತ್ರದ ಸೇವೆಗೆ ಮರಳುತ್ತೇನೆ. ದಯವಿಟ್ಟು ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ತಪಾಷಣೆ ಮಾಡಿಕೊಳ್ಳಲು ಕೋರಿಕೆ. ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿಯೇ ಇರಬೇಕು ಸಾಧ್ಯವಾದಷ್ಟು ಕೊರೊನಾ ಮಹಾಮಾರಿ ತೊಲಗಿಸಲು ಸಹಕರಿಸಬೇಕು ಎಂದು ಬರೆದುಕೊಂಡಿದ್ದಾರೆ.