Tag: Devaraj

  • ಮಂಸೋರೆ ಹೊಸ ಸಿನಿಮಾ: ‘ದೂರ ತೀರ ಯಾನಕ್ಕೆ’ ಹೊರಟ ನವ ಜೋಡಿ

    ಮಂಸೋರೆ ಹೊಸ ಸಿನಿಮಾ: ‘ದೂರ ತೀರ ಯಾನಕ್ಕೆ’ ಹೊರಟ ನವ ಜೋಡಿ

    ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ (Devaraj R) ನಿರ್ಮಾಣದ ಹಾಗೂ ಹರಿವು, ನಾತಿಚರಾಮಿ, ಆಕ್ಟ್ 1978,  19.20.21 ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ (Mansore) ನಿರ್ದೇಶಿಸುತ್ತಿರುವ ಮುಂದಿನ ಚಿತ್ರ ‘ದೂರ ತೀರ ಯಾನ (Doora Teera Yaana)’. ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ನನ್ನ ಹಿಂದಿನ ಚಿತ್ರಗಳನ್ನು ನೀವು ನೋಡಿದ್ದೀರಾ. ಅದನ್ನು ಮೀರಿಸುವ ಪ್ರಯತ್ನ “ದೂರ ತೀರ ಯಾನ” ಎಂದು ಮಾತನಾಡಿದ ನಿರ್ದೇಶಕ ಮಂಸೋರೆ, ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಅವರ ನಿರೀಕ್ಷೆಗಳು ಸಾಕಷ್ಟಿದೆ. ಹೀಗೆ ನಾವು ಬದಲಾದ ಪರಿಸ್ಥಿತಿಗೆ ಹೊಂದುಕೊಂಡು‌,‌ ಅವರಿಗೆ ಬೇಕಾದ ರೀತಿಯ ಸಿನಿಮಾ ಮಾಡಬೇಕು. ಆ ನಿಟ್ಟಿನಲ್ಲಿ‌ ಈಗ ನಾನು ಮಾಡಲು ಹೊರಟಿರುವ ಸಿನಿಮಾ “ದೂರ ತೀರ ಯಾನ”. ಇದೊಂದು ದಾರಿಯಲ್ಲಿ ಸಾಗುತ್ತಾ ನಡೆಯುವ ಪ್ರೇಮಕಥೆ. ಚಿತ್ರದ ಮೊದಲ ಹತ್ತು ನಿಮಿಷ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ. ಉಳಿದೆಲ್ಲಾ ದಾರಿಯಲ್ಲಿ ಸಾಗುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ – ಹುಡುಗಿ ಹೊಸರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆಯೂ ಹೌದು. ಈಗಾಗಲೇ ಹಿಂದಿ ಸೇರಿದಂತೆ ಅನೇಕ ಭಾಷೆಗಳ ವೆಬ್ ಸಿರೀಸ್ ಗಳಲ್ಲಿ ಹಾಗೂ ನನ್ನ ನಿರ್ದೇಶನದ ” ಆಕ್ಟ್ 1978″ ಚಿತ್ರದಲ್ಲಿ ಸಣ್ಣ ಪಾತ್ರದ ಮೂಲಕ ಗುರುತಿಸಿಕೊಂಡಿದ್ದ ನನ್ನ ಕಾಲೇಜು ಗೆಳೆಯ ವಿಜಯ್ ಕೃಷ್ಣ ನಾಯಕನಾಗಿ, “ರುದ್ರ ಗರುಡ ಪುರಾಣ” ಚಿತ್ರದ ಖ್ಯಾತಿಯ ಪ್ರಿಯಾಂಕ ಕುಮಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಬೇರೆ ಪಾತ್ರಗಳು ಇರುತ್ತದೆ. ಮುಂದೆ ಅದರ ಬಗ್ಗೆ ತಿಳಿಸುತ್ತೇನೆ. “ದೂರ ತೀರ ಯಾನ” ದಲ್ಲಿ ಬಕೇಶ್ ಹಾಗೂ ಕಾರ್ತಿಕ್ ಸಂಗೀತ ಸಂಯೋಜಿಸುತ್ತಿರುವ ಆರು ಹಾಡುಗಳಿರುತ್ತದೆ‌. ಶೇಖರ್ ಚಂದ್ರ ಛಾಯಾಗ್ರಹಣ, ನಾಗೇಂದ್ರ ಕೆ ಉಜ್ಜನಿ ಸಂಕಲನವಿರುವ ಈ ಚಿತ್ರಕ್ಕೆ ಚೇತನ ತೀರ್ಥಹಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ. ಸೆಪ್ಟೆಂಬರ್ ನಿಂದ ಚಿತ್ರೀಕರಣ ಆರಂಭವಾಗಲಿದೆ.  ಟೈಟಲ್ ಟೀಸರ್ ಗೆ ಡಾಲಿ ಧನಂಜಯ ಧ್ವನಿ ನೀಡಿದ್ದಾರೆ ಎಂದು ತಿಳಿಸಿದರು.

    ತುಂಬಾ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ಗೆಳೆಯ ಮಂಸೋರೆ ಒಂದೊಳ್ಳೆ ಕಥೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕ ವಿಜಯಕೃಷ್ಣ. “ರುದ್ರ ಗರುಡ ಪುರಾಣ” ದ ನಂತರ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈ ಚಿತ್ರದಲ್ಲಿ ಆ ಪಾತ್ರ ಸಿಕ್ಕಿದೆ ಎಂದರು ನಾಯಕಿ ಪ್ರಿಯಾಂಕ ಕುಮಾರ್.

    ನಿರ್ಮಾಪಕ ದೇವರಾಜ್, ಸಂಗೀತ ನಿರ್ದೇಶಕರಾದ ಬಕೇಶ್ – ಕಾರ್ತಿಕ್, ಛಾಯಾಗ್ರಾಹಕ ಶೇಖರ್ ಚಂದ್ರ ಮುಂತಾದ ಚಿತ್ರತಂಡದ ಸದಸ್ಯರು ಹಾಗೂ ಸತ್ಯ ಹೆಗಡೆ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಶಿಕ್ಷಣ ವ್ಯವಸ್ಥೆಯ ‘ಸ್ಕ್ಯಾಮ್’ ಬಗ್ಗೆ ತಿಳಿಸಲಿದೆ ರಂಜನ್ ನಟನೆಯ ಚಿತ್ರ

    ಶಿಕ್ಷಣ ವ್ಯವಸ್ಥೆಯ ‘ಸ್ಕ್ಯಾಮ್’ ಬಗ್ಗೆ ತಿಳಿಸಲಿದೆ ರಂಜನ್ ನಟನೆಯ ಚಿತ್ರ

    ನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ ‘scam 1770’ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೈಲರ್  (Trailer)ಬಿಡುಗಡೆಯಾಯಿತು.

    ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಖ್ಯಾತಿಯ ರಂಜನ್ (Ranjan) ನಟಿಸಿದ್ದಾರೆ.  ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದು ಹೀಗೆ.

    ಪ್ರಸ್ತುತ ಶಿಕ್ಷಣ ವ್ಯವಸ್ಥೆ ಕುರಿತಾದ ಚಿತ್ರ ‘SCAM 1770’. ಶಿಕ್ಷಣ ಇಂದು ವ್ಯವಹಾರ ಆಗಿಹೋಗಿದೆ‌. ಆ ರೀತಿ ಆಗಬಾರದು.  ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ಆದರೆ ಅಂತಹ ವಿದ್ಯಾಭ್ಯಾಸ ಇಂದು ಬಡವರಿಗೆ ಹಾಗೂ ಮಧ್ಯಮವರ್ಗದ ಜನರಿಗೆ ದುಬಾರಿಯಾಗಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿನ ನ್ಯೂನ್ಯತೆಗಳನ್ನು ತೋರಿಸುವ ಪ್ರಯತ್ನವನ್ನು ನಮ್ಮ ಚಿತ್ರದಲ್ಲಿ ಮಾಡಿದ್ದೇವೆ. ವಿದ್ಯಾರ್ಥಿಗಳು ಹಾಗೂ ಪೋಷಕರು ತಪ್ಪದೇ ನೋಡಬೇಕಾದ ಸಿನಿಮಾವಿದು. ಮೊದಲಿನಿಂದಲೂ ಉತ್ತಮ ಸದಭಿರುಚಿಯ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ನಿರ್ಮಾಪಕ ದೇವರಾಜ್ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ನಿರ್ದೇಶಕ ವಿಕಾಸ್ ಪುಷ್ಪಗಿರಿ.

    ನಾನು ಕಾಂತಾರ ಸಿನಿಮಾ ಸಂದರ್ಭದಲ್ಲಿ ನಿರ್ದೇಶನದ ತಂಡದಲ್ಲಿ ಕೆಲಸ ಮಾಡುತ್ತಿದ್ದೆ. ಫೋನ್ ಬಳಸುವ ಹಾಗಿರಲಿಲ್ಲ. ಆಗ ಈ ಚಿತ್ರತಂಡದವರು ನನ್ನನ್ನು ಸಂಪರ್ಕಿಸಲು ಪ್ರಯತ್ನ ಮಾಡುತ್ತಿರುವ ವಿಷಯ ಸ್ನೇಹಿತನಿಂದ ತಿಳಿಯಿತು. ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದಲ್ಲಿ ದಡ್ಡ ಪ್ರವೀಣನ ಪಾತ್ರ ಮಾಡಿದ್ದೆ. ಇದರಲ್ಲಿ ಜಾಣನ ಪಾತ್ರ ಕೊಟ್ಟಿದ್ದಾರೆ. ಶಿಕ್ಷಣದ ಕುರಿತಾದ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ ತಿಳಿಸಿದರು ನಾಯಕ ರಂಜನ್.

    ನಾಯಕಿ ನಿಶ್ಚಿತ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಹರಿಣಿ, ನಾರಾಯಣಸ್ವಾಮಿ, ನಟನ ಪ್ರಶಾಂತ್, ರಾಘು ಶಿವಮೊಗ್ಗ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಹಾಗೂ ನಿರ್ದೇಶಕರೊಂದಿಗೆ ಚಿತ್ರಕಥೆ ಬರೆದಿರುವ ಶಂಕರ್ ರಾಮನ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

  • ಮಧುರಕಾವ್ಯ ಟ್ರೈಲರ್ ರಿಲೀಸ್ ಮಾಡಿದ ಡೈನಾಮಿಕ್ ಸ್ಟಾರ್ ದೇವರಾಜ್

    ಮಧುರಕಾವ್ಯ ಟ್ರೈಲರ್ ರಿಲೀಸ್ ಮಾಡಿದ ಡೈನಾಮಿಕ್ ಸ್ಟಾರ್ ದೇವರಾಜ್

    ಒಂದೊಳ್ಳೆ ಪ್ರಯತ್ನ ಮಾಡಿದಾಗ ಒಳ್ಳೆಯ ಮನಸುಗಳೂ ಕೈಜೋಡಿಸುತ್ತವೆ. ಆಯುರ್ವೇದ ಚಿಕಿತ್ಸೆಯ ಅಳಿವು ಉಳಿವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲೆಂದೇ  ಚಲನಚಿತ್ರ ನಿರ್ದೇಶನ ಮಾಡಿರುವ ಮಧುಸೂದನ್ ಅವರಿಗೆ ಹಿರಿಯನಟ ಡೈನಾಮಿಕ್ ಸ್ಟಾರ್ ದೇವರಾಜ್ (Devaraj) ಸಹಕಾರ ನೀಡಿದ್ದಾರೆ. ಆಯುರ್ವೇದದ ಪ್ರಾಮುಖ್ಯತೆಯನ್ನು  ಜನರಿಗೆ ತಿಳಿಸಲೆಂದೇ ಸ್ವತಃ  ಆಯುರ್ವೇದ ವೈದ್ಯರಾದ  ಮಧುಸೂದನ್ ಅವರು ‘ಮಧುರಕಾವ್ಯ’ (Madhurakavya) ಎಂಬ ಚಲನಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ, ಜೊತೆಗೆ ಪ್ರಮುಖ ಪಾತ್ರದಲ್ಲೂ ಸಹ ಅಭಿನಯಿಸಿದ್ದಾರೆ.

    ಈ ಚಿತ್ರದ ಟ್ರೈಲರ್ (Trailer) ಬಿಡುಗಡೆ ಮಾಡಿ ನಂತರ ಮಾತನಾಡಿದ  ದೇವರಾಜ್,  ‘ಎಲ್ಲೂ ಸುಳಿವನ್ನು ಬಿಟ್ಟುಕೊಡದೆ ಟ್ರೈಲರನ್ನು ಇಂಟ್ರಸ್ಟಿಂಗ್ ಆಗಿ ಮಾಡಿದ್ದಾರೆ. ನಿರ್ದೇಶಕರು ಆಯುರ್ವೇದ ಡಾಕ್ಟರ್ ಅಂತ ಕೇಳಿ ತುಂಬಾ ಸಂತೋಷವಾಯಿತು. ಕಥೆ ಬಗ್ಗೆ ಕೇಳಿದೆ, ನಿಜಕ್ಕೂ ಒಳ್ಳೆಯ ಆಲೋಚನೆ. ಅಲೋಪತಿ ಬಗ್ಗೆ ಮುಂಚೆ ಅದೆಷ್ಟು ನಂಬಿಕೆ ಇತ್ತು. ಅದೀಗ ಕಡಿಮೆಯಾಗ್ತಾ ಇದೆ. ಆಯುರ್ವೇಧ ಬಗ್ಗೆ ಕುತೂಹಲ ಜಾಸ್ತಿಯಾಗಿದೆ. ಜನ ಕೂಡ ಅತ್ತ ವಾಲಿದ್ದಾರೆ‌. ಇವರ ಇಡೀ ಫ್ಯಾಮಿಲಿ ನಾಟಿ ವೈದ್ಯರು ಅಂತ ಗೊತ್ತಿರಲಿಲ್ಲ. ಅದನ್ನೇ ಮುಂದುವರೆಸಿಕೊಂಡು ಹೋಗಿ’ ಎಂದು ಶುಭ ಹಾರೈಸಿದರು. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ನಾಯಕ ಕಂ ನಿರ್ದೇಶಕ ಮಧುಸೂದನ್ (Madhusudan) ಮಾತನಾಡುತ್ತಾ, ‘ನಮ್ಮ ಚಿತ್ರಕ್ಕೆ ಹಾರೈಸಲು ದೇವರಾಜ್ ಅವರು ಬಂದಿರೋದು ನನ್ನ ಅದೃಷ್ಟ. ಒಳ್ಳೆಯ ಉದ್ದೇಶಕ್ಕೆ ಯಾವಾಗಲೂ ಪ್ರೋತ್ಸಾಹ ಇದೆ ಅಂತ ಗೊತ್ತಾಯ್ತು. ಆ ದೇವರು ನನ್ನನ್ನು ಸಿನಿಮಾ ಮಾಡುವ ಲೆವೆಲ್ ಗೆ ತಂದಿದ್ದಾರೆ. ಜೀವಭಯ ಎಲ್ಲರಿಗೂ ಇರುತ್ತೆ. ಮಾತ್ರೆಗಳನ್ನು ತಿಂದರೆ ಏನಾಗಿತ್ತೋ ಅಂತ ಭಯ ಇದೆ. ಹಣಕ್ಕೋಸ್ಕರ ಕಂಪನಿಗಳು ಜನರನ್ನು ಯಾವರೀತಿ ಮೋಸಪಡಿಸುತ್ತಾರೆ ಅಂತ ನಮ್ಮ ಚಿತ್ರದಲ್ಲಿ ಹೇಳಿದ್ದೇವೆ. ಆಯುರ್ವೇದದಲ್ಲಿ ಸರ್ವರೋಗಗಳಿಗೂ ಪರಿಹಾರವಿದೆ. ಹಣ ಎಂಬುದನ್ನು ಬದಿಗಿಟ್ಟು ಸಮಾಜಸೇವೆ ಅಂತ ಈ ಸಿನಿಮಾ ಮಾಡಿದ್ದೇವೆ. ಎಲ್ಲರೂ ಬಂದುನೋಡಿ ತಿಳಿದುಕೊಳ್ಳಲಿ ಅನ್ನುವುದೇ ನಮ್ಮ ಉದ್ದೇಶ. ಬೆಸ್ಟ್ ಫುಡ್ ಈಸ್ ಬೆಸ್ಟ್ ಮೆಡಿಸಿನ್. ನಮ್ಮ ಬಹುತೇಕ ಕಾಯಿಲೆಗಳಿಗೆ ಹಿತ್ತಲ ಗಿಡದಲ್ಲೇ ಮದ್ದಿದೆ. ಹಿತ್ತಲ ಗಿಡವನ್ನು ಹೇಗೆ ಬಳಸಿಕೊಳ್ಳಬೇಕು. ಅಲ್ಲದೆ ಒತ್ತಡದಿಂದಲೇ ರೋಗಗಳು ಹೇಗೆ ಹೆಚ್ಚಾಗುತ್ತವೆ ಎಂಬುದನ್ನು ಚಿತ್ರದಲ್ಲಿ ಹೇಳಿದ್ದೇವೆ. ಆಹಾರಕ್ಕೆ ಮೀರಿದ ಔಷಧಿ ಬೇರೊಂದಿಲ್ಲ. ಹಣ ಮಾಡಿಕೊಳ್ಳಲು ನಿಮ್ಮ ಜೀವಕ್ಕೆ ಕೈಹಾಕ್ತಿದ್ದಾರೆ’ ಎಂದರು.

    ಅಲೋಪಥಿ ವೈದ್ಯರು ಹಣದಾಸೆಗಾಗಿ ನಾಟಿ ವೈದ್ಯ ಪದ್ದತಿಯನ್ನು ಹೇಗೆಲ್ಲಾ ಹತ್ತಿಕ್ಕುತ್ತಿದ್ದಾರೆ, ಪಾರಂಪರಿಕವಾಗಿ ಜನಸೇವೆ ಮಾಡಿಕೊಂಡು ಬಂದಿರುವ ನಾಟಿ ವೈದ್ಯರನ್ನು ಯಾವರೀತಿ  ತುಳಿಯುತ್ತಿದ್ದಾರೆ ಎಂಬುದನ್ನೂ  ಚಿತ್ರದಲ್ಲಿ ಹೇಳಲಾಗಿದೆ. ಉಡುಪಿ, ಮಂಗಳೂರು, ಶಿರಸಿ ಸುತ್ತಮುತ್ತ ಚಿತ್ರೀಕರಣ ನಡೆಸಿದ್ದಾರೆ.

     

    ಮಧುಸೂದನ್ ಕ್ಯಾತನಹಳ್ಳಿ ಅವರೇ ಈ ಚಿತ್ರಕ್ಕೆ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.  ಚಿತ್ರದಲ್ಲಿ ನಾಯಕಿಯ ಪಾತ್ರವಿಲ್ಲ.  ನಾಯಕನ ತಾಯಿಯಾಗಿ ರಂಗಭೂಮಿ ನಟಿ ಯಶೋಧ ಅವರು ಕಾಣಿಸಿಕೊಂಡಿದ್ದು, ಖಳನಾಯಕನಾಗಿ ರಾಜಕುಮಾರ್ ನಾಯಕ್ ನಟಿಸಿದ್ದಾರೆ. ಸತೀಶ್ ಮೌರ್ಯ ಅವರ ಸಂಗೀತ ಸಂಯೋಜನೆಯ 4 ಹಾಡುಗಳು ಚಿತ್ರದಲ್ಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಧಿಕಾ ಕುಮಾರಸ್ವಾಮಿ ಸಪ್ತಭಾಷೆಗಳ ಸಿನಿಮಾ ನಾಯಕಿ

    ರಾಧಿಕಾ ಕುಮಾರಸ್ವಾಮಿ ಸಪ್ತಭಾಷೆಗಳ ಸಿನಿಮಾ ನಾಯಕಿ

    ಕೆಲ ತಿಂಗಳ ಗ್ಯಾಪ್ ಬಳಿಕ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ ರಾಧಿಕಾ ಕುಮಾರಸ್ವಾಮಿ (Radhika Kumaraswamy). ಇವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ‌.

    ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ  ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ. ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ (M. Sashidhar)  ವಿ, ಎಫ್ ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ ‘ಘಾರ್ಗ’ ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

    ಅಜಾಗ್ರತ ಒಂದು ಸೈಕಾಲಜಿಕಲ್  ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ.  ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್ (Devaraj), ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಹಾಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್,  ಕಾಲಿವುಡ್ ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆ ಯಲ್ಲಿ ಚಿತ್ರೀಕರಿಸಿ, ಅವರವರಭಾಷೆ ಯಲ್ಲೇ  ಅಜಾಗ್ರತ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸಿದೆ.

  • ‘ಸಲಾರ್’ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡದ ಸ್ಟಾರ್ ನಟ

    ‘ಸಲಾರ್’ ಸಿನಿಮಾದಲ್ಲಿ ಮತ್ತೊಬ್ಬ ಕನ್ನಡದ ಸ್ಟಾರ್ ನಟ

    ಪ್ರಶಾಂತ್ ನೀಲ್ (Prashant Neel) ನಿರ್ದೇಶನದ, ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ನಟನೆಯ ‘ಸಲಾರ್’ (Salar) ಸಿನಿಮಾದಲ್ಲಿ ಈಗಾಗಲೇ ಕನ್ನಡದ ನಟ ಪ್ರಮೋದ್ (Pramod) ನಟಿಸಿದ್ದಾರೆ ಎನ್ನುವುದನ್ನು ಎಕ್ಸ್ ಕ್ಲೂಸಿವ್ ಆಗಿ ಪಬ್ಲಿಕ್ ಟಿವಿ ಡಿಜಿಟಲ್ ಪ್ರಕಟಿಸಿತ್ತು. ಇದೀಗ ಮತ್ತೋರ್ವ ಕನ್ನಡದ ಖ್ಯಾತ ನಟ ಈ ಸಿನಿಮಾದಲ್ಲಿ ನಟಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ. ಈ ವಿಷಯವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

    ಖಳನಟನಾಗಿ, ನಾಯಕ ನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ದೇವರಾಜ್ (Devaraj), ಸಲಾರ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮಾಹಿತಿಯನ್ನು ಅವರೇ ಹಂಚಿಕೊಂಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿರುವ ಅವರು ‘ನಾನು ಸಲಾರ್ ಸಿನಿಮಾದಲ್ಲಿ ನಟಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಟ ಚೇತನ್‌ ಭಾರತದ ವೀಸಾ ರದ್ದು

    ದೇವರಾಜ್ ಅವರು ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಆ ಕುರಿತು ಏನೂ ಹೇಳಲಾರೆ ಎಂದಷ್ಟೇ ಉತ್ತರಿಸಿದ್ದಾರೆ. ಸಿನಿಮಾದ ಮೊದಲರ್ಧ ಕಡಿಮೆ ಅವಧಿಯಲ್ಲಿ ಕಾಣಿಸಿಕೊಳ್ಳುವೆ, ದ್ವಿತೀಯಾರ್ಧದಲ್ಲಿ ಹೆಚ್ಚು ಸಮಯ ತೆರೆಯ ಮೇಲೆ ಇರುತ್ತೇನೆ ಎಂದೂ ಅವರು ಮಾತನಾಡಿದ್ದಾರೆ.

    ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕನ್ನಡದ ಅನೇಕ ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಆ ಚಿತ್ರಕ್ಕಾಗಿ ಬಳಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್, ಸಂಕಲನಕಾರ ಹೀಗೆ ಅನೇಕ ಕನ್ನಡದ ತಂತ್ರಜ್ಞರೇ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಅನೇಕ ಕಲಾವಿದರು ಕೂಡ ಸಲಾರ್ ನಲ್ಲಿ ಕಾಣಿಸಿಕೊಂಡಿದ್ದಾರೆ.

  • ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ರಿಲೀಸ್

    ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ರಿಲೀಸ್

    ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಇದೀಗ  ಕುತೂಹಲ ಭರಿತ ಟ್ರೈಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹಾಗೂ ನಾದಬ್ರಹ್ಮ ಹಂಸಲೇಖ ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ನಿರ್ದೇಶಕ ಮಂಸೋರೆ ಮಾತನಾಡಿ ನೈಜ ಘಟನೆ ಆಧರಿಸಿದ ಸಿನಿಮಾವಿದು. ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಒಂಭತ್ತು ವರ್ಷದಿಂದ ಅಧ್ಯಯನ ಮಾಡಿ ಮಾಹಿತಿ ಕಲೆ ಹಾಕಿದ್ದೇನೆ. 2021ರಲ್ಲಿ ಘಟನೆಗೆ ಸಂಬಂಧಿಸಿದ ತೀರ್ಪು ಬಂದ ಮೇಲೆ ಸಿನಿಮಾ ಮಾಡಲು ನಿರ್ಧರಿಸಿದ್ವಿ. ನಾನು, ವೀರೇಂದ್ರ ಮಲ್ಲಣ್ಣ ಮತ್ತು ಸಂತೋಷ್ ಮೂರು ಜನ ಈ ಘಟನೆಗೆ ಸಂಬಂಧಿಸಿದ ಮಾಹಿತ ಕಲೆ ಹಾಕಿ ಸ್ಕ್ರಿಪ್ಟ್ ಮಾಡಿದ್ದೇವೆ. ಸಮುದಾಯದ ಒಬ್ಬ ಹುಡುಗನ ಹೋರಾಟದ ಕಥೆ ಇದು. ನಿರ್ಮಾಪಕರಾದ ದೇವರಾಜ್ ಹಾಗೂ ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಕಥೆ ಕೇಳಿ ಸಿನಿಮಾ ನಿರ್ಮಾಣಕ್ಕೆ ಒಪ್ಪಿಕೊಂಡ್ರು. ಎಲ್ಲರೂ ಸಿನಿಮಾ ನೋಡಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ಸಹ ನಿರ್ಮಾಪಕರಾದ ಸತ್ಯ ಹೆಗ್ಡೆ ಮಾತನಾಡಿ ಚಿತ್ರದ ಸ್ಕ್ರಿಪ್ಟ್ ತುಂಬಾ ಇಷ್ಟ ಆಯ್ತು. ರೆಗ್ಯೂಲರ್ ಸಿನಿಮಾ ಬಿಟ್ಟು ನೈಜ ಘಟನೆ ಆಧಾರಿತ ಹಾಗೂ ಪ್ರಯೋಗಾತ್ಮಕ ಸಿನಿಮಾ ಮಾಡೋಣ ಎಂದು ನಿರ್ಧರಿಸಿದ್ವಿ. ಒಂದೊಳ್ಳೆ ಕಥೆಗೆ, ಚಿತ್ರತಂಡಕ್ಕೆ ಸಪೋರ್ಟ್ ಆಗಿ ಇದ್ದೇನೆ ಎಂದು ತಿಳಿಸಿದ್ರು. ಇದನ್ನೂ ಓದಿ:`ಬಿಗ್ ಬಾಸ್’ ಖ್ಯಾತಿಯ ಅಕ್ಷತಾ ಕುಕ್ಕಿ ಮದುವೆ ಡೇಟ್ ಫಿಕ್ಸ್

    ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಮಾತನಾಡಿ ಈ ಚಿತ್ರದ ಟ್ರೇಲರ್ ನೋಡಿದ ಮೇಲೆ ಸಮಾಜಕ್ಕೆ, ಸರ್ಕಾರಕ್ಕೆ, ವ್ಯವಸ್ಥೆಗೆ ಬೇಕಾಗಿರುವ ಸಿನಿಮಾವನ್ನು ಮಂಸೋರೆ ಹಾಗೂ ಅವರ ತಂಡ ನೀಡಿದೆ ಎನ್ನಿಸುತ್ತೆ. ಮಂಸೋರೆ ಅವರ ಬರವಣಿಗೆ, ಮಾಡುವ ಸಿನಿಮಾಗಳು ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿವೆ. ಯುವ ಸಮೂಹಕ್ಕೆ, ಪ್ರಜ್ಞಾವಂತರಿಗೆ ಹಾಗೂ ಸಮಾಜದಲ್ಲಿ ಘಾತುಕ ಶಕ್ತಿಗಳಾಗಿ ಕೆಲಸ ಮಾಡಲು ಹೊರಡುತ್ತಿರುವವರು ಈ ಸಿನಿಮಾ ನೋಡಿದ ಮೇಲೆ ವಾಪಾಸ್ಸು ಸಾಮಾಜಿಕ ನ್ಯಾಯದ ಪರವಾಗಿ ಬರುದ ಸಾಧ್ಯತೆ ತುಂಬಾ ಇದೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡಕ್ಕೆ  ಬೆಂಬಲ ನೀಡಿ ಎಂದು ತಿಳಿಸಿದ್ರು.

    ನಾದಬ್ರಹ್ಮ ಹಂಸಲೇಖ ಮಾತನಾಡಿ ಸಂವಿಧಾನದ ಹಿನ್ನೆಲೆ ಇಟ್ಟುಕೊಂಡು ಟೈಟಲ್ ಇಟ್ಟಿರೋದು ಭಾರತೀಯ ಚಿತ್ರರಂಗದಲ್ಲಿ ಇದೆ ಮೊದಲು. ಇತ್ತೀಚೆಗೆ ಸಂವಿಧಾನವನ್ನು ರಕ್ಷಿಸಲು ಎಲ್ಲರೂ ಮುಂದೆ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಸಿನಿಮಾ ಎಂಬ ಪ್ರಚಂಡ ಮಾಧ್ಯಮದ ಮೂಲಕ ಮಂಸೋರೆ ‘19.20.21’ ಚಿತ್ರದ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತಿದ್ದಾರೆ. ಇದೇ ರೀತಿಯ ಇನ್ನಷ್ಟು ಉತ್ತಮ ಸಿನಿಮಾಗಳನ್ನು ಮಂಸೋರೆ ಮಾಡಲಿ ಎಂದು ನಿರ್ದೇಶಕರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಹಾರೈಸಿದ್ರು.

    ಚಿತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ. ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ.ಡಿ ಪಲ್ಲವಿ, ವಿಶ್ವಕರ್ಣ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ಡಿ.ಸಿ. ನಾಗೇಶ್ ನೆನಪಿನ ಪುಸ್ತಕ ರಿಲೀಸ್ ಮಾಡಲಿದ್ದಾರೆ ನಿರ್ದೇಶಕ ನಾಗಾಭರಣ

    ರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಾಳೆ ಸಿನಿಮಾ ಪತ್ರಿಕಾ ಛಾಯಾಗ್ರಾಹಕ ಡಿ.ಸಿ ನಾಗೇಶ್ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಪತ್ರಕರ್ತ ಚೇತನ್ ನಾಡಿಗೇರ ಸಂಪಾದನೆ ಮಾಡಿರುವ ‘ಜೀವಬಿಂಬ’ ಪುಸ್ತಕ (Book)  ಲೋಕಾರ್ಪಣೆ ಆಗಲಿದೆ. ಡಿ.ಸಿ ನಾಗೇಶ್ (DC Nagesh) ಕುರಿತಾದ ಪುಸ್ತಕ ಇದಾಗಿದ್ದು, ನಾಗೇಶ್ ಒಡನಾಡಿಗಳು ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಹಲವು ದಶಕಗಳ ಕಾಲ ಸಿನಿಮಾ ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರು ಡಿ.ಸಿ ನಾಗೇಶ್. ಕನ್ನಡದ ಬಹುತೇಕ ನಟ, ನಟಿಯರ ಫೋಟೋಗಳನ್ನು ಸೆರೆ ಹಿಡಿದ ಹೆಗ್ಗಳಿಕೆ ಇವರದ್ದು. ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ ನಾಗೇಶ್, ಹಿರಿಯ ಕಲಾವಿದರ ಜೊತೆ ಒಂದೊಳ್ಳೆ ಬಾಂಧವ್ಯವನ್ನು ಹೊಂದಿದ್ದವರು. ಅಲ್ಲದೇ, ಕಿರಿಯ ಸಿನಿಮಾ ಪತ್ರಕರ್ತರಿಗೆ ಮಾರ್ಗದರ್ಶಕರು ಆಗಿದ್ದವರು. ಕಳೆದ ವರ್ಷವಷ್ಟೇ ಅಗಲಿರುವ ಅವರ ನೆನಪಿನಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಇದನ್ನೂ ಓದಿ: ಕನ್ನಡಕ್ಕೆ ವಿಜಯ್ ಸೇತುಪತಿ: ಇನ್ನೂ ಕನ್ಫರ್ಮ್ ಆಗಿಲ್ಲ ಅಂತಿದೆ ಟೀಮ್

    ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ (Nagabharana), ಹಿರಿಯ ನಟ ದೇವರಾಜ್ (Devaraj), ನಟಿ ಭಾವನಾ ರಾಮಣ್ಣ (Bhavana Ramanna) ಮತ್ತು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಆಗಮಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ವೆಬ್ ಸೈಟ್ ಕೂಡ ಲೋಕಾರ್ಪಣೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ‘ಪ್ರಜಾರಾಜ್ಯ’ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

    ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ” ಪ್ರಜಾರಾಜ್ಯ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ.  ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ಹಾರೈಸಿದರು.

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ನಮ್ಮ ತಾತಂದಿರ ಕಾಲದಲ್ಲಿ ಸ್ವಾತಂತ್ರ್ಯ ಬಂದ ರಜತ ಮಹೋತ್ಸವ ಆಚರಿಸಿದರು. ನಮ್ಮ ತಂದೆಯ ಕಾಲದವರು ಸುವರ್ಣ ಮಹೋತ್ಸವ ಆಚರಣೆ ಮಾಡಿದರು. ನಾವು ಈಗ ‍ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಇಷ್ಟು ವರ್ಷವಾದರೂ ನಾವು ಯೋಚಿಸುವುದು ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು ಯಾರು ಅಂತ? ಆದರೆ ನಮಗೆ ಬೇಕಾದ ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ನಾವು ಯೋಚಿಸಿಯೇ ಇಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿರುವುದು ಆರ್ಥಿಕ ಸ್ವಾತಂತ್ರ್ಯದ ಬಗ್ಗೆ ಯೋಚಿಸಿ ಎಂದು.  ನಾವು ಅದರ ಬಗ್ಗೆ ಯೋಚಸುತ್ತಲೇ ಇಲ್ಲ. ಎಂಬ ಪ್ರಧಾನ ಅಂಶದೊಂದಿಗೆ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಈ ಚಿತ್ರವನ್ನು ನೋಡಿ, ದೇಶದ ಪ್ರಜೆಗಳಾಗಿ ನಮ್ಮ ಕರ್ತವ್ಯವೇನು? ಎಂದು ಎಲ್ಲರೂ ತಿಳಿಯಬಹುದು ಎಂದು ನಿರ್ಮಾಪಕ ಹಾಗು ನಟ ವರದರಾಜು ಚಿತ್ರದ ಕುರಿತು ಮಾಹಿತಿ ನೀಡಿದರು.

    ಉತ್ತಮ ಕಥೆಯುಳ್ಳ ಚಿತ್ರ, ಎಲ್ಲರ ಸಹಕಾರದಿಂದ ಉತ್ತಮವಾಗಿ ಬಂದಿದೆ. ನಾನು ಈ ಚಿತ್ರದಲ್ಲಿ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ – ನಾಯಕ ವಿಜಯ್ ಭಾರ್ಗವ. ಚಿತ್ರದಲ್ಲಿ ಐದು ಹಾಡುಗಳಿದೆ. ಯೋಗರಾಜ್ ಭಟ್, ನಾಗೇಂದ್ರ ಪ್ರಸಾದ್, ವಿಜಯ್ ಭಾರ್ಗವ  ಬರೆದಿರುವ ಹಾಡುಗಳನ್ನು ರಿಯಲ್ ಸ್ಟಾರ್ ಉಪೇಂದ್ರ, ವಿಜಯ್ ಪ್ರಕಾಶ್ ಮುಂತಾದ ಖ್ಯಾತ ಗಾಯಕರು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹೇಳಿದರು. ಇದನ್ನೂ ಓದಿ: ಸಂದೀಪ್ ಕಿಶನ್ ಜೊತೆ ʻಸೂರ್ಯಕಾಂತಿʼ ನಟಿ ರೆಗಿನಾ ಡೇಟಿಂಗ್

    ಚಿತ್ರದಲ್ಲಿ ನಟಿಸಿರುವ ದಿವ್ಯ, ಮೀಸೆ ಪ್ರಕಾಶ್, ಎಸ್ಕಾರ್ಟ್ ಶ್ರೀನಿವಾಸ್ , ಚಿಕ್ಕ ಹೆಜ್ಜಾಜಿ‌ ಮಹದೇವ್, ಅಮೂಲ್ಯ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ದೇಶಕ ಮಹೇಶ್ ಕುಮಾರ್, ಒಕ್ಕಲಿಗ ಸಂಘದ ನಿರ್ದೇಶಕರಾದ ಡಿ.ಕೆ.ರಮೇಶ್, ನಿರ್ಮಾಣ ನಿರ್ವಾಹಕ ರವಿಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭಕ್ಕೆ ಆಗಮಿಸಿ, ಚಿತ್ರಕ್ಕೆ ಶುಭ ಕೋರಿದರು.

    Live Tv
    [brid partner=56869869 player=32851 video=960834 autoplay=true]

  • ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಕನ್ನಡದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೈಕ್ಲೋನ್ ಹೊಡೆತಕ್ಕೆ ಸಿಕ್ಕು ತತ್ತರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ತಾವು ಎದುರಿಸಿದ ಸೈಕ್ಲೋನ್ ರಾಡಾರ್ ಸಿನಿಮಾದ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ಇದ್ದೇವೆ ಎನ್ನುವಂತೆ ಭಾಸವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ಮಾಪಕ ದೇವರಾಜ್.ಆರ್ ಕೂಡ ಇದ್ದರು ಎಂದು ಹೇಳಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿಅವರು, ‘ತುರ್ತು ಕೆಲಸದ ಮೇಲೆ ಚೆನ್ನೈಗೆ ಬಂದಿದ್ದೆ, ವಾಪಾಸ್ಸು ಬರಲು ಟಿಕೆಟ್ ಬುಕ್ ಆಗಿದ್ದ ವಿಮಾನ ರದ್ದಾದ ಕಾರಣ ನಾನು ನಮ್ಮ ನಿರ್ಮಾಪಕರು, ರಸ್ತೆಯ ಮೂಲಕ ಬೆಂಗಳೂರು ತಲುಪಲು ನಿರ್ಧರಿಸಿ ಚೆನ್ನೈ ಸಿಟಿಯಿಂದ ಒಂದು ಐವತ್ತು ಕಿಮೀ ಬಂದು ರಸ್ತೆ ಸಾಗಲು ಸಹ ತ್ರಾಸದಾಯಕವಾದ ಸೈಕ್ಲೋನ್ ನೋಡುತ್ತಾ ಕೂತಿರುವ ಕ್ಷಣ. ರಾಡಾರ್ ಚಿತ್ರದಲ್ಲಿ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ನಾವಿದ್ದೇವೆ ಎಂದು ತೋರಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಬರಹದ ಜೊತೆಗೆ ವಿಡಿಯೋ ಪೋಸ್ಟ್ ಮಾಡಿದ್ದು, ಅದನ್ನು ನೋಡಿದ ಹಲವರು ಇಂತಹ ಸಾಹಸವನ್ನು ಇನ್ನೊಮ್ಮೆ ಮಾಡಬೇಡಿ ಎಂದು ಪ್ರೀತಿಯಿಂದ ಗದರಿದ್ದಾರೆ. ಆ ಸೈಕ್ಲೋನ್ ನಿಂದ ಪಾರಾಗಿ ಬಂದಿರುವ ಮಂಸೋರೆ ಮತ್ತು ನಿರ್ಮಾಪಕರು ಸುರಕ್ಷಿತವಾಗಿ ಮನೆ ತಲುಪಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋ ವೀಕ್ಷಿಸಿದ ಹಲವರು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಸುರಕ್ಷಿತವಾಗಿ ಮನೆ ತಲುಪಿ ಎಂದು ಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ‘ಪ್ರಜಾರಾಜ್ಯ’ ಸಿನಿಮಾ ಮೂಲಕ ಪ್ರಜಾಪ್ರಭುತ್ವದ ಅರಿವು

    ‘ಪ್ರಜಾರಾಜ್ಯ’ ಸಿನಿಮಾ ಮೂಲಕ ಪ್ರಜಾಪ್ರಭುತ್ವದ ಅರಿವು

    ವೀರೇನ್ ಕ್ರಿಯೇಷನ್ಸ್ ಲಾಂಛನದಲ್ಲಿ ಡಾ.ವರದರಾಜು ಡಿ.ಎನ್ ನಿರ್ಮಿಸಿರುವ, ವಿಜಯ್ ಭಾರ್ಗವ್ ನಿರ್ದೇಶಿಸಿರುವ ಚಿತ್ರ “ಪ್ರಜಾರಾಜ್ಯ”. ಇತ್ತೀಚೆಗೆ ಈ ಚಿತ್ರದ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ವಿವರಣೆ ನೀಡಿದರು. ನಾನು ವೈದ್ಯ. ನರರೋಗ ತಜ್ಞನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಸಮಾಜದ ಕೆಲವು ವಿಷಯಗಳು ನನ್ನನ್ನು ಚಿತ್ರ ಮಾಡಲು ಪ್ರೇರೇಪಿಸಿತು. ಈ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಉತ್ತಮವಾದ ಶಿಕ್ಷಣ ಹಾಗೂ ಆರೋಗ್ಯ ಉಚಿತವಾಗಿ ಸಿಗಬೇಕು. ಅದನ್ನು  ಕೇಳುವ ಹಕ್ಕು ನಮಗಿದೆ.  ಏಕೆಂದರೆ ನಾವು ಸರ್ಕಾರಕ್ಕೆ ತೆರಿಗೆ ಕಟ್ಟಿರುತ್ತೇವೆ. ಶಿಕ್ಷಣ ವ್ಯವಸ್ಥೆ, ಆರೋಗ್ಯ ಸಮಸ್ಯೆ ಹಾಗೂ ರೈತರ ಕಷ್ಟಕಾರ್ಪಣ್ಯಗಳ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಪೇಂದ್ರ ಅವರ “ಉಪೇಂದ್ರ” ಚಿತ್ರ ನನಗೆ ಸ್ಪೂರ್ತಿ. ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಅಡಿಬರಹ ಈ ಚಿತ್ರಕ್ಕಿದೆ.

    ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ಮಾಣ ಮಾಡಿದ್ದೇನೆ. ವಿಜಯ್ ಭಾರ್ಗವ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟರಾದ ದೇವರಾಜ್, ನಾಗಾಭರಣ, ಸುಧಾರಾಣಿ, ಅಚ್ಯತಕುಮಾರ್ ತಬಲಾನಾಣಿ, ಸುಧಾ ಬೆಳವಾಡಿ, ಸಂಪತ್ ಮೈತ್ರೇಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ಇದು ನಾಯಕ ಪ್ರಧಾನ ಚಿತ್ರವಲ್ಲ. ಚಿತ್ರ ನೋಡಿದ ಪ್ರೇಕ್ಷಕನಿಗೆ ಈ ಚಿತ್ರ ಇಷ್ಟವಾಗಿ, ಆತನಿಗೆ ಹೌದು, ನಾವು ಈ ರೀತಿ ಬದಲಾಗಬೇಕು ಎನಿಸಿದರೆ ಆತನೇ ನಮ್ಮ ಚಿತ್ರದ ನಾಯಕ ಎಂದು ನಿರ್ಮಾಪಕ ವರದರಾಜ್ “ಪ್ರಜಾರಾಜ್ಯ” ಚಿತ್ರದ ಬಗ್ಗೆ ಸಂಪೂರ್ಣ ವಿವರ ನೀಡಿದರು. ಇದನ್ನೂ ಓದಿ:ಬಿಗ್‌ ಬಾಸ್‌ ಮನೆಯಲ್ಲಿ ಮತ್ತೆ ರೂಪೇಶ್ ರಾಜಣ್ಣ ಕಿರಿಕ್

    ಸರಿಸುಮಾರು ೪೦೦ ಕ್ಕೂ ಅಧಿಕ ಚಿತ್ರಗಳು ವರ್ಷಕ್ಕೆ ಬಿಡುಗಡೆಯಾಗುತ್ತಿದೆ. ನೋಡುಗರಿಗೆ ಬೇಕಾದ ರೀತಿಯಲ್ಲಿ ಸಿನಿಮಾ ಮಾಡುವವರು ಹೆಚ್ಚಾಗಿದ್ದಾರೆ. ಆದರೆ ಸಾಮಾಜಿಕ ಕಳಕಳಿಯಿಟ್ಟುಕೊಂಡು ತಮಗೆ ಅನಿಸಿದ್ದನ್ನು ಸಿನಿಮಾ ಮಾಡಿರುವ ಡಾಕ್ಟರ್ ವರದರಾಜ್ ಅವರ ಧೈರ್ಯ ನಿಜಕ್ಕೂ ಮೆಚ್ಚುವಂತದು. ಅವರಿಗೆ ಹಾಗೂ ತಂಡಕ್ಕೆ ಶುಭವಾಗಲಿ ಎಂದರು ನಾಗಾಭರಣ. ಈ ಚಿತ್ರದಲ್ಲಿ ನನ್ನದು ಆಟೋ ಡ್ರೈವರ್ ಪಾತ್ರ. ನನಗೆ ತಪ್ಪು ಅನಿಸಿದ್ದನ್ನು ನೇರವಾಗಿ ಹೇಳುವ ವ್ಯಕ್ತಿ ಕೂಡ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಟ ತಬಲನಾಣಿ.

    ನನ್ನ ಮೇಲೆ ಭರವಸೆಯಟ್ಟು ಇಂತಹ ಉತ್ತಮ ಕಥೆಯುಳ್ಳ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ದೇಶಕ ವಿಜಯ್ ಭಾರ್ಗವ್. ಚಿತ್ರದಲ್ಲಿ ನಟಿಸಿರುವ ಕೆ.ಜಿ.ಎಫ್ ತಾತ ಎಂದೆ ಖ್ಯಾತರಾಗಿರುವ ಕೃಷ್ಣೋಜಿರಾವ್ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಹಾಗೂ ನಿರ್ಮಾಣ ನಿರ್ವಾಹಕ ರವಿಶಂಕರ್ ಚಿತ್ರದ ಕುರಿತು ಮಾತನಾಡಿದರು. ಯೋಗರಾಜ್ ಭಟ್ ಹಾಗೂ ವಿ.ನಾಗೇಂದ್ರ ಪ್ರಸಾದ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. “ಕೆ.ಜಿ.ಎಫ್” ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ

    Live Tv
    [brid partner=56869869 player=32851 video=960834 autoplay=true]