Tag: deve gowda

  • ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ – ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

    ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ – ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಸಾಧ್ಯತೆ

    ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್ ಸಿದ್ಧತೆ ಆರಂಭಿಸಿದ್ದು, ಲೋಕಸಭೆ ಅಭ್ಯರ್ಥಿ ಆಯ್ಕೆ ಸಂಬಂಧ, ಜೆಡಿಎಸ್ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ನೇತೃತ್ವದಲ್ಲಿ ಜೆಪಿ ಭವನದಲ್ಲಿ ಇಂದು ಸಭೆ ನಡೆಯಲಿದೆ.

    ಸಚಿವರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸೀಟು ಹಂಚಿಕೆ, ಮೈತ್ರಿ ವಿಚಾರ ಕುರಿತು ಮುಖಂಡರ ಅಭಿಪ್ರಾಯವನ್ನ ಜೆಡಿಎಸ್ ವರಿಷ್ಠ ದೇವೇಗೌಡ ಸಂಗ್ರಹಿಸಲಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ : ಎಚ್‍ಡಿಡಿ

    ಇದೇ ವೇಳೆ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧೆ ಮಾಡುವ ವಿಚಾರ ಅಂತಿಮಗೊಳ್ಳುವ ಸಾಧ್ಯತೆ ಇದೆ. ಇನ್ನೂ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಬಿಡುಗಡೆಗೊಳಿಸಲು ಎಚ್.ವಿಶ್ವನಾಥ್ ಮನವಿ ಮಾಡಿದ್ದು, ಇದಕ್ಕೆ ದೇವೇಗೌಡರು ಒಪ್ಪುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನೀವೇ ಮಂದುವರಿಯಿರಿ ಎಂದು ವಿಶ್ವನಾಥ್ ಅವರಿಗೆ ದೇವೇಗೌಡರು ಸಲಹೆ ನೀಡುವ ಸಾಧ್ಯತೆಯೇ ಹೆಚ್ಚಿದೆ.

    ಈ ಹಿಂದೆಯೇ ಪ್ರಜ್ವಲ್ ರೇವಣ್ಣ ಕಳೆದ ಎಂಟು ವರ್ಷದಿಂದ ಹಾಸನ ಜಿಲ್ಲೆಯಲ್ಲಿ ಓಡಾಡುತ್ತಿದ್ದಾನೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಕ್ಷೇತ್ರವನ್ನ ಆತನಿಗೆ ಬಿಟ್ಟುಕೊಡುತ್ತೇನೆ ಎಂದು ಎಚ್.ಡಿ ದೇವೇಗೌಡ ಈ ಹಿಂದೆ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಪ್ರಧಾನಿ ದೇವೇಗೌಡರ ಫ್ಯಾಮಿಲಿಯ ಬಿಗ್ ನ್ಯೂಸ್!

    ಮಾಜಿ ಪ್ರಧಾನಿ ದೇವೇಗೌಡರ ಫ್ಯಾಮಿಲಿಯ ಬಿಗ್ ನ್ಯೂಸ್!

    ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬ ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಹೊಸ ವ್ಯಾಖ್ಯಾನ ಬರೆಯಲು ಹೊರಟಿದ್ದು, ಕುಟುಂಬದಲ್ಲಿ ರಾಜಕೀಯಾಸಕ್ತಿರುವ ಎಲ್ಲರನ್ನೂ ಪೊಲಿಟಿಷಿಯನ್ ಮಾಡಲು ಪ್ಲಾನ್ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆಗೆ ದೇವೇಗೌಡರು ಚಾಣಕ್ಯ ತಂತ್ರ ಹೆಣೆಯುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಈ ಕುಟುಂಬದಿಂದ ಲೋಕಸಭೆ ಚುನಾವಣಾ ಕಣಕ್ಕೆ ಮೂವರು ಸ್ಪರ್ಧೆ ಮಾಡುತ್ತಿದ್ದಾರೆ. ಮೂವರ ಪೈಕಿ ಮೊದಲನೇಯವರೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಇವರು ಈ ಹಿಂದೆ ರಾಜಕೀಯ ಸನ್ಯಾಸ ಕೈಗೊಳ್ಳುತ್ತೀನಿ ಎಂದು ಹೇಳಿದ್ದರು. ಆದರೆ ಈಗ ಮುಂಬರುವ ಲೋಕಸಭೆ ಸಮರದಲ್ಲಿ ಖುದ್ದು ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಲ್ಲಲಿದ್ದಾರೆ ಎನ್ನಲಾಗಿದೆ.

    ಸಿಎಂ ಕುಮಾರಸ್ವಾಮಿ 2014ರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಈಗ ಮಗ ಸೋತಿದ್ದ ಕ್ಷೇತ್ರದಲ್ಲಿ ಈ ಬಾರಿ ಕಣಕ್ಕೆ ಜಿಗಿಯಲಿದ್ದು, ಚಿಕ್ಕಬಳ್ಳಾಪುರದಲ್ಲಿ ಮಗನ ಸೋಲನ್ನೇ ಮೆಟ್ಟಿ ನಿಂತು ಜಯಿಸಲು ದೇವೇಗೌಡು ನಿರ್ಧಾರ ಮಾಡಿದ್ದಾರೆ. ದೇವೇಗೌಡರ ಸ್ಪರ್ಧೆಯಿಂದ ಕಾಂಗ್ರೆಸ್ಸಿನಲ್ಲಿ ಕುತೂಹಲ ಹುಟ್ಟಿಸಿದ್ದು, ಗೌಡರ ಸ್ಪರ್ಧೆಯಿಂದ ವೀರಪ್ಪ ಮೊಯ್ಲಿಗೆ ಟಿಕೆಟ್ ತಪ್ಪಿಸಲಾಗುತ್ತಾ?, ಗೌಡರ ಸ್ಪರ್ಧೆಗೆ ವೀರಪ್ಪ ಮೊಯ್ಲಿ ಸುಲಭವಾಗಿ ಒಪ್ಪಿಕೊಂಡು ಬಿಡ್ತಾರಾ? ಎನ್ನುವಂತಹ ಪ್ರಶ್ನೆ ಮೂಡಿದೆ. ಆದರೆ ದೇವೇಗೌಡರು ಚಿಕ್ಕಬಳ್ಳಾಪುರ ಟಿಕೆಟ್‍ಗೆ ಈಗಿನಿಂದಲೇ ಲೆಕ್ಕಾಚಾರ ಶುರುವಾಗಿದೆ ಎಂದ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಹಾಸನ ಮತ್ತು ಮಂಡ್ಯದಲ್ಲಿ ಮೊಮ್ಮಕ್ಕಳನ್ನು ಕಣಕ್ಕೆ ಇಳಿಸಲು ದೇವೇಗೌಡರು ನಿರ್ಧಾರ ಮಾಡಿದ್ದು, ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತು ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಒಕ್ಕಲಿಗ ಮತದಾರರು ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮೊಮ್ಮಕ್ಕಳನ್ನು ನಿಲ್ಲಿಸಲು ಗೌಡರು ಚಿಂತನೆ ಮಾಡಿದ್ದಾರೆ. ಈ ಮೂಲಕ ಮೊಮ್ಮಕ್ಕಳನ್ನು ಗೆಲ್ಲಿಸಿ, ತಾವೂ ಗೆದ್ದು ಸಂಸತ್ ಪ್ರವೇಶಕ್ಕೆ ದೇವೇಗೌಡರು ಲೆಕ್ಕಾಚಾರ ಹಾಕುತ್ತಿದ್ದಾರೆ ಎನ್ನಲಾಗಿದೆ.

    ಅಷ್ಟೇ ಅಲ್ಲದೇ ಇದರ ಆಚೆಗೂ ದೇವೇಗೌಡರು ರಾಜಕೀಯ ತಂತ್ರ ಹೆಣೆದಿದ್ದಾರೆ. ಇಬ್ಬರು ಸೊಸೆಯಂದಿರಿಗೂ ರಾಜ್ಯ ರಾಜಕೀಯದಲ್ಲಿ ಗಟ್ಟಿ ವೇದಿಕೆ ಹಾಕಿಕೊಡಲು ಪ್ಲಾನ್ ಮಾಡಿದ್ದು, ಸಿಎಂ ಕುಮಾರಸ್ವಾಮಿ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಫಿಕ್ಸ್ ಆಗಿದೆ. ಹಾಗಾಗಿ ರಾಮನಗರದಲ್ಲಿ ರಾಜಕೀಯ ಭವಿಷ್ಯ ಗಟ್ಟಿಗೊಳಿಸಿಕೊಳ್ಳಲು ದೇವೇಗೌಡರು ರಣತಂತ್ರ ರೂಪಿಸಿದ್ದಾರೆ.

    ಅನಿತಾ ಕುಮಾರಸ್ವಾಮಿ ಅಷ್ಟೇ ಅಲ್ಲ ಸಚಿವ ರೇವಣ್ಣರ ಪತ್ನಿ ಭವಾನಿ ರೇವಣ್ಣರಿಗೂ ರಾಜಕೀಯ ಪ್ರವೇಶಕ್ಕೆ ವೇದಿಕೆ ಮಾಡಿ ಕೊಡಲು ಗೌಡರು ಪ್ಲಾನ್ ಮಾಡಿದ್ದಾರೆ. ಮೊದಲ ಸೊಸೆಗೆ ರಾಜಕೀಯ ಅಸ್ತಿತ್ವ ಕೊಡಿಸಲು ಸೂಕ್ತ ಸನ್ನಿವೇಶಕ್ಕೆ ಕಾಯುತ್ತಿದ್ದಾರೆ. ಸದ್ಯ ಭವಾನಿ ರೇವಣ್ಣರಿಗೆ ರಾಜಕೀಯ ನೆಲೆ ಸಿಕ್ಕಿಬಿಟ್ಟರೆ ಗೌಡರ ಚಾಣಕ್ಯ ತಂತ್ರಕ್ಕೆ ಅಲ್ಪ ವಿರಾಮ ಸಿಗಲಿದೆ ಎಂಬುದಾಗಿ ತಿಳಿದುಬಂದಿದೆ.

    https://www.youtube.com/watch?v=0P2QdVxxhfM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

    ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

    ಮಂಗಳೂರು: ಉದ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪುತ್ರಿಯ ಮದುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ನಡೆದಿದೆ.

    ಮಂಗಳೂರು ನಗರ ಹೊರವಲಯದ ಉಳ್ಳಾಲದ ಸಮುದ್ರ ದಂಡೆಯಲ್ಲಿ ಫಾರೂಕ್ ಕಟ್ಟಿಸಿರುವ ನೂತನ ರೆಸಾರ್ಟ್ ಸ್ಯಾಂಡ್ ಬೀಚ್ ನಲ್ಲಿ ಮದುವೆ ಕಾರ್ಯ ನಡೆದಿದೆ. ಕೇರಳದ ಹುಡುಗನ ಜೊತೆಗಿನ ಮದುವೆ ಕಾರ್ಯ ಮೂರು ದಿನ ನಡೆಯಲಿದ್ದು, ಇಂದು ಕೂಡ ಗಣ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ.

    ಮದುವೆ ಗಣ್ಯರು ಬರುವ ಕಾರಣ ಮಂಗಳೂರಿನ ಐಷಾರಾಮಿ ಹೋಟೆಲ್ ಗಳನ್ನು ಮೂರು ದಿನಗಳ ಕಾಲ ತಿಂಗಳ ಮೊದಲೇ ಬುಕ್ ಮಾಡಲಾಗಿದೆ. ಸಚಿವ ಯು.ಟಿ. ಖಾದರ್ ಸ್ವ-ಕ್ಷೇತ್ರದಲ್ಲಿ ಫಾರೂಕ್ ಕಟ್ಟಿಸಿರುವ ರೆಸಾರ್ಟ್ ಈಗ ಜನಮನ ಸೆಳೆಯುವಂತಾಗಿದೆ.

    ಈ ಮದುವೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ, ಜೆಡಿಎಸ್ ವರುಷ್ಠ ದೇವೇಗೌಡ, ಪತ್ನಿ ಚನ್ನಮ್ಮ, ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್, ಸಚಿವ ಎಚ್.ಡಿ. ರೇವಣ್ಣ, ಪುತ್ರ ಪ್ರಜ್ವಲ್ ಮತ್ತು ಸಚಿವ ಬಸವರಾಜ್ ಹೊರಟ್ಟಿ, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದೀಪಾವಳಿ ಆದ್ಮೇಲೆ ವೇಷದವರು ಬರ್ತಾರೆ, ಆದ್ರೆ ಈ ಬಾರಿ ದಸರೆಗೆ ಬಂದಿದ್ದಾರೆ: ಸಿಟಿ ರವಿ

    ದೀಪಾವಳಿ ಆದ್ಮೇಲೆ ವೇಷದವರು ಬರ್ತಾರೆ, ಆದ್ರೆ ಈ ಬಾರಿ ದಸರೆಗೆ ಬಂದಿದ್ದಾರೆ: ಸಿಟಿ ರವಿ

    ಶಿವಮೊಗ್ಗ: ದೀಪಾವಳಿ ಆದ ಮೇಲೆ ವೇಷದವರು ಬರುತ್ತಾರೆ. ಆದರೆ ವೇಷ ತೊಟ್ಟವರು ಈಗ ದಸರಾ ವೇಳೆಗೆ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ.

    ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ವೇಳೆ ಮಾತನಾಡಿದ ಅವರು, ಇಂಥ ನೀಚ ಮುಖ್ಯಮಂತ್ರಿಯನ್ನು ನಾನು ಕಂಡಿರಲಿಲ್ಲ. ಈ ನೀಚನನ್ನು ಬೆಳಸಿದ್ದಕ್ಕಾಗಿ ಪಶ್ಚಾತ್ತಾಪ ಪಡುತ್ತಿದ್ದೇನೆ ಎಂದು ಹೇಳಿದ್ದ ದೇವೇಗೌಡರು ಈಗ ಸಿದ್ದರಾಮಯ್ಯ ಜೊತೆ ಕುಳಿತುಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ಈಗ ಈ ಜಂಟಿ ಪತ್ರಿಕಾಗೋಷ್ಠಿ ಸೌಭಾಗ್ಯನೋ ಅಥವಾ ದೌರ್ಭಾಗ್ಯನೋ ಎನ್ನುವುದನ್ನು ಅವರೇ ಹೇಳಬೇಕು ಎಂದರು.

    ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ದೂರ ಇಡುವುದೇ ನನ್ನ ಗುರಿ ಎಂದು ದೇವೇಗೌಡರು ಹೇಳಿದ್ದರು. ದೇವೇಗೌಡರ ಈ ಮಾತಿಗೆ ಸಿದ್ದರಾಮಯ್ಯ ದೇವೇಗೌಡರದು ಧೃತರಾಷ್ಟ್ರ ಆಲಿಂಗನ. ಎಲ್ಲರನ್ನೂ ಮುಗಿಸುತ್ತಾರೆ. ನಾನು ತಪ್ಪಿಸಿಕೊಂಡು ಬಂದು ಸಿಎಂ ಆದೆ ಎಂದಿದ್ದರು. ಈಗ ಈ ಆಲಿಂಗನ ಎಂತಹದ್ದು ಎನ್ನುವುದನ್ನು ಸಿದ್ದರಾಮಯ್ಯನವರೇ ಸ್ಪಷ್ಟ ಪಡಿಸಬೇಕು ಎಂದು ವ್ಯಂಗ್ಯವಾಡಿದರು.

    ಬಿಜೆಪಿ ನೇರವಾಗಿ ಯುದ್ಧ ಮಾಡುತ್ತದೆ. ಯಾರ ಬೆನ್ನಿಗೂ ಚೂರಿ ಹಾಕುವ ಕೆಲಸ ಮಾಡಿಲ್ಲ. ಸೈದ್ಧಾಂತಿಕವಾಗಿ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿಯನ್ನು ಬೈದಿದ್ದು ಬಿಟ್ಟರೆ ರಾಜ್ಯದ ಅಭಿವೃದ್ಧಿ ಬಗ್ಗೆ ಒಂದೇ ಒಂದು ಮಾತು ಆಡುತ್ತಿಲ್ಲ. ರಾಜಕೀಯ ಅಂಧಾಕಾರ ಎದುರಾಗುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಬಗ್ಗೆ ಅಪಾರ ಹೆದರಿಕೆ ಇದೆ. ಹೊಟ್ಟೆ ಒಳಗೆ ವಿಷ ಇದ್ದರೂ ತೋರಿಕೆಗೆ ಒಂದಾಗಿದ್ದೇವೆ ಎಂದು ಜೆಡಿಎಸ್, ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

    ಅವರೊಳಗೆ ಸಹಮತ ಇಲ್ಲದೆ ಏಕತೆಯ ಪ್ರದರ್ಶನ ನಾಟಕೀಯವಾಗಿತ್ತು. ಎರಡೂ ಪಕ್ಷಗಳು ನಮ್ಮ ರಾಜಕೀಯ ವಿರೋಧಿಗಳು ಪರಸ್ಪರ ಮುಗಿಸಲು ಹವಣಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಎಷ್ಟು ಕಾಲ ಒಟ್ಟಿಗೆ ಇರಲು ಸಾಧ್ಯ ಎಂದು ಸಿಟಿ ರವಿ ಪ್ರಶ್ನೆ ಮಾಡಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
  • ಜೆಡಿಎಸ್ ಅಭ್ಯರ್ಥಿ ಎಲ್‍ಆರ್ ಶಿವರಾಮೇಗೌಡ್ರಿಗೆ ಮುಳುವಾಗ್ತಾ 25 ವರ್ಷದ ಹಿಂದಿನ ಕೇಸ್!

    ಜೆಡಿಎಸ್ ಅಭ್ಯರ್ಥಿ ಎಲ್‍ಆರ್ ಶಿವರಾಮೇಗೌಡ್ರಿಗೆ ಮುಳುವಾಗ್ತಾ 25 ವರ್ಷದ ಹಿಂದಿನ ಕೇಸ್!

    ಮಂಡ್ಯ: ಲೋಕಸಭಾ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ಎಲ್‍ಆರ್ ಶಿವರಾಮೇಗೌಡಗೆ ಮುಳುವಾಗುತ್ತಾ 25 ವರ್ಷ ಹಿಂದಿನ ಕೇಸ್ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ.

    25 ವರ್ಷಗಳ ಹಿಂದೆ ಕಂಚನಹಳ್ಳಿ ವಕೀಲ ಗಂಗಾಧರ ಮೂರ್ತಿ, ಪತ್ರಿಕೆಯೊಂದರಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿರುತ್ತಾರೆ. ಆ ವೇಳೆ ಅವರು ಶಿವರಾಮೇಗೌಡರು ನಡೆಸುತ್ತಿದ್ದ ಎಂದು ಹೇಳಲಾಗುವ ಅಕ್ರಮಗಳ ಬಗೆಗೆ ಸತತವಾಗಿ ಬರೆಯಲಾರಂಭಿಸಿದ್ದರು. ಒಂದು ದಿನ ಅವರ ಕೊಲೆ ನಡೆದು ಹೋಯ್ತು. ಈ ಕೊಲೆ ಹಿಂದೆ ಶಿವರಾಮೇಗೌಡ ಅವರ ಕೈವಾಡ ಇದೆ ಎಂದು ಆರೋಪಿಸಿ ಸುದ್ದಿ ಹರಡಿತ್ತು. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ನಾಗಮಂಗಲದಲ್ಲಿ ಪ್ರಗತಿಪರರಿಂದ ದೊಡ್ಡ ಪ್ರತಿಭಟನೆ ನಡೆದಿತ್ತು.

    ಅಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪತ್ರಕರ್ತನ ಫೋಟೋ ಹಿಡಿದು ಪ್ರತಿಭಟನೆ ಮಾಡಿದ್ದರು. ನಂತರ ಸಭೆಯಲ್ಲೂ ಪಾಲ್ಗೊಂಡು ಶಿವರಾಮೇಗೌಡರ ವಿರುದ್ಧ ಗುಡುಗಿದ್ದರು. ಆದರೆ ಇಂದು ಅವರಿಗೇ ಟಿಕೆಟ್ ನೀಡಲಾಗಿದೆ. ಅಂದು ಶಿವರಾಮೇಗೌಡರನ್ನ ಅವನೊಬ್ಬ ಕೇಡಿ, ಅವನಿಗೆ ಬೇಡಿ ಹಾಕಿ ಎಂದಿದ್ದ ಗೌಡರು ಇಂದು ಟಿಕೆಟ್ ನೀಡಿದ್ದಾರೆ.

    ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ ಮಿತ್ರರೂ ಅಲ್ಲ ಎಂದು ಬರೆದು ಟ್ರೋಲ್ ಮಾಡಿ ಚರ್ಚೆ ಮಾಡಲಾಗ್ತಿದೆ. ಅಂದು ದೇವೇಗೌಡರ ಜೊತೆ ಸಿದ್ದರಾಮಯ್ಯ ಅವರೂ ಇದ್ದರು ಅನ್ನೋದು ವಿಶೇಷ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಭೆಯಲ್ಲಿ ಪರಮೇಶ್ವರ್‌ಗೆ ಫೋನ್ ಮಾಡಿದಂತೆ ನಾಟಕವಾಡಿದ್ರಾ ರೇವಣ್ಣ?- ವಿಡಿಯೋ ನೋಡಿ

    ಸಭೆಯಲ್ಲಿ ಪರಮೇಶ್ವರ್‌ಗೆ ಫೋನ್ ಮಾಡಿದಂತೆ ನಾಟಕವಾಡಿದ್ರಾ ರೇವಣ್ಣ?- ವಿಡಿಯೋ ನೋಡಿ

    ಬೆಂಗಳೂರು: ರೇವಣ್ಣರಿಂದ ನನಗೆ ಯಾವುದೇ ಕರೆ ಬಂದಿಲ್ಲ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಗಳ ನಡುವೆ ಸಂವಹನ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಬಹಿರಂಗವಾಗಿದೆ.

    ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಬರಬೇಕಾಗಿದ್ದ ನೀರನ್ನು ಪೂರ್ಣ ಪ್ರಮಾಣದಲ್ಲಿ ಹರಿಸುತ್ತಿಲ್ಲ. ನೀರು ಸರಿಯಾಗಿ ಬರದೇ ಇರಲು ದೇವೇಗೌಡರ ಕುಟುಂಬವೇ ಕಾರಣ ಎಂದು ಸಾರ್ವಜನಿಕರ ಆರೋಪವನ್ನು ಆಧಾರಿಸಿ ಪಬ್ಲಿಕ್ ಟಿವಿ ಗುರುವಾರ ಸುದ್ದಿ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಇಂದು ತರಾತುರಿಯಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ಹಾಜರಾಗುವಂತೆ ತಿಳಿಸಲು ಲೋಕೋಪಯೋಗಿ ಸಚಿವ ರೇವಣ್ಣ ಅವರು ಹಲವು ಬಾರಿ ಪರಮೇಶ್ವರ್ ಅವರಿಗೆ ಕರೆ ಮಾಡಿದ್ದು, ಈ ಕರೆಗಳಿಗೆ ಡಿಸಿಎಂ ಉತ್ತರಿಸದೇ ಮುನಿಸಿಕೊಂಡಿದ್ದರು ಎನ್ನಲಾಗಿದೆ.  ಇದನ್ನು ಓದಿ:  ಹೇಮಾವತಿ ನಾಲೆಗೆ ಡೈನಾಮೈಟ್ ಇಡ್ತೀನಿ, ತಾಕತ್ತಿದ್ರೆ ತಡೆಯಿರಿ: ಶಿವಲಿಂಗೇಗೌಡ

    ಕರೆ ಸ್ವೀಕರಿಸದ್ದಕ್ಕೆ ಅಸಮಾಧಾನಗೊಂಡ ರೇವಣ್ಣ ಅವರು ಇಂದು ಸಭೆಯ ನಡುವೆಯೇ ಪರಮೇಶ್ವರ್ ಅವರಿಗೆ ಕರೆ ಮಾಡಿ, “ಅಣ್ಣಾ ನಾನು ನಿಮಗೆ ನಿನ್ನೆ ಮೂರ್ನಾಲ್ಕು ಬಾರಿ ಫೋನ್ ಮಾಡಿದ್ದೆ, ನೀವು ರಿಸೀವ್ ಮಾಡಲೇ ಇಲ್ಲ. ಬೇಕಾದರೆ ನಿಮ್ಮವರನ್ನು ಕೇಳಿ ನೋಡಿ” ಎಂದು ನಯವಾಗಿಯೇ ಅಸಮಾಧಾನವನ್ನು ಹೊರಹಾಕಿದ್ದರು. ಇದನ್ನು ಓದಿ: ತುಮಕೂರಿಗೆ ಹೇಮಾವತಿ ನೀರು ಹರಿಸಲು ಹಸ್ತಕ್ಷೇಪ – ದೇವೇಗೌಡ್ರ ಕುಟುಂಬದ ವಿರುದ್ಧ ಜನ ಆರೋಪ

    ರೇವಣ್ಣ ಫೋನ್ ಮಾಡಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಪರಮೇಶ್ವರ್, ನನಗೆ ರೇವಣ್ಣನವರಿಂದ ಯಾವುದೇ ಫೋನ್ ಬಂದಿಲ್ಲ. ಇಂದು ಸಭೆ ಇದೆ ಎನ್ನುವುದೇ ನನಗೆ ತಿಳಿದಿಲ್ಲ ಎಂದು ಉತ್ತರಿಸಿದರು.

    ಪರಮೇಶ್ವರ್ ಅವರೇ ನನಗೆ ಫೋನ್ ಕರೆ ಬಂದಿಲ್ಲ ಎಂದು ಹೇಳಿದ ಮೇಲೆ ರೇವಣ್ಣ ಸಭೆ ಮಧ್ಯದಲ್ಲೇ ಕರೆ ಮಾಡಿದ್ದು ಯಾರಿಗೆ ಎನ್ನುವ ಪ್ರಶ್ನೆ ಎದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

    ಬೆಂಗಳೂರು: ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಮೀಳಾ ಅವರ ಸಾವಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ” ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ‘ನಮ್ಮ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಗ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ” ಎಂದು ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

    ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲಾ ಮಹಿಳೆ ಅವರು. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್‍ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

    ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ 12.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಉಪಮೇಯರ್ ರಮೀಳಾ ಅವರು ಶುಗರ್ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು. ರಮೀಳಾ ಅವರು ಚುನಾಚಣೆಗೂ ಮೊದಲು ಹಾಗೂ ನಂತರವೂ ಸಾಕಷ್ಟು ಒತ್ತಡದಲ್ಲಿದ್ದರು. ಗುರುವಾರ ಕೂಡ ಕೆಲಸದ ಒತ್ತಡ ಇದ್ದ ಕಾರಣ ಸಮಯಕ್ಕೆ ಸರಿಯಾಗಿ ಮಾತ್ರೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಹೃದಯಾಘಾತವಾಗಿದೆ ಅಂತ ಅವರ ಆಪ್ತ ವಲಯಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ: ದೇವೇಗೌಡ

    ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ: ದೇವೇಗೌಡ

    ಚಿಕ್ಕಮಗಳೂರು: ವಿರೋಧ ಪಕ್ಷ ಬಿಜೆಪಿ, ಕಾಂಗ್ರೆಸ್ ಸ್ನೇಹಿತರು ಬೇರೆ ಬೇರೆ ರೀತಿ ಮಾತನಾಡುತ್ತಾರೆ. ನಾನು ಅದಕ್ಕೆಲ್ಲ ಉತ್ತರ ನೀಡಲ್ಲ. ಸದ್ಯ ಪ್ರಸ್ತುತ ರಾಜಕೀಯಕ್ಕೆ ಫುಲ್ ಸ್ಟಾಪ್ ಹಾಕಿದ್ದೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷ ಬೇರೆ ಬೇರೆ ರೀತಿ ಮಾತನಾಡುತ್ತಾರೆ. ಬಹುಶಃ ಇದೆಲ್ಲಾ ಅಂತ್ಯವಾಗುವ ಸಾಧ್ಯತೆಗಳಿವೆ. ಇನ್ನೊಂದು ತಿಂಗಳಲ್ಲಿ ಗೊಂದಲಗಳೆಲ್ಲಾ ಬಗೆಹರಿಯುತ್ತದೆ. ಲೋಕಸಭಾ ಚುನಾವಣೆಯಲ್ಲಿ ಸೀಟ್ ಹೊಂದಾಣಿಕೆ ಮಾಡಿಕೊಳ್ಳುವ ಉದ್ದೇಶಕ್ಕಾದರೂ ಅಂತ್ಯವಾಗುತ್ತದೆ. ಮೈತ್ರಿ ಸರ್ಕಾರದಲ್ಲಿ ಯಾವುದೇ ಒಡಕು ಬರದ ಹಾಗೆ ನೋಡಿಕೊಳ್ಳುತ್ತೇವೆ ಎಂದರು.

    ನಾಳೆಯೇ ಮೈತ್ರಿ ಮುರಿದು ಬಿಳುತ್ತೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಆ ರೀತಿ ಅವಕಾಶ ಇಲ್ಲ. ಬಿಜೆಪಿ ರೆಸಾರ್ಟ್ ರಾಜಕೀಯದ ಕುರಿತು ಪ್ರತಿಕ್ರಿಯಿಸಿ ನಾನು ಈ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಬಿಬಿಎಂಪಿ ಮೈತ್ರಿ ವಿಚಾರದಲ್ಲಿ ನಾನು ಭಾಗಿಯಾಗಿಲ್ಲ ಎಂದು ಕೈ ಮುಗಿದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಸಮ್ಮಿಶ್ರ ಸರ್ಕಾರದ ಬಗ್ಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸಹ ಸರ್ಕಾರಕ್ಕೆ ಅಪಾಯ ಆಗುವುದಿಲ್ಲ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿ ಸಹ ಅದೇ ರೀತಿ ಹೇಳಿದ್ದಾರೆ. ಹಂತ ಹಂತವಾಗಿ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿಯುತ್ತದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಗುಡುಗು- ಕಾಂಗ್ರೆಸ್ ಹೈಕಮಾಂಡ್‍ಗೆ ಖಡಕ್ ವಾರ್ನಿಂಗ್

    ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಗುಡುಗು- ಕಾಂಗ್ರೆಸ್ ಹೈಕಮಾಂಡ್‍ಗೆ ಖಡಕ್ ವಾರ್ನಿಂಗ್

    ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಿರುಗಾಳಿಯೊಂದು ಎದ್ದಿದ್ದು, ಕಾಂಗ್ರೆಸ್ ಹೈಕಮಾಂಡ್‍ಗೆ ಮಾಜಿ ಪ್ರಧಾನಿ ದೇವೇಗೌಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ

    ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ ಜತೆ ದೇವೇಗೌಡರು ಮಾತುಕತೆ ನಡೆಸಿದ್ದು, ಈಗಾಗಲೇ ಗುಲಾಂ ನಭೀ ಅಜಾದ್ ಮೂಲಕ ದೇವೇಗೌಡರು ಹೈಕಮಾಂಡ್‍ಗೆ ಸಂದೇಶ ರವಾನಿಸಿದ್ದಾರೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣವಾಗಿದ್ದಾರೆ. ಆದ್ದರಿಂದ ಅವರಿಗೆ ಕಡಿವಾಣ ಹಾಕಬೇಕು. ಸಿದ್ದರಾಮಯ್ಯ ಅವರನ್ನು ಸರಿಪಡಿಸಿ. ಸಿದ್ದರಾಮಯ್ಯ ಸರಿ ಇಲ್ಲದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕೈ ಹೈಕಮಾಂಡ್‍ಗೆ ದೇವೇಗೌಡರು ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

    ಅಷ್ಟೆ ಅಲ್ಲದೇ ನನ್ನ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆದಾಗಿನಿಂದ ಕಿರುಕುಳ ನಿಲ್ಲುತ್ತಿಲ್ಲ. ಬರೀ ಇದೆ ಆಯಿತು, ನೀವು ಮಧ್ಯಪ್ರವೇಶ ಮಾಡಿ ಸರಿ ಮಾಡಿ ಇಲ್ಲದಿದ್ದರೆ ನಮಗೂ ಗೊತ್ತಿದೆ. ಲೋಕಸಭೆ ಚುನಾವಣೆ ನಿಮ್ಮಷ್ಟೇ ನಮಗೂ ಕೂಡ ಮುಖ್ಯವಾಗಿದೆ. ಮೇಲಾಟಗಳನ್ನ ನಿಲ್ಲಿಸದಿದ್ದರೇ ನಮಗೂ ದಾರಿ ಬದಲಿಸೋದಕ್ಕೆ ಬರುತ್ತದೆ ಅಂತ ಖಡಕ್ ಆಗಿ ನುಡಿದಿದ್ದಾರೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದರ ಇಳಿಸಿ ಅಂದ್ರೆ ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ..?- ಎಚ್‍ಡಿಡಿ

    ದರ ಇಳಿಸಿ ಅಂದ್ರೆ ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ..?- ಎಚ್‍ಡಿಡಿ

    ಮಂಡ್ಯ: ಬಸ್ ಸಂಚಾರ ದರ ಹೆಚ್ಚಿಸುತ್ತಿರುವುದರ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು, ಬಸ್ ಸಂಚಾರ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ದೇವೇಗೌಡರು, ಡೀಸೆಲ್, ಪೆಟ್ರೋಲ್ ದರ ಇಳಿಸಿ ಎಂದು ಭಾರತ್ ಬಂದ್ ಮಾಡುತ್ತಿದ್ದಾರೆ. ದರ ಇಳಿಸಿ ಅಂದರೆ ಏನು ನೀರಲ್ಲಿ ಬಸ್ ಓಡಿಸುವುದಕ್ಕೆ ಸಾಧ್ಯವಾಗುತ್ತಾ. ಬಸ್ ದರವನ್ನು ಸುಮ್ಮ ಸುಮ್ಮನೆ ಏರಿಸುತ್ತಾರಾ. ಆದ್ದರಿಂದ ಬಂದ್‍ಗೆ ನಮ್ಮ ಬೆಂಬಲವಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ ಎಂದು ಬಸ್ ಸಂಚಾರ ದರ ಏರಿಕೆಗೆ ಕಾರಣ ನೀಡಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

    ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಬಸ್ ಪ್ರಮಾಣದ ದರ ಹೆಚ್ಚಿಸುವ ಕುರಿತು ಈ ಹಿಂದೆ ಸುಳಿವು ನೀಡಿದ್ದರು. ಆದರೆ ಈಗ ಮುಂದಿನ ವಾರದಲ್ಲಿಯೇ ದರ ಏರಿಕೆಯಾಗಲಿದೆ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಈ ಬಗ್ಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡುತ್ತಿದೆ. ಇದರಿಂದಾಗಿಯೇ ಬಸ್ ಪ್ರಯಾಣದ ದರ ಏರಿಕೆ ಮಾಡಲಾಗುತ್ತಿದೆ ಎಂದ ಅವರು, ಸಾರಿಗೆ ಇಲಾಖೆ ನಷ್ಟದಲ್ಲಿದ್ದು, ವೆಚ್ಚವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯದಲ್ಲಿಯೇ ಬಸ್ ಪ್ರಯಾಣ ದರ ಏರಿಕೆ ಮಾಡಲಾಗುತ್ತದೆ ಎಂದು ಹೇಳಿದ್ದರು.

    ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬಸ್ ಪ್ರಯಾಣದ ದರ ಏರಿಕೆಗೆ ಪ್ರಸ್ತಾಪ ಸಲ್ಲಿಕೆಯಾಗಿತ್ತು. ಆದರೆ ನಾನು ಅದನ್ನು ತಡೆಹಿಡಿದಿದ್ದೆ. ಈಗ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಾಗುತ್ತಿದೆ. ಹೀಗಾಗಿ ಈ ಹಿಂದೆ ಅಧಿಕಾರಿಗಳು ಸಲ್ಲಿಸಿರುವ ಬಸ್ ಪ್ರಯಾಣದ ದರದ ಆಧಾರದ ಮೇಲೆ ದರವನ್ನು ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದ್ದರು.

    ಪ್ರಯಾಣದ ದರ ಹೆಚ್ಚಾದರೆ ಪ್ರಯಾಣಿಕರಿಗೆ ಹೊರೆಯಾಗುವುದಿಲ್ಲವೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಪೆಟ್ರೋಲ್ ಹಾಗೂ ಡೀಸೆಲ್‍ಗೆ ಹೆಚ್ಚು ಹಣ ಪಾವತಿಸಿ ಖರೀದಿಸುತ್ತಿದ್ದಾರೆ. ಇದು ಅವರಿಗೆ ಹೊರೆ ಆಗುತ್ತಿಲ್ಲವೇ? ಹಾಗೇ ಬಸ್ ಪ್ರಯಾಣದ ದರ ಏರಿಕೆಯಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದ್ದರು. .

    ಭಾರತ್ ಬಂದ್ ಬೆಂಬಲ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಂದ್‍ಗೆ ಜೆಡಿಎಸ್ ಪಕ್ಷದಿಂದ ಬೆಂಬಲ ನೀಡಿದ್ದೇವೆ. ಪಕ್ಷದ ಕಾರ್ಯಕರ್ತರು ಕೂಡ ಬಂದ್ ಅನ್ನು ಬೆಂಬಲಿಸುತ್ತಾರೆ ಎಂದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv