ಬೆಂಗಳೂರು: ಮಹಾನ್ ನಾಯಕ ಪ್ರಿಯಾಂಕ್ ಖರ್ಗೆ ಅವರಿಗೆ ನಾವು ಹೈದರಾಬಾದ್ ಕರ್ನಾಟಕದ (Hyderabad Karnataka) ಅಭಿವೃದ್ಧಿಗೆ (Development) 5 ಸಾವಿರ ಕೋಟಿ ರೂ. ಇಟ್ಟಿರುವುದು ಇಷ್ಟವಿಲ್ಲವೇನೋ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆಗೆ (Priyank Kharge) ತಿರುಗೇಟು ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಕೊಡುವುದಾಗಿ ಹೇಳಿ ಸಿಎಂ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದ್ದು, ಈ ಅನುದಾನ ಬಿಡುಗಡೆ ಸಾಧ್ಯಾನಾ? ಎಂದು ಖರ್ಗೆ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹಣ ಇಟ್ಟಿರುವುದು ಅವರಿಗೆ ಇಷ್ಟವಿಲ್ಲವೇನೋ. ಆ ಭಾಗದ ಅಭಿವೃದ್ಧಿ ಆಗುವುದು ಅವರಿಗೆ ಇಷ್ಟವಾಗುತ್ತಿಲ್ಲ ಎನಿಸುತ್ತದೆ. ವಿನಾಕಾರಣ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ: ಕೇರಳಕ್ಕೆ ಕರ್ನಾಟಕ ಸರ್ಕಾರ ಸ್ಪಷ್ಟನೆ
ಇದೇ ವೇಳೆ ತೆಲಾಂಗಣದಲ್ಲಿ 40% ಪರ್ಸೆಂಟ್ ಎಂಬ ಬ್ಯಾನರ್ ಅಳವಡಿಕೆ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ಇದೊಂದು ವ್ಯವಸ್ಥಿತ ಷಡ್ಯಂತ್ರ. ಈ ಬ್ಯಾನರ್ ಹಾಕಿದ್ದಾರೆ ಎನ್ನುವ ವಿಚಾರ ನನಗೆ ತಿಳಿದಿಲ್ಲ. ಆದರೆ ಇದು ರಾಜ್ಯಗಳ ನಡುವಿನ ಸಂಬಂಧವನ್ನು ಹಾಳು ಮಾಡುತ್ತಿದೆ ಎಂದಿದ್ದಾರೆ.
ಬಳ್ಳಾರಿ ವಿಮ್ಸ್‌ಗೆ ಆರೋಗ್ಯ ಸಚಿವರು ಭೇಟಿ ನೀಡಿಲ್ಲ ಎಂಬ ವಿಪಕ್ಷಗಳ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ಖಾಸಗಿ ಆಸ್ಪತ್ರೆ ಬಿಲ್ ತಂದಿದ್ದರು. ಆಗ ಎಲ್ಲಾ ವೈದ್ಯರು ಸುಮಾರು 5 ದಿನ ಪ್ರತಿಭಟನೆ ಮಾಡಿದ್ದರು. ಆ ವೇಳೆ ಸುಮಾರು 80 ಜನ ಸಾವನ್ನಪ್ಪಿದ್ದಾರೆ. ಅಂದು ಆರೋಗ್ಯ ಸಚಿವರು ರಾಜೀನಾಮೆ ಕೊಟ್ಟಿದ್ರಾ? ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನಗರದ ಸುಪ್ರಸಿದ್ಧ ಬನಶಂಕರಿ ದೇವಾಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ದೈವ ಸಂಕಲ್ಪ ಯೋಜನೆಯ ಮೊದಲ ಹಂತದ ದೇವಾಲಯಗಳ ಪಟ್ಟಿಯಲ್ಲಿರುವ ಬೆಂಗಳೂರಿನ ಬನಶಂಕರಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರಚಿಸುವಂತೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಕಂದಾಯ ಸಚಿವರು ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಅವರ ಜೊತೆಯಲ್ಲಿ ನಡೆದ ಸಭೆಯಲ್ಲಿ ಬನಶಂಕರಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತವಾಗಿ ಚರ್ಚಿಸಲಾಯಿತು.
ಈ ವೇಳೆ ಮಾಹಿತಿ ನೀಡಿದ ಸಚಿವೆ ಜೊಲ್ಲೆ, 4.20 ಎಕರೆ ಪ್ರದೇಶದಲ್ಲಿರುವ ಬನಶಂಕರಿ ದೇವಸ್ಥಾನ ನಗರದ ಪ್ರಮುಖ ದೇವಸ್ಥಾನಗಳಲ್ಲಿ ಒಂದು. ಈ ದೇವಸ್ಥಾನದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈಗಾಗಲೇ ದೈವ ಸಂಕಲ್ಪ ಯೋಜನೆಯ ಮೊದಲ ಹಂತದ ದೇವಾಲಯಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಮಗ್ರವಾದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ದೇವಾಲಯದಲ್ಲಿ 48 ಕೋಟಿ ರೂ. ಹಣವಿದ್ದು, ಈ ಹಣದ ಸದುಪಯೋಗದ ಮೂಲಕ ಭಕ್ತಸ್ನೇಹಿ ಪರಿಸರವನ್ನು ನಿರ್ಮಾಣ ಮಾಡುವತ್ತ ಹೆಚ್ಚಿನ ಗಮನ ನೀಡುವಂತಹ ಮಾಸ್ಟರ್ ಪ್ಲಾನ್ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮಾಜಿ ಶಾಸಕ ಎಂ.ಡಿ ಲಕ್ಷ್ಮಿ ನಾರಾಯಣ್ ಗುಡ್ ಬೈ
ಆಂಜನೇಯ ದೇವಾಲಯ ಪುನರ್ ನಿರ್ಮಾಣ:
ಬನಶಂಕರಿ ದೇವಾಲಯದ ಆವರಣದಲ್ಲಿರುವ ವರಪ್ರಸಾದ ಆಂಜನೇಯ ದೇವಾಲಯವು 1915 ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 100 ವರ್ಷಗಳಿಗೂ ಹಿಂದಿನ ದೇವಾಲಯವಾಗಿದ್ದು, ಶಿಥಿಲಾವಸ್ಥೆಯಲ್ಲಿದೆ. ಇದರ ಜೀರ್ಣೋದ್ಧಾರಕ್ಕಾಗಿ ಮೂಲ ದೇವಾಲಯದ ಗರ್ಭಗುಡಿಯ ಹಿಂಬದಿ ಅಲಂಕಾರ ಮೂರ್ತಿಯಾಗಿ ಮತ್ತೊಂದು ಹೊಸ ಮೂರ್ತಿಯನ್ನು ಪ್ರತಿಸ್ಥಾಪಿಸಲು ಹಾಗೂ ಮೂಲ ದೇವಾಲಯದ ಗರ್ಭಗುಡಿ, ಪ್ರಾಂಗಣಗಳ ವಿಸ್ತೀರ್ಣವನ್ನು ವಿನ್ಯಾಸಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅನುಕೂಲಕರವಾಗುವ ರೀತಿಯಲ್ಲಿ ನಕ್ಷೆಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳ ಪ್ರಸಾದ ವಿತರಣೆಗೆ ಅನ್ನದಾಸೋಹ ಭವನವನ್ನು ಉಪಯೋಗಿಸಲಾಗುತ್ತಿದೆ. ಹೆಚ್ಚಿನ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ಭವನದ ಖಾಲಿ ಸ್ಥಳದಲ್ಲಿ ತಾತ್ಕಾಲಿಕವಾಗಿ ಪೆಂಡಾಲ್‌ಗಳನ್ನು ಹಾಕಿ ಪ್ರಸಾದವನ್ನು ವಿತರಿಸಲಾಗುತ್ತಿದೆ. ಮಳೆ ಬಂದಾದ ಪ್ರಸಾದ ಸ್ವೀಕರಿಸಲು ತೊಂದರೆ ಆಗುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸದರಿ ಸ್ಥಳದಲ್ಲಿ ಭಕ್ತಾದಿಗಳಿಗೆ ಅನುಕೂಲ ಉಂಟಾಗುವಂತೆ ಶಾಶ್ವತ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಶಾಶ್ವತ ಮೇಲ್ಚಾವಣಿಯನ್ನು ನಿರ್ಮಿಸಿ ಅನ್ನಪ್ರಸಾದ ವಿತರಣೆಗೆ ಕೌಂಟರ್‌ಗಳ ನಿರ್ಮಾಣ ಮತ್ತು ಪ್ರಸಾದ ಸೇವನೆಗೆ ಅನುಕೂಲವಾಗುವಂತೆ ಕುಳಿತುಕೊಳ್ಳಲು ಆಸನಗಳನ್ನು ನಿರ್ಮಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ದೇವಾಲಯದ ಹಿಂಭಾಗದಲ್ಲಿರುವ ಹಾಲು ಕಾಂಪೌಂಡು ಗೋಡೆಯನ್ನು ಸೂಕ್ತ ಎತ್ತರಕ್ಕೆ ಏರಿಸಲು ಹಾಗೂ ಸುತ್ತಲಿನ ಗಾಳಿ, ಬೆಳಕು ಸರಾಗವಾಗಿ ಒಳಬರಲು ಕಾಂಪೌಂಡಿನ ಮೇಲ್ಭಾಗದಲ್ಲಿ ಎಸ್.ಎಸ್ ನಿಂದ ಲೂವರ್ಸ್‌ಗಳನ್ನು ಅಳವಡಿಸಲು ತಿಳಿಸಲಾಯಿತು. ಸದರಿ ಕಾಮಗಾರಿಗಾಗಿ ಅಂದಾಜು ಪಟ್ಟಿಯನ್ನು ಸಲ್ಲಿಸಲು ಮತ್ತು ಕಾಮಗಾರಿಯನ್ನು ಶ್ರೀಘ್ರವಾಗಿ ಕೈಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ದೇವಾಲಯದ ಆವರಣದಲ್ಲಿರುವ ಸಾರ್ವಜನಿಕ ಶೌಚಾಲಯ ತುಂಬಾ ಹಳೆಯ ಕಟ್ಟಡವಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಒಂದೇ ಪ್ರವೇಶವಿದೆ. ಇದರಿಂದ ಭಕ್ತಾದಿಗಳಿಗೆ ಬಹಳಷ್ಟು ಅನಾನುಕೂಲವಾಗುತ್ತಿದೆ. ಆದ್ದರಿಂದ ಶೌಚಾಲಯನ್ನು ಹೈಟೆಕ್ ಮಾದರಿಯಲ್ಲಿ ನಿರ್ಮಿಸಲು ಅಂದಾಜು ಪಟ್ಟಿಯನ್ನು ಸಲ್ಲಿಸುಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಶೌಚಾಲಯಗಳ ನಿರ್ವಹಣೆಗಾಗಿ ಸುಲಭ ಶೌಚಾಲಯದವರಿಗೆ ವಹಿಸಲು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಇದನ್ನೂ ಓದಿ: ಜೇಮ್ಸ್‌ವೆಬ್ ಕಣ್ಣಲ್ಲಿ ಗುರು ಗ್ರಹದ ರಹಸ್ಯ
ಅನ್ನದಾಸೋಹ ಭವನದ ಅಡುಗೆ ಮನೆ ನೆಲ ಮಹಡಿಯಲ್ಲಿದೆ. ಪ್ರಸಾದ ವ್ಯವಸ್ಥೆಗೆ ಮೊದಲ ಮಹಡಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನಕ್ಕೆ ಲಿಫ್ಟ್ ವ್ಯವಸ್ಥೆ ಇಲ್ಲದೇ ಇರುವುದರಿಂದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲು ಅಡುಗೆ ಮನೆಯಿಂದ ಮೊದಲನೇ ಮಹಡಿಗೆ ಪ್ರಸಾದ ಕೊಂಡೊಯ್ಯುವುದು ತುಂಬಾ ಕಷ್ಟವಾಗುತ್ತಿದೆ. ಈ ಸಂಬಂಧ ದಾನಿಗಳೊಬ್ಬರು ಲಿಫ್ಟ್ ಕೊಡಿಸಲು ಮುಂದಾಗಿದ್ದು, ಇದಕ್ಕೆ ಅಗತ್ಯ ಅನುಮತಿಗಳನ್ನು ಪಡೆದುಕೊಂಡು ಕಾಮಗಾರಿ ಪ್ರಾರಂಭಿಸುವಂತೆ ಸೂಚನೆ ನೀಡಲಾಯಿತು.
Live Tv
[brid partner=56869869 player=32851 video=960834 autoplay=true]
ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದ ಹಾಗೂ ಕೋವಿಡ್ ಪ್ರಭಾವದಿಂದ ಇಡೀ ವಿಶ್ವವೇ ನಲುಗಿ ಹೋಗಿ, ಆರ್ಥಿಕತೆ ಕುಗ್ಗುವ ಆತಂಕದಲ್ಲಿದೆ. ಆದರೆ ಭಾರತದ ಆರ್ಥಿಕತೆಯಲ್ಲಿ ಭಾರೀ ಪ್ರಮಾಣದ ಚೇತರಿಕೆ ಕಾಣುತ್ತಿದೆ.
ಹೌದು, ಭಾರತ ಇದೀಗ ಚೀನಾವನ್ನೇ ಮೀರಿಸುವಷ್ಟು ವೇಗವಾಗಿ ಆರ್ಥಿಕತೆಯಲ್ಲಿ ಅಭಿವೃದ್ದಿ ಹೊಂದುತ್ತಿದೆ. 2022ನೇ ಇಸವಿಯಲ್ಲಿ ಭಾರತ ಶೇ.8.2 ರಷ್ಟು ಪ್ರಗತಿ ಕಾಣಲಿದೆ. ಇದು ಜಗತ್ತಿನಲ್ಲಿಯೇ ಅತೀ ವೇಗದ ಅಭಿವೃದ್ಧಿ ಹೊಂದಲಿರುವ ಆರ್ಥಿಕತೆ ಎನಿಸಿಕೊಳ್ಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ತಿಳಿಸಿದೆ. ಇದನ್ನೂ ಓದಿ: 12 ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ: ಮಹಾರಾಷ್ಟ್ರ ಸಚಿವ
ಕೆಲವು ತಿಂಗಳ ಹಿಂದೆ ಐಎಂಎಫ್ 2022ರ ಭಾರತದ ಆರ್ಥಿಕತೆ ಶೇ.9.1 ಇರಲಿದೆ ಎಂದು ತಿಳಿಸಿತ್ತು. ಇದೀಗ ಐಎಂಎಫ್ ಈ ಅಂದಾಜನ್ನು ಪರಿಷ್ಕರಿಸಿ, ಶೇ.0.8 ರಷ್ಟು ಕಡಿಮೆ ಮಾಡಿದೆ. 2023ರಲ್ಲಿ ಭಾರತದ ಆರ್ಥಿಕ ಪ್ರಗತಿ ಶೇ.6.9 ಇರಲಿದೆ ಎಂದು ತಿಳಿಸಿದೆ.
– ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟಕ್ಕೂ ತಲುಪಿಸಲು ವ್ಯಾಪಕ ಪ್ರಚಾರ ಕೈಗೊಳ್ಳಿ – ಮೈಗಳ್ಳತನ ಬಿಟ್ಟು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ – ತಾಲ್ಲೂಕು ಮಟ್ಟದಲ್ಲೂ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ: ನೂತನ ಜಿಲ್ಲೆ ವಿಜಯನಗರವನ್ನು ಸಮಗ್ರ ಅಭಿವೃದ್ಧಿಗೊಳಿಸಲು 120 ಕಿ.ಮೀ ವೇಗದಲ್ಲಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಮಾನ್ಯ ಮುಜರಾಯಿ, ಹಜ್, ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಗುರುವಾರ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ನಡೆದ ಮೊದಲ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಶಶಿಕಲಾ ಜೊಲ್ಲೆ ಮಾತನಾಡಿದರು. ನೂತನ ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮವಾಗಿ ಸ್ಪಂದಿಸುವ ಅಗತ್ಯವಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಸಲಹೆ ಹಾಗೂ ಸಹಕಾರವನ್ನು ಜಿಲ್ಲೆಯ ಜನಪ್ರತಿನಿಧಿಗಳು, ಸಚಿವ ಆನಂದ್ ಸಿಂಗ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ಆದರೆ ಜಿಲ್ಲೆಯ ಅಧಿಕಾರಿಗಳ ಸಹಕಾರ ಹಾಗೂ ಒತ್ತಾಸೆ ಇಲ್ಲದೆ ಹೆಚ್ಚಿನದ್ದನ್ನು ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಬ್ಬರು ಸಹಕಾರದಿಂದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು.
ಸಭೆಯಲ್ಲಿ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಚಿವರು ಪಡೆದುಕೊಂಡರು. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 20ರಷ್ಟು ಹೆಚ್ಚಿನ ಮಳೆ ಆಗಿರುವುದು ಸಂತಸದ ವಿಷಯ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಯೋಜನೆಗಳು ಇವೆ. ಇವುಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ರೈತರಿಗೆ ಅನುಕೂಲ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಡಿತರ ಚೀಟಿ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕೂಡಲೇ ನಿಯಮಾವಳಿಗಳ ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಅವರಿಂದ ಸಂಗ್ರಹಿಸಬೇಕಾದ ದಂಡವನ್ನು ಕಟ್ಟುನಿಟ್ಟಾಗಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!
ಸಚಿವರಿಂದ ತರಾಟೆ:
ಜಿಲ್ಲೆಯಲ್ಲಿ ವಿವಿಧ ನಿರ್ಮಾಣದ ಹಂತದಲ್ಲಿರುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಟ್ಟಡಗಳ ಬಗ್ಗೆ ಸಭೆಗೆ ಸರಿಯಾದ ಮಾಹಿತಿಯನ್ನು ನೀಡಲು ವಿಫಲರಾದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪೂರ್ಣ ಮಾಹಿತಿ ನೀಡುವುದು ಸರಿಯಲ್ಲ. ಅಧಿಕಾರಿಗಳು ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ತರಬೇಕು. ಇಲ್ಲದಿದ್ದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಶಿಕ್ಷಕರ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಳೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸುತ್ತೇನೆ. ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಕೊರತೆ ನಿವಾರಿಸಲು ಡಿಡಿಪಿಐಗೆ ಸೂಚನೆ ನೀಡಿದರು.
ತಾಲೂಕು ಸಭೆ:
ವಿಧಾನ ಮಂಡಲದ ಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ಜಿಲ್ಲಾಮಟ್ಟದ ಸಭೆಯನ್ನು ನಡೆಸಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಅಂಶಗಳನ್ನು ತಿಳಿದುಕೊಳ್ಳಲು ತಾಲೂಕು ಮಟ್ಟದಲ್ಲೂ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು. ಇದರಿಂದ ಆಯಾ ತಾಲೂಕಿನ ಸಮಸ್ಯೆಗಳು ಸಮರ್ಪಕವಾಗಿ ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.
ಜಿಲ್ಲೆಯಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿವರವಾಗಿ ಚರ್ಚಿಸಿದ್ದೇನೆ. ಕಾನೂನಾತ್ಮಕ ತೊಡಕುಗಳನ್ನು ಶೀಘ್ರದಲ್ಲೇ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ಪರಿಸ್ಥಿತಿ ತಿಳಿಯಾದ್ರೆ ಮತ್ತೆ ಉಕ್ರೇನ್ ಹೋಗುತ್ತೇನೆ: ವೈದ್ಯಕೀಯ ವಿದ್ಯಾರ್ಥಿ
ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿರುವ ಮಾಹಿತಿ ಸಿಕ್ಕ ತಕ್ಷಣ ನಮ್ಮ ಜಿಲ್ಲಾಡಳಿತ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಸುರಕ್ಷಿತ ಸ್ಥಳ ತಲುಪಲು ನೆರವಾಗುವಂತೆ ಉತ್ತಮ ಸಮನ್ವಯ ಕಾರ್ಯನಿರ್ವಹಿಸಿದೆ. ಅದಕ್ಕಾಗಿ ಜಿಲ್ಲಾಡಳಿತಕ್ಕೆ ನಾನು ಅಭಿನಂದನೆ ಸಲ್ಲಿಸಿದ್ದೇನೆ. ವಿಕಾಸ್, ಸಂಜಯ್ ಹಾಗೂ ನಂದಿನಿ ಸುರಕ್ಷಿತವಾಗಿ ಹಂಗೇರಿ ದೇಶವನ್ನು ಹಾಗೂ ಲಾವಣ್ಯ ರೊಮೇನಿಯಾ ದೇಶವನ್ನು ತಲುಪಿದ್ದಾರೆ. ಅಲ್ಲಿಂದ ಸದ್ಯದಲ್ಲೇ ರಾಜ್ಯಕ್ಕೆ ಬರಲಿದ್ದಾರೆ. ಈ ಬಗ್ಗೆ ಗಮನವಿರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು ಹೇಳಿದರು.
ಸಭೆಯಲ್ಲಿ ಸಂಸದ ದೇವೇಂದ್ರಪ್ಪ, ಶಾಸಕ ಕರುಣಾಕರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಸತೀಶ್, ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಷ ಗೋಯಲ್ ಸೇರಿದಂತೆ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ಸುಳ್ಯದ ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಯತ್ನ ಮತ್ತು ಗ್ರಾಮ ವಾಸ್ತವ್ಯದ ಫಲವಾಗಿ ಸರ್ಕಾರ ಒಂದೂವರೆ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ.
ಜನವರಿ11ರಂದು ಶಂಕುಸ್ಥಾಪನೆ ನೆರವೇರಿದ್ದು, ಎರಡು ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ತಿ ಮಾಡುವ ಭರವಸೆಯನ್ನು ಇಂಜಿನಿಯರ್‌ಗಳು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2020 ಜನವರಿ 5 ರಂದು ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ ಮಾಡಬೇಕು ಎಂಬುದು ಜನರಿಂದ ಕೇಳಿ ಬಂದ ಪ್ರಮುಖ ಬೇಡಿಕೆಯಾಗಿತ್ತು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!
ಬಳಿಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದ ಪತ್ರಕರ್ತರ ನಿಯೋಗ ಪಂಚಾಯತ್‍ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಡಪ್ಪಾಡಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.ಕೂಡಲೇ ಸ್ಪಂದಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು 2 ಕೋಟಿ ಅನುದಾನ ಘೋಷಣೆ ಮಾಡಿದ್ದರು. ಅದರಲ್ಲಿ 1.5 ಕೋಟಿ ಅನುದಾನ ಬಿಡುಗಡೆಯಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದನ್ನೂ ಓದಿ: ಜಿಎಸ್‍ಟಿ ನೋಟಿಸ್‌ನಲ್ಲಿ ಮೊತ್ತ ನೋಡಿ ಶಾಕ್ ಆದ ದಂಪತಿ!
ಎಲಿಮಲೆಯಿಂದ ಮಡಪ್ಪಾಡಿಗೆ 9 ಕಿ.ಮಿ.ದೂರವಿದೆ. ಎಲೆಮಲೆ- ಅರಂತೋಡು ಲೋಕೋಯೋಗಿ ರಸ್ತೆಯ ಸೇವಾಜೆಯಿಂದ ಮಡಪ್ಪಾಡಿಗೆ 5 ಕಿ.ಮಿ.ದೂರ ಇದೆ. ಇದರಲ್ಲಿ 1.5 ಕಿ.ಮಿ. ರಸ್ತೆ ಅಭಿವೃದ್ಧಿಯಾಗಿದೆ. ಉಳಿದ 3.7 ಕಿ.ಮಿ. ರಸ್ತೆ ಸಂಪೂರ್ಣ ಎಕ್ಕುಟ್ಟಿ ಹೋಗಿದೆ. ಇದೀಗ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ ಈ ಅನುದಾನದಲ್ಲಿ ರಸ್ತೆಯ 3.7 ಕಿ.ಮಿ. ಅಭಿವೃದ್ಧಿಯಾಗಲಿದೆ. 3.75 ಮೀಟರ್ ಅಗಲದಲ್ಲಿ ರಸ್ತೆಯ ಅಭಿವೃದ್ಧಿ ಕಾಣಲಿದ್ದು ಇದರಲ್ಲಿ 150 ಮೀಟರ್ ಕಾಂಕ್ರೀಟೀಕರಣ ಮತ್ತು ಉಳಿದ ಭಾಗ ಡಾಮರೀಕರಣ ನಡೆಯಲಿದೆ ಎಂದು ಇಂಜಿನಿರ್‍ಗಳು ತಿಳಿಸಿದ್ದಾರೆ.
ಹುಬ್ಬಳ್ಳಿ: ನಗರ ವಿಕಾಸ ಯೋಜನೆಯ 3 ಕೋಟಿ ಅನುದಾನದಲ್ಲಿ ಚನ್ನಪೇಟೆ, ಅರವಿಂದ ನಗರ ಹಾಗೂ ಹಳೆ ಹುಬ್ಬಳ್ಳಿ ಮುಖ್ಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ವಾರ್ಡ್ ನಂ.55ರ ವ್ಯಾಪ್ತಿಯಲ್ಲಿ ಯುಜಿಡಿ ಹಾಗೂ ಒಳಚರಂಡಿ ನಿರ್ಮಿಸಲು ಸರ್ಕಾರ 1 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಶೀಘ್ರವೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ಹಳೇ ಹುಬ್ಬಳ್ಳಿ ದಿಡ್ಡಿ ಓಣಿ ಉದ್ಯಾನವನದಲ್ಲಿ ಜರುಗಿದ ಜನಸಂಪರ್ಕ ಸಭೆಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ಇದೇ ವೇಳೆ ಗ್ರಾಮಸ್ಥರಿಗೆ ನೆರವಿನ ಭರವಸೆ ನೀಡಿದ್ದಾರೆ.
ಒಳಚರಂಡಿ ಕಾಮಗಾರಿಗೂ ಮುನ್ನ ಸರ್ವೇ:
ದಾಳಿಂಬರಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಗಾಲದಲ್ಲಿ ನಾಲೆಗಳು ತುಂಬಿ, ಚಂರಡಿ ನೀರು ರಸ್ತೆ ಹಾಗೂ ಮನೆಗಳಿಗೆ ಹರಿಯುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಯುಜಿಡಿ ಹಾಗೂ ಒಳಚರಂಡಿ ಕಾಮಗಾರಿ ಆರಂಭವಾಗುವ ಮುನ್ನವೇ ಈ ಭಾಗದಲ್ಲಿನ ಸಮಸ್ಯೆ ಕುರಿತು ಸರ್ವೇ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಶೆಟ್ಟರ್ ಸೂಚಿಸಿದರು. ಇದನ್ನೂ ಓದಿ: ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ
ಕಳ್ಳರ ಹಾವಳಿಗೆ ಸಿಸಿಟಿವಿ:
ಸಭೆಯಲ್ಲಿ ಹಳೆ ಹುಬ್ಬಳ್ಳಿ ಭಾಗದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸಾರ್ವಜನಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಶೆಟ್ಟರ್, ಕಳ್ಳತನ ಹಾಗೂ ಕಳ್ಳರ ಹಾವಳಿ ಕುರಿತು ಪೆÇಲೀಸ್ ಕಮಿಷನರ್ ಜೊತೆ ಚರ್ಚೆಸುತ್ತೇನೆ. ಕೇಂದ್ರ ಸರ್ಕಾರದ ಹಲವಾರು ಯೋಜನಯಡಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಅವಕಾಶವಿದೆ. ಈ ಕುರಿತು ಕೇಂದ್ರ ಸಚಿವರು ಹಾಗೂ ಸಂಸದರಾದ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದರು.
ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶೆಟ್ಟರ್:
ಸಂಗೀತಾ ಕಾಟವೆ ಎಂಬ ಮೃತರ ಮರಣ ಪ್ರಮಾಣ ಪತ್ರ ನೀಡುವಲ್ಲಿ ಉಂಟಾದ ವಿಳಂಬದ ಬಗ್ಗೆ ಸಂಬಂಧಿಯೊಬ್ಬರು ಸಭೆಯಲ್ಲಿ ಅಳಲು ತೋಡಿಕೊಂಡರು. ಅಳಲು ಆಲಿಸಿದ ಜಗದೀಶ್ ಶೆಟ್ಟರ್, ಸರ್ಕಾರ ಮನೆ ಮನೆಗೆ ತೆರಳಿ ಜನನ ಹಾಗೂ ಮರಣ ಪತ್ರ ವಿತರಿಸಲು ಯೋಚಿಸುತ್ತಿದೆ. ಆದರೆ ಪಾಲಿಕೆ ಅಧಿಕಾರಿಗಳು ಮರಣಿಸಿದ ವ್ಯಕ್ತಿಗಳ ಪಂಚನಾಮೆ ಮಾಡಲು ಅಸಡ್ಡೆ ತೋರುವುದು ಸಲ್ಲದು. ಕೆಲಸ ಮಾಡಲು ಅಧಿಕಾರಿಗಳು ಸಿದ್ದವಿಲ್ಲ ಎಂದರೆ ಹೇಗೆ? ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಹೊಸ ವರ್ಷದ ಸಂಭ್ರಮ ಕಸಿದ ಕೋವಿಡ್ ಹೆಮ್ಮಾರಿ- ಬೆಂಗ್ಳೂರಿನ ಪ್ರಮುಖ ರಸ್ತೆಗಳೆಲ್ಲವೂ ನಿರ್ಜನ
ಗುರುತಿನ ಚೀಟಿ ಹಾಗೂ ಶ್ರಮ್ ಕಾರ್ಡ್ ವಿತರಣೆ:
ಮೊಚಿಗಾರ ಸಂಘದಿಂದ ಸಮುದಾಯ ಭವನ ನಿರ್ಮಿಸಲು ಅನುದಾನ ಒದಗಿಸಲು ಸಭೆಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ
ಅಸಂಘಟಿತ ಕಾರ್ಮಿರಿಗೆ ಗುರುತಿನ ಚೀಟಿ ಹಾಗೂ ಈ ಶ್ರಮ್ ಕಾರ್ಡ್ ವಿತರಣೆ ಮಾಡಲಾಯಿತು.
ಜಿ+2 ಮಾದರಿಯ ಮನೆಗೆ ನಿವಾಸಿಗಳ ಮನವಿ:
ಆಸಾರ್ ಓಣಿಯ ಸಿಕ್ಕಿಲಿಗರ ತಂಡಾ ಆಸಾರ್ ಓಣಿ ಹೊಂಡದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ಕೊಳಚೆ ಮಂಡಳಿ ವತಿಯಿಂದ ಜಿ+2 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡುವಂತೆ ನಿವಾಸಿಗಳು ಮನವಿ ಸಲ್ಲಿಸಿದರು. ಇದನ್ನೂ ಓದಿ: ಕುಮಾರಸ್ವಾಮಿಯವರು ಯಡಿಯೂರಪ್ಪನವರ ಬಳಿ ಹೋಗಿದ್ದರು: ಹೆಚ್.ಸಿ ಬಾಲಕೃಷ್ಣ
ಸಭೆಯಲ್ಲಿ ಕರ್ನಾಟಕ ಮಾರ್ಜಕ ನಿಯಮಿತದ ನಿರ್ದೇಶಕ ಮಲ್ಲಿಕಾರ್ಜುನ ಸವಕಾರ, ಪಾಲಿಕೆ ಸದಸ್ಯ ಸಂತೋಷ್ ಚವ್ಹಾಣ್, ಮಾಜಿ ಮೇಯರ್‍ಗಳಾದ ಪಾಂಡುರಂಗ ಪಾಟೀಲ ಹಾಗೂ ಡಿ.ಕೆ.ಚವ್ಹಾಣ್ ಸೇರಿದಂತೆ ಪಾಲಿಕೆ ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಜೆಡಿಎಸ್‍ಗೆ ಬದ್ದತೆ ಇಲ್ಲ, ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ, ಸ್ಥಿರ ಸರ್ಕಾರ ಬರುವುದು ಇಷ್ಟ ಇಲ್ಲ, ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಬೇಕು ಎನ್ನುವುದು ಅವರ ಉದ್ದೇಶ ಎಂದು ಜೆಡಿಎಸ್ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿರುವುದು ಯಾಕೆ ಎಂದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಮತಗಳನ್ನು ಇಬ್ಬಾಗ ಮಾಡಿ ಬಿಜೆಪಿ ಸಹಾಯ ಮಾಡುವ ಉದ್ದೇಶ ಗುಟ್ಟಾಗಿ ಉಳಿದಿಲ್ಲ. ಜೆಡಿಎಸ್ ಉಪ ಚುನಾವಣೆಯನ್ನು ಗೆಲ್ಲುವ ದೃಷ್ಟಿಯಿಂದ ಸ್ವರ್ಧಿಸಿಲ್ಲ, ಬಿಜೆಪಿಗೆ ಸಹಾಯ ಮಾಡಲೆಂದು ಚುನಾವಣೆಗೆ ಸ್ಪರ್ಧಿಸಿದೆ ಎಂದು ದಿನೇಶ್ ಗುಂಡೂರಾವ್ ಕಿಡಿ ಕಾರಿದರು.
ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ಟ್ರೋಲ್ ಮಾಡುತ್ತಿರುವ ಬಿಜೆಪಿ ವಿರುದ್ಧವೂ ಹರಿಹಾಯ್ದ ಅವರು, ಬಿಜೆಪಿ ಲಿಂಗಾಯತರನ್ನು ಓಟ್ ಬ್ಯಾಂಕ್ ಅಂದುಕೊಂಡಿದೆ. ಅದನ್ನು ಉಳಿಸಿಕೊಳ್ಳಲು ಏನ್ ಬೇಕಾದರು ಮಾಡಲು ಸಿದ್ದವಾಗಿದ್ದಾರೆ ಅದಕ್ಕೆ ಬಿಜೆಪಿ ಹೀಗೆ ಮಾಡುತ್ತಿದೆ ಎಂದರು. ಇದನ್ನೂ ಓದಿ:ಡಿ.ಕೆ. ಶಿವಕುಮಾರ್ ಮಾವ ವಿಧಿವಶ
ಸಿದ್ದರಾಮಯ್ಯ ಅವರು ಬಸವಣ್ಣನವರ ಮೇಲೆ ಅಪಾರ ಭಕ್ತಿ ಹೊಂದಿದ್ದು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಕಡ್ಡಾಯ ಮಾಡಿದ್ದರು. ಅಲ್ಲದೇ ಅನುಭನ ಮಂಟಪ ನಿರ್ಮಾಣ ಮಾಡಲು ನಿರ್ಧಾರ ಮಾಡಿದರು ಆದರೆ ಬಿಜೆಪಿ ರಾಜಕೀಯ ಲಾಭಕ್ಕೆ ಹೀಗೆ ಹೇಳಿಕೆ ನೀಡುತ್ತಿದೆ ಅಷ್ಟೇ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್‍ಗೆ ಉತ್ತಮ ವಾತಾವರಣ ಇದೆ. ಜನರು ಬಿಜೆಪಿ ಆಡಳಿತವನ್ನು ನೋಡಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‍ಗೆ ಮತ ನೀಡಲಿದ್ದು, ಕಾಂಗ್ರೆಸ್‍ಗೆ ಉತ್ತಮ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:ಪಾಕ್ ಗೆಲುವನ್ನು ಸಂಭ್ರಮಿಸಿದವರ DNA ಭಾರತದಲ್ಲ: ಅನಿಲ್ ವಿಜ್
ರಾಯಚೂರು: ಜಿಲ್ಲೆಯನ್ನು ಕಡೆಗಣಿಸಲಾಗಿದೆ ಉತ್ತರ ಕರ್ನಾಟಕ ಎಂದರೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ. ಕಲ್ಯಾಣ ಕರ್ನಾಟಕ ಎಂದರೆ ಕಲಬುರಗಿ, ಬೀದರ್ ಎನ್ನುವಂತಾಗಿದೆ. ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಬಿಡಿ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಹೇಳಿದ್ದ ಮಾತು ಈಗ ಚರ್ಚೆಗೆ ಗ್ರಾಸವಾಗಿದೆ.
ಶಿವರಾಜ್ ಪಾಟೀಲ್ ಹೇಳಿಕೆಗೆ ತೆಲಂಗಾಣದ ಟಿಆರ್‍ಎಸ್ ಕಾರ್ಯಾಧ್ಯಕ್ಷ ಕೆಟಿಆರ್ ಸ್ವಾಗತಿಸಿದ್ದಾರೆ. ತೆಲಂಗಾಣದ ಅಭಿವೃದ್ಧಿಯನ್ನು ನೋಡಿ ಶಾಸಕ ಶಿವರಾಜ್ ಪಾಟೀಲ್ ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಲು ಒತ್ತಾಯಿಸಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಬ್ಬರು ಬಿಜೆಪಿ ಶಾಸಕರು ಬುಡಾ ಅಧ್ಯಕ್ಷರಿಗೆ ಸಹಕಾರ ಕೊಡುತ್ತಿಲ್ಲ: ಸತೀಶ್ ಜಾರಕಿಹೊಳಿ
ತಮ್ಮ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವುದರಿಂದ ಸ್ಪಷ್ಟನೆ ನೀಡಿರುವ ಶಾಸಕ ಡಾ.ಶಿವರಾಜ್ ಪಾಟೀಲ್ ರಾಯಚೂರು ಜಿಲ್ಲೆಯನ್ನು ನಿರ್ಲಕ್ಷಿಸಲಾಗುತ್ತಿದೆ ಹೀಗಾಗಿ ಆ ಮಾತು ಹೇಳಿದ್ದೆ. ನಾನು ಹುಟ್ಟಿರುವುದು ಕರ್ನಾಟಕದಲ್ಲೇ ಸಾಯುವುದು ಕರ್ನಾಟಕದಲ್ಲೇ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ ಎಂದು ಆಕ್ರೋಶದಲ್ಲಿ ಹೇಳಿದ್ದೇ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿಕೊಳ್ಳಲು ಅವರಿಗೆ ಆಸೆ ಇರಬಹುದು ನಾವು ಬಿಟ್ಟುಕೊಡಲ್ಲ. ಜಿಲ್ಲೆ ಅಭಿವೃದ್ಧಿಯಾಗಿಲ್ಲ ಎನ್ನುವ ಸಿಟ್ಟಿನಲ್ಲಿ ಮಾತನಾಡಿದ್ದೇನೆ. ರಾಯಚೂರನ್ನು ಕಡೆಗಣಿಸುವುದು ಇನ್ನಾದರೂ ನಿಲ್ಲಬೇಕು ಎಂಬುವುದು ನನ್ನ ಉದ್ದೇಶ ಎಂದು ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿ: 60 ತಿಂಗಳಲ್ಲಿ 59 ತಿಂಗಳು ಅಭಿವೃದ್ಧಿ, ಒಂದು ತಿಂಗಳ ಮಾತ್ರ ರಾಜಕಾರಣ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನೂತನ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ಕಾರ್ಯಕ್ರಮ ನೇರವೆರಿಸಿ ಮಾತನಾಡಿದ ಅವರು, ರಾಜಕಾರಣ ಮಾಡಲಿಕ್ಕೆ ಘೋಡಾ ಹೈ ಮೈದಾನ್ ಹೈ ಎಂದರು. ಸಬ್ ಲೋಗ್ ಹಮಕೋ ಪೇಯಚಾನ್ ಹೈ ಇದರ್ ( ರಾಜಕರಾಣ ಮಾಡಲು ಕುದುರೇನು ಇದೆ, ಮೈದಾನವು ಇದೆ. ಇಲ್ಲಿ ನಮಗೆ ಎಲ್ಲರೂ ಗೊತ್ತಿದ್ದವರೇ) ಎಂದು ಹಿಂದಿಯಲ್ಲೇ ಕಾರ್ಯಕ್ರಮಕ್ಕೆ ಬಂದಿದ್ದ ಜನರನ್ನ ಉದ್ದೇಶಿಸಿ ಮಾತನಾಡಿದ ಸಿಎಂ, ಹುಬ್ಬಳ್ಳಿಯ ಕೆಲ ಬಡಾವಣೆಗಳ ಹೆಸರು ಹೇಳಿದರು. ಇದನ್ನೂ ಓದಿ: ನಮ್ಮ ಹಾಜರಿ ಕ್ಯಾಂಟೀನ್‍ನಲ್ಲೇ ಹೆಚ್ಚಾಗಿರುತ್ತಿತ್ತು ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಬೊಮ್ಮಾಯಿ
ಹುಬ್ಬಳ್ಳಿಯ #KLE ತಾಂತ್ರಿಕ ವಿವಿಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿಂದು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ, ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆಯ ಕಾರ್ಯಕ್ರಮವನ್ನು ಮಾತನಾಡಲಾಯಿತು.
ಸಚಿವರಾದ @NiraniMurugesh#KLE ಕಾರ್ಯಾಧ್ಯಕ್ಷ @prabhakarbkore ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/47r0ezr8y3
ರಾಜಕಾರಣ ಮಾಡುವಾಗ ಗೆರೆ ಹಾಕಿ ರಾಜಕಾರಣ ಮಾಡೋಣ, ಆದರೆ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ. ಡಿಜಿಯಿಂದ ಹಿಡಿದು ಕಾನ್ಸ್ಟೇಬಲ್‍ವರೆಗೂ ಎಲ್ಲರೂ ಫೀಲ್ಡಿಗಿಳಿದು ಕೆಲಸ ಮಾಡಬೇಕು. ಕೇವಲ ಆಫೀಸ್‍ನಲ್ಲಿ ಕುಳಿತು ಆರ್ಡರ್ ಮಾಡಿದರೆ ಆಗಲ್ಲ. ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಬಹಳ ಸುಧಾರಿಸಿದೆ. ಇದು ಬಹಳ ಶಾಂತಿಯುತ ನಗರ ಆದರೆ ಇತ್ತೀಚೆಗೆ ಇಲ್ಲಿ ಕೆಲ ಕಿಡಿಗೇಡಿಗಳು ಶಾಂತಿ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದರು.
ಚಾಮರಾಜನಗರ: ಬಿಎಸ್‍ಪಿಯಿಂದ ಉಚ್ಛಾಟಿತನಾಗಿ ಅತಂತ್ರವಾಗಿರುವ ಶಾಸಕ ಎನ್ ಮಹೇಶ್ ಮುಂದಿನ ನಡೆಯೇನು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಇಂದು ಕೊಳ್ಳೇಗಾಲದಲ್ಲಿ ಮಾತನಾಡಿದ ಮಹೇಶ್ ಅವರು, ಕ್ಷೇತ್ರದ ಅಭಿವೃದ್ಧಿಯಾದ ದಿನ ನನ್ನ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಡುತ್ತೇನೆ ಎಂದು ಹೇಳಿದ್ದಾರೆ. ಸಂಕ್ರಾಂತಿ ಹೊತ್ತಿಗೆ ಸಾಕಷ್ಟು ಅನುದಾನ ಬರುವುದಿದೆ. ಅದು ಬಂದರೆ ಪಕ್ಕ ಗುಡ್ ನ್ಯೂಸ್ ಕೊಡುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಬಸ್ ನಿಲ್ದಾಣ, ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಭವನ ಉದ್ಘಾಟನೆಯಾಗಬೇಕಿದೆ. ನಮ್ಮ ಜನರಿಗೆ ಗುಡ್ ನ್ಯೂಸ್ ಕೊಡಲೂ ಬಿಜೆಪಿಯೊಂದಿಗೆ ಚೆನ್ನಾಗಿದ್ದೇನೆ. ಬಿಜೆಪಿ ಸೇರುವ ಅವಕಾಶ ಓಪನ್ ಇದೆ. 2008ರಿಂದಲೂ ಯಡಿಯೂರಪ್ಪ ಆಪ್ತರು ಎಂದು ಹೇಳುವ ಮೂಲಕ ಮುಂದೆ ನಾನು ಬಿಜೆಪಿ ಸೇರುತ್ತೇನೆ ಎಂಬುವ ಸುಳಿವು ನೀಡಿದ್ದಾರೆ.