Tag: Development Works

  • ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

    ಜು.28ರಂದು ಮದ್ದೂರಿಗೆ ಸಿಎಂ – 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ

    ಮಂಡ್ಯ: ಇದೇ ಜುಲೈ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಲಿದ್ದು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.

    ಅಂದಾಜು‌ 1,400 ಕೋಟಿ ವೆಚ್ಚದ 75 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ ಮದ್ದೂರು (Maddur) ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಕಾರ್ಯಕ್ರಮ ಆಯೋಜನೆಯ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ. ಇದನ್ನೂ ಓದಿ: ಹಳಸಿದ ದಾಲ್‌ ಬಡಿಸಿದ್ದಕ್ಕೆ ಶಾಸಕನಿಂದ ಕ್ಯಾಂಟೀನ್‌ ಸಿಬ್ಬಂದಿ ಮೇಲೆ ಹಲ್ಲೆ – ಕ್ಯಾಂಟೀನ್‌ ಲೈಸೆನ್ಸೇ ರದ್ದು

    ಲೋಕೋಯೋಗಿ ಇಲಾಖೆಯ 81 ಕೋಟಿ ರೂ., ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ 12 ಕೋಟಿ ರೂ., ಕಾವೇರಿ ನೀರಾವರಿ ನಿಗಮ 300 ಕೋಟಿ ರೂ. ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ನಡೆಯಲಿದೆ. ಇದನ್ನೂ ಓದಿ: ಭಾರತಕ್ಕೆ ಚೀತಾಗಳ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ನಮೀಬಿಯಾಗೆ ಮೋದಿ ಕೃತಜ್ಞತೆ

  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಕುಂದಾನಗರಿಯ ನಂದಿಹಳ್ಳಿ ಗ್ರಾಮದಲ್ಲಿ 1.07 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.

    ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ. ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ.ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ. ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಸಮಿತಿಯವರಿಗೆ 7 ಲಕ್ಷ ರೂ. ಗಳ ಚೆಕ್‍ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯನ್ನು ಸಹ ಅವರು ಉದ್ಘಾಟಿಸಿದರು. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

  • ತವರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

    ತವರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

    ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನಲ್ಲಿ ರೂ. 6223.50 ಲಕ್ಷದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ರೂ.1106 ಲಕ್ಷದ 2 ಅಭಿವೃದ್ಧಿ ಕಾಮಗಾರಿಗಳಿಗೆ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

    ಅಮೃತ ಯೋಜನೆಯಡಿ 1,412 ವೆಚ್ಚದಲ್ಲಿ 24 ×7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿದರು. ತಾಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ರೂ.170 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ರೂ.93 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ರೂ.62.80 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ, ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಭೂತ ಸೌಕರ್ಯಗಳಡಿ ರೂ.200 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ, ರೂ.49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ, ರೂ.50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿ, ನಗರಸಭೆ ರೂ.500 ಲಕ್ಷ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಾಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಇದನ್ನೂ ಓದಿ:ಹೆಚ್.ರವೀಂದ್ರ ಹುಟ್ಟುಹಬ್ಬ- 3ಸಾವಿರ ಮಹಿಳೆಯರಿಗೆ ಸೀರೆ ವಿತರಣೆ

    BASAVARAJ BOMMAI

    ರೂ.636 ಲಕ್ಷಗಳ ವೆಚ್ಚದಲ್ಲಿ ಸಮುದಾಯ ಭವನ, ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ರೂ.3250 ಲಕ್ಷ ವೆಚ್ಚದ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಶಂಕುಸ್ಥಾಪನೆ ನೆರವೇರಿಸಿದರು. ರೂ.906 ಲಕ್ಷ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಉದ್ಘಾಟಿಸಿದರು.ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಮಾದರಿ ಗೋಶಾಲೆ ನಿರ್ಮಾಣಕ್ಕೆ ಸುಧಾಕರ್ ಚಾಲನೆ

  • 22 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಭು ಚವ್ಹಾಣ್ ಚಾಲನೆ

    22 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಭು ಚವ್ಹಾಣ್ ಚಾಲನೆ

    ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಇಂದು ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

    ಕಮಲನಗರ ತಾಲೂಕಿನ ಬಾವಲಗಾಂವ್ ತಾಂಡಾ ಭೇಟಿಯಿಂದ ಆರಂಭಿಸಿ, 14ಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ, ಪಂಚಾಯತ್ ರಾಜ್ ಎಂಜಿನಿಯರಿಂಗ್, ಲೋಕೋಪಯೋಗಿ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಯೋಜನೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸೇರಿದಂತೆ ವಿವಿಧ ಯೋಜನೆಗಳಡಿ ಅಂದಾಜು 22 ಕೋಟಿ ರೂ.ಮೊತ್ತದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು.

    4.95 ಕೋಟಿ ವೆಚ್ಚದಲ್ಲಿ ಡೋಂಗರಗಾಂವ್ ಕ್ರಾಸ್-ಹುಲ್ಯಾಳ ರಸ್ತೆ ಅಭಿವೃದ್ಧಿ, 4.89 ಕೋಟಿ ರೂ. ವೆಚ್ಚದಲ್ಲಿ ಚೀಮೇಗಾಂವ್ ಕ್ರಾಸ್-ಹುಲ್ಯಾಳ ರಸ್ತೆ ಅಭಿವೃದ್ಧಿ, 4 ಕೋಟಿ ರೂ. ವೆಚ್ಚದಲ್ಲಿ ಮದನೂರ-ಕಮಲನಗರ ರಸ್ತೆ, ಭವಾನಿ ನಗರದ ಬಾವಲಗಾಂವ್ ತಾಂಡಾದಲ್ಲಿ, ದಾಬಕಾ ಮತ್ತು ಹಂದಿಕೇರಾ ಗ್ರಾಮಗಳಲ್ಲಿ ತಲಾ 15 ಲಕ್ಷ ರೂ. ಮೊತ್ತದಲ್ಲಿ ಹಳೆಯ ಅಂಗನವಾಡಿ ಕಟ್ಟಡವನ್ನು ತೆರವುಗೊಳಿಸಿ, ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

    ಕಮಲನಗರ ತಾಲೂಕಿನಲ್ಲಿ ವಿಶೇಷ ಆದ್ಯತೆ ನೀಡಿದ ಎಲ್ಲ ಕಡೆಗಳಲ್ಲಿನ ರಸ್ತೆ ಕಾಮಗಾರಿಗಳು ಉತ್ತಮ ಗುಣಮಟ್ಟದ್ದಾಗಿ ನಡೆಯಬೇಕು. ಕಾಲಮಿತಿಯೊಳಗೆ ಕಾಮಗಾರಿಗಳು ಪೂರ್ಣಗೊಳ್ಳಲು ಒತ್ತು ಕೊಡಬೇಕು ಎಂದು ವಿವಿಧ ಇಲಾಖೆಗಳ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

    ಈ ಸಂದರ್ಭದಲ್ಲಿ ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಸುರೇಶ್ ಭೋಸ್ಲೆ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಾಣಿಕ್‍ರಾವ್ ಪಾಟೀಲ್, ಪಂಚಾಯತ್ ರಾಜ್ ಇಂಜಿನಿಯರ್ ಅಶೋಕ ಸಜ್ಜನಶೆಟ್ಟಿ ಸೇರಿದಂತೆ ಇತರರು ಇದ್ದರು.

  • ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ರೌಂಡ್ಸ್

    ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿ ರೌಂಡ್ಸ್

    ಮೈಸೂರು: ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ಅವರು ರೌಂಡ್ಸ್ ನಡೆಸಿದ್ದು, ಬೆಳಗ್ಗೆ 7 ಗಂಟೆಯಿಂದ ಕ್ಷೇತ್ರದಲ್ಲಿ ರೌಂಡ್ಸ್ ಆರಂಭಿಸಿರುವ ಜಿಟಿಡಿ ಕ್ಷೇತ್ರದ ಸಮಸ್ಯೆಗಳನ್ನು ಅಲಿಸುತ್ತಾ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಸಾಗುತ್ತಿದ್ದಾರೆ.

    ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಬಡಾವಣೆಗಳ ವೀಕ್ಷಣೆ ಮಾಡಿದ ಜಿಟಿಡಿ ರಸ್ತೆ, ಒಳಚರಂಡಿ, ಕುಡಿಯೋ ನೀರಿನ ಸಮಸ್ಯೆ ಆಲಿಸಿದರು. ಪಾರ್ಕ್ ಸ್ವಚ್ಛತೆ, ಡ್ರೈನೆಜ್ ಸಮಸ್ಯೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

    ತಾವು ಭೇಟಿ ನೀಡಿದ ಪ್ರಾದೇಶಗಳ ಸಮಸ್ಯೆಗಳ ಕುರಿತ ಮಾಹಿತಿಯನ್ನು ಜನರಿಂದ ಪಡೆದು, ಆ ಸಮಸ್ಯೆಗಳಿಗೆ ಇರುವ ಪರಿಹಾರ ಮಾರ್ಗಗಳನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಾಜಿ ಸಚಿವರೊಂದಿಗೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು. ವಿವಿಧ ರಸ್ತೆಗಳಲ್ಲಿ 10 ಕಡೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕೂಡ ನೆರವೇರಿಸಿದರು. ಜನರ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆ ನೀಡಿದರು.