Tag: devider

  • ದೆಹಲಿಯ ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ದುರ್ಮರಣ

    ದೆಹಲಿಯ ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ – ಯುವಕ ದುರ್ಮರಣ

    ನವದೆಹಲಿ: ಸಿಗ್ನೇಚರ್ ಸೇತುವೆಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ನಡೆದಿದೆ.

    ಆಶಿಶ್ (23) ಈ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಆಶಿಶ್, ರಿಷಬ್, ಯಶ್ ಮತ್ತು ವಿಶಾಲ್ ಎಂಬ ನಾಲ್ವರು ಸ್ನೇಹಿತರು ತಮ್ಮ ಕಾರಿನಲ್ಲಿ ಸಿಗ್ನೇಚರ್ ಸೇತುವೆಯ ಮೇಲೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

    ಆಶಿಶ್ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿಹೊಡೆದಿದ್ದಾರೆ. ಪರಿಣಾಮ ಕಾರು ಚಲಾಯಿಸುತ್ತಿದ್ದ ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದಾಗಿ ಮೂವರಿಗೆ ಗಂಭೀರ ಗಾಯಗಳಾಗಿದೆ.

    ಗಾಯಗೊಂಡವರಲ್ಲಿ ವಿಶಾಲ್ ಸ್ಥಿತಿ ಗಂಭೀರವಾಗಿದೆ. ಯಶ್ ಮತ್ತು ರಿಷಬ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತ ಆಶಿಶ್ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ಪ್ರಕರಣದ ಬಗ್ಗೆ ದೂರು ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

  • ಡಿವೈಡರ್ ದಾಟಿ ಟೆಂಪೋ ಮೇಲೆ ಬಿದ್ದ ಕಾರ್- ಇಬ್ಬರು ಚಾಲಕರ ದುರ್ಮರಣ

    ಡಿವೈಡರ್ ದಾಟಿ ಟೆಂಪೋ ಮೇಲೆ ಬಿದ್ದ ಕಾರ್- ಇಬ್ಬರು ಚಾಲಕರ ದುರ್ಮರಣ

    ಉಡುಪಿ: ಕಾರು ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಚಾಲಕರಿಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯ ಸಂತೆಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಅನೂಪ್ ಗಂಭೀರ ಗಾಯಕ್ಕೆ ಒಳಗಾಗಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ರಾಷ್ಟ್ರೀಯ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕಾರು ಡಿವೈಡರ್ ದಾಟಿ, ಉಡುಪಿಯಿಂದ ಕುಂದಾಪುರ ಕಡೆ ಬರುತ್ತಿದ್ದ ಟೆಂಪೋ ಮೇಲೆ ಬಿದ್ದಿದೆ. ಪರಿಣಾಮ ಟೆಂಪೋ ಚಾಲಕ ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟೆಂಪೋದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಈ ಸಂಬಂಧ ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತವಾಗಿದ್ದು ಪೊಲೀಸರು ಟ್ರಾಫಿಕ್ ಜಾಮ್ ಕ್ಲೀಯರ್ ಮಾಡಿದರು.