Tag: devil film

  • ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

    ದರ್ಶನ್ ಜೊತೆ ವಿಜಯಲಕ್ಷ್ಮಿ ಎತ್ತಿನಗಾಡಿ ಸವಾರಿ – ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್

    ಟ ದರ್ಶನ್ (Darshan) ಜೊತೆ ಪತ್ನಿ ವಿಜಯಲಕ್ಷ್ಮಿ (Vijayalakshmi) ಎತ್ತಿನಗಾಡಿಯಲ್ಲಿ ಸವಾರಿ ಮಾಡಿರುವ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ.

    ಪತಿ ದರ್ಶನ್ ಜೊತೆ ಎತ್ತಿನಗಾಡಿಯಲ್ಲಿ ವಿಜಯಲಕ್ಷ್ಮಿ ರೌಂಡ್ ಹೊಡೆದಿದ್ದಾರೆ. ಎತ್ತಿನಗಾಡಿಯಲ್ಲಿ ಸವಾರಿ ಮಾಡ್ತಿರೋ ವಿಡಿಯೋವನ್ನು ಇನ್ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿ, ಸೂರ್ಯ ಮತ್ತು ಚಂದ್ರ ನಮ್ಮ ಸ್ಟಾರ್ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಬಳಿಕ ಬಿಗ್ ನ್ಯೂಸ್ ಕೊಟ್ರು ಮೋಕ್ಷಿತಾ ಪೈ!

    ಮೇ 19ರಂದು ದರ್ಶನ್ ಮತ್ತು ವಿಜಯಲಕ್ಷ್ಮಿ 22ನೇ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಂಡಿದ್ದರು. ಆ ದಿನ ರೆಸಾರ್ಟ್‌ವೊಂದರಲ್ಲಿ ಇಬ್ಬರೂ ಕೇಕ್ ಕತ್ತರಿಸಿ, ಮಸ್ತ್ ಆಗಿ ಡ್ಯಾನ್ಸ್ ಮಾಡಿ ಸಂಭ್ರಮಿಸಿದ್ದರು. ಇದನ್ನೂ ಓದಿ:‘ಮಾರ್ನಮಿ’ಗೆ ಮೋಹಕ ತಾರೆ ರಮ್ಯಾ ಸಾಥ್ – ರಿವೀಲಾಯ್ತು ಚೈತ್ರಾ ಆಚಾರ್ ರೋಲ್

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿಯವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಲ್ಲಿ ಇರುತ್ತಾರೆ. ಇದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

    ಇದೆಲ್ಲದರ ನಡುವೆ, ಡೆವಿಲ್ ಸಿನಿಮಾದ ಚಿತ್ರೀಕರಣವು ಭರದಿಂದ ಸಾಗುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ತಾರಕ್ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ.

  • ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

    ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

    ಟ ದರ್ಶನ್‌ಗೆ (Darshan) 25 ವರ್ಷಗಳಿಂದ ಮೇಕಪ್ ಆರ್ಟಿಸ್ಟ್ ಆಗಿದ್ದ ಹೊನ್ನೇಗೌಡ (Honne Gowda) ನಿಧನರಾಗಿದ್ದಾರೆ. ಆಪ್ತ ಹೊನ್ನೆಗೌಡ ನಿಧನದ ಬಗ್ಗೆ ನಟ ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ

    25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಮೇಕಪ್ ಆರ್ಟಿಸ್ಟ್ (Makeup Artist) ಹೊನ್ನೆಗೌಡ ಇಂದು ಅಗಲಿದ್ದಾರೆ. ಈ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ‘ಡೆವಿಲ್’ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಅವರೊಂದಿಗೆ ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮಿಲನಾ ಪ್ರಕಾಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ‘ತಾರಕ್’ ಚಿತ್ರಕ್ಕೂ ಇವರೇ ನಿರ್ದೇಶನ ಮಾಡಿದ್ದರು.

  • ‘ಡೆವಿಲ್’ ಚಿತ್ರದ ಸೆಟ್‌ನಲ್ಲಿ ಗೆಳೆಯನ ಬರ್ತ್‌ಡೇ ಆಚರಿಸಿದ ದರ್ಶನ್

    ‘ಡೆವಿಲ್’ ಚಿತ್ರದ ಸೆಟ್‌ನಲ್ಲಿ ಗೆಳೆಯನ ಬರ್ತ್‌ಡೇ ಆಚರಿಸಿದ ದರ್ಶನ್

    ಟ ದರ್ಶನ್  (Darshan) ‘ಡೆವಿಲ್’ ಸಿನಿಮಾದ (Devil) ಸೆಟ್‌ನಲ್ಲಿ ಗೆಳೆಯ ಸಚ್ಚಿದಾನಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಜನ್ಮದಿನದ ಸಂಭ್ರಮದಲ್ಲಿರೋ ಗೆಳೆಯನಿಗೆ ದರ್ಶನ್ ವಿಶೇಷವಾಗಿ ಶುಭಕೋರಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ಭಯೋತ್ಪಾದಕರು ಎಂದಿಗೂ ಕಾಶ್ಮೀರದ ಪ್ರಗತಿ ನೋಡಲು ಬಯಸುವುದಿಲ್ಲ: ಸುನೀಲ್ ಶೆಟ್ಟಿ

    ‘ಡೆವಿಲ್’ ಚಿತ್ರದ ಶೂಟಿಂಗ್‌ನಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಬಿಡುವಿನ ಸಮಯದಲ್ಲಿ ಗೆಳೆಯ ಸಚ್ಚಿದಾನಂದಗೆ ‘ಡೆವಿಲ್’ ಚಿತ್ರದ ಸೆಟ್ ಕರೆಸಿ ಕೇಕ್ ಕಟ್ ಮಾಡಿಸಿದ್ದಾರೆ. ಈ ವೇಳೆ, ದರ್ಶನ್ ಸಹೋದರ ದಿನಕರ್ ತೂಗುದೀಪ (Dinakar Thoogudeepa) ಕೂಡ ಭಾಗಿಯಾಗಿದ್ದಾರೆ. ಈ ಮೂಲಕ ದರ್ಶನ್ ನಯಾ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನಟನ ಸ್ಮಾರ್ಟ್ ಲುಕ್ ನೋಡಿ ದೃಷ್ಟಿ ತೆಗೆರೋ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಅಥವಾ ಸಹೋದರ ದಿನಕರ್ ಜೊತೆಯಾಗಿರುತ್ತಾರೆ.

    ಅಂದಹಾಗೆ, ‘ಡೆವಿಲ್’ ಸಿನಿಮಾದಲ್ಲಿ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. `ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ ‘ಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.

  • ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

    ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

    ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi) ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲಾ ಒಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ಪತಿ ಜೊತೆಗಿನ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಜೋಡಿಯ ಫೋಟೋ ನೋಡಿ ಫ್ಯಾನ್ಸ್ ವಾವ್ ಎಂದಿದ್ದಾರೆ. ಇದನ್ನೂ ಓದಿ: ಅಜಿತ್ ಕುಮಾರ್, ಬಾಲಯ್ಯಗೆ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ದರ್ಶನ್ (Darshan) ಜೊತೆಗಿನ ವಿಶೇಷ ಫೋಟೋವೊಂದನ್ನು ವಿಜಯಲಕ್ಷ್ಮಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ನೆಚ್ಚಿನ ಕುದುರೆ ಜೊತೆ ದರ್ಶನ್ ದಂಪತಿ ಖುಷಿಯಿಂದ ಪೋಸ್ ನೀಡಿದ್ದಾರೆ. ಈ ಫೋಟೋ ಈಗ ನಟನ ಫ್ಯಾನ್ಸ್ ಪೇಜ್‌ಗಳಲ್ಲಿ ವೈರಲ್ ಆಗ್ತಿದೆ. ಇದನ್ನೂ ಓದಿ:ನಮ್ಮ ಜನಗಳನ್ನ ಸಾಯಿಸ್ತಾರೆ ಅಂದ್ರೆ ನಾವ್ ಯುದ್ಧ ಮಾಡ್ಲೇಬೇಕು – ಉಗ್ರರ ದಾಳಿ ಖಂಡಿಸಿದ ಪ್ರೇಮ್

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಮೇಲೆ ದರ್ಶನ್ ಹೊರಬಂದ್ಮೇಲೆ ಪತಿಯ ವ್ಯವಹಾರವನ್ನು ವಿಜಯಲಕ್ಷ್ಮಿ ಅವರೇ ನೋಡಿಕೊಳ್ತಿದ್ದಾರೆ. ದರ್ಶನ್‌ಗೆ ಎಲ್ಲೇ ಶೂಟಿಂಗ್ ಇದ್ರೂ ಅಥವಾ ಯಾವುದೇ ಕಾರ್ಯಕ್ರಮ ಆಗಿದ್ರೂ ಪತ್ನಿ ಜೊತೆಯಾಗಿರುತ್ತಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಈ ಜೋಡಿ ಮೇಲೆ ಕೆಟ್ಟ ದೃಷ್ಟಿ ಬೀಳದಿರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

    ಅಂದಹಾಗೆ, ʻಡೆವಿಲ್’ ಸಿನಿಮಾದ ಚಿತ್ರೀಕರಣವು ಮೈಸೂರು ಹಾಗೂ ರಾಜಸ್ಥಾನದಲ್ಲಿ ನಡೆದಿದೆ. ಈ ಸಿನಿಮಾ ಕೆಲಸ ಭರದಿಂದ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ನಟಿಸುತ್ತಿದ್ದಾರೆ. ‘ತಾರಕ್’ ಡೈರೆಕ್ಟರ್ ಮಿಲನಾ ಪ್ರಕಾಶ್ ʻಡೆವಿಲ್’ಗೆ ನಿರ್ದೇಶನ ಮಾಡುತ್ತಿದ್ದಾರೆ.

  • ಶೂಟಿಂಗ್‌ಗೆ ಬ್ರೇಕ್‌ ಬೆನ್ನಲ್ಲೇ ಫಾರ್ಮ್‌ಹೌಸ್‌ನಲ್ಲಿ ಎತ್ತಿನಗಾಡಿ ಓಡಿಸಿದ ದರ್ಶನ್

    ಶೂಟಿಂಗ್‌ಗೆ ಬ್ರೇಕ್‌ ಬೆನ್ನಲ್ಲೇ ಫಾರ್ಮ್‌ಹೌಸ್‌ನಲ್ಲಿ ಎತ್ತಿನಗಾಡಿ ಓಡಿಸಿದ ದರ್ಶನ್

    ಟ ದರ್ಶನ್‌ಗೆ ‘ಡೆವಿಲ್’ ಸಿನಿಮಾ (Devil) ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಮೈಸೂರಿಗೆ (Mysuru) ತೆರಳಿದ್ದಾರೆ. ತಮ್ಮ ತೋಟದ ಮನೆಯಲ್ಲಿ ಎತ್ತಿನಗಾಡಿ ಓಡಿಸಿದ್ದಾರೆ. ಅವರ ಈ ವಿಡಿಯೋ ಫ್ಯಾನ್ಸ್ ಪೇಜ್‌ಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

    ಸಿನಿಮಾ ಕೆಲಸ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾನೂನು ಹೋರಾಟದ ನಡುವೆ ದರ್ಶನ್ (Darshan) ಫಾರ್ಮ್‌ಹೌಸ್‌ನಲ್ಲಿ (Farmhouse) ಸಮಯ ಕಳೆದಿದ್ದಾರೆ. ಮೈಸೂರಿನ ಮನೆಯಲ್ಲಿ ನಟ ಎತ್ತಿನಗಾಡಿ ಓಡಿಸುತ್ತಿರುವ ಅವರ ವಿಡಿಯೋ ಡಿಬಾಸ್ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಕೇಸ್‌: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮೇ 14ಕ್ಕೆ ಮುಂದೂಡಿಕೆ

    ಅಂದಹಾಗೆ, ನಿನ್ನೆ (ಏ.22) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮತ್ತೆ ಮೇ 14ಕ್ಕೆ ಮುಂದೂಡಲಾಗಿದೆ.

  • ‘ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿದೆ: ಅಪ್‌ಡೇಟ್ ಕೊಟ್ಟ ವಿನಯ್

    ‘ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿದೆ: ಅಪ್‌ಡೇಟ್ ಕೊಟ್ಟ ವಿನಯ್

    ‘ಬಿಗ್ ಬಾಸ್’ ಖ್ಯಾತಿಯ ವಿನಯ್ ಗೌಡ (Vinay Gowda) ಅವರು ದರ್ಶನ್ ನಟನೆಯ ‘ಡೆವಿಲ್’ ಚಿತ್ರದಲ್ಲಿ ವಿಲನ್ ಆಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರ ಬಗ್ಗೆ ವಿನಯ್ ಮಾತನಾಡಿದ್ದಾರೆ. ಡೆವಿಲ್ ತುಂಬಾ ಡಿಫರೆಂಟ್ ಆಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಕೊನೆಯುಸಿರು ಇರೋವರೆಗೂ ಸುದೀಪ್ ಸರ್ ಋಣ ಮರೆಯೋದಿಲ್ಲ: ಲಾಂಗ್‌ ವಿವಾದದ ಬಗ್ಗೆ ವಿನಯ್‌ ಮಾತು

    ದರ್ಶನ್ ಸರ್ ಯಾರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಅವರು ಅಷ್ಟು ಯಾರೊಂದಿಗೂ ಬೆರೆಯುತ್ತಿಲ್ಲ. ಕೆಲಸ ಮಾಡ್ತಾ ಅವರ ಪಾಡಿಗೆ ಅವರು ಇರುತ್ತಾರೆ. ಶೂಟಿಂಗ್ ಸ್ಥಳದಲ್ಲಿ ದರ್ಶನ್ ಸರ್ ಅವರೊಂದಿಗೆ ಮಾತನಾಡಿದ್ದೀನಿ. ಸೀನ್‌ಗಳ ಬಗ್ಗೆ ಚರ್ಚಿಸಿ ನಟಿಸಿದ್ವಿವಿ. ‘ಡೆವಿಲ್’ನಲ್ಲಿ (Devil) ದರ್ಶನ್ (Darshan) ಸರ್ ನನಗೆ ಹೊಡೆಯೋ ಸೀನ್ ಇತ್ತು. ಅದನ್ನು ತುಂಬಾ ಪ್ರೊಫೆಷನಲ್ ಆಗಿ ನಿರ್ದೇಶಕ ಪ್ರಕಾಶ್ ಸರ್ ಶೂಟ್ ಮಾಡಿದ್ದಾರೆ. ಅದು ಬಿಟ್ಟರೆ ದರ್ಶನ್ ಸರ್ ಜೊತೆ ವೈಯಕ್ತಿಕ ಯಾವುದೇ ಮಾತು ಆಡಿಲ್ಲ. ಇದನ್ನೂ ಓದಿ:ವಿಚಾರಣೆಗೆ ದರ್ಶನ್‌ ಗೈರು – ಬೆಂಗಳೂರು ಕೋರ್ಟ್‌ ಅಸಮಾಧಾನ

    `ಡೆವಿಲ್’ ಸಿನಿಮಾ ತುಂಬಾ ಡಿಫರೆಂಟ್ ಆಗಿರುತ್ತದೆ. ಪ್ರತಿಯೊಂದು ಸೀನ್ ಕೂಡ ಹೀಗೆ ಬರಬೇಕು ಎಂದು ಮಾಡಿಕೊಂಡೆ ಸಿನಿಮಾ ಮಾಡ್ತಿದ್ದಾರೆ. ಅದರ ಬಗ್ಗೆ ಜಾಸ್ತಿ ಬಿಟ್ಟು ಕೊಡೋಕೆ ಆಗೋದಿಲ್ಲ.

    ಅಂದಹಾಗೆ, ದರ್ಶನ್‌ಗೆ ನಾಯಕಿಯಾಗಿ ರಚನಾ ರೈ ಕಾಣಿಸಿಕೊಂಡಿದ್ದಾರೆ. ನವಗ್ರಹ ನಟಿ ಶರ್ಮಿಳಾ ಮಾಂಡ್ರೆ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತಾರಕ್ ಡೈರೆಕ್ಟರ್ ಮಿಲನಾ ಪ್ರಕಾಶ್ ಈ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.

  • ‘ಡೆವಿಲ್‌’ ಶೂಟಿಂಗ್‌ಗಾಗಿ ರಾಜಸ್ಥಾನದಲ್ಲಿ ಪತಿ ಜೊತೆ ವಿಜಯಲಕ್ಷ್ಮಿ

    ‘ಡೆವಿಲ್‌’ ಶೂಟಿಂಗ್‌ಗಾಗಿ ರಾಜಸ್ಥಾನದಲ್ಲಿ ಪತಿ ಜೊತೆ ವಿಜಯಲಕ್ಷ್ಮಿ

    ಟ ದರ್ಶನ್ (Darshan) ಕಳೆದ 10 ದಿನಗಳಿಂದ ರಾಜಸ್ಥಾನದಲ್ಲಿ ‘ಡೆವಿಲ್’ (Devil)  ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪತಿಗೆ ವಿಜಯಲಕ್ಷ್ಮಿ ಸಾಥ್ ನೀಡಿದ್ದಾರೆ. ಇದೀಗ ರಾಜಸ್ಥಾನದಲ್ಲಿ ಕ್ಲಿಕ್ಕಿಸಿದ ಫೋಟೋಗಳನ್ನು ನಟನ ಪತ್ನಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

    ಪತಿ ಜೊತೆ ವಿಜಯಲಕ್ಷ್ಮಿ (Vijayalakshmi) ಕೂಡ ರಾಜಸ್ಥಾನದಲ್ಲಿ (Rajasthan) ಬೀಡು ಬಿಟ್ಟಿದ್ದಾರೆ. ಬಿಡುವಿನ ವೇಳೆಯಲ್ಲಿ ಅಲ್ಲಿನ ಸುಮದರ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇದೀಗ ರಾಜಸ್ಥಾನದಲ್ಲಿ ಅದ್ಧೂರಿಯಾಗಿರುವ ಬಂಗಲೆವೊಂದರಲ್ಲಿ ನಿಂತು ದರ್ಶನ್ ಪತ್ನಿ ಫೋಟೋಗೆ ಪೋಸ್ ನೀಡಿದ್ದಾರೆ. ಈ ಪೋಸ್ಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಬರುತ್ತಿವೆ. ಇದನ್ನೂ ಓದಿ:‘ಸ್ತ್ರೀ 2’ ಸಕ್ಸಸ್ ಬಳಿಕ ಶ್ರದ್ಧಾ ಕಪೂರ್‌ಗೆ ಒಲಿದ ಅದೃಷ್ಟ- ನಟಿಗೆ ಬಿಗ್ ಚಾನ್ಸ್

     

    View this post on Instagram

     

    A post shared by Vijayalakshmi darshan (@viji.darshan)

    ಸದ್ಯ ರಾಜಸ್ಥಾನದ ಉದಯಪುರದಲ್ಲಿ ‘ಡೆವಿಲ್’ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ರಾಜಸ್ಥಾನ ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಏ.4ರಂದು ಬೆಂಗಳೂರಿಗೆ ಪತ್ನಿಯೊಂದಿಗೆ ದರ್ಶನ್ ವಾಪಸ್ಸಾಗಲಿದ್ದಾರೆ.

    ‘ಡೆವಿಲ್’ ಚಿತ್ರಕ್ಕೆ ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಜೊತೆ ರಚನಾ ರೈ, ಶರ್ಮಿಳಾ ಮಾಂಡ್ರೆ, ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಸೇರಿದಂತೆ ನಟಿಸುತ್ತಿದ್ದಾರೆ.

  • ರಾಜಸ್ಥಾನದಲ್ಲಿ ‘ಡೆವಿಲ್’ ಚಿತ್ರೀಕರಣ ಮುಗಿಸಿದ ದರ್ಶನ್- ನಾಳೆ ಬೆಂಗಳೂರಿನತ್ತ ಚಿತ್ರತಂಡ

    ರಾಜಸ್ಥಾನದಲ್ಲಿ ‘ಡೆವಿಲ್’ ಚಿತ್ರೀಕರಣ ಮುಗಿಸಿದ ದರ್ಶನ್- ನಾಳೆ ಬೆಂಗಳೂರಿನತ್ತ ಚಿತ್ರತಂಡ

    ಟ ದರ್ಶನ್ (Darshan) ಸದ್ಯ ‘ಡೆವಿಲ್’ (Devil) ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಪ್‌ಡೇಟ್‌ವೊಂದು ಹೊರಬಿದ್ದಿದೆ. ರಾಜಸ್ಥಾನದಲ್ಲಿ ದರ್ಶನ್ ಯಶಸ್ವಿಯಾಗಿ ‘ಡೆವಿಲ್‌’ ಶೂಟಿಂಗ್‌ ಮಾಡಿ ಮುಗಿಸಿದ್ದಾರೆ. ಇದನ್ನೂ ಓದಿ:ಅಂದು ಹೈದರಾಬಾದ್‌ನವಳು, ಇಂದು ಕರ್ನಾಟಕ: ರಶ್ಮಿಕಾ ಮಂದಣ್ಣ ಹೇಳಿಕೆ ವೈರಲ್

    ಇತ್ತೀಚೆಗೆ ಮೈಸೂರಿನಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ರಾಜಸ್ಥಾನಕ್ಕೆ ‘ಡೆವಿಲ್’ ಟೀಮ್ ತೆರಳಿತ್ತು.  ಒಂದು ವಾರಗಳ ಕಾಲ ರಾಜಸ್ಥಾನದಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿ ಮುಗಿಸಿದ್ದಾರೆ ದರ್ಶನ್ & ಟೀಮ್. ಹಾಗಾಗಿ ಏ.2ರಂದು ಬೆಂಗಳೂರಿಗೆ ‘ಡೆವಿಲ್’ ಟೀಮ್ ವಾಪಸ್ಸಾಗಲಿದೆ. ಇದನ್ನೂ ಓದಿ:ಕಣ್ಣಿನಲ್ಲಿ ಪೊರೆ ಬೆಳೆದ ಮಗುವಿನ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಧ್ರುವ ಸರ್ಜಾ

    ಮುಂದಿನ ಹಂತದ ಚಿತ್ರೀಕರಣವು ಹೈದರಾಬಾದ್‌ನಲ್ಲಿ ನಡೆಯಲಿದೆ. ಸದ್ಯದಲ್ಲೇ ‘ಡೆವಿಲ್’ ಟೀಮ್ ತೆರಳಲಿದೆ. ಅಂದಹಾಗೆ, ಈ ವರ್ಷದ ಅಂತ್ಯದಲ್ಲಿ ಡೆವಿಲ್ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

    ಈ ಚಿತ್ರದಲ್ಲಿ ದರ್ಶನ್ ಜೊತೆ ಕರಾವಳಿ ನಟಿ ರಚನಾ ರೈ, ಶರ್ಮಿಳಾ ಮಾಂಡ್ರೆ, ಬಿಗ್ ಬಾಸ್ ವಿನಯ್ ಗೌಡ (Vinay Gowda) ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಹಿಂದೆ ತಾರಕ್ ನಿರ್ದೇಶನ ಮಾಡಿದ್ದ ಮಿಲನಾ ಪ್ರಕಾಶ್ ಅವರೇ ‘ಡೆವಿಲ್’ ಚಿತ್ರವನ್ನು ನಿರ್ದೇಶನ ಮಾಡ್ತಿದ್ದಾರೆ.

  • ಫ್ಯಾಮಿಲಿ ಫೋಟೋ ಹಂಚಿಕೊಂಡ ದರ್ಶನ್ ಪತ್ನಿ- ಯಾರ ಕಣ್ಣು ನಿಮ್ಮೇಲೆ ಬೀಳದಿರಲಿ ಎಂದ ಫ್ಯಾನ್ಸ್

    ಫ್ಯಾಮಿಲಿ ಫೋಟೋ ಹಂಚಿಕೊಂಡ ದರ್ಶನ್ ಪತ್ನಿ- ಯಾರ ಕಣ್ಣು ನಿಮ್ಮೇಲೆ ಬೀಳದಿರಲಿ ಎಂದ ಫ್ಯಾನ್ಸ್

    ರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijaylakshmi) ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ತಾ ಇರುತ್ತಾರೆ. ಇದೀಗ ಪತಿ ಮತ್ತು ಮಗನೊಂದಿಗೆ ಖುಷಿಯಿಂದ ಕ್ಲಿಕ್ಕಿಸಿರುವ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಉದ್ಯಮಿ ಮಗಳೊಂದಿಗೆ ಪ್ರಭಾಸ್‌ ಮದುವೆ ವಿಚಾರ ಸುಳ್ಳು- ಆಪ್ತರಿಂದ ಸ್ಪಷ್ಟನೆ

    ಆನೆ ಅಭಿಮನ್ಯು ಜೊತೆ ನಿಂತು ಪತಿ ದರ್ಶನ್ ಹಾಗೂ ಪುತ್ರನೊಂದಿಗೆ ಇರುವ ಫೋಟೋವನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ಖುಷಿ ಖುಷಿಯಾಗಿರುವ ಇವರ ಫ್ಯಾಮಿಲಿ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ನಿಮ್ಮ ಕುಟುಂಬದ ಮೇಲೆ ಯಾರ ಕೆಟ್ಟ ಕಣ್ಣು ಬೀಳದಿರಲಿ ಎಂದು ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ. ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

     

    View this post on Instagram

     

    A post shared by Vijayalakshmi darshan (@viji.darshan)

    ಇನ್ನೂ ನಟ ದರ್ಶನ್ ಸದ್ಯ ರಾಜಸ್ಥಾನದಲ್ಲಿ ‘ಡೆವಿಲ್’ (Devil) ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.

  • ಡಿಬಾಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ಫೆ.16ರಂದು ರಿಲೀಸ್ ಆಗಲಿದೆ ‘ಡೆವಿಲ್’ ಚಿತ್ರದ ಟೀಸರ್

    ಡಿಬಾಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ಫೆ.16ರಂದು ರಿಲೀಸ್ ಆಗಲಿದೆ ‘ಡೆವಿಲ್’ ಚಿತ್ರದ ಟೀಸರ್

    ರ್ಶನ್ (Darshan) ನಟನೆಯ ‘ಡೆವಿಲ್’ (Devil) ಸಿನಿಮಾದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಲಿದೆ ಎಂದು ಸ್ವತಃ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ರಕ್ಷಿತಾ ಸಹೋದರನ ಆರತಕ್ಷತೆ: ಕಪ್ಪು ಸೀರೆಯಲ್ಲಿ ಕಂಗೊಳಿಸಿದ ರಮ್ಯಾ

    ಇದೇ ಫೆ.16ರಂದು ದರ್ಶನ್ 47ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹಾಗಾಗಿ ‘ಡೆವಿಲ್’ ಚಿತ್ರದ ಟೀಸರ್ ಆಗಲಿದೆ. ನಮ್ಮ ಹೊಸ ಪ್ರಯತ್ನದ ಹಾರಿವು ಶೀಘ್ರದಲ್ಲೇ ನಿಮ್ಮ ಮುಂದೆ ಎಂದು ‘ಡೆವಿಲ್’ ಪೋಸ್ಟರ್ ಶೇರ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಇನ್ನೂ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆಗುವ ಮುನ್ನ ‘ಡೆವಿಲ್’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದರು. ಆ ವೇಳೆ, ಚಿತ್ರದ ಮೊದಲ ಗ್ಲಿಂಪ್ಸ್ ಬಿಡುಗಡೆ ಆಗಿತ್ತು. ಬೇಲ್ ಮೇಲೆ ಹೊರಬಂದ ಬಳಿಕ ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ದರ್ಶನ್ ಭಾಗಿಯಾಗಿದ್ದರು. ಒಟ್ನಲ್ಲಿ ನಾನಾ ಕಾರಣಗಳಿಂದ ಡೆವಿಲ್ ಸಿನಿಮಾದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.