Tag: devotee

  • ಭೀಮಾ ನದಿಯಲ್ಲಿ ಕೊಚ್ಚಿ ಹೋದ ಭಾಗಮ್ಮ ದೇವಿ ಭಕ್ತ

    ಭೀಮಾ ನದಿಯಲ್ಲಿ ಕೊಚ್ಚಿ ಹೋದ ಭಾಗಮ್ಮ ದೇವಿ ಭಕ್ತ

    ಕಲಬುರಗಿ: ಘತ್ತರಗಿ ಭಾಗಮ್ಮ ದೇವಿಯ (Bhagamma Devi) ಭಕ್ತರೊಬ್ಬರು (Devotee) ಭೀಮಾ ನದಿಯಲ್ಲಿ (Bhima River) ಕೊಚ್ಚಿ ಹೋದ ಘಟನೆ ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದಲ್ಲಿ ನಡೆದಿದೆ.

    ಬೆಂಗಳೂರಿನ (Bengaluru) ಜೆಸಿ ನಗರ (JCNagar) ನಿವಾಸಿ ಸುರೇಶ್ (40) ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಘತ್ತರಗಿ ಭಾಗಮ್ಮ ದೇವಿ ದರ್ಶನಕ್ಕೆ ಸುರೇಶ್ ಕುಟುಂಬ ಸಮೇತ ಬೆಂಗಳೂರಿನಿಂದ ಬಂದಿದ್ದರು. ಇದನ್ನೂ ಓದಿ: ಪ್ರೇಯಸಿಗೆ ಮತ್ತೊಬ್ಬನ ಜೊತೆ ಅನೈತಿಕ ಸಂಬಂಧ – ಪ್ರಶ್ನೆ ಮಾಡಿದ್ದಕ್ಕೆ ವೈದ್ಯನ ಕೊಲೆ

    ಸುರೇಶ್ ನದಿಯಲ್ಲಿ ಕೊಚ್ಚಿ ಹೋಗಿದ್ದರಿಂದ ಹೆಂಡತಿ, ಮಕ್ಕಳು ನದಿ ತಟದಲ್ಲಿ ಕಣ್ಣೀರಿಟ್ಟಿದ್ದಾರೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುರೇಶ್‍ಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲವ್, ಸೆಕ್ಸ್, ದೋಖಾ – ಮದುವೆ ನೆಪದಲ್ಲಿ ಮಹಿಳೆಯರ ನಗ್ನ ಫೋಟೋ ಇಟ್ಟುಕೊಂಡು ಬ್ಲಾಕ್‍ಮೇಲ್

    Live Tv
    [brid partner=56869869 player=32851 video=960834 autoplay=true]

  • ಭಕ್ತಿಯ ಪರಾಕಾಷ್ಠೆ ತಲುಪಿ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ!

    ಭಕ್ತಿಯ ಪರಾಕಾಷ್ಠೆ ತಲುಪಿ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ!

    ಲಕ್ನೋ: ಭಕ್ತಿಯ ಪರಾಕಾಷ್ಠೆ ತಲುಪಿ ಭಕ್ತನೊಬ್ಬ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಇಲ್ಲಿನ ಮಾ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.

    ಕೌಶಂಬಿ ನಿವಾಸಿ ಸಂಪತ್ (38) ದೇವರಿಗೆ ನಾಲಿಗೆ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಎಪಿ ಅಧಿಕಾರಕ್ಕೇರಿದ ರಾಜ್ಯಗಳಲ್ಲಿ ಗುತ್ತಿಗೆ ನೌಕರರ ಹುದ್ದೆ ಖಾಯಂ: ಕೇಜ್ರಿವಾಲ್

    ಸಂಪತ್ ತನ್ನ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯ ಪ್ರದಕ್ಷಿಣೆ ಮುಗಿಸಿದ ನಂತರ, ಅವನು ತನ್ನ ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ್ದಾನೆ ಎಂದು ಕರ್ಹಾ ಧಾಮ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಅಭಿಲಾಷ್ ತಿವಾರಿ ತಿಳಿಸಿದ್ದಾರೆ.

    ಶುಕ್ರವಾರ ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಆತನ ಪತ್ನಿ ಬನ್ನೋ ದೇವಿ ಹೇಳಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಬರೆಯಲು ಈಜಿ ಚಂಪಾವತಿ ನದಿ ದಾಟಿದ ಯುವತಿ

    Live Tv
    [brid partner=56869869 player=32851 video=960834 autoplay=true]

  • ಭಕ್ತೆ ಮೇಲೆ ಅತ್ಯಾಚಾರ – ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಅರೆಸ್ಟ್‌

    ಭಕ್ತೆ ಮೇಲೆ ಅತ್ಯಾಚಾರ – ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಅರೆಸ್ಟ್‌

    ಭೋಪಾಲ್: ಮಧ್ಯಪ್ರದೇಶದ ರಾಜಧಾನಿಯಲ್ಲಿ ಮಹಿಳಾ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ವೈರಾಗ್ಯಾನಂದ ಗಿರಿ ಅವರನ್ನು ಗ್ವಾಲಿಯರ್‌ನಲ್ಲಿ ಬಂಧಿಸಿದ್ದು, ಅವರನ್ನು ಭೋಪಾಲ್‌ಗೆ ಕರೆತರಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ) ರಿಚಾ ಚೌಬೆ ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ಮೋದಿ – ಎಷ್ಟಿದೆ ಗೊತ್ತಾ?

    ಜುಲೈ 17 ರಂದು ಆರೋಪಿ ದೇವಮಾನವ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೋಮವಾರ ಭಕ್ತೆ ದೂರು ನೀಡಿ ನೀಡಿದ್ದಾರೆ.

    ಮದುವೆಯಾಗಿ ಬಹಳ ದಿನಗಳಿಂದ ಮಕ್ಕಳಾಗಿರಲಿಲ್ಲ. ಕೆಲವು ವಿಧಿವಿಧಾನಗಳ ಮೂಲಕ ಗರ್ಭಿಣಿಯಾಗುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವೈರಾಗ್ಯಾನಂದರ ಆಶೀರ್ವಾದ ಪಡೆಯಲು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    ವೈರಾಗ್ಯಾನಂದ ನೀಡಿದ ನೈವೇದ್ಯವನ್ನು ಸೇವಿಸಿ ಮೂರ್ಛೆ ಹೋದಾಗ ದೇವಮಾನವ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಾಮಾಜಿಕ ಕಳಂಕದ ಭಯದಿಂದ ತಕ್ಷಣ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿ ಕಳೆದ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರ ಗೆಲುವಿಗಾಗಿ ದೇವಮಾನವ ಯಜ್ಞ ಕೂಡ ಆಯೋಜಿಸಿದ್ದ. ಇದನ್ನೂ ಓದಿ: ಬಿಜೆಪಿ- ಜೆಡಿಯು ಮೈತ್ರಿಗೆ ಗುಡ್‌ಬೈ – ನಿತೀಶ್‌ ರಾಜೀನಾಮೆಗೆ ಕಾರಣ ಏನು?

    Live Tv
    [brid partner=56869869 player=32851 video=960834 autoplay=true]

  • ನನ್ನ ಪತ್ನಿಗೆ ಹೆಣ್ಣುಮಗುವಾಗಲಿ – ಹುಂಡಿ ಹಣ ಎಣಿಸುವಾಗ ಸಿಕ್ತು ಭಕ್ತನ ಹರಕೆ ಪತ್ರ!

    ನನ್ನ ಪತ್ನಿಗೆ ಹೆಣ್ಣುಮಗುವಾಗಲಿ – ಹುಂಡಿ ಹಣ ಎಣಿಸುವಾಗ ಸಿಕ್ತು ಭಕ್ತನ ಹರಕೆ ಪತ್ರ!

    ಕೊಪ್ಪಳ: ಓಮಿಕ್ರಾನ್ ಸೋಂಕು ಹೆಚ್ಚಳದಿಂದಾಗಿ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಭಕ್ತರ ದರ್ಶನಕ್ಕೆ ಬರುವವರ ಸಂಖ್ಯೆ ಕ್ಷೀಣಿಸಿದೆ. ಆದರೂ, ಇಂದು ನಡೆದ ಹುಂಡಿ ಹಣ ಎಣಿಕೆಯಲ್ಲಿ 10.45 ಲಕ್ಷ ರೂ. ಕಾಣಿಕೆ ಸಂಗ್ರಹವಾಗಿದೆ. 3 ವಿದೇಶಿ ನಾಣ್ಯಗಳು ಕೂಡ ಕಾಣಿಕೆಯಾಗಿ ಬಂದಿವೆ.

    ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಬಳಿರುವ ಅಂಜನಾದ್ರಿ ಬೆಟ್ಟದಲ್ಲಿ ಇಂದು ಗ್ರೇಡ್-2 ತಹಶೀಲ್ದಾರ್ ವಿ.ಹೆಚ್.ಹೊರಪೇಟೆ ಅವರ ನೇತೃತ್ವದಲ್ಲಿ ಬೆಳಗ್ಗೆ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು.

    31 ದಿನದ ಅವಧಿಯಲ್ಲಿ ಇಷ್ಟೊಂದು ಹಣ ಸಂಗ್ರಹವಾಗಿರುವುದು ಕಂದಾಯ ಮತ್ತು ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ. ಅಮೆರಿಕಾ ಮತ್ತು ಫಿಲಿಫೈನ್ ದೇಶದ ಮೂರು ನಾಣ್ಯಗಳು ಕಾಣಿಕೆ ರೂಪವಾಗಿ ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟೋಯಿಂಗ್ ವಾಹನ ಸಿಬ್ಬಂದಿ ಅಮಾನುಷವಾಗಿ ವರ್ತಿಸಿಲ್ಲ, ಅದೆಲ್ಲಾ ಸುಳ್ಳು: ಆರಗ ಜ್ಞಾನೇಂದ್ರ

    ಹುಂಡಿಯಲ್ಲಿ ಹರಕೆ ಪತ್ರ
    ನನ್ನ ಪತ್ನಿಗೆ ಹೆಣ್ಣು ಮಗುವಾಗಲಿ, ಹೆರಿಗೆ ಸೂಸುತ್ರವಾಗಿ ಆಗಲಿ. ನನ್ನ ಮೇಲೆ ಯಾವುದೇ ಪ್ರಕರಣ ಇಲ್ಲದಂತೆ ಮಾಡು ಭಗವಂತ ಎಂಬ ಹಲವು ಹರಕೆಯಿರುವ ಭಕ್ತನೊಬ್ಬನ ಪತ್ರ ಹುಂಡಿಯಲ್ಲಿ ಸಿಕ್ಕಿದೆ. ಹುಂಡಿ ಎಣಿಕೆಯಲ್ಲಿ ಭಕ್ತನೊಬ್ಬನ ಹರಕೆ ಪತ್ರ ಓದಿದ ಕಂದಾಯ ಇಲಾಖೆ ಸಿಬ್ಬಂದಿ, ದೇವರೇ ಆ ಭಕ್ತನ ಬೇಡಿಕೆ ಈಡೇರಿಸಪ್ಪಾ ಎಂದು ನಗು ಬೀರಿದ್ದಾರೆ.

  • ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ ಇದೆ: ಕೋಟ

    ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ ಇದೆ: ಕೋಟ

    ಬೆಂಗಳೂರು: ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ ಅಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದರು. ಬಿಜೆಪಿ, ಆರ್ ಎಸ್.ಎಸ್ ಕಾರ್ಯಕರ್ತರಿಗೆ ನೂರಾರು ಕೋಟಿ ಬೆಲೆ ಬಾಳುವ ದೇವಸ್ಥಾನಗಳನ್ನ ಹಸ್ತಾಂತರಿಸುವ ಅಜೆಂಡಾ ಎಂಬ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದರು.

    ಹಿಂದೂ ದೇವಾಲಯಗಳನ್ನ ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬ ಚಿಂತನೆ ಇದೆ. ಭಕ್ತರು ಅಂದ್ರೆ ಬಿಜೆಪಿ, ಆರ್.ಎಸ್.ಎಸ್ ಕಾರ್ಯಕರ್ತರು ಆಗಿರಬಹುದು. ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದ್ರೆ ಎಲ್ಲರು ಬರುತ್ತಾರೆ. ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು. ಇದನ್ನೂ ಓದಿ: ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು

    ಇದೇ ವೇಳೆ ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರು ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‍ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‍ಪಿ ಮತ್ತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‍ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದೆ. ಅಲ್ಲಿರುವ ಪರಿಸ್ಥಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.

    ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‍ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನುಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ. ಕೊರಗರ, ಗಿರಿಜನರ, ದಲಿತ ಬಂಧುಗಳಿಗೆ ಭಯಪಡುವ ಅವಶ್ಯಕತೆ ಇಲ್ಲ. ನಾನು, ಗೃಹ ಸಚಿವರು ಹಾಗೂ ಸರ್ಕಾರ ನಿಮ್ಮ ಜೊತೆ ಇದೆ. ಏನಾದರೂ ಇದ್ರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

  • ತಿರುಪತಿಗೆ 3 ಕೋಟಿ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆ ನೀಡಿದ ಅನಾಮಧೇಯ ಭಕ್ತ

    ತಿರುಪತಿಗೆ 3 ಕೋಟಿ ರೂ. ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆ ನೀಡಿದ ಅನಾಮಧೇಯ ಭಕ್ತ

    ಅಮರಾವತಿ: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ಭಕ್ತನೊಬ್ಬ 3 ಕೋಟಿ ರೂಪಾಯಿ ಮೌಲ್ಯದ ವಜ್ರ ಖಚಿತ ಚಿನ್ನಾಭರಣ ಕಾಣಿಕೆಯಾಗಿ ನೀಡುವ ಮೂಲಕ  ಸುದ್ದಿಯಾಗಿದ್ದಾರೆ.

    ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ವಜ್ರ ಖಚಿತವಾದ ಚಿನ್ನದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಕ್ಕಳಿಗೂ ವಕ್ಕರಿಸಿತು ಹೊಸ ತಳಿ- ಮಹಾರಾಷ್ಟ್ರದಲ್ಲಿ 3 ವರ್ಷದ ಮಗುವಿನಲ್ಲಿ ಓಮಿಕ್ರಾನ್‌ ಪತ್ತೆ

    ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ. ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿರುತ್ತಾರೆ. ದೇಶದ ಶ್ರೀಮಂತ ದೇವಸ್ಥಾನಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನವು ಒಂದಾಗಿದೆ.

  • ಶಿವನ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿದ ಭಕ್ತ

    ಶಿವನ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿದ ಭಕ್ತ

    ಹೈದರಾಬಾದ್: ಭಕ್ತನೊಬ್ಬ ಶಿವಲಿಂಗ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ನೀಡಿರುವ ವಿಚಿತ್ರ ಘಟನೆ ಆಂಧ್ರಪ್ರದೇಶದ ಪಾಲಕೋಲ್‍ನಲ್ಲಿ ನಡೆದಿದೆ.

    ಪಂಚರಾಮ ಕ್ಷೇತ್ರಗಳಲ್ಲಿ ಒಂದಾದ ಕ್ಷೀರ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ, ಪಾಲಕೋಲಿನ ದೇವೆಲ್ಲ ನರಸಿಂಹ ಮೂರ್ತಿ ನೈವೇದ್ಯವಾಗಿ 10 ಕೆಜಿ ಐಸ್ ಕ್ರೀಮ್ ಅರ್ಪಿಸಿದ್ದು, ಸುತ್ತಮುತ್ತಲೂ ಬಹಳ ಪ್ರಸಿದ್ಧರಾಗಿದ್ದಾರೆ. ಐಸ್ ಕ್ರೀಮ್ ಅನ್ನು ಶಿವಲಿಂಗದ ಮೇಲೆ ಸುರಿಯಲಾಯಿತು. ಅದು ದೇವರ ಸುತ್ತಲೂ ತುಂಬಿಕೊಂಡಾಗ ಆ ಅದ್ಭುತ ದೃಶ್ಯವನ್ನು ವೀಕ್ಷಿಸಲು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದರು. ದೇವರ ಪ್ರಸಾದವಾಗಿ ತಣ್ಣನೆಯ ಐಸ್ ಕ್ರೀಮ್ ಅನ್ನು ಪಡೆಯಲು ಭಕ್ತರು  ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಶುರುವಾಗಿದೆ ಹೈಟೆಕ್ ಡ್ರಗ್ಸ್ ಪೆಡ್ಲಿಂಗ್

    ಶಿವನಿಗೆ ಮಾಂಸದ ಅಡುಗೆಯನ್ನು ನೈವೇದ್ಯವಾಗಿ ನೀಡಿದ ಉದಾಹರಣೆಗಳೂ ಪುರಾಣದಲ್ಲಿದೆ. ಇನ್ನು ಕೆಲವರು ಪಾಯಸ, ಸಕ್ಕರೆ ಪೊಂಗಲ್ ಮತ್ತು ಹೂರಣವನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ. ಆದರೆ ಈ ಭಕ್ತ ಶಿವನ ನೈವೇದ್ಯಕ್ಕೆ ಐಸ್ ಕ್ರೀಮ್ ನೀಡಿರುವುದು ಎಲ್ಲಡೇ ಸುದ್ದಿಯಾಗುತ್ತಿದೆ. ಇದನ್ನೂ ಓದಿ: ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಬ್ಲೇಡ್‌ನಿಂದ ಹಲ್ಲೆ ಮಾಡಿದ ಅಳಿಯ

  • ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ

    ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ

    ಹಾಸನ: ಪುನೀತ್ ರಾಜ್ ಕುಮಾರ್ ಅವರ ಸಾವಿನಿಂದ ಬೇಸತ್ತು, ರಾಜಕಾರಣಿಗಳಿಗೆ ಶಾಪ ಹಾಕಿದ ಪತ್ರವೊಂದು ಹಾಸನಾಂಬೆ ದೇವಸ್ಥಾನದ ಹುಂಡಿಯಲ್ಲಿ ಪತ್ತೆಯಾಗಿದೆ.

    ಭಕ್ತನೊಬ್ಬ ಪುನೀತ್ ಅವರ ಸಾವಿನಿಂದ ಮರುಗಿದ್ದು, ಅವರ ಸಾವಿನ ಬದಲು ಜನತೆಗೆ ಮೋಸ ಮಾಡುತ್ತಿರುವ ರಾಜಕಾರಣಿಗಳಿಗೆ ಸಾವು ಬರಬೇಕಿತ್ತು ಎಂಬುದಾಗಿ ತನ್ನ ನೋವನ್ನು ಪತ್ರದಲ್ಲಿ ಬರೆದು, ಅದನ್ನು ಹಾಸನಾಂಬೆ ದೇವಸ್ಥಾನದ ಹುಂಡಿಯಲ್ಲಿ ಹಾಕಿದ್ದಾನೆ. ಇದನ್ನೂ ಓದಿ: ಪದ್ಮಶ್ರೀ ಅಲ್ಲ, ಪುನೀತ್ ಅಮರಶ್ರೀ: ಶಿವರಾಜ್‍ಕುಮಾರ್

    ಪತ್ರದಲ್ಲಿ ಏನಿದೆ?
    ಅಮ್ಮ ಆ ಧರ್ಮಾತ್ಮ ಪುನೀತ್ ರಾಜ್‍ಕುಮಾರ್ ಸಾಯುವುದರ ಬದಲು, ಈ ರಾಜಕೀಯದಲ್ಲಿ ನಾಟಕವಾಡಿ ಅವರು ತಿಂದು, ಅವರ ಮರಿಮೊಮ್ಮಕ್ಕಳು ತಿಂದು ತೇಗಿದರು ಕರಗದ ಆಸ್ತಿ ಮಾಡಿದ್ದಾರಲ್ಲ ಅವರು ಸಾಯಬೇಕಿತ್ತು. ಸಭೆಗಳಲ್ಲಿ ನಾಟಕವಾಡುತ್ತಾರಲ್ಲಾ ಅಂಥಾ ಬೇ.. ರಾಜಕಾರಣಿಗಳನ್ನು ಸಾಯಿಸು. ಆಗ ನಮ್ಮ ಕರ್ನಾಟಕ ರಾಜ್ಯ ಮುಂದುವರಿಯುತ್ತದೆ.  ಇದನ್ನೂ ಓದಿ: ಹೊಸ ಸಿನಿಮಾ ಅನೌನ್ಸ್ ಮಾಡಿದ ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ

    HASANAMBA

    ಬಡವರು ಕರ್ನಾಟಕದಲ್ಲಿ ಸುಖವಾಗಿರುತ್ತಾರೆ. ನಿನ್ನೆ, ಮೊನ್ನೆ ಬಂದ ಈ ಕೆಲ ರಾಜಕಾರಣಿಗಳು ಕೋಟಿ ಕೋಟಿ ಆಸ್ತಿ ಮಾಡಿಕೊಂಡು ಬೀಗುತ್ತಾರಲ್ಲ ಅವರಿಗೆ ಕರ್ಮದ ಸಾವು ಬರಲಿ. ಪಾಪ ಪುನೀತ್ ಇದ್ದಿದ್ದರೆ ನಾಲ್ಕು ಜನ ನೆಮ್ಮದಿಯಿಂದ ಇರುತ್ತಿದ್ದರು ತಾಯಿ. ಎಂದು ಭಕ್ತ ಪತ್ರದಲ್ಲಿ ಬರೆದಿದ್ದಾನೆ.

  • ಮಳೆಗಾಗಿ ಭಕ್ತನಿಂದ ಪ್ರಾರ್ಥನೆ – ಹೂ ಪ್ರಸಾದ ನೀಡಿದ ಆಂಜನೇಯ

    ಮಳೆಗಾಗಿ ಭಕ್ತನಿಂದ ಪ್ರಾರ್ಥನೆ – ಹೂ ಪ್ರಸಾದ ನೀಡಿದ ಆಂಜನೇಯ

    ಬೆಂಗಳೂರು/ನೆಲಮಂಗಲ: ಮಳೆಗಾಗಿ ಹನುಮನ ಭಕ್ತರೊಬ್ಬರು ಆಂಜನೇಯನಿಗೆ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಭಕ್ತಿಗೆ ಮೆಚ್ಚಿದ ಆಂಜನೇಯ ಭಕ್ತನಿಗೆ ಹೂವನ್ನು ಪ್ರಸಾದವಾಗಿ ನೀಡಿದ್ದಾನೆ.

    ಹಳೇ ಮೈಸೂರು ಭಾಗದಲ್ಲಿ ವರುಣನ ಕಣ್ಣಾಮುಚ್ಚಾಲೆ ಆಟದಿಂದ ಕೇವಲ ಸಾಧಾರಣವಾಗಿ ಮಳೆಯಾಗುತ್ತಿದೆ. ಈ ನಡುವೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಕೂಡ ರೈತರು ಬೆಳೆದಿರುವ ನಾನಾ ಬೆಳೆಗಳು ಉತ್ತಮ ಮಳೆಯಿಲ್ಲದೇ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮಳೆಗಾಗಿ ಹನುಮ ಭಕ್ತರೊಬ್ಬರು ಬೆಟ್ಟದ ಆಂಜನೇಯನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ನಿಮ್ಮನ್ನು ತುಂಬಾ ಮಿಸ್ ಮಾಡ್ಕೊಳ್ತೇನೆ – ಐಟಿ ಅಧಿಕಾರಿಗಳಿಗೆ ಹೇಳಿದ್ರಂತೆ ಸೋನು ಸೂದ್

    ಪುರಾತನ ಇತಿಹಾಸ ಇರುವ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ನಿಜಗಲ್ಲು ಸಿದ್ದರಬೆಟ್ಟದ ಆಂಜನೇಯ ಸ್ವಾಮಿಯ ಮುಂದೆ ಮಳೆಗಾಗಿ ಮೂರು ದಿನದಿಂದ ನಿರಂತರ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ ಭಕ್ತನಿಗೆ ಆಂಜನೇಯ ಹೂ ಪ್ರಸಾದವನ್ನು ನೀಡಿ ಅಚ್ಚರಿ ಮೂಡಿಸಿದ್ದಾನೆ. ಇನ್ನೂ ಬಲಗಡೆ ಹೂ ಪ್ರಸಾದ ನೀಡುವ ಮೂಲಕ ವಿಸ್ಮಯ ನಡೆದಿದೆ ಎಂದು ನಂಬಿರುವ ಭಕ್ತರು ಹಾಗೂ ರೈತರು ಮಳೆಯ ಮುನ್ಸೂಚನೆ ಸಿಕ್ಕಿದೆ ಎಂದು ಸಂತಸಗೊಂಡಿದ್ದಾರೆ. ಇದನ್ನೂ ಓದಿ: ರಸ್ತೆಬದಿ ದಹಿ ಕಚೋರಿ ಮಾರುವ 14ರ ಬಾಲಕನ ಭಾವನಾತ್ಮಕ ಕಥೆ

  • ಮುಡಿ ಮಾಡಿಸಿಕೊಂಡು ಬರುವ ಭಕ್ತರಿಗಿಲ್ಲ ಮಾದಪ್ಪನ ದರ್ಶನ- ಭಕ್ತರ ಆಕ್ರೋಶ

    ಮುಡಿ ಮಾಡಿಸಿಕೊಂಡು ಬರುವ ಭಕ್ತರಿಗಿಲ್ಲ ಮಾದಪ್ಪನ ದರ್ಶನ- ಭಕ್ತರ ಆಕ್ರೋಶ

    ಚಾಮರಾಜನಗರ: ಮುಡಿ ಮಾಡಿಸಿಕೊಂಡು ಬರುವ ಭಕ್ತರಿಗೆ ಮಾದಪ್ಪನ ದರ್ಶನವಿಲ್ಲ. ಹೀಗಾಗಿ ಭಕ್ತರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

    ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಈ ಅವೈಜ್ಞಾನಿಕ ಆದೇಶ ಹೊರಡಿಸುವ ಮೂಲಕ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಲ್ಲಿ ಕೊರೊನಾ ಕಾರಣದಿಂದ ಮುಡಿ ಸೇವೆ ಸೇರಿದಂತೆ ಎಲ್ಲಾ ಸೇವೆಗಳು ಸ್ಥಗಿತಗೊಂಡಿದೆ. ಹೀಗಾಗಿ ಭಕ್ತರಿಗೆ ಕೇವಲ ಮಾದಪ್ಪನ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರಿನಿಂದಲ್ಲ- ಯುಪಿಎಸ್, ಮೊಬೈಲ್ ಚಾರ್ಜರ್ ಬಗ್ಗೆ ಶಂಕೆ

    ಆದರೆ ಭಕ್ತಾದಿಗಳ ಒತ್ತಾಯಕ್ಕೆ ಹೆಚ್ಚು ಶುಲ್ಕ ಪಡೆದು ಕದ್ದು ಮುಚ್ಚಿ ಮುಡಿ ಸೇವೆ ಮಾಡಿಸಲಾಗುತ್ತಿದೆ. ಹೀಗಾಗಿ ಅನಧಿಕೃತವಾಗಿ ಮುಡಿ ತೆಗೆಯುತ್ತಿದ್ದವರಿಗೆ ಪ್ರಾಧಿಕಾರ ನೋಟಿಸ್ ನೀಡಿತ್ತು. ಮುಡಿ ತೆಗೆಯುವುದನ್ನ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಆದರೂ ಪ್ರಾಧಿಕಾರದ ಹೊರ ಆವರಣ ಹಾಗೂ ಮಲೆಮಹದೇಶ್ವರ ಬೆಟ್ಟಕ್ಕೆ ಬರುವಾಗಲೇ ಬೇರೆ ಕಡೆಗಳಿಂದ ಮುಡಿ ಮಾಡಿಸಿಕೊಂಡು ಬರುತ್ತಿದ್ದಾರೆ. ಹೀಗಾಗಿ ಮುಡಿ ಮಾಡಿಸಿಕೊಂಡ ಬರುವ ಯಾರೇ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಒಳ ಆವರಣದಲ್ಲಿ ಪ್ರವೇಶ ನಿಷೇಧಿಸಲಾಗಿದೆ. ಸದ್ಯ ಈ ಅವೈಜ್ಞಾನಿಕ ಆದೇಶಕ್ಕೆ ಭಕ್ತರು ರೊಚ್ಚಿಗೆದ್ದಿದ್ದಾರೆ.