Tag: Dhaka

  • ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?

    ಢಾಕಾ: ಏಷ್ಯಾ ಕಪ್ (Asia Cup) ಆಯೋಜಿಸಲು ಬಿಸಿಸಿಐ (BCCI) ಒಪ್ಪಿಗೆ ನೀಡಿದ್ದು ಸೆಪ್ಟೆಂಬರ್‌ನಲ್ಲಿ ದುಬೈ ಮತ್ತು ಅಬುಧಾಬಿಯಲ್ಲಿ ಪಂದ್ಯ ನಡೆಸುವ ಪ್ರಸ್ತಾಪ ಇರಿಸಿದೆ ಎಂದು ವರದಿಯಾಗಿದೆ.

    ಗುರುವಾರ ಢಾಕಾದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಾರ್ಷಿಕ ಸಭೆಯಲ್ಲಿ (ಎಜಿಎಂ) ಏಷ್ಯಾ ಕಪ್ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಭಾರತೀಯ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ವರ್ಚುವಲ್ ಆಗಿ ಭಾಗವಹಿಸಿದ್ದರು. ಸದ್ಯಕ್ಕೆ ಪಂದ್ಯಕ್ಕಾಗಿ ದುಬೈ ಮತ್ತು ಅಬುಧಾಬಿಯನ್ನು ಆಯ್ಕೆ ಮಾಡಿದ್ದು, ಒಂದೇ ಸ್ಥಳದಲ್ಲಿ ಪಂದ್ಯ ಆಯೋಜಿಸುವಂತೆ ಇಚ್ಛೆ ವ್ಯಕ್ತಪಡಿಸಿದೆ.ಇದನ್ನೂ ಓದಿ: 15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು

    ಮೂಲಗಳ ಪ್ರಕರ ಒಂದೇ ವಿಭಾಗದಲ್ಲಿ ಭಾರತ ಮತ್ತು ಪಾಕ್ ಬರುವ ಸಾಧ್ಯತೆಯಿದೆ. ಬಿಸಿಸಿಐ ಮೂರು ಸ್ಥಳಗಳಲ್ಲಿ ಪಂದ್ಯ ನಡೆಸುವ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಏಷ್ಯಾ ಕಪ್‌ಗಾಗಿ ಕೇವಲ ಎರಡು ಸ್ಥಳಗಳನ್ನು ಮಾತ್ರ ಬಳಸಿಕೊಳ್ಳುವ ನಿರೀಕ್ಷೆಯಿದೆ. ಸದ್ಯದಲ್ಲೇ ಕ್ರಿಕೆಟ್ ವೇಳಾಪಟ್ಟಿ ಫೈನಲ್ ಆಗುವ ಸಾಧ್ಯತೆಗಳಿದ್ದು, ಬಿಸಿಸಿಐ ಧನದಾಹಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇಶಕ್ಕಿಂತ ಹಣವೇ ಮುಖ್ಯವಾಯ್ತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

    ಪಹಲ್ಗಾಮ್ ದಾಳಿಯ ಬಳಿಕ ಭಾರತ ಏಷ್ಯಾ ಕಪ್‌ನಲ್ಲಿ ಭಾಗವಹಿಸುವುದಿಲ್ಲ ಹಾಗೂ ಆತಿಥ್ಯ ವಹಿಸುವುದಿಲ್ಲ ಎಂದು ಮೇ ತಿಂಗಳಲ್ಲಿ ಮೂಲಗಳು ತಿಳಿಸಿದ್ದವು.ಇದನ್ನೂ ಓದಿ: DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್‌ ಚೆಕ್‌ಮೇಟ್!

  • ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    -70ಕ್ಕೂ ಹೆಚ್ಚು ಜನರಿಗೆ ಗಾಯ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡದಲ್ಲಿ ಪೈಲಟ್ ಸೇರಿ 16 ಜನ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಸಹಾಯಕ ಪ್ರೊಫೆಸರ್ ಎಂಡಿ ಸಯದುರ್ ರೆಹಮಾನ್ ಮಾತನಾಡಿ, ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಢಾಕಾದ ಉತ್ತರದಲ್ಲಿರುವ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಪೈಲಟ್ ಸೇರಿ 16 ಜನ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

    ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.

    ಏನಿದು ಪ್ರಕರಣ?
    ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು.

    ಅಪಘಾತಕ್ಕೀಡಾದ F-7BGI ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 (ಈಗ 15) ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ J-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.ಇದನ್ನೂ ಓದಿ: ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

  • ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    – ಏರ್ ಇಂಡಿಯಾ ವಿಮಾನ ಮಾದರಿಯಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದುರಂತ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ ಎಫ್-7 ಬಿಜಿಐ (F-7 BGI) ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ನಡೆದಿದೆ.

    ಏರ್ ಇಂಡಿಯಾ (Air India) ವಿಮಾನ ದುರಂತದ ಮಾದರಿಯಲ್ಲೇ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಮೈಲ್‌ಸ್ಟೋನ್ (Milestone) ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    ಈ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್ (ಐಎಸ್‌ಪಿಆರ್) ಹೇಳಿಕೆ ಬಿಡುಗಡೆ ಮಾಡಿದ್ದು, ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

    ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡ ನಾಲ್ವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಭವಿಸಿದಾಗ ಶಾಲೆಯಲ್ಲಿ ಮಕ್ಕಳಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

  • ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್

    ಢಾಕಾ: ‘ಇಸ್ಕಾನ್’ ವಿರುದ್ಧ ಮುಸ್ಲಿಂ ವ್ಯಾಪಾರಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಹಿಂದೂಗಳು ಬಾಂಗ್ಲಾದೇಶದ (Bangladesh) ಬಂದರು ನಗರವಾದ ಚಿತ್ತಗಾಂಗ್‌ನಲ್ಲಿ (Chittagong) ಪ್ರತಿಭಟನೆ ನಡೆಸಿದರು. ಈ ಕಾರಣಕ್ಕೆ ಬಾಂಗ್ಲಾ ಭದ್ರತಾ ಪಡೆಗಳು ಹಿಂದೂ ಸಮುದಾಯದ ಮೇಲೆ ಭಾರಿ ದಬ್ಬಾಳಿಕೆಯನ್ನು ನಡೆಸಿದೆ.

    ನ.5 ರಂದು ಹಜಾರಿ ಗಲಿ ಪ್ರದೇಶದಲ್ಲಿ ಈ ಘಟನೆಯು ಆರಂಭವಾಯಿತು. ಇಸ್ಲಾಮಿಕ್ ಗುಂಪಾದ ಜಮಾತ್-ಎ-ಇಸ್ಲಾಮಿ ಸದಸ್ಯ ಉಸ್ಮಾನ್ ಅಲಿ ಸಾಮಾಜಿಕ ಮಾಧ್ಯಮದಲ್ಲಿ ಹಿಂದೂ ಧರ್ಮ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ISKON) ವಿರುದ್ಧ ಅವಹೇಳನಕಾರಿ ಹೇಳಿಕೆಯ ಪೋಸ್ಟ್ ಹಾಕಿದ್ದ. ಇದನ್ನು ಖಂಡಿಸಿ ಹಿಂದೂ ನಿವಾಸಿಗಳು ಅಲಿ ಅಂಗಡಿಯ ಹೊರಗೆ ಜಮಾಯಿಸಿ ಪ್ರತಿಭಟಿಸಿದರು. ಇದು ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಸುವ್ಯವಸ್ಥೆಯನ್ನು ಸರಿಪಡಿಸಲು ಬಾಂಗ್ಲಾದೇಶ ಸೇನೆ ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಿದಾಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಬಹಿಷ್ಕೃತ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ ಕೂಡ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೂವರು ಮಕ್ಕಳನ್ನು ತುಂಗಭದ್ರಾ ನದಿಗೆ ತಳ್ಳಿ ವ್ಯಕ್ತಿ ಆತ್ಮಹತ್ಯೆ ಕೇಸ್‌ – ಇಬ್ಬರ ಮೃತದೇಹ ಪತ್ತೆ

    ಭದ್ರತಾ ಸಿಬ್ಬಂದಿ ನಾಗರಿಕರೊಂದಿಗೆ ಘರ್ಷಣೆ, ಅವರನ್ನು ಬೆನ್ನಟ್ಟಿ ಸೇನಾ ಸಿಬ್ಬಂದಿ ಹಾಗೂ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಕೆಲವರು ಸಿಸಿಟಿವಿ ಕ್ಯಾಮೆರಾಗಳನ್ನು ಹಾಳುಗೆಡವಿದ್ದಾರೆ. ಚಿತ್ತಗಾಂಗ್ ಮೆಟ್ರೋಪಾಲಿಟನ್ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರಿಗೆ, ಪ್ರತಿಭಟನಾಕಾರರು ಇಟ್ಟಿಗೆ ಮತ್ತು ಆಸಿಡ್ ಎಸೆದಿದ್ದಾರೆ. ಒಂಬತ್ತು ಅಧಿಕಾರಿಗಳು ಗಾಯಗೊಂಡಿದ್ದಾರೆ. ಮಂಗಳವಾರ ಅಧಿಕಾರಿಗಳು 582 ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಕೃತ್ಯವೆಸಗಿದ 49 ಜನರನ್ನು ಬಂಧಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ. ಇದನ್ನೂ ಓದಿ: ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಬ್ರೇಕ್‌ ಹಾಕಲು ಮುಂದಾದ ಟ್ರಂಪ್‌

    ಹಿಂದೂ ಪ್ರಾಬಲ್ಯದ ವ್ಯಾಪಾರ ಪ್ರದೇಶವಾದ ಹಜಾರಿ ಗಲಿಯು ಭಾರೀ ಕಣ್ಗಾವಲಿನಲ್ಲಿದೆ ಮತ್ತು ನಡೆಯುತ್ತಿರುವ ಕಾರ್ಯಾಚರಣೆಗಳಿಂದಾಗಿ ಅನೇಕ ನಿವಾಸಿಗಳು ಹೊರಹೋಗಲು ಸಾಧ್ಯವಾಗುತ್ತಿಲ್ಲ. ಪೊಲೀಸರು ಆ ಪ್ರದೇಶದಲ್ಲಿ ಮನೆ-ಮನೆಗೆ ತೆರಳಿ ಶೋಧ ನಡೆಸುತ್ತಿರುವ ಬಗ್ಗೆಯೂ ವರದಿಯಾಗಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಸೇನೆಯ ಗುಂಡಿಗೆ ಉಗ್ರ ಬಲಿ – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

  • ಬಾಂಗ್ಲಾದಲ್ಲಿ ಕ್ಷಿಪ್ರ ಮಿಲಿಟರಿ ಕ್ರಾಂತಿ – ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ

    ಬಾಂಗ್ಲಾದಲ್ಲಿ ಕ್ಷಿಪ್ರ ಮಿಲಿಟರಿ ಕ್ರಾಂತಿ – ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ

    ಢಾಕಾ: ಒಂದು ಕಡೆ ವಿದ್ಯಾರ್ಥಿಗಳ ಪ್ರತಿಭಟನೆ, ಇನ್ನೊಂದು ಕಡೆ ಸೇನೆಯೊಂದಿಗೆ ಕಿತ್ತಾಟದ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ (Bangladesh PM) ಹುದ್ದೆಗೆ ಶೇಖ್‌ ಹಸೀನಾ (Sheikh Hasina) ರಾಜೀನಾಮೆ ನೀಡಿದ್ದಾರೆ. ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಆರಂಭವಾಗಿದೆ.

    ಪ್ರತಿಭಟನೆ  ತೀವ್ರಗೊಂಡ ಬೆನ್ನಲ್ಲೇ ಶೇಖ್‌ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು  ಮನೆಗೆ ನುಗ್ಗುವ ಮೊದಲೇ ಶೇಖ್‌ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕೆಲ ಮಾಧ್ಯಮಗಳು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.

    ಬಾಂಗ್ಲಾದೇಶದ (Bangladesh Clash) ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರ- ಸಂಪರ್ಕದಲ್ಲಿರುವಂತೆ ಭಾರತೀಯರಿಗೆ ಕೇಂದ್ರ ಸೂಚನೆ

    ಕೆಲವೇ ದಿನಗಳ ಹಿಂದೆ, 1971 ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ 30 ಪ್ರತಿಶತವನ್ನು ಮೀಸಲಿಡುವ ವಿವಾದಾತ್ಮಕ ಕೋಟಾ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿ ಪ್ರತಿಭಟನೆ  ಆರಂಭವಾಗಿತ್ತು.

  • ಬಾಂಗ್ಲಾದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ – 20 ಸಾವು, ನೂರು ಮಂದಿಗೆ ಗಾಯ

    ಬಾಂಗ್ಲಾದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ – 20 ಸಾವು, ನೂರು ಮಂದಿಗೆ ಗಾಯ

    ಢಾಕಾ: ಎರಡು ರೈಲುಗಳು ಡಿಕ್ಕಿ (Train Accident) ಹೊಡೆದ ಪರಿಣಾಮ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ (Bangladesh) ಭೈರಬ್‍ನಲ್ಲಿ ನಡೆದಿದೆ.

    ಢಾಕಾದಿಂದ (Dhaka) ಈಶಾನ್ಯಕ್ಕೆ 60 ಕಿಮೀ ದೂರದಲ್ಲಿರುವ ಭೈರಬ್‍ನ ಪೂರ್ವ ನಗರದಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ರೈಲು ಹಿಂದಿನಿಂದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎರಡು ರೈಲಿನ ಬೋಗಿಗಳು ಹಳಿ ತಪ್ಪಿವೆ. ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ರಾಕೆಟ್ ಲಾಂಚರ್‌ಗಳು ಧ್ವಂಸ – ಇಸ್ರೇಲ್ ಬಳಸಿದ Iron Sting ಬಾಂಬ್ ಎಷ್ಟು ಪವರ್‌ಫುಲ್?

    ಇದುವರೆಗೂ 20 ಶವಗಳನ್ನು ಹೊರ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ರಾಜಕಾರಣಿಯೂ ಆಗಿರುವ ಸೊನಾಲಿ ಪೋಗಟ್ ಇದೇ ಸೋಮವಾರ ಗೋವಾದಲ್ಲಿ ನಿಧನರಾಗಿದ್ದರು. ಅವರ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿತ್ತು. ಆದರೆ, ಈ ಕಾರಣವನ್ನು ಸೊನಾಲಿ ಸಹೋದರ ರಿಂಕು ಢಾಕಾ ಅಲ್ಲಗಳೆದಿದ್ದಾರೆ. ನನ್ನ ಸಹೋದರಿಯನ್ನು ಗೋವಾಗೆ ಕರೆದುಕೊಂಡು ಹೋಗಿ ಕೊಲೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಮೂಲತಃ ಹರ್ಯಾಣದವರಾದ ಸೊನಾಲಿ, ತಮ್ಮ ಸಿಬ್ಬಂದಿಗಳ ಜೊತೆ ಗೋವಾ ಪ್ರವಾಸದಲ್ಲಿ ಇದ್ದರು. ಈ ವೇಳೆಯಲ್ಲೇ ಅವರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸೊನಾಲಿ ಕುಟುಂಬ ಕೂಡ ಹೃದಯಾಘಾತದಿಂದ ಆಕೆ ನಿಧನರಾಗಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಾವಿನಲ್ಲಿ ಸಾಕಷ್ಟು ಅನುಮಾನಗಳನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಸೊನಾಲಿ ಸಾವಿನ ಒಂದು ಗಂಟೆ ಮುಂಚೆ ತನ್ನ ತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಿರುವುದಾಗಿ ಸಹೋದರ ತಿಳಿಸಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಯಜುವೇಂದ್ರ ಚಾಹಲ್ ದಂಪತಿ

    ಸೊನಾಲಿ ಸಾವಿನ ಮುಂಚೆ ನನ್ನ ತಾಯಿಯ ಜೊತೆ ಮಾತನಾಡಿದ್ದಾರೆ. ಅಲ್ಲದೇ, ಸೊನಾಲಿ ಇದ್ದ ಜಾಗದ ಸಿಸಿಟಿವಿ ದೃಶ್ಯಗಳಿಲ್ಲ. ಮತ್ತೆ ಹರ್ಯಾಣದಲ್ಲಿ ಆಕೆ ಇದ್ದ ಫಾರ್ಮ್ ಹೌಸ್ ನಲ್ಲಿ ಲ್ಯಾಪ್ ಟಾಪ್ ಸೇರಿದಂತೆ ಹಲವು ವಸ್ತುಗಳು ಕಣ್ಮರೆಯಾಗಿವೆ. ಹೀಗಾಗಿ ವ್ಯವಸ್ಥಿತವಾಗಿ ಸೊನಾಲಿಯಲ್ಲಿ ಕೊಲೆ ಮಾಡಿ, ಹೃದಯಾಘಾತ ಎಂದು ನಂಬಿಸಲಾಗುತ್ತಿದೆ. ಸೂಕ್ತ ತನಿಖೆ ಮಾಡಿ, ಸತ್ಯಾಸತ್ಯತೆಯನ್ನು ತಿಳಿಸಬೇಕು ಎಂದು ಗೋವಾ ಸರಕಾರಕ್ಕೆ ರಿಂಕು ಢಾಕಾ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಂಗ್ಲಾದೇಶದಲ್ಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ದೆಹಲಿಗೆ ಏರ್‌ಲಿಫ್ಟ್

    ಬಾಂಗ್ಲಾದೇಶದಲ್ಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿ ದೆಹಲಿಗೆ ಏರ್‌ಲಿಫ್ಟ್

    ನವದೆಹಲಿ: ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಮ್ಮು ಮತ್ತು ಕಾಶ್ಮೀರ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯನ್ನು ವಿಶೇಷ ಚಿಕಿತ್ಸೆಗೆ ಕೇಂದ್ರ ಸರ್ಕಾರ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ತಿಳಿಸಿದ್ದಾರೆ.

    ಜಮ್ಮುವಿನ ರಿಜೌರಿ ಜಿಲ್ಲೆಯ ನಿವಾಸಿ ಶೋಯೆಬ್ ಲೋನ್ ಢಾಕಾದ ಬರಿಂದ್ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓಡುತ್ತಿದ್ದರು. ಜೂನ್ 3 ರಂದು ಶೋಯೆಬ್ ಕಾಲೇಜಿನ ಇತರ ಇಬ್ಬರು ಸ್ನೇಹಿತರೊಂದಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದು, ಶೋಯೆಬ್ ಹಾಗೂ ಮತ್ತೊಬ್ಬ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದರು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ರಿಜೌರಿ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭ ವಿದ್ಯಾರ್ಥಿಯ ತಂದೆಯನ್ನು ಭೇಟಿಯಾಗಿದ್ದರು. ಈ ವೇಳೆ ಅಪಘಾತದ ಬಗ್ಗೆ ತಿಳಿದ ರೈನಾ ಪ್ರಧಾನಮಂತ್ರಿ ಕಚೇರಿಯನ್ನು ಸಂಪರ್ಕಿಸಿ ಸಹಾಯ ಕೋರಿದ್ದಾರೆ. ಬಳಿಕ ಕೇಂದ್ರ ವಿದ್ಯಾರ್ಥಿಯನ್ನು ಚಿಕಿತ್ಸೆಗೆ ಬಾಂಗ್ಲಾದೇಶದಿಂದ ಏರ್‌ಲಿಫ್ಟ್ ಮಾಡಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಶರದ್ ಪವಾರ್ ಒಮ್ಮತದ ಅಭ್ಯರ್ಥಿ?

    ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಯನ್ನು ಕರೆ ತರಲು ಬಾಂಗ್ಲಾದೇಶದ ರಾಯಭಾರಿಯೊಂದಿಗೆ ವೈಯಕ್ತಿಕವಾಗಿ ಸಂಪರ್ಕಿಸಿದ್ದಾರೆ. ವಿದ್ಯಾರ್ಥಿ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಭರಿಸುವುದಾಗಿ ರೈನಾ ಭರವಸೆ ನೀಡಿದ್ದಾರೆ.

  • ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದಾಳಿ

    ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದಾಳಿ

    ಢಾಕಾ: ಇಸ್ಕಾನ್ ದೇಗುಲದ ಮೇಲೆ 200 ಜನರು ಗುಂಪೊಂದು ಏಕಾಏಕಿ ದಾಳಿ ಮಾಡಿದ್ದಾರೆ. ದೇವಾಲಯದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

    ಹಿಂದೂ ದೇವಾಲಯದ ಮೇಲೆ ಬರೋಬ್ಬರಿ 200 ಜನರು ಗುಂಪೊಂದು ದಾಳಿ ಮಾಡಿದೆ. ದೇವಾಲದಲ್ಲಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಲ್ಲದೆ ಅರ್ಚಕರ ಮೇಲೆ ಮನಬಂದಂತೆ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ. ಇದನ್ನೂ ಓದಿ: ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನಮಾಡಲು ಕುಟುಂಬಸ್ಥರ ನಿರ್ಧಾರ

    ಮೂಲಗಳ ಪ್ರಕಾರ, ಬಾಂಗ್ಲಾ ಮೂಲದ ಹಾಜೀ ಶಫೀವುಲ್ಲಾ ನೇತೃತ್ವದಲ್ಲಿ ಇನಸ್ಕಾನ್ ದೇಗುಲ ಮೇಲೆ ಅಟ್ಯಾಕ್ ಮಾಡಲಾಗಿದೆ. ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಇಸ್ಕಾನ್‍ನಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ನುದ್ದಿದ 200 ಜನರ ಗುಂಪು ದಾಳಿ ಮಾಡಿದೆ. ದೇವಾಲಯದಲ್ಲಿರುವ ಬೆಳ್ಳಿ ದೀಪ ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಇಸ್ಕಾನ್ ದೇಗುಲದ ಅರ್ಚಕರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

    ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತದ ಇಸ್ಕಾನ್ ಉಪಾಧ್ಯಕ್ಷ ರಾಧಾರಮಣ್ ದಾಸ್ ದಾಳಿಯನ್ನು ತೀತ್ರ ಖಂಡಿಸಿದ್ದಾರೆ. ಪಕ್ಕದ ದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆರೋಪ ಮಾಡಿದ್ದಾರೆ. ಸದ್ಯ ಈ ದಾಳಿಯಲ್ಲಿ ಯಾರ ಕೈವಾಡ ಇದೆ ಅನ್ನೋ ಬಗ್ಗೆ ಬಾಂಗ್ಲಾ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

  • ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ ಕಂಗನಾ

    ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ ಕಂಗನಾ

    ಢಾಕಾ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್, ಝರಿನಾ ಎಕ್ತಾ ಕಪೂರ್ ಲಾಕ್ ಅಪ್ ಟ್ರೈಲರ್ ಬಿಡುಗಡೆ ದಿನದಂದು ಬಾಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ.

    ಕಂಗನಾ ರಣಾವತ್ ಮೊದಲ ಬಾರಿಗೆ ನಿರೀಕ್ಷಿತ ರಿಯಾಲಿಟಿ ಶೋ ಒಂದರ ಅತಿಥಿಯಾಗುತ್ತಿದ್ದು, ಲಾಕ್ ಅಪ್ ಅಂತಿಮವಾಗಿ ಬುಧವಾರ ದೆಹಲಿಯಲ್ಲಿ ತನ್ನ ಟ್ರೈಲರ್ ಅನ್ನು ಬಿಡುಗಡೆ ಮಾಡಿದೆ. ಆದ್ದರಿಂದ ಈ ದಿನವನ್ನು ಹೆಚ್ಚು ವಿಶೇಷವಾಗಿಸುವ ಸಲುವಾಗಿ, ಎಕ್ತಾ ಕಪೂರ್, ಕಂಗನಾ ಹಾಗೂ ರಿಯಾಲಿಟಿ ಶೋನ ತಮ್ಮ ತಂಡದೊಂದಿಗೆ ಗುರುದ್ವಾರ ಬಾಂಗ್ಲಾ ಸಾಹಿಬ್‍ಗೆ ಭೇಟಿ ನೀಡಿ ಆಶೀರ್ವಾದವನ್ನು ಪಡೆದರು. ಇದನ್ನೂ ಓದಿ:  ಮಾರ್ಚ್‌ನಲ್ಲಿ ಬೆಲ್ ಬಾಟಮ್ 2 ಪಕ್ಕಾ

     

    View this post on Instagram

     

    A post shared by Kangana Ranaut (@kanganaranaut)

    ಅವರ ಮುಂಬರುವ ಫಿಯರ್ಲೆಸ್ ರಿಯಾಲಿಟಿ ಶೋ ಲಾಕ್ ಅಪ್ ಈಗಾಗಲೇ ಸಾಕಷ್ಟು ಜನರ ಗಮನ ಸೆಳೆದಿದ್ದು, ಅಭಿಮಾನಿಗಳ ಮನೆ ಮಾತಾಗಿದೆ. ಉದ್ಯಮಿ ಮಹಿಳೆ ಏಕ್ತಾ ಕಪೂರ್ ಯಾವಾಗಲೂ ಭಾರತೀಯ ದೂರದರ್ಶನ ಉದ್ಯಮಕ್ಕೆ ಹೊಸ ಮತ್ತು ವಿಶಿಷ್ಟವಾದ ಕಾರ್ಯಕ್ರಮಗಳನ್ನು ಪರಿಚಯಿಸಿದ್ದಾರೆ. ಈಗ ಅವರು ಹೊಸ ರಿಯಾಲಿಟಿ ಶೋ ಆದ ಲಾಕ್ ಅಪ್‍ನಲ್ಲಿ ಅಬ್ಬರಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ:ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಯಾವೆಲ್ಲ ಚಿತ್ರಗಳು ಸ್ಪರ್ಧಾ ಕಣದಲ್ಲಿ?

    ಕಾರ್ಯಕ್ರಮವು ಇದೇ ಫೆಬ್ರವರಿ 27 ರಂದು ಆಲ್ಟ್ ಬಾಲಾಜಿ ಮತ್ತು ಎಮ್‍ಎಕ್ಸ್ ಪ್ಲೇಯರ್ ನಂತಹ ಆನ್‍ಲೈನ್ ಪ್ಲಾಟ್‍ಫಾರ್ಮ್‍ಗಳಲ್ಲಿ ಲೈವ್ ಸ್ಟ್ರೀಮ್ ಮಾಡಲು ಸಿದ್ಧವಾಗಿದೆ.