Tag: Dhanyatha

  • ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

    ಯುಗಾದಿ ಹಬ್ಬದ ಹಿನ್ನೆಲೆ ಪತ್ನಿ ಜೊತೆ ಡಾಲಿ ಟೆಂಪಲ್ ರನ್

    ಟ ಡಾಲಿ ಧನಂಜಯ (Daali dhananjay) ಮತ್ತು ಧನ್ಯತಾ (Dhanyatha) ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ನಿನ್ನೆ (ಮಾ.30) ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಇದನ್ನೂ ಓದಿ:L2: Empuraan ವಿವಾದ- ನನ್ನ ಮಗನನ್ನ ಬಲಿಪಶುವನ್ನಾಗಿ ಮಾಡಲಾಗಿದೆ: ಪೃಥ್ವಿರಾಜ್ ಸುಕುಮಾರನ್ ತಾಯಿ

    ಯುಗಾದಿ ಹಬ್ಬದ ಹಿನ್ನೆಲೆ ಪತ್ನಿಯೊಂದಿಗೆ ನಟ ಧನಂಜಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಬಳಿಕ ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದನ್ನೂ ಓದಿ:ವಿಜಯ್‌ ಸೇತುಪತಿಗೆ ‘ಅಪ್ಪು’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್- ಜೂನ್‌ನಿಂದ ಶೂಟಿಂಗ್‌ ಶುರು

    ಡಾ. ಧನ್ಯತಾ ಜೊತೆ ಈ ವರ್ಷ ಫೆ.16ರಂದು ಡಾಲಿ ಮೈಸೂರಿನಲ್ಲಿ ಮದುವೆಯಾದರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.

    ಇನ್ನೂ ಅಣ್ಣ ಫ್ರಮ್ ಮೆಕ್ಸಿಕೋ, ನಾಡಪ್ರಭು ಕೆಂಪೇಗೌಡ ಸೇರಿದಂತೆ ತೆಲುಗಿನಲ್ಲೂ ಡಾಲಿಗೆ ಹಲವು ಸಿನಿಮಾಗಳಿವೆ. ಹೊಸ ಪ್ರತಿಭೆಗಳಿಗೆ ತಮ್ಮದೇ ನಿರ್ಮಾಣ ಚಿತ್ರದಲ್ಲಿ ಅವಕಾಶವನ್ನು ಕೊಡುತ್ತಿದ್ದಾರೆ. ನಿರ್ಮಾಪಕನಾಗಿರೂ ಡಾಲಿ ತೊಡಗಿಸಿಕೊಂಡಿದ್ದಾರೆ.

  • ಮದುವೆ ಸಂಭ್ರಮದ ಖುಷಿ ಹಂಚಿಕೊಂಡ ಡಾಲಿ ದಂಪತಿ

    ಮದುವೆ ಸಂಭ್ರಮದ ಖುಷಿ ಹಂಚಿಕೊಂಡ ಡಾಲಿ ದಂಪತಿ

    – ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟೋಕೆ ಆಗಲ್ಲ ಎಂದ ಡಾಲಿ

    ಮೈಸೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ (Daali Dhananjaya) ಹಾಗೂ ಡಾಕ್ಟರ್ ಧನ್ಯತಾ (Dhanyatha) ವಿವಾಹ ಮೈಸೂರು ವಸ್ತುಪ್ರದರ್ಶನ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿದೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ ದಂಪತಿ ಮದುವೆ ಸಂಭ್ರಮದ ಖುಷಿಯನ್ನು ಹಂಚಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಾಲಿ, ಅಭಿಮಾನಿಗಳ ಪ್ರೀತಿಗೆ ಬೆಲೆ ಕಟ್ಟಲು ಆಗಲ್ಲ. ಸಾವಿರಾರು ಜನರು ಬಂದು ಆಶೀರ್ವದಿಸಿದ್ದಾರೆ. ಮೈಸೂರು ಬಾಲ್ಯದ ಗೆಳೆಯರು, ನನ್ನ ಗುರುಗಳು ಬಂದಿದ್ದರು. ಮೈಸೂರಿನಲ್ಲಿ (Mysuru) ನನ್ನ ಮದುವೆ ಸಾರ್ಥಕ ಅನ್ನಿಸ್ತು ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ – ಬೊಮ್ಮಾಯಿ ವಾಗ್ದಾಳಿ

    ಮೈಸೂರು ಅಂದರೆ ಎಲ್ಲರಿಗೂ ಎಮೋಷನ್ ಇದ್ದೇ ಇದೆ. ಮದುವೆ ಕಾರ್ಯಕ್ರಮ ತುಂಬಾ ಚೆನ್ನಾಗಿ ಆಯಿತು. ಚಿತ್ರರಂಗಕ್ಕೆ ಯಾವಾಗಲೂ ನಾನು ಆಭಾರಿ. ನಾನು ಚಿತ್ರರಂಗಕ್ಕೆ ಬಂದಾಗಿನಿಂದಲೂ ಎಲ್ಲರ ಸಪೋರ್ಟ್ ಇದೆ. ಈಗ ಜವಾಬ್ದಾರಿ ಜಾಸ್ತಿ ಆಗಿದೆ. ಎಲ್ಲರೂ ಖುಷಿ ಪಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ಲಾಟ್‌ಫಾರ್ಮ್ ಮೆಟ್ಟಿಲಿನಿಂದ ಪ್ರಯಾಣಿಕ ಜಾರಿ ಬಿದ್ದಿದ್ದು ಕಾಲ್ತುಳಿತಕ್ಕೆ ಕಾರಣ: ರೈಲ್ವೆ ಅಧಿಕಾರಿ

    ಎಲ್ಲರಿಗೂ ಧನ್ಯವಾದ. ಕಾರ್ಯಕ್ರಮ ಶಾಂತಿಯುತವಾಗಿ ಆಯಿತು. ಆರತಕ್ಷತೆಗೆ ಜನ ಬಂದಿದ್ದು ಖುಷಿ ಆಯಿತು. ನಾನು ಅಂದುಕೊಂಡಂತೆ ಆಗಿದೆ. ಎಲ್ಲರು ಖುಷಿ ಆಗಿದ್ದಾರೆ. ಅಭಿಮಾನಿಗಳ ಪ್ರೀತಿಗೆ ಏನು ಹೇಳಬೇಕು ಗೊತ್ತಿಲ್ಲ. ಅಭಿಮಾನಿಗಳು ತುಂಬಾ ಶಾಂತಿಯುತವಾಗಿ ನಡೆದುಕೊಂಡಿದ್ದಾರೆ. ನಾನು ಜೀವನ ಕಂಡುಕೊಂಡಿದ್ದು ಮೈಸೂರಲ್ಲಿ, ಇಲ್ಲೇ ಮದುವೆ ಆಗಿದ್ದು ಖುಷಿ ಆಯ್ತು. ತಾಳಿ ಕಟ್ಟುವಾಗ ನನಗೆ ಭಯ ಯಾವುದು ಆಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಓರ್ವ ಸಾವು

    ಇನ್ನು ಡಾಲಿ ಪತ್ನಿ ಧನ್ಯತಾ ಪ್ರತಿಕ್ರಿಯಿಸಿ, ಇಷ್ಟು ಜನರನ್ನ ನಾನು ನೋಡಿಲ್ಲ. ತುಂಬಾ ಭಾವುಕಳಾದೆ. ಡಾಲಿ ಕುಟುಂಬ ನನ್ನ ಕುಟುಂಬ. ನನ್ನ ಮನೆಗೆ ಹೋಗೋಕೆ ತುಂಬಾ ಖುಷಿ ಇದೆ. ನಾನು ಡಾಲಿ ಮನೆಗೆ ಹೋಗೋಕೆ ತುಂಬಾ ಕಾಯ್ತಾ ಇದ್ದೇನೆ. ಇಷ್ಟು ಪ್ರೀತಿ ಆಶೀರ್ವಾದ ನೋಡಿ ತುಂಬಾ ಖುಷಿ ಆಯಿತು ಎಂದು ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟ ದರ್ಶನ್ ಬ್ಯಾನರ್ ತೆರವು – ಫ್ಯಾನ್ಸ್‌ಗೆ ಶಾಕ್

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆ್ಯಕ್ಟರ್ & ಡಾಕ್ಟರ್ – ಮೈಸೂರಲ್ಲಿ ಅದ್ದೂರಿಯಾಗಿ ನಡೆದ ಡಾಲಿ, ಧನ್ಯತಾ ಮದುವೆ

    ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Daali Dhananjay), ಡಾಕ್ಟರ್ ಧನ್ಯತಾ ಅವರ ಜೊತೆ ಭಾನುವಾರ ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಹೊಸಜೀವನಕ್ಕೆ ಕಾಲಿಟ್ಟ ನವಜೋಡಿಗೆ ಸಿನಿತಾರೆಯರು, ಗಣ್ಯರು, ಆಪ್ತರು, ಅಭಿಮಾನಿಗಳು ಶುಭಹಾರೈಸಿದರು.

    ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಜೋಡಿಯ ವಿವಾಹ ಅದ್ದೂರಿಯಾಗಿ ನೆರವೇರಿತು. ಬೆಳಗ್ಗೆ 8:30ರಿಂದ 10 ಗಂಟೆ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಇದನ್ನೂ ಓದಿ: ಡಾಲಿ ಧನಂಜಯ್ ಕಲ್ಯಾಣ ವೈಭೋಗ

    ಗೋಲ್ಡ್ ಕಲರ್ ಸೀರೆಯಲ್ಲಿ ಧನ್ಯತಾ ಮತ್ತು ಗೋಲ್ಡ್ ಕಲರ್ ಶೇರ್ವಾನಿಯಲ್ಲಿ ಧನಂಜಯ್ ಮಿಂಚಿದರು. ಧನ್ಯತಾ ಕುಟುಂಬದಿಂದ ಧಾರೆ ಶಾಸ್ತ್ರದ ಬಳಿಕ ಮಾಂಗಲ್ಯ ಧಾರಣೆ ನಡೆಯಿತು. ಡಾಲಿ ಮದುವೆಗೆ ಕುಟುಂಬಸ್ಥರು, ಮಠಾಧೀಶರು ಹಾಗೂ ಆಪ್ತರು ಸಾಕ್ಷಿಯಾದರು. ಜೋಡಿಗೆ ಅಕ್ಷತೆ ಹಾಕಿ ಹರಸಿದರು.

    ಡಾಲಿ ಮದುವೆಯಲ್ಲಿ ನಟ ಶಿವರಾಜ್‌ಕುಮಾರ್, ನಟಿ ರಮ್ಯಾ ವಸಿಷ್ಠ ಸಿಂಹ, ಯುವರಾಜ್ ಕುಮಾರ್, ಕಾಂತಾರ ಸಿನಿಮಾ ನಟಿ ಸಪ್ತಮಿ ಗೌಡ, ವಿನಯ್ ರಾಜ್, ಬಿಗ್‌ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಸೇರಿದಂತೆ ಅನೇಕ ಸಿನಿಮಾ ತಾರೆಯರು ಪಾಲ್ಗೊಂಡು ಜೋಡಿಗೆ ವಿಶ್ ಮಾಡಿದರು. ಇದನ್ನೂ ಓದಿ: Dhananjay Wedding | ಡಾಲಿ ಆರತಕ್ಷತೆಯಲ್ಲಿ ಸೆಲೆಬ್ರಿಟಿಗಳ ದಂಡು – ಮೈಸೂರಿಗೆ ಬಂದ ‘ಪುಷ್ಪ’ ನಿರ್ದೇಶಕ ಸುಕುಮಾರ್

    25ಕ್ಕೂ ಹೆಚ್ಚು ಬಗೆಯ ಸ್ಪೆಷಲ್‌ ಖಾದ್ಯ
    ಧನಂಜಯ್‌ ಮತ್ತು ಧನ್ಯತಾ ಜೋಡಿ ಮದುವೆಗೆ ಆಗಮಿಸಿರುವ ಅತಿಥಿಗಳಿಗಾಗಿ 25 ಕ್ಕೂ ಹೆಚ್ಚು ಬಗೆ ಬಗೆಯ ವಿಶೇಷ ಖಾದ್ಯಗಳನ್ನು ಸಿದ್ಧತೆ ಮಾಡಲಾಗಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕುಟುಂಬಸ್ಥರು, ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 800 ಬಾಣಸಿಗರಿಂದ ಅಡುಗೆ ತಯಾರಿಯಾಗಿದೆ.

    ತಾಟಿಲಿಂಗು ಮಿಲ್ಕ್ ಶೇಕ್, ಆಮ್ ಪನ್ನ, ಜಾಕ್ ಫ್ರೂಟ್ ಪಾಯಸ, ಕಡ್ಲೆ ಉಸ್ಲಿ, ಫ್ರೂಟ್ ಕೋಸಂಬರಿ, ತೊಂಡೆಕಾಯಿ ಕ್ಯಾಷು ಪಲ್ಯ, ಪೈನಾಪಲ್ ಮದ್ದೂಲಿ, ಸುವರ್ಣ ಗೆಡ್ಡೆ ರವಾ ಫ್ರೈ, ಪನ್ನಿರ್ ಕುರ್ ಕುರೆ, ಅಕ್ಕಿ ರೊಟ್ಟಿ, ಇತಕಿದ ಬೆಳೆ ಕೂಟ್, ಪುದುಚ್ಚೆರಿ ಬಿರಿಯಾನಿ, ನುಗ್ಗೆಕಾಯಿ ಸಾಂಬಾರ್, ಉಡುಪಿ ತಿಳಿಸಾರು, ಸೌತೆಕಾಯಿ ರಸಂ, ಬೆಳೆ ಒಬ್ಬಟ್ಟು, 5 ರಿಂದ 6 ಬಗೆಯ ಸಿಹಿ ಖಾದ್ಯಗಳು ತಯಾರಾಗಿವೆ. ಇದನ್ನೂ ಓದಿ: ಮೈಸೂರು: ನಟ ಧನಂಜಯ್‌, ಡಾಕ್ಟರ್‌ ಧನ್ಯತಾ ಜೋಡಿ ಮದುವೆ – ನೆರವೇರಿದ ವಿವಿಧ ಶಾಸ್ತ್ರಗಳು

  • ಡಾಲಿ ಧನಂಜಯ್ ಕಲ್ಯಾಣ ವೈಭೋಗ

    ಡಾಲಿ ಧನಂಜಯ್ ಕಲ್ಯಾಣ ವೈಭೋಗ

    – ಡಾಕ್ಟರ್ ಜೊತೆ ಹಸೆಮಣೆ ಏರಲು ರೆಡಿಯಾದ ನಟ

    ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಧನಂಜಯ್ (Daali Dhananjay) ಮದುವೆ ಸಂಭ್ರಮ ಮನೆ ಮಾಡಿದೆ. ಡಾಕ್ಟರ್ ಧನ್ಯತಾ ಜೊತೆ ಸಪ್ತಪದಿ ತುಳಿಯಲು ನಟ ಡಾಲಿ ಸಜ್ಜಾಗಿದ್ದಾರೆ.

    ಇಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಡೆಯುತ್ತಿರುವ ಅದ್ದೂರಿ ಮದುವೆ ಸಮಾರಂಭದಲ್ಲಿ ಧನ್ಯತಾ ಜೊತೆ ಧನಂಜಯ್ ಹಸೆಮಣೆ ಏರಲಿದ್ದಾರೆ. ಅರಸೀಕೆರೆಯ ಕಾಳೇನಹಳ್ಳಿ ಹುಡುಗ ಚಿತ್ರದುರ್ಗದ ಶಿವಪುರದ ಹುಡುಗಿಯ ಜೊತೆ ಕಲ್ಯಾಣವಾಗುತ್ತಿದ್ದಾರೆ.

    ಭಾನುವಾರ ಬೆಳಗ್ಗೆಯಿಂದಲೇ ಧಾರಾ ಮುಹೂರ್ತದ ದಿನದ ಶಾಸ್ತ್ರಗಳು ನಡೆಯುತ್ತಿವೆ. ಮೊದಲು ಮಂಟಪಕ್ಕೆ ದೇವತಾ ಪ್ರವೇಶ ನಂತರ ನವ ಪ್ರಧಾನ ಕಳಸ ಪೂಜೆ, ಕನ್ಯಾದಾನ, ಸಂಬಂಧ ಮಾಲೆ ಅರ್ಪಣೆ ಶಾಸ್ತ್ರ ನೆರವೇರಿದೆ.

    ವಧು-ವರರಿಗೆ ಧಾರಾ ಮುಹೂರ್ತ ನಡೆಯಲಿದೆ. ಶುಭ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ 8:20 ರಿಂದ 10:00 ರ ವರೆಗೂ ನಡೆಯಲಿದೆ. ಮಾಂಗಲ್ಯ ಧಾರಣೆ ನಂತರ ಸಪ್ತಪದಿ ತುಳಿಯುವುದು, ಅರುಂಧತಿ ನಕ್ಷತ್ರ ದರ್ಶನ ನಡೆಯಲಿದೆ.

    ಬಾಸಿಂಗ ವಿಸರ್ಜನೆ ಶಾಸ್ತ್ರ ನೆರವೇರಲಿದೆ. ಇಂದು ಕೂಡಾ ಸ್ಯಾಂಡಲ್‌ವುಡ್ ತಾರೆಯರು, ರಾಜಕೀಯ ಗಣ್ಯರು, ಆಪ್ತರು ಆಗಮಿಸಲಿದ್ದಾರೆ. ನಟ ಯಶ್, ಶಿವಕುಮಾರ್, ಸುದೀಪ್ ಬರುವ ಸಾಧ್ಯತೆಯಿದೆ.

  • ಮೈಸೂರು: ನಟ ಧನಂಜಯ್‌, ಡಾಕ್ಟರ್‌ ಧನ್ಯತಾ ಜೋಡಿ ಮದುವೆ – ನೆರವೇರಿದ ವಿವಿಧ ಶಾಸ್ತ್ರಗಳು

    ಮೈಸೂರು: ನಟ ಧನಂಜಯ್‌, ಡಾಕ್ಟರ್‌ ಧನ್ಯತಾ ಜೋಡಿ ಮದುವೆ – ನೆರವೇರಿದ ವಿವಿಧ ಶಾಸ್ತ್ರಗಳು

    – ಆರತಕ್ಷತೆಗೆ 25,000 ಜನರಿಗೆ ಊಟದ ವ್ಯವಸ್ಥೆ; ಮೆನುವಿನಲ್ಲಿ ಏನೇನಿದೆ?

    ಮೈಸೂರು: ನಟ ಡಾಲಿ ಧನಂಜಯ್‌ (Daali Dhananjay) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಡಾಕ್ಟರ್‌ ಧನ್ಯತಾ ಅವರ ಜೊತೆ ನಟ ಡಾಲಿ ಹಸೆಮಣೆ ಏರಲಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಇಂದು ಮದುವೆ ಶಾಸ್ತ್ರಗಳು ನಡೆಯುತ್ತಿದೆ. ಇಂದು ಸಂಜೆ ಆರತಕ್ಷತೆ, ನಾಳೆ ಧಾರಾ ಮುಹೂರ್ತ ಶುಭಕಾರ್ಯ ನಡೆಯಲಿದೆ. ಗಣ್ಯರು, ಸಿನಿ ತಾರೆಯರು, ಆಪ್ತರು ಡಾಲಿ ಮದುವೆಯಲ್ಲಿ ಪಾಲ್ಗೊಂಡು ಜೋಡಿಗೆ ಶುಭಹಾರೈಸುತ್ತಿದ್ದಾರೆ.

    ಇಂದು ಬೆಳಗ್ಗೆಯಿಂದ ವಸ್ತುಪ್ರದರ್ಶನ ಮೈದಾನದಲ್ಲಿ ಹಲವು ಶಾಸ್ತ್ರಗಳು ನಡೆದವು. ಗಂಗೆ ತರೋ ಶಾಸ್ತ್ರ, ತಂದೆ-ತಾಯಿಯರ ವಾಗ್ದಾನ ಶಾಸ್ತ್ರ, ವಧು-ವರರ ನಿರೀಕ್ಷಣೆ ಶಾಸ್ತ್ರ ನಡೆಯಿತು. ಇದನ್ನೂ ಓದಿ: Photo Gallery: ಮೈಸೂರಲ್ಲಿ ನಟ ಡಾಲಿ ಧನಂಜಯ್‌ ಮದುವೆ ಸಂಭ್ರಮ

    ಗೌರಿ ಪೂಜೆ, ಬಳೆ ಶಾಸ್ತ್ರ, ವಧು-ವರರ ಪ್ರಥಮ ಶಾಸ್ತ್ರ ಕೂಡ ನಡೆಯಿತು. ನಟ ಡಾಲಿ ಮತ್ತು ಡಾಕ್ಟರ್‌ ಧನ್ಯತಾ ಜೋಡಿ ಪರಸ್ಪರರು ಹೂವಿನ ಹಾರ ಬದಲಾಯಿಸಿಕೊಂಡರು. ಧನ್ಯತಾ ಅವರ ಕಾಲಿಗೆ ನಟ ಕಾಲುಂಗುರು ತೊಡಿಸಿದರು.

    ಮದುವೆ ಸಂಭ್ರಮದಲ್ಲಿದ್ದ ನಟನಿಗೆ ‘ಪಬ್ಲಿಕ್‌ ಟಿವಿ’ ಮುಖ್ಯಸ್ಥರಾದ ಹೆಚ್‌.ಆರ್‌.ರಂಗನಾಥ್‌ ಅವರು ವಿಶ್‌ ಮಾಡಿದರು. ಇಂದು ಸಂಜೆ ಆರತಕ್ಷತೆ ಸಮಾರಂಭ ನಡೆಯಲಿದೆ. ಭಾನುವಾರ ಧಾರಾ ಮುಹೂರ್ತ ನಡೆಯಲಿದೆ. ಇದನ್ನೂ ಓದಿ: ಹಳದಿ ಶಾಸ್ತ್ರ ಸಂಭ್ರಮದಲ್ಲಿ ಮಿಂದೆದ್ದ ಡಾಲಿ ಧನಂಜಯ್‌, ಧನ್ಯತಾ ಜೋಡಿ

    ಆರತಕ್ಷತೆಗೆ 25,000 ಜನರಿಗೆ ಊಟದ ವ್ಯವಸ್ಥೆ
    ಸಂಜೆ ಆರತಕ್ಷತೆಗೆ 25,000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹೋಳಿಗೆ, ತುಪ್ಪ, ಹೆಸರುಬೆಳೆ ಪಾಯಸ, ಸ್ವೀಟ್ ಕಾರ್ನ್ ಕೊಸುಂಬರಿ, ಕಡ್ಲೆಕಾಳು ಉಸ್ಲಿ, ಮಸಾಲ್ ದೋಸೆ, ಕಾಯಿ ಚಟ್ನಿ, ರುಮಾಲಿ ರೊಟ್ಟಿ, ಪನ್ನೀರ್ ಗ್ರೇವಿ, ಬೆಂಡೆಕಾಯಿ ಪ್ರೈ, ಮೆಣಸಿನಕಾಯಿ ಬಜ್ಜಿ, ವೆಜ್ ಬಿರಿಯಾನಿ ರಾಯತ, ಅನ್ನ, ತುಪ್ಪ, ಆಂಧ್ರ ಪಪ್ಪು, ತಿಳಿಸಾರು, ಮೊಸರು ಮೆನುವಿನಲ್ಲಿದೆ.

    ಐದು ಕೌಂಟರ್ ಇದ್ದು, ಮಹಿಳೆಯರಿಗೆ ಪ್ರತ್ಯೇಕವಾದ ಕೌಂಟರ್ ಮಾಡಿದ್ದೇವೆ. ನಾಳೆ ಬೆಳಗ್ಗೆ ಟಿಫನ್ 5,000 ಜನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 15,000 ಜನಕ್ಕೆ ಊಟದ ವ್ಯವಸ್ಥೆ ಮಾಡ್ತಿದ್ದೇವೆ. 170 ಜನ ಬಾಣಸಿಗರಿಂದ ಅಡುಗೆ ತಯಾರಿ ನಡೆಯುತ್ತಿದೆ. ಡಾಲಿ ಹಾಗೂ ಅವರ ಮನೆಯವರಿಗೆ ಹೋಳಿಗೆ ಊಟ ಹಾಕಿಸ್ಬೇಕು ಅಂತ ಆಸೆ ಇತ್ತು. ಹಾಗಾಗಿ ಹೋಳಿಗೆ ಸಿದ್ಧ ಮಾಡ್ತಿದ್ದೀವಿ ಎಂದು ಎಂಎನ್‌ಜೆ ಕ್ಯಾಟರಿಂಗ್ ಮಾಲೀಕ ಜಗದೀಶ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಕೊಟ್ಟ ಗಿಫ್ಟ್

  • Photo Gallery: ಮೈಸೂರಲ್ಲಿ ನಟ ಡಾಲಿ ಧನಂಜಯ್‌ ಮದುವೆ ಸಂಭ್ರಮ

    Photo Gallery: ಮೈಸೂರಲ್ಲಿ ನಟ ಡಾಲಿ ಧನಂಜಯ್‌ ಮದುವೆ ಸಂಭ್ರಮ

    ಟ ಡಾಲಿ ಧನಂಜಯ್‌ (Daali Dhananjay) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಡಾಕ್ಟರ್‌ ಧನ್ಯತಾ ಅವರ ಜೊತೆ ನಟ ಡಾಲಿ ಹಸೆಮಣೆ ಏರಲಿದ್ದಾರೆ. ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಇಂದು ಮದುವೆ ಶಾಸ್ತ್ರಗಳು ನಡೆಯುತ್ತಿದೆ. ಇಂದು ಸಂಜೆ ಆರತಕ್ಷತೆ, ನಾಳೆ ಧಾರಾ ಮುಹೂರ್ತ ಶುಭಕಾರ್ಯ ನಡೆಯಲಿದೆ. ಗಣ್ಯರು, ಸಿನಿ ತಾರೆಯರು, ಆಪ್ತರು ಡಾಲಿ ಮದುವೆಯಲ್ಲಿ ಪಾಲ್ಗೊಂಡು ಜೋಡಿಗೆ ಶುಭಹಾರೈಸುತ್ತಿದ್ದಾರೆ.

  • ಹಳದಿ ಶಾಸ್ತ್ರ ಸಂಭ್ರಮದಲ್ಲಿ ಮಿಂದೆದ್ದ ಡಾಲಿ ಧನಂಜಯ್‌, ಧನ್ಯತಾ ಜೋಡಿ

    ಹಳದಿ ಶಾಸ್ತ್ರ ಸಂಭ್ರಮದಲ್ಲಿ ಮಿಂದೆದ್ದ ಡಾಲಿ ಧನಂಜಯ್‌, ಧನ್ಯತಾ ಜೋಡಿ

    – ಇಂದು, ನಾಳೆ ಮೈಸೂರಲ್ಲಿ ನಟ ಡಾಲಿ ವಿವಾಹ ಕಾರ್ಯಕ್ರಮ

    ಮೈಸೂರು: ನಟ ಡಾಲಿ ಧನಂಜಯ್‌ (Daali Dhananjay) ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಧನಂಜಯ್‌ ಮತ್ತು ಡಾಕ್ಟರ್‌ ಧನ್ಯತಾ (Dhanyatha) ಜೋಡಿ ಹಳದಿ ಶಾಸ್ತ್ರದ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ.

    ನಟನ ಹಳದಿ ಶಾಸ್ತ್ರ ಸಮಾರಂಭಕ್ಕೆ ಹಿರಿಯ ನಟ, ಮಾಜಿ ಸಚಿವ ಬಿ.ಸಿ.ಪಾಟೀಲ್‌ ಮತ್ತು ಕುಟುಂಬದವರು ಆಗಮಿಸಿ ಶುಭಕೋರಿದ್ದಾರೆ.

    ಜರ್ಮನಿಯ ರಂಗ ನಿರ್ದೇಶಕ ಕ್ರಿಸ್ಟೆನ್‌ ಭಾಗವಹಿಸಿದ್ದು ಕೂಡ ವಿಶೇಷವಾಗಿತ್ತು. ಹಳದಿ ಶಾಸ್ತ್ರ ಸಮಾರಂಭದಲ್ಲಿ ಧನಂಜಯ್‌ ಮತ್ತು ಧನ್ಯತಾ ಜೋಡಿ ಕುಟುಂಬಸ್ಥರು, ಆಪ್ತರು, ಸ್ನೇಹಿತರು ಪಾಲ್ಗೊಂಡು ಶುಭಹಾರೈಸಿದ್ದಾರೆ.

    ಇಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಮತ್ತು ಡಾಕ್ಟರ್‌ ಜೋಡಿ ಆರತಕ್ಷತೆ ನಡೆಯಲಿದೆ. ಇಂದು ಬೆಳಗ್ಗೆಯಿಂದಲೇ ಶಾಸ್ತ್ರಗಳು ನಡೆಯಲಿವೆ. ಸಂಜೆ 6 ಗಂಟೆಯ ನಂತರ ಆರತಕ್ಷತೆ ಕಾರ್ಯಕ್ರಮ ಇರಲಿದೆ.

    ನಾಳೆ ಬೆಳಗ್ಗೆ ಧಾರಾ ಮುಹೂರ್ತ ನಡೆಯಲಿದೆ. ಆರತಕ್ಷತೆಗೆ ಸ್ಯಾಂಡಲ್‌ವುಡ್ ತಾರೆಯರು, ರಾಜಕೀಯ ರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

  • ಭಾವಿ ಪತ್ನಿಗೆ ಡಾಲಿ ಪ್ರಪೋಸ್- ವಿಡಿಯೋ ವೈರಲ್

    ಭಾವಿ ಪತ್ನಿಗೆ ಡಾಲಿ ಪ್ರಪೋಸ್- ವಿಡಿಯೋ ವೈರಲ್

    ಟ ರಾಕ್ಷಸ ಡಾಲಿ ಧನಂಜಯ (Daali Dhananjay) ಅವರು ಇದೇ ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೀಗ ಆಕ್ಟರ್ ಡಾಲಿ ಲೈಫ್‌ಗೆ ಡಾಕ್ಟರ್ ಧನ್ಯತ ಎಂಟ್ರಿ ಕೊಟ್ಟಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಇದರ ನಡುವೆ ಭಾವಿ ಪತ್ನಿ ಧನ್ಯತಾಗೆ (Dhanyatha) ಉಂಗುರ ತೊಡಿಸಿ ವಿಶೇಷವಾಗಿ ಡಾಲಿ ಪ್ರಪೋಸ್ ಮಾಡಿದ್ದಾರೆ. ಹೊಸ ಜೋಡಿಯ ಪ್ರಪೋಸಲ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಧನ್ಯತ ಬರುವ ಮುನ್ನ ಡಾಲಿ ಸಿಂಗಲ್ ಲೈಫ್ ಹೇಗಿತ್ತು? ಎಂಬುದನ್ನು ವಿಡಿಯೋ ಮೂಲಕ ವಿವರಿಸಿದ್ದಾರೆ. ಡಾಲಿ ಆಪ್ತ ಸ್ನೇಹಿತ ನಾಗಭೂಷಣ್ ಧ್ವನಿಯಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಬ್ಯಾಚುಲರ್ ಲೈಫ್ ಹೇಗಿತ್ತು? ಎಂಬುದನ್ನು ವಿವರಿಸಿ ನಂತರ ಧನ್ಯತ ಎಂಟ್ರಿ ಕೊಟ್ಟಿರೋದನ್ನು ತೋರಿಸಿದ್ದಾರೆ. ಇದನ್ನೂ ಓದಿ:ಕ್ರೇಜಿ ಕ್ವೀನ್‌ ರಕ್ಷಿತಾ ಸಹೋದರನ ಆರತಕ್ಷತೆ ಸಂಭ್ರಮದಲ್ಲಿ ದರ್ಶನ್

    ಡಾಕ್ಟರ್ ಅಮ್ಮ ಎಂದು ಡಾಲಿ ಹೇಳುತ್ತಾ, ಭಾವಿ ಪತ್ನಿಗೆ ಪ್ರೀತಿಯಿಂದ ಬೆರಳಿಗೆ ರಿಂಗ್ ತೊಡಿಸಿದ್ದಾರೆ. ಸಿಂಗಲ್ ಲೈಫ್ ಶುಭಂ ಹೇಳೋ ಸಮಯ ಬಂದಾಯ್ತು. ನೂರು ಬ್ಯಾಚುರಲ್ ಪಾರ್ಟಿಗಳೇ ಬರಲಿ. ನೂರು ಬ್ಯಾಚುಲರ್ ಪಾರ್ಟಿಗಳೇ ಬರಲಿ, ಸಾವಿರ ಸೋಲೋ ಟ್ರಿಪ್‌ಗಳೇ ಇರಲಿ. ನಿನ್ನಾ ಜೊತೆ ರೀಲ್ಸ್ ಮಾಡಿಕೊಂಡು ಇರುತ್ತೇನೆ. ಬನ್ನಿ ನಾವಿಬ್ಬರೂ ಹಸೆಮಣೆ ಏರುತ್ತಿರುವಾಗ ನೀವೆಲ್ಲಾ ಸಾಕ್ಷಿಯಾಗಿರಬೇಕು. ನೀವು ಅಕ್ಷತೆ ಹಾಕಬೇಕು. ಮಿಸ್ ಮಾಡದೇ ಬಂದು ಹಾರೈಸಿ ಹೋಳಿಗೆ ಊಟ ಮಾಡಿಕೊಂಡು ಹೋಗಿ. ಬ್ಯಾಚುಲರ್ ಆಗಿ ಉಳಿಯುವ ಗಂಡಿಗೆ ಬೆಲೆಯಿಲ್ಲ. ನಿಮ್ಮೆಲ್ಲರ ಹಾರೈಕೆಯೊಂದಿಗೆ ನಾನು ಬಿತ್ತಬೇಕಾಗಿರೋದು ಪ್ರೀತಿಯ ತೋಟ ಎಂದು ಡೈಲಾಗ್ ಹೊಡೆಯುತ್ತಾ ಭಾವಿ ಪತ್ನಿಗೆ ಕಿಸ್ ಮಾಡಿದ್ದಾರೆ ಡಾಲಿ.

     

    View this post on Instagram

     

    A post shared by Daali Pictures (@daalipictures)

    ಇನ್ನೂ ಇದೇ ಫೆ.15 ಹಾಗೂ ಫೆ.16ರಂದು ಡಾಲಿ ಮದುವೆ ಕಾರ್ಯಕ್ರಮ ನಡೆಯಲಿದೆ. ವಸ್ತುಪ್ರದರ್ಶನ ಮೈದಾನ, ಅಂಬಾವಿಲಾಸ ಅರಮನೆ ಮುಂಭಾಗ ಮೈಸೂರಿನಲ್ಲಿ ಮದುವೆ ಜರುಗಲಿದೆ. ಈ ಸಂಭ್ರಮದಲ್ಲಿ ಸಿನಿಮಾ ರಂಗದ ಸ್ಟಾರ್ಸ್ ಹಾಗೂ ರಾಜಕೀಯ ರಂಗದ ಗಣ್ಯರು ಭಾಗಿಯಾಗಲಿದ್ದಾರೆ.

  • ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಬ್ಯಾಚುಲರ್ ಆಗಿದ್ದ ನಟ ಡಾಲಿ ಧನಂಜಯ (Daali Dhananjay) ಅವರು ಇದೇ ಫೆ.16ರಂದು ಮದುವೆಗೆ ಸಜ್ಜಾಗಿದ್ದಾರೆ. ಈ ಹಿನ್ನೆಲೆ ಹೈದರಾಬಾದ್‌ಗೆ ತೆರಳಿ ‘ಪುಷ್ಪ 2’ (Pushpa 2) ತಂಡವನ್ನು ಭೇಟಿಯಾಗಿ ಮದುವೆ ಆಮಂತ್ರಣ ಪತ್ರಿಕೆಯನ್ನು ಡಾಲಿ ನೀಡಿದ್ದಾರೆ. ಇದನ್ನೂ ಓದಿ:ಆರೋಗ್ಯ ಸಮಸ್ಯೆ ಇದೆ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಸೆಲೆಬ್ರಿಟಿಗಳಿಗೆ ದರ್ಶನ್‌ ಮನವಿ

    ‘ಪುಷ್ಪ’, ‘ಪುಷ್ಪ 2’ ಸಿನಿಮಾದಲ್ಲಿ ಡಾಲಿ ನಟಿಸಿ ಸೈ ಎನಿಸಿಕೊಂಡಿರೋದ್ರಿಂದ ತಂಡದ ಜೊತೆ ಉತ್ತಮ ಒಡನಾಟ ಇದೆ. ಹಾಗಾಗಿ ಹೈದರಾಬಾದ್‌ಗೆ ಆಗಮಿಸಿ ಅಲ್ಲು ಅರ್ಜುನ್(Allu Arjun), ಡೈರೆಕ್ಟರ್ ಸುಕುಮಾರ್ (Sukumar) ಹಾಗೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ (Rashmika Mandanna) ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಭೇಟಿಯಾಗಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಇನ್ನೂ ಇದೇ ಫೆ.15 ಹಾಗೂ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಡಾಲಿ ಹಸೆಮಣೆ ಏರಲಿದ್ದಾರೆ. ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರಿಗೆ ಹಾಗೂ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಬರಲಿದ್ದಾರೆ.

  • ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ? – ಖಡಕ್ ಪ್ರಶ್ನೆಗೆ ಡಾಲಿ ಧನಂಜಯ್ ಉತ್ತರ

    ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ? – ಖಡಕ್ ಪ್ರಶ್ನೆಗೆ ಡಾಲಿ ಧನಂಜಯ್ ಉತ್ತರ

    ಬೆಂಗಳೂರು: ಫೆ.16ರಂದು ಸ್ತ್ರೀತಜ್ಞೆ ಧನ್ಯತಾ ಅವರೊಂದಿಗೆ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ (Daali Dhananjaya) ಹಸೆಮಣೆ ಏರಲಿದ್ದಾರೆ. ಈ ಹಿನ್ನೆಲೆ ಗಣ್ಯರನ್ನು ಭೇಟಿ ಮಾಡಿ ಆಮಂತ್ರಣವನ್ನೂ ನೀಡುತ್ತಿದ್ದಾರೆ. ಇನ್ನು ಮದುವೆ ಕುರಿತು ಡಾಲಿ ಜೋಡಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್‌ರನ್ನು (Darshan) ತಮ್ಮ ಮದುವೆಗೆ ಏಕೆ ಕರೆದಿಲ್ಲ ಎಂಬ ಪ್ರಶ್ನೆಗೆ ಉತ್ತರ ನೀಡಿದ್ದಾರೆ.

    ಡಾಲಿ ಧನಂಜಯ್ ದರ್ಶನ್‌ರನ್ನ ಮದುವೆಗೆ ಕರೆದಿಲ್ಲ ಎಂಬ ಚರ್ಚೆ ಮುನ್ನೆಲೆಗೆ ಬರುತ್ತಿದ್ದಂತೆ ಇಂದು ಸುದ್ದಿಗೋಷ್ಠಿಯಲ್ಲಿ ಡಾಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ದರ್ಶನ್‌ರನ್ನ ಸಂಪರ್ಕಿಸಲು ಪ್ರಯತ್ನ ಪಟ್ಟೆ, ಆದರೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡುತ್ತೇನೆ. ಯಾರನ್ನೂ ಬಿಟ್ಟಿಲ್ಲ, ಎಲ್ಲರನ್ನೂ ಕರೆದಿದ್ದೇನೆ. ಅವರನ್ನೂ ಕರೆಯುವ ಆಸೆ ಇತ್ತು, ಆದರೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಶೀಘ್ರದಲ್ಲೇ ಅದೂ ನೆರವೇರುತ್ತದೆ. ಅದು ಬಿಟ್ಟು ಏನೂ ಇಲ್ಲ ಎಂದು ಡಾಲಿ ಧನಂಜಯ್ ತಿಳಿಸಿದ್ದಾರೆ. ಇದನ್ನೂ ಓದಿ: ಕುಂಭಮೇಳದ ಮೊನಾಲಿಸಾ ಸಿನಿಮಾ ಆಫರ್‌ ಒಪ್ಪಿದ್ಹೇಗೆ?

    ದರ್ಶನ್ ನಟನೆಯ ‘ಯಜಮಾನ’ ಚಿತ್ರದಲ್ಲಿ ಡಾಲಿ ಧನಂಜಯ್ ಮಿಠಾಯಿ ಸೂರಿ ಎಂಬ ಪಾತ್ರದಲ್ಲಿ ನಟಿಸಿದ್ದರು. ಆ ಮಟ್ಟಿಗೆ ಇವರಿಬ್ಬರ ನಡುವೆ ಅನ್ಯೋನ್ಯತೆಯಿದೆ. ಆದರೆ ದರ್ಶನ್ ಅವರನ್ನು ಆಹ್ವಾನಿಸದೇ ಇರುವುದು ಹಲವರ ಅನುಮಾನಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಡಾಕ್ಟರ್ ಧನ್ಯತಾರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ?- ಲವ್ ಸ್ಟೋರಿ ಬಿಚ್ಚಿಟ್ಟ ಡಾಲಿ

    ಇನ್ನು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರನ್ನು ಕರೆಯದೇ ಇರುವುದಕ್ಕೆ ಬೇರೆಬೇರೆ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾಲಿ, ದರ್ಶನ್ ಅವರಿಂದ ತಪ್ಪು ಆಗಿದ್ದರೆ ಶಿಕ್ಷೆಯಾಗಲಿ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದರು. ಇದರಿಂದ ಅವರಿಬ್ಬರ ಮಧ್ಯೆ ಅಂತರ ಉಂಟಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಅನ್ ಲಾಕ್ ರಾಘವನ ಬಗ್ಗೆ ನಿರ್ಮಾಪಕ ಮಂಜುನಾಥ್ ಹೇಳಿದ್ದಿಷ್ಟು!