Tag: dharawad

  • ನಿರಂತರ ಮಳೆ, ಶೀತಗಾಳಿ – ಧಾರವಾಡ ಜಿಲ್ಲಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ

    ನಿರಂತರ ಮಳೆ, ಶೀತಗಾಳಿ – ಧಾರವಾಡ ಜಿಲ್ಲಾದ್ಯಂತ 2 ದಿನ ಶಾಲಾ ಕಾಲೇಜುಗಳಿಗೆ ರಜೆ

    ಧಾರವಾಡ: ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಮತ್ತು ತಂಪು ಗಾಳಿ ಬೀಸುತ್ತಿರುವುದರಿಂದ ಜುಲೈ 25 ಮತ್ತು 26 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ (Dharwad DC) ದಿವ್ಯ ಪ್ರಭು (Divya Prabhu) ಆದೇಶಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲಾ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಜುಲೈ ತಿಂಗಳು ಸಂತೃಪ್ತಿಯಾಗಿದೆ – ಆಗಸ್ಟ್‌ನಲ್ಲಿ 45 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಒತ್ತಾಯ

     

    ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.  ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಆತಂಕ

     

  • ಯಾರೇ ಇರಲಿ ಮಹಿಳೆಯರ ಬಗ್ಗೆ ಗೌರವದಿಂದ ಮಾತನಾಡಬೇಕು: ಬಿ.ಸಿ ಪಾಟೀಲ್

    ಯಾರೇ ಇರಲಿ ಮಹಿಳೆಯರ ಬಗ್ಗೆ ಗೌರವದಿಂದ ಮಾತನಾಡಬೇಕು: ಬಿ.ಸಿ ಪಾಟೀಲ್

    ಧಾರವಾಡ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್ ರಾತ್ರಿ ಕೆಲಸ ಮಾಡುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಸಚಿವ ಬಿ.ಸಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಇನ್ಸ್‌ಪೆಕ್ಟರ್‌ ಮೃತಪಟ್ಟಾಗ ಸೋನಿಯಾ ಅತ್ತಿರಲಿಲ್ಲ, ಟೆರರಿಸ್ಟ್ ಸತ್ತಾಗ ಅತ್ತಿದ್ದರು: ಪ್ರಹ್ಲಾದ್ ಜೋಶಿ

    ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಜಯ ಪಾಟೀಲ್ ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ, ನಾನು ಯಾಕೆ ಪ್ರತಿಕ್ರಿಯೆ ಕೊಡಲಿ, ಯಾರೇ ಇರಲಿ ಮಹಿಳೆಯರ ಬಗ್ಗೆ ಗೌರವ ಇಟ್ಟು ಮಾತನಾಡಬೇಕು. ಅದನ್ನು ಪಾಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಇಡಿ ದಾಳಿ ಪ್ರಕರಣ- ದೆಹಲಿಯಲ್ಲಿ ಮೊದಲ ಬಾರಿ ವಿಚಾರಣೆಗೆ ಹಾಜರಾದ ಜಮೀರ್

    ಗೋಹತ್ಯೆ ಬಗ್ಗೆ ಮಾತನಾಡಿದ ಅವರು, ಯಾವುದೇ ಕಾಯ್ದೆ ಜಾರಿಗೆ ತರುವುದು ಬಹಳ ಮುಖ್ಯ, ಗೋಹತ್ಯೆ ಇವತ್ತು ನಿನ್ನೆ ಬಂದಿದ್ದಲ್ಲ, 1965 ರಲ್ಲಿ ಬಂದಿದೆ. ಎಲ್ಲಿ ಅಕ್ರಮ ಸಾಗಾಣಿಕೆ ಇರುತ್ತದೆ. ಅಲ್ಲಿ ಹಿಡಿಯುವ ಕೆಲಸ ಮಾಡುತ್ತಾರೆ. ಅದನ್ನು ಹುಡುಕಿಕೊಂಡು ಹೋಗಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.

    ಇದೇ ವೇಳೆ ರಾಜ್ಯದಲ್ಲಿನ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಂಜೆ ಹಾನಗಲ್ ನಲ್ಲಿ ಸಭೆ ಕರೆದಿದ್ದೇವೆ. ಯಾರು, ಯಾರು ಆಕಾಂಕ್ಷಿ ಇದ್ದಾರೆ. ಅವರ ಪಟ್ಟಿ ಹೈಕಮಾಂಡ್‍ಗೆ ಕಳುಹಿಸುತ್ತೇವೆ. ಸೂಕ್ತ ವ್ಯಕ್ತಿಗೆ ಟಿಕೆಟ್ ಕೊಡುತ್ತೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವೇ ಗೆಲ್ಲುತ್ತೇವೆ. ಯಾರು ಗೆಲ್ಲುತ್ತಾರೆ ಹಾಗೂ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೆ. ಅವರಿಗೆ ನನ್ನ ಒಲವು ಎಂದಿದ್ದಾರೆ. ಇದನ್ನೂ ಓದಿ: ಕೊಲೆ ಯತ್ನ- ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಂಧನ

  • ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ: ಅರವಿಂದ್ ಬೆಲ್ಲದ್

    ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ: ಅರವಿಂದ್ ಬೆಲ್ಲದ್

    ಧಾರವಾಡ: ತಾಲಿಬಾನ್ ಸಮಸ್ಯೆಯಿಂದ ಅನಿಲ ಬೆಲೆ ಏರಿಕೆಯಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ. ಇದನ್ನೂ ಓದಿ:ಸುಧಾಮೂರ್ತಿ, ನಾರಾಯಣಮೂರ್ತಿಯನ್ನು ಶಾಲೆಯ ಉದ್ಘಾಟಕರಾಗಿ ಕರೆತರಬೇಕು: ಕಾರಜೋಳ

    ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಮಸ್ಯೆಯಿಂದಾಗಿ ಬೆಲೆ ಏರಿಕೆಯಾಗಿವೆ. ಅಲ್ಲದೇ ಕಚ್ಚಾ ತೈಲ ಬರುತ್ತಿಲ್ಲ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಾಗಿದೆ ಮತ್ತು ಗ್ಯಾಸ್ ದರ ಹೆಚ್ಚಳ ಯಾಕೆ ಆಗಿದೆ ಎಂದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಒಳ್ಳೆಯ ಸಂಗತಿ: ಶೆಟ್ಟರ್

    ಇದೇ ವೇಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಮತ್ತೆ ನಾವೇ ಗೆಲ್ಲಲಿದ್ದೇವೆ. ಜನ ಅಭಿವೃದ್ಧಿ ನೋಡಿ ಮತ ಹಾಕುತ್ತಾರೆ. ಹೀಗಾಗಿ ನಾವು ಪಾಲಿಕೆ ಚುನಾವಣೆಯಲ್ಲಿ 55 ರಿಂದ 60 ಸೀಟು ಗೆಲ್ಲುತ್ತೇವೆ. ಈ ಬಾರಿ ಪಾಲಿಕೆಯಲ್ಲಿ ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

  • ಧಾರವಾಡ ದುರಂತ – ಮೂವರನ್ನು ಕಾಪಾಡಿ ಸಾವನ್ನೇ ಗೆದ್ದು ಬಂದ ಕಾರ್ಮಿಕ

    ಧಾರವಾಡ ದುರಂತ – ಮೂವರನ್ನು ಕಾಪಾಡಿ ಸಾವನ್ನೇ ಗೆದ್ದು ಬಂದ ಕಾರ್ಮಿಕ

    ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಅವಘಡ ಸಂಭವಿಸುವ ವೇಳೆ ಮೂರನೇ ಮಹಡಿಯಲ್ಲಿದ್ದ ಕಾರ್ಮಿಕರೊಬ್ಬರು ತನ್ನ ಜೊತೆ ಇನ್ನೂ ಮೂವರ ಜೀವವನ್ನು ಕಾಪಾಡಿ, ಸಾವನ್ನೇ ಗೆದ್ದು ಬಂದಿದ್ದಾರೆ.

    ಮೂರನೇ ಅಂತಸ್ತಿನಲ್ಲಿ ಪೇಂಟಿಗ್ ಕೆಲಸ ಮಾಡ್ತಿದ್ದ ಶಿವಾನಂದ ತನ್ನ ಜೊತೆಗಿದ್ದ ಇಬ್ಬರನ್ನು ಬದುಕಿಸಿ, ಹೀರೋ ಆಗಿದ್ದಾರೆ. ನಾನು ಆರಾಮಗಿದ್ದೀನಿ. ನನಗೇನು ಆಗಿಲ್ಲ ನಾನು ಮೂರನೇ ಅಂತಸ್ತಿನಲ್ಲಿ ಪೇಟಿಂಗ್ ಮಾಡುತ್ತಿದ್ದಾಗ ಉರುಳಿ ಬಿತ್ತು. ನಾನು ಇಬ್ಬರನ್ನು ಕಾಪಾಡಿದ್ದೇನೆ ಎಂದು ಹೇಳಿದ್ದಾರೆ.

    ಮಧ್ಯಾಹ್ನ 3.40ರ ವೇಳೆಗೆ ಜನ ನೋಡುತ್ತಿದ್ದಂತೆ 3 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಕಟ್ಟಡ ಕುಸಿದು ಬಿದ್ದಿದೆ. ಈ ಕಟ್ಟಡ ಕಾಮಗಾರಿಯಲ್ಲಿ ಇವತ್ತು 100ಕ್ಕೂ ಹೆಚ್ಚು ಮಂದಿ ಇದ್ದರು ಅಂತ ಹೇಳಲಾಗಿದೆ. ಈ ಪೈಕಿ 40ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. 27 ಮಂದಿಯನ್ನು ಜಿಲ್ಲಾಸ್ಪತ್ರೆ, 13 ಮಂದಿಗೆ ಕಿಮ್ಸ್, 6 ಮಂದಿಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

    ಸುದ್ದಿ ತಿಳಿದು ಭಾರೀ ಸಂಖ್ಯೆಯಲ್ಲಿ ಜನ ಸ್ಥಳದತ್ತ ಹರಿದು ಬರುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಒಳಗಿನಿಂದ ರಕ್ಷಣೆಗಾಗಿ ಕಿರುಚಾಡುತ್ತಿರುವ ಧನಿಯೂ ಕೇಳಿ ಬರುತ್ತಿದೆ. ಹೀಗಾಗಿ ಅಮ್ಲಜನಕವನ್ನು ಪೂರೈಕೆ ಮಾಡಲಾಗುತ್ತಿದೆ.

    ಸ್ಥಳಕ್ಕೆ ರಕ್ಷಣಾ ಪಡೆ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಸಮರೋಪಾದಿಯಲ್ಲಿ ಶ್ರಮಿಸುತ್ತಿದ್ದಾರೆ. ಈ ಕಟ್ಟಡ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಾವ ಅವರಿಗೆ ಸೇರಿದ್ದು ನಾಲ್ವರು ಪಾಲುದಾರರು ಬಂಡವಾಳ ಹೂಡಿದ್ದಾರೆ. ಕಳಪೆ ಕಾಮಗಾರಿಯಿಂದಲೇ ಕಾಂಪ್ಲೆಕ್ಸ್ ಕುಸಿದಿದೆ ಎನ್ನುವ ಆರೋಪ ಕೇಳಿಬಂದಿದೆ.

    https://www.youtube.com/watch?v=WhgyTU-1oN8

  • ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ರಾಮಮಂದಿರ ಮಾಡದೆ ಇದ್ದರೆ ಮೋದಿ ಹಿಂದೂಗಳಿಗೆ ದ್ರೋಹ ಬಗೆದಂತೆ: ಪ್ರಮೋದ್ ಮುತಾಲಿಕ್

    ಧಾರವಾಡ: ರಾಮಮಂದಿರ ನಿರ್ಮಾಣ ಮಾಡದೇ ಇದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

    ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಆಗಬೇಕೆಂದು 100 ಕೋಟಿ ಹಿಂದೂಗಳ ಆಶಯವಾಗಿದೆ. ಆದರೆ ಇದು ಬಿಜೆಪಿಯವರಿಗೆ ಲಾಭ ಆಗುತ್ತಿದೆ. ಬಿಜೆಪಿಯವರು ರಾಮ ಮಂದಿರ ನಿರ್ಮಿಸುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹಾಕಿದ್ದರು. ಅಲ್ಲದೇ ಜನರು, ಸಂತರೂ ಸಹ ಈಗ ಒತ್ತಾಯ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ರಾಮ ಮಂದಿರ ನಿರ್ಮಾಣವಾಗಬೇಕು. ಈ ಬಾರಿ ಮಾಡದೇ ಇದ್ದರೆ, ಪ್ರಧಾನಿ ಮೋದಿಯವರು ಹಿಂದೂಗಳಿಗೆ ದ್ರೋಹ ಬಗೆದಂತಾಗುತ್ತದೆ. ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಇದೇ ರೀತಿ ಮಾಡಿದ್ದರು. ಹೀಗಾಗಿ ನಾವು ಅವರನ್ನು ಕೆಳಗೆ ಇಳಿಸಿದ್ದೇವು ಎಂದರು.

    ಇದೇ ವೇಳೆ ಗೋರಕ್ಷಕರ ಮೇಲೆ ಹಲ್ಲೆ ಕುರಿತು ಪ್ರತಿಕ್ರಿಯಿಸಿ, ಹಿಂದೂ ಕಾರ್ಯಕರ್ತರಿಗೆ ಗೋಮಾಂಸ ಸಾಗಾಟದ ವಿಷಯ ಗೊತ್ತಾಗುತ್ತದೆ. ಆದರೆ ಪೊಲೀಸರಿಗೆ ಸಾಗಾಟದ ಬಗ್ಗೆ ಮಾಹಿತಿ ಗೊತ್ತಿರಲಿಲ್ಲವೇ? ಪೊಲೀಸರ ಕೆಲಸ ಇರೋದೆ ಪತ್ತೆ ಮಾಡುವುದಕ್ಕೆ. ಹಾಗಾದರೇ ಅವರು ಏನು ಕತ್ತೆ ಕಾಯುತ್ತಿದ್ದರಾ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಅವರು, ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಾರೆ. ಅವರ ಹಿಂದೆ ಕಾರುಗಳನ್ನು ಫಾಲೋ ಮಾಡಿ, ಅದು ಬಿಟ್ಟು ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರೆ, ಅಕ್ರಮ ಇಲ್ಲ ಪರವಾನಿಗೆ ಇದೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಪರವಾನಿಗೆ ಇದ್ದಿದ್ದರೆ, ಅದನ್ನು ತೋರಿಸಬೇಕಿತ್ತು. ಕದ್ದು ಮುಚ್ಚಿ ಏಕೆ ಹೋಗಬೇಕಿತ್ತು ಎಂದು ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಪ್ರಮುಖ ಕಡತಗಳು ಬೆಂಕಿಯಲ್ಲಿ ಧಗ ಧಗ!

    ಹುಬ್ಬಳ್ಳಿ- ಧಾರವಾಡ ಪಾಲಿಕೆಯ ಪ್ರಮುಖ ಕಡತಗಳು ಬೆಂಕಿಯಲ್ಲಿ ಧಗ ಧಗ!

    ಹುಬ್ಬಳ್ಳಿ: ರಾಜ್ಯದ ಎರಡನೇಯ ಬಹುದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿವೆ.

    ಸ್ಮಾರ್ಟ್ ಸಿಟಿ ಯೋಜನೆ, ಸೇರಿದಂತೆ ಅವಳಿ ನಗರದಲ್ಲಿ ರಸ್ತೆಯಲ್ಲಿನ ಗುಂಡಿ ಮುಚ್ಚುವುದು ಸೇರಿದ ಹಲವು ಕಾಮಗಾರಿಗಳ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಈ ಪ್ರಮುಖ ಕಡತಗಳು ಬೆಂಕಿಗೆ ಆಹುತಿಯಾಗಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಆರ್‌ಟಿಐ  ಕಾಯ್ದೆ ಅಡಿಯಲ್ಲಿ ಮಾಹಿತಿ ಕೇಳಬಹುದು ಅಥವಾ ಜನಪ್ರತಿನಿಧಿಗಳು ಮಾಹಿತಿ ಕೇಳಬಹುದು ಎನ್ನುವ ಉದ್ದೇಶದಿಂದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿ ಕಡತಗಳು ಬೆಂಕಿ ಹಚ್ಚಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಅವಳಿ ನಗರದಲ್ಲಿ ಗುಂಡಿ ಮುಚ್ಚುವ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಮಧ್ಯೆ ಹುಬ್ಬಳ್ಳಿ- ಧಾರವಾಡ ಅವಳಿ ನಗರದ ಬಹುತೇಕ ಕಾಮಗಾರಿಗಳ ಟೆಂಡರ್ ಮತ್ತು ಗುತ್ತಿಗೆದಾರರಿಗೆ ಸೇರಿದ ದಾಖಲೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

    ಕಾರ್ಯನಿರ್ವಾಹಕ ದಕ್ಷಿಣ ಹಾಗೂ ಅಧೀಕ್ಷಕ ಅಭಿಯಂತರರ ಕಚೇರಿಯ ಕಡತಗಳು ಬೆಂಕಿಗೆ ಆಹುತಿಯಾಗಿವೆ. ಕಳೆದ ವಾರ ನಡೆದ ಅವಳಿ ನಗರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಜನಪ್ರತಿನಿಧಿಗಳು ಕೆಲಸವನ್ನು ಸರಿಯಾಗಿ ಮಾಡದಕ್ಕೆ ಅಧಿಕಾರಿಗಳನ್ನು ಸಾಕಷ್ಟು ತರಾಟೆಗೆ ತೆಗೆದುಕೊಂಡಿದ್ದರು.

    ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಡತಗಳು ಬೆಂಕಿಗೆ ಆಹುತಿಯಾಗಿದ್ದನ್ನು ನೋಡಿದರೆ ಸಾಕಷ್ಟು ಅನುಮಾನಗಳು ಎದ್ದಿದೆ. ಪಾಲಿಕೆಯ ಜಂಟಿ ಆಯುಕ್ತ ಅಜೀಜ್ ದೇಸಾಯಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಉಪ ನಗರ ಪೊಲೀಸರು ಹಾಗೂ ವಿದ್ಯುತ್ ಇಲಾಖೆಗೆ ಯಾವ ಕಾರಣಕ್ಕೆ ಅಗ್ನಿ ಅವಘಡ ಸಂಭವಿಸಿದೆ ಎನ್ನುವ ಬಗ್ಗೆ ತನಿಖೆ  ನಡೆಸುವಂತೆ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=-doEdFRq2iI

  • ಸಿಡಿಲಿಗೆ ಓರ್ವ ಬಲಿ- 4 ದನಗಳ ಸಾವು

    ಸಿಡಿಲಿಗೆ ಓರ್ವ ಬಲಿ- 4 ದನಗಳ ಸಾವು

    ಬೆಂಗಳೂರು: ಸಿಡಿಲು ಬಡಿದು ಕಲಬುರಗಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ದನಗಳು ಸಾವನ್ನಪ್ಪಿ ಮೂವರಿಗೆ ಗಾಯವಾಗಿದೆ.

    ಕಲಬುರಗಿ ತಾಲೂಕಿನ ಭೂಪಾಲ್‍ತೆಗನೂರ್ ಗ್ರಾಮದ ನಿವಾಸಿ ದಯಾನಂದ್ ಪೂಜಾರಿ (28) ಮೃತ ದುರ್ದೈವಿ. ದಯಾನಂದ್ ಜಮೀನಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ದಾರಿಯ ಮಧ್ಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಈ ಕುರಿತು ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಇಲ್ಲಿನ ಮೂಡಬಿದ್ರೆಯ ಪಡುಮಾರ್ನಾಡು ಬಳಿಯ ಕೊಟ್ಟಿಗೆಗೆ ಸಿಡಿಲು ಬಡಿದು 4 ದನಗಳು ಬಲಿಯಾಗಿದ್ದು, ಆದಂ, ಮರಿಯಮ್ಮ ಮತ್ತು ಅವರ ಮಗಳಿಗೆ ಗಾಯವಾಗಿದೆ.

    ಹಾವೇರಿ ನಗರ ಸೇರಿದಂತೆ ಕೆಲವೆಡೆ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಮಳೆಯಾಗದೆ ಬೆಳೆ ಒಣಗುತ್ತಿದ್ದವು. ಧಾರವಾಡದಲ್ಲಿ ಸಂಜೆ ಜಿಟಿಜಿಟಿಯಾಗಿದ್ದ ಮಳೆ, ರಾತ್ರಿ ವೇಳೆಗೆ ಧಾರಾಕಾರವಾಗಿ ಸುರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್

    ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್

    ಬೆಂಗಳೂರು: ರಾಜ್ಯದ ಹಲವೆಡೆ ಇಂದು ಬೆಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

    ಬೆಳಗಾವಿ, ಧಾರವಾಡ, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆಯಲ್ಲಿ ಎಸಿಬಿ ದಾಳಿ ನಡೆದಿದೆ. ಬೆಳಗಾವಿಯ ಎಇಇ ಕಿರಣ್ ಸುಬ್ಬರಾವ್ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ.

    ತುಮಕೂರು ಉಪವಿಭಾಗಧಿಕಾರಿ ತಿಪ್ಪೇಸ್ವಾಮಿ ಮನೆ, ಚಿತ್ರದುರ್ಗದಲ್ಲಿ ಎರಡು ಮನೆ ಮತ್ತು ತುಮಕೂರಿನ ಮನೆ, ಕಚೇರಿ ಮೇಲೆ ಚಿತ್ರದುರ್ಗ ಎಸಿಬಿ ಡಿವೈಎಸ್‍ಪಿ ಜಿ.ಮಂಜುನಾಥ, ಶಿವಮೊಗ್ಗ ಡಿವೈಎಸ್‍ಪಿ ಚಂದ್ರಪ್ಪ ನೇತೃತ್ವದಲ್ಲಿ ದಾಳಿ ನಡೆದಿದ್ದು, ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮದ ನಿವಾಸ, ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿನ ತಿಪ್ಪೇಸ್ವಾಮಿ ಅವರ ಮಾವ ರಂಗಪ್ಪ ನಿವಾಸ ಹಾಗೂ ತುಮಕೂರಿನ ಶಿರಾ ರಸ್ತೆಯ ಎಸಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.

    ದಾವಣಗೆರೆಯಲ್ಲಿ ದುಡಾ ಜಾಂಯ್ಟ್ ಡೈರೆಕ್ಟರ್ ಮನೆ, ಕಚೇರಿ ಹಾಗೂ ಮಹಾನಗರ ಪಾಲಿಕೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದುಡಾ ಜಾಂಯ್ಟ್ ಡೈರೆಕ್ಟರ್ ಹಾಗೂ ಕಾರ್ಪೋರೇಷನ್ ಕಚೇರಿಯಲ್ಲಿ ಲೈಸೆನ್ಸ್ ವಿಭಾಗದ ಇಂಚಾರ್ಜ್ ಆಗಿರೋ ಗೋಪಾಲಕೃಷ್ಣ ಅವರ ಮೂರು ಅಂತಸ್ತಿನ ಮನೆ, 4 ನಿವೇಶನ, ಕೋಲ್ಕುಂಟೆ ಗ್ರಾಮದಲ್ಲಿ 8 ಎಕರೆ ಜಮೀನು ಒಂದು ಕಾರು ಪತ್ತೆಯಾಗಿದೆ. ಸದ್ಯ ಈ ಎಲ್ಲಾ ಮಹತ್ವದ ದಾಖಲೆ ಪತ್ರಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಎಸಿಬಿ ಡಿವೈಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ಈ ದಾಳಿ ನಡೆದಿದೆ.


    ಧಾರವಾಡದಲ್ಲಿ ಮೂಕಾಂಬಿಕಾ ನಗರದಲ್ಲಿರೋ ಕೆ.ಎಸ್.ಆರ್.ಟಿ.ಸಿ ಅಧಿಕಾರಿ ಶ್ರೀಪತಿ ದೊಡ್ಡಲಿಂಗಣ್ಣನವರ ಮನೆ ಮೇಲೆ ದಾಳಿ ನಡೆದಿದೆ. ರಸ್ತೆ ಸಾರಿಗೆ ನಿಗಮದಲ್ಲಿ ವಿಚಕ್ಷಣ ದಳದ ಅಧಿಕಾರಿಯಾಗಿರುವ ದೊಡ್ಡಲಿಂಗಣ್ಣನವರ ಹಾಗೂ ಬೆಳಗಾವಿ, ಧಾರವಾಡ, ಕಲಬುರಗಿ ಏಕಕಾಲಕ್ಕೆ ಮೂರು ಕಡೆ ಎಸಿಬಿ ದಾಳಿ ನಡೆದಿದೆ. ಧಾರವಾಡ ಎಸಿಬಿ ದಳದ ಡಿವೈಎಸ್ಪಿ ವಿಜಯಕುಮಾರ ಬಿಸಬಳ್ಳಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

  • ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ರೇಡ್

    ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ರೇಡ್

    ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಗಳೂರು, ನೆಲಮಂಗಲ, ಬೆಳಗಾವಿ, ಧಾರವಾಡ ಹಾಗೂ ಬಳ್ಳಾರಿ ಮುಂತಾದ ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

    ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಚಿಕ್ಕಬಳ್ಳಾಪುರ ಸಣ್ಣ ನೀರಾವರಿ ಇಲಾಖೆಯ ಎಇಇ ಹೇಮಂತ್ ಅವರ ಕಚೇರಿ ಹಾಗೂ ಮನೆ ಸೇರಿದಂತೆ ಸಂಬಂಧಿಕರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಇಇ ಹೇಮಂತ್ ಹಾಲಿ ವಾಸವಾಗಿರುವ ಬೆಂಗಳೂರಿನ ವಿದ್ಯಾರಣ್ಯಪುರಂ ನ ನಿವಾಸ ಹಾಗೂ ಸ್ವಗ್ರಾಮ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿ ಪೆದ್ದನಹಳ್ಳಿ ಗ್ರಾಮದ ಫಾರಂ ಹೌಸ್ ಹಾಗೂ ನೆಲಮಂಗಲದಲ್ಲಿನ ಹೇಮಂತ್ ಭಾಮೈದ ರಮೇಶ್ ರ ಬಾಡಿಗೆ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ನಗರದ ಸಣ್ಣ ನೀರಾವರಿ ಇಲಾಖೆ ಕಚೇರಿ ಮೇಲೂ ಸದ್ಯ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

    ತುಮಕೂರಿನಲ್ಲೂ ಎಸಿಬಿ ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಗದೀಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ತುಮಕೂರು ನಗರದ ಸರಸ್ವತಿಪುರಂ ನಲ್ಲಿ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಮೋಹನ್ ನೇತೃತ್ವದ ತಂಡ ದಾಖಲೆ ಪರಿಶೀಲಿಸುತ್ತಿದೆ. ಕೊರಟಗೆರೆ ತಾಲೂಕಿನಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿರುವ ಜಗದೀಶ್ ರ ಮೇಲೆ ಹಲವು ಅಕ್ರಮ ಎಸಗಿದ ಆರೋಪ ಇದೆ. ಅಲ್ಲದೆ ಬೇನಾಮಿ ಆಸ್ತಿ ಮಾಡಿದ ಆಪಾದನೆಯೂ ಇದೆ. ಈ ಹಿನ್ನೆಲೆಯಲ್ಲಿ ಎಸಿಬಿ ತಂಡ ದಾಳಿ ನಡೆಸಿದೆ.

    ಮಂಗಳೂರಿನ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ ಕೃಷಿ ಇಲಾಖೆ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿರುವ ಪಿ.ಎಫ್ ಮಿರಾಂಡಾ ಮನೆಗೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ಮೂರು ತಿಂಗಳಲ್ಲಿ ಹುದ್ದೆಯಿಂದ ನಿವೃತ್ತರಾಗಲಿದ್ದ ಮಿರಾಂಡಾ ಕೊನೆಗೂ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮನೆ ಮತ್ತು ಕಚೇರಿಯಲ್ಲಿ ದಾಳಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಕಡತಗಳ ವಶಕ್ಕೆ ಪಡೆದಿದ್ದಾರೆ. ಬೆಳ್ಳಂಬೆಳಗ್ಗೆ ಎಸಿಬಿ ಡಿವೈಎಸ್ಪಿ ಸುಧೀರ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದ್ದು ಪಕ್ಷಿಕೆರೆಯಲ್ಲಿರುವ ಎರಡು ಅಂತಸ್ತಿನ ಮನೆಯಲ್ಲಿ ಅಧಿಕಾರಿಗಳ ತಂಡ ಬೀಡುಬಿಟ್ಟಿದೆ. ಸಾರ್ವಜನಿಕ ದೂರಿನಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಎಇಇ ಸುರೇಶ ಭೀಮಾನಾಯ್ಕ್ ಮನೆ ಮೇಲೆ ಬೆಳಗಾವಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಎಸಿಬಿ ಡಿವೈಎಸ್‍ಪಿ ರುಘು ನೇತೃತ್ವದಲ್ಲಿ 6 ಕಡೆಗಳಲ್ಲಿ ದಾಳಿಯಾಗಿದ್ದು, ಅಕ್ರಮ ಆಸ್ತಿ ಗಳಿಕೆ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಿತ್ತೂರು, ಖಾನಪುರ ಸೇರಿ ಬೆಳಗಾವಿಯ ನಾಲ್ಕು ಕಡೆಗಳಲ್ಲಿ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.

    ಅಕ್ರಮ ಆಸ್ತಿ ಗಳಿಕೆ ಹಿನ್ನಲೆಯಲ್ಲಿ ವಿಜಯನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆ ತೋರಣಗಲ್ ತಾಲೂಕಿನ ಷಕ್ಷಾವಲಿ ನಿವಾಸದ ಕಚೇರಿ ಮೇಲೆ ದಾಳಿ ನಡೆದಿದೆ. ಎಸಿಬಿ ಎಸ್ ಪ್ರಸನ್ನ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

    ಧಾರವಾಡದಲ್ಲಿ ಕೂಡ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವಿಭಾಗದ ಎಸಿಎಫ್ ಪಾಂಡುರಂಗ ಪೈ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೈ ಧಾರವಾಡದಲ್ಲಿ ಮನೆ ಹೊಂದಿದ್ದು, ಧಾರವಾಡ ನಗರದ ಅರ್ಕೆಡ್ ಸಿಲ್ವರ್ ಬಡಾವಣೆಯಲ್ಲಿರೋ ಮನೆಗೆ ಡಿವೈಎಸ್‍ಪಿ ಮಲ್ಲಾಪೂರ ನೇತ್ರತ್ವದಲ್ಲಿ ದಾಳಿ ನಡೆಸಿದ್ದಾರೆ. ಅವರ ಜೊತೆ ಇಬ್ಬರು ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆಯಾಗುತ್ತಿದೆ.

    https://www.youtube.com/watch?v=w3-JhajXvL4

  • ಮದುವೆ ಸಮಾರಂಭದಲ್ಲಿ ಯುವಕರ ಗಲಾಟೆ- ಧಾರವಾಡದಲ್ಲಿ ಮೊಳಗಿದ ಗುಂಡಿನ ಸದ್ದು

    ಮದುವೆ ಸಮಾರಂಭದಲ್ಲಿ ಯುವಕರ ಗಲಾಟೆ- ಧಾರವಾಡದಲ್ಲಿ ಮೊಳಗಿದ ಗುಂಡಿನ ಸದ್ದು

    ಧಾರವಾಡ: ಕುಡಿದ ಮತ್ತಿನಲ್ಲಿ ಯುವಕರಿಬ್ಬರ ಮಧ್ಯೆ ನಡೆದ ವಾಗ್ವಾದದ ವೇಳೆ ಒರ್ವ ಗಾಳಿಯಲ್ಲಿ ಗುಂಡು ಹಾರಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಧಾರವಾಡ ವಿದ್ಯಾಗಿರಿ ಪೊಲೀಸರು ಹನುಮಂತಗೌಡ ಹಾಗೂ ರಾಘವೇಂದ್ರ ಎಂಬವರನ್ನ ಬಂಧಿಸಿದ್ದಾರೆ. ರಾತ್ರಿ ಈ ಖಾಸಗಿ ರೆಸಾರ್ಟ್ ನಲ್ಲಿ ಮದುವೆ ಸಮಾರಂಭವೊಂದು ನಡೆದಿತ್ತು.

    ಈ ಸ್ಥಳಕ್ಕೆ ಆಗಮಿಸಿದ ಹನುಮಂತಗೌಡ ಹಾಗೂ ರಾಘವೇಂದ್ರನ ನಡುವೆ ಗಲಾಟೆ ಆರಂಭವಾಗಿದೆ. ಈ ವೇಳೆ ಹನುಮಂತಗೌಡ ತನ್ನ ಬಳಿ ಇದ್ದ ರಿವಾಲ್ವರ್ ನಿಂದ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಸ್ಥಳದಲ್ಲಿ ಜನರು ಜಮಾಯಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ.

    ಇನ್ನು ಹನುಮಂತಗೌಡ ಕೊಲೆಯಾದ ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೆಶ್ ಗೌಡ ಆಪ್ತ ಎಂದು ತಿಳಿದು ಬಂದಿದೆ. ರೆಸಾರ್ಟ್ ನಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ ಯೊಗೇಶ್ ಗೌಡ ಕೊಲೆ ಆರೋಪಿ ಬಸವರಾಜ್ ಮುತ್ತಗಿ ಕೂಡಾ ಬಂದಿದ್ದ ಎಂದು ಮಾಹಿತಿ ಇದ್ದು, ಗುಂಡು ಹಾರಿದ್ದಕ್ಕೂ ಈ ಪ್ರಕರಣಕ್ಕೂ ಸಂಬಂಧ ಇದೆಯೇ ಎಂದು ಅನುಮಾನಗಳು ಕೂಡಾ ಆರಂಭವಾಗಿವೆ.

    ಸದ್ಯ ವಿದ್ಯಾಗಿರಿ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.