ಧಾರವಾಡ: ಕ್ಷುಲ್ಲಕ ಕಾರಣಕ್ಕಾಗಿ ಅನ್ಯಕೋಮಿನ ನಾಲ್ವರು ಯುವಕರು ಆರ್ಎಸ್ಎಸ್ (RSS) ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಅವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿರುವ ಘಟನೆ ಧಾರವಾಡದ (Dharwad) ಗಾಂಧಿಚೌಕ್ ಬಳಿ ನಡೆದಿದೆ.
ಶಿರೀಶ್ ಅಷ್ಟೇ ಅಲ್ಲದೇ ಅವರ ಕುಟುಂಬಸ್ಥರ ಮೇಲೂ ಯುವಕರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆ ಮಾಡಿದ ನಂತರ ನಾಲ್ವರು ನಾಪತ್ತೆಯಾಗಿದ್ದಾರೆ.
ಈ ಸಂಬಂಧ ದೂರು ಪಡೆದಿರುವ ಧಾರವಾಡ ಶಹರ ಠಾಣೆ ಪೊಲೀಸರು ನಾಪತ್ತೆಯಾಗಿರುವ ಯುವಕರ ಪತ್ತೆಗೆ ಬಲೆ ಬೀಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಧಾರವಾಡ: ಮಗನ ದುರಾಸೆಗೆ ತಂದೆಯೋರ್ವ ತನ್ನ ಮಗನಿಂದಲೇ ಬರ್ಬರವಾಗಿ ಹತ್ಯೆಗೀಡಾದ ಘಟನೆ ಧಾರವಾಡ (Dharawada) ಜಿಲ್ಲೆಯಲ್ಲಿ ನಡೆದಿದೆ.
ಅಡಿವೆಪ್ಪ ತಡಕೋಡ (57) ಎಂಬ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದ ನಿವಾಸಿ ನ.13 ರಂದು ತನ್ನ ಮನೆಯ ಪಕ್ಕದ ಶೆಡ್ನಲ್ಲಿ ಮಲಗಿದ ಜಾಗದಲ್ಲೇ ಬರ್ಬರವಾಗಿ ಹತ್ಯೆಗೀಡಾಗಿದ್ದ. ಅಡಿವೆಪ್ಪನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೆಳಗಾಗುವಷ್ಟರಲ್ಲಿ ಅಡಿವೆಪ್ಪ ಹೆಣವಾಗಿದ್ದನ್ನು ಕಂಡು ಆತನ ಮನೆಯವರು ಕಕ್ಕಾಬಿಕ್ಕಿಯಾಗಿದ್ದರು. ಆದರೆ, ಅಡಿವೆಪ್ಪನ ಮಗ ಶಿವಯೋಗಿ ತನಗೇನೂ ಸಂಬಂಧವಿಲ್ಲ, ಅಮಾಯಕ ಎನ್ನುವ ರೀತಿಯಲ್ಲಿ ಮನೆಯ ಕಟ್ಟೆಯ ಮೇಲೆ ಕುಳಿತುಕೊಂಡಿದ್ದ. ಇದನ್ನೂ ಓದಿ: ಗುಜರಾತ್ | ನಕಲಿ ವೈದ್ಯರಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ – ಆಹ್ವಾನ ಪತ್ರಿಕೆಯಲ್ಲಿ ಪೊಲೀಸ್ ಕಮಿಷನರ್ ಹೆಸರು!
ಶಿವಯೋಗಿ ಅದೇ ಗ್ರಾಮದಲ್ಲಿ ಅಕ್ರಮ ಸಂಬಂಧವೊಂದನ್ನು ಇಟ್ಟುಕೊಂಡಿದ್ದ. ಇದಕ್ಕೆ ಅಡಿವೆಪ್ಪ ವಿರೋಧ ವ್ಯಕ್ತಪಡಿಸಿ ತನ್ನ ಮಗನ ಜೀವನ ಚೆನ್ನಾಗಿರಲಿ ಎಂದು ಕನ್ಯೆ ನೋಡುವ ಶಾಸ್ತ್ರ ಕೂಡ ಇಟ್ಟುಕೊಂಡಿದ್ದ. ಅಡಿವೆಪ್ಪನ ಹತ್ಯೆಯಾಗುವ ಹಿಂದಿನ ರಾತ್ರಿ ಇದೇ ವಿಷಯಕ್ಕೆ ಮನೆಯಲ್ಲಿ ಮಗನೊಂದಿಗೆ ಜಗಳ ಕೂಡ ನಡೆದಿತ್ತಂತೆ. ಅದಾದ ಬಳಿಕ ಅಡಿವೆಪ್ಪ ತನ್ನ ಮನೆಯ ಪಕ್ಕವೇ ಇದ್ದ ಶೆಡ್ನಲ್ಲಿ ಮಲಗಿಕೊಂಡಿದ್ದ. ಎಲ್ಲಿ ತನ್ನ ಅಕ್ರಮ ಸಂಬಂಧಕ್ಕೆ ತಂದೆ ಮುಳುವಾಗುತ್ತಾನೋ ಎಂದು ಮಗನೇ ತನ್ನ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಆದರೆ, ಈ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್ ನಾರಾಯಣ್
ಅಡಿವೆಪ್ಪನ ಹತ್ಯೆಯಾದ ನಂತರ ಇಡೀ ತಲೆಮೊರಬ ಗ್ರಾಮದ ತುಂಬೆಲ್ಲ ಸ್ಮಶಾನ ಮೌನ ಆವರಿಸಿತ್ತು. ಆದರೆ, ಅಡಿವೆಪ್ಪನನ್ನು ಹತ್ಯೆ ಮಾಡಿದ ಶಿವಯೋಗಿ ಮಾತ್ರ ತನಗೇನೂ ಸಂಬಂಧ ಇಲ್ಲ ಎನ್ನುವ ರೀತಿ ಇದ್ದ. ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿದ್ದ ಖಾಕಿ ಪಡೆ ಎಲ್ಲ ಕೆಲಸ ಮುಗಿಸಿದ ನಂತರ ಶಿವಯೋಗಿಯನ್ನು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿದ್ದು ಎಂಬ ಸತ್ಯಾಂಶವನ್ನು ಹೊರ ಹಾಕಿದ್ದಾನೆ. ಸದ್ಯ ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಸಮಸ್ಯೆಗಳನ್ನ ಪರಿಹರಿಸೋವರೆಗೂ ನಾನು ವಿರಮಿಸೋದಿಲ್ಲ: ಡಿಕೆಶಿ
ಧಾರವಾಡ: ಉಪ್ಪಿನ ಬೇಟಗೇರಿ ಗ್ರಾಮದಲ್ಲಿ ಉಂಟಾಗಿದ್ದ ವಕ್ಫ್ (Waqf) ಆಸ್ತಿ ಸಂಬಂಧಿತ ಗೊಂದಲಗಳಿಗೆ ಕೊನೆಗೂ ತೆರೆ ಬಿದ್ದಿದೆ. ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ರೈತ ಕುಟುಂಬಗಳ ಪಹಣಿ ಕಾಲಂ ನಂ.11ರಲ್ಲಿ ನಮೂದಾಗಿದ್ದ ಸದರಿ ಆಸ್ತಿ ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂಬುದು ಈಗ ತೆರವಾಗಿದೆ.
ತಮ್ಮ ಜಮೀನು ಪಹಣಿಯಲ್ಲಿ ನಮೂದಾಗಿದ್ದ ವಕ್ಫ್ ಹೆಸರನ್ನು ಕಂಡು ರೈತರು ಆತಂಕ ಪಟ್ಟಿದ್ದರು. ಪಹಣಿಯಲ್ಲಿನ ವಕ್ಫ್ ಆಸ್ತಿ ಎಂಬ ಪದವನ್ನು ತೆಗೆಯಬೇಕು ಎಂದು ಆಗ್ರಹಿಸಿ ಗ್ರಾಮದ ರೈತರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ನೇತೃತ್ವದಲ್ಲಿ ದೊಡ್ಡಮಟ್ಟದ ಹೋರಾಟ ಕೂಡ ನಡೆಸಿದ್ದರು. ಪಹಣಿಯಲ್ಲಿ ನಮೂದಾಗಿದ್ದ ವಕ್ಫ್ ಹೆಸರನ್ನು ತೆರವುಗೊಳಿಸುವಂತೆ ತಹಶೀಲ್ದಾರ್ಗೆ ಗಡುವು ನೀಡಿದ್ದರು. ಇದೀಗ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಇದನ್ನೂ ಓದಿ: ಆನೇಕಲ್| ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು – ಚಾಲಕ ಪಾರು
ಉಪ್ಪಿನ ಬೆಟಗೇರಿ ಗ್ರಾಮದ ಒಟ್ಟು 6 ಪಹಣಿಗಳಲ್ಲಿ ತಪ್ಪಾಗಿ ವಕ್ಫ್ ಬೋರ್ಡ್ ಹೆಸರು ಬಂದಿದೆ ಅನ್ನೋದು ಇತ್ತೀಚೆಗೆ ತಹಶೀಲ್ದಾರ್ ನಡೆಸಿದ ಸಭೆಯಲ್ಲಿ ಸಾಬೀತಾಗಿತ್ತು. ವಕ್ಫ್ ಬೋರ್ಡ್ ಅಧಿಕಾರಿಗಳಿಗೆ ಸೂಕ್ತ ದಾಖಲೆ ತರುವಂತೆ ತಹಶೀಲ್ದಾರ್ ಹೇಳಿದ್ದರು. ಆದರೆ ಸೂಕ್ತ ದಾಖಲೆ ಇಲ್ಲದೇ ಇರೋ ಹಿನ್ನೆಲೆಯಲ್ಲಿ, ಇದು 1965ರಲ್ಲಿ ಸರ್ವೆ ನಂ. ಬ್ಲಾಕ್ಗಳಾಗಿ ಪರಿವರ್ತನೆಯಾದಾಗ ಅದನ್ನು ನವೀಕರಣ ಮಾಡಿಕೊಳ್ಳದೇ ವಕ್ಫ್ ಬೋರ್ಡ್ ತಪ್ಪಾಗಿ ಪಹಣಿಯಲ್ಲಿ ನಮೂದು ಮಾಡಿದೆ ಅನ್ನೋದು ಸಾಬೀತಾಗಿತ್ತು. ಹೀಗಾಗಿ ರೈತರ ಪಹಣಿಯಲ್ಲಿದ್ದ ವಕ್ಫ್ ಭಾರ ಇಳಿಸಿದ್ದಾರೆ. ಇದನ್ನೂ ಓದಿ: ಬಿಡಿಎ ಭರ್ಜರಿ ಬೇಟೆ – ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಪರಿಶಿಲನೆ ವೇಳೆ ಸುಮಾರು 14.80 ಲಕ್ಷ ರೂ ಹಣವನ್ನು ಜಪ್ತಿ ಮಾಡಲಾಗಿದೆ. 100 ಗ್ರಾಂ ಚಿನ್ನ, 4 ಕೆಜಿ ಬೆಳ್ಳಿ ಆಭರಣ ಪತ್ತೆಯಾಗಿದೆ. ಶ್ರೀವಾಸ್ಗೆ 1 ರಾಣೇಬೇನೂರು, 2 ಗುಲ್ಬರ್ಗಾ, 1 ಸುರಪುರ, 1 ಧಾರವಾಡ ಸೇರಿದಂತೆ ಒಟ್ಟು 5 ಸೈಟ್ ಇರುವ ಮಾಹಿತಿ ಸಿಕ್ಕಿದೆ. 1 ಐಶಾರಾಮಿ ಕಾರ್, ಮೂರು ಅಂತಸ್ತಿನ ಮನೆ ಇರುವ ಮಾಹಿತಿ ಲಭಿಸಿದೆ. ಬೆಲೆಬಾಳುವ ಐಶಾರಾಮಿ ಪೀಠೋಪಕರಣಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಶೋಧ ಕಾರ್ಯ ಮುಂದುವರೆದಿದೆ. ಇದನ್ನೂ ಓದಿ: ಬ್ಯಾಗ್ ಇಟ್ಟು ಕೆಲಸಕ್ಕೆ ತೆರಳಿ – ಮೆಟ್ರೋ ನಿಲ್ದಾಣದಲ್ಲಿ ಬಂದಿದೆ ಡಿಜಿಟಲ್ ಲಗೇಜ್ ಲಾಕರ್
ಧಾರವಾಡ: ಜಿಲ್ಲೆಯ ನವಲಗುಂದ (Navalagunda) ತಾಲೂಕಿನ ತಲೆಮೊರಬ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅಡಿವೆಪ್ಪ ತಡಕೋಡ (57) ಮೃತ ದುರ್ದೈವಿ. ಕಾಳು ಶೇಖರಿಸಿಟ್ಟಿದ್ದ ಮನೆಯಲ್ಲಿ ಅಡಿವೆಪ್ಪ ಮಲಗಿಕೊಂಡಿದ್ದ ಈ ವೇಳೆ ದುಷ್ಕರ್ಮಿಗಳು ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳು ಯಾರು ಎಂಬ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಇದನ್ನೂ ಓದಿ: ಬೀದರ್ನಲ್ಲಿ ಚಿತ್ರಾನ್ನ ತಿಂದು ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ
ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಎಇಇ ಗೋವಿಂದ ಭಜಂತ್ರಿ ಮನೆ ಮೇಲೆ ಇಂದು (ಮಂಗಳವಾರ) ದಾಳಿ ನಡೆಸಿದ್ದರು. ಈ ವೇಳೆ ಅಧಿಕಾರಿ ಬಳಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಬೆಳಗ್ಗೆಯಿಂದ ನಡೆದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆಯಲ್ಲಿ 2.34 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಧಾರವಾಡ (Dharawada) ನಿವಾಸ ಸೇರಿ ಒಟ್ಟು 7 ಕಡೆ ಪರಿಶೀಲನೆ ನಡೆಸಿದ ಅಧಿಕಾರಿಗಳು 2.34 ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಗಗನಯಾತ್ರಿ ಸುನಿತಾ ವಿಲಿಯಮ್ಸ್ ಆರೋಗ್ಯ ಕ್ಷೀಣ
ಇದರಲ್ಲಿ 1.85 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 57 ಲಕ್ಷ ರೂ. ಮೌಲ್ಯದ ಸೈಟ್, 1.2 ಕೋಟಿ ರೂ. ಮೌಲ್ಯದ ಮನೆ, 7 ಎಕರೆ ಜಮೀನು ಇರುವ ಸ್ಥಿರಾಸ್ತಿ, 41.11 ಲಕ್ಷ ರೂ. ನಗದು ಸಹಿತ 94.22 ಲಕ್ಷ ರೂ. ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. 27.11 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, 20 ಲಕ್ಷ ರೂ. ಮೌಲ್ಯದ ಎರಡು ವಾಹನಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಇದನ್ನೂ ಓದಿ: Ballari | ಬಿಸಿ ಊಟ ಸೇವಿಸಿ 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಧಾರವಾಡ: ಲೋಕಾಯುಕ್ತ ಪೊಲೀಸರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ಎಇಇ (AEE) ಗೋವಿಂದಪ್ಪ ಭಜಂತ್ರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಧಾರವಾಡದ (Dharawada) ಗಾಂಧಿನಗರದಲ್ಲಿರುವ ಗೋವಿಂದಪ್ಪ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಗೋವಿಂದಪ್ಪ ಅವರಿಗೆ ಸೇರಿದ ಧಾರವಾಡ ಗಾಂಧಿನಗರದಲ್ಲಿರುವ ಮನೆ, ತೇಜಸ್ವಿನಗರದಲ್ಲಿರುವ ಅಳಿಯನ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್ಹೌಸ್, ನರಗುಂದದಲ್ಲಿರುವ ಅವರ ಸಹೋದರನ ಮನೆ ಮತ್ತು ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಅಮಾನತು
ಗಾಂಧಿನಗರದಲ್ಲಿರುವ (Gandhinagara) ಗೋವಿಂದಪ್ಪ ಅವರ ನಿವಾಸದ ಮುಂದೆ ಇದ್ದ ಅವರ ಕಾರುಗಳಲ್ಲಿ ಕೂಡ ಲೋಕಾಯುಕ್ತ ಪೊಲೀಸರು ಇಂಚಿಂಚು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅವರ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಿದ್ದಾರೆ. ಗೋವಿಂದಪ್ಪಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಲೋಕಾಯುಕ್ತರು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ವಿಧಾನಸಭೆಗೆ ನಾಳೆ ಮೊದಲ ಹಂತದ ಚುನಾವಣೆ – 15 ಜಿಲ್ಲೆಗಳ 42 ಸ್ಥಾನಗಳಿಗೆ ಮತದಾನ
-ಸ್ವಾತಂತ್ರ್ಯ ನಂತರ ದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಐತಿಹಾಸಿಕ ಕ್ರಮ: ಸಚಿವ ಪ್ರಹ್ಲಾದ್ ಜೋಶಿ ಬಣ್ಣನೆ
-ಹುಬ್ಬಳ್ಳಿಯಿಂದ ಭಾರತ್ ಬ್ರ್ಯಾಂಡ್ ಆಹಾರ ಧಾನ್ಯ ಹೊತ್ತು ಸಾಗಿದ 50ಕ್ಕೂ ಹೆಚ್ಚು ಮೊಬೈಲ್ ವಾಹನ
ಹುಬ್ಬಳ್ಳಿ: ಬೆಲೆ ಏರಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡ ‘ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆ’ಗೆ ಕೇಂದ್ರ ಆಹಾರ ಸಚಿವರ ತವರು ಕ್ಷೇತ್ರದಲ್ಲಿ ಇಂದು ಚಾಲನೆ ನೀಡಲಾಯಿತು. ಹುಬ್ಬಳ್ಳಿ (Hubballi) 3,000 ಮಠದ ಮೈದಾನದಲ್ಲಿ ಸೋಮವಾರ ಬೆಳಗ್ಗೆ ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಶುಲ್ಕ ವಸೂಲಿ – ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ
ಇದೇ ವೇಳೆ ಜನಸಾಮಾನ್ಯರಿಗೆ ಆಹಾರ ಧಾನ್ಯ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಯಾವತ್ತೂ ರೈತರ ಮತ್ತು ಕಡುಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು
ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣುಗುವುದನ್ನು ತಪ್ಪಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಎನ್ಡಿಎ ಸರ್ಕಾರ ದೇಶಾದ್ಯಂತ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಮುಂದಾಗಿದೆ. ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಭಾರತ್ ಬ್ರ್ಯಾಂಡ್ ಅಡಿ ಆಹಾರ ಧಾನ್ಯ ವಿತರಣೆ ಕೈಗೊಂಡಿದ್ದು, ಈಗ ವಾಣಿಜ್ಯ ನಗರಿ ಹುಬ್ಬಳ್ಳಿ – ಧಾರವಾಡ ಅವಳಿ ನಗರಗಳಲ್ಲಿ ವಿತರಣೆ ನಡೆದಿದೆ ಎಂದರು. ಇದನ್ನೂ ಓದಿ: ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ – 100ಕ್ಕೆ ಕರೆ ಮಾಡಿ ಬಚಾವ್ ಆದ ಚಾರಣಿಗರು
50ಕ್ಕೂ ಹೆಚ್ಚು ಸಂಚಾರಿ ವಾಹನಗಳಲ್ಲಿ ಪೂರೈಕೆ:
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಮತ್ತು ಧಾರವಾಡ (Dharawada) ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್ ಬ್ರ್ಯಾಂಡ್ (Bharat Brand) ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ
ಯಾವುದಕ್ಕೆ ಎಷ್ಟು ಬೆಲೆ:
ಭಾರತ್ ಅಕ್ಕಿ 34 ರೂ., ಭಾರತ್ ಗೋಧಿ ಹಿಟ್ಟು 30 ರೂ., ಭಾರತ್ ಕಡಲೆ ಬೇಳೆ 70 ರೂ. ಮತ್ತು ಭಾರತ್ ಹೆಸರು ಬೇಳೆಯನ್ನು 107 ರೂ. ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಮೊಬೈಲ್ ವಾಹನಗಳ ಮೂಲಕ ನೇರವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಧಾರವಾಡ: ಕಾಣೆಯಾಗಿದ್ದ ಬಾಲಕನೋರ್ವ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ (Dharawada) ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ನರೇಂದ್ರ (Naredra) ಗ್ರಾಮದ ಮೈಲಾರ ಹುಲಮನಿ (12) ಶವವಾಗಿ ಪತ್ತೆಯಾದ ಬಾಲಕ. ಮಂಗಳವಾರ ಮೈಲಾರ ಮನೆಯಿಂದ ಬಾಲಕ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ಸಹ ನಡೆಸಲಾಗಿತ್ತು. ಆದರೆ, ಇಂದು (ಗುರುವಾರ) ಬೆಳಗಿನಜಾವ ಬಾಲಕ ಮೈಲಾರ, ನರೇಂದ್ರ ಗ್ರಾಮದ ದ್ಯಾಮಡ್ಡಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇದನ್ನೂ ಓದಿ: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ: ಶಿವರಾಜ್ ತಂಗಡಗಿ ಘೋಷಣೆ
ಧಾರವಾಡ: ಜಮೀರ್ ಅಹ್ಮದ್ (Zameer Ahmed Khan ) ಎರಡನೇ ಟಿಪ್ಪು, ಔರಂಗಜೇಬ್ ಥರ ಮೆರೆಯುತ್ತಿದ್ದಾರೆ. ತಾಕತ್ ಇದ್ದರೆ ರೈತರ ಜಮೀನು ವಕ್ಫ್ ಬೋರ್ಡ್ಗೆ ರಿಜಿಸ್ಟರ್ ಮಾಡಲಿ ನೋಡೋಣ. ಇದು ಜಮೀರ್ಗೆ ನಮ್ಮ ಸವಾಲು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ.
ರೈತರ ಪಹಣಿಯಲ್ಲಿ ವಕ್ಫ್ ಹೆಸರು ವಿಚಾರವಾಗಿ ಧಾರವಾಡದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಮೋದ್ ಮುತಾಲಿಕ್ ಕೂಡಾ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ತಾಕತ್ ಇದ್ದರೆ ರೈತರ ಜಮೀನು ವಕ್ಫ್ ಬೋರ್ಡ್ಗೆ ರಿಜಿಸ್ಟರ್ ಮಾಡಲಿ ನೋಡೋಣ. ಇದು ಜಮೀರ್ಗೆ ನಮ್ಮ ಸವಾಲು. ಮುತವಲ್ಲಿಯಿಂದ ಪತ್ರ ಕೇಳಿದ್ದಾರೆ. ಆತ ಮುಸ್ಲಿಂ ಸಮಾಜ, ಮಸೀದಿಗೆ ಸಂಬಂಧಿಸಿದಾತ. ಈ ಎಲ್ಲದರ ಬಗ್ಗೆ ತನಿಖೆ ಆಗಿ ಕ್ರಮ ಆಗಬೇಕು. ರೈತರಿಗೆ ಮುಕ್ತ ಅವಕಾಶ ಸಿಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್
ಈ ವೇಳೆ ಅಧಿಕಾರಿಗಳ ಮೇಲೆ ಕಿಡಿಕಾರಿದ ಅವರು, ರಾಜ್ಯ ಸರ್ಕಾರಕ್ಕೆ ಕೂಡಾ ಎಚ್ಚರಿಕೆ ನೀಡಿದರು. ಇವತ್ತು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದ್ದೇವೆ. ರೈತ ಸಂಘ, ಭಾರತೀಯ ಕಿಸಾನ್ ಸಂಘ, ದಲಿತ ಸಂಘಟನೆಗಳು ಬೆಂಬಲ ಕೊಟ್ಟಿವೆ. ಹಿಂದೂ ಸಂಘಟನೆಗಳು, ಬಿಜೆಪಿಯ ಮಾಜಿ ಶಾಸಕರು ಭಾಗವಹಿಸಿದ್ದರು. ತಹಸೀಲ್ದಾರ್ ಮಾಡಿದ ತಪ್ಪು ತಿದ್ದುಪಡಿಗೆ ಆಗ್ರಹಿಸಿದ್ದೇವೆ. ರೈತರನ್ನು ನಾಲ್ಕು ವರ್ಷದಿಂದ ಓಡಾಡಿಸಿದ್ದಾರೆ. ತಹಸೀಲ್ದಾರ್ ಕಚೇರಿ-ವಕ್ಫ್ ಬೋರ್ಡ್ ಕಚೇರಿ ಮಧ್ಯೆ ಓಡಾಡಿಸಿದ್ದಾರೆ ಎಂದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ
ನೆಲದ ಮೇಲೆ ಕುಳಿತು ಪ್ರತಿಭಟಿಸುವವರೆಗೂ ಇವರು ಎಚ್ಚರಗೊಳ್ಳುವುದಿಲ್ಲವಾ? ಯಾರಿಗೆ ಅನ್ಯಾಯವಾಗಿದೆ ಇವರಿಗೆ ಗೊತ್ತಾಗುವುದಿಲ್ಲವಾ? ಎಸಿ, ಡಿಸಿ, ತಹಸೀಲ್ದಾರ್ ಇರೋದು ಏತಕ್ಕೆ ಎಂದ ಅವರು, ಧಾರವಾಡದ (Dharawada) ಎಸಿ ರೈತರ ಜೊತೆ ಉದ್ಧಟತನದಿಂದ ಮಾತನಾಡಿದ್ದಾರೆ. ರೈತರ ಬಗ್ಗೆ ಮಾತನಾಡುವಷ್ಟು ಧೈರ್ಯ ಬಂತಾ? ರೈತರನ್ನು ಓಡಾಡಿಸುವಷ್ಟು ಧೈರ್ಯ ಬಂತಾ? ಎಂದು ಕಿಡಿಕಾರಿದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ