Tag: Dharmasthala Burials Case

  • ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

    ಧರ್ಮಸ್ಥಳ ಫೈಲ್ಸ್‌ | ತನಿಖೆಗಿಳಿದ ಎಸ್‌ಐಟಿ – 8 ತಾಸು ದೂರುದಾರನ ವಿಚಾರಣೆ

    – ಶವ ಹೂತಿಟ್ಟ ಜಾಗ ತೋರಿಸಲು ಸಿದ್ಧವೆಂದ ದೂರುದಾರ

    ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ (Dharmasthala Burials Case) ತನಿಖೆ ಶುರುವಾಗಿದೆ. ಅನಾಮಧೇಯ ವ್ಯಕ್ತಿ ಕೊಟ್ಟ ಹೇಳಿಕೆ ಆಧರಿಸಿ ಇವತ್ತಿನಿಂದ ತನಿಖೆ ಆರಂಭಿಸಲಾಗಿದೆ. ಇಬ್ಬರು ವಕೀಲರೊಂದಿಗೆ ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಅನಾಮಧೇಯ ವ್ಯಕ್ತಿ ಸುಮಾರು 8 ತಾಸುಗಳ ಕಾಲ ವಿಚಾರಣೆ ಎದುರಿಸಿದ್ದಾನೆ.

    ಕೋರ್ಟ್ ಮುಂದೆ ಅನಾಮಿಕ ವ್ಯಕ್ತಿ ಕೊಟ್ಟ ಹೇಳಿಕೆ ಆಧರಿಸಿ ಪ್ರಣವ್ ಮೊಹಾಂತಿ ನೇತೃತ್ವದ ಎಸ್‌ಐಟಿ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಎಸ್‌ಐಟಿ ಕೇಳಿದ ಪ್ರಶ್ನೆಗಳಿಗೆ ಶವ ಹೂತಿಟ್ಟ ವ್ಯಕ್ತಿ ಉತ್ತರ ಕೊಟ್ಟಿದ್ದಾನೆ. ತನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಶವ ಹೂತಿಟ್ಟ ಜಾಗಗಳನ್ನು ತೋರಿಸಲು ಸಿದ್ಧನಿದ್ದೇನೆ ಅಂತ ವಿಚಾರಣೆ ವೇಳೆ ಅನಾಮಿಕ ವ್ಯಕ್ತಿ ಹೇಳಿಕೊಂಡಿದ್ದಾನೆ. ಇದೀಗ ದೂರುದಾರ ಇಬ್ಬರು ವಕೀಲರ ಜೊತೆ ಅಜ್ಞಾತ ಸ್ಥಳಕ್ಕೆ ಹೊರಟಿದ್ದಾನೆ.

    ದೂರುದಾರನಿಗೆ SIT ಪ್ರಶ್ನೆ ಏನು?
    * ಯಾವ್ಯಾವ ವರ್ಷದಲ್ಲಿ ಎಷ್ಟು ಶವ ಹೂತಿದ್ದೀರಾ..?
    * ಯಾವ ಪ್ರದೇಶದಲ್ಲಿ ಶವ ಹೂತು ಹಾಕಿದ್ದೀರಿ..?
    * ಶವ ಹೂತಿರುವ ಜಾಗವನ್ನು ತೋರಿಸುತ್ತೀರಾ..?
    * ನಿಮಗೆ ಯಾರಾದರೂ ಬೆದರಿಕೆ/ಒತ್ತಡ ಹಾಕಿದ್ರಾ..?
    * ನಿಮಗೆ ಶವಗಳನ್ನು ತೋರಿಸಿದ್ದು ಯಾರು..?
    * ಕಾರಿನಲ್ಲಿ ಶವಗಳನ್ನು ತಂದಿದ್ಯಾರು..?
    * ಶವಗಳನ್ನು ತಂದಾಗ ಯಾವ ಸ್ಥಿತಿಯಲ್ಲಿದ್ದವು..?
    * ಹೂತಿಟ್ಟ ಶವಗಳಲ್ಲಿ ಮಹಿಳೆಯ ಶವಗಳೆಷ್ಟು..?
    * ಅಂದೇ ಪೊಲೀಸರ ಗಮನಕ್ಕೆ ಯಾಕೆ ತರಲಿಲ್ಲ..?
    * ನೀವು ಧರ್ಮಸ್ಥಳ ಬಿಟ್ಟು ಹೋಗಿದ್ಯಾಕೆ..?
    * 20 ವರ್ಷಗಳ ಬಳಿಕ ನಿಮಗೆ ಸ್ಥಳ ನೆನಪಿದ್ಯಾ..?
    * ಇದೇ ಸ್ಥಳ ಅಂತ ಹೇಗೆ ಹೇಳಬಲ್ಲಿರಾ..?

    ಎಸ್‌ಐಟಿಗೆ ಅನಾಮಿಕನ ಉತ್ತರವೇನು?
    ಪಾಪಪ್ರಜ್ಞೆ ಕಾಡುತ್ತಿದೆ; ನಾನು ಹೇಳಿದ್ದೆಲ್ಲವೂ ಸತ್ಯ. ನಾನು ಶವ ಹೂತಿಟ್ಟ ಜಾಗ ತೋರಿಸುತ್ತೇನೆ. ನನಗೆ ಎಲ್ಲವೂ ನೆನಪಿದೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು, ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಅನಂತರ ನನಗೆ ಅನುಮಾನ ಬರಲು ಶುರುವಾಯ್ತು. ನನಗೆ ಯಾರ ಭಯವೂ, ಒತ್ತಡವೂ ಇಲ್ಲ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಎಂದು ಹೇಳಿದ್ದಾನೆ.

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ

    ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ ಇದೀಗ ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ.

    ಈ ಕುರಿತು ಕರ್ನಾಟಕ ರಾಜ್ಯ ಡಿಜಿಪಿ ಆದೇಶ ಹೊರಡಿಸಿದ್ದು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣದ ತನಿಖೆಗಾಗಿ ರಚಿಸಿದ್ದ ಎಸ್‌ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದಾರೆ. ಈ ತಂಡ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಿದೆ.ಇದನ್ನೂ ಓದಿ: ಸೈಬರ್‌ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್‌ – 700 ಮಂದಿ ಮನೆಗೆ

    ಹೆಚ್ಚುವರಿಯಾಗಿ ನೇಮಕಗೊಂಡಿರುವ ಅಧಿಕಾರಿಗಳಲ್ಲಿ, ಮಂಗಳೂರು ಡಿಸಿಆರ್‌ಇ ಎಸ್ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ, ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್‌ ಇ.ಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್‌ಪೆಕ್ಟರ್‌ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್‌ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್‌ಪೆಕ್ಟರ್‌ ವಿನೋದ್ ಎಸ್. ಕಾಳಪ್ಪನವರ್,
    ಮಂಗಳೂರು ಮೆಸ್ಕಾಂ ಸಬ್‌ಇನ್ಸ್‌ಪೆಕ್ಟರ್‌ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೇಬಲ್ ದೇವರಾಜ್ ಅವರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

    ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ.

    ಧರ್ಮಸ್ಥಳದ ಎಸ್‌ಐಟಿ ತನಿಖೆ ಹೇಗಿರಲಿದೆ?
    ಮೊದಲು ಎಫ್‌ಐಆರ್ ಮತ್ತು 164 ಅಡಿ ಹೇಳಿಕೆ ಪ್ರತಿ ಅತ್ಯಗತ್ಯ. ಬಳಿಕ ಜಡ್ಜ್ ಮುಂದೆ ಕೊಟ್ಟ ಹೇಳಿಕೆ ಮಾಹಿತಿ ಪಡೆಯಲಿದೆ ಎಸ್‌ಐಟಿ. ನಂತ್ರ ಹೇಳಿಕೆ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಸದ್ಯ ಸಿಕ್ಕಿರೋ ಅಸ್ಥಿಪಂಜರದ ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಇದಾದಮೇಲೆ ಬಾಕಿ ಉಳಿದಿರೋ ಅಸ್ಥಿಪಂಜರ ಹುಡುಕಾಟಕ್ಕೆ ಎಸ್‌ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.ಇದನ್ನೂ ಓದಿ: ಪೈಪ್ ಮೇಲಿಂದ ತುಂಗಭದ್ರಾ ಕಾಲುವೆ ದಾಟುವಾಗ ಬಾಲಕಿ ನೀರುಪಾಲು

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

    ಮಂಗಳೂರು: ಧರ್ಮಸ್ಥಳದಲ್ಲಿ (Dharmasthala) ಶವಗಳ ಹೂತಿಟ್ಟ ಪ್ರಕರಣ ಬಗ್ಗೆ ರಾಜ್ಯ ಸರ್ಕಾರ (State Govt) ಎಸ್‌ಐಟಿ (SIT) ರಚಿಸಿದ್ದು, ನಾಳೆಯಿಂದ (ಜು.23) ಎಸ್‌ಐಟಿ ತಂಡ ತನಿಖೆ ಆರಂಭಿಸಲಿದೆ.

    ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ವಿಶೇಷ ತನಿಖಾ ತಂಡ ನಾಳೆ ಧರ್ಮಸ್ಥಳಕ್ಕೆ ತೆರಳಲಿದೆ. ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅನಾಮಿಕ ವ್ಯಕ್ತಿ ನೀಡಿದ ದೂರಿನ ತನಿಖೆ ನಡೆಸಲಿದೆ. ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರೋ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ, ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್‌ ಜೊತೆ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ.ಇದನ್ನೂ ಓದಿ: ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ಧರ್ಮಸ್ಥಳದ ಎಸ್‌ಐಟಿ ತನಿಖೆ ಹೇಗಿರಲಿದೆ?
    ಮೊದಲು ಎಫ್‌ಐಆರ್ ಮತ್ತು 164 ಅಡಿ ಹೇಳಿಕೆ ಪ್ರತಿ ಅತ್ಯಗತ್ಯ. ಬಳಿಕ ಜಡ್ಜ್ ಮುಂದೆ ಕೊಟ್ಟ ಹೇಳಿಕೆ ಮಾಹಿತಿ ಪಡೆಯಲಿದೆ ಎಸ್‌ಐಟಿ. ನಂತ್ರ ಹೇಳಿಕೆ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಸದ್ಯ ಸಿಕ್ಕಿರೋ ಅಸ್ಥಿಪಂಜರದ ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಇದಾದಮೇಲೆ ಬಾಕಿ ಉಳಿದಿರೋ ಅಸ್ಥಿಪಂಜರ ಹುಡುಕಾಟಕ್ಕೆ ಎಸ್‌ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.

    ದೂರುದಾರನ ಹೇಳಿಕೆಯಲ್ಲೇನಿದೆ?
    1995ರಿಂದ 2014ರವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು.

    ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದರು. ನಾನು ಜೀವ ಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು.

    ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ ಎಂದು ದೂರುದಾರ ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ನ ಪ್ರಮುಖ ಆರೋಪಿ ಎಸ್ಕೇಪ್ – ಲುಕೌಟ್ ನೋಟಿಸ್‌ಗೆ ಸಿದ್ಧತೆ

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

    – ಅನಾಮಧೇಯನ ಹೇಳಿಕೆ ಮೇಲೆ ತನಿಖೆ

    ಬೆಂಗಳೂರು/ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ (Dharmasthala Burials Case) ಬಗ್ಗೆ ಅನಾಮಧೇಯ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಸ್‌ಐಟಿ ರಚಿಸಿದೆ. ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ತಂಡದಿಂದ ಈ ಪ್ರಕರಣದ ತನಿಖೆ ನಡೆಯಲಿದೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿರುವ ಪ್ರಣವ್ ಮೊಹಂತಿ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದಾರೆ. ಪ್ರಕರಣದ ತನಿಖೆ ಆರಂಭಕ್ಕೂ ಮುನ್ನ ಡಿಜಿಪಿ ಪ್ರಣವ್ ಮೊಹಾಂತಿ ಗೃಹಸಚಿವ ಪರಮೇಶ್ವರ್ ರನ್ನು (G Parameshwar) ಭೇಟಿ ಮಾಡಿದ್ರು. ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದ ಮೊಹಾಂತಿ.. ಕೇಸ್ ಸಂಬಂಧ ಚರ್ಚಿಸಿದ್ರು. ಅಲ್ಲದೇ ಇಬ್ಬರು ಐಪಿಎಸ್‌ಗಳಾದ ಅನುಚೇತ್, ಸೌಮ್ಯಲತಾ ತಂಡದಿಂದ ಹೊರಗುಳಿಯುತ್ತಾರೆ ಎನ್ನಲಾದ ವಿಚಾರದ ಬಗ್ಗೆಯೂ ಚರ್ಚಿಸಿದ್ರು.

    ಇಬ್ಬರು ಐಪಿಎಸ್‌ಗಳು ತನಿಖೆಯಿಂದ ಹೊರಗುಳಿಯುತ್ತಾರಾ..?
    ಎಸ್‌ಐಟಿ ತಂಡ ಮುಖ್ಯಸ್ಥ ಪ್ರಣವ್ ಮೊಹಾಂತಿ ಭೇಟಿ ಬಳಿಕ ಗೃಹಸಚಿವ ಪರಮೇಶ್ವರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ರು. ಪ್ರಕರಣದಲ್ಲಿ ಎಸ್‌ಐಟಿ ರಚನೆ ಸಂಬಂಧ ಚರ್ಚಿಸಿದರು. ಬಳಿಕ ಪ್ರತಿಕ್ರಿಯಿಸಿದ ಗೃಹಸಚಿವ ಪರಮೇಶ್ವರ್ ತನಿಖೆಗೆ ವಹಿಸುವಂತೆ ಒತ್ತಡ ಕೇಳಿ ಬಂದಿತ್ತು.. ಅಲ್ಲದೇ ಅನಾಮಧೇಯ ದೂರಿನ ಮೇರೆಗೆ ಎಸ್‌ಐಟಿ (SIT) ರಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣ ತನಿಖೆ ನಡೆಸಲಿದ್ದಾರೆ. ಪ್ರಣವ್ ಮೊಹಾಂತಿ ತಂಡ ಜವಾಬ್ದಾರಿಯುತವಾಗಿ ತನಿಖೆ ನಡೆಸಲಿದೆ. ತನಿಖಾ ತಂಡದಿಂದ ಯಾವ ಅಧಿಕಾರಿಯೂ ಹಿಂದೆ ಸರಿಯುವ ಬಗ್ಗೆ ತಿಳಿಸಿಯೂ ಇಲ್ಲ. ಮಾತಾಡಿಯೂ ಇಲ್ಲ. ನನಗಾಗಲಿ, ಸರ್ಕಾರಕ್ಕಾಗಲಿ ಯಾರು ನಾವು ತನಿಖೆ ಮಾಡಲ್ಲ ಅಂತ ಹೇಳಿಲ್ಲ ಎಂದು ಸ್ಪಷ್ಟನೆ ಕೊಟ್ಟರು.

    ಧರ್ಮಸ್ಥಳದ ಎಸ್‌ಐಟಿ ತನಿಖೆ ಹೇಗಿರಲಿದೆ..?
    ಮೊದಲು ಎಫ್‌ಐಆರ್ ಮತ್ತು 164 ಅಡಿ ಹೇಳಿಕೆ ಪ್ರತಿ ಅತ್ಯಗತ್ಯ. ಬಳಿಕ ಜಡ್ಜ್ ಮುಂದೆ ಕೊಟ್ಟ ಹೇಳಿಕೆ ಮಾಹಿತಿ ಪಡೆಯಲಿದೆ ಎಸ್‌ಐಟಿ. ನಂತ್ರ ಹೇಳಿಕೆ ನೀಡಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ಸದ್ಯ ಸಿಕ್ಕಿರೋ ಅಸ್ಥಿಪಂಜರದ ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆ ನಡೆಯಲಿದೆ. ಇದಾದಮೇಲೆ ಬಾಕಿ ಉಳಿದಿರೋ ಅಸ್ಥಿಪಂಜರ ಹುಡುಕಾಟಕ್ಕೆ ಎಸ್‌ಐಟಿ ಮುಂದಾಗಲಿದೆ. ತನಿಖೆ ಬಳಿಕ ಕೋರ್ಟ್‌ಗೆ ದೋಷಾರೋಪಪಟ್ಟಿ ಸಲ್ಲಿಕೆ ಮಾಡಲಿದೆ.

    ಮಹಿಳಾ ಆಯೋಗದ ಅಧ್ಯಕ್ಷೆ ಹೇಳೋದೇನು?
    ಧರ್ಮಸ್ಥಳದ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಬಗ್ಗೆ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದನ್ನು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸ್ವಾಗತಿಸಿದ್ದಾರೆ. ಅನಾಮಧೇಯ ವ್ಯಕ್ತಿ ಹೇಳಿದ ಸಾವುಗಳ ಬಗ್ಗೆ ತನಿಖೆ ಆಗಬೇಕು. ಸತ್ಯ.. ಅಸತ್ಯ ಗೊತ್ತಾಗಬೇಕು. ಸಮಗ್ರ ತನಿಖೆ ನಡೆಯಬೇಕು ಎಂದು ʻಪಬ್ಲಿಕ್ ಟಿವಿʼ ಜೊತೆ ಮಾತಾಡಿದ ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ.

    ನಿಷ್ಪಕ್ಷಪಾತ ತನಿಖೆ ಆಗಲಿ ಎಂದ ಬಿಜೆಪಿ
    ಧರ್ಮಸ್ಥಳ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿರುವುದಕ್ಕೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂ ಧಾರ್ಮಿಕ ಸಂಸ್ಥೆಗಳ ಮೇಲೆ ಗುಮಾನಿ, ಅನುಮಾನ ಸೃಷ್ಟಿಗೆ ಸರ್ಕಾರ ಮುಂದಾಗಿದೆ. ತನ್ನ ವೈಫಲ್ಯ, ಗೋಲ್ಮಲ್ ಡೈವರ್ಟ್ ಮಾಡಿಕೊಳ್ಳಲು ಎಸ್‌ಐಟಿ ರಚಿಸಿದೆ ಎಂದು ಟೀಕಿಸಿದ್ದಾರೆ. ಇನ್ನುಳಿದಂತೆ ಮಾಜಿ ಸಿಎಂ ಯಡಿಯೂರಪ್ಪ. ಸಂಸದ ಬಿ.ವೈ ರಾಘವೇಂದ್ರ, ವಿಪಕ್ಷ ನಾಯಕ ಅಶೋಕ್ ಸ್ವಾಗತಿಸಿದ್ದಾರೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದಿದ್ದಾರೆ.

    ಇನ್ನು ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಹಿರಿಯ ಅಧಿಕಾರಿಗಳಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಬಿಜೆಪಿಯವರು ಏನಾದ್ರೂ ಹೇಳಲಿ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ. ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿ, ಈ ಪ್ರಕರಣ ದೇಶದಲ್ಲಿ ಚರ್ಚೆ ಆಗ್ತಿದೆ. ಹೀಗಾಗಿ ಸರ್ಕಾರ ಎಸ್‌ಐಟಿ ರಚಿಸಿದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದಿದ್ದಾರೆ.

  • ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

    ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗುತ್ತೆ: ಜನಾರ್ದನ ರೆಡ್ಡಿ

    – ಸರ್ಕಾರದಿಂದ ಹಿಂದೂ ವಿರೋಧಿ ನಡೆ

    ಕೊಪ್ಪಳ: ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಭವಿಷ್ಯ ನುಡಿದಿದ್ದಾರೆ.

    ಗಂಗಾವತಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಧರ್ಮಸ್ಥಳದಲ್ಲಿ ಶವಗಳನ್ನು (Dharmasthala Burials Case) ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ (SIT) ರಚನೆ ಬಗ್ಗೆ ಪ್ರತಿಕ್ರಿಯಿಸಿದರು. ಇವತ್ತಿನ ಕಾಂಗ್ರೆಸ್ (Congress) ಸರ್ಕಾರ ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ. ಈ ವಿಷಯವನ್ನ ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂತ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

    ಒಂದು ಸಮುದಾಯವನ್ನ ಒಲೈಸುವ ಸಲುವಾಗಿ ವಿಶ್ವದೆಲ್ಲೆಡೆ ಹೆಸರುವಾಸಿಯಾದ ಮಂಜುನಾಥನ ಸನ್ನಿದಿಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆಕೊಳ್ಳುತ್ತಿದ್ದಾರೆ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಸಂಪೂರ್ಣವಾಗಿ ಹಿಂದೂ ವಿರೋಧಿ ನಡೆ. ಮಂಜುನಾಥನ ಶಾಪದಿಂದ ಈ ಸರ್ಕಾರ ಸರ್ವನಾಶವಾಗತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

  • Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

    Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

    ಬೆಂಗಳೂರು: ಬೇಡದ ಕಾರಣಕ್ಕೆ ಧರ್ಮಸ್ಥಳ (Dharmasthala) ಮತ್ತೆ ಸುದ್ದಿಯಲ್ಲಿದೆ. ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಇದನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ (IPS Officer) ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ.

    ಹೌದು. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ ಹಿಂದೆ ಸರಿಯೋಕೆ ಇಬ್ಬರು ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ಸಂಬಂಧ ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತ್ ಮತ್ತು ಸೌಮ್ಯಲತಾ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ. ವೈಯಕ್ತಿಕ ಕಾರಣಗಳನ್ನ ನೀಡಿ ಎಸ್‌ಐಟಿ ತಂಡದಿಂದ ತಮ್ಮನ್ನು ಕೈಬಿಡುವಂತೆ ಸೋಮವಾರ (ಜು.21) ಪತ್ರ ಬರೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಹೊರಬರುತ್ತಾ ನಿಗೂಢ ಸತ್ಯ?
    ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು..

    ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ ಎನ್ನಲಾದ ಸುದ್ದಿಯು ತೀವ್ರ ಸಂಚಲನಕ್ಕೆ ಕಾರಣವಾಯ್ತು. ಅಲ್ಲದೇ ಆತ ಬೆಳ್ತಂಗಡಿ ಪೊಲೀಸರಿಗೆ (Belthangady Police) ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಇದನ್ನು ಇಷ್ಟಕ್ಕೆ ಬಿಡದ ಅನಾಮಿಕ, ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ಭಯಾನಕ ಅಂಶಗಳನ್ನು ಉಲ್ಲೇಖಿಸಿದ್ದ.

    ಪಾಪಪ್ರಜ್ಞೆ ಕಾಡಿದ ದೂರುದಾರ ಹೇಳಿದ್ದೇನು?
    1995ರಿಂದ 2014ರ ವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದ್ದರು. ನಾನು ಜೀವಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ. ಈ ರೀತಿ ಪೊಲೀಸರಿಗೆ ಶವ ವಿಲೇವಾರಿ ಮಾಡಿದ್ದ ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಅಲ್ಲದೇ ಬೆಳ್ತಂಗಡಿ ನ್ಯಾಯಾಲಯದಲ್ಲೂ ಈ ಸಂಬಂಧ ಹೇಳಿಕೆ ದಾಖಲಿಸಿದ್ದ. ಮುಸುಕುಧಾರಿಯಾಗಿ ಬಂದು ನ್ಯಾಯಾಧೀಶರ ಮುಂದೆ ಪ್ರಕರಣದ ವಿವಿರ ನೀಡಿದ್ದ.

    ನ್ಯಾಯಾಧೀಶರ ಮುಂದೆ ಬಿಎನ್‌ಎಸ್ ಸೆಕ್ಷನ್‌ 164 ಅಡಿ ಹೇಳಿಕೆ ದಾಖಲು ಮಾಡಿದ ನಂತ್ರ ಪ್ರಕರಣ ಇನ್ನಷ್ಟು ಕಾವೇರ ತೊಡಗಿತು. ಎಲ್ಲೆಡೆ ಶವ ಹೂತಿಟ್ಟ ವಿಚಾರವೇ ತೀವ್ರ ಚರ್ಚೆಗೆ ಗ್ರಾಸವಾಯ್ತು. ಕೆಲ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರು ಕೂಡ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಕೆಲವರು ಮುಖ್ಯಮಂತ್ರಿಗಳನ್ನ ಖುದ್ದು ಭೇಟಿ ಮಾಡಿ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೂತಿಟ್ಟ ಹತ್ಯಾಕಾಂಡ ನಿಜವಾ..? `ಕಂಕಾಳ’ಗಳ ಕರಾಳ ಕಥೆಗಳಿಗೆ ನಿಜಕ್ಕೂ ಆಧಾರ ಉಂಟಾ..? ನೇತ್ರಾವತಿ ತೀರದ ಭಯಾನ`ಕತೆ’ಯ ವಾಸ್ತವತೆ ಏನು..? ಈ ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ.

  • ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

    ಧರ್ಮಸ್ಥಳ ಫೈಲ್ಸ್ – ಸಮಾಧಿಯೊಳಗಿನ `ಸತ್ಯ’ ಹೇಳುತ್ತಾ ಅಸ್ಥಿಪಂಜರ?

    ಬೆಂಗಳೂರು/ಮಂಗಳೂರು: ಬೇಡದ ಕಾರಣಕ್ಕೆ ಧರ್ಮಸ್ಥಳ (Dharmasthala) ಮತ್ತೆ ಸುದ್ದಿಯಲ್ಲಿದೆ. ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಇದನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ (IPS Officer) ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಐಪಿಎಸ್ ಅಧಿಕಾರಿಗಳಾದ ಎಂಎನ್ ಅನುಚೇತ್, ಸೌಮ್ಯಲತಾ ಹಾಗೂ ಜಿತೇಂದ್ರ ಕುಮಾರ್ ದಯಾಮ ತನಿಖಾ ತಂಡದಲ್ಲಿರುತ್ತಾರೆ. ಆದಷ್ಟು ಬೇಗ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

    ಹೊರಬರುತ್ತಾ ನಿಗೂಢ ಸತ್ಯ?
    ಕಳೆದ ಜೂನ್ 22ರಂದು ವಕೀರಾದ ಓಜಸ್ವಿ ಗೌಡ ಹಾಗೂ ಸಚಿನ್ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದರು. ವ್ಯಕ್ತಿಯೊಬ್ಬ ಶವ ಹೂತಿಟ್ಟ ಪ್ರಕರಣದ ಮಾಹಿತಿಯನ್ನ ಬಹಿರಂಗಗೊಳಿಸಿದ್ದರು..

    ಅನಾಮಿಕ ವ್ಯಕ್ತಿಯೊಬ್ಬ ಯಾರದ್ದೊ ಒತ್ತಡಕ್ಕೆ ಹೆದರಿ ನೂರಾರು ಶವ ವಿಲೇವಾರಿ ಮಾಡಿದ್ದಾನೆ ಎನ್ನಲಾದ ಸುದ್ದಿಯು ತೀವ್ರ ಸಂಚಲನಕ್ಕೆ ಕಾರಣವಾಯ್ತು. ಅಲ್ಲದೇ ಆತ ಬೆಳ್ತಂಗಡಿ ಪೊಲೀಸರಿಗೆ (Belthangady Police) ಹೂತಿಟ್ಟಿದ್ದ ತಲೆ ಬುರುಡೆ ತಂದುಕೊಟ್ಟಿದ್ದಾನೆಂಬ ಸುದ್ದಿಯೂ ಹೊರಬಿತ್ತು. ಇದಾದ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡರು. ಇದನ್ನು ಇಷ್ಟಕ್ಕೆ ಬಿಡದ ಅನಾಮಿಕ, ಜುಲೈ ಮೂರರಂದು ವಕೀಲರ ಸಹಾಯದೊಂದಿಗೆ ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡಿದ್ದ. ಅದರಲ್ಲಿ ಭಯಾನಕ ಅಂಶಗಳನ್ನು ಉಲ್ಲೇಖಿಸಿದ್ದ.

    ಪಾಪಪ್ರಜ್ಞೆ ಕಾಡಿದ ದೂರುದಾರ ಹೇಳಿದ್ದೇನು?
    1995ರಿಂದ 2014ರ ವರೆಗೆ ಧರ್ಮಸ್ಥಳದ ನೌಕರನಾಗಿದ್ದೆ. ನಾನು ಹಲವು ಶವಗಳನ್ನು ವಿಲೇವಾರಿ ಮಾಡಿದ್ದೇನೆ. ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು. ಇವೆಲ್ಲ ಅನಾಥ ಶವಗಳು ಅಂತ ನಾನು ಭಾವಿಸಿದ್ದೆ. ಆನಂತರ ನನಗೆ ಅನುಮಾನ ಬರಲು ಶುರುವಾಯ್ತು. ಕೆಲ ಮಹಿಳೆಯರ ಶವಗಳು ನಗ್ನ ಸ್ಥಿತಿಯಲ್ಲಿದ್ದವು. ಲೈಂಗಿಕ ಆಕ್ರಮಣ, ಹಿಂಸೆಯ ಕುರುಹುಗಳಿದ್ದವು. ನಾನು ಪೊಲೀಸರಿಗೆ ಹೇಳಲು ಮುಂದಾದಾಗ ನನ್ನ ಮೇಲೆ ಹಲ್ಲೆ ಮಾಡಿದರು. ಶವ ಹೂತಿಟ್ಟ ವಿಚಾರ ಬಯಲು ಮಾಡದಂತೆ ಬೆದರಿಸಿದರು. ನಿನ್ನನ್ನೂ ಹೂತು ಹಾಕುತ್ತೇನೆ ಅಂತ ಬೆದರಿಕೆ ಹಾಕಿದ್ದರು. ನಾನು ಜೀವಭಯದಿಂದ 11 ವರ್ಷಗಳ ಹಿಂದೆ ಧರ್ಮಸ್ಥಳ ತೊರೆದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ಕೊಲೆಪಾತಕರು, ಅತ್ಯಾಚಾರಿಗಳು ಯಾರೆಂದು ಗೊತ್ತಾಗಬೇಕು. ಹೂತು ಹಾಕಿರುವ ಸ್ಥಳವನ್ನು ತೋರಿಸಲು ನಾನು ಸಿದ್ಧ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ. ಈ ರೀತಿ ಪೊಲೀಸರಿಗೆ ಶವ ವಿಲೇವಾರಿ ಮಾಡಿದ್ದ ಅನಾಮಿಕ ವ್ಯಕ್ತಿ ದೂರು ನೀಡಿದ್ದ. ಅಲ್ಲದೇ ಬೆಳ್ತಂಗಡಿ ನ್ಯಾಯಾಲಯದಲ್ಲೂ ಈ ಸಂಬಂಧ ಹೇಳಿಕೆ ದಾಖಲಿಸಿದ್ದ. ಮುಸುಕುಧಾರಿಯಾಗಿ ಬಂದು ನ್ಯಾಯಾಧೀಶರ ಮುಂದೆ ಪ್ರಕರಣದ ವಿವಿರ ನೀಡಿದ್ದ.

    ನ್ಯಾಯಾಧೀಶರ ಮುಂದೆ ಬಿಎನ್‌ಎಸ್ ಸೆಕ್ಷನ್‌ 164 ಅಡಿ ಹೇಳಿಕೆ ದಾಖಲು ಮಾಡಿದ ನಂತ್ರ ಪ್ರಕರಣ ಇನ್ನಷ್ಟು ಕಾವೇರ ತೊಡಗಿತು. ಎಲ್ಲೆಡೆ ಶವ ಹೂತಿಟ್ಟ ವಿಚಾರವೇ ತೀವ್ರ ಚರ್ಚೆಗೆ ಗ್ರಾಸವಾಯ್ತು. ಕೆಲ ಹಿರಿಯ ವಕೀಲರು ಹಾಗೂ ನಿವೃತ್ತ ನ್ಯಾಯಾಧೀಶರು ಕೂಡ ಸಮಗ್ರ ತನಿಖೆಗೆ ಒತ್ತಾಯಿಸಿದ್ದರು. ಕೆಲವರು ಮುಖ್ಯಮಂತ್ರಿಗಳನ್ನ ಖುದ್ದು ಭೇಟಿ ಮಾಡಿ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೂತಿಟ್ಟ ಹತ್ಯಾಕಾಂಡ ನಿಜವಾ..? `ಕಂಕಾಳ’ಗಳ ಕರಾಳ ಕಥೆಗಳಿಗೆ ನಿಜಕ್ಕೂ ಆಧಾರ ಉಂಟಾ..? ನೇತ್ರಾವತಿ ತೀರದ ಭಯಾನ`ಕತೆ’ಯ ವಾಸ್ತವತೆ ಏನು..? ಈ ಎಲ್ಲದಕ್ಕೂ ಕೆಲವೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ.

  • ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

    ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

    – ಸೌಜನ್ಯ ಇರಲಿ, ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕೇ ಸಿಗುತ್ತೆ ಎಂದ ಸಚಿವ

    ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಇರುವ ಪುಣ್ಯ ಕ್ಷೇತ್ರ. ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಒಟ್ಟಿನಲ್ಲಿ ಸೌಜನ್ಯ ಪ್ರಕರಣವಿರಲಿ (Soujanya Case) ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಹೇಳಿದ್ದಾರೆ.

    ಧರ್ಮಸ್ಥಳದಲ್ಲಿ (Dharmasthala) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿದ್ದಾರೆ. ಅನುಮಾನಾಸ್ಪದ ಸಾವುಗಳ ಬಗ್ಗೆ ಎಸ್ಐಟಿ ತನಿಖೆ ಆಗಬೇಕು ಅಂತ ಒತ್ತಡ ಇತ್ತು. ದಕ್ಷಿಣ ಕನ್ನಡ ಪೊಲೀಸರು ತನಿಕೆಗೆ ಸಿದ್ಧವಿದ್ದರು ಅವರ ಮೇಲೆ ನಮಗೂ ನಂಬಿಕೆ ಇತ್ತು. ಇದೀಗ ಸಿಎಂ ಹಾಗೂ ಗೃಹ ಸಚಿವರು ಎಸ್ಐಟಿ ರಚಿಸಿ ಆದೇಶ ಮಾಡಿದ್ದಾರೆ ನಿಜಾಂಶ ಹೊರಗೆ ಬರಬೇಕು ನೂರಾರು ಹೆಣ ಅಂತ ಹೇಳ್ತಿದ್ದಾರೆ ಇದರ ಸತ್ಯಾಂಶ ಹೊರಗೆ ಬರಬೇಕು ಅಂತ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್‌ ಇಲ್ಲ: ಪರಮೇಶ್ವರ್‌

    ಅಲ್ಲದೇ ಸಾಕ್ಷಿದಾರ ಯಾರು? ಅವರ ಹಿನ್ನೆಲೆ ಏನು ಎಂಬುದರ ಹಿಂದೆ ಹೋಗಲು ಆಗುವುದಿಲ್ಲ. ಮೊದಲು ಹೆಣ ಹೂತು ಹಾಕಿದ್ದಾರೆ ಎನ್ನಲಾದ ಸ್ಥಳಕ್ಕೆ ಹೋಗಬೇಕು. ವಿಧಿವಿಜ್ಞಾನ ತನಿಖೆ ಆಗಬೇಕು ಇದೆಲ್ಲವನ್ನೂ ನೋಡಬೇಕು. ಯಾರೋ ಒಬ್ಬರ ಮೇಲೆ ಮಾಡಿದ್ದೀವಿ ಅಂತ ಹೇಳಲು ಆಗುವುದಿಲ್ಲ. ಕೇವಲ ಸೌಜನ್ಯ ಕೇಸ್ ಮಾತ್ರವಲ್ಲ, ಎಲ್ಲವನ್ನೂ ಕೂಲಂಕುಷವಾಗಿ ತನಿಖೆ ಮಾಡಬೇಕು. ಸಾಕ್ಷಿದಾರ ಠಾಣೆಗೆ ಬಂದು ಹೇಳಿಕೆ ಕೊಟ್ಟಾಗಲೇ ತನಿಖೆ ಮುಂದುವರಿಸಬಹುದಿತ್ತು. ಆದ್ರೆ ಎಸ್‌ಐಟಿ ಮಾಡಲೇಬೇಕು ಎನ್ನುವ ಒತ್ತಡವಿತ್ತು. ಅದರಂತೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

    ಇದರ ಹೊರತಾಗಿ ಧರ್ಮಸ್ಥಳ ಪುಣ್ಯಕ್ಷೇತ್ರ, ಯಾರೂ ಅದನ್ನ ಗುರಿಯಾಗಿಟ್ಟುಕೊಂಡು ತೇಜೋವಧೆ ಮಾಡಬಾರದು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಇರುವ ಕ್ಷೇತ್ರ, ಜೈನ ಸಮುದಾಯದವರೂ ಇರುವ ಕ್ಷೇತ್ರ ಹೀಗಾಗಿ ಕೆಲವರು ಉದ್ದೇಶಪೂರ್ವಕವಾಗಿ ತೇಜೋವಧೆ ಮಾಡುತ್ತಿರಬಹುದು. ಆದ್ರೆ ಜನರ ನಂಬಿಕೆಗಳಿಗೆ ಧಕ್ಕೆ ತರುವಂತ, ತೇಜೋವಧೆ ಮಾಡುವ ಕೆಲಸ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.

    ತನಿಖೆಯ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ, ತನಿಖೆಯಿಂದ ಯಾರೂ ಪ್ರಭಾವಿಗಳನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ. ಸೌಜನ್ಯ ಇರಲಿ ಬೇರೆ ಅತ್ಯಾಚಾರ, ಹತ್ಯೆ ಪ್ರಕರಣಗಳಿರಲಿ ನ್ಯಾಯ ಸಿಕ್ಕಿಯೇ ಸಿಗುತ್ತದೆ ಎಂದು ಅಭಯ ನೀಡಿದರು. ಇದನ್ನೂ ಓದಿ: ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್‌ ಇಲ್ಲ: ಪರಮೇಶ್ವರ್‌

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ | ಎಸ್‍ಐಟಿ ತನಿಖೆಗೆ ಸೌಜನ್ಯ ಕೇಸ್‌ ಇಲ್ಲ: ಪರಮೇಶ್ವರ್‌

    ಬೆಂಗಳೂರು: ಧರ್ಮಸ್ಥಳದಲ್ಲಿ (Dharmasthala Burials Case) ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣದ ತನಿಖೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ (G.Parameshwar) ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ, ಎಸ್‌ಐಟಿ ಅವರು ಕೆಲಸ ಪ್ರಾರಂಭ ಮಾಡ್ತಾರೆ. ಒತ್ತಡದ ಪ್ರಶ್ನೆ ಇಲ್ಲ. ಒತ್ತಡಕ್ಕೆ ಮಣಿದು ಮಾಡುವ ಕೆಲಸ ಅಲ್ಲ. ಅಲ್ಲಿನ ಸಾಧಕ ಬಾಧಕ ವಸ್ತು ಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತದೆ. ನಾವು ಪ್ರಾಥಮಿಕವಾಗಿ ತನಿಖೆ ಮಾಡಿ ಸ್ಟೇಷನ್ ಮಟ್ಟದಲ್ಲಿ ಅಂತ ಅವರಿಗೆ ಹೇಳಿದ್ದೆವು‌. ಜೊತೆಗೆ ಇನ್ನೂ ಹೆಚ್ಚಿನ ರೀತಿಯ ತನಿಖೆ ಆಗಬೇಕು ಎಂಬುದು ಹೆಚ್ಚಿನ ರೀತಿಯ ಅಭಿಪ್ರಾಯಗಳು ಸರ್ಕಾರ ಇದರಲ್ಲಿ ಮುಚ್ಚಿ ಇಡುವಂತದ್ದು ಏನೂ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

    ಸ್ವಲ್ಪ ಯೋಚನೆ ಮಾಡಿ ನಾವು ತೀರ್ಮಾನ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತದೆ ಅದನ್ನು ಕಾದು ನೋಡೋಣ. ಇದು ಸಣ್ಣ ವಿಚಾರ ಅಂತ ನಾವು ಪರಿಗಣಿಸಿಲ್ಲ ಸ್ಟೇಷನ್ ಮಟ್ಟದಲ್ಲಿ ಅವರು ಕಂಪ್ಲೆಂಟ್ ಕೊಟ್ಟಾಗ ಎಫ್‌ಐಆರ್ ಹಾಕಿ ಅವರು ತನಿಖೆ ಮಾಡ್ತಾರೆ. ಅದು ಹೆಚ್ಚು ಹೆಚ್ಚು ಬೆಳೆದಾಗ ತನಿಖೆ ತೀವ್ರತೆಯನ್ನು ಪಡೆಯುತ್ತೆ. ಹಾಗಾಗಿ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಎಸ್‌ಐಟಿ ರಚನೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಅನುಯಾಯಿಗಳಿಗೆ ಬೆತ್ತದಿಂದ ಹೊಡೆದು, ಮೂತ್ರ ಕುಡಿಸಿದ ಸ್ವಯಂಘೋಷಿತ ಬಾಬಾ

  • ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ- ಎಸ್‍ಐಟಿ ರಚಿಸಿದ ಸರ್ಕಾರ

    ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ (Dharmasthala Burials Case) ಟ್ವಿಸ್ಟ್ ಸಿಕ್ಕಿದ್ದು ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚನೆ ಮಾಡಿ ಆದೇಶಿಸಿದೆ.

    ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ.

    ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.