– ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡ್ತಿದ್ದಾರೆ – ವಿಠಲ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ?
ಬೆಂಗಳೂರು: ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು 4 ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವ್ಯಂಗ್ಯವಾಡಿದ್ದಾರೆ.
ಧರ್ಮಸ್ಥಳ ಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ,
ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ?
ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ?
ಸೌಜನ್ಯ ಸಂಬಂಧಿ ವಿಠಲ್ ಗೌಡರವರು ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ…
ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ? ಸೌಜನ್ಯ ಸಂಬಂಧಿ ವಿಠಲ ಗೌಡರವರು (Vittal Gowda) ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ಅಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಆ ಸ್ಥಳವು ಅಕ್ಷರಶಃ ಯುದ್ಧಕಣದಂತೆ ಭಾಸವಾಗುತ್ತದೆ ಎಂದು ವರದಿಗಳು ಹೇಳುತ್ತವೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು | ಕೋರ್ಟ್ ಆವರಣದಿಂದ ಧರ್ಮಸ್ಥಳ ಯಾತ್ರೆ ಹೊರಟ ವಕೀಲರು
ಸೌಜನ್ಯಳ ಮನೆಗೆ ಭೇಟಿ ನೀಡಿದ್ದ ಬಿಜೆಪಿಯವರು ಆ ಕುಟುಂಬದವರ ಹೇಳಿಕೆಯ ಬಗ್ಗೆ ಏನು ಹೇಳುತ್ತಾರೆ? ವಿಠಲ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ? ಬಿಜೆಪಿ ನಾಯಕರು ತಾವು ಸೌಜನ್ಯ ಕುಟುಂಬದವರ ಪರವೋ ಅಥವಾ ಅವರು ಆರೋಪಿಸುತ್ತಿರುವವರ ಪರವೋ ಎಂಬುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ (K Gopalaiah) ನೇತೃತ್ವದಲ್ಲಿ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಧರ್ಮಸ್ಥಳ ಚಲೋ (Dharmasthala Chalo) ಯಾತ್ರೆ ಪ್ರಾರಂಭವಾಗಿದೆ.
`ನಮ್ಮ ನಡಿಗೆ-ಧರ್ಮದೆಡೆಗೆ’ ಎಂಬ ಘೋಷ ವಾಕ್ಯದಡಿ ಧರ್ಮಸ್ಥಳ ಚಲೋ ಯಾತ್ರೆಯನ್ನು ಆಯೋಜಿಸಲಾಗಿದ್ದು, ಸೋಮವಾರ ಬೆಳಗ್ಗೆ ರಾಣಿ ಅಬ್ಬಕ್ಕ ಆಟದ ಮೈದಾನದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ನೂರಾರು ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಮೈಲಾರಿ ಹೋಟೆಲ್‌ನಲ್ಲಿ ಅಚ್ಚುಮೆಚ್ಚಿನ ದೋಸೆ ಸವಿದ ಸಿಎಂ
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ನಾವೆಲ್ಲ ಬಸ್‌ಗಳಲ್ಲಿ ಧರ್ಮಸ್ಥಳಕ್ಕೆ ಹೋಗಬೇಕೆಂದುಕೊಂಡಿದ್ದೆವು. ಆದರೆ ಬಸ್ ತಡೆಯುವ ಸಾಧ್ಯತೆ ಇರುವುದರಿಂದ ಕಾರುಗಳು ಮತ್ತು ಟೆಂಪೊ ಟ್ರಾವೆಲ್ಸ್ ಮೂಲಕ ಹೊರಟಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಜಮೀರ್‌ಗೆ 2.5 ಕೋಟಿ ಸಾಲ – ಲೋಕಾ ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ
ನಮ್ಮ ಧರ್ಮ ಉಳಿಯಬೇಕು, ಅದಕ್ಕಾಗಿ ಈ ಹೋರಾಟ ಪ್ರಾರಂಭವಾಗಿದೆ. ಕಳೆದ ಒಂದುವರೆ ತಿಂಗಳಿಂದ ಮಂಜುನಾಥೇಶ್ವರ ಮತ್ತು ಅಣ್ಣಪ್ಪ ಸ್ವಾಮಿಯ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇದರ ಹಿಂದೆ ಯಾರಿದ್ದಾರೆ ಮತ್ತು ಯಾರು ಷಡ್ಯಂತ್ರ ಮಾಡಿದ್ದಾರೆ ಎಂಬುದು ಜನತೆಗೆ ತಿಳಿಯಬೇಕು. ಹಾಗಾಗಿ ಇದನ್ನು ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಎಸ್‌ಐಟಿಗಿಂತ ಎನ್‌ಐಎ (NIA) ತನಿಖೆ ಆದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ತಿಳಿಯುತ್ತದೆ. ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದಿರುವಂತಹ ಪಿತೂರಿ. ಹಾಗಾಗಿ ಎನ್‌ಐಎ ತನಿಖೆ ಸೂಕ್ತ ಎಂದರು.
ಮಂಗಳೂರು: ಧರ್ಮಸ್ಥಳ ಕುರಿತು ಅಪಪ್ರಚಾರ ಖಂಡಿಸಿ ಸೋಮವಾರ ಬಿಜೆಪಿ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದೆ. ಈ ನಡುವೆಯೇ ವಿಪಕ್ಷ ನಾಯಕ ಆರ್ ಅಶೋಕ್ (R Ashok), ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು (Veerendra Heggade) ಭೇಟಿಯಾಗಿದ್ದಾರೆ.
ಧರ್ಮಸ್ಥಳದ ಬುರುಡೆ ರಹಸ್ಯದ ತನಿಖೆ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಈ ನಡುವೆ ಬಿಜೆಪಿ ಧರ್ಮಸ್ಥಳದಲ್ಲಿ ಲಕ್ಷ ಜನ ಸೇರಿಸಿ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. ಎಸ್‌ಐಟಿ ತನಿಖೆ ಷಡ್ಯಂತ್ರದಿಂದ ಕೂಡಿದೆ ಎಂದು ಆರೋಪಿಸುತ್ತಿರುವ ಬಿಜೆಪಿ, ಎನ್‌ಐಎ ತನಿಖೆಗೆ ಒತ್ತಾಯಿಸಲಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಿಂತು ಬಿಜೆಪಿ ಬಹಿರಂಗ ರಣಕಹಳೆ ಮೊಳಗಿಸಲಿದೆ. ಇದನ್ನೂ ಓದಿ: ಬೆಂಗಳೂರು | ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ
ಧರ್ಮಸ್ಥಳದ ಬುರುಡೆ ರಹಸ್ಯವನ್ನ ಎಸ್‌ಐಟಿ ಭೇದಿಸಲು ಶುರು ಮಾಡಿ ಒಂದೂವರೆ ತಿಂಗಳಾಗುತ್ತಿದೆ. ಆರಂಭದಲ್ಲಿ ಸೈಲೆಂಟ್ ಆಗಿದ್ದ ಬಿಜೆಪಿ, ಇದೆಲ್ಲ ಬುರುಡೆ ಕಥೆ ಎಂದು ಹತ್ತು ದಿನದಲ್ಲಿ ನಿರ್ಧರಿಸಿತು. ಬಿಜೆಪಿ ನಾಯಕ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿಧಾನಸೌಧದಲ್ಲಿ ಇದೊಂದು ಷಡ್ಯಂತ್ರ ಎಂಬ ಶಂಖನಾದವನ್ನು ಮೊಳಗಿಸಿದ್ದರು. ಅಲ್ಲಿಂದ ಇವತ್ತಿನ ತನಕ ಬಿಜೆಪಿ ಧರ್ಮಸ್ಥಳ ಪ್ರಕರಣವನ್ನು ರಾಜ್ಯ ಸರ್ಕಾರದ ವಿರುದ್ಧದ ಅಸ್ತ್ರವೆಂದು ಪರಿಗಣಿಸಿದೆ. ಇದನ್ನೂ ಓದಿ: ನಾಳೆ ಎನ್‌ಐಎ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಧರ್ಮಸ್ಥಳ ಚಲೋ, ಜಾಗೃತಿ ಸಮಾವೇಶ
ಧರ್ಮಸ್ಥಳ ದೇವಸ್ಥಾನದ ವಠಾರದಲ್ಲಿ ಸೋಮವಾರ ಬಿಜೆಪಿ ಬೃಹತ್ ಸಮಾವೇಶ ನಡೆಸುತ್ತದೆ. ಒಂದು ಲಕ್ಷಕ್ಕಿಂತ ಹೆಚ್ಚು ಜನ ಕ್ಷೇತ್ರಕ್ಕೆ ಭಕ್ತರು ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಧರ್ಮ ಜಾಗರಣೆಯ ನೇತೃತ್ವ ವಹಿಸಿದ್ದಾರೆ. ಸಮಾವೇಶ ಮೂಲಕ ಎನ್‌ಐಎ ತನಿಖೆಗೆ ಒತ್ತಾಯಿಸಲಾಗುತ್ತದೆ. ಇದನ್ನೂ ಓದಿ: ಡಿಕೆಶಿ ಒಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ: ಯತ್ನಾಳ್ ಹೊಸ ಬಾಂಬ್
ಷಡ್ಯಂತ್ರಕ್ಕೆ ಹಣದ ಹೊಳೆ ಹರಿದು ಬಂದ ಆರೋಪವಿದೆ. ಇ.ಡಿ ಈ ಬಗ್ಗೆ ಗಮನ ಹರಿಸಲು ಒತ್ತಾಯಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಈಗಾಗಲೇ ಭಕ್ತರು ಕ್ಷೇತ್ರಕ್ಕೆ ಬಂದಿದ್ದಾರೆ. ದೇವರ ದರ್ಶನ ನಡೆಸಿ ಅನ್ನಪ್ರಸಾದ ಸ್ವೀಕರಿಸಿ ಸಮಾವೇಶದಲ್ಲಿ ಜನ ಭಾಗಿಯಾಗಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿಯವರು ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ
– ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಕರ್ನಾಟಕದ ಪಾಲಿನ ಹಣ ಕೊಡಿಸಲಿ
ಬೆಂಗಳೂರು: ಬಿಜೆಪಿ ಧರ್ಮಸ್ಥಳ ಯಾತ್ರೆಗೆ (Dharamsthala Chalo) ಡಿಸಿಎಂ ಡಿಕೆಶಿ (DK Shivakumar) ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ (Delhi) ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು ಎಂದು ಛೇಡಿಸಿದರು. ಇದನ್ನೂ ಓದಿ: ಸೆ.2 ರಿಂದ ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ
ಸಗಣಿ ಮೇಲೆ ಕಲ್ಲು ಹಾಕಲ್ಲ:
ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಕರೆದುಕೊಳ್ಳುತ್ತಿಲ್ಲ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, ‘ಕಸ, ಸಗಣಿ ಮೇಲೆ ಕಲ್ಲನ್ನು ಹಾಕುವುದಕ್ಕೆ ನಾನು ಇಷ್ಟಪಡುವುದಿಲ್ಲ’ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ: ಅಶೋಕ್
ಬೆಂಗಳೂರು/ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರ ಮಾಡುವುದನ್ನು ಬಿಜೆಪಿ (BJP) ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಇಡೀ ರಾಜ್ಯ ಮತ್ತು ದೇಶಕ್ಕೆ ನಾಳೆ (ಸೆ.1) ನಡೆಯುವ ‘ಧರ್ಮಸ್ಥಳ ಚಲೋ’ (Dharmasthala Chalo) ಸಮಾವೇಶದಲ್ಲಿ ನೀಡಲಿದ್ದೇವೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ (Captain Brijesh Chowta) ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ಯಾವಾಗಲೂ ಸನಾತನ ಧರ್ಮದ ಸಂಸ್ಕೃತಿ ಮತ್ತು ಜೊತೆಗೆ ಹಿಂದೂ ಶ್ರದ್ಧಾ ಕೇಂದ್ರಗಳ ಜೊತೆಗೆ, ಹಿಂದೂ ಸಮಾಜದ ಜೊತೆಗೆ ಇದ್ದೇವೆ ಎಂದು ತೋರಿಸುವ ಪ್ರಯತ್ನದಲ್ಲಿ ನಾಳೆ ‘ಧರ್ಮಸ್ಥಳ ಚಲೋ’ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಬಿಜೆಪಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು ಹಾಗೂ ಲಕ್ಷಾಂತರ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ನಮ್ಮ ಇಡೀ ಕುಟುಂಬ ಧರ್ಮಸ್ಥಳದಲ್ಲಿ ಹುಟ್ಟಿ ಬಹಳ ಪುಣ್ಯ ಮಾಡಿದೆ: ಡಿ.ವೀರೇಂದ್ರ ಹೆಗ್ಗಡೆ
ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪುಣ್ಯಕ್ಷೇತ್ರದ ವಿರುದ್ಧ ಹಲವಾರು ಅಪಪ್ರಚಾರಗಳು, ಆರೋಪ ಮಾಡಲಾಗುತ್ತಿದೆ. ಸುಳ್ಳು ಆಪಾದನೆಗಳು, ಯಾವುದೇ ಸಾಕ್ಷ್ಯಾಧಾರವಿಲ್ಲದೆ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಯಲಿದೆ. ಕ್ಷೇತ್ರದ ಪಾವಿತ್ರ‍್ಯಕ್ಕೆ ಯಾವುದೇ ಧಕ್ಕೆಯಾಗಬಾರದು. ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ನಂಬಿಕೊಂಡಿರುವ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಆಗಬಾರದು. ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಅಪಪ್ರಚಾರ ಆಗಬಾರದು ಎಂಬ ಉದ್ದೇಶದಿಂದ ಸಮಾವೇಶವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಈದ್ ಮಿಲಾದ್ ಬಗ್ಗೆ ಮಾತ್ರ ಯಾಕೆ ಮಕ್ಕಳು ಅಧ್ಯಯನ ಮಾಡಬೇಕು – ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಬಿಜೆಪಿಯು ಕಾನೂನು, ಸಂವಿಧಾನ ಮತು ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ನಂಬಿಕೆ ಮತ್ತು ಶ್ರದ್ಧೆಯನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಒಂದು ಪಕ್ಷ. ಧರ್ಮಸ್ಥಳದ ಎಸ್‌ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸಿತ್ತು. ಆದರೆ ತನಿಖೆ ಯಾವ ರೀತಿ ಹೋಗುತ್ತಿದೆ ಎಂಬ ಸಂಶಯವಿದೆ. ಕಮ್ಯುನಿಸ್ಟರು, ಎಸ್‌ಡಿಪಿಐ, ಮತ್ತು ಪಿಎಫ್‌ಐ ಸಂಘಟನೆಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು. ಇದನ್ನೂ ಓದಿ: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ: ಸಿದ್ದರಾಮಯ್ಯ
ಷಡ್ಯಂತ್ರ ನಡೆಸಿದವರ ವಿರುದ್ಧ ಕ್ರಮಕ್ಕೆ ತಮ್ಮೇಶ್ ಗೌಡ ಆಗ್ರಹ:
ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರುವವರ ಮೇಲೆ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ಅವರು ಆಗ್ರಹಿಸಿದರು. ಎಸ್‌ಐಟಿ ತನಿಖೆಯ ದಿಕ್ಕು ಸರಿಯಿಲ್ಲ ಎಂದು ಆಕ್ಷೇಪಿಸಿದರು. ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳ ರಾಜ್ಯದಲ್ಲಿ, ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ, ಚರ್ಚೆಯಾಗುತ್ತದೆ. ತಮಿಳುನಾಡಿನ ಸಂಸದರು ಕೂಡ ಈ ಪ್ರಕರಣದಲ್ಲಿ ಭಾಗವಹಿಸಿದ್ದಾರೆ ಎಂದು ಮಾಧ್ಯಮಗಳು ತಿಳಿಸುತ್ತಿದೆ. ಎಲ್ಲಾ ಆಯಾಮಗಳ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಎನ್‌ಐಗೆ ವಹಿಸಲು ಆಗ್ರಹಿಸಿದರು. ಇದನ್ನೂ ಓದಿ: ಪೊಲೀಸ್ ಅಧಿಕಾರಿಗಳನ್ನೂ ಬಿಡದ ಸೈಬರ್ ವಂಚಕರು – ಕೆಜಿಎಫ್ ಎಸ್ಪಿ ಫೇಸ್‌ಬುಕ್, ಇನ್‌ಸ್ಟಾ ಖಾತೆ ನಕಲು
ರಾಜ್ಯ ಸರ್ಕಾರ ಅನಾಮಿಕ ವ್ಯಕ್ತಿಯ ಪೂರ್ವಪರ ವಿಚಾರಣೆ ನಡೆಸಲಿಲ್ಲ. ಅನಾಮಿಕ ವ್ಯಕ್ತಿ ತಂದು ಕೊಟ್ಟ ಬುರುಡೆಯನ್ನು ತನಿಖೆಗೂ ಮುನ್ನ ಪರಿಶೀಲಿಸಿಲ್ಲ. ನೂರಾರು ಶವ ಹೂತುಹಾಕಿ ಅಪರಾಧ ಮಾಡಿರುವ ವ್ಯಕ್ತಿಯನ್ನು ರಾಜ ಮರ್ಯಾದೆ ನೀಡಿ ನಡೆಸುತ್ತಿರುವ ಎಸ್‌ಐಟಿ ತನಿಖೆಯ ಕುರಿತು ಹಲವಾರು ಸಂಶಯಗಳು ಕಾಣುತ್ತಿವೆ ಎಂದು ಆರೋಪಿಸಿದರು. ಇದನ್ನೂ ಓದಿ: 22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ
ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ದೇಶಾದ್ಯಾಂತ ಮತ್ತು ರಾಜ್ಯಾದ್ಯಾಂತ ಇದ್ದಾರೆ. ಹಿಂದೂ ಧಾರ್ಮಿಕ ಕ್ಷೇತ್ರದ ಮೇಲೆ ಯಾರೋ ವ್ಯಕ್ತಿಗಳು ಆರೋಪ ಮಾಡಿದಾಗ ಅದನ್ನು ಪರಿಶೀಲಿಸಬೇಕಾಗಿರುವ ಜವಾಬ್ದಾರಿಯನ್ನು ಈ ಸರ್ಕಾರ ಮಾಡಿದೆಯೇ ಎಂದು ಪ್ರಶ್ನಿಸಿದರು. ಧರ್ಮಸ್ಥಳ ಪ್ರಕರಣವು ಎಡಪಂಥೀಯರ, ನಗರ ನಕ್ಸಲರ, ಅಂತರಾಷ್ಟ್ರೀಯ ಮಟ್ಟದ ಏಜೆಂಟ್‌ಗಳ ಮತ್ತು ಸರ್ಕಾರ ಪ್ರಭಾವಿ ವ್ಯಕ್ತಿಗಳ ಪ್ರಭಾವದಿಂದ ಆಗಿದೆಯೋ ಎನ್ನುವುದು ಎನ್‌ಐಎ ತನಿಖೆಯಲ್ಲಿ ತಿಳಿಯಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಚಿನ್ನಯ್ಯ ಈಗ ಡಬಲ್ ಗೇಮ್ ಆಡುತ್ತಿದ್ದಾನೆ: ಜಯಂತ್
ರಾಜ್ಯ ಸರ್ಕಾರ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿಚಾರವಾಗಿ ಯಾರಾದರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದರೆ ಅವರ ಮೇಲೆ ಸಂಜೆಯೊಳಗೆ ಎಫ್‌ಐಆರ್ ದಾಖಲಿಸಿ ಬಂಧಿಸುತ್ತಾರೆ. ಒಬ್ಬ ಅನ್ಯ ಧರ್ಮೀಯ ವ್ಯಕ್ತಿ ಹಿಂದೂ ಧರ್ಮದ ದೇವಸ್ಥಾನದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದಾನೆ. ಅವನಿಗೆ ನೋಟಿಸ್ ನೀಡುವ ನೆಪದಲ್ಲಿ ಅವನ ಮೇಲೆ ಎಫ್‌ಐಆರ್ ಹಾಕಲಾಗಿದೆ. ಹಾಗಿದ್ದಲ್ಲಿ ಸರ್ಕಾರದ ಜವಾಬ್ದಾರಿ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನೆಲಮಂಗಲ ಹಾಸನ ಟೋಲ್‌ನಲ್ಲಿ ವಾಹನ ಸವಾರರಿಗೆ ಬರೆ – ಸೆ.1 ರಿಂದ ದರ ಏರಿಕೆ
ಹಿಂದೂ ಧರ್ಮೀಯ ಇನ್ನೊಂದು ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಾಗ ಧಾರ್ಮಿಕ ಗಲಭೆ, ಧಾರ್ಮಿಕ ಪ್ರಚೋದನೆ ಉಂಟಾಗುತ್ತದೆ ಎಂದು ಕೇಸ್ ಹಾಕುತ್ತಾರೆ. ಹಾಗಿದ್ದರೆ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿರುವ ಸಮೀರ್ ವ್ಯಕ್ತಿಯ ಮೇಲೆ ಯಾವ ಕಾರಣಕ್ಕೆ ಕ್ರಮ ಕೈಗೊಂಡಿಲ್ಲ ಎಂದು ಕೇಳಿದರು. ಇದನ್ನೂ ಓದಿ: ಮಹಾರಾಷ್ಟ್ರ | ಮತ್ತೊಬ್ಬಳನ್ನು ಮದುವೆಯಾಗುವ ಆಸೆಗೆ ಪ್ರೇಯಸಿಯನ್ನೇ ಕೊಂದ ಪ್ರಿಯಕರ
ಈ ವೇಳೆ ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಬಿಜೆಪಿ ರಾಜ್ಯ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡಂಜಿ, ಬಿಜೆಪಿ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಜೆಡಿಎಸ್ ಸತ್ಯ ಯಾತ್ರೆ
ಬೆಂಗಳೂರು: ಧರ್ಮಸ್ಥಳ (Dharmasthala) ಕ್ಷೇತ್ರದ ವಿರುದ್ಧ ಷಡ್ಯಂತ್ರ ಆರೋಪಿಸಿ ಬಿಜೆಪಿ (BJP) ಧರ್ಮಸ್ಥಳ ಚಲೋ (Dharmasthala Chalo) ಮುಂದುವರಿಸಿದೆ. ಇಂದು ಜಯನಗರ, ಬಸವನಗುಡಿ, ಬಿಟಿಎಂ, ವಿಜಯನಗರ ಸೇರಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಳ್ಳಲಾಗಿದೆ.
ಮೊದಲು ಜಯನಗರ ಕ್ಷೇತ್ರದ ಶಾಸಕ ರಾಮಮೂರ್ತಿ ನೇತೃತ್ವದಲ್ಲಿ ಜಯನಗರ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಅಲ್ಲಿಂದ ನೇರವಾಗಿ ನೈಸ್ ರಸ್ತೆಯ ಪಿಇಎಸ್ ಕಾಲೇಜು ಬಳಿ ಉಳಿದ ಕ್ಷೇತ್ರದ ಜನ ಸೇರ್ಪಡೆಗೊಳ್ಳಲಿದ್ದಾರೆ. ಬಳಿಕ ಅಲ್ಲಿಂದ ಒಟ್ಟಾಗಿ ಬಿಜೆಪಿ ಶಾಸಕರು, ಸಂಸದರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಸುಮಾರು 400 ಕಾರುಗಳಲ್ಲಿ ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದು, ಧರ್ಮಸ್ಥಳದಿಂದ ಒಂದು ಕಿಲೋಮೀಟರ್ ದೂರದಿಂದ ಪಾದಯಾತ್ರೆಯೊಂದಿಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಇದನ್ನೂ ಓದಿ: Uttar Pradesh | ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ – 8 ಯಾತ್ರಿಕರು ದುರ್ಮರಣ, 43 ಮಂದಿಗೆ ಗಾಯ
ನೈಸ್ ರೋಡ್ ಟೋಲ್‌ನಿಂದ ಬಿಜೆಪಿ ಧರ್ಮಸ್ಥಳ ಯಾತ್ರೆ ಆರಂಭಗೊಳ್ಳಲಿದೆ. ಐದು ವಿಧಾನಸಭಾ ಕ್ಷೇತ್ರದಿಂದ ಯಾತ್ರೆ ಕೈಗೊಂಡಿದ್ದು, ನೂರಾರು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಲು ತಯಾರಿ ನಡೆದಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಮಣ್ಯರಿಂದ ಯಾತ್ರೆಗೆ ಚಾಲನೆ ಸಿಗಲಿದೆ. ಧರ್ಮಸ್ಥಳ ಯಾತ್ರೆ ಹಿನ್ನೆಲೆ ನೂರಾರು ಕಾರುಗಳು, ವಾಹನಗಳು ಟೋಲ್‌ಗೆ ಆಗಮಿಸಿವೆ. ಇದನ್ನೂ ಓದಿ: Shivamogga | ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಲೇಡಿ ಅರೆಸ್ಟ್
ಈ ಕುರಿತು ಶಾಸಕ ಸಿ.ಕೆ. ರಾಮಮೂರ್ತಿ ಮಾತನಾಡಿ, ನಾವೆಲ್ಲರೂ ಧರ್ಮಸ್ಥಳಕ್ಕೆ ತೆರಳುತ್ತಿದ್ದೇವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಕೇರಳ, ದುಬೈಗಳಲ್ಲಿ ಕೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದನ್ನ ಸಹಿಸೋಕೆ ಆಗಲ್ಲ. ಈಗ ಸಿಕ್ಕಿಬಿದ್ದಿರುವವರು ಕೇವಲ ನಟರು. ಇದರ ಹಿಂದಿನ ಪ್ರೊಡ್ಯೂಸರ್‌ಗಳು ಹೊರಬರಬೇಕಿದೆ. ಅಯ್ಯಪ್ಪ, ತಿರುಪತಿ ಆಯ್ತು ಈಗ ಧರ್ಮಸ್ಥಳದ ಸರದಿ, ಇದು ಒಪ್ಪುವಂತಹದ್ದಲ್ಲ. ಹಾಗಾಗಿ ಸಾವಿರಾರು ಸಂಖ್ಯೆಯಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಮುಂದೆ ಧರ್ಮಸ್ಥಳದಲ್ಲೇ ದೊಡ್ಡ ಧರ್ಮ ಸಮಾವೇಶ ಮಾಡುತ್ತೇವೆ. ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾಗಿ ವಾಪಸ್ ಬರುತ್ತೇವೆ. ಈ ಷಡ್ಯಂತ್ರ ವಿರುದ್ಧ ಎನ್‌ಐಎ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿಯ (BJP) ಮತ್ತೊಂದು ತಂಡ ಇಂದು (ಆ.21) ಧರ್ಮಸ್ಥಳ ಚಲೋ (Dharmasthala Chalo) ರ‍್ಯಾಲಿ ಹಮ್ಮಿಕೊಂಡಿದೆ. ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಘಟಕ ಕೊಡಿಗೆಹಳ್ಳಿ ಗೇಟ್‌ನ ಗುಂಡಾಂಜನೇಯ ದೇವಸ್ಥಾನದಿಂದ ಈ ರ‍್ಯಾಲಿ ಹೊರಟಿದೆ. ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಹರೀಶ್ ನೇತೃತ್ವದಲ್ಲಿ ಈ ರ‍್ಯಾಲಿ ನಡೆಯುತ್ತಿದೆ.
ಸುಮಾರು 500ಕ್ಕೂ ಹೆಚ್ಚು ವಾಹನಗಳಿಂದ ಯಾತ್ರೆ ಆರಂಭ ಮಾಡಲಾಗಿದೆ. ಗುಂಡಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಕೆ ಮಾಡಿ ಯಾತ್ರೆ ಆರಂಭ ಮಾಡಲಾಯಿತು. ಈ ಬಗ್ಗೆ ಬಿಜೆಪಿ ಮುಖಂಡ ತಮ್ಮೇಶ್ ಗೌಡ ಮಾತನಾಡಿ, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಸಹಿಸೋದಿಲ್ಲ. ನಾವು ಧರ್ಮಯಾತ್ರೆ ಮಾಡ್ತಿದ್ದೇವೆ. ಧರ್ಮಸ್ಥಳಕ್ಕೆ ಹೋಗಿ ಅಲ್ಲಿ ಒಂದು ಸಭೆ ಮಾಡ್ತೇವೆ. ಅನಂತರ ಮಂಜುನಾಥನ ದರ್ಶನ ಪಡೆಯುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಅನನ್ಯಾ ಭಟ್ ಕೇಸ್ ಎಸ್‌ಐಟಿಗೆ ಹಸ್ತಾಂತರ
ಎಸ್ಐಟಿ ತನಿಖೆ ಮಾಡಲಿ ಅದಕ್ಕೇನು ಸಮಸ್ಯೆಯಿಲ್ಲ. ಅದರೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಸಹಿಸೋದಿಲ್ಲ. ನಮ್ಮ ಧರ್ಮದ ಮೇಲೆ ಎಷ್ಟೋ ಅಪಪ್ರಚಾರಗಳು ಮೊದಲಿನಿಂದಲೂ ಅಗಿದೆ. ಅದ್ರೆ ನಮ್ಮ ಧರ್ಮ ಅದಕ್ಕೆಲ್ಲ ಜಗ್ಗಿಲ್ಲ. ಈಗಾಗಲೇ ಅಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಗೊತ್ತು. ಇದರ ಹಿಂದೆ ನಡೆಯುತ್ತಿರುವ ಷಡ್ಯಂತ್ರದ ಬಗ್ಗೆ ಗೊತ್ತಾಗಬೇಕು. ನಾವು ಧರ್ಮಸ್ಥಳದ ಜೊತೆಗೆ ಇದ್ದೇವೆ ಎಂದರು.
ಮಂಗಳೂರು: ಧರ್ಮಸ್ಥಳದ (Dharmasthala) ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ನೇತೃತ್ವದಲ್ಲಿ ಧರ್ಮಸ್ಥಳ ಚಲೋ (Dharmasthala Chalo) ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು. ಇದನ್ನೂಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ
ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
– ನಾಳೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗ ಧರ್ಮಸ್ಥಳ ಭೇಟಿ
ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್‌ಐಟಿ (Dharmasthala SIT) ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ (Bengaluru) ಹೋರಾಟಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ.
ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ (S.R Vishwanath) ನೇತೃತ್ವದಲ್ಲಿ ಇಂದು (ಆ.16) ಧರ್ಮಸ್ಥಳಕ್ಕೆ (Dharmasthala) 500 ಕಾರುಗಳಲ್ಲಿ ಬಿಜೆಪಿ (BJP) ಕಾರ್ಯಕರ್ತರು ಹೊರಡಲಿದ್ದಾರೆ. ಈಗಾಗಲೇ ಕಾರುಗಳು ಜಮಾವಣೆಗೊಂಡಿದ್ದು, ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‌ಗೇಟ್‌ನಿಂದ ಯಾತ್ರೆ ಹೊರಡಲಿವೆ. ಇದನ್ನೂ ಓದಿ: ವರ್ಷಕ್ಕೆ 5 ಸಾವಿರ ಉಳಿತಾಯ – ವಾರ್ಷಿಕ ಟೋಲ್ ಪಾಸ್ | ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ಯಲಹಂಕದಿಂದ (Yelahanka) ಕಾರ್ಯಕರ್ತರು ಹೊರಡಲಿದ್ದಾರೆ. ನೂರಾರು ಜನ ಭಗವಾಧ್ವಜ ಹಿಡಿದು ಕೇಸರಿ ಶಾಲು ಧರಿಸಿ, ಧರ್ಮಸ್ಥಳಕ್ಕೆ ಹೊರಡಲಿದ್ದಾರೆ. ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ ಸುಮಾರು 3 ಗಂಟೆಗೆ ವಿಶ್ವನಾಥ್ ತಂಡ ಧರ್ಮಸ್ಥಳ ತಲುಪಲಿದೆ. ದೇವರ ದರ್ಶನ ಪಡೆದು ಧರ್ಮಸ್ಥಳದಲ್ಲೇ ಇಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಹೆಸರು ಕೆಡಿಸಲು ಕಮ್ಯುನಿಸ್ಟರು, ಬುದ್ಧಿಜೀವಿಗಳು, ಕಾಂಗ್ರೆಸ್‌ನ ಕೆಲ ಹಿಂದೂ ವಿರೋಧಿಗಳಿಂದ ಷಡ್ಯಂತ್ರ: ಯತ್ನಾಳ್
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ಭಾನುವಾರ (ಆ.17) ಧರ್ಮಸ್ಥಳಕ್ಕೆ ಭೇಟಿ ಮಾಡಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ನಿಯೋಗದಲ್ಲಿರಲಿದ್ದಾರೆ. ಬಿಜೆಪಿ ನಾಯಕರು ಧರ್ಮಾಧಿಕಾರಿಗಳನ್ನೂ ಭೇಟಿ ಮಾಡಿ ನೈತಿಕ ಬೆಂಬಲ ಸೂಚಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ – ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಜಪಿಸಲು VHP ಕರೆ
ಬೆಂಗಳೂರು: ಧರ್ಮಸ್ಥಳ ಅಸ್ಥಿ ವಿವಾದ (Dharmasthala Mass Burial Case) ಜೋರಾಗುತ್ತಿರುವಾಗಲೇ ಬಿಜೆಪಿಗರು ಧರ್ಮಸ್ಥಳ ಚಲೋಗೆ (Dharmasthala Chalo) ಮುಂದಾಗಿದ್ದಾರೆ.
ಇದೇ ಭಾನುವಾರ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಶಾಸಕರು ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾಜ್ಯಕ್ಕೆ ಕಮ್ಯುನಿಷ್ಟರ ಮಧ್ಯ ಪ್ರವೇಶ ಆಗಿದೆ. ಎಸ್‌ಐಟಿ ತನಿಖೆ ಹಾದಿ ತಪ್ಪುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಯೂಟ್ಯೂಬ್, ವೆಬ್‌ಸೈಟ್‌ಗಳಲ್ಲಿ ಧರ್ಮಸ್ಥಳ ದೇಗುಲಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದುಗಳ ಶ್ರದ್ಧಾಕೇಂದ್ರದ ಬಗ್ಗೆ ಕ್ರಮ ಕೈಗೊಳ್ಳಿ. ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಬೇಕು. ಈ ಹುನ್ನಾರದ ಹಿಂದೆ ಎಸ್‌ಡಿಪಿಐ, ಪಿಎಫ್‌ಐ ಕೂಡ ಇದೆ ಎಂದು ಪ್ರಧಾನಿ ಮೋದಿಗೆ ಬೆಂಗಳೂರಿನ ನಿವಾಸಿ ವಸಂತ ಬಗೇರ ಪತ್ರ ಬರೆದಿದ್ದಾರೆ.ಇದನ್ನೂಓದಿ: ಧರ್ಮಸ್ಥಳ ನಿಗೂಢ ಶವ ಕೇಸಲ್ಲಿ ಮಾನವ ಹಕ್ಕುಗಳ ಆಯೋಗ ಎಂಟ್ರಿ
ಮಂತ್ರಾಲಯ ಶ್ರೀ ಮಾತಾಡಿ, ಸನಾತನ ಧರ್ಮದ ಮೇಲೆ ಪರದೇಶವರು ದೌರ್ಜನ್ಯ ಎಸಗುತ್ತಿದ್ದಾರೆ. ಅಂತಹ ದುಷ್ಟ ಶಕ್ತಿಗಳನ್ನು ದಮನಗೊಳಿಸಬೇಕು. ರಾಯರ ಬೃಂದಾವನದಲ್ಲಿ ಮೂಳೆಗಳಿವೆ, ಬುರುಡೆಗಳಿವೆ ಎಂದು ಬುರುಡೆ ಬಿಡುತ್ತಿದ್ದಾರೆ ಎಂದಿದ್ದಾರೆ. ಶಿರಸಿಯ ಸೋಂದಾ ಜನಮಠದ ಜಗದ್ಗುರು ಭಟ್ಟಾರಕ ಪಟ್ಟಾಚಾರ್ಯ ಶ್ರೀಗಗಳು ಧ್ವನಿ ಎತ್ತಿದ್ದಾರೆ.
ಈ ಮಧ್ಯೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆಗುತ್ತಿದೆ ಎಂದು ಹಾಸನ, ಚಿತ್ರದುರ್ಗ, ಬೀದರ್‌ನಲ್ಲಿ ಹಿಂದೂಪರ ಸಂಘಟನೆಗಳು, ಭಕ್ತರು ಪ್ರತಿಭಟನೆ ನಡೆಸಿದ್ದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.