ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Mass Burials) ಎಸ್‌ಐಟಿ (SIT) ತನಿಖೆ ನಡೆಯುತ್ತಿದೆ. ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ (UT Khader) ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿತ್ತು. ಶೂನ್ಯವೇಳೆಯಲ್ಲಿ ಅವಕಾಶ ಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ. ಮತ್ತಷ್ಟು ಚರ್ಚೆಗೆ ಅವಕಾಶ ಬೇಕು ಅಂತ ಕೇಳಿದ್ದಾರೆ. ನಾನು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದರು. ಇದನ್ನೂ ಓದಿ: Delhi | ಈಜು ತರಗತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್
ಧರ್ಮಸ್ಥಳ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮಾಡುತ್ತಿದೆ. ಎಸ್‌ಐಟಿ ತನಿಖೆ ಮಾಡೋದಕ್ಕೆ ಬಿಡಬೇಕು. ತನಿಖೆ ಮುಗಿಯೋ ಮುನ್ನವೇ ನಾವೇ ತೀರ್ಪು ಕೊಡೋದು ಸರಿಯಲ್ಲ. ಧಾರ್ಮಿಕ ಸ್ಥಳದ ಪಾವಿತ್ರತೆಯನ್ನ ಕಾಪಾಡೋದು ನಮ್ಮ ಕರ್ತವ್ಯ. ಈ ವಿಚಾರದಲ್ಲಿ ಯಾರೂ ಸ್ವಯಂ ಅಭಿಪ್ರಾಯ ಕೊಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ
ಎಸ್‌ಐಟಿ ತನಿಖೆ ಆಗೋವರೆಗೂ ಎಲ್ಲರೂ ಸಮಾಧಾನವಾಗಿ ಇರಬೇಕು. ನಾವು ಸಮಾನತೆ, ಸೋದರ ಭಾವನೆಯಲ್ಲಿ ಇರೋರು. ಹೀಗಾಗಿ ತನಿಖೆ ಆಗೋ ಮುನ್ನ ಯಾರೂ ಮಾತಾಡೋದು ಬೇಡ. ಸದನದಲ್ಲಿ ಧರ್ಮಸ್ಥಳದ ವಿಚಾರವಾಗಿ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
– 1995 ರಿಂದ 2014ರ ವರೆಗಿನ ಪ್ರಕರಣಗಳ ತನಿಖೆಗೆ ಮುಂದಾದ ಎಸ್‌ಐಟಿ
– 19 ವರ್ಷಗಳ ಹಿಂದಿನ ವೈದ್ಯರ ಲಿಸ್ಟ್ ತಯಾರು
ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ಒಂದು ಕಡೆ ಹೂತಿಟ್ಟ ಶವಗಳ ಶೋಧ ನಡೆಯುತ್ತಿದೆ. ಇನ್ನೊಂದು ಕಡೆ, ಎಸ್‌ಐಟಿ ವಿಚಾರಣೆ ಮಾಡುತ್ತಿದೆ. ಇದರ ಮಧ್ಯೆ, ತನಿಖೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 38 ವರ್ಷಗಳ ಹಿಂದೆ ಅಸಹಜ ಸಾವನ್ನಪ್ಪಿದ್ದ ಪದ್ಮಲತಾ ಕುಟುಂಬ ಎಸ್‌ಐಟಿಐನ್ನ (SIT) ಭೇಟಿಯಾಗಿದ್ದು, ಮರು ತನಿಖೆಗೆ ಮನವಿ ಮಾಡಿದೆ.
ಧರ್ಮಸ್ಥಳದ ಬೋಳಿಯಾರ್ ನಿವಾಸಿ ಪದ್ಮಲತಾ (Padmalatha), ಕಾಲೇಜಿಗೆ ಹೋಗುವಾಗ ನಿಗೂಢವಾಗಿ ಸಾವನ್ನಪ್ಪಿದ್ದು, 57 ದಿನಗಳ ಬಳಿಕ ಶವ ಪತ್ತೆಯಾಗಿತ್ತು. ಈ ಹಿಂದೆ ಸಿಐಡಿ ಕೂಡ ಇದರ ತನಿಖೆ ನಡೆಸಿತ್ತು. ಈಗ ಎಸ್‌ಐಟಿ ತನಿಖೆ ನಡೆಸಬೇಕೆಂದು ಪದ್ಮಲತಾ ಸಹೋದರಿ ಇಂದ್ರಾವತಿ ದೂರು ಸಲ್ಲಿಸಿದ್ದಾರೆ. ಆದ್ರೆ ಸಿಪಿಎಂ (I) ಮುಖಂಡ ಬಿ.ಎಂ ಭಟ್, ಇದೊಂದು ಮರ್ಯಾದೆ ಹತ್ಯೆ ಅಲ್ಲ, ಅಸಹಜ ಸಾವು ಅಂತ ಹೇಳಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?
ಇದು ಕಮ್ಯೂನಿಷ್ಟರ ಟಾರ್ಗೆಟ್ ಎಂದು ಆರೋಪಿಸಲಾಗುತ್ತಿದೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿಯ ಗೌರವ ಉಳಿಯಬೇಕು. ವೇದವಲ್ಲಿ, ಪದ್ಮಲತಾ -ಆನೆಮಾವುತ ಪ್ರಕರಣದ ಹೋರಾಟ ನಡೆಸುತ್ತಿದ್ದೇವೆ. ಶಾಸಕ ಹರೀಶ್ ಪೂಂಜಾ ಅವರ ನಡೆ ನನಗೆ ಅರ್ಥ ಆಗುತ್ತಿಲ್ಲ. ಪದ್ಮಲತಾ ಅವರದ್ದು ಮರ್ಯಾದ ಹತ್ಯೆ ಅಲ್ಲಂ, ವಸಂತ ಕುಲಾಲ್ ಎಂಬವರನ್ನು ಅರೆಸ್ಟ್ ಮಾಡಿದ್ದರು, ಆ ಬಳಿಕ ಪದ್ಮಲತಾ ತಂದೆ ದೇವಾನಂದ್ ಅವರ ಮೇಲೆ ಆರೋಪ ಮಾಡಲಾಯಿತು. ಎಲ್ಲವೂ ಕೂಡ ಕೃತಕ ಕಥೆ ಸೃಷ್ಟಿ ಮಾಡಲಾಗಿದೆ. ವೇದವಲ್ಲಿ ಪ್ರಕರಣದಲ್ಲಿ ಗಂಡ, ಸೌಜನ್ಯ ಪ್ರಕರಣದಲ್ಲಿ ಸಂತೋಷ್ ಅವರನ್ನ ಆರೋಪಿಗಳನ್ನಾಗಿ ಮಾಡಲಾಗಿದೆ. ಈಗ ಎಸ್‌ಐಟಿಯಲ್ಲಿ ಪ್ರಾಮಾಣಿಕ ಹಿರಿಯ ದಕ್ಷ ಅಧಿಕಾರಿಗಳಿದ್ದಾರೆ. ನಮಗೆ ಯಾವುದೇ ಅಜೆಂಡಾ ಇಲ್ಲ ನ್ಯಾಯ ಸಿಗಬೇಕು ಅಷ್ಟೇ ಅಂತ ಒತ್ತಾಯಿಸಿದ್ದಾರೆ.
19 ವರ್ಷಗಳ ಹಿಂದಿನ ವೈದ್ಯರ ಲಿಸ್ಟ್ ತಯಾರು
ಇನ್ನೂ, 1995 ರಿಂದ 2014ರ ವರೆಗಿನ ಕೇಸ್‌ಗಳ ತನಿಖೆಯನ್ನೂ ಎಸ್‌ಐಟಿ ಆರಂಭಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ, ಕೊಲೆ, ಅನಾಥ ಶವ ಪತ್ತೆ ಪ್ರಕರಣಗಳ ತನಿಖೆ ಆರಂಭಿಸಲಾಗಿದ್ದು, ಎಲ್ಲಾ ಕೇಸ್‌ಗಳ ಮರಣೋತ್ತರ ಪರೀಕ್ಷೆ ವರದಿಗಳ ಆಳವಾದ ತನಿಖೆಗೆ ಎಸ್‌ಐಟಿ ಮುಂದಾಗಿದೆ. 19 ವರ್ಷಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರ ಲಿಸ್ಟ್ ಸಿದ್ಧವಾಗಿದೆ. ವೈದ್ಯರು ಹಾಗೂ ಡಿ ಗ್ರೂಪ್ ನೌಕರರ ದಾಖಲೆಯನ್ನು ಎಸ್‌ಐಟಿ ಪರಿಶೀಲಿಸುತ್ತಿದೆ. ಖಾಸಗಿ ಹಾಗೂ ಸರ್ಕಾರಿ ಫೊರೆನ್ಸಿಕ್ ವೈದ್ಯರ ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ. ವೈದ್ಯರು ಹಾಗೂ ಡಿ ಗ್ರೂಪ್ ನೌಕರರರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದೆ. ಪೋಸ್ಟ್ ಮಾರ್ಟಂ ವರದಿಗಳಲ್ಲಿ ಅನುಮಾನ ಅಥವಾ ಗೊಂದಲ ಇದ್ದರೆ ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ
ಧರ್ಮಸ್ಥಳ ಕೇಸ್ – ಕಾಂಗ್ರೆಸ್ ಎಡಪಂಥೀಯರ ಜೊತೆ ಸೇರಿ ಅಪಮಾನ ಮಾಡಿದೆ
ದಾವಣಗೆರೆ: ರಾಹುಲ್ ಗಾಂಧಿಯವರ (Rahul Gandhi) ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (M.P Renukacharya) ವ್ಯಂಗ್ಯವಾಡಿದ್ದಾರೆ.
ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪದ ವಿಚಾಕ್ಕೆ ಪ್ರತಿಕ್ರಿಯಿಸಿ, ಅವರು ಒಬ್ಬ ಅಪ್ರಬುದ್ಧ ವ್ಯಕ್ತಿ. ಯಾವ ಪುರುಷಾರ್ಥಕ್ಕೆ ನೀವು ಬೆಂಗಳೂರಿಗೆ ಬಂದ್ರಿ? ನೀವು ಪಲಾಯನ ವಾದಿ, ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್
ರಾಜ್ಯದಲ್ಲಿ 138 ಸೀಟು ಗೆದ್ದಾಗ ಮತಕಳ್ಳತನ ಆಗಲಿಲ್ವಾ? ನೀವು ಚುನಾವಣಾ ಆಯೋಗಕ್ಕೆ (ECI) ಮಾತ್ರವಲ್ಲ ದೇಶದ ಜನತೆಗೆ ಅಪಮಾನ ಮಾಡಿದ್ದೀರಿ. ನೀವು ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಧರ್ಮಸ್ಥಳ ಕೇಸ್ ವಿಚಾರವಾಗಿ, ಕಾಂಗ್ರೆಸ್ ಎಡಪಂಥೀಯರ ಜೊತೆ ಸೇರಿ ಧರ್ಮಸ್ಥಳಕ್ಕೆ ಅಪಮಾನ ಮಾಡಿದೆ. ಯಾರೋ ಒಬ್ಬ ಅನಾಮಿಕ ವ್ಯಕ್ತಿಯ ಮಾತು ಕೇಳಿ ಎಸ್‍ಐಟಿ (SIT) ತನಿಖೆಗೆ ಒಪ್ಪಿಸಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ
ಮಂಗಳೂರು: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ (Dharmasthala Mass Burials) 11 ದಿನದಿಂದ ದೂರುದಾರ ನಿತ್ಯ ಒಂದೊಂದು ಜಾಗ ತೋರಿಸುತ್ತಾ ಇದಲ್ಲ ಅದು, ಅದಲ್ಲ ಮತ್ತೊಂದು ಎಂದು ಅಧಿಕಾರಿಗಳಿಗೆ ದಾರಿ ತಪ್ಪಿಸುತ್ತಿದ್ದಾನೋ ಗೊತ್ತಿಲ್ಲ. ಎಸ್‌ಐಟಿ (SIT) ಅವರು ದೂರುದಾರ ಹೇಳಿದ ಎಲ್ಲಾ ಸ್ಥಳಗಳನ್ನ ಅಗೆದರೂ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಆದರೂ ದೂರುದಾರ ತೋರಿಸುವ ಎಲ್ಲಾ ಸ್ಥಳಗಳನ್ನು ಪರೀಶೀಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಭಾನುವಾರ ಕಾರ್ಯಾಚರಣೆ ಸ್ಥಗಿತ ಮಾಡಲಿರುವ ಎಸ್‌ಐಟಿ ಸೋಮವಾರ ಕಾರ್ಯಾಚರಣೆ ಮುಂದುವರಿಸಲಿದೆ.
11 ದಿನದಲ್ಲಿ 16ಕ್ಕೂ ಹೆಚ್ಚು ಜಾಗ ತೋರಿಸಿದ ಸ್ಥಳಗಳಲ್ಲಿ ಕಳೇಬರ ಬಿಟ್ಟು ಸಿಕ್ಕಿದ್ದು ಕಲ್ಲು-ಮಣ್ಣು-ಬಂಡೆ ಬಿಟ್ರೆ ಬೇರೇನೂ ಅಲ್ಲ. ಶನಿವಾರ ಸಹ ಮಳೆ ಮಧ್ಯೆ ಕಾಡಿಗೆ ಊಟ ತರಿಸಿಕೊಂಡು 7 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಲಾಯಿತು. ಪಾಯಿಂಟ್ 16 ಹಾಗೂ 16(ಎ) ಎಂದು 2 ಜಾಗ ಸೇರಿ 20 ಅಡಿ ಅಗಲ 10 ಅಡಿ ಆಳ ತೋಡಿದರೂ ಕೂಡ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಇದರ ಮಧ್ಯೆ ಅನಾಮಿಕ ಜಾಗ ಬದಲಿಸುತ್ತಿರುವುದು ಕೂಡ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ. ಇದನ್ನೂ ಓದಿ: ಇಂದು ತಾತ್ಕಾಲಿಕವಾಗಿ ಬಂದ್ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು
ಇನ್ನು ಆ ಅನಾಮಿಕ ಶನಿವಾರ ತೋರಿಸಿದ ಜಾಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಧರ್ಮಸ್ಥಳದ ಧಾರ್ಮಿಕ ಕ್ಷೇತ್ರದ ದ್ವಾರಬಾಗಿಲಿನ ಪಕ್ಕದ ಬಾಹುಬಲಿ ಬೆಟ್ಟದ ರಸ್ತೆ ಪಕ್ಕದಲ್ಲೇ ಹೆಣ ಹೂತಿರೋದಾಗಿ ಲೊಕೇಶನ್ ಮಾರ್ಕ್ ಮಾಡಿದ್ದಾನೆ. ಹಾವು-ಬಳುಕಿನ ಮೈಕಟ್ಟು ರಸ್ತೆಯಲ್ಲಿ ದಶಕಗಳ ಹಿಂದೆ ಹೂತ ಹೆಣದ ಜಾಗವನ್ನ ಅದೇ ಮರ ನಿಲ್ಸಿ ಅಂತ ತಟ್ಟನೇ ಗಾಡಿ ನಿಲ್ಲಿಸಿದ್ದಾನೆ. ಮೊದಲ 10 ದಿನದ 15 ಜಾಗವೂ ಕಾಡಿನ ಪ್ರದೇಶ. ಆದರೆ ಮೊದಲ ಬಾರಿಗೆ ನಿತ್ಯ ಹಗಲಿರುಳು ನೂರಾರು ಗಾಡಿ ಓಡಾಡುವ ರೋಡ್ ಪಕ್ಕವೇ ಜಾಗ ತೋರಿಸಿದ್ದ. ಆದರೆ ಅಲ್ಲೂ ಏನು ಸಿಗಲಿಲ್ಲ. ಇದನ್ನೂ ಓದಿ: ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ
ಒಟ್ಟಾರೆ, 11 ದಿನದಲ್ಲಿ 16 ಜಾಗ ಅಗೆದಿರೋ ಅಧಿಕಾರಿಗಳಿಗೆ ಅನಾಮಿಕ ಹೇಳಿದ ರೀತಿ ಒಂದು ತಲೆಗೂದಲೂ ಸಿಕ್ಕಿಲ್ಲ. ಹೀಗಾಗಿ, ಈತನ ನಡೆ ಮೇಲೆ ಅನುಮಾನ ಮೂಡಿದಂತಿದೆ. ಭಾನುವಾರವಾದ ಕಾರಣ ಎಸ್‌ಐಟಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ. ಸೋಮವಾರವಾದರೂ ಏನಾದರೂ ಸಿಗುತ್ತಾ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ʻಇದು ಯುದ್ಧದ ಯುಗವಲ್ಲʼ – ಮೋದಿ ಸಂದೇಶ ಉಲ್ಲೇಖಿಸಿ ಅಮೆರಿಕ-ರಷ್ಯಾ ಮಾತುಕತೆಗೆ ಭಾರತ ಬೆಂಬಲ
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣದಲ್ಲಿ (Dharmasthala Mass Burials Case) ಎಸ್‌ಐಟಿಯಿಂದ ಶೋಧ ಕಾರ್ಯ ಮುಂದುವರಿಸಿದೆ. ಅನಾಮಿಕ ದೂರುದಾರ ನೀಡಿದ್ದ ಮಾಹಿತಿ ಆಧರಿಸಿ ಹೊಸ ಸ್ಥಳದಲ್ಲಿ ಈಗ ಉತ್ಖನನ ನಡೆಸಲಾಗುತ್ತಿದೆ. ಬಾಹುಬಲಿ ಬೆಟ್ಟದ (Bahubali Hill) ಒಣಮರದ ಕೆಳಗೆ ಶವ ಹೂತಿರೋದಾಗಿ ಅನಾಮಿಕ ಹೇಳಿದ್ದರಿಂದ, ಸುಮಾರು 10 ಅಡಿ ಆಳದವರೆಗೆ ಭೂಮಿ ಅಗೆದು ಎಸ್‌ಐಟಿ ಶೋಧ ನಡೆಸಿದೆ.
20 ಅಡಿ ಅಗಲ, 20 ಅಡಿ ಉದ್ದ ಅಗೆದರೂ ಏನೂ ಪತ್ತೆಯಾಗಿಲ್ಲ. ಇನ್ನು, 16ನೇ ಪಾಯಿಂಟ್‌ಗೆ 15 ಅಡಿ ದೂರದಲ್ಲಿರೋ ಮತ್ತೊಂದು ಸ್ಥಳದಲ್ಲೂ ಶೋಧ ನಡೆದ್ರೂ ಏನೂ ಸಿಕ್ಕಿಲ್ಲ. ಈ ಮಧ್ಯೆ, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು ಅನಾಮಿಕ ಹೆಣ ಹೂತಿದ್ದನ್ನು ನೋಡಿದ್ದಾಗಿ ಮತ್ತೆ ಇಬ್ಬರು ಎಸ್‌ಐಟಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಸಮಾಧಿ ಶೋಧ ಮ್ಯಾರಥಾನ್ – ಐದು ಅಡಿ ಅಗೆದರೂ ಸಿಕ್ಕಿದ್ದು ಬರೀ ಮಣ್ಣು
ದೂರು ಸ್ವೀಕರಿಸಿ ಸ್ಥಳೀಯ ಧರ್ಮಸ್ಥಳ ಠಾಣೆಗೆ ಅಧಿಕೃತ ದೂರು ನೀಡಲು ಎಸ್‌ಐಟಿ ಸೂಚನೆ ನೀಡಿದೆ. ಹೀಗಾಗಿ ಆ ಇಬ್ಬರೂ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಇದುವರೆಗೆ 16 ಸ್ಥಳಗಳಲ್ಲಿ ಉತ್ಖನನ ನಡೆಸಲಾಗಿದ್ದು, 6ನೇ ಪಾಯಿಂಟ್‌ನಲ್ಲಷ್ಟೇ ಅಸ್ಥಿ ಕುರುಹು ಸಿಕ್ಕಿದೆ. ತಾಂತ್ರಿಕ ಸಮಸ್ಯೆಯಿಂದ 13ನೇ ಪಾಯಿಂಟ್ ಶೋಧ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Dharmasthala Case | ಅಸ್ಥಿ ರಹಸ್ಯ ಭೇದಿಸಲು ಹೊರಟ ಎಸ್‌ಐಟಿ – 13ರ ಬದಲು 15ನೇ ಪಾಯಿಂಟ್‌ನಲ್ಲಿ ಶೋಧ
ಎಸ್‌ಐಟಿ ಮುಂದಿನ ಆಯ್ಕೆಗಳೇನು?
* ಅನಾಮಿಕ ಹೇಳಿದಂತೆ ಇನ್ನಷ್ಟು ದಿನ ಶವ ಹುಡುಕೋದು
* ಈವರೆಗಿನ ತನಿಖೆಯ ಬಗ್ಗೆ ವರದಿಯನ್ನು ಡಿಜಿಪಿಗೆ ಮಾಹಿತಿ ನೀಡೋದು
* ಇನ್ನು ಮುಂದೆ ಶವ ಹುಡುಕಾಟ ಕಷ್ಟ ಅಂತ ಡಿಜಿಪಿಗೆ ಮಾಹಿತಿ ತಿಳಿಸೋದು
* ಅಸ್ಥಿ ಪಂಜರ ಹುಡುಕಾಟ ಸಂಪೂರ್ಣ ಸ್ಥಗಿತಗೊಳಿಸೋದು
* ದಾಖಲೆಗಳ ಆಧಾರದ ಮೇಲೆ ಸಾಕ್ಷಿಗಳ ಹೇಳಿಕೆ ದಾಖಲಿಸೋದು
* ಅನಾಮಿಕನ ಹೇಳಿಕೆ ದಾಖಲು ಮಾಡಿ ವರದಿ ತಯಾರಿ ಮಾಡೋದು
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಿಗೂಢ ಶವಗಳ ರಹಸ್ಯ ಭೇದಿಸಲು ವಿಶೇಷ ತನಿಖಾ ತಂಡ (Dharmasthala SIT) ಹೊರಟಿದೆ. ದಿನಕಳೆದಂತೆ ಶವ ಶೋಧ ಕಾರ್ಯಾಚರಣೆಗೆ ತಿರುವ ಪಡೆದುಕೊಳ್ತಿದೆ. ಮುಸುಕುಧಾರಿಯ ಜೊತೆ ಕಳೆದ 10 ದಿನಗಳಿಂದ ತಲೆಬುರುಡೆ ರಹಸ್ಯದ ಜಾಡು ಹಿಡಿದು ಹೊರಟ ಎಸ್‌ಐಟಿ, 13 ಪಾಯಿಂಟ್ ಪೈಕಿ 12 ಪಾಯಿಂಟ್ ಮುಗಿಸಿದೆ. ನಿನ್ನೆ 13ನೇ ಪಾಯಿಂಟ್ ಶೋಧಿಸಬೇಕಿತ್ತು. ಆದ್ರೆ ದೂರುದಾರನ ವಿಚಾರಣೆ ನಡೆಸಿ ಮತ್ತಷ್ಟು ಮಾಹಿತಿ ಕಲೆ ಹಾಕಿತ್ತು.
ಇವತ್ತು ಕೂಡ 13ನೇ ಪಾಯಿಂಟ್ ಶೋಧಿಸಬೇಕಿತ್ತು. ಆದ್ರೆ ಎಸ್‌ಐಟಿ ಕಾರ್ಯಾಚರಣೆ ನಿಗೂಢವಾಗಿ ಸಾಗ್ತಿದೆ. 13ನೇ ಪಾಯಿಂಟ್ ಬದಲು ಹೊಸ ಸ್ಥಳ ಗುರುತು ಮಾಡಿದೆ. ಎಸ್‌ಐಟಿ ಟೀಂ ನೇರವಾಗಿ 15ನೇ ಪಾಯಿಂಟ್ ಗುರುತು ಮಾಡಿದೆ. 13ನೇ ಪಾಯಿಂಟ್‌ನಲ್ಲಿ ಶೋಧ ನಡೆಸದೇ ನೇರವಾಗಿ 15ನೇ ಪಾಯಿಂಟ್‌ಗೆ ಎಸ್‌ಐಟಿ ತಂಡ ತೆರಳಿದೆ. ತಾಂತ್ರಿಕವಾಗಿ ಬಹಳ ಸಮಸ್ಯೆ ಇರುವುದರಿಂದ ಹೊಸ ಪಾಯಿಂಟ್‌ಅನ್ನು ಗುರುತಿಸಿ ಮಹಜರು ಮಾಡುವ ಪ್ರಕ್ರಿಯೆಗೆ ತನಿಖಾಧಿಕಾರಿ ಜಿತೇಂದ್ರ ದಯಾಮ ಮುಂದಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ
ಅನಾಮಿಕ ವ್ಯಕ್ತಿ ಧರ್ಮಸ್ಥಳದ ಅರಣ್ಯ ಭಾಗದಲ್ಲಿ ಹೂತಿದ್ದ ತಲೆ ಬರುಡೆಯನ್ನೇ ಪೊಲೀಸ್ ಠಾಣೆಗೆ ತಂದು ದೂರು ಕೊಟ್ಟಿದ್ದ ಎನ್ನಲಾಗ್ತಿರುವ ವಿಚಾರ ಇದೀಗ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಕಳೆದ ಜುಲೈ ತಿಂಗಳಲ್ಲಿ ಕೋರ್ಟ್‌ಗೆ ಪ್ರೊಡ್ಯೂಸ್ ಮಾಡಿದ್ದ ಬುರುಡೆ ಜಾಗದಲ್ಲಿ ಶೋಧಕ್ಕೆ ಎಸ್‌ಐಟಿ ಮುಂದಾಗಿದೆ. ಕಲ್ಲೇರಿ ದಾಟಿ ಬೊಳಿಯಾರ್ ಸಮೀಪದ ಗೋಂಕ್ರತಾರ್ ಎಂಬಲ್ಲಿ ಮಳೆ ನಡುವೆಯೂ ಪರಿಶೀಲನೆ ನಡೆಯುತ್ತಿದೆ. ದಟ್ಟ ಕಾಡಿನ ಒಳಗೆ 40 ಅಧಿಕಾರಿಗಳ ತಂಡ ಎಲ್ಲ ಪರಿಕರಗಳ ಜೊತೆ ಹೋಗಿ ಶೋಧ ನಡೆಸ್ತಿದೆ. ಇದನ್ನೂ ಓದಿ: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಕೆಶಿ
– ಮತ್ತೊಮ್ಮೆ ವಿಚಾರಣೆ ನಡೆಸಿ 2 ವಾರಗಳಲ್ಲಿ ಅರ್ಜಿ ನಿರ್ಧರಿಸಲು ಸೂಚನೆ
ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ (Dharmasthala Temple) ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ ಅಗತ್ಯವಿದೆಯೇ ಎಂಬುದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಇದನ್ನೂ ಓದಿ: ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್ ಸಿಂಹ
ವಿಚಾರಣೆ ವೇಳೆ ದೇವಾಲಯದ ಆಡಳಿತ ಮಂಡಳಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ಮುಕುಲ್ ರೊಹಟಗಿ, ದಿನೇ ದಿನೇ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳು ಮಾನಹಾನಿಕರ ವರದಿಗಳನ್ನ ಪ್ರಕಟಿಸುತ್ತಿವೆ ಎಂದರು. ಇದೇ ವೇಳೆ ಮಾನಹಾನಿಕರ ಎಂದು ಹೇಳಲಾದ ಇಂಟರ್ನೆಟ್ ಮೀಮ್ಸ್‌ಗಳ ಪೋಸ್ಟ್‌ಗಳ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಿದರು. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ – 20 ಅಡಿ ಎತ್ತರದಿಂದ ಬಿದ್ದ ಲೈನ್ ಮ್ಯಾನ್
ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋರ್ಟ್, ಇಂತಹ ಮಾನಹಾನಿಕರ ಪೋಸ್ಟ್‌ಗಳಿಗೆ ದೇವಾಲಯವು ಯಾವಾಗಲೂ ಪರಿಹಾರ ಪಡೆಯಬಹುದು ಎಂದು ಹೇಳಿತು. ಆದಾಗ್ಯೂ, ಮಾಧ್ಯಮಗಳ ವಿರುದ್ಧ ನಿಗ್ರಹ ಹೇರಬೇಕೇ ಅಂತ ಪ್ರಶ್ನಿಸಿತು. ವಿರಳ ಮತ್ತು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಗ್ಯಾಗ್ ಆದೇಶಗಳನ್ನ ಹೊರಡಿಸಲಾಗುತ್ತೆ. ಇಂತಹ ಆದೇಶ ವಾಕ್ ಸ್ವಾತಂತ್ರ್ಯವನ್ನ ಹತ್ತಿಕ್ಕುತ್ತವೆ. ನಾವು ತಡೆಯಾಜ್ಞೆ ನೀಡಿದ್ರೆ ಅನಾಮಿಕ ವ್ಯಕ್ತಿಯ ಹೇಳಿಕೆಯನ್ನು ಸಹ ವರದಿ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಹೇಳಿದರು. ಈ ವಿಷಯವನ್ನು ರಾಜ್ಯದ ವಿಚಾರಣಾ ನ್ಯಾಯಾಲಯವೇ (Karnataka Trial Court) ಪರಿಗಣಿಸಬಹುದು ಎಂದು ಅಭಿಪ್ರಾಯಪಟ್ಟರು.
ಮುಂದುವರಿದು, ಕರ್ನಾಟಕದ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿದಾರರು ಮತ್ತೆ ವಾದ ಮಂಡಿಸಲಿ. ನಾವು ಸ್ವತಂತ್ರ ದೇಶದಲ್ಲಿ ವಾಸಿಸುತ್ತಿದ್ದೇವೆ. ವಿಚಾರಣಾ ನ್ಯಾಯಾಲಯವು ಈ ವಿಷಯದ ಬಗ್ಗೆ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಅವರು ಹೇಳಿದರು. ನಂತರ ಮುಕುಲ್ ರೊಹಟಗಿ ಯಾಲಯವನ್ನ ಮಧ್ಯಂತರ ರಕ್ಷಣೆ ನೀಡುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪೀಠ, ವಿಚಾರಣಾ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನದಿಂದ ಎರಡು ವಾರಗಳಲ್ಲಿ ಅರ್ಜಿಯನ್ನ ನಿರ್ಧರಿಸುವಂತೆ ನಾವು ನಿರ್ದೇಶಿಸುತ್ತೇವೆ. ಹೈಕೋರ್ಟ್ ಮಾಡುವ ಯಾವುದೇ ಅವಲೋಕನಗಳು ಹೊಸದಾಗಿ ತಡೆಯಾಜ್ಞೆ ಅರ್ಜಿಯನ್ನು ಪರಿಗಣಿಸುವಾಗ ವಿಚಾರಣಾ ನ್ಯಾಯಾಲಯದ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಪೀಠ ಅಂತಿಮವಾಗಿ ತಮ್ಮ ಆದೇಶದಲ್ಲಿ ತಿಳಿಸಿತು. ಇದನ್ನೂ ಓದಿ: ಹೇಗಿತ್ತು.. ಹೇಗಾಯ್ತು!?- ಉತ್ತರಾಖಂಡದಲ್ಲಿ ಭೀಕರ ಪ್ರವಾಹದ ಸ್ಯಾಟಲೈಟ್ ದೃಶ್ಯ ಹಂಚಿಕೊಂಡ ಇಸ್ರೋ
ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಈ ಹಿಂದೆ ನೈರ್ಮಲ್ಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪ್ರಕರಣ ಬೆಳಕಿಗೆ ಬಂದಿದೆ. ಇದಕ್ಕೆ ಹೈಕೋರ್ಟ್ ತಡೆ ನೀಡಲು ನಿರಾಕರಿಸಿತ್ತು. ಬಳಿಕ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.