Tag: dharwad-hubballi

  • ದಾಂಡೇಲಿಗೆ ಪ್ರವಾಸ ಹೊರಟ್ಟಿದ್ದ ಇಬ್ಬರು ಯುವಕರು ಸಾವು

    ದಾಂಡೇಲಿಗೆ ಪ್ರವಾಸ ಹೊರಟ್ಟಿದ್ದ ಇಬ್ಬರು ಯುವಕರು ಸಾವು

    ಧಾರವಾಡ: ಯುವಕರ ತಂಡವೊಂದು ದಾಂಡೇಲಿಗೆ ಪ್ರವಾಸ ಹೋಗುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಹುಬ್ಬಳ್ಳಿಯ ಹೊರಹೊಲಯದ ಗಬ್ಬೂರ ಬೈಪಾಸ್ ಬಳಿ ನಡೆದಿದೆ.

    ರಂಜಿತ್ ಮತ್ತು ರಾಕೇಶ್ ಅಪಘಾತದಲ್ಲಿ ಮೃತಪಟ್ಟಿರುವ ಯುವಕರು. ಮೃತರು ಚಿಕ್ಕಬಳ್ಳಾಪುರದ ನಿವಾಸಿಗಳಾಗಿದ್ದು, ತಮ್ಮ ಊರಿನಿಂದ ದಾಂಡೇಲಿಗೆ ಪ್ರವಾಸ ಹೊರಟ್ಟಿದ್ದರು. ಈ ವೇಳೆ ಯುವಕರಿದ್ದ ಇನ್ನೋವಾ ಕಾರ್ ಹುಬ್ಬಳ್ಳಿ ಬೈಪಾಸ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ರೊಲ್ಸ್ ರಾಯಲ್ಸ್‌ಗಾಗಿ ಮತ್ತೊಂದು ವಿವಾದಕ್ಕೆ ಸಿಲುಕಿದ ವಿಜಯ್ ದಳಪತಿ

    ಸದ್ಯ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂಬ ಅಂಶ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಮದ್ಯ ಮಾರಾಟ ನಿಷೇಧ

  • 3 ವರ್ಷದ ಮಗು ಮೇಲೆ 30ರ ಕಾಮಿಯಿಂದ ಅತ್ಯಾಚಾರಕ್ಕೆ ಯತ್ನ

    ಧಾರವಾಡ: 3 ವರ್ಷದ ಮಗು ಮೇಲೆ 30 ವರ್ಷದ ವಿಕೃತ ಕಾಮಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಕಾಮುಕನು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಾಪಿಯು ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

    ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ಕಾಮುಕನನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.