Tag: Dharwad Rural Police

  • ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

    – ಲವ್‌ ಜಿಹಾದ್ ಆರೋಪದ ಮೇಲೆ ದೂರು

    ಧಾರವಾಡ: ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್‌ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್‌ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.

    ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ದೂರಿನಲ್ಲಿ ಬಜರಂಗದಳ ಕಾರ್ಯಕರ್ತರು (Bajrang Dal Workers) ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ

    ಹಿಂದೂ ಯುವತಿಯರನ್ನೇ ಟಾರ್ಗೆಟ್‌ ಮಾಡಿ ವಿಡಿಯೋ
    ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಜೊತೆ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ. ಕಳೆದ ಜೂನ್ 5 ರಂದು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡ ಗ್ರಾಮೀಣ ಠಾಣೆಗೆ (Dharwad Rural Police Station) ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಎಸ್ಪಿ ಗುಂಜನ್ ಆರ್ಯ, ಮೇಲ್ನೋಟಕ್ಕೆ ಯಾವುದೇ ನಕಲಿ ದಾಖಲೆ ಕೊಟ್ಟು ಮದುವೆಯಾದ ಬಗ್ಗೆ ತಿಳಿದು ಬಂದಿಲ್ಲ. ಮದುವೆಯಾದ ಯುವತಿಯನ್ನ ವಿಚಾರಣೆ ಮಾಡುತಿದ್ದು, ಪೊಲೀಸ್ ಅಧಿಕಾರಿ ಒಬ್ಬರನ್ನ ನೇಮಿಸಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಂಟಿಂಗ್ ಮಷಿನ್ ಕಾಸ್ಟ್ಯೂಮ್ ಧರಿಸಿ ಬಂದ ಉರ್ಫಿ – ನನಗೊಂದು ಪ್ರಿಂಟ್‌ ಕೊಡಿ ಅಂದ್ರು ನೆಟ್ಟಿಗರು

    ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು

  • ಗಣೇಶ ಮೆರವಣಿಗೆ ವೇಳೆ ಹುಚ್ಚಾಟ; ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಲಘು ಲಾಠಿಚಾರ್ಜ್

    ಗಣೇಶ ಮೆರವಣಿಗೆ ವೇಳೆ ಹುಚ್ಚಾಟ; ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಲಘು ಲಾಠಿಚಾರ್ಜ್

    ಧಾರವಾಡ: ಗಣೇಶ ಮೆರವಣಿಗೆ ವೇಳೆ ಜನರ ಹುಚ್ಚಾಟವನ್ನು ತಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಪರಿಣಾಮ ಪೊಲೀಸರು ಲಘು ಲಾಠಿಚಾರ್ಜ್ ಮಾಡಿರುವ ಘಟನೆ ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದಿದೆ.

    ಶನಿವಾರ ಸಂಜೆ ಗ್ರಾಮದ ಎರಡು ಓಣಿಯವರು ಗಣೇಶ ವಿಸರ್ಜನೆಯನ್ನು ಏಕಕಾಲಕ್ಕೆ ಆರಂಭ ಮಾಡಿದ್ದರು. ಈ ಮೆರವಣಿಗೆ ವೇಳೆ ಎರಡೂ ಓಣಿಯವರು ಎದುರು ಬದುರು ಡಿಜೆ ಹಾಕಿ ಹುಚ್ಚೆದು ಕುಣಿಯಲು ಆರಂಭಿಸಿದ್ದರು. ಆಗ ಪೊಲೀಸರು ಎರಡು ಡಿಜೆಯನ್ನು ಬೇರೆ ಬೇರೆ ಕಡೆ ತಿರುಗಿಸಲು ಯತ್ನಿಸಿದ್ದರು. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪನದಿಗೆ ಬಿದ್ದ ಕಾರು – ನಾಲ್ವರು ಪಾರು

     ಆದರೆ ಅಲ್ಲಿದ್ದ ಜನರು ಎರಡು ಡಿಜೆಯನ್ನು ಬೇರೆ ಕಡೆ ತಿರುಗಿಸದಂತೆ ಒತ್ತಾಯಿಸಿದ್ದರು. ಜನರ ನಿಯಂತ್ರಣ ಮಾಡಲು ಪ್ರಯತ್ನಿಸಿದಾಗ ಪೊಲೀಸರಿಗೆ ಅವಾಜ್ ಹಾಕಿ, ಜನರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು.

    ಇದರಿಂದ ಜನ ದಿಕ್ಕಾಪಾಲಾಗಿ ಓಡಿದ್ದಾರೆ. ಬಳಿಕ ಪೊಲೀಸರು ಡಿಜೆ ಬಂದ್ ಮಾಡಿಸಿ, ಶಾಂತಿಯುತವಾಗಿ ಗಣೇಶನ ವಿಸರ್ಜನೆ ಮಾಡಿಸಿದರು.

  • ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್‌ಹೌಸ್‌ನಲ್ಲಿ ದರೋಡೆಗೆ ಯತ್ನ – 15 ಮಂದಿ ದರೋಡೆಕೊರರ ಬಂಧನ

    ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಫಾರ್ಮ್‌ಹೌಸ್‌ನಲ್ಲಿ ದರೋಡೆಗೆ ಯತ್ನ – 15 ಮಂದಿ ದರೋಡೆಕೊರರ ಬಂಧನ

    ಧಾರವಾಡ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆಗಿರುವ ಶಾಸಕ ಬಸವರಾಜ ರಾಯರೆಡ್ಡಿ (Basavaraj Rayareddy) ಅವರ ಧಾರವಾಡದ ಫಾರ್ಮ್‌ಹೌಸ್‌ನಲ್ಲಿ ದರೋಡೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಧಾರವಾಡ (Dharwad) ತಾಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿ ಬಸವರಾಜ ರಾಯರೆಡ್ಡಿ ಅವರು ʻಮಮತಾʼ ಎಂಬ ಹೆಸರಿನಡಿ ಫಾರ್ಮ್‌ಹೌಸ್ (Farmhouse) ಹೊಂದಿದ್ದಾರೆ. ಈ ಫಾರ್ಮ್‌ಹೌಸ್‌ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಅನೇಕ ಬಾರಿ ಬಂದು ಹೋಗಿದ್ದಾರೆ. ಇದನ್ನೂ ಓದಿ: ಪ್ರಪಂಚದಲ್ಲಿ ಒಂದೇ ರೀತಿ 7 ಜನ ಇರ್ತಾರೆ, ಫೋಟೋಗಳಿಗೆ ಸಾಮ್ಯತೆ ಇರಬಹುದು: ಸುಜಾತ ಭಟ್‌

    ಕಳೆದ ಆ.13 ರಂದು ಸುಮಾರು 8-10 ಜನರ ಗುಂಪು ಫಾರ್ಮ್‌ಹೌಸ್‌ಗೆ ನುಗ್ಗಿದೆ. ಫಾರ್ಮ್‌ಹೌಸ್‌ನಲ್ಲಿ ಮಲಗಿದ್ದ ಕಣ್ಣಪ್ಪ ಜಡ್ಲಿ, ಹನುಮಂತ ಧನದಾವರ್, ಅಶೋಕ ಪೋತಲಿ, ಲಕ್ಷ್ಮಣ ಚಂದರಗಿ ಎಂಬುವವರನ್ನ ಎಬ್ಬಿಸಿದ ದರೋಡೆಕೋರರು ಅವರಿಗೆ ಚಾಕು ತೋರಿಸಿ ಹೆದರಿಸಿದ್ದಲ್ಲದೇ ಅವರ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಬಾಯಿಗೆ ಗಮ್ ಟೇಪ್‌ ಸುತ್ತಿ ಅವರ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನ ದರೋಡೆ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

    ಅದೇ ದಿನ ವಿಷಯ ತಿಳಿದು ಸ್ಥಳಕ್ಕೆ ಎಸ್ಪಿ ಗುಂಜನ್ ಆರ್ಯ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆ ದರೋಡೆಕೋರರ ಬಂಧನಕ್ಕೆ ಒಟ್ಟು 8 ತಂಡಗಳನ್ನು ರಚಿಸಿದ್ದರು. ಈ ತಂಡದ ಅಧಿಕಾರಿಗಳು, ಬಳ್ಳಾರಿ, ರಾಯಚೂರು, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಈ ದರೋಡೆಕೋರರ ಬಗ್ಗೆ ದಾಖಲಾದ ಮಾಹಿತಿ ಪಡೆದು ಶೋಧಕ್ಕಿಳಿದಿದ್ದರು. ಕೊನೆಗೆ ಕೊನೆಗೆ 15 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಅವರೇ ದರೋಡೆ ಮಾಡಿದ್ದು ಎಂದು ಗೊತ್ತಾಗಿದೆ.

    ಇವರು ಅಂತರ ಜಿಲ್ಲೆ ದರೋಡೆಕೋರರು ಎಂದು ತಿಳಿದು ಬಂದಿದೆ. ಸದ್ಯಕ್ಕೆ 15 ಜನರನ್ನ ಬಂಧಿಸಿರುವ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಅವರಿಂದ 16 ಮೊಬೈಲ್ ಹಾಗೂ 7 ವಾಹನಗಳನ್ನು ಜಪ್ತಿ ಮಾಡಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

  • ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಧಾರವಾಡ: ತನ್ನ ಹೆಂಡತಿ ಸಹಾಯದಿಂದಲೇ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನ ಬಾವಿ ಗ್ರಾಮದಲ್ಲಿ ನಡೆದಿದೆ.

    ಕಾಮುಕ ಮೈಲಾರಪ್ಪ ಚಿಕ್ಕುಂಬಿ ಅದೇ ಗ್ರಾಮದ ತನ್ನ ಪಕ್ಕದ ಮನೆಯ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಅವನ ಹೆಂಡತಿ ಲಕ್ಷ್ಮೀ ಕೂಡ ಸಹಾಯ ಮಾಡಿದ್ದಾಳೆ ಎಂದು ಆರೋಪಿಸಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Dharwad Rural Police) ಪೋಕ್ಸೊ ಕಾಯ್ದೆಯಡಿ (POCSO Act) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪ್ರೊ.ಪುರುಷೋತ್ತಮ್‌ ಬಿಳಿಮಲೆ

    ಮೈಲಾರಪ್ಪ ಚಿಕ್ಕುಂಬಿ ತನ್ನ ಪಕ್ಕದ ಮನೆಯಲ್ಲಿದ್ದ 17ರ ಬಾಲಕಿ ಮೇಲೆ ಲೈಂಗಿಕ ತೃಷೆ ತೀರಿಸಿಕೊಳ್ಳಲು ತನ್ನ ಮನೆಗೆ ಕರೆದುಕೊಂಡು ಬರುವಂತೆ ಪತ್ನಿ ಲಕ್ಷ್ಮೀಗೆ ಹೇಳಿದ್ದಾನೆ. ನಂತರ ಲಕ್ಷ್ಮೀ ಆ ಬಾಲಕಿಯನ್ನ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಲು ಸಹಾಯ ಮಾಡಿದ್ದಾಳೆ. ಇದನ್ನೂ ಓದಿ: ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ

    ಈ ವಿಷಯ ತಿಳಿದ ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಸದ್ಯ ಪತಿ-ಪತ್ನಿ ಇಬ್ಬರೂ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k