Tag: dharwad sdm college

  • ಧಾರವಾಡ ಎಸ್‍ಡಿಎಂ ಕಾಲೇಜಿನ ಎಲ್ಲಾ ಸೋಂಕಿತರು ಡಿಸ್ಚಾರ್ಜ್

    ಧಾರವಾಡ ಎಸ್‍ಡಿಎಂ ಕಾಲೇಜಿನ ಎಲ್ಲಾ ಸೋಂಕಿತರು ಡಿಸ್ಚಾರ್ಜ್

    ಧಾರವಾಡ: ಎಸ್‍ಡಿಎಂ ಮೆಡಿಕಲ್ ಕಾಲೇಜಿನ ಎಲ್ಲಾ 306 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ನಗರದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ನವೆಂಬರ್ 24 ರಿಂದ 26 ರವರೆಗೆ ಬಂದಿದ್ದ 306 ಪ್ರಕರಣಗಳು ದೃಢಪಟ್ಟಿತ್ತು. ಕ್ವಾರಂಟೈನ್‍ನಲ್ಲಿದ್ದ ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಕೆಲವರು ಈಗಾಗಲೇ ತಮ್ಮ ಊರಿಗೆ ಕೂಡಾ ಹೋಗಿದ್ದಾರೆ ಎಂದರು. ಇದನ್ನೂ ಓದಿಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಸದ್ಯ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿವೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣ 57 ಇದ್ದು, ಇಂದು 2 ಮಾತ್ರ ಪಾಸಿಟಿವ್ ಪ್ರಕರಣಗಳು ಇವೆ. ಹೊರ ದೇಶದಿಂದ ಬಂದಿದ್ದ ಒಬ್ಬರಿಗೆ ಪಾಸಿಟಿವ್ ಬಂದಿದೆ. ಆದರೆ ಅವರನ್ನು ಹೋಂ ಐಸೊಲೇಷನ್‍ನಲ್ಲಿ ಇದ್ದು, ಅವರು ಆರೋಗ್ಯವಾಗಿ ಇದ್ದಾರೆ. ಆದರೆ ಗುರುತಿಸಿದ 14 ದೇಶದಿಂದ ಇವರು ಬಂದಿಲ್ಲ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ100 ರೇಷನ್ ಕಾರ್ಡ್ ತಾಂಡಾಗಳಿಗೊಂದು ನ್ಯಾಯ ಬೆಲೆ ಅಂಗಡಿ

    ಈಗಾಗಲೇ ವಿದೇಶದಿಂದ ಆಗಮಿಸಿದವರ ಮನೆಗೆ ಆರೋಗ್ಯ ಅಧಿಕಾರಿಗಳು ಭೇಟಿ ಮಾಡಿದ್ದಾರೆ. ಅವರಿಗೆ ಯಾವುದೇ ರೋಗ ಗುಣಲಕ್ಷಣಗಳಿಲ್ಲ. ಜಿಲ್ಲೆಯಲ್ಲಿ ಪ್ರತಿ ದಿನ 4 ಸಾವಿರ ಟೆಸ್ಟ್ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

  • ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ- ಹಾಸ್ಟೆಲ್‌ ಸೀಲ್‌ಡೌನ್

    ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ- ಹಾಸ್ಟೆಲ್‌ ಸೀಲ್‌ಡೌನ್

    ಧಾರವಾಡ: ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯದ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿದೆ.

    400 ವಿದ್ಯಾರ್ಥಿಗಳು ಹಾಗೂ 3 ಸಾವಿರ ಸಿಬ್ಬಂದಿಯ ಸ್ವ್ಯಾಬ್ ಸಂಗ್ರಹಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾಲೇಜಿನ ಎರಡು ಹಾಸ್ಟೆಲ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತರು ಕೋವಿಡ್‌ ಲಸಿಕೆಯ ಎರಡು ಡೋಸ್ ಪಡೆದಿರುವುದರಿಂದ ತೀವ್ರತರ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಔಷಧೋಪಚಾರ, ಚಿಕಿತ್ಸೆ ನಡೆಯುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದರು. ಇದನ್ನೂ ಓದಿ: ಥಿಯೇಟರ್‌ಗಳಲ್ಲಿ ನಾವು ರಾಜಿಯಾಗಲ್ಲ: ಅಮೀರ್‌ಗೆ ಯಶ್ ಉತ್ತರ

    ಸತ್ತೂರಿನ ಎಸ್‌ಡಿಎಂ ವೈದ್ಯಕೀಯ ಕಾಲೇಜು ಆವರಣಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ವಿದ್ಯಾರ್ಥಿನಿಲಯ ಸೀಲ್‌ಡೌನ್ ಪ್ರದೇಶ ಪರಿಶೀಲಿಸಿದರು. ನಂತರ ಸಂಸ್ಥೆಯ ಆಡಳಿತ ಮಂಡಳಿಯವರೊಂದಿಗೆ ಚರ್ಚಿಸಿ, ನ.17ರಂದು ಕಾಲೇಜಿನ ಆವರಣದ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಹಲವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂಬುದನ್ನು ದೃಢಪಡಿಸಿಕೊಂಡರು. ಇದನ್ನೂ ಓದಿ: ಅಭಿಮಾನಿಯಿಂದ ಅಪ್ಪುಗೆ ಅಯ್ಯಪ್ಪನ ದರ್ಶನ

    ಸಂಸ್ಥೆಯಲ್ಲಿ ಪದವಿ ಓದುತ್ತಿರುವ 400 ವಿದ್ಯಾರ್ಥಿಗಳಲ್ಲಿ ಈಗಾಗಲೇ 300 ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಉಳಿದ 100 ವಿದ್ಯಾರ್ಥಿಗಳ ಸ್ವ್ಯಾಬ್ ಸಂಗ್ರಹಿಸಿ ಪರೀಕ್ಷಿಸಲಾಗುತ್ತಿದೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ತಪಾಸಣೆಗೆ ಒಳಪಟ್ಟವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಆವರಣದಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 3 ಸಾವಿರ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

    ಜಿಲ್ಲಾಡಳಿತ, ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪೊಲೀಸ್ ಹಾಗೂ ಎಸ್‌ಡಿಎಂ ಆಡಳಿತ ಮಂಡಳಿ ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಿವೆ.