Tag: Dharwad SP

  • ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ

    ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ

    ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ ಎಂದು ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ, ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಠಾಣೆಯವರು ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು ಎಂದು ಹೇಳಿದರು.

    ಈಗಾಗಲೇ ನಮ್ಮಲ್ಲಿ 8 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ, ಇಬ್ಬರು ಗುಣಮುಖರಾಗಿದ್ದಾರೆ, ನಮ್ಮೊಂದಿಗೆ ಕರ್ತವ್ಯ ನಿರ್ವಹಿಸಿದ್ದ ಓರ್ವ ಸಿಬ್ಬಂದಿಯನ್ನು ನಾವು ಕಳೆದುಕೊಂಡಿದ್ದೇವೆ. ನಾನೂ ಸಹ ಕ್ವಾರಂಟೈನದಲ್ಲಿದ್ದೆ, ನಾವೆಲ್ಲ ಸಹ ಟೆಸ್ಟ್ ಮಾಡಿಸಿದ್ದೇವೆ. ಎಲ್ಲ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಎಲ್ಲ ಠಾಣೆಯಲ್ಲಿ ಪಲ್ಸ್ ಆಕ್ಸಿಮೀಟರ್ ಇಡಲು ನಿರ್ಧರಿಸಲಾಗಿದೆ ಎಂದರು.

  • ಗಣೇಶ ಹಬ್ಬದಂದು ಕರ್ತವ್ಯ ನಿರ್ವಹಿಸದೇ ಮನೆಯಲ್ಲಿ ಮಲಗಿದ್ದ ಪಿಎಸ್‍ಐ ಅಮಾನತು

    ಗಣೇಶ ಹಬ್ಬದಂದು ಕರ್ತವ್ಯ ನಿರ್ವಹಿಸದೇ ಮನೆಯಲ್ಲಿ ಮಲಗಿದ್ದ ಪಿಎಸ್‍ಐ ಅಮಾನತು

    ಧಾರವಾಡ: ಗಣೇಶ ಹಬ್ಬದ ಸಂದರ್ಭದಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಗಸ್ತು ನಿರ್ವಹಿಸದೇ ಮನೆಗೆ ಹೋಗಿ ಮಲಗಿ ಕರ್ತವ್ಯಲೋಪ ಎಸಗಿದ್ದ ಪಿಎಸ್‍ಐಯನ್ನು ಧಾರವಾಡ ಎಸ್‍ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

    ಧಾರವಾಡ ಜಿಲ್ಲೆಯ ಗರಗ ಠಾಣೆಯ ಪಿಎಸ್‍ಐ ಸಮೀರ್ ಮುಲ್ಲಾ ಅಮಾನತಾಗಿದ್ದಾರೆ. ಗರಗ ಠಾಣಾ ವ್ಯಾಪ್ತಿಯ ಕೋಟೂರ ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪನೆಯ ದಿನ ಮೆರವಣಿಗೆ ಸಾಗುವಾಗ ಸ್ವಲ್ಪ ದ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಿ, ಮಧ್ಯರಾತ್ರಿ 2 ಗಂಟೆಗೆ ಖುದ್ದು ಜಿಲ್ಲಾ ಮಹಿಳಾ ಎಸ್‍ಪಿ ವರ್ತಿಕಾ ಕಟಿಯಾರ್ ಸ್ಥಳಕ್ಕೆ ಭೇಟಿ ನೀಡಿದ್ದರು.

    ಈ ವೇಳೆ ಪಿಎಸ್‍ಐಗೆ ರಾತ್ರಿ ಗಸ್ತು ತಿರುಗುವಂತೆ ಸೂಚಿಸಿ ಹೋಗಿದ್ದರು. ಆದರೆ, ಪಿಎಸ್‍ಐ ಸಮೀರ್ ಮುಲ್ಲಾ ಎಸ್‍ಪಿ ಹೋಗುತ್ತಿದ್ದಂತೆ ಮನೆಗೆ ವಾಪಸ್ ತೆರಳಿದ್ದಾರೆ. ಎಸ್‍ಪಿ ಮತ್ತೆ 4 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಗ ಅಲ್ಲಿ ಪಿಎಸ್‍ಐ ಸಮೀರ್ ಮುಲ್ಲಾ ಗಸ್ತು ನಿರ್ವಹಿಸದೇ ಮನೆಗೆ ಹೋಗಿದ್ದನ್ನು ಗಮನಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್‍ಪಿ ವರ್ತಿಕಾ ಕಟಿಯಾರ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಮೀರ್ ಮುಲ್ಲಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.