Tag: Dheera

  • ‘ಧೀರ’ನಾಗಿ ತೆರೆಗೆ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ

    ‘ಧೀರ’ನಾಗಿ ತೆರೆಗೆ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ

    ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಅವರ ಹುಟ್ಟುಹಬ್ಬ. ಈ ದಿನ ಶಿವಣ್ಣ ಅಭಿನಯಿಸಲಿರುವ  ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳ‌ ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ (Dheera) ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (Srinivas) (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ  (Naveen Shetty) ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

    ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ  ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು  ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು  ವೀಕ್ಷಿಸಿದ ಶಿವಣ್ಣ  ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ  ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ  ಅವರನ್ನು ಒಪ್ಪಿಸಿದ್ದಾರೆ.

     

    ತೆರೆಮೇಲೆ  ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು  ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ‘ಧೀರ’ ತೆರೆಗೆ ಬರಲು ಸಿದ್ಧ

    ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ‘ಧೀರ’ ತೆರೆಗೆ ಬರಲು ಸಿದ್ಧ

    ಬೆಂಗಳೂರು: ಕನ್ನಡದಲ್ಲಿ ಎರಡನೇ ಡಬ್ಬಿಂಗ್ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇದು ತಮಿಳಿನ `ಆರಂಭಂ’ ಸಿನಿಮಾವನ್ನು ಕನ್ನಡದಲ್ಲಿ `ಧೀರ’ ಎಂದು ಹೆಸರಿಟ್ಟು ಡಬ್ ಮಾಡಿ ಬಿಡುಗಡೆಯಾಗಲು ಚಿತ್ರತಂಡ ಸಿದ್ಧವಾಗಿದೆ.

    ಈ ಹಿಂದೆ ತಮಿಳು ನಟ ಅಜಿತ್ ಕುಮಾರ್ ಅಭಿನಯಿಸಿದ ಸಿನಿಮಾ ಕನ್ನಡದಲ್ಲಿ ಡಬ್ ಆಗಿ `ಸತ್ಯದೇವ್ ಐಪಿಎಸ್’ ಎಂಬ ಹೆಸರಿನಲ್ಲಿ ಬಿಡುಗಡೆಯಾಗಿತ್ತು. ಈಗ ಅವರು ಅಭಿನಯಿಸಿರುವ ಮತ್ತೊಂದು ತಮಿಳು ಸಿನಿಮಾ ಕನ್ನಡದಲ್ಲಿ ಡಬ್ ಆಗಿ ಬಿಡುಗಡೆ ಆಗುತ್ತಿದೆ.

    ನಟ ಅಜಿತ್ ಅಭಿನಯದ `ಆರಂಭಂ’ ಚಿತ್ರವನ್ನು ಕನ್ನಡದಲ್ಲಿ `ಧೀರ’ ಎಂಬ ಹೆಸರಿನಲ್ಲಿ ಡಬ್ ಮಾಡಿ ತೆರೆಗೆ ತರಲು ನಿರ್ಮಾಪಕರು ಸಿದ್ಧವಾಗಿದ್ದಾರೆ. ಈಗಾಗಲೇ ಕನ್ನಡದಲ್ಲಿ ಈ ಸಿನಿಮಾದ ಚಿತ್ರೀಕರಣ ಮುಗಿದು ಸೆನ್ಸಾರ್ ಅನ್ನು ಮುಗಿಸಿ ಚಿತ್ರಮಂದಿರಕ್ಕೆ ಕಾಲಿಡಲು ಸಜ್ಜಾಗಿದೆ.

    ಚಿತ್ರದ ಟೀಸರ್ ಅನ್ನು ಚಿತ್ರತಂಡ ಪ್ರಾಯೋಗಿಕವಾಗಿ ಬಿಡುಗಡೆ ಮಾಡಿದ್ದು, ದರ್ಶನ್ ಎಂಟರ್ ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಬಿ. ಕೃಷ್ಣಮೂರ್ತಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಟ ಆರ್ಯ, ನಟಿ ನಯನತಾರ, ತಾಪ್ಸಿ ಪನ್ನು ಅಭಿನಯಿಸಿದ್ದಾರೆ. ಇದೊಂದು ಲವ್ ಅಂಡ್ ಸಸ್ಪೆನ್ಸ್ ಸಿನಿಮಾವಾಗಿದೆ.

    ಈ ಹಿಂದೆ ಸತ್ಯದೇವ್ ಐಪಿಎಸ್ ಬಿಡುಗಡೆ ಸಂದರ್ಭದಲ್ಲಿ ಜಗ್ಗೇಶ್, ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿತ್ತು. ಈ ವಿಚಾರದ ಬಗ್ಗೆ ನಿರ್ಮಾಪಕ ಕೃಷ್ಣಮೂರ್ತಿ ಅವರು ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ)ಗೆ ದೂರು ನೀಡಿದ್ದರು. ಈ ಸಂಬಂಧ ಅಡ್ಡಿಪಡಿಸಿದ್ದಕ್ಕೆ ಸಿಸಿಐ ಸಾರಾ ಗೋವಿಂದ್, ವಾಟಾಳ್ ನಾಗರಾಜ್, ಜಗ್ಗೇಶ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

    ಕೃಷ್ಣಮೂರ್ತಿಯವರು ಕನ್ನಡದಕ್ಕೆ ಡಬ್ ಮಾಡಿರುವ ಮುಂದಿನ ಚಿತ್ರ ಧೀರ ಬಿಡುಗಡೆಗೆ ಯಾರೂ ಯಾವುದೇ ರೀತಿ ಅಡೆ ತಡೆಗಳನ್ನ ಮಾಡಬಾರದೆಂದು ಸಿಸಿಐ ಆದೇಶ ಹೊರಡಿಸಿದೆ. ಹಾಗೆಯೇ ಸತ್ಯದೇವ್ ಐಪಿಎಸ್ ಚಿತ್ರ ಬಿಡುಗಡೆಗೆ ಆದ ತೊಡಕುಗಳ ಬಗ್ಗೆ ತನಿಖೆ ನಡೆಸುವಂತೆ ಡಿಜಿ (ಇನ್ವೆಸ್ಟಿಗೇಷನ್) ಅವರಿಗೆ ಸಿಸಿಐ ಆದೇಶ ಹೊರಡಿಸಿತ್ತು.