Tag: dhruva sarja

  • ‘ಕೇಡಿ’ ರಿಲೀಸ್ ಗೂ ಮುನ್ನ ‘ಕೇಡಿ 2’ ಚಿತ್ರದ ಕೆಲಸದಲ್ಲಿ ಪ್ರೇಮ್ ಬ್ಯುಸಿ

    ‘ಕೇಡಿ’ ರಿಲೀಸ್ ಗೂ ಮುನ್ನ ‘ಕೇಡಿ 2’ ಚಿತ್ರದ ಕೆಲಸದಲ್ಲಿ ಪ್ರೇಮ್ ಬ್ಯುಸಿ

    ಧ್ರುವ ಸರ್ಜಾ (Dhruva Sarja) ಮತ್ತು ಪ್ರೇಮ್ (Jogi Prem) ಕಾಂಬಿನೇಷನ್ ಕೇಡಿ (KD) ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ ಕೇಡಿ 2 ಸಿನಿಮಾದ ಕೆಲಸದಲ್ಲಿ ನಿರ್ದೇಶಕ ಪ್ರೇಮ್ ಬ್ಯುಸಿಯಾಗಿದ್ದಾರಂತೆ. ಕೇಡಿ 2 ಚಿತ್ರದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳನ್ನು ಪ್ರೇಮ್ ಮಾಡುತ್ತಿದ್ದಾರಂತೆ.

    ಈ ನಡುವೆ ಧ್ರುವ ಸರ್ಜಾ ಅವರ ಮತ್ತೊಂದು ಚಿತ್ರದ ಬಗ್ಗೆಯೂ ಚರ್ಚೆ ಶುರುವಾಗಿದೆ. ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ.

    ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಮಾರ್ಟಿನ್ ಕೆಲಸದ ಬಗ್ಗೆ ಚಿತ್ರತಂಡವೇ ಮಾಹಿತಿ ನೀಡಬೇಕಿದೆ.

    ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸಿದ್ದಾರೆ.

  • ಭಾರೀ ಮೊತ್ತಕ್ಕೆ ಸೇಲ್ ಆಯಿತು ‘ಮಾರ್ಟಿನ್’ ಚಿತ್ರದ ಆಡಿಯೋ

    ಭಾರೀ ಮೊತ್ತಕ್ಕೆ ಸೇಲ್ ಆಯಿತು ‘ಮಾರ್ಟಿನ್’ ಚಿತ್ರದ ಆಡಿಯೋ

    ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ಮಾರ್ಟಿನ್ ಪ್ಯಾನ್ ಇಂಡಿಯಾ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ (ಒಂಭತ್ತು ಕೋಟಿ ರೂಪಾಯಿ) ಮಾರಾಟವಾಗಿದೆ. ಜನಪ್ರಿಯ ಆಡಿಯೋ ಸಂಸ್ಥೆಯಾದ ‘ಸರೆಗಮ’,  ಮಾರ್ಟಿನ್ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.

    ನನಗೆ ತಿಳಿದ ಇಷ್ಟು ದೊಡ್ಡ ಮೊತ್ತಕ್ಕೆ ಯಾವುದೇ ಚಿತ್ರದ ಆಡಿಯೋ ಹಕ್ಕು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿಲ್ಲ ನಮ್ಮ ಚಿತ್ರದ ಆಡಿಯೋ ರೈಟ್ಸ್ ಈ ಬಾರಿ ಮೊತ್ತಕ್ಕೆ ಮಾರಾಟವಾಗಿರುವುದು ತುಂಬಾ ಖುಷಿಯಾಗಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ ಎಂದು ನಿರ್ಮಾಪಕ  ಉದಯ್ ಕೆ ಮೆಹ್ತಾ ತಿಳಿಸಿದ್ದಾರೆ.

    ಎ.ಪಿ.ಅರ್ಜುನ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್ ನಲ್ಲಿ ಮೂಡಿಬರಿತ್ತಿರುವ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.                        ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಮಾರ್ಟಿನ್ ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್,  ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಮುಂತಾದವರಿದ್ದಾರೆ.

  • ‘ಕೆಡಿ’ ಜೊತೆ ಒಂದಾಗ್ತಾರಾ ವಿಜಯ್ ಸೇತುಪತಿ

    ‘ಕೆಡಿ’ ಜೊತೆ ಒಂದಾಗ್ತಾರಾ ವಿಜಯ್ ಸೇತುಪತಿ

    ಮೊನ್ನೆಯಷ್ಟೇ ಕೆಡಿ ಸಿನಿಮಾದ ಶೂಟಿಂಗ್ ಮುಕ್ತಾಯವಾದ ಸುದ್ದಿಯನ್ನು ನಿರ್ದೇಶಕ ಪ್ರೇಮ್ ಬಹಿರಂಗ ಪಡಿಸಿದ್ದರು. ಇದೀಗ ಇದೇ ಸಿನಿಮಾದ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು, ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಈ ಸಿನಿಮಾದಲ್ಲಿ ನಟಿಸಲಿದ್ದಾರಂತೆ. ಕೆಡಿ ಸಿನಿಮಾ ಎರಡು ಭಾಗವಾಗಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಸೇತುಪತಿ ಕಾಣಿಸಿಕೊಂಡರೆ, ಎರಡನೇ ಭಾಗದಲ್ಲಿ ಹೆಚ್ಚು ಸ್ಕ್ರೀನ್ ಸ್ಪೆಸ್ ಹೊಂದಲಿದ್ದಾರಂತೆ.

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ.

    ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಮಾರ್ಟಿನ್ ಕೆಲಸದ ಬಗ್ಗೆ ಚಿತ್ರತಂಡವೇ ಮಾಹಿತಿ ನೀಡಬೇಕಿದೆ.

    ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ. ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸಿದ್ದಾರೆ.

  • ‘ಲೈಫ್ ಟುಡೇ’ ಮುಹೂರ್ತದ ಸಂಭ್ರಮ- ಚಿತ್ರತಂಡಕ್ಕೆ ಧ್ರುವ ಸರ್ಜಾ ಸಾಥ್

    ‘ಲೈಫ್ ಟುಡೇ’ ಮುಹೂರ್ತದ ಸಂಭ್ರಮ- ಚಿತ್ರತಂಡಕ್ಕೆ ಧ್ರುವ ಸರ್ಜಾ ಸಾಥ್

    ರುವುದೆಲ್ಲವ ಬಿಟ್ಟು ಕಥೆ ಹೇಳಿ ಗೆದ್ದಿದ್ದ ಕಾಂತ ಕನ್ನಲ್ಲಿ ಈಗ ಮತ್ತೊಂದು ಫ್ರೆಶ್ ಕಂಟೆಂಟ್ ಮೂಲಕ ಪ್ರೇಕ್ಷಕ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ‘ಲೈಫ್ ಟುಡೇʼ (Life Today) ಮುಹೂರ್ತ ನೆರವೇರಿದೆ. ನಿರ್ದೇಶಕ ಮಹೇಂದರ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಶಸ್ ತಿಳಿಸಿದರು.


    ಬಳಿಕ ಮಾಧ್ಯಮದವರೊಂದಿಗೆ ಧ್ರುವ ಸರ್ಜಾ (Dhruva Sarja) ಮಾತನಾಡಿ, ಟೈಟಲ್ ಸಿನಿಮಾ ನೋಡಬೇಕು ಎಂಬ ನಿರೀಕ್ಷೆ ಹುಟ್ಟಿಸುತ್ತದೆ. ನಿರ್ದೇಶಕರು ಅತ್ತಿಯವರ ಇರುವುದೆಲ್ಲವನ್ನು ಬಿಟ್ಟು ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಆ ಚಿತ್ರ ಚೆನ್ನಾಗಿತ್ತು. ಈಗ ಲೈಫ್ ಟುಡೇ ಮಾಡ್ತಿದ್ದಾರೆ. ಸಿನಿಮಾದಲ್ಲಿ ಹೊಸಬರು ಇದ್ದಾರೆ. ಹಳೆಬರು ಇದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. ಇದನ್ನೂ ಓದಿ:ಮಗು ಬಗ್ಗೆ ಸುಳಿವು ಕೊಟ್ಟ ದೀಪಿಕಾ ಪಡುಕೋಣೆ

    ನಿರ್ದೇಶಕ ಕಾಂತ ಕನ್ನಲ್ಲಿ ಮಾತನಾಡಿ, ಇರುವುದೆಲ್ಲವ ಬಿಟ್ಟು ಸಿನಿಮಾಗೆ ನೀವು ತೋರಿಸಿದ ಪ್ರೀತಿ, ಪ್ರೋತ್ಸಾಹ ಹಾಗೂ ಸಹಕಾರವನ್ನು ಎಂದು ಮರೆಯಲಾಗುವುದಿಲ್ಲ. ಆ ಸಹಕಾರವೇ ನನ್ನ ಇನ್ನೊಂದು ಸಿನಿಮಾ ಮಾಡಲು ವೇದಿಕೆ ಸೃಷ್ಟಿಸಿದೆ. ʻಲೈಫ್ ಟುಡೇ’ ಸಿನಿಮಾಗೆ ಬೆಂಬಲ ಕೊಡಲು ಆಗಮಿಸಿರುವ ಧ್ರುವ, ಶ್ರೀಧರ್, ಮಹೇಂದರ್ ಧನ್ಯವಾದ ಎಂದು ತಿಳಿಸಿದರು.

    ನಾಯಕ ಕಿರಣ್ ಆನಂದ್ ಮಾತನಾಡಿ, ನನ್ನ ಮೊದಲ ಸಿನಿಮಾ ಕನ್ನಲ್ಲಿ ಸರ್ ಜೊತೆ ಕೆಲಸ ಮಾಡಲು ಎಕ್ಸೈಟ್ ಆಗಿದ್ದಾರೆ. ನಮ್ಮ ಡಿಒಪಿ ನನ್ನ ಅಣ್ಣನ ತರ ಶ್ರೀಧರ್ ಸರ್ ನಮ್ಮ ಸಿನಿಮಾಗೆ ಮ್ಯೂಸಿಕ್ ಮಾಡ್ತಾ ಇರೋದು ನಮಗೆ ಅದೃಷ್ಟ. ನಾಯಕಿ ಲೇಖಾ ಅವರು ಅವರಿಂದ ಕಲಿಯುವುದು ತುಂಬಾ ಇದೆ. ನಿರ್ಮಾಪಕರು ನನಗೆ ಅಣ್ಣನಿಗಿಂತ ಹೆಚ್ಚು ಎಂದರು.

    ನಿರ್ದೇಶಕ ಮಹೇಂದರ್ ಮಾತನಾಡಿ, ‘ಲೈಫ್ ಟುಡೇ’ (Life Today) ಚಿತ್ರದ ಟೈಟಲ್ ನ್ನು ಧ್ರುವ ಸರ್ಜಾ ಪ್ರೇಕ್ಷಕರಿಗೆ ಅರ್ಪಿಸಿದ್ದಾರೆ. ಯುವ ತಂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದೆ. ತೆರೆಹಿಂದೆ ಇರುವವರೆಲ್ಲ ನನ್ನ ಅಚ್ಚುಮೆಚ್ಚಿನ ತಂಡ. ಶಿಷ್ಯಂದಿರೇ ಅನ್ನಬಹುದು. ಕಲೆ ಎನ್ನುವುದು ಎಲ್ಲರನ್ನೂ ಕೈಬೀಸಿ ಕರೆಯುತ್ತದೆ.ಎಲ್ಲರನ್ನೂ ಅಪ್ಪಿಕೊಳ್ಳುತ್ತದೆ. ಇದು ಸತ್ಯವಾದ ಮಾತು. ಬಹಳಷ್ಟು ಹೊಸಬರು ಇದ್ದೀರಾ? ನಿಮ್ಮನ್ನು ಕಲೆ ಕೈಬೀಸಿ ಕರೆದಿದೆ. ಅದು ನಿಮ್ಮನ್ನೇ ಅಪ್ಪಿಕೊಳ್ಳಲಿ ಎಂದು ಹಾರೈಸಿದರು. ಇದನ್ನೂ ಓದಿ:ಮಗು ಬಗ್ಗೆ ಸುಳಿವು ಕೊಟ್ಟ ದೀಪಿಕಾ ಪಡುಕೋಣೆ

    ನಿರ್ದೇಶಕ ಶಶಾಂಕ್ ಮಾತನಾಡಿ, ʻಲೈಫ್ ಟುಡೇ’ ಟೈಟಲ್ ತುಂಬಾ ಟ್ರೆಂಡಿಯಾಗಿದೆ. ಸಿನಿಮಾಗೆ ಒಳ್ಳೆದಾಗಲಿ. ಇಂತಹ ಹೊಸಬರ ತಂಡಕ್ಕೆ ಧ್ರುವ ಸರ್ಜಾ ಪ್ರೋತ್ಸಾಹ ಕೊಟ್ಟಿದ್ದಾರೆ. ʻಲೈಫ್ ಟುಡೇ’ ಸಿನಿಮಾದಿಂದ ಎಲ್ಲರ ಲೈಫ್ ನಲ್ಲಿಯೂ ಗೋಲ್ಡನ್ ಡೇಸ್ ಬರಲಿದೆ ಎಂದು ಹಾರೈಸುತ್ತೇನೆ ಎಂದರು.

    ‘ಲೈಫ್ ಟುಡೇ’ (Love Today) ಲವ್ ಫ್ಯಾಮಿಲಿ ಕಥಾಹಂದರ ಹೊಂದಿದ್ದು, ಈ ಚಿತ್ರದ ಮೂಲಕ ಕಿರಣ್ ಆನಂದ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದು, ಲೇಖಾ ಚಂದ್ರ ನಾಯಕಿಯಾಗಿ ನಟಿಸುತ್ತಿದ್ದಾರೆ. ಜನವರಿ ತಿಂಗಳಾಂತ್ಯಕ್ಕೆ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದ್ದು, ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ‘ಲೈಫ್ ಟುಡೇ’ ಸಿನಿಮಾಗೆ ಶ್ರೀಧರ್ ವಿ ಸಂಭ್ರಮ ಸಂಗೀತ ನಿರ್ದೇಶನವಿದ್ದು, ಸತೀಶ್ ಕುಮಾರ್ ಕ್ಯಾಮೆರಾ ಹಿಡಿಯಲಿದ್ದಾರೆ. ಮೇಘನಾ ಪ್ರೊಡಕ್ಷನ್ ಮೇಘನಾ ಪ್ರದೀಪ್ ‘ಲೈಫ್ ಟುಡೇ’ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

  • ಶೂಟಿಂಗ್ ಮುಗಿಸಿದ ‘ಕೆಡಿ’: ‘ಮಾರ್ಟಿನ್’ ಏನಾಯಿತು ಅಂತಿದ್ದಾರೆ ಧ್ರುವ ಫ್ಯಾನ್ಸ್

    ಶೂಟಿಂಗ್ ಮುಗಿಸಿದ ‘ಕೆಡಿ’: ‘ಮಾರ್ಟಿನ್’ ಏನಾಯಿತು ಅಂತಿದ್ದಾರೆ ಧ್ರುವ ಫ್ಯಾನ್ಸ್

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ.

    ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ. ಮಾರ್ಟಿನ್ ಕೆಲಸದ ಬಗ್ಗೆ ಚಿತ್ರತಂಡವೇ ಮಾಹಿತಿ ನೀಡಬೇಕಿದೆ.

    ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸಿದ್ದಾರೆ.

  • ‘ಕೆಡಿ’ಗಾಗಿ ಮತ್ತೆ ಕನ್ನಡಕ್ಕೆ ಬಂದ ರಾಮ-ಲಕ್ಷ್ಮಣ್

    ‘ಕೆಡಿ’ಗಾಗಿ ಮತ್ತೆ ಕನ್ನಡಕ್ಕೆ ಬಂದ ರಾಮ-ಲಕ್ಷ್ಮಣ್

    ಕ್ಷಿಣ ಭಾರತದ ಖ್ಯಾತ ಸ್ಟಂಟ್ ಕೊರಿಯೋಗ್ರಾಫರ್ ರಾಮ-ಲಕ್ಷ್ಮಣ (Rama-Laxman) ಜೋಡಿ ಮತ್ತೆ ಕನ್ನಡ ಚಿತ್ರವೊಂದಕ್ಕೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡುತ್ತಿದೆ. ಧ್ರುವ ಸರ್ಜಾ ನಟನೆ, ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿರುವ ಕೆಡಿ (KD) ಸಿನಿಮಾದ ಸಾಹದ ದೃಶ್ಯವೊಂದಕ್ಕೆ ಈ ಜೋಡಿ ಸ್ಟಂಟ್ ಕೊರಿಯೋಗ್ರಫಿ ಮಾಡುತ್ತಿದೆ. ಈಗಾಗಲೇ ಚಿತ್ರೀಕರಣದಲ್ಲೂ ಇವರ ತೊಡಗಿಕೊಂಡಿದ್ದಾರೆ.

    ಇದೇ ತಂಡದಿಂದ ಮತ್ತೊಂದು ತಾಜಾ ಸುದ್ದಿ ಬಂದಿದ್ದು, ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಅಣ್ಣನಾಗಿ ರಮೇಶ್ ಅರವಿಂದ್ ನಟಿಸಲಿದ್ದಾರೆ. ಸದ್ಯದಲ್ಲೇ ತಮ್ಮ ಭಾಗದ ಚಿತ್ರೀಕರಣದಲ್ಲೂ ಅವರು ಭಾಗಿಯಾಗಲಿದ್ದಾರೆ. ತಾರಾಗಣದ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದ್ದು, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ ಹೀಗೆ ಹೆಸರಾಂತ ಕಲಾವಿದರೇ ತಾರಾಗಣದಲ್ಲಿದ್ದಾರೆ.

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

  • ಗುಂಡನಿಗೆ ಸಾಥ್ ನೀಡಿದ ಧ್ರುವ ಸರ್ಜಾ: ಟೈಟಲ್ ಟೀಸರ್ ರಿಲೀಸ್

    ಗುಂಡನಿಗೆ ಸಾಥ್ ನೀಡಿದ ಧ್ರುವ ಸರ್ಜಾ: ಟೈಟಲ್ ಟೀಸರ್ ರಿಲೀಸ್

    ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ (Naanu Mattu Gunda 2) ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘು ಹಾಸನ್ (Raghu Haasan) ಆಕ್ಷನ್ ಕಟ್ ಹೇಳಿದ್ದರು.   ಈಗ ಅದರ  ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ-2’ ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ  ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ.  ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದ್ದು, ಬುಧವಾರ ಸಂಜೆ ಈ ಚಿತ್ರದ  ಟೈಟಲ್ ಟೀಸರನ್ನು (Title Teaser) ನಟ ಧ್ರುವಸರ್ಜಾ (Dhruva Sarja) ಬಿಡುಗಡೆ ಮಾಡಿದರು.

    ಚಿತ್ರದ  ನಿರ್ದೇಶಕ ಹಾಗೂ ನಿರ್ಮಾಪಕ ರಘು ಹಾಸನ್ ಮಾತನಾಡುತ್ತ  ಈ ಚಿತ್ರದಲ್ಲಿ ಸಿಂಬನ ಮಗ ನಟಿಸುತ್ತಿದ್ದಾನೆ.  ಸಿಂಬು ನಾಲ್ಕು ದಿನವಷ್ಟೇ  ಶೂಟಿಂಗ್ ನಲ್ಲಿ ಭಾಗವಹಿಸಿ ನಿಧನ ಹೊಂದಿದ. ಈಗ ಅವನ ಮಗ ಸಿಂಬ ನಟಿಸುತ್ತಿದ್ದಾನೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಸಿನಿಮಾ ಮುಂದುವರೆಯಲಿದೆ. ಮೊದಲಭಾಗ ಮಾಡುವಾಗಲೇ ೨ರ ಕಥೆ ರೆಡಿ ಮಾಡಿಕೊಂಡಿದ್ದೆ. ಸೋಷಿಯಲ್  ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಈಗಾಗಲೇ ಶಿವಮೊಗ್ಗ, ತೀರ್ಥಹಳ್ಳಿ, ಬಾಳೆಹೊನ್ನೂರು  ಸುತ್ತಮುತ್ತ 50 ದಿನಗಳ  ಶೂಟಿಂಗ್ ನಡೆಸಲಾಗಿದ್ದು, ಊಟಿ ಭಾಗದ‌ 20 ದಿನದ ಚಿತ್ರೀಕರಣವಷ್ಟೇ ಬಾಕಿಯಿದೆ.  ನಾನು ಪಾತ್ರವನ್ನು ಸದ್ಯದಲ್ಲೇ ರಿವೀಲ್ ಮಾಡುತ್ತೇವೆ.

    ಕಳೆದಬಾರಿ ಫಂಡಿಂಗ್ ಕೊರತೆಯಿಂದ ಹೆಚ್ಚು ಪ್ರಚಾರ ಮಾಡಲಾಗಿರಲಿಲ್ಲ, ಈಗ ಆರಂಭದಿಂದಲೇ ಪ್ರೊಮೋಷನ್  ಮಾಡುತ್ತಿದ್ದೇವೆ ಎಂದು ಹೇಳಿದರು. ನಂತರ ಧ್ರುವ ಸರ್ಜ ಮಾತನಾಡಿ ನಾನು ಮತ್ತು ಗುಂಡ ನನಗೆ ಮತ್ತು ನನ್ನ ಪತ್ನಿಗೆ ತುಂಬಾ ಇಷ್ಟವಾಗಿತ್ತು. ಅದರ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಈ ಟೈಟಲ್ ಟೀಸರ್ ತುಂಬಾ ಚನ್ನಾಗಿ ಬಂದಿದೆ. ಯುವ ಪ್ರತಿಭೆಗಳಿಗೆ ನಾವೆಲ್ಲ ಪ್ರೋತ್ಸಾಹ ನೀಡಬೇಕು. ಅಂತವರು ಬೆಳೆಯುತ್ತಾರೆ ಎಂದು ಹೇಳಿದರು.

    ಸಂಭಾಷಣೆ ಸಾಹಿತ್ಯ ಬರೆದ ರೋಹಿತ್ ರಮನ್ ಮಾತನಾಡಿ  ಮೊದಲ ಭಾಗದಲ್ಲೂ ನಾನೇ ಸಾಹಿತ್ಯ ಬರೆದಿದ್ದೆ. ನಾಯಿ ಇಟ್ಟುಕೊಂಡು ಸಿನಿಮಾ ಮಾಡೋದು ದೊಡ್ಡ ಚಾಲೆಂಜ್, ಅಂತಾದ್ರಲ್ಲಿ ರಘು ಎರಡನೇ ಭಾಗವನ್ನೂ ಮಾಡ್ತಿದ್ದಾರೆ ಎಂದರು. ಹಿನ್ನೆಲೆ ಸಂಗೀತ ನೀಡಿದ  ರುತ್ವಿಕ್ ಮುರಳೀಧರ್ ಮಾತನಾಡಿ  ಟೀಸರ್ ಎಲ್ಲರಿಗೂ ಇಷ್ಟವಾಗುತ್ತೆ ಎಂದರು.  ಛಾಯಾಗ್ರಹಣ ನಿರ್ವಹಿಸಿದ  ತನ್ವಿಕ್ ಮಾತನಾಡಿ  ಹಿಂದೆ ದಿಲ್ ಮಾರ್ ಚಿತ್ರಕ್ಕೆ ಕ್ಯಾಮೆರಾ ಮಾಡಿದ್ದೆ. ತಕ್ಷಣ ಒಪ್ಪಿಕೊಂಡು ಮಾಡಿದ ಚಿತ್ರವಿದು ಎಂದರು. ಈ ಚಿತ್ರದಲ್ಲಿ ಸಿಂಬು ಜೊತೆ ಬಂಟಿ ಎಂಬ ನಾಯಿಯೂ ಅಭಿನಯಿಸಿದೆ. ಸಿಂಬು ಈಗಾಗಲೇ ಅವನು ಮತ್ತು ಶ್ರಾವಣಿ ಎಂಬ ಧಾರಾವಾಹಿಯಲ್ಲೂ ನಟಿಸುತ್ತಿದೆ.

     

    ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ  ನಾನು ಮತ್ತು ಗುಂಡ-೨  ಚಿತ್ರಕ್ಕೆ ಆರ್.ಪಿ.ಪಟ್ನಾಯಕ್  ಅವರ ಸಂಗೀತ ಸಂಯೋಜನೆ,  ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನ, ನವೀನ್ ಅವರ ಸೌಂಡ್ ಡಿಸೈನ್ ಇದೆ

  • ‘ಕೆಡಿ’ ಚಿತ್ರೀಕರಣಕ್ಕಾಗಿ ಮೈಸೂರಿಗೆ ಬಂದಿಳಿದ ಶಿಲ್ಪಾ ಶೆಟ್ಟಿ

    ‘ಕೆಡಿ’ ಚಿತ್ರೀಕರಣಕ್ಕಾಗಿ ಮೈಸೂರಿಗೆ ಬಂದಿಳಿದ ಶಿಲ್ಪಾ ಶೆಟ್ಟಿ

    ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ (Mysore) ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು ಹಂಚಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಧ್ರುವ ಸರ್ಜಾ ಹುಟ್ಟುಹಬ್ಬಕ್ಕಾಗಿ (Birthday) ‘ಕೆಡಿ’ ಸಿನಿಮಾ ತಂಡ ಚಿತ್ರದ ಪೋಸ್ಟರ್ (Poster) ರಿಲೀಸ್ ಮಾಡುವ ಮೂಲಕ ಶುಭಾಶಯ ತಿಳಿಸಿತ್ತು. ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಧ್ರುವ ಹೊಸ ರೀತಿಯ ಪಾತ್ರವನ್ನು ಮಾಡಿದ್ದಾರೆ. ಆ ಪಾತ್ರದ ಹಿನ್ನೆಲೆಯಾಗಿಟ್ಟುಕೊಂಡು ಈ ಪೋಸ್ಟರ್ ಸಿದ್ಧ ಮಾಡಿತ್ತು ಚಿತ್ರತಂಡ.

    ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ `ಕೆಡಿ’ (Kd Film) ಸಿನಿಮಾದ ಫೋಟೋವೊಂದು ಈ ಹಿಂದೆ ಲೀಕ್ ಆಗಿತ್ತು. ಮೈಸೂರಿನಲ್ಲಿ ಚಿತ್ರದ ಶೂಟಿಂಗ್ ನಡೆದಾಗ, ಆ ಭಾಗದ ಶೂಟಿಂಗ್‌ನಲ್ಲಿ ಧ್ರುವ ಸರ್ಜಾ ರೆಟ್ರೋ ಲುಕ್ (Retro Look) ನಲ್ಲಿ ಕಂಡಿದ್ದರು. ಅಭಿಮಾನಿಗಳ ಮಧ್ಯ ಧ್ರುವ ಕಾಣಿಸಿಕೊಂಡಿರುವ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರೆಟ್ರೋ ಲುಕ್‌ನಲ್ಲಿ ಧ್ರುವ ಸಖತ್ ಆಗಿ ಕಂಡಿದ್ದರು.

    ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ನಾನಾ ಕಾರಣಗಳಿಂದಾಗಿ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ರವಿಚಂದ್ರನ್ (Ravichandran) ಕೂಡ ಇದ್ದಾರೆ. ಮೊನ್ನೆಯಷ್ಟೇ ರವಿಚಂದ್ರನ್ ಅವರ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿತ್ತು.

    ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ (Reeshma Nanaiah) ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ ಪ್ರೇಮ್. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್‌, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt) ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ.

     

    1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.

  • ಥೈಲ್ಯಾಂಡ್‌ಗೆ ಧ್ರುವ ಸರ್ಜಾ- ‘ಮಾರ್ಟಿನ್’ ಬಿಗ್ ಅಪ್‌ಡೇಟ್

    ಥೈಲ್ಯಾಂಡ್‌ಗೆ ಧ್ರುವ ಸರ್ಜಾ- ‘ಮಾರ್ಟಿನ್’ ಬಿಗ್ ಅಪ್‌ಡೇಟ್

    ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ವಿದೇಶಕ್ಕೆ ಹಾರಲು ರೆಡಿಯಾಗಿದ್ದಾರೆ. ವಿಶ್ವದ ದುಬಾರಿ ಕಾರುಗಳಲ್ಲಿ ಧ್ರುವ ಸವಾರಿ ಮಾಡಲು ಅಣಿಯಾಗಿದ್ದಾರೆ. 500 ಮಾಡೆಲ್ಸ್, ಸೂಪರ್ ಕಾರು, ಸ್ಪೀಡ್ ಬೋಟ್, ಚಾಪರ್ ಕತೆಯ ಬಗ್ಗೆ ಇಲ್ಲಿದೆ ಮಾಹಿತಿ.

    ಧ್ರುವ ಸರ್ಜಾ ಲಗೇಜ್ ಪ್ಯಾಕ್ ಮಾಡಿ ರೆಡಿಯಾಗಿದ್ದಾರೆ. ‘ಮಾರ್ಟಿನ್ (Martin) ಫೈನಲ್ ಶೂಟ್ ಮಾಡಲು ರೆಡಿಯಾಗ್ತಿದ್ದಾರೆ. ಮಾರ್ಟಿನ್ ಸಿನಿಮಾದ ಒಂದು ಹಾಡಿಗೆ ಕೋಟಿ ಕೋಟಿ ಬಂಡವಾಳ ಹಾಕ್ತಿದ್ದಾರೆ ನಿರ್ಮಾಪಕ ಉದಯ್ ಮೆಹ್ತಾ. ಮಲೇಶಿಯಾದಲ್ಲಿ ಮಾರ್ಟಿನ್ ಇಂಟ್ರೊಡಕ್ಷನ್ ಸಾಂಗ್ ಶೂಟ್ ಮಾಡಲು ಪ್ಲ್ಯಾನ್ ಆಗಿದೆ. 500 ಜನ ಟಾಪ್ ಮಾಡೆಲ್ಸ್ ಈ ಹಾಡಿನಲ್ಲಿ ಸೊಂಟ ಬಳುಕಿಸಲಿದ್ದಾರೆ. ದುನಿಯಾದ ಕಾಸ್ಟ್ಲಿ ಕಾರುಗಳನ್ನ ಈ ಸಾಂಗ್ ಶೂಟ್‌ನಲ್ಲಿ ಬಳಸಲಾಗ್ತಿದೆ. ಇದನ್ನೂ ಓದಿ:ಚಡ್ಡಿ ಚಿಕ್ಕಿ ಸೋನು ಗೌಡ: ಏನ್ ಹಾವಳಿ ಗುರು ಎಂದಿದ್ದಾರೆ ಫ್ಯಾನ್ಸ್

    Dhruva Sarja

    ಇಷ್ಟೂ ಕಲರ್‌ಫುಲ್ ವಿಶ್ಯುವಲ್ಸ್ ಸೆರೆ ಹಿಡಿಯಲು ಚಾಪರ್ ಕೂಡ ಸಿದ್ದವಾಗಿದೆ. 7 ದಿನಗಳ ಶೂಟಿಂಗ್ ಪ್ಲ್ಯಾನ್ ಕೂಡ ಫೈನಲ್ ಆಗಿದೆ. ಸಾಂಗ್ ಜೊತೆಗೆ ಒಂದಿಷ್ಟು ಆ್ಯಕ್ಷನ್ ಸೀನ್‌ಗಳನ್ನ ಕೂಡ ಥೈಲ್ಯಾಂಡ್‌ನಲ್ಲಿ ಮಾರ್ಟಿನ್ ಟೀಮ್ ಶೂಟ್ ಮಾಡಲಿದೆ. ವಿದೇಶ ನೆಲದಲ್ಲಿ ಮಾರ್ಟಿನ್ ಆಟ ಶುರುವಾಗಲಿದೆ. ಧ್ರುವ ಪಕ್ಕಾ ಮಾಸ್ ಮಸಾಲ ಸಿನಿಮಾ ಕೊಡಲು ಬೆವರು ಹರಿಸ್ತಿದ್ದಾರೆ. ಕಷ್ಟಕ್ಕೆ ತಕ್ಕ ಬೆಲೆ ಸಿಗಲಿದೆ ಅಂತಿದೆ ಗಾಂಧಿನಗರ. ಮಾರ್ಟಿನ್ ಪಕ್ಕಾ ಹಬ್ಬದೂಟ ಅಂತಿದ್ದಾರೆ ಫ್ಯಾನ್ಸ್.

    ಎ.ಪಿ ಅರ್ಜುನ್ ನಿರ್ದೇಶನದ ‘ಮಾರ್ಟಿನ್’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ವೈಭವಿ ಶಾಂಡಿಲ್ಯ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಣ್ಣನ ಮಗನಿಗೆ ಡಾನ್ಸ್ ಹೇಳಿಕೊಟ್ಟ ಧ್ರುವ ಸರ್ಜಾ

    ಅಣ್ಣನ ಮಗನಿಗೆ ಡಾನ್ಸ್ ಹೇಳಿಕೊಟ್ಟ ಧ್ರುವ ಸರ್ಜಾ

    ಟ ಧ್ರುವ ಸರ್ಜಾ (Dhruva Sarja) ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ (Chiranjeevi Sarja) ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ (Rayan) ಕೂಡ ಚಿಕ್ಕಪ್ಪನ ಕಂಡರೆ ಎಲ್ಲಿಲ್ಲದ ಪ್ರೀತಿ. ಈ ಬಾರಿ ಚಿಕ್ಕಪ್ಪನ ಹುಟ್ಟು ಹಬಕ್ಕೆ ವಿಶೇಷ ವಿಡಿಯೋವೊಂದನ್ನು ತಾಯಿ ಮೇಘನಾ ಮೂಲಕ ಶೇರ್ ಮಾಡಿದ್ದಾನೆ ಪುಟಾಣಿ. ಈ ವಿಡಿಯೋದಲ್ಲಿ ರಾಯನ್ ಗೆ ಧ್ರುವ ಸರ್ಜಾ ಡಾನ್ಸ್ ಕಲಿಸುತ್ತಿದ್ದಾರೆ. ಅಲ್ಲದೇ ಎತ್ತಿ ಮಗುವನ್ನು ಧ್ರುವ ಮುದ್ದಾಡುತ್ತಾರೆ. ಈ ವಿಡಿಯೋವನ್ನು ಮೇಘನಾ ರಾಜ್ (Meghana Raj) ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ತಮ್ಮದೇ ಸಿನಿಮಾದ ಹಾಡಿನ ಹುಕ್ ಸ್ಟೇಪ್ ಅನ್ನು ರಾಯನ್ ಗೆ ಹೇಳಿಕೊಟ್ಟಿದ್ದಾರೆ ಧ್ರುವ ಸರ್ಜಾ. ಥೇಟ್ ಮಗುವಿನಂತೆಯೇ ಅವರು ಕುಣಿಸಿದ್ದಾರೆ. ಈ ವಿಡಿಯೋದಲ್ಲಿ ರಾಯನ್ ತಾತ, ನಟ ಸುಂದರ್ ರಾಜ್ ಕೂಡ ಇದ್ದಾರೆ. ಮೊಮ್ಮಗ ಡಾನ್ಸ್ ಕಂಡು ಅವರೂ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಧ್ರುವ ಅವರ ಹುಟ್ಟು ಹಬ್ಬಕ್ಕಾಗಿ ಹಂಚಿಕೊಂಡಿದ್ದಾರೆ ಮೇಘನಾ. ಈ ಮೂಲಕ ಚಿಕ್ಕಪ್ಪನಿಗೆ ಶುಭಾಶಯ ಹೇಳಿದ್ದಾನೆ ರಾಯನ್.

    ಅಗಲಿದ ನಟ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ರಾಜಮಾರ್ತಾಂಡ ನಿನ್ನೆಯಷ್ಟೇ ಬಿಡುಗಡೆ ಆಗಿದೆ. ಇದು ಚಿರು ಅವರ ಕೊನೆಯ ಸಿನಿಮಾವಾಗಿದ್ದರಿಂದ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆ ಮಾಡಲಾಗಿದೆ. ರಿಲೀಸ್ ಹಿನ್ನೆಲೆಯಲ್ಲಿ ಚಿತ್ರತಂಡವು ವಿಶೇಷ ಪೂಜೆಯನ್ನೂ ಸಲ್ಲಿಸಿದೆ. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ರಾಮ್ ನಾರಾಯಣ್, ವಿಶೇಷ ಸುದ್ದಿಯೊಂದನ್ನು ನೀಡಿದ್ದರು. ಚಿರು ಅವರ ಕೊನೆಯ ಸಿನಿಮಾದಲ್ಲಿ ಚಿರು ಪುತ್ರ ರಾಯನ್ ರಾಜ್ ಕೂಡ ಕಾಣಿಸಿಕೊಂಡಿದ್ದಾರೆ. ಸಿನಿಮಾ ರೆಡಿಯಾಗಿ ಒಂದು ವರ್ಷವೇ ಆಗಿದೆ. ರಾಯನ್ ರಾಜ್ ಹುಟ್ಟುವ ಮೊದಲೇ ಈ ಚಿತ್ರದ ಬಹುತೇಕ ಕೆಲಸಗಳು ಮುಗಿದಿದ್ದವು. ಹಾಗಾಗಿ ರಾಯನ್ ಯಾವ ರೀತಿಯಲ್ಲಿ ಎಂಟ್ರಿ ಕೊಡಲಿದ್ದಾರೆ ಎನ್ನುವುದು ಕುತೂಹಲ ಸಂಗತಿಯಾಗಿತ್ತು. ಅದಕ್ಕೀಗ ಸಿನಿಮಾದಲ್ಲಿ ಉತ್ತರ ಸಿಕ್ಕಿದೆ.

     

    ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ರಾಜ್ ಅವರ ಅನೇಕ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರತಿ ಫೋಟೋ ಬಂದಾಗಲೂ ಚಿರು ಅಭಿಮಾನಿಗಳು ಮತ್ತು ಮೇಘನಾ ರಾಜ್ ಅಭಿಮಾನಿಗಳು ಪ್ರೀತಿಯಿಂದ ಅವುಗಳನ್ನು ಬರಮಾಡಿಕೊಳ್ಳುತ್ತಾರೆ. ಈ ಬಾರಿ ಬಿಗ್ ಸ್ಕ್ರೀನ್ ನಲ್ಲೇ ರಾಯನ್ ರಾಜ್ ಅವರನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]