ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ ಎರಡು ವರ್ಷ. ಎರಡನೇ ವರ್ಷದ ಕಾರ್ಯವನ್ನು ಇಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸುವುದರ ಮೂಲಕ ನೆರವೇರಿಸಲಾಯಿತು. ಸರ್ಜಾ ಕುಟುಂಬದ ಅನೇಕ ಸದಸ್ಯರು ಮತ್ತು ಮೇಘನಾ ರಾಜ್ ಕುಟುಂಬದ ಸದಸ್ಯರು ಹಾಗೂ ಚಿರು ಅವರ ಆಪ್ತ ಸ್ನೇಹಿತರು ಮತ್ತು ಅಭಿಮಾನಿಗಳು ಕೂಡ ಇಂದು ಸಮಾಧಿಗೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚಿರು ಮಾವ ಅರ್ಜುನ್ ಸರ್ಜಾ ಅವರು ಚಿರು ಜೊತೆಗಿನ ಒಡನಾಟವನ್ನು ಹಂಚಿಕೊಂಡರು. ಚಿರುನನ್ನು ನಾನೇ ಸ್ಕೂಲ್‌ಗೆ ಬಿಟ್ಟು ಬರುತ್ತಿದ್ದೆ. ಆಕ್ಟಿಂಗ್ ಸ್ಕೂಲ್‌ಗೆ ಕಳುಹಿಸಿದ್ದೆ. ಅಲ್ಲದೇ ಅವರು ಸಿಗರೇಟ್ ಸೇದಿದಾಗ ಬೆಲ್ಟ್‌ನಲ್ಲಿ ಹೊಡೆದಿದ್ದೆ. ಅಷ್ಟರ ಮಟ್ಟಿಗೆ ನಮ್ಮ ಆತ್ಮೀಯತೆ ಇತ್ತು. ಈಗ ಅವನು ನಮ್ಮ ಜೊತೆ ಇಲ್ಲ ಅನ್ನುವುದನ್ನು ನೆನಪಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂದು ಅವರು ಮಾತನಾಡಿದರು. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
ಚಿರು ಎಲ್ಲವನ್ನ ನೋಡುತ್ತಿರುತ್ತಾನೆ. ಕರುನಾಡ ಜನತೆ, ಚಿರು ಫ್ಯಾನ್ಸ್ ಅವನನ್ನು ಬಹಳ ಮಿಸ್ ಮಾಡಿಕೊಳ್ತಿದ್ದಾರೆ. ನಾನು ಚಿರು ನೆನಸಿಕೊಳ್ಳದ ದಿನವೇ ಇಲ್ಲ. ಯಾವ ಕೆಲಸ ಮಾಡಿದ್ರು ಚಿರು ಬಹಳ ನೆನಪಾಗ್ತಾನೆ. ನಿನ್ನ ನೆನಪು ಯಾವಗಲೂ ಮನದಲ್ಲಿ ಇರುತ್ತೆ. ಚಿರು ವಿ ಲವ್ ಯು ಮಿಸ್ ಯು. ಚಿರು ಆತ್ಮಕ್ಕೆ ಶಾಂತಿ ಸಿಗಲಿ ಅಂತ ದೇವರಲ್ಲಿ ಬೇಡ್ತೀವಿ. ಎಲ್ಲರಿಗೂ ಸರ್ಜಾ ಫ್ಯಾಮಿಲಿಯ ಧನ್ಯವಾದ ಹೇಳ್ತೀವಿ ಎಂದರು ಅರ್ಜುನ್ ಸರ್ಜಾ.
ಕನ್ನಡದ ಹೆಸರಾಂತ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ ಎರಡು ವರ್ಷ. ಚಿರು ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳು ಇಂದು ಧ್ರುವ ಫಾರ್ಮ್ ಹೌಸ್‌ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸಿ, ಎರಡನೇ ವರ್ಷದ ಕಾರ್ಯ ಮುಗಿಸಿದರು. ಕನಕಪುರ ರಸ್ತೆಯಲ್ಲಿರುವ ನೆಲಗೂಳಿಯಲ್ಲಿರೋ ಫಾರ್ಮ್ ಹೌಸ್‌ಗೆ ಅರ್ಜುನ್ ಸರ್ಜಾ, ಧ್ರುವ ಸರ್ಜಾ, ಮೇಘನಾ ರಾಜ್, ಸುಂದರ್ ರಾಜ್, ಚಿರು ಪುತ್ರ ರಾಯನ್ ಸೇರಿದಂತೆ ಕುಟುಂಬದ ಹಲವು ಸದಸ್ಯರು ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅರ್ಜುನ್ ಸರ್ಜಾ, ‘ ಚಿರು ಕಳೆದುಕೊಂಡು ಹೇಗೆ ಎರಡು ವರ್ಷ ಆಯ್ತು ಅಂತ ಗೊತ್ತಾಗ್ತಿಲ್ಲ. ಅವನು ಇಲ್ಲ ಅನ್ನುವ ಬಗ್ಗೆ ಏನು ಹೇಳ್ಬೇಕು ಅಂತಾನೂ ಗೊತ್ತಿಲ್ಲ. ಚಿರುನ ಎತ್ತಿ ಆಡಿಸಿದ್ದೆ, ಸ್ಕೂಲಿಗೆ ಕಳಿಸಿದ್ದೆ. ಆ್ಯಕ್ಟಿಂಗ್ ಕ್ಲಾಸ್‌ಗೆ ಕಳಿಸಿದ ನೆನಪು ಇನ್ನೂ ಹಾಗೆಯೇ ಇವೆ. ನನ್ನ ಅಣ್ಣನೇ ಚಿರು ಸಿನಿಮಾ ನಿರ್ದೇಶನ ಮಾಡಿದ್ದು, ನಾನು ಆ ಸಿನಿಮಾ ನಿರ್ಮಾಣ ಮಾಡಿ ವಾಯುಪುತ್ರ ಮೂಲಕ ಲಾಂಚ್ ಮಾಡಿದ್ವಿ. ಚಿರು ಅಗಲಿಕೆ ಮಾಸದ ಗಾಯ’ ಎಂದರು. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
ಚಿರು ಮಗನ ಕುರಿತಾಗಿ ಮಾತನಾಡುತ್ತಾ, “ಚಿರು ಮಗ ನಮಗೆ ನೆಮ್ಮದಿ ಕೊಡುತ್ತಿದ್ದಾನೆ. ಅವನು ಇಲ್ಲ ಅನ್ನುವ ಕೊರಗು ಸ್ವಲ್ಪ ಕಡಿಮೆ ಮಾಡಿದ್ದಾನೆ. ಚಿರುನನ್ನು ನಾವೇ ಲಾಂಚ್ ಮಾಡಿದ್ದೇವೆ. ಅವನ ಮಗನನ್ನು ನಾನೇ ಲಾಂಚ್ ಮಾಡುತ್ತೇನೆ’ ಎಂದು ಭಾವುಕರಾಗಿ ನುಡಿದರು.
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾರ್ಟಿನ್ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 30ಕ್ಕೆ ಸಿನಿಮಾ ರಿಲೀಸ್ ಮಾಡುವುದಾಗಿ ನಿರ್ದೇಶಕ ಎ.ಪಿ. ಅರ್ಜುನ್ ಏಪ್ರಿಲ್ 10 ರಂದೇ ಟೀಸರ್ ಮೂಲಕ ಹೇಳಿದ್ದರು. ಇದೀಗ ಅದೇ ದಿನದಂದೇ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್ ಆಗುತ್ತಿದೆ. ಅದು ಕೂಡ ನಿರೀಕ್ಷಿತ ಸಿನಿಮಾವಾಗಿರುವುದರಿಂದ ಒಂದು ರೀತಿ ಪೈಪೋಟಿ ನಡೆಯಲಿದೆ. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ
ಮಾರ್ಟಿನ್ ಎ.ಪಿ ಅರ್ಜುನ್ ಮತ್ತು ಧ್ರುವ ಕಾಂಬಿನೇಷನ್ ನ ಎರಡನೇ ಸಿನಿಮಾ. ಈಗಾಗಲೇ ಈ ಜೋಡಿ ಗೆದ್ದಿದೆ. ಅಲ್ಲದೇ, ಧ್ರುವ ಸರ್ಜಾ ಅವರು ಸಿನಿಮಾ ಮಾಡುವುದೇ ಕಡಿಮೆ. ಹಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಈ ಸಿನಿಮಾದಲ್ಲಿ ಅದ್ಭುತ ಆಕ್ಷನ್ ಸನ್ನಿವೇಶಗಳು ಇವೆಯಂತೆ. ಈ ಚಿತ್ರಕ್ಕಾಗಿ ಧ್ರುವ ಭರ್ಜರಿ ತಯಾರಿಯನ್ನೂ ಮಾಡಿಕೊಂಡಿದ್ದಾರಂತೆ. ಹೀಗಾಗಿ ಚಿತ್ರ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
ಕನ್ನಡ ಸಿನಿಮಾ ರಂಗದ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ರಿಷಭ್ ಶೆಟ್ಟಿ ಅವರದ್ದು. ವಿಭಿನ್ನ ಸಿನಿಮಾಗಳನ್ನು ಮಾಡುವುದರಿಂದ, ಇವರದ್ದೇ ಆದ ನೋಡುಗ ಬಳಗವಿದೆ. ಅಲ್ಲದೇ, ಕಾಂತಾರ ಸಿನಿಮಾದ ಟ್ರೈಲರ್ ಕೆಜಿಎಫ್ 2 ಸಿನಿಮಾ ರಿಲೀಸ್ ವೇಳೆ ಬಿಡುಗಡೆ ಆಗುತ್ತು. ಅದಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ಕೂಡ ಚೆನ್ನಾಗಿಯೇ ಮೂಡಿ ಬಂದಿದೆ ಎನ್ನಲಾಗುತ್ತಿದೆ. ಎರಡೂ ಸಿನಿಮಾಗಳಲ್ಲಿ ಪ್ರೇಕ್ಷಕ ಅತೀ ಹೆಚ್ಚು ಯಾವ ಚಿತ್ರಕ್ಕೆ ಕೈ ಹಿಡಿಯಲಿದ್ದಾನೆ ನೋಡಬೇಕು.
ಜೋಗಿ ಖ್ಯಾತಿಯ ಪ್ರೇಮ್ ಮತ್ತು ಹೆಬ್ಬಲಿ ಚಿತ್ರ ಖ್ಯಾತಿಯ ಕೃಷ್ಣ ಹೊಸ ಸಿನಿಮಾ ಮಾಡಲು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರೇಮ್ ಅವರು ಧ್ರುವ ಸರ್ಜಾಗಾಗಿ ಸಿನಿಮಾ ಮಾಡುತ್ತಿದ್ದರೆ, ಕೃಷ್ಣ ಅವರು ಅಭಿಷೇಕ್ ಅಂಬರೀಶ್ ಅವರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಇಬ್ಬರೂ ನಿರ್ದೇಶಕರು ತಮ್ಮ ಚಿತ್ರಕ್ಕೆ ಒಂದೇ ಟೈಟಲ್ ಅಂದುಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ
ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟಿಸಲಿರುವ ಹೊಸ ಚಿತ್ರದ ಮುಹೂರ್ತ ಕೆಲ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ನಡೆದಿದೆ. ಕೃಷ್ಣ ಅವರ ಚಿತ್ರ ಇನ್ನಷ್ಟೇ ಶುರುವಾಗಬೇಕಿದೆ. ಈ ಎರಡೂ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದರಂತೆ. ಆದರೆ, ಈ ಕಾಳಿ ಟೈಟಲ್ ಅಂತಿಮವಾಗಿ ಯಾರಿಗೆ ಸಿಗಲಿದೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಇದನ್ನೂ ಓದಿ: ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು
ಈಗಾಗಲೇ ತಮ್ಮ ಚಿತ್ರಕ್ಕೆ ಕಾಳಿ ಎಂದು ಟೈಟಲ್ ಇಟ್ಟಿರುವುದಾಗಿ ಆಪ್ತರ ಬಳಿ ಕೃಷ್ಣ ಅವರು ಹೇಳಿಕೊಂಡಿದ್ದಾರೆ. ಆದರೆ, ಅವರು ಅಧಿಕೃತವಾಗಿಯೂ ಈ ವಿಷಯವನ್ನೂ ಎಲ್ಲಿಯೂ ಹೇಳಿಕೊಂಡಿಲ್ಲ. ಮತ್ತು ಘೋಷಣೆ ಕೂಡ ಮಾಡಿಲ್ಲ. ಹಾಗಾಗಿ ಪ್ರೇಮ್ ಅವರಿಗೆ ಈ ಟೈಟಲ್ ಸಿಗಬಹುದಾ ಎನ್ನುವ ಪ್ರಶ್ನೆಗೂ ಸ್ಪಷ್ಟ ಉತ್ತರವಿಲ್ಲ. ಇದನ್ನೂ ಓದಿ: ಮುನಿಸು ಮರೆತು ಮತ್ತೆ ಒಂದಾದ್ರು ಕಿಯಾರಾ- ಸಿದ್ಧಾರ್ಥ್ ಮಲ್ಹೋತ್ರಾ
ಮೂಲಗಳ ಪ್ರಕಾರ ಈಗಾಗಲೇ ಕೃಷ್ಣ ಅವರ ಬಳಿಯೇ ಕಾಳಿ ಟೈಟಲ್ ಇದೆಯಂತೆ. ಪ್ರೇಮ್ ತಂಡವು ಈ ಟೈಟಲ್ ಅನ್ನು ಕೊಡುವಂತೆ ಮನವಿ ಮಾಡಿದರೂ, ಅದು ಸಾಧ್ಯವಾಗಿಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ. ಹಾಗಾಗಿ ಮೊದಲ ಬಾರಿಗೆ ಪ್ರೇಮ್ ಅವರಿಗೆ ತಾವು ಅಂದುಕೊಂಡ ಟೈಟಲ್ ಸಿಕ್ಕಿಲ್ಲ ಎನ್ನುವ ನೋವು ಇದೆಯಂತೆ. ಕೃಷ್ಣ ಅವರು ಬರೆದ ಕಥೆಗೆ ಬೇರೆ ಟೈಟಲ್ ಹೊಂದುತ್ತಿದ್ದರೆ, ಬದಲಾಯಿಸಬಹುದು ಎನ್ನುವ ನಿರೀಕ್ಷೆ ಪ್ರೇಮ್ ಅವರದ್ದು. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್
ಈ ಇಬ್ಬರೂ ನಿರ್ದೇಶಕರು ಕಾಳಿ ಟೈಟಲ್ ಕುರಿತಾಗಿ ಬಹಿರಂಗವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ. ಟೈಟಲ್ ಕೂಡ ಅನೌನ್ಸ್ ಮಾಡಿಲ್ಲ. ಹಾಗಾಗಿ ಕಾಳಿ ಯಾರಿಗೆ ಒಲಿಯಲಿದ್ದಾಳೆ ಎನ್ನುವ ಕುತೂಹಲವಂತೂ ಗಾಂಧಿನಗರದಲ್ಲಿ ಮೂಡಿದೆ. ಇಬ್ಬರೂ ಕೂತು ಯೋಚಿಸಿ, ಯಾರ ಚಿತ್ರಕ್ಕೆ ಕಾಳಿ ಟೈಟಲ್ ಹೊಂದಿಕೆ ಆಗುತ್ತದೆ ಎನ್ನುವ ತೀರ್ಮಾನಕ್ಕೆ ಬರಬಹುದು.
ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಮದುವೆಗೂ ಮುನ್ನ ಸ್ನೇಹಿತರು. ಶಾಲಾ ಕಾಲೇಜು ದಿನಗಳಿಂದಲೂ ಇವರ ಫ್ರೆಂಡ್ ಶಿಪ್ ಇತ್ತು. ಹಾಗಾಗಿ ಜೊತೆ ಜೊತೆಯಾಗಿಯೇ ಓಡಾಡಿಕೊಂಡಿದ್ದರು. ಅಕ್ಕ ಪಕ್ಕದ ಮನೆಯವರು ಇವರಾಗಿದ್ದರಿಂದ ಅದು ಸಹಜ ಎನ್ನುವಂತಿತ್ತು. ಪ್ರೀತಿಸಿ ಹಲವು ವರ್ಷಗಳ ನಂತರ ಧ್ರುವ ಮತ್ತು ಪ್ರೇರಣಾ ಮದುವೆಯಾದರು. ಮದುವೆಗೂ ಮುನ್ನ ಪತ್ನಿ ಪ್ರೇರಣಾ ಸ್ನೇಹಿತನಾಗಿದ್ದ ಧ್ರುವ ಅವರನ್ನು ಯಾರ ಸಿನಿಮಾಗೆ ಕರೆದುಕೊಂಡು ಹೋಗುತ್ತಿದ್ದರು ಎನ್ನುವುದನ್ನು ಸ್ವತಃ ಧ್ರುವ ಅವರ ಬಹಿರಂಗ ಪಡಿಸಿದ್ದಾರೆ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ
ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾಗೆ ನಟ ಶರಣ್ ಸಿನಿಮಾಗಳೆಂದರೆ ಬಲು ಇಷ್ಟವಂತೆ. ಪದೇ ಪದೇ ಶರಣ್ ಅವರ ಚಿತ್ರಗಳನ್ನು ನೋಡುತ್ತಲೇ ಇರುತ್ತಾರಂತೆ. ಇವರ ಚಿತ್ರಗಳು ರಿಲೀಸ್ ಆದಾಗ ‘ಶರಣ್ ಅವರ ಸಿನಿಮಾ ರಿಲೀಸ್ ಆಗಿದೆ, ಹೋಗೋಣ ಬಾ’ ಎಂದು ಕರೆದುಕೊಂಡು ಹೋಗುತ್ತಿದ್ದರಂತೆ. ಹಾಗಂತ ಶರಣ್ ಅವರ ಎದುರೇ ಧ್ರುವ ಸರ್ಜಾ ಹೇಳಿದರು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ
ಶರಣ್ ಅವರ ಹೊಸ ಸಿನಿಮಾ ಅವತಾರಪುರುಷ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಇವೆಂಟ್ ಗೆ ಧ್ರುವ ಸರ್ಜಾ ಅತಿಥಿಯಾಗಿ ಬಂದಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಧ್ರುವ, ‘ನನ್ನ ಹೆಂಡತಿ ನಿಮ್ಮ ದೊಡ್ಡ ಫ್ಯಾನ್. ನಿಮ್ಮ ಸಿನಿಮಾಗಳನ್ನು ಅವರು ನೋಡುತ್ತಲೇ ಇರುತ್ತಾರೆ. ಅದೆಷ್ಟೋ ಸಿನಿಮಾಗಳನ್ನು ನಾವು ಒಟ್ಟಿಗೆ ಕೂತು ನೋಡಿದ್ದೇವೆ’ ಎಂದರು ಧ್ರುವ.
ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರದ “ರಾಜ ಮಾರ್ತಾಂಡ” ಟ್ರೇಲರ್ ಗೆ ಮೊನ್ನೆಯಷ್ಟೇ ಧ್ರುವ ಸರ್ಜಾ ಧ್ವನಿ ನೀಡಿದ್ದರು. ಈ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಈ ಸಿನಿಮಾ ಪೂರ್ತಿಯಾಗಿ ಡಬ್ಬಿಂಗ್ ಮಾಡಿಕೊಡುವುದಾಗಿ ಧ್ರುವ ಸರ್ಜಾ ತಿಳಿಸಿದ್ದಾರಂತೆ. ಚಿತ್ರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಉಪಸ್ಥಿತರಿದ್ದರು. ಮೇಘನಾರಾಜ್ ಹಾಗೂ ಸುಂದರರಾಜ್ ಪತ್ರಿಕಾಗೋಷ್ಠಿಗೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ
ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ಸರ್ ಸಹ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ. ಜೂನ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ದಿನಾಂಕ ನಿಗದಿಯಾಗಿದೆ. ಆದರೆ ಕೊರೋನ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ರಾಮ್ ನಾರಾಯಣ್. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ
ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ ಎಂದರು ಮೇಘನಾರಾಜ್. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್
ನಟ ಸುಂದರರಾಜ್, ನಾಯಕಿ ದೀಪ್ತಿ ಸಾಥಿ, ಮತ್ತೊಬ್ಬ ನಾಯಕಿ ಟಗರು ಖ್ಯಾತಿಯ ಋಶಿಕಾ ರಾಜ್ (ತ್ರಿವೇಣಿ ಈಗ ಋಶಿಕಾ ರಾಜ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ), ಚಿರು ಮಿತ್ರರಾದ ಮನೀಷ್, ಸಚಿನ್ ಮುಂತಾದವರು “ರಾಜ ಮಾರ್ತಾಂಡ” ಚಿತ್ರದ ಬಗ್ಗೆ ಮಾತನಾಡಿದರು. ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು
ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ. ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಬೇಕೆಂದು ಕೊಂಡಿದ್ದೇವೆ. ಚಿರು ಅವರ ೧೦೧ ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ ೫೧ ಎತ್ತರದ ಕಟೌಟ್ ಸಹ ನಿಲಿಸಲಿದ್ದೀವಿ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಶಿವಕುಮಾರ್.
ಜೋಗಿ ಪ್ರೇಮ್ ರೌಡಿಸಂ ಹಿನ್ನೆಲೆಯ ಸಿನಿಮಾ ಕೈಗೆತ್ತಿಕೊಂಡಿದ್ದಾರೆ ಅಂದರೆ, ಅಲ್ಲೊಂದು ಸನ್ಸೇಷನ್ ಇರುತ್ತದೆ. ಜೋಗಿ, ಜೋಗಯ್ಯ, ಕರಿಯಾ ಹೀಗೆ ಸಾಲು ಸಾಲು ರೌಡಿಸಂ ಚಿತ್ರಗಳನ್ನೇ ಪ್ರೇಮ್ ನೀಡಿದ್ದಾರೆ. ಆ ಸಿನಿಮಾಗಳ ಮೂಲಕ ಗೆದ್ದಿದ್ದಾರೆ. ಇದೀಗ ಮತ್ತೆ ಅಂಥದ್ದೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. ಇದನ್ನೂ ಓದಿ : ಸ್ಯಾಂಡಲ್‌ವುಡ್ ಕ್ವೀನ್ ಚಿತ್ರರಂಗಕ್ಕೆ ಬಂದು ನಿನ್ನೆಗೆ 19 ವರ್ಷ: ಸದ್ಯದಲ್ಲೇ ರೀ ಎಂಟ್ರಿ
ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಚಿತ್ರದ ಕಥೆಯೂ ರೌಡಿಸಂ ಹಿನ್ನೆಲೆಯಲ್ಲೇ ಬರೆದದ್ದಾಗಿದೆ. ಅದು 70ರ ದಶಕದಲ್ಲಿನ ಬೆಂಗಳೂರು ರೌಡಿಸಂ ಕಥೆಯನ್ನು ತಮ್ಮ ಹೊಸ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಈ ಕಥೆಯಲ್ಲಿ ಬರುವ ಬಹುತೇಕ ಪಾತ್ರಗಳು ನೈಜ ಘಟನೆಗಳಿಗೆ ಸಾಕ್ಷಿ ಆಗಿವೆಯಂತೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ
ಬೆಂಗಳೂರಿನ ಭೂಗತ ಜಗತ್ತಿಗೆ ಅನೇಕ ಕಥೆಗಳನ್ನು ಈಗಾಗಲೇ ಸಿನಿಮಾ ಮಾಡಲಾಗಿದೆ. ಭೂಗತ ದೊರೆಗಳು ಕೂಡ ಸಿನಿಮಾವಾಗಿದ್ದಾರೆ. ಹಾಗಾಗಿ ಇನ್ನ್ಯಾವ ಘಟನೆಯನ್ನು ಪ್ರೇಮ್ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವ ಕುತೂಹಲ ಸಹಜವಾಗಿಯೇ ಮೂಡಿದೆ. 70 ರ ದಶಕದ ರೌಡಿಸಂ ಅಂದರೆ, ಕೆಲವು ವ್ಯಕ್ತಿಗಳು ನೆನಪಾಗುತ್ತಾರೆ. ಆದರೆ, ಪ್ರೇಮ್ ಅವರೇ ಈ ವಿಷಯವನ್ನು ಬಹಿರಂಗ ಪಡಿಸುವುದು ಉತ್ತಮ. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ
ಮೊನ್ನೆಯಷ್ಟೇ ಮೈಸೂರಿನಲ್ಲಿ ಈ ಚಿತ್ರದ ಮುಹೂರ್ತ ನಡೆದಿದೆ. ಮುಂದಿನ ತಿಂಗಳು ಅರಮನೆ ಮುಂದೆ ಅದ್ಧೂರಿ ಕಾರ್ಯಕ್ರಮ ಮಾಡಿ ಟೈಟಲ್ ಲಾಂಚ್ ಮಾಡುತ್ತಾರಂತೆ ನಿರ್ದೇಶಕರು. ಅವತ್ತು ಕೆಲವು ಮಾಹಿತಿಗಳನ್ನು ಅವರು ನೀಡಲಿದ್ದಾರಂತೆ. ಧ್ರುವ ಸರ್ಜಾ ಮಾಡುತ್ತಿರುವ ಪಾತ್ರವು ಬಹುಶಃ ಅಂದೇ ರಿವೀಲ್ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್
ಈ ಸಿನಿಮಾಗಾಗಿ ಅನೇಕ ಸೆಟ್ ಗಳನ್ನು ಹಾಕಲಿದ್ದಾರಂತೆ ನಿರ್ಮಾಪಕರು. 70 ರ ದಶಕದ ಬೆಂಗಳೂರನ್ನು ಮರುಸೃಷ್ಟಿ ಮಾಡಲಾಗುತ್ತದೆಯಂತೆ. ಹಾಗಾಗಿ ಸಿನಿಮಾ ಕೊಂಚ ದುಬಾರಿಯೂ ಆಗಲಿದೆ. ಬಜೆಟ್ ಬಗ್ಗೆ ತಲೆಕೆಡಿಸಿಕೊಳ್ಳದೇ ಉತ್ತಮ ಸಿನಿಮಾ ಮಾಡುವುದೇ ಅವರ ಉದ್ದೇಶವಾಗಿದೆಯಂತೆ.
ಮೊನ್ನೆಯಷ್ಟೇ ‘ಏಕ್ ಲವ್ ಯಾ’ ಸಿನಿಮಾವನ್ನು ಅಭಿಮಾನಿಗಳಿಗೆ ಅರ್ಪಿಸಿದ್ದ ನಿರ್ದೇಶಕ ಜೋಗಿ ಪ್ರೇಮ್ ಇದೀಗ ಮತ್ತೊಂದು ಹೊಸ ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಹಿಂದೆಯೇ ಅವರು ಹೇಳಿದ್ದಂತೆ ಧ್ರುವ ಸರ್ಜಾಗಾಗಿ ಈ ಸಿನಿಮಾವನ್ನು ಅವರು ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾದ ಮುಹೂರ್ತ ಇದೇ ಏ.24ರಂದು ಮೈಸೂರಿನಲ್ಲಿ ನಡೆಯಲಿದೆ. ಇದನ್ನೂ ಓದಿ : ಭಾವಿ ಪತಿಯ ತಂದೆ ನಿಧನ: ನಟಿ ಕಾವ್ಯ ಶಾ ಮದುವೆ ಮುಂದೂಡಿಕೆ
ಅಂದು ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಈ ಸಂದರ್ಭದಲ್ಲಿಯೇ ಪ್ರೇಮ್ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಈ ಚಿತ್ರಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದ್ದು ಸದ್ಯ ಚಿತ್ರಕ್ಕೆ ಕೆವಿಎನ್ 4 ಎಂದು ಟೈಟಲ್ ಇಡಲಾಗಿದೆ. ಮುಂದೆ ಈ ಶೀರ್ಷಿಕೆ ಬದಲಾಗಲಿದೆ. ಇದನ್ನೂ ಓದಿ : ನಾನೇಕೆ ಡ್ರಗ್ಸ್ ತಗೆದುಕೊಳ್ಳುತ್ತಿದ್ದೆ? ಅಸಲಿ ಕಾರಣ ಬಿಚ್ಚಿಟ್ಟ ಸಂಜಯ್ ದತ್
ಧ್ರುವ ಮತ್ತು ಪ್ರೇಮ್ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಹಾಗಾಗಿಯೇ ಚಿತ್ರಕ್ಕೆ ಅವರು ಯುದ್ದದ ಮುನ್ನುಡಿ ಇಲ್ಲಿಂದ ಆರಂಭ ಎಂಬ ಟ್ಯಾಗ್ ಲೈನ್ ಕೂಡ ಕೊಟ್ಟಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಪ್ರೇಮ್, ‘ಮುಹೂರ್ತಕ್ಕೆ ನೀವೇ ಮುಖ್ಯ ಅತಿಥಿ. ಒಟ್ಟಿಗೆ ಹಬ್ಬ ಮಾಡೋಣ ಬನ್ನಿ’ ಎಂದು ಬರೆದುಕೊಂಡಿದ್ದಾರೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಧ್ರುವ ಸರ್ಜಾಗೆ ಆಶೀರ್ವಚನ ನೀಡಿದರು. ಗುರುರಾಯರು ತಪಸ್ಸು ಮಾಡಿದ ಸ್ಥಳ ರಾಯಚೂರು ತಾಲೂಕಿನ ಗಾಣಧಾಳದ ಪಂಚಮುಖಿ ಆಂಜನೇಯ ದೇವಾಲಯಕ್ಕೂ ಭೇಟಿ ನೀಡಿ ಪಂಚಮುಖಿ ಆಂಜನೇಯ ದರ್ಶನವನ್ನು ಧ್ರುವ ಪಡೆದರು. ಇದನ್ನೂ ಓದಿ: ಅನೂಪ್ ಭಂಡಾರಿ ಜತೆ 3 ಸಿನಿಮಾ ಮಾಡ್ತಾರಾ ಸುದೀಪ್? : ಬರಲಿದೆ ವಿಕ್ರಾಂತ್ ರೋಣ 2
ಸ್ಯಾಂಡಲ್ ವುಡ್ ಅಂಗಳದಿಂದ ಧ್ರುವ ಸರ್ಜಾ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ಧ್ರುವ ಹೊಸ ರೂಪದ ಕಥೆಯನ್ನು ಒಪ್ಪಿಕೊಂಡಿದ್ದಾರಂತೆ. ಅಲ್ಲದೇ, ಈ ಸಿನಿಮಾದಲ್ಲಿ ಅವರು ಅಂಡರ್ ವರ್ಲ್ಡ್ ಡಾನ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ನೈಜ ಘಟನೆ ಮತ್ತು ವ್ಯಕ್ತಿಗಳನ್ನು ಆಧರಿಸಿದ ಸಿನಿಮಾವಾಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು
ಎಪ್ಪತ್ತರ ದಶಕದ ಕಥೆ
ಮದ್ರಾಸ್ ಪ್ರಾಂತ್ಯದ 70ರ ದಶಕದಲ್ಲಿ ನಡೆದ ಘಟನೆಯನ್ನು ಈ ಸಿನಿಮಾಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಈ ದಶಕವನ್ನು ಕಟ್ಟಿಕೊಡುವುದಕ್ಕಾಗಿ ಈಗಾಗಲೇ ಸೆಟ್‍ಗಳು ಕೂಡ ನಿರ್ಮಾಣವಾಗುತ್ತಿವೆಯಂತೆ. ಸೀಗೆಹಳ್ಳಿ ಸಮೀಪದಲ್ಲಿ ಈ ಬೃಹತ್ ಸೆಟ್ ಗಳು ಈಗಾಗಲೇ ಸಿದ್ಧವಾಗುತ್ತಿವೆ. ಬಹುತೇಕ ಚಿತ್ರೀಕರಣ ಈ ಅದ್ಧೂರಿ ಸೆಟ್ ನಲ್ಲಿಯೇ ನಡೆಯಲಿದೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಭೇಟಿಯಾದ ಜಗ್ಗೇಶ್
ಹಾಗಾದರೆ ನಿರ್ದೇಶಕರು ಯಾರು?
70ರ ದಶಕದ ಕಥೆಯನ್ನು ಕೈಗೆತ್ತಿಕೊಂಡಿರುವ ನಿರ್ದೇಶಕರು ಬೇರೆ ಯಾರೂ ಅಲ್ಲ, ಜೋಗಿ ಪ್ರೇಮ್. ಲಾಂಗ್ ಮಚ್ಚುಗಳ ಚಿತ್ರಗಳಿಗೆ ಫೇಮಸ್ ಆಗಿರುವ ಪ್ರೇಮ್, ಈ ಬಾರಿಯೂ ಭೂಗತ ಜಗತ್ತಿನ ಕಥೆಯೊಂದಿಗೆ ಮತ್ತೆ ಪ್ರೇಕ್ಷಕರಿಗೆ ಎದುರಾಗಲಿದ್ದಾರೆ. ಕೆಲವೇ ದಿನಗಳಲ್ಲಿ ಈ ಹೊಸ ಸಿನಿಮಾದ ಮುಹೂರ್ತ ಕೂಡ ನಡೆಯಲಿದೆಯಂತೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ
ಗೊಂದಲ ಗೂಡಾಗಿರುವ ಪ್ರಾಜೆಕ್ಟ್
ದರ್ಶನ್ ಮತ್ತು ಪ್ರೇಮ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂದು ಕೆಲ ವರ್ಷಗಳಿಂದ ಸುದ್ದಿ ಹರಿದಾಡುತ್ತಿತ್ತು. ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇತ್ತು. ಇದೀಗ ಆ ಕಥೆಯನ್ನೇ ಧ್ರುವಗಾಗಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಉಮಾಪತಿ ಅವರ ಬದಲು ಬೇರೆ ನಿರ್ಮಾಣ ಸಂಸ್ಥೆಯು ಈ ಸಿನಿಮಾವನ್ನು ಮಾಡಲಿದೆ ಎಂದೂ ಹೇಳಲಾಗುತ್ತಿದೆ. ಈ ಕುರಿತು ಸ್ಪಷ್ಟ ಮಾಹಿತಿ ಸಿಗಬೇಕಿದೆ.