Tag: dhruva sarja

  • ಕೆವಿಎನ್ ಪ್ರೊಡಕ್ಷನ್ ಸಂಸ್ಥೆಯಡಿ ಆಕ್ಷನ್ ಪ್ರಿನ್ಸ್ `ಪೊಗರು’ ಗ್ರ್ಯಾಂಡ್ ರಿಲೀಸ್

    ಕೆವಿಎನ್ ಪ್ರೊಡಕ್ಷನ್ ಸಂಸ್ಥೆಯಡಿ ಆಕ್ಷನ್ ಪ್ರಿನ್ಸ್ `ಪೊಗರು’ ಗ್ರ್ಯಾಂಡ್ ರಿಲೀಸ್

     ಧ್ರುವ ಸರ್ಜಾ ಅಭಿನಯದ ಮೋಸ್ಟ್ ಎಕ್ಸ್‍ಪೆಕ್ಟೆಡ್ `ಪೊಗರು’ ಚಿತ್ರ ತೆರೆ ಮೇಲೆ ಭರ್ಜರಿ ಸೌಂಡ್ ಮಾಡೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ, ಇದೇ ತಿಂಗಳ 19ರಂದು ಅದ್ಧೂರಿಯಾಗಿ `ಪೊಗರು’ ಚಿತ್ರ ತೆರೆಕಾಣುತ್ತಿದೆ.

    ಮೂರು ವರ್ಷಗಳ ನಂತರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾ ತೆರೆ ಮೇಲೆ ಬರುತ್ತಿದ್ದು ಧ್ರುವ ಅಭಿಮಾನಿಗಳ ಬಳಗ ಫುಲ್ ಸೆಲೆಬ್ರೇಷನ್ ಮೂಡ್‍ನಲ್ಲಿದೆ. ಈಗಾಗಲೇ ಸೋಶಿಯಲ್ ಮೀಡಿಯಾಗಳಲ್ಲಿ `ಪೊಗರು’ ಸಿನಿಮಾ ಹವಾ ಜೋರಾಗಿದ್ದು ಬಿಡುಗಡೆಯಾದ ಒಂದು ಹಾಡು ಎಲ್ಲಾ ದಾಖಲೆಗಳನ್ನೂ ಉಡೀಸ್ ಮಾಡಿದೆ. ಹೀಗೆ ಭರ್ಜರಿ ಸೌಂಡ್ ಮಾಡುತ್ತಿರುವ ಸಿನಿಮಾ ಕೆವಿಎನ್ ಪ್ರೊಡಕ್ಷನ್ ಸಂಸ್ಥೆಯಡಿ ಗ್ರ್ಯಾಂಡ್ ಆಗಿ ರಾಜ್ಯಾದ್ಯಂತ ತೆರೆಕಾಣುತ್ತಿದೆ.

    ಹೌದು, ಈ ನಡುವೆ ಗಾಂಧಿನಗರದ ಅಂಗಳದಲ್ಲಿ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಖತ್ ಸದ್ದು ಮಾಡುತ್ತಿದೆ. ಒಂದೊಂದೇ ಸ್ಟಾರ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ಕೆವಿಎನ್ ಪ್ರೊಡಕ್ಷನ್ ಸ್ಯಾಂಡಲ್‍ವುಡ್‍ನಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ. ಇದೀಗ `ಪೊಗರು’ ಸಿನಿಮಾವನ್ನು ರಿಲೀಸ್ ಮಾಡುವ ಮೂಲಕ ಮತ್ತಷ್ಟು ಸುದ್ದಿಯಲ್ಲಿದೆ. ಸ್ಯಾಂಡಲ್‍ವುಡ್‍ನಿಂದ ಹಿಡಿದು ಟಾಲಿವುಡ್ ಅಂಗಳದಲ್ಲೂ ಅಬ್ಬರಿಸುತ್ತಿರುವ `ಪೊಗರು’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಮಾಡುತ್ತಿದೆ.

    ಮೊದಲ ಬಾರಿ ಬಿಗ್ ಬಜೆಟ್ ಹಾಗೂ ಸ್ಟಾರ್ ಸಿನಿಮಾವೊಂದನ್ನ ಬಿಡುಗಡೆ ಮಾಡುವ ಮೂಲಕ ಮತ್ತಷ್ಟು ಖ್ಯಾತಿ ತನ್ನದಾಗಿಸಿಕೊಂಡಿದೆ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ. ಸಿನಿಮಾ ವಿತರಣೆ ಮಾತ್ರವಲ್ಲದೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿರುವ ಕೆವಿಎನ್ ಪ್ರೊಡಕ್ಷನ್ ನಟ ಧನ್ವೀರ್ ಅಭಿನಯದ ಬೈ2ಲವ್, ಬಂಪರ್, ಗೋಲ್ಡನ್ ಸ್ಟಾರ್ ಗಣೇಶ್ ಸಿಂಪಲ್ ಸುನಿ ಜೋಡಿಯ ಸಖತ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ.

    ನಂದಕಿಶೋರ್ ನಿರ್ದೇಶನದಲ್ಲಿ ಜಬರ್ದಸ್ತ್ ಆಗಿ ಮೂಡಿ ಬಂದಿರೋ `ಪೊಗರು’ ಚಿತ್ರದಲ್ಲಿ ಆಕ್ಷನ್ ಪ್ರಿನ್ಸ್ ಎರಡು ಶೇಡ್‍ನಲ್ಲಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಧ್ರುವ ಸರ್ಜಾಗೆ ಜೋಡಿಯಾಗಿದ್ದು ಟೀಸರ್ ಹಾಗೂ ಬಿಡುಗಡೆಯಾದ ಒಂದು ಹಾಡಿನ ಮೂಲಕವೇ ಸೆನ್ಸೇಷನ್ ಕ್ರಿಯೇಟ್ ಮಾಡಿದೆ `ಪೊಗರು’ ಸಿನಿಮಾ.

  • ನನ್ನ ಜೊತೆ ನಿಂತಿದ್ದಕ್ಕೆ ಧನ್ಯವಾದಗಳು, ಎಲ್ಲ ಕನ್ನಡ ಚಿತ್ರಗಳನ್ನು ನೋಡಿ ಹರಸಿ: ಧ್ರುವ

    ನನ್ನ ಜೊತೆ ನಿಂತಿದ್ದಕ್ಕೆ ಧನ್ಯವಾದಗಳು, ಎಲ್ಲ ಕನ್ನಡ ಚಿತ್ರಗಳನ್ನು ನೋಡಿ ಹರಸಿ: ಧ್ರುವ

    ಬೆಂಗಳೂರು: ಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟ್‍ಗೆ ಅವಕಾಶ ನೀಡುವ ಕುರಿತು ಬೆಂಬಲ ನೀಡಿದ್ದಕ್ಕೆ ನಟ ಧ್ರುವ ಸರ್ಜಾ ಹಿರಿಯ ಕಲಾವಿದರು, ನಿರ್ಮಾಪಕರು, ನಿರ್ದೇಶಕರಿಗೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ.

    ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ನನ್ನ ಮನಸಲ್ಲಿದ್ದ ಆತಂಕವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದೆ. ಇದು ಇಷ್ಟೊಂದು ಸಹಕಾರ ಸಿಗುತ್ತದೆ ಎಂದುಕೊಂಡಿರಲಿಲ್ಲ. ನಿಮಗೆ ಹೇಗೆ ಧನ್ಯವಾದ ಹೇಳಬೇಕೆಂದು ತಿಳಿಯುತ್ತಿಲ್ಲ. ಈ ವಿಷಯದಲ್ಲಿ ಬೆಂಬಲ ನೀಡಿದ ಎಲ್ಲ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ಚಲನ ಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರಕ್ಕೆ ವಿಶೇಷವಾಗಿ ಮಾಧ್ಯಮದವರಿಗೆ, ಕನ್ನಡಿಗರಿಗೆ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

    ಕನ್ನಡ ಚಿತ್ರರಂಗಕ್ಕೆ ಇನ್ನೂ ಒಳ್ಳೆಯದಾಗಬೇಕು. ನೀವು ಎಲ್ಲ ಸಿನಿಮಾಗಳನ್ನು ನೋಡಬೇಕು. ಇನ್‍ಸ್ಪೆಕ್ಟರ್ ವಿಕ್ರಂ, ಪೊಗರು, ರಾಬರ್ಟ್, ಯುವರತ್ನ, ಕೋಟಿಗೊಬ್ಬ 3, ಭಜರಂಗಿ 2, ಕೆಜಿಎಫ್-2, ಸಲಗ ಹೀಗೆ ಅನೇಕ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಎಲ್ಲ ಸಿನಿಮಾಗಳನ್ನು ನೋಡಿ ಆಶೀರ್ವದಿಸಿ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದ್ದಾರೆ.

    ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ನಿನ್ನೆಯಷ್ಟೇ ಕಿಡಿಕಾರಿದ್ದರು. ಚಿತ್ರಮಂದಿರ ಶೇ.100 ಭರ್ತಿಗೆ ನಿರ್ಬಂಧ ಹೇರಿ, ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ನಟ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

    ಈ ಸಂಬಂಧ ಟ್ವೀಟ್ ಮಾಡಿದ್ದ ಧ್ರುವ, ಮಾರ್ಕೆಟ್‍ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್ ಗೆ ಟ್ಯಾಗ್ ಮಾಡಿದ್ದರು.

    ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಸೂಚಿಸಿತ್ತು. ಆದರೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಮಂಗಳವಾರ ಆದೇಶ ಹೊರಡಿಸಿತ್ತು. ಇದರಿಂದ ದೊಡ್ಡ ದೊಡ್ಡ ಸಿನಿಮಾಗಳಿಗೆ ಮತ್ತೆ ನಿರಾಸೆಯಾಗುವ ಆತಂಕ ಎದುರಾಗಿತ್ತು. ಹೀಗಾಗಿ ಧ್ರವ ಸರ್ಜಾ ಸಿಡಿದೆದ್ದಿದ್ದರು.

    ಧ್ರುವ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಉಳಿದ ನಟರು ಸಹ ಈ ಕುರಿತು ಧ್ವನಿ ಎತ್ತಿದ್ದರು. ಹೀಗಾಗಿ ಸರ್ಕಾರ ನಿನ್ನೆ ಸಂಜೆ ಹಿರಿಯ ನಟರು, ನಿರ್ದೇಶಕರು, ನಿರ್ಮಾಪಕರ ಜೊತೆ ಸಭೆ ನಡೆಸಿ ನಾಲ್ಕು ವಾರಗಳಿಗೆ ಅನ್ವಯವಾಗುವಂತೆ ಶೇ.100ರಷ್ಟು ಸೀಟ್ ಭರ್ತಿಗೆ ಅವಕಾಶ ನೀಡಿದೆ. ಈ ವೇಳೆ ಕೊರೊನಾ ಪ್ರಕರಣ ಹೆಚ್ಚಾದಲ್ಲಿ ಮತ್ತೆ ಶೇ.50ಕ್ಕೆ ಇಳಿಸುವುದಾಗಿ ತಿಳಿಸಿದೆ.

  • ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಕಿಡಿ

    ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಕಿಡಿ

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಅವರು ಕಿಡಿಕಾರಿದ್ದಾರೆ.

    ಹೌದು. ಚಿತ್ರಮಂದಿರ ಶೇ.100 ಭರ್ತಿಗೆ ನಿರ್ಬಂಧ ಹೇರಿ, ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಧ್ರುವ, ಮಾರ್ಕೆಟ್‍ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್‍ಗೆ ಟ್ಯಾಗ್ ಮಾಡಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಸೂಚಿಸಿತ್ತು. ಆದರೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಇದರಿಂದ ದೊಡ್ಡ ದೊಡ್ಡ ಸಿನಿಮಾಗಳಿಗೆ ಮತ್ತೆ ನಿರಾಸೆಯಾಗಿದೆ.

    ಒಟ್ಟಿನಲ್ಲಿ ಚಿತ್ರಮಂದಿರ ಶೇ.100 ರಷ್ಟು ಭರ್ತಿಗೆ ಕೇಂದ್ರ ಅನುಮತಿ ಕೊಟ್ಟರೂ ರಾಜ್ಯ ಸರ್ಕಾರ ಅಡ್ಡಿಪಡಿಸಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್‍ನಲ್ಲಿ ನಟ ಧೃವ ಸರ್ಜಾ ಅಸಮಾಧಾನ ಹೊರಹಾಕಿದ್ದಾರೆ.

  • ಮೂರು ಭಾಷೆಗಳಲ್ಲಿ ಸಾವಿರ ಬೆಳ್ಳಿ ಪರದೆ ಮೇಲೆ ಪೊಗರು ಅಬ್ಬರ

    ಮೂರು ಭಾಷೆಗಳಲ್ಲಿ ಸಾವಿರ ಬೆಳ್ಳಿ ಪರದೆ ಮೇಲೆ ಪೊಗರು ಅಬ್ಬರ

    – ಸುದ್ದಿಗೋಷ್ಠಿಯಲ್ಲಿ ಚಿತ್ರ ತಂಡ ಸ್ಪಷ್ಟನೆ

    ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಸಿನಿಮಾ ಫೆಬ್ರವರಿ 19ರಂದು ಬಿಡುಗಡೆಯಾಗುತ್ತಿದ್ದು, ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲಾಗುತ್ತಿದೆ ಎಂದು ಚಿತ್ರ ತಂಡ ತಿಳಿಸಿದೆ.

    ಚಿತ್ರ ಬಿಡುಗಡೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಚಿತ್ರ ತಂಡ, ಅನ್‍ಲಾಕ್ ಬಳಿಕ ಬಿಡುಗಡೆ ಆಗುತ್ತಿರುವ ಮೊದಲ ಕನ್ನಡದ ಸ್ಟಾರ್ ಸಿನಿಮಾ ಆಗಿದೆ. ಫೆಬ್ರವರಿ 19ರಂದು ತೆರೆಗೆ ಬರಲು ಸಿದ್ಧವಾಗಿದ್ದು, ಮೂರು ಭಾಷೆಯಲ್ಲಿ ತೆರೆಗೆ ಬರುತ್ತಿದೆ ಎಂದು ಚಿತ್ರ ತಂಡ ತಿಳಿಸಿದೆ.

    ಒಟ್ಟು 1 ಸಾವಿರ ಚಿತ್ರಮಂದಿರಗಳಲ್ಲಿ ಪೊಗರು ಸಿನಿಮಾ ಬಿಡುಗಡೆಯಾಗುತ್ತಿದ್ದು, ಮೂರು ಭಾಷೆಯಲ್ಲಿ ತೆರೆ ಕಾಣುತ್ತಿದೆ. ಧ್ರುವ ಸರ್ಜಾ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದು, ಇಷ್ಟು ದಿನ ಸಿನಿಮಾದ ಹಾಡು, ಟೀಸರ್ ಕಣ್ತುಂಬಿಕೊಂಡಿದ್ದ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ಹೀಗಾಗಿ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ನಟ ರಾಘವೇಂದ್ರ ರಾಜ್‍ಕುಮಾರ್, ಧ್ರುವ ಸರ್ಜಾ, ಚಂದನ್ ಶೆಟ್ಟಿ ಸೇರಿದಂತೆ ಇತರರು ಭಾಗಿಯಾಗಿದ್ದರು. ಅಲ್ಲದೆ ಪೊಗರು ಸಿನಿಮಾಗೆ ಸಾಥ್ ನೀಡಲು ಬಿಗ್ ಸ್ಟಾರ್ ಸಿನಿಮಾ ನಿರ್ಮಾಪಕರು ಆಗಮಿಸಿದ್ದು, ನಿರ್ಮಾಪಕರಾದ ಸಲಗ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಕೆಜಿಎಫ್ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ಫ್ಯಾಂಟಮ್ ನಿರ್ಮಾಪಕ ಜಾಕ್ ಮಂಜು, ಕೋಟಿಗೊಬ್ಬ 3 ನಿರ್ಮಾಪಕ ಸೂರಪ್ಪ ಬಾಬು, ಪುಷ್ಕರ್ ಮಲ್ಲಿಕಾರ್ಜುನ್ ಅವರು ಭಾಗವಹಸಿದ್ದರು.

    ಪೊಗರು ಸಿನಿಮಾದಲ್ಲಿ ಧ್ರುವ ಜೊತೆ ರಶ್ಮಿಕಾ ತೆರೆ ಹಂಚಿಕೊಂಡಿದ್ದು, ನಂದಕಿಶೋರ್ ನಿರ್ದೇಶನ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಗಂಗಾಧರ್ ಅವರು ಪೊಗರು ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

  • ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್

    ರಥ ಸಪ್ತಮಿ ದಿನದಂದು ‘ಪೊಗರು’ ರಿಲೀಸ್

    ಬೆಂಗಳೂರು: ಇದೇ ಫೆಬ್ರವರಿ 19ಕ್ಕೆ ಚಂದನವನದ ಬಹುನಿರೀಕ್ಷಿತ ಪೊಗರು ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    ಇಂದು ಇನ್‍ಸ್ಟಾಗ್ರಾಂನಲ್ಲಿ ಲೈವ್ ಬಂದ ಅದ್ಧೂರಿ ಹುಡುಗ ಧ್ರುವ ಸರ್ಜಾ ಅಭಿಮಾನಿಗಳ ಜೊತೆ ಪೊಗರು ಚಿತ್ರದ ಬಗೆಗಿನ ಮಹತ್ವದ ವಿಷಯಗಳನ್ನು ಹಂಚಿಕೊಂಡರು. ಕಥೆ ಸಾಕಷ್ಟು ಶೇಡ್, ಸರ್ಪ್ರೈ ಸ್ ಹೊಂದಿದ್ದರಿಂದ ಬರೋಬ್ಬರಿ ಮೂರುವರೆ ವರ್ಷ ಸಿನಿಮಾ ಮಾಡಲಾಗಿದೆ. ಇದೊಂದು ಕೇವಲ ಮಾಸ್ ಸಿನಿಮಾ ಅಲ್ಲ. ಚಿತ್ರದಲ್ಲಿ ಅಣ್ಣ-ತಂಗಿ, ಅಜ್ಜಿ-ಮೊಮ್ಮಗ, ತಂದೆ-ಮಗನ ಸೆಂಟಿಮೆಂಟ್ ಎಮೋಷನ್ ಎಲ್ಲವೂ ಇದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಫೈಟ್ ಗಳಿದ್ದು, ಈಗಾಗಲೇ ಚಿತ್ರದ ಹಾಡುಗಳು ಯಶಸ್ವಿಯಾಗಿವೆ ಎಂದರು.

    ತುಂಬಾ ಶ್ರಮ ಮತ್ತು ಸಮಯ ತೆಗೆದುಕೊಂಡು ಸಿನಿಮಾ ಮಾಡಿದ್ದೇವೆ. ಕೊರೊನಾ ಆತಂಕದ ನಡುವೆಯೂ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರು ಮತ್ತು ನಿರ್ದೇಶಕ ನಿರ್ಧರಿಸಿದ್ದಾರೆ. ಕೊರೊನಾ ಲಸಿಕೆ ಸಹ ಬಂದಿದ್ದು, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಎಂದು ಧ್ರುವ ಮನವಿ ಮಾಡಿಕೊಂಡರು.

     

    View this post on Instagram

     

    A post shared by Dhruva Sarja (@dhruva_sarjaa)

    ಮೂರು ಸಿನಿಮಾಗಳ ಹ್ಯಾಟ್ರಿಕ್ ಗೆಲುವಿನಲ್ಲಿರುವ ಧ್ರುವ ಅಭಿನಯದ ನಾಲ್ಕನೇ ಸಿನಿಮಾ ಇದಾಗಿದೆ. ಪೊಗರು ಸಿನಿಮಾದ ಹಾಡುಗಳು ಈಗಾಗಲೇ ಹೈಪ್ ಕ್ರಿಯೇಟ್ ಮಾಡಿದ್ದು, ಕೊರೊನಾದಿಂದ ಚಿತ್ರದ ರಿಲೀಸ್ ದಿನಾಂಕ ಮುಂದೂಡಿಕೆ ಆಗಿತ್ತು. ಪೊಗರು ಸಿನಿಮಾದಲ್ಲಿ ದೃವ ಸರ್ಜಾಗೆ ನಾಯಕಿಯಾಗಿ ಚಷ್ಮಾ ಸುಂದರಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಚಿತ್ರದಲ್ಲಿ ಧ್ರುವ ಸರ್ಜಾ ಮೂರು ಶೇಡ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ಕಾಲಿವುಡ್‍ಗೆ ಬಹದ್ಧೂರ್ ಹುಡುಗನ ಅದ್ಧೂರಿ ಎಂಟ್ರಿ

    ಕಾಲಿವುಡ್‍ಗೆ ಬಹದ್ಧೂರ್ ಹುಡುಗನ ಅದ್ಧೂರಿ ಎಂಟ್ರಿ

    ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಕಿಕ್ಕೇರಿಸುತ್ತಿದ್ದು, ಬಿಡುಗಡೆಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲಿಯೇ ಚಿತ್ರ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಇದೇ ಸಂದರ್ಭದಲ್ಲಿ ಧೃವಾ ಸರ್ಜಾ ತಮಿಳಿಗೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಹ ವೈರಲ್ ಆಗಿದೆ.

    ಅರೇ ಇದೇನಪ್ಪಾ ಇದ್ದಕ್ಕಿದ್ದಂತೆ ಧೃವ ಸರ್ಜಾ ತಮಿಳು ಇಂಡಸ್ಟ್ರಿಗೆ ಕಾಲಿಟ್ರಾ, ಯಾವ ಸಿನಿಮಾ ಎಂದು ಯೋಚಿಸಬೇಡಿ. ಸ್ಯಾಂಡಲ್‍ವುಡ್‍ನಲ್ಲಿ ಸೆನ್ಸೇಶನ್ ಕ್ರಿಯೇಟ್ ಮಾಡಿರುವ ಪೊಗರು ಸಿನಿಮಾ ತಮಿಳಿಗೆ ಡಬ್ ಆಗುತ್ತಿದೆ. ಈ ಮೂಲಕ ತಮಿಳಿನಲ್ಲೂ ಧೃವ ಸರ್ಜಾ ಘರ್ಜಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿರುವ ಧೃವ, ತಮಿಳು ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ.

    ತಮಿಳಿನಲ್ಲಿ ಸೆಮ್ಮಾ ತಿಮಿರು ಎಂದು ಟೈಟಲ್ ಇಡಲಾಗಿದ್ದು, ಇದರಿಂದ ಅಭಿಮಾನಿಗಳ ಖುಷಿ ಇಮ್ಮಡಿಯಾಗಿದೆ. ಈಗಾಗಲೇ ತೆಲುಗಿಗೆ ಡಬ್ ಆಗುತ್ತಿದ್ದು, ಹಿಂದಿ ಡಬ್ಬಿಂಗ್ ಹಕ್ಕುಗಳು ಸಹ 7.2 ಕೋಟಿ.ರೂ.ಗೆ ಮಾರಾಟ ಆಗಿವೆ. ಹೀಗಾಗಿ ಬಹುಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ ಎಂದೇ ಹೇಳಬಹುದು. ಇದರಿಂದಾಗಿ ಧೃವ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ.

    ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಇಷ್ಟೊತ್ತಿಗೆ ತೆರೆ ಕಾಣಬೇಕಿತ್ತು. ಆದರೆ ಕೊರೊನಾ ಹಿನ್ನೆಲೆ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಬಿಡುಗಡೆ ತಡವಾಗಿದೆ. ನಂದಕಿಶೋರ್ ನಿರ್ದೇಶನ ಸಿನಿಮಾಗಿದ್ದು, ಧೃವ ಸರ್ಜಾಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು, ತಮಿಳು ಬಳಿಕ ಇದೀಗ ಬಾಲಿವುಡ್‍ಗೂ ಕಾಲಿಟ್ಟಿದ್ದಾರೆ. ಹೀಗಾಗಿ ಸಿನಿಮಾ ಯಶಸ್ಸು ಕಾಣಲಿದೆ ಎಂಬುದು ಸಿನಿಮಾ ತಂಡದ ವಿಶ್ವಾಸ ಹೀಗಾಗಿ ತಮಿಳು, ತೆಲುಗಿನಲ್ಲೂ ಸಿನಿಮಾ ಡಬ್ ಮಾಡಲಾಗುತ್ತಿದೆ.

    ಹಾಡುಗಳ ಮೂಲಕ ಸಖತ್ ಸದ್ದು ಮಾಡಿರುವ ಪೊಗರು ಸಿನಿಮಾ ಹೇಗಿರಲಿದೆ ಎಂಬುದು ಅಭಿಮಾನಿಗಳ ಕುತೂಹಲವಾಗಿದೆ. ಸಿನಿಮಾದ ಕರಾಬು ಹಾಡು ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರಕ್ಕಾಗಿ ಧೃವ ಸರ್ಜಾ ಸಹ ಭಾರೀ ವರ್ಕೌಟ್ ಮಾಡಿದ್ದು, ಚಿತ್ರ ಹೇಗೆ ಮೂಡಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

  • ತಂಗಿಗೆ ಭಾವನಾತ್ಮಕವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಮೇಘನಾ

    ತಂಗಿಗೆ ಭಾವನಾತ್ಮಕವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಮೇಘನಾ

    ಬೆಂಗಳೂರು: ಧ್ರುವ ಸರ್ಜಾ ಪತ್ನಿ ಪ್ರೇರಣಾ ಹುಟ್ಟುಹಬ್ಬದ ಸಂಭ್ರದಲ್ಲಿದ್ದು, ಧ್ರುವ ಸರ್ಜಾ ಪತ್ನಿಗೆ ಸರ್ಪ್ರೈಸ್ ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿದ್ದಾರೆ. ಅದೇ ರೀತಿ ಚಿರು ಪತ್ನಿ ಮೇಘನಾ ರಾಜ್ ಸರ್ಜಾ ಭಾವನಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

     

    View this post on Instagram

     

    A post shared by Meghana Raj Sarja (@megsraj)

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಮಡಿರುವ ಮೇಘನಾ, ಹ್ಯಾಪಿ ಬರ್ತ್‍ಡೇ ಸಿಲ್ ಅದ್ಭುತವಾಗಿ ಬದುಕಿ. ನೀನೊಂದು ಸುಂದರ ಆತ್ಮ ಎಂದು ಬರೆಯುವ ಮೂಲಕ ಶುಭ ಕೋರಿದ್ದಾರೆ. ಇದಕ್ಕೆ ಪ್ರೇರಣಾ ಅವರು ಪ್ರತಿಕ್ರಿಯಿಸಿದ್ದು, ಥ್ಯಾಂಕ್ಯೂ ಸೋ ಮಚ್ ಸಿಲ್‍ಮಾ ಎಂದಿದ್ದಾರೆ.

    ಧ್ರುವ ಸರ್ಜಾ ಪತ್ನಿ ಜೊತೆ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿದ್ದು, ಬೀಚ್‍ನ ಹೋಟೆಲ್‍ನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಸುಂದರವಾದ ಲೈಟಿಂಗ್ಸ್, ಸಿಡಿ ಮದ್ದು ಸೇರಿದಂತೆ ಸಮುದ್ರ ತೀರದಲ್ಲಿ ಫುಲ್ ಎಂಜಾಯ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಈ ಕುರಿತು ಒಂದೂವರೆ ನಿಮಿಷದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಧ್ರುವ ಸರ್ಜಾ ಪತ್ನಿಗೆ ಶುಭಾಶಯ ತಿಳಿಸಿದ್ದಾರೆ. ಹ್ಯಾಪಿ ಬರ್ತ್‍ಡೇ ಮೈ ಫ್ರಂಡ್, ಮೈ ವೈಫ್ ಆ್ಯಂಡ್ ಮೈ ಲವ್ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Dhruva Sarja (@dhruva_sarjaa)

    ಸದ್ಯ ಮೇಘನಾ ರಾಜ್ ಸರ್ಜಾ ಮತ್ತು ಅವರ ಮಗನಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲು ಮೇಘಾನ ಅವರ ತಾಯಿ ಪ್ರಮಿಳಾ ಜೋಷಾಯ್ ಮತ್ತು ತಂದೆ ಸುಂದರ್ ರಾಜ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಎಲ್ಲರೂ ಐಸೋಲೇಟ್ ಆಗಿದ್ದು, ಚಿಕಿತ್ಸೆ ಪಡೆಯುತ್ತುದ್ದಾರೆ. ಹೀಗಾಗಿ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರ ಹುಟ್ಟುಹಬ್ಬವನ್ನು ಸಿಂಪಲ್ ಆಗಿ ಹೋಟೆಲ್‍ನಲ್ಲಿ ಆಚರಿಸಿದ್ದಾರೆ.

  • ಚಿರುವನ್ನು ನೆನಪಿಸಿಕೊಂಡು ಭಾವುಕರಾದ ಅರ್ಜುನ್ ಸರ್ಜಾ

    ಚಿರುವನ್ನು ನೆನಪಿಸಿಕೊಂಡು ಭಾವುಕರಾದ ಅರ್ಜುನ್ ಸರ್ಜಾ

    ಬೆಂಗಳೂರು: ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡು ದುಃಖದಲ್ಲಿದ್ದ ಕುಟುಂಬಕ್ಕೆ ಪುಟ್ಟ ಮಗುವಿನ ಆಗಮನದಿಂದ ಕೊಂಚ ರಿಲೀಫ್ ಸಿಕ್ಕಿದೆ. ಆದರೂ ಇದೀಗ ಮಾವ ಅರ್ಜುನ್ ಸರ್ಜಾ ಮಾತ್ರ ತಮ್ಮ ಅಳಿಯ ಚಿರುವನ್ನು ನೆನಪು ಮಾಡಿಕೊಂಡು ಭಾವುಕರಾಗಿದ್ದಾರೆ.

    ಹೌದು. ಇನ್ ಸ್ಟಾಗ್ರಾಂನಲ್ಲಿ ಅಳಿಯನ ಜೊತೆಗಿನ ಫೋಟೋವೊಂದನ್ನು ಅಪ್ಲೋಡ್ ಮಾಡಿರುವ ಅರ್ಜುನ್ ಸರ್ಜಾ, ಭಾವುಕರಾಗಿ ಬರೆದುಕೊಂಡಿದ್ದಾರೆ. ಈ ಸಮಯದಲ್ಲಿ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತೇನೆ ಎಂಬುದನ್ನು ಹೇಳಿಕೊಳ್ಳಲು ಕೂಡ ಸಾಧ್ಯವಾಗುತ್ತಿಲ್ಲ ಚಿರು ಮಗನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಚಿರುವನ್ನು ಕಳೆದುಕೊಂಡು ಬರೋಬ್ಬರಿ 6 ತಿಂಗಳೇ ಕಳೆದು ಹೋಗಿದೆ. ಆದರೂ ಅವರ ಕುಟುಂಬ, ಅಭಿಮಾನಿ ಬಳಗ ಇನ್ನೂ ಅವರ ನೆನಪಿನಲ್ಲೇ ಇದೆ. ಈ ಮಧ್ಯೆ ಮೇಘನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಿರುನೇ ಮಗುವಾಗಿ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಕುಟುಂಬ ಕೊಂಚ ನೆಮ್ಮದಿಯಾಗಿದೆ.

    ನವೆಂಬರ್ 26ರಂದು ನಟ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ ದಂಪತಿ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಸಂಭ್ರಮದಲ್ಲಿದ್ದರು. ಹೀಗಾಗಿ ನವೆಂಬರ್ 28ರಂದು ಕನಕಪುರ ರಸ್ತೆಯ ನೆಲಗೋಳಿ ಗ್ರಾಮದಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಸಮಾಧಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೇವೇರಿಸಿದ್ದರು. ಈ ವೇಳೆ ಕಟುಂಬಸ್ಥರು ಭಾಗಿಯಾಗಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿದ್ದು, ಧ್ರುವ ಸರ್ಜಾಗೆ ಅಣ್ಣನ ಮೇಲಿರುವ ಪ್ರೀತಿ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

  • ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧ್ರುವ ಸರ್ಜಾ ಕೂದಲು ದಾನ

    ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಧ್ರುವ ಸರ್ಜಾ ಕೂದಲು ದಾನ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕ್ಯಾನ್ಸರ್ ಪೀಡಿತ ಮಕ್ಕಳಿಗೆ ತನ್ನ ಕೂದಲನ್ನು ದಾನ ಮಾಡಿದ್ದಾರೆ.

    ಧ್ರುವ ಅವರು ‘ಪೊಗರು’ ಚಿತ್ರಕ್ಕಾಗಿ ಕಳೆದ 2 ವರ್ಷದಿಂದ ಕೂದಲು ಬಿಟ್ಟಿದ್ದರು. ಇದೀಗ ಅವರ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಬಿದ್ದಿದೆ. ಸಿನಿಮಾ ಕಂಪ್ಲೀಟ್ ಆದ ಹಿನ್ನೆಲೆಯಲ್ಲಿ ಧ್ರುವ ಅವರು ಹೇರ್ ಕಟ್ ಮಾಡಿಸಿದ್ದಾರೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಈ ಕೂದಲು ಕೊಡೋದಾಗಿ ಧ್ರುವ ಹೇಳಿದ್ದಾರೆ.

    ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

    ಈ ಹಿಂದೆ ಚಿತ್ರ ಬಿಡುಗಡೆಯ ಬಗ್ಗೆ ಮಾತನಾಡಿದ್ದ ನಂದಕಿಶೋರ್, ‘ಪೊಗರು’ ಚಿತ್ರವನ್ನು ಡಿಸೆಂಬರ್ 25ರ ಕ್ರಿಸ್‍ಮಸ್ ಹಬ್ಬದಂದು ಅಥವಾ ಜನವರಿ ತಿಂಗಳ ಸಂಕ್ರಾಂತಿ ಹಬ್ಬದಂದು ರಿಲೀಸ್ ಮಾಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕೂದಲು, ಗಡ್ಡ ಬಿಟ್ಟುಕೊಂಡು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದರು.

  • ಕೋಲಾರದಲ್ಲಿ ಧ್ರುವ ಸರ್ಜಾ ನೋಡಲು ಮುಗಿಬಿದ್ದ ಅಭಿಮಾನಿಗಳು

    ಕೋಲಾರದಲ್ಲಿ ಧ್ರುವ ಸರ್ಜಾ ನೋಡಲು ಮುಗಿಬಿದ್ದ ಅಭಿಮಾನಿಗಳು

    – ಲಾಠಿ ರುಚಿ ತೋರಿಸಿದ ಪೊಲೀಸರು

    ಕೋಲಾರ: ಸ್ಯಾಂಡಲ್‍ವುಡ್ ನಟ ಧ್ರುವ ಸರ್ಜಾ ನೋಡಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಪ್ರಸಂಗ ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದಿದೆ.

    ಹೌದು. ಧ್ರುವ ಅವರು ಇಂದು ಮಾಲೂರು ಪಟ್ಟಣದ ಕೊಂಡಯ್ಯ ಹಾರ್ಡ್ ವೇರ್ ಮಳಿಗೆ ಉದ್ಘಾಟಿಸಲೆಂದು ಕೋಲಾರದ ಮಾಲೂರು ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಜಮಾಯಿಸಿದ್ದರು. ಈ ವೇಳೆ ಎಸ್ಕಾರ್ಟ್ ಭದ್ರತೆಯಲ್ಲೂ ಧ್ರುವ ತಮ್ಮ ಅಭಿಮಾನಿಗಳತ್ತ ಕೈ ಬೀಸಿದರು.

    ಇತ್ತ ಧ್ರುವನನ್ನು ನೋಡುತ್ತಿದ್ದಂತೆಯೇ ಅಭಿಮಾನಿಗಳು ಜೋರಾಗಿ ಕೂಗುತ್ತಾ ಸಾವಿರಾರು ಸಂಖ್ಯೆಯಲ್ಲಿ ಮುಗಿಬಿದ್ದರು. ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು. ಕೊನೆಗೆ ಸಾಧ್ಯವಾಗದೆ ಲಾಠಿ ಬೀಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅಭಿಮಾನಿಗಳು ಚದುರಿದ್ದಾರೆ. ನಟನ ನೋಡಲು ಅಭಿಮಾನಿಗಳು ಜಮಾಯಿಸಿದ್ದರಿಂದ ಕೋಲಾರ – ಹೊಸೂರು- ಬೆಂಗಳೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಉಂಟಾಯಿತು. ಕಿಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.

    ಬಳಿಕ ಮಾತನಾಡಿದ ಧ್ರುವ, ಕೊರೊನಾ ಸಂದರ್ಭದಲ್ಲಿ ನಿಮ್ಮನ್ನು ಭೇಟಿ ಮಾಡಿಲ್ಲ. ಇದೀಗ ಇಷ್ಟು ಜನರನ್ನು ನೋಡಿ ತುಂಬಾ ಖುಷಿಯಾಯ್ತು ಎಂದು ಹೇಳಿದರು.