Tag: dhruva sarja

  • ಚಿರು ಸಮಾಧಿಗೆ ಸೋದರ ಧ್ರುವ ಸರ್ಜಾ ಪೂಜೆ- ಕಣ್ಣೀರಿಟ್ಟ ಕುಟುಂಬಸ್ಥರು

    ಚಿರು ಸಮಾಧಿಗೆ ಸೋದರ ಧ್ರುವ ಸರ್ಜಾ ಪೂಜೆ- ಕಣ್ಣೀರಿಟ್ಟ ಕುಟುಂಬಸ್ಥರು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ದೈಹಿಕವಾಗಿ ದೂರವಾಗಿ ನಾಳೆಗೆ ಒಂದು ತಿಂಗಳು ಆಗಲಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಕನಕಪುರದ ನೆಲಗುಳಿಯ ಫಾರ್ಮ್ ಹೌಸ್‍ಗೆ ಭೇಟಿ ಕೊಟ್ಟಿದ್ದಾರೆ.

    ಚಿರಂಜೀವಿ ಸರ್ಜಾ ಅವರು ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟಿದ್ದರು. ಸಹೋದರ ಧ್ರುವ ಸರ್ಜಾ ತಮ್ಮ ಆಸೆಯಂತೆ ಅಣ್ಣ ಚಿರಂಜೀವಿಯ ಅಂತ್ಯಕ್ರಿಯೆಯನ್ನು ಕನಕಪುರದಲ್ಲಿರುವ ನೆಲಗುಳಿಯ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ನೆರವೇರಿಸಿದ್ದರು. ಚಿರಂಜೀವಿ ಸರ್ಜಾ ಅವರು ದೈಹಿಕವಾಗಿ ದೂರವಾಗಿ ಜುಲೈ 7ಕ್ಕೆ ಒಂದು ತಿಂಗಳು ಕಳೆಯಲಿದೆ.

    ಇಂದೇ ಕುಟುಂಬ ಸದಸ್ಯರು ಫಾರ್ಮ್ ಹೌಸ್‍ಗೆ ಭೇಟಿ ಕೊಟ್ಟು ಚಿರಂಜೀವಿ ಸರ್ಜಾ ತಿಂಗಳ ಕಾರ್ಯ ಮಾಡಿದ್ದಾರೆ. ಚಿರು ಸಮಾಧಿ ಗೆ ಸೋದರ ಧ್ರುವ ಸರ್ಜಾ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ, ಮೇಘನಾ ರಾಜ್, ಚಿರು ಅಪ್ಪ, ಅಮ್ಮ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಿರಂಜೀವಿ ಸರ್ಜಾ ಅವರನ್ನು ನೆನೆದು ಕುಟುಂಬ ಸದಸ್ಯರು ಕಣ್ಣೀರಿಟ್ಟಿದ್ದಾರೆ.

    ಇತ್ತೀಚೆಗಷ್ಟೆ ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿತ್ತು.

    ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿತ್ತು.

  • ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿದ್ದಾರೆ

    ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿದ್ದಾರೆ

    ಬೆಂಗಳೂರು: ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿದೆ.

    ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದೆ.

    ಕಳೆದ ತಿಂಗಳು ಚಿರು ಸಾವು ಕುಟುಂಬ ವರ್ಗಕ್ಕೆ ಭರಿಸಲಾಗದ ನೋವು ತಂದುಕೊಟ್ಟಿದೆ. ಸದ್ಯ ಅರ್ಜುನ್ ಸರ್ಜಾ ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

  • ಅಣ್ಣನ ಪುಣ್ಯಭೂಮಿಗೆ ಬಿಸಿಲು ತಾಗಬಾರದೆಂದು ಮಂಟಪ ಕಟ್ಟಿಸಿದ ಧ್ರುವ

    ಅಣ್ಣನ ಪುಣ್ಯಭೂಮಿಗೆ ಬಿಸಿಲು ತಾಗಬಾರದೆಂದು ಮಂಟಪ ಕಟ್ಟಿಸಿದ ಧ್ರುವ

    ಬೆಂಗಳೂರು: ನಟ ಧ್ರುವ ಸರ್ಜಾ ಹಾಗೂ ಚಿರಂಜೀವಿ ಸರ್ಜಾ ಬಹಳ ಆತ್ಮೀಯವಾಗಿದ್ದರು. ಆದರೆ ಅಣ್ಣನ ಹಠಾತ್ ಸಾವಿನಿಂದ ನೊಂದಿರುವ ಧ್ರುವ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದರು. ಇದೀಗ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ.

    ಚಿರಂಜೀವಿ ಸರ್ಜಾ ಅವರನ್ನು ರಾಮನಗರ ಬಳಿಯ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರಿಗೆ ಸೇರಿದ್ದು, ಆದರೆ ಫಾರ್ಮ್ ಹೌಸ್ ಚಿರುಗೆ ತುಂಬಾ ಇಷ್ಟವಾಗಿತ್ತಂತೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಫಾರ್ಮ್ ಹೌಸ್‍ನಲ್ಲಿ ಚಿರು ಅಂತ್ಯಕ್ರಿಯೆ ಮಾಡಲಾಗಿದೆ.

    ಇದೀಗ ಧ್ರುವ ಸರ್ಜಾ ಅಣ್ಣನ ಪುಣ್ಯ ಭೂಮಿಗೆ ಬಿಸಿಲು ತಾಗಬಾರದೆಂದು ಮಂಟಪ ಕಟ್ಟಿಸಿದ್ದಾರೆ. ಚಿರು ಕುಟುಂಬದ ಸಂಬಂಧಿಕರಾದ ಮಂಜು ಈ ಮಂಟಪ ಕಟ್ಟಿದ್ದಾರೆ. ಅಷ್ಟೇ ಅಲ್ಲದೇ ಚಿರು ಸರ್ಜಾ ಸಮಾಧಿ ಸ್ಥಳದಲ್ಲಿ ದೊಡ್ಡದಾದ ಮಂಟಪವನ್ನು ಧ್ರುವ ಕಟ್ಟಿಸಲಿದ್ದಾರಂತೆ. ಮಂಟಪದ ಕಾರ್ಯ ಕೂಡ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಎನ್ನಲಾಗಿದೆ.

    ಬಿಸಿಲು ಬಂದರೆ ಅಣ್ಣನ ಪುಣ್ಯ ಭೂಮಿಗೆ ಬಿಸಿಲು ತಾಗಬಾರದೆಂದು ಧ್ರುವ ಅವರು ಮುಂದೆ ನಿಂತು ಈ ಮಂಟಪ ಕಟ್ಟಿಸಿದ್ದಾರೆ ಎಂದು ಮಂಜು ನೋವಿನಿಂದ ಹೇಳಿದ್ದಾರೆ.

     

    ಅಣ್ಣನನ್ನು ಕಳೆದುಕೊಂಡು ಐದು ದಿನಗಳ ಬಳಿಕ ಧ್ರುವ ಸರ್ಜಾ ಇನ್‍ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದರು. ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋ ನೋಡಿ ನೋವನ್ನು ತೋಡಿಕೊಂಡಿದ್ದಾರೆ. “ನೀನು ನನಗೆ ವಾಪಸ್ ಬೇಕು. ನೀ ಇರದೆ ನನಗೆ ಇರಲು ಸಾಧ್ಯವಾಗುತ್ತಿಲ್ಲ” ಎಂದು ಧ್ರುವ ಸರ್ಜಾ ನೋವಿನ ನುಡಿಗಳನ್ನು ಸ್ಟೇಟಸ್‍ನಲ್ಲಿ ಬರೆದುಕೊಂಡಿದ್ದರು.

  • ನೀ ಇರದೆ ನನಗೆ ಇರಲು ಸಾಧ್ಯವಾಗ್ತಿಲ್ಲ- ಅಣ್ಣನ ನೆನೆದು ಧ್ರುವ ಭಾವುಕ

    ನೀ ಇರದೆ ನನಗೆ ಇರಲು ಸಾಧ್ಯವಾಗ್ತಿಲ್ಲ- ಅಣ್ಣನ ನೆನೆದು ಧ್ರುವ ಭಾವುಕ

    – ನೀನು ನನಗೆ ವಾಪಸ್ ಬೇಕು

    ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ ಚಿರಂಜೀವಿ ಸರ್ಜಾ ಅಗಲಿಕೆಯಿಂದ ಇಡೀ ಚಿತ್ರರಂಗವೇ ಶಾಕ್ ಆಗಿತ್ತು. ಇದೀಗ ಅಣ್ಣನ ಹಠಾತ್ ಸಾವಿನಿಂದ ನೊಂದಿರುವ ಧ್ರುವ ಸರ್ಜಾ ಇಂದು ಸೋಷಿಯಲ್ ಮೀಡಿಯಾದಲ್ಲಿ ಭಾವುಕವಾಗಿ ಚಿರು ಬಗ್ಗೆ ಬರೆದುಕೊಂಡಿದ್ದಾರೆ.

    ಅಣ್ಣನನ್ನು ಕಳೆದುಕೊಂಡು ಐದು ದಿನಗಳ ಬಳಿಕ ಧ್ರುವ ಸರ್ಜಾ ಇನ್‍ಸ್ಟಾಗ್ರಾಂನಲ್ಲಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಚಿರಂಜೀವಿ ಸರ್ಜಾ ಸಾವಿಗೂ ಒಂದು ದಿನ ಮುನ್ನ ಶೇರ್ ಮಾಡಿಕೊಂಡಿದ್ದ ಫೋಟೋ ನೋಡಿ ನೋವನ್ನು ತೋಡಿಕೊಂಡಿದ್ದಾರೆ.

    “ನೀನು ನನಗೆ ವಾಪಸ್ ಬೇಕು. ನೀ ಇರದೆ ನನಗೆ ಇರಲು ಸಾಧ್ಯವಾಗುತ್ತಿಲ್ಲ” ಎಂದು ಧ್ರುವ ಸರ್ಜಾ ನೋವಿನ ನುಡಿಗಳನ್ನು ಸ್ಟೇಟಸ್‍ನಲ್ಲಿ ಬರೆದುಕೊಂಡಿದ್ದಾರೆ. ಧ್ರುವ ಸರ್ಜಾ ಸ್ಟೇಟಸ್ ನೋಡಿ ಅಭಿಮಾನಿಗಳು ತನ್ನ ನಟನಿಗೆ ಸಾಂತ್ವನ ಹೇಳುತ್ತಿದ್ದಾರೆ.

    ಭಾನುವಾರ ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಸೋಮವಾರ ಅಂತ್ಯಕ್ರಿಯೆ ನಡೆದಿದೆ.

  • ಮಿಸ್ ಯು ಮೈ ಬಾಯ್, ವಿಧಿ ತುಂಬಾ ಕ್ರೂರಿ- ಅಳಿಯನ ನೆನೆದ ಅರ್ಜುನ್ ಸರ್ಜಾ

    ಮಿಸ್ ಯು ಮೈ ಬಾಯ್, ವಿಧಿ ತುಂಬಾ ಕ್ರೂರಿ- ಅಳಿಯನ ನೆನೆದ ಅರ್ಜುನ್ ಸರ್ಜಾ

    ಬೆಂಗಳೂರು: ನಟ ಅರ್ಜುನ್ ಸರ್ಜಾ ತಮ್ಮ ಪ್ರೀತಿಯ ಅಳಿಯ ಚಿರಂಜೀವಿ ಸರ್ಜಾ ನೆನಪಿನಲ್ಲೇ ಇದ್ದು, ವಿಧಿ ತುಂಬಾ ಕ್ರೂರಿ ಎಂದು ಹೇಳುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

    ಈ ಹಿಂದೆ ಫೇಸ್‍ಬುಕ್ ಪ್ರೊಫೈಲ್‍ಗೆ ಕಪ್ಪು ಬಣ್ಣ ಹಾಕುವ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಫೈಟಿಂಗ್‍ಗೆ ಸಿದ್ಧವಾಗಿರುವ ಫೋಟೋವನ್ನು ಪ್ರೊಫೈಲ್‍ಗೆ ಹಾಕಿದ್ದಾರೆ. ಅಲ್ಲದೆ ಚಿರು ಜೊತೆಗಿರುವ ಫೋಟೋವನ್ನು ಪೋಸ್ಟ್ ಮಾಡಿ ಮನ ಮಿಡಿಯುವ ಸಾಲುಗಳನ್ನು ಬರೆದಿದ್ದಾರೆ. ಐ ಮಿಸ್ ಯು ಮೈ ಬಾಯ್, ವಿಧಿ ತುಂಬಾ ಕ್ರೂರಿ ಎಂದು ಆಕ್ರೋಶವನ್ನು ಹೊರ ಹಾಕಿದ್ದಾರೆ.

    I miss you my boy, Fate has been so cruel.

    Posted by Arjun Sarja on Tuesday, June 9, 2020

    ಅರ್ಜುನ್ ಸರ್ಜಾ ಪೋಸ್ಟ್‍ಗೆ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಧೈರ್ಯ ಹೇಳುತ್ತಿದ್ದಾರೆ. ಚಿರು ಸಾವು ತುಂಬಾ ಬೇಸರ ತಂದಿದೆ. ಈ ಸಂದರ್ಭವನ್ನು ನಿಭಾಯಿಸುವ ಶಕ್ತಿಯನ್ನು ಹನುಮಂತ ನಿಮಗೆ ಕರುಣಿಸಲಿ. ಚಿರು ಅದ್ಭುತ ನಟನಾಗಿದ್ದ ಅವನನ್ನು ಕಳೆದುಕೊಂಡ ಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ ಎಂದು ಕಮೆಂಟ್ ಮಾಡಿದ್ದಾರೆ.

    ಯುವ ನಟ ಚಿರಂಜೀವಿ ಸರ್ಜಾ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇಂದು ಚಿರು ಸರ್ಜಾ ಅವರ ಮೂರನೇ ದಿನದ ಹಾಲು ತುಪ್ಪ ಕಾರ್ಯ ಸಹ ನಡೆದಿದೆ. ಕನಕಪುರ ನೆಲಗುಳಿ ಗ್ರಾಮದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿ ಬಳಿ ಪುರೋಹಿತರಿಂದ ಹಾಲು ತುಪ್ಪ ಕಾರ್ಯ ನಡೆಯಿತು. ಸೋಮವಾರ ಸಂಜೆ 6 ಗಂಟೆ ಹೊತ್ತಿಗೆ ಹಿಂದೂ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನೆರವೇರಿತ್ತು. ಇಂದು ಬೆಳಗ್ಗೆಯೇ ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬದವರು ಕೆ.ಆರ್ ರಸ್ತೆಯಲ್ಲಿರುವ ನಿವಾಸದಿಂದ ಬೃಂದಾವನ ಫಾರ್ಮ್ ಹೌಸ್‍ಗೆ ಹೋಗಿದ್ದರು. ಚಿರು ಹಾಲು ತುಪ್ಪ ಕಾರ್ಯದಲ್ಲಿ ಕುಟುಂಬ ಸದಸ್ಯರು ಮತ್ತು ಕೆಲ ಆಪ್ತರು ಮಾತ್ರ ಪಾಲ್ಗೊಂಡಿದ್ದರು.

    ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದರು.

    `ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಸೋಮವಾರ ಅಂತ್ಯಕ್ರಿಯೆ ನಡೆದಿದೆ.

  • ಚಿರುವಿನ ಮೂರನೇ ದಿನದ ಹಾಲು ತುಪ್ಪ ಕಾರ್ಯ

    ಚಿರುವಿನ ಮೂರನೇ ದಿನದ ಹಾಲು ತುಪ್ಪ ಕಾರ್ಯ

    ಬೆಂಗಳೂರು: ಯುವ ನಟ ಚಿರಂಜೀವಿ ಸರ್ಜಾ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇಂದು ಚಿರು ಸರ್ಜಾ ಅವರ ಮೂರನೇ ದಿನದ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ.

    ಕನಕಪುರ ನೆಲಗುಳಿ ಗ್ರಾಮದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿ ಬಳಿ ಪುರೋಹಿತರಿಂದ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ. ಸೋಮವಾರ ಸಂಜೆ 6 ಗಂಟೆ ಹೊತ್ತಿಗೆ ಹಿಂದೂ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನೆರವೇರಿತ್ತು. ಅಂತ್ಯಕ್ರಿಯೆ ವಿಧಿವಿಧಾನ ನಡೆಸಿಕೊಟ್ಟ ಮೋಹನ್ ಪುರೋಹಿತರಿಂದಲೇ ಇಂದು ಚಿರುವಿನ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ.

    ಇಂದು ಬೆಳಗ್ಗೆಯೇ ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬದವರು ಕೆ.ಆರ್ ರಸ್ತೆಯಲ್ಲಿರುವ ನಿವಾಸದಿಂದ ಬೃಂದಾವನ ಫಾರ್ಮ್ ಹೌಸ್‍ಗೆ ಹೋಗಿದ್ದರು. ಚಿರು ಹಾಲು ತುಪ್ಪ ಕಾರ್ಯದಲ್ಲಿ ಕುಟುಂಬ ಸದಸ್ಯರು ಮತ್ತು ಕೆಲ ಆಪ್ತರು ಮಾತ್ರ ಪಾಲ್ಗೊಂಡಿದ್ದಾರೆ.

    ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದರು.

     

    ‘ಅಣ್ಣ ಸದಾ ನನ್ನ ಜೊತೆಗಿರಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಸೋಮವಾರ ಅಂತ್ಯಕ್ರಿಯೆ ನಡೆದಿದೆ.

  • ‘ಬೃಂದಾವನ’ದಲ್ಲಿ ಚಿರು ಚಿರನಿದ್ರೆ

    ‘ಬೃಂದಾವನ’ದಲ್ಲಿ ಚಿರು ಚಿರನಿದ್ರೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ 39 ವರ್ಷಕ್ಕೆ ತಮ್ಮ ಬದುಕನ್ನು ಮುಗಿಸಿದ್ದು, ಬೃಂದಾವನದಲ್ಲಿ ಚಿರಂಜೀವಿ ಸರ್ಜಾ ಚಿರು ನಿದ್ರೆಗೆ ಜಾರಿದ್ದಾರೆ.

    ಕನಕಪುರ ರಸ್ತೆ ಬಳಿಯಿರುವ ನೆಲಗೂಳಿ ಗ್ರಾಮದ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ನೆರವೇರಿದೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, ‘ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗಲಿ’ ಎಂದು ಸಹೋದರ ಧ್ರುವ ಸರ್ಜಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆದಿದ್ದು, ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾಗಿದ್ದಾರೆ.

    ಭಾನುವಾರ ರಾತ್ರಿಯಿಂದಲೇ ಬೆಂಗಳೂರಿನ ಬಸನವಗುಡಿ ಚಿರಂಜೀವಿ ಸರ್ಜಾ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಅಭಿಮಾನಿಗಳು, ಸ್ನೇಹಿತರು, ಸಿನಿ ಗಣ್ಯರು, ಸಂಬಂಧಿಕರು ಸೇರಿದಂತೆ ಸಾವಿರಾರು ಮಂದಿ ಬಂದು ಚಿರಂಜೀವಿ ಸರ್ಜಾ ಅವರ ಅಂತಿಮ ದರ್ಶನ ಪಡೆದಿದ್ದರು.

     

    ಇಂದು ಮಧ್ಯಾಹ್ನ ಮನೆಯ ಬಳಿ ಅಂತಿಮ ವಿಧಿವಿಧಾನಗಳನ್ನು ಮುಗಿಸಿದ ನಂತರ ತೆರೆದ ವಾಹನದ ಮೂಲಕ ಕನಕಪುರದ ಬಳಿ ಇರುವ ಫಾರ್ಮ್ ಹೌಸ್‍ಗೆ ಚಿರಂಜೀವಿ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗಿತ್ತು. ಅಂತ್ಯ ಸಂಸ್ಕಾರಕ್ಕೆ ಕುಟುಂಬಸ್ಥರು ಹಾಗೂ ಗಣ್ಯರಿಗಾಗಿ ಪೆಂಡಲ್ ವ್ಯವಸ್ಥೆ ಮಾಡಲಾಗಿತ್ತು. ರಾಮನಗರ ಪೊಲೀಸರು ಬ್ಯಾರಿಕೇಡ್‍ಗಳನ್ನು ಹಾಕಿ ಬಂದೋಬಸ್ತ್ ಮಾಡಿದ್ದರು.

     

    ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.

  • ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು

    ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು

    – ಪತಿಯ ಕೆನ್ನೆ ಸವರಿದ ಮೇಘನಾ

    ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರ ಅಂತಿಮ ಕಾರ್ಯಗಳು ಶುರುವಾಗಿದ್ದು, ಅಣ್ಣನಿಗೆ ಅಂತಿಮ ವಿಧಿವಿಧಾನದ ಪೂಜೆ ಮಾಡುವಾಗ ಧ್ರುವ ಸರ್ಜಾ, ಚಿರಂಜೀವಿ ಅವರನ್ನು ತಪ್ಪಿಕೊಂಡು ಕಣ್ಣೀರು ಹಾಕಿದ್ದಾರೆ.

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ.

    ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ ಗಣ್ಯರು ಭಾಗಿಯಾಗಿದ್ದಾರೆ.

    ಗೌಡರ ಸಂಪ್ರದಾಯದಂತೆ ಪೂಜಾ ಕಾರ್ಯ ನಡೆಯುತ್ತಿದ್ದು, ಗೌಡ ಸಂಪ್ರದಾಯದಂತೆ ಫಾರ್ಮ್ ಹೌಸ್‍ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ. ಮನೆಯ ಬಳಿ ಅಂತಿಮ ವಿಧಿವಿಧಾನ ಮುಗಿದ ನಂತರ ಚಿರಂಜೀವಿ ಪಾರ್ಥಿವ ಶರೀರವನ್ನು ಕನಕಪುರ ಬಳಿಯ ಫಾರ್ಮ್ ಹೌಸ್‍ಗೆ ರವಾನೆ ಮಾಡಲಾಗುತ್ತಿದೆ.

  • ಕುಟುಂಬದಲ್ಲಿ ತುಂಬಾನೇ ಮುದ್ದಿನ ಹುಡ್ಗನಾಗಿದ್ದ ಚಿರು

    ಕುಟುಂಬದಲ್ಲಿ ತುಂಬಾನೇ ಮುದ್ದಿನ ಹುಡ್ಗನಾಗಿದ್ದ ಚಿರು

    – ಮನೆಯಲ್ಲಿ ಕಡ್ಡಿ ಅಂತಾನೇ ಕರೀತಿದ್ರು

    ಬೆಂಗಳೂರು: ಚಂದನವನದ ಸರ್ಜಾ ಕುಟುಂಬದ ಮತ್ತೊಂದು ಕುಡಿ ಕಳಚಿದೆ. ನಟ ಚಿರಂಜೀವಿ ಸರ್ಜಾ ಬಗ್ಗೆ ಕುಟುಂಬಸ್ಥರು ಕಂಡಿದ್ದ ಕನಸು ಒಂದೆರಡಲ್ಲಾ. ಚಿರು ಅಂದ್ರೆ ಇಡೀ ಕುಟುಂಬಕ್ಕೆ ಎಲ್ಲಿಲ್ಲದ ಪ್ರೀತಿ.

    ಹಿರಿಯ ನಟ ದಿವಂಗತ ಶಕ್ತಿ ಪ್ರಸಾದ್ ಮೊಮ್ಮಗ ಚಿರಂಜೀವಿ ಸರ್ಜಾ ಕುಟುಂಬದಲ್ಲೇ ಮುದ್ದಿನ ಮಗನಾಗಿ ಬೆಳೆದವರು. ಸೋದರಮಾವ ಅರ್ಜುನ್ ಸರ್ಜಾ ಅಂದ್ರೆ ತುಂಬಾನೇ ಗೌರವ. ಅರ್ಜುನ್ ಸರ್ಜಾ ಕುಟುಂಬದ ಜೊತೆಯೂ ತುಂಬಾ ಬಾಂಧವ್ಯ ಇತ್ತು. ಅದ್ರಲ್ಲೂ ತಮ್ಮ ಧೃವ ಸರ್ಜಾ ಅಂದ್ರೆ ಚಿರಂಜೀವಿಗೆ ಎಲ್ಲಿಲ್ಲದ ಪ್ರೀತಿ. ಇಬ್ಬರೂ ಸ್ನೇಹಿತರಂತೆ ಇದ್ದರು.

    ಜೂನ್ 6ರಂದು ಇನ್ ಸ್ಟಾಗ್ರಾಂನಲ್ಲಿ ಚಿರು ಅಕೌಂಟ್‍ನಿಂದ ಒಂದು ಮೆಮೊರಬಲ್ ಫೋಟೋ ಅಪ್‍ಲೋಡ್ ಆಗಿತ್ತು. ಹಳೇ ನೆನಪನ್ನು ಈಗಲೂ ಹಾಗೆಯೇ ಇದ್ದೀವಿ ಅನ್ನೋ ರೀತಿಯಲ್ಲಿ ಸೇಮ್ ಫೋಸ್ ಕೊಟ್ಟು ಪೋಟೋ ತೆಗೆದು ಅಪ್‍ಲೋಡ್ ಮಾಡಿದ್ದರು. ಅಂದು ಇಂದು ನಾವು ಒಂದೇ ರೀತಿ. ಏನಂತೀರಾ ಅಂತ ಕ್ಯಾಪ್ಶನ್ ಕೂಡ ಕೊಟ್ಟಿದ್ದರು. ಬಾಲ್ಯದ ನೆನಪನ್ನು ನೆನೆದ ಯುವ ಸಾಮ್ರಾಟನಿಗೆ ಕಾಲ ಹೊಂಚು ಹಾಕಿ ಕುಳಿತಿದೆ ಅನ್ನೋ ಸಣ್ಣ ಸುಳಿವು ಸಿಗಲೇ ಇಲ್ಲ ಅನ್ಸುತ್ತೆ.

    ಅಷ್ಟೇ ಅಲ್ಲ, ಚಿರಂಜೀವಿ ಸರ್ಜಾ ಲಾಕ್‍ಡೌನ್ ಹೊತ್ತಲ್ಲಿ ಮನೆಯಲ್ಲಿ ತುಂಬಾನೇ ಆಕ್ಟಿವ್ ಆಗಿದ್ರು. ಮನೆಯವರ ಜೊತೆ ಕುಳಿತು ಆಟ ಆಡೋದು, ಅಜ್ಜಿಯ ಜೊತೆ ಕೂತು ಚೌಕಾಬಾರ ಆಡಿ ಗೆದ್ದಿದ್ದರು. ತಮ್ಮ ಧೃವ ಸರ್ಜಾನೊಂದಿಗೆ ಚೆಸ್ ಆಡೋದು, ಧೃವ ಸರ್ಜಾ ತಲೆಗೆ ಎಣ್ಣೆ ಹಾಕಿ ಮಸಾಜ್ ಮಾಡೋದು ಹೀಗೆ ತುಂಬಾನೇ ಆಕ್ಟೀವ್ ಆಗಿದ್ರು. ಚಿರು ಎಲ್ಲರನ್ನ ನಗಿಸುತ್ತಾ ಹೇಗೆ ಹಸನ್ಮುಖಿಯಾಗಿದ್ರೋ, ಅಷ್ಟೇ ಇಂಟೆಲಿಜೆಂಟ್ ಕೂಡ ಆಗಿದ್ದರು. ಲಾಕ್‍ಡೌನ್ ಹೊತ್ತಲ್ಲೂ ಸಹೋದರ ಧೃವ ಸರ್ಜಾ ಜೊತೆ ಕೂತು ಚೆಸ್ ಆಡ್ತಾ ಇರೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದವು.

    ಮಟನ್ ಬಿರಿಯಾನಿ ಅಂದ್ರೆ ಚಿರುಗೆ ಪಂಚಪ್ರಾಣವಂತೆ. ವಾರ, ದಿನ ಅನ್ನೋದನ್ನೂ ನೋಡದೇ ಮಟನ್ ಬಿರಿಯಾನಿಯನ್ನ ತುಂಬಾ ಪ್ರೀತಿಯಿಂದ ತಿನ್ನುತ್ತಿದ್ದರಂತೆ. ಇತ್ತಿಚೆಗೆ ತಮ್ಮ ಧೃವ ಸರ್ಜಾ ಅಣ್ಣ ಚಿರುಗೆ ಊಟ ಮಾಡಿಸೋ ವಿಡಿಯೋ ಭ್ರಾತೃತ್ವವನ್ನು ಸಾರುವಂತಿದೆ. ಚಿರು, ಮೇಘನಾ, ಧೃವ ಸರ್ಜಾ ಒಳ್ಳೆಯ ಫ್ರೆಂಡ್ಸ್‍ನಂತಿದ್ದರು. ಧೃವ ಮದುವೆಯಲ್ಲಿ ಮೇಘನಾ ಇಬ್ಬರಿಗೂ ಊಟ ಮಾಡಿಸೋ ವಿಡಿಯೋನಾ ಅವರ ಸ್ನೇಹ ಸಂಬಂಧಕ್ಕೆ ಸಾಕ್ಷಿ. ಚಿರು ಮತ್ತು ಧೃವ ಸರ್ಜಾ ಸದಾ ರಾಮ-ಲಕ್ಷ್ಮಣನಂತೆ ಇದ್ರು. ಅಲ್ಲದೇ ಭಾನುವಾರ ಮೃತಪಟ್ಟ ಬಳಿಕ ಧೃವ ಸರ್ಜಾ, ಅಣ್ಣ ಸದಾ ನನ್ನ ಜೊತೆಗಿರಬೇಕು. ಕನಕಪುರ ಬಳಿಯಿರೋ ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ ಅಂತ ಬಿಕ್ಕಿ ಬಿಕ್ಕಿ ಅತ್ತಿದ್ದರು.

    ಸರ್ಜಾ ಕುಟುಂಬ ಆಂಜನೇಯನ ಪರಮಭಕ್ತರು. ಕಸರತ್ತು ಮಾಡುವುದು, ದೇಹವನ್ನ ಕಟ್ಟುಮಸ್ತಾಗಿ ಇಟ್ಟುಕೊಳ್ಳುವುದು ಅರ್ಜುನ್ ಸರ್ಜಾ, ಧೃವ ಸರ್ಜಾ ಹಾಗೂ ಚಿರಂಜೀವಿ ಸರ್ಜಾಗೆ ಮೊದಲಿನಿಂದಲೂ ಅಭ್ಯಾಸವೇ. ಆದರೆ ಭೀಮನಂತಿದ್ದ ಚಿರುನ ಮನೆಯಲ್ಲಿ ಕಡ್ಡಿ ಕಡ್ಡಿ ಅಂತಾನೇ ಕರೀತಾ ಇದ್ದರಂತೆ. ಮನೆಯಲ್ಲಿ ಕಡ್ಡಿ ಅನ್ನೋದು ಚಿರು ಪೆಟ್‍ನೇಮ್ ಆಗಿತ್ತಂತೆ.

    ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಮನೆಯಲ್ಲಿದೆ. ಅದರ ಹೆಸರು ಭೀಮಾ. ಆ ನಾಯಿ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ ಚಿರು ಸರ್ಜಾ ಒಂದು ಮುದ್ದಾದ ನಾಯಿ ಮರಿಯನ್ನ ಗಿಫ್ಟ್ ಆಗಿ ಕೊಟ್ಟಿದ್ರು. ಒಟ್ಟಿನಲ್ಲಿ ಹೆಸರು, ಗೌರವ ಗಳಿಸಿ, ಅಪಾರವಾದ ಪ್ರೀತಿಯನ್ನ ಹಂಚಿದ್ದ ಚಿರು ಚಿರನಿದ್ರೆಗೆ ಜಾರಿದ್ದು ನಿಜಕ್ಕೂ ದುರಂತ.

  • ‘ಅಣ್ಣ ಸದಾ ಜೊತೆಗಿರ್ಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಂತ್ಯಕ್ರಿಯೆಯಾಗ್ಲಿ’: ಧ್ರುವ ಸರ್ಜಾ

    ‘ಅಣ್ಣ ಸದಾ ಜೊತೆಗಿರ್ಬೇಕು, ನನ್ನ ಫಾರ್ಮ್ ಹೌಸ್‍ನಲ್ಲೇ ಅಂತ್ಯಕ್ರಿಯೆಯಾಗ್ಲಿ’: ಧ್ರುವ ಸರ್ಜಾ

    ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಕನಕಪುರ ರಸ್ತೆ ಬಳಿಯಿರೋ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್‍ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’ ಎಂದು ಸಹೋದರ ದೃವ ಸರ್ಜಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗೂಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆವರೆಗೆ ಬಸವನಗುಡಿಯಲ್ಲಿರುವ ನಿವಾಸದಲ್ಲಿ ಚಿರು ಅಂತಿಮದರ್ಶನ ನಡೆಯಲಿದೆ. ರಾತ್ರಿಯಿಡೀ ಕುಟುಂಬಸ್ಥರು, ಅಭಿಮಾನಿಗಳೂ ಸೇರಿದಂತೆ ಸಾವಿರಾರು ಮಂದಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಕೂಡ ಚಿರು ಮನೆಯ ಸುತ್ತ ಜನಸಾಗರವೇ ನೆರೆದಿದೆ.

    ಭಾನುವಾರ ಮಧ್ಯಾಹ್ನದ ವೇಳೆ ಚೆನ್ನಾಗಿದ್ದ ನಟ ಚಿರಂಜೀವಿ ಸರ್ಜಾ, ತಮ್ಮ ನಿವಾಸದ ರಸ್ತೆಯಲ್ಲಿರುವ ನಿವಾಸಿಗಳ ಜೊತೆ ಮಾತನಾಡಿದ್ದರು. ಇದಾದ ನಂತರ ಚಿರು ದೇಹ ದಿಢೀರ್ ಬೆವರಲು ಆರಂಭಿಸಿತ್ತು. ಈ ವೇಳೆ ಉಸಿರಾಡಲು ತೊಂದರೆ ಆಗುತ್ತಿದೆ ಎಂದು ಸರ್ಜಾ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದರು. ನಂತರ ಅವರನ್ನು ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಚಿರು ಕೊನೆಯುಸಿರೆಳೆದಿದ್ದಾರೆ.

    ಚಿರು ಅವರ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗವೇ ಶಾಕ್ ಆಗಿದೆ. ನಟರಾದ ದರ್ಶನ್, ಪುನೀತ್ ರಾಜ್‍ಕುಮಾರ್, ಗಣೇಶ್, ನಟಿ ಅಮೂಲ್ಯ ಮುಂತಾದ ಕಲಾವಿದರ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನೂ ನಟಿ ತರಾ, ಸೃಜನ್ ಲೊಕೇಶ್, ಕಿಚ್ಚ ಸುದೀಪ್, ಯಶ್, ರವಿಚಂದ್ರನ್ ಹಾಗೂ ಮತ್ತಿತರ ಗಣ್ಯರು ಆಸ್ಪತ್ರೆಗೆ ಬಂದು ಚಿರುವಿನ ಅಂತಿಮ ದರ್ಶನ ಪಡೆದಿದ್ದಾರೆ.