Tag: dhruva sarja

  • ಅಪ್ಪು, ದಚ್ಚು ‘ಫ್ಯಾನ್ಸ್ ವಾರ್’ಗೆ ಧ್ರುವ ಸರ್ಜಾ ಅಭಿಮಾನಿಗಳು ಎಂಟ್ರಿ

    ಅಪ್ಪು, ದಚ್ಚು ‘ಫ್ಯಾನ್ಸ್ ವಾರ್’ಗೆ ಧ್ರುವ ಸರ್ಜಾ ಅಭಿಮಾನಿಗಳು ಎಂಟ್ರಿ

    ಪುನೀತ್ ರಾಜ್ ಕುಮಾರ್ (Puneeth Rajkumar) ಪತ್ನಿ ಅಶ್ವಿನಿ (Ashwini)  ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿಚಾರ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಗಜಪಡೆ ಸೋಷಿಯಲ್ ಮೀಡಿಯಾ ಖಾತೆಯಿಂದ ಅಶ್ವಿನಿ ಅವರಿಗೆ ಅವಹೇಳನ ಮಾಡಲಾಗಿತ್ತು. ಈ ಕೃತ್ಯವನ್ನು ದರ್ಶನ್ (Darshan) ಅಭಿಮಾನಿಗಳು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

    ಈ ಕೃತ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ಪು ಅಭಿಮಾನಿಗಳು ನಾಲ್ಕು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದುರುಳರ ಹೆಡೆಮೂರಿ ಕಟ್ಟುವಂತೆ ಗೃಹ ಸಚಿವರಿಗೂ ವಿನಂತಿಸಿದ್ದಾರೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿದ್ದಾರೆ. ಇಲ್ಲಿಗೆ ಏನೋ ಒಂದು ತಾರ್ಕಿಕ ಅಂತ್ಯ ಸಿಗಬಹುದು ಎನ್ನುತ್ತಿರುವಾಗಲೇ ಧ್ರುವ ಸರ್ಜಾ ಅಭಿಮಾನಿಗಳನ್ನು ಈ ಘಟನೆಯಲ್ಲಿ ಎಳೆತರಲಾಗುತ್ತಿದೆಯಂತೆ.

    ಈ ಪ್ರಕರಣದಲ್ಲಿ ಧ್ರುವ ಸರ್ಜಾ (Dhruva Sarja) ಅವರ ಅಭಿಮಾನಿಗಳನ್ನು ಎಳೆತಂದಿರುವುದಕ್ಕೆ ಧ್ರುವ ಸರ್ಜಾ ಅಭಿಮಾನಿಗಳು ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ  ಸಾಮಾಜಿಕ ಜಾಲತಾಣದ ಜಗಳಕ್ಕೆ ಧ್ರುವ ಸರ್ಜಾ ಹಾಗೂ ಅವರ ಅಭಿಮಾನಿಗಳನ್ನ ಎಳೆತಂದಿರುವುದನ್ನು ಖಂಡಿಸಿದ್ದಾರೆ.

     

    ಧ್ರುವ ಸರ್ಜಾ ಅಭಿಮಾನಿಗಳ ಹೆಸರಿಗೆ ಮಸಿ ಬಳಿಯಲು ದರ್ಶನ್ ಫ್ಯಾನ್ಸ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪ ಕೂಡ ಮಾಡಿದ್ದಾರೆ. ಕಿಡಿಗೇಡಿ ಯಾರೆಂದು ಪತ್ತೆ ಮಾಡ್ಬೇಕು. ನಮ್ಮ‌ ಮೇಲೆ ಬೆರಳು ತೋರಿಸುವ ಪ್ರಯತ್ನ‌‌ ನಡೆಯುತ್ತಿದೆ . ಈ  ವಿಚಾರಕ್ಕೆ ಶೀಘ್ರ ತನಿಖೆಗೆ ಆಗ್ರಹಿಸಿವೆವು ಎಂದಿದ್ದಾರೆ ಧ್ರುವ ಫ್ಯಾನ್ಸ್.

  • ನಂಜನಗೂಡು ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ

    ನಂಜನಗೂಡು ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ ಸರ್ಜಾ ದಂಪತಿ

    ಟ ಧ್ರುವ ಸರ್ಜಾ (Dhruva Sarja) ದಂಪತಿ ಮಕ್ಕಳಿಗೆ ಪಂಚಮುಡಿ ಶಾಸ್ತ್ರ ಮಾಡಿಸಲು ನಂಜನಗೂಡು ದೇವಸ್ಥಾನಕ್ಕೆ (Temple) ಭೇಟಿ ನೀಡಿದ್ದಾರೆ. ಮನೆದೇವರಿಗೆ ಮಕ್ಕಳ ಪ್ರಥಮ ಮುಡಿ ಕೊಡುವ ಶಾಸ್ತ್ರ ಮಾಡಿದ್ದಾರೆ ಧ್ರುವ ಸರ್ಜಾ ದಂಪತಿ. ರುದ್ರಾಕ್ಷಿ ಹಾಗೂ ಹಯಗ್ರೀವನ ಪಂಚಮುಡಿ ಶಾಸ್ತ್ರ ಹೇಗಿತ್ತು? ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಸಂಪ್ರದಾಯ ಅಂತ ಬಂದರೆ ಧ್ರುವ ಸರ್ಜಾ ಮುಂದೆ ಇರುತ್ತಾರೆ. ಅಚ್ಚುಕಟ್ಟಾಗಿ ಪಾಲಿಸುತ್ತಾರೆ. ಕಳೆದ ಜನವರಿಯಲ್ಲಿ ತಮ್ಮಿಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದರು. ಪುತ್ರಿಗೆ ರುದ್ರಾಕ್ಷಿ ಪುತ್ರನಿಗೆ ಹಯಗ್ರೀವ ಎಂದು ಹೆಸರಿಟ್ಟಿದ್ದರು. ಇದೀಗ ಇಬ್ಬರೂ ಮಕ್ಕಳಿಗೆ ಒಟ್ಟಿಗೆ ಮುಡಿ ಕೊಡಿಸಿದ್ದಾರೆ. ಇದನ್ನೂ ಓದಿ:‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಎಂದು ರಾಧಿಕಾ ಪಂಡಿತ್ ಬ್ಯೂಟಿ ಬಣ್ಣಿಸಿದ ನೆಟ್ಟಿಗರು

     

    View this post on Instagram

     

    A post shared by Sampath Raj???? (@sampath_raj_ds)

    ನಂಜನಗೂಡು ಶ್ರೀಕಂಠೇಶ್ವರ ಧ್ರುವ ಸರ್ಜಾರ ಮನೆ ದೇವರು. ಹೀಗಾಗಿ ಮಕ್ಕಳ ಪ್ರಥಮ ಮುಡಿ ಮನೆದೇವರಿಗೆ ಅರ್ಪಿಸಿದ್ದಾರೆ. ರುದ್ರಾಕ್ಷಿ ಹಯಗ್ರೀವನಿಗೆ ಒಟ್ಟಿಗೆ ಮುಡಿ ಕೊಡುವ ಶಾಸ್ತ್ರ ಮಾಡಿಸಿದ್ದಾರೆ. ಈ ವೇಳೆ ಧ್ರುವ ಸರ್ಜಾರನ್ನ ಹತ್ತಿರದಿಂದ ನೋಡಲು ನಂಜನಗೂಡಲ್ಲಿ ಅಪಾರ ಅಭಿಮಾನಿಗಳು ಸೇರಿದ್ದರು.

    ಧ್ರುವ ಸರ್ಜಾ ನಟನೆಯ ‘ಕೆಡಿ’ (KD Film) ಮತ್ತು ಮಾರ್ಟಿನ್‌ (Martin Film) ಸಿನಿಮಾಗಳು ಅವರ ಕೈಯಲ್ಲಿವೆ. ಈ ವರ್ಷ ಎರಡು ಸಿನಿಮಾಗಳು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಲಿದೆ.

  • ಸೆಲೆಬ್ರಿಟಿಗಳ ಬೆಂಬಲದೊಂದಿಗೆ ಕಳೆಗಟ್ಟಿಕೊಂಡ ಕೆರೆಬೇಟೆ!

    ಸೆಲೆಬ್ರಿಟಿಗಳ ಬೆಂಬಲದೊಂದಿಗೆ ಕಳೆಗಟ್ಟಿಕೊಂಡ ಕೆರೆಬೇಟೆ!

    ನ್ನಡ ಚಿತ್ರರಂಗದಲ್ಲೀಗ ಎಲ್ಲ ರೀತಿಯಲ್ಲಿಯೂ ಚೆಂದಗೆ ಮೂಡಿ ಬಂದಿರುವ ಸಿನಿಮಾಗಳನ್ನು ಉಳಿಸಿಕೊಳ್ಳಲೂ ಹೋರಾಟ ನಡೆಸುವಂಥಾ ಸ್ಥಿತಿಯೊಂದು ಚಾಲ್ತಿಯಲ್ಲಿದೆ. ನೋಡಿದವರೆಲ್ಲ ಸದಭಿಪ್ರಾಯ ವ್ಯಕ್ತಪಡಿಸಿದರೂ ಕೂಡಾ ವಾರದಿಂದ ವಾರವನ್ನು ದಾಟಿಕೊಳ್ಳುವುದೇ ಕಷ್ಟವೆಂಬ ಈ ವಾತಾವರಣದಲ್ಲಿ ‘ಕೆರೆಬೇಟೆ’ (Kerebete) ಚಿತ್ರಕ್ಕೆ ಇದೀಗ ಚಿತ್ರರಂಗವೇ ಸಾಥ್ ಕೊಟ್ಟಂತಾಗಿದೆ. ಗೌರಿಶಂಕರ್ (Gowrishankar) ನಾಯಕನಾಗಿ ನಟಿಸಿರುವ ಈ ಚಿತ್ರ, ಆರಂಭದಿಂದಲೂ ನೆಲಮೂಲದ ಕಥೆಯೊಂದಿಗೆ ಸುದ್ದಿ ಕೇಂದ್ರದಲ್ಲಿತ್ತು. ಹಾಗೆ ಹರಳುಗಟ್ಟಿಕೊಂಡಿದ್ದ ನಿರೀಕ್ಷೆಗಳಿಗೆ ತಕ್ಕುದಾಗಿ ಮೂಡಿ ಬಂದಿದ್ದ ‘ಕೆರೆಬೇಟೆ’ಗೆ ನಾನಾ ಸವಾಲುಗಳು ಎದುರಾಗಿದ್ದವು. ಇದೀಗ ಅದೆಲ್ಲವನ್ನೂ ಸಮರ್ಥವಾಗಿ ದಾಟಿಕೊಂಡಿರುವ ಈ ಸಿನಿಮಾ ಎರಡನೇ ವಾರದ ಹೊತ್ತಿಗೆಲ್ಲ ಭರ್ಜರಿ ಪ್ರದರ್ಶನದತ್ತ ದಾಪುಗಾಲಿಡುತ್ತಿದೆ.

    ರಾಜ್ ಗುರು ಬಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಚಿತ್ರವಾದ ‘ಕೆರೆಬೇಟೆ’ ಇಂದಿಗೆ ಚೇತರಿಸಿಕೊಂಡು, ಮುನ್ನುಗ್ಗುತ್ತಿರೋದರ ಹಿಂದೆ ನಟ ನಟಿಯರ ಬೆಂಬಲವಿದೆ. ಒಂದೊಳ್ಳೆ ಕಂಟೆಂಟು ಹೊಂದಿದ್ದರೂ, ಕನ್ನಡದ ಮಟ್ಟಿಗೆ ಅಪರೂಪದ್ದೆಂಬಂಥಾ ಕಥೆಯನ್ನೊಳಗೊಂಡಿದ್ದರೂ ಕೊಂಚ ಹಿನ್ನಡೆ ಕಂಡಾಗ ಚಿತ್ರರಂಗದ ಮಂದಿ ಈ ಸಿನಿಮಾವನ್ನು ಗೆಲ್ಲಿಸುವ ಪಣತೊಟ್ಟಂತೆ ಅಖಾಡಕ್ಕಿಳಿದಿದ್ದರು. ತಮ್ಮ ಸಿನಿಮಾದ ಬ್ಯುಸಿಯ ನಡುವೆಯೂ ಧ್ರುವ ಸರ್ಜಾ (Dhruva Sarja) ‘ಕೆರೆಬೇಟೆ’ಯ ಬಗ್ಗೆ ಒಳ್ಳೆಯ ಮಾತುಗಳನ್ನಾಡಿ, ಚಿತ್ರಮಂದಿರಗಳಿಗೆ ಬಂದು ನೋಡುವಂತೆ ಬಿನ್ನವಿಸಿಕೊಂಡಿದ್ದರು. ನಂತರದಲ್ಲಿ ಖುದ್ದು ಧ್ರುವ ಸರ್ಜಾ ಅವರೇ ಕೆರೆಬೇಟೆಯನ್ನು ವೀಕ್ಷಿಸಿ ಥ್ರಿಲ್ ಆಗಿದ್ದರಲ್ಲದೇ, ಒಳ್ಳೆಯ ಅಭಿಪ್ರಾಯ ಹಂಚಿಕೊಂಡಿದ್ದರು.

    ಆ ನಂತರದಲ್ಲಿ ಡಾರ್ಲಿಂಗ್ ಕೃಷ್ಣ (Darling Krishna), ಮಿಲನಾ (Milana) ದಂಪತಿ ಕೆರೆಬೇಟೆಯನ್ನು ನೋಡಿ ಖುಷಿಗೊಂಡಿದ್ದರು. ಆ ನಂತರ ಅಜೇಯ್ ರಾವ್, ಚೈತ್ರಾ ಆಚಾರ್, ಚೇತನ್ ಅಹಿಂಸಾ ಮುಂತಾದವರೂ ಕೆರೆಬೇಟೆಯನ್ನು ನೋಡಿ ಮುದಗೊಂಡಿದ್ದಾರೆ. ಅವರೆಲ್ಲರೂ ತಮ್ಮದೇ ಆದ ರೀತಿಯಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕ್ಷಣಕ್ಕೂ ನಟ ನಟಿಯರನೇಕರು ಈ ಸಿನಿಮಾವನ್ನು ವೀಕ್ಷಿಸುಜತ್ತಿದ್ದಾರೆ. ವಿಶೇಷವೆಂದರೆ, ಹೀಗೆ ಸಿನಿಮಾ ನೋಡಿ ಸದಭಿಪ್ರಾಯ ಹಂಚಿಕೊಳ್ಳುತ್ತಾ ಕೆರೆಬೇಟೆಯನ್ನು ಗೆಲ್ಲಿಸಲು ಸೆಲೆಬ್ರಿಟಿಗಳು ಟೊಂಕ ಕಟ್ಟಿ ನಿಂತ ಬೆನ್ನಲ್ಲೇ, ಪ್ರೇಕ್ಷಕರೂ ಕೂಡಾ ‘ಕೆರೆಬೇಟೆ’ (Kerebete) ನೋಡಲು ಮುನ್ನುಗ್ಗುತ್ತಿದ್ದಾರೆ.

    ಎರಡನೇ ವಾರದ ಹೊತ್ತಿಗೆಲ್ಲ ಕೆರೆಬೇಟೆಯ ಪ್ರದರ್ಶನ ರೋಮಾಂಚಕವಾಗಿಯೇ ಚೇತರಿಕೆ ಕಾಣುತ್ತಿದೆ. ಯಾವುದ್ಯಾವುದೋ ಪ್ರೇರಣೆಯಿಂದ ಈ ಸಿನಿಮಾ ನೋಡಿದವರೆಲ್ಲ ಬೇಷರತ್ತಾಗಿ ಮೆಚ್ಚಿಕೊಂಡಿದ್ದಾರೆ. ಈಗಂತೂ ಮೆಲ್ಲಗೆ ಬಾಯಿಂದ ಬಾಯಿಗೆ ಕೆರೆಬೇಟೆಯ ಆಂತರ್ಯದ ಖದರ್ ಹಬ್ಬಿಕೊಳ್ಳುತ್ತಿದೆ. ಹೀಗೆ ಪ್ರೇಕ್ಷಕರ ವಲಯದಲ್ಲಿ ಹಬ್ಬಿಕೊಳ್ಳುವ ಒಳ್ಳೆ ಮಾತುಗಳು ಯಾವುದೇ ಸಿನಿಮಾಗಳ ಪಾಲಿಗೆ ಗೆಲುವಿನ ನಿಖರ ಸೂಚನೆ. ಸದ್ಯದ ಮಟ್ಟಿಗೆ ‘ಕೆರೆಬೇಟೆ’ ಚಿತ್ರದ ಸುತ್ತ ಅಂಥಾದ್ದೊಂದು ಪಾಸಿಟಿವ್ ವಾತಾವರಣ ಹಬ್ಬಿಕೊಂಡಿದೆ. ಇದರಿಂದಾಗಿ ಗೌರಿಶಂಕರ್, ನಿರ್ದೇಶಕ ರಾಜ್ ಗುರು, ನಿರ್ಮಾಪಕ ಜೈಶಂಕರ್ ಪಟೇಲ್ ಸೇರಿದಂತೆ ಒಂದಿಡೀ ಚಿತ್ರತಂಡದ ಶ್ರಮ ಸಾರ್ಥಕಗೊಂಡಂತಾಗಿದೆ. ಸಾಲು ಸಾಲಾಗಿ ಎದುರಾದ ಸವಾಲುಗಳನ್ನೆಲ್ಲ ಎದೆಗುಂದದೆ ಎದುರಿಸಿದ ಫಲವಾಗಿಯೇ ಇದೀಗ ಚಿತ್ರಮಂದಿರ ತುಂಬಿಕೊಳ್ಳುತ್ತಿದೆ.

    ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡಾ ತಾನೇ ತಾನಾಗಿ ಕೆರೆಬೇಟೆಯ ಬಗ್ಗೆ ಚೆಂದದ ಅಭಿಪ್ರಾಯ, ವಿಮರ್ಶೆಗಳು ಹರಿದಾಡುತ್ತಿವೆ. ಇದೆಲ್ಲವೂ ಕೂಡಾ ಸದ್ಯದ ಮಟ್ಟಿಗೆ ಒಳಿತಿನ ಮುನ್ಸೂಚನೆಯಾಗಿ ಕಾಣಿಸುತ್ತಿದೆ. ಅಷ್ಟಕ್ಕೂ ಇಂಥಾ ಸಿನಿಮಾಗಳನ್ನು ಗೆಲ್ಲಿಸಿಕೊಳ್ಳುವ ಜರೂರತ್ತಿದೆ. ಭಿನ್ನ ಪ್ರಯತ್ನಗಳನ್ನು ಸದಾ ಬೆಂಬಲಿಸುವ ಪ್ರೇಕ್ಷಕರ ಕೃಪೆಯೂ ಇಂಥಾ ಸಿನಿಮಾಗಳತ್ತ ಹರಿಯಬೇಕಿದೆ. ಕೆರೆಬೇಟೆ ಎಂಬುದು ಮಲೆನಾಡು ಸೀಮೆಯ ನೆಲದ ಘಮಲಿನ ಚಿತ್ರ. ಮೇಕಿಂಗ್ ಸೇರಿದಂತೆ ಎಲ್ಲದರಲ್ಲಿಯೂ ಮೇಲ್ಮಟ್ಟದಲ್ಲಿರುವ ಕೆರೆಬೇಟೆ, ಎಲ್ಲ ವರ್ಗದ ಪ್ರೇಕ್ಷಕರಿಗೂ ಪಥ್ಯವಾಗಬಲ್ಲ ಚಿತ್ರ. ಇಂಥಾ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸೋದು ಚಿತ್ರರಂಗದ ಭವಿಷ್ಯದ ದೃಷ್ಟಿಯಿಂದಲೂ ತರ್ತುನ ಸಂಗತಿ ಎಂಬ ಅಭಿಪ್ರಾಯ ಎಲ್ಲ ದಿಕ್ಕುಗಳಿಂದಲೂ ಹೊಮ್ಮುತ್ತಿದೆ.

  • ಆರ್.ಸಿ.ಬಿಗಾಗಿ ಹಾಡು ಬರೆದ ಯೋಗರಾಜ್ ಭಟ್, ಹಾಡಿದ ಧ್ರುವ ಸರ್ಜಾ

    ಆರ್.ಸಿ.ಬಿಗಾಗಿ ಹಾಡು ಬರೆದ ಯೋಗರಾಜ್ ಭಟ್, ಹಾಡಿದ ಧ್ರುವ ಸರ್ಜಾ

    ನಿನ್ನೆ ಐ.ಪಿ.ಎಲ್ (RCB Song) ಆರಂಭ ಮೊದಲ ಪಂದ್ಯದಲ್ಲೇ ಆರ್. ಸಿ ಬಿ ಆಡಿದೆ. ಇತ್ತೀಚೆಗಷ್ಟೇ ನಡೆದ WPL ನಲ್ಲಿ ಆರ್ ಸಿ ಬಿ ಮಹಿಳಾ‌ ತಂಡದವರು ಕಪ್ ಗೆದ್ದಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲೂ ನಮ್ಮ ಆರ್ ಸಿ ಬಿ ಕಪ್ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸದ ಮಾತು ಎಲ್ಲಾ ಕಡೆ ಕೇಳಿ ಬರುತ್ತಿದೆ.

    ಆರ್ ಸಿ ಬಿ ತಂಡವನ್ನು ಹುರಿದುಂಬಿಸುವ ‘ಜಿಂಗಲ ಜೈ’ ಎಂಬ ಹಾಡನ್ನು ಖ್ಯಾತ ಸಾಹಿತಿ ಹಾಗೂ ನಿರ್ದೇಶಕ ಯೋಗರಾಜ್ ಭಟ್ (Yogaraj Bhatt) ಬರೆದಿದ್ದಾರೆ. ಜಿಂಗಲ ಜೈ ಎಂದು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಡಿದ್ದಾರೆ. ಇದು ಧ್ರುವ ಸರ್ಜಾ (Dhruva Sarja) ಅವರು ಹಾಡಿರುವ ಮೊದಲ ಹಾಡು ಕೂಡ.

    ಧ್ರುವ ಸರ್ಜಾ ಅವರೊಟ್ಟಿಗೆ ಗಾಯನಕ್ಕೆ ಯೋಗರಾಜ್ ಭಟ್, ಉತ್ತರ ಕರ್ನಾಟಕದ ಪ್ರತಿಭೆ ಮಾಳು ನಿಪನಾಳ ಹಾಗೂ ಚೇತನ್ ಸೋಸ್ಕಾ ಅವರು ಜೊತೆಯಾಗಿದ್ದಾರೆ‌. ಚೇತನ್ ಸೋಸ್ಕಾ ಅವರೆ ಸಂಗೀತ ನೀಡಿದ್ದಾರೆ. ರೇಣುಕಾ ಯೋಗರಾಜ್ ಭಟ್ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.

     

    ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ‌. ನಿರ್ದೇಶಕ ಎ.ಪಿ.ಅರ್ಜುನ್,  ಡ್ಯಾನಿಶ್ ಸೇಠ್, ಮಣಿಕಂಠನ್ ಮುಂತಾದವರು ಈ ಹಾಡಿಗೆ ಸಹಕಾರ ನೀಡಿದ್ದಾರೆ. ಅಭಿರಾಜ್, ಶಿವ್ ಪಾಟೀಲ್ , ರಾಕೇಶ್ ರಾಮ್ ಅವರ ಛಾಯಾಗ್ರಹಣ, ಸಚಿನ್ ಕೆ ರಾಮು ಸಂಕಲನ, ಗುಡ್ಡು ರಾಜ್ ನೃತ್ಯ ನಿರ್ದೇಶನ ಹಾಗೂ ಗಡ್ಡ ವಿಜಿ ಅವರ ಕಲಾ ನಿರ್ದೇಶನವಿರುವ ಜಿಂಗಲ ಜೈ ಹಾಡು ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಧ್ರುವ ಸರ್ಜಾ, ಉತ್ತರ ಕರ್ನಾಟಕದ ಪ್ರತಿಭೆ ಮಾಳು ನಿಪನಾಳ, ಕನ್ನಡದ ಮಕ್ಕಳು ಹಾಗೂ ಆರ್ ಸಿ ಬಿ ಅಭಿಮಾನಿಗಳು ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.

  • 240 ದಿನಗಳ ಶೂಟಿಂಗ್ ಮುಗಿಸಿದ ಮಾರ್ಟಿನ್

    240 ದಿನಗಳ ಶೂಟಿಂಗ್ ಮುಗಿಸಿದ ಮಾರ್ಟಿನ್

    ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಮಾರ್ಟಿನ್  (Martin) ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಬಿಡುಗಡೆಗಾಗಿ ಧ್ರುವ ಸರ್ಜಾ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಚಿತ್ರೀಕರಣದಲ್ಲೂ ಮಾರ್ಟಿನ್ ದಾಖಲೆ ಬರೆದಿದೆ. ಒಟ್ಟು 240 ದಿನಗಳ ಚಿತ್ರೀಕರಣ ನಡೆದಿದೆ. ಇನ್ನು ಚಿತ್ರದ ಆಡಿಯೋ ಹಕ್ಕನ್ನು ಅಧಿಕ ಮೊತ್ತ ನೀಡಿ  ಜನಪ್ರಿಯ ಆಡಿಯೋ ಸಂಸ್ಥೆಯಾದ ಸರೆಗಮಪ ಪಡೆದುಕೊಂಡಿದೆ. ಮಣಿ ಶರ್ಮ ಅವರ ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದ್ದು,  ರವಿ ಬಸ್ರೂರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

    ಸತ್ಯ ಹೆಗಡೆ ಛಾಯಾಗ್ರಹಣ , ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ರಾಮ್ ಲಕ್ಷ್ಮಣ್ ಅವರ  ಸಾಹಸ ನಿರ್ದೇಶನವಿರುವ ಮಾರ್ಟಿನ್ ಚಿತ್ರದ ತಾರಾಬಳಗದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಅನ್ವೇಶಿ ಜೈನ್, ಜಾರ್ಜಿಯ ಆಂಡ್ರಿಯಾನಿ, ಚಿಕ್ಕಣ್ಣ, ಮಾಳವಿಕ ಅವಿನಾಶ್, ನಿಕ್ತಿನ್ ಧೀರ್, ನವಾಬ್ ಶಾ, ರೋಹಿತ್ ಪಾಠಕ್ ಮುಂತಾದವರಿದ್ದಾರೆ.

  • ಜೊತೆಯಾಗಿ ಕಾಣಿಸಿಕೊಂಡ್ರು ಉಪೇಂದ್ರ, ಶಿಲ್ಪಾ ಶೆಟ್ಟಿ, ಧ್ರುವ, ಮಾಲಾಶ್ರೀ- ಏನು ಸಮಾಚಾರ?

    ಜೊತೆಯಾಗಿ ಕಾಣಿಸಿಕೊಂಡ್ರು ಉಪೇಂದ್ರ, ಶಿಲ್ಪಾ ಶೆಟ್ಟಿ, ಧ್ರುವ, ಮಾಲಾಶ್ರೀ- ಏನು ಸಮಾಚಾರ?

    ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅವರ ವಿಶೇಷ ಫೋಟೋವೊಂದು ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ. ಧ್ರುವ, ರಿಯಲ್ ಸ್ಟಾರ್ ಉಪೇಂದ್ರ, ಶಿಲ್ಪಾ ಶೆಟ್ಟಿ, ಮಾಲಾಶ್ರೀ (Malashree) ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಈ ತಾರೆಯರ ಸಮಾಗಮದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

    ಧ್ರುವ ಸರ್ಜಾ ನಟನೆಯ ‘ಕೆಡಿ’ (KD Film) ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ನಟಿಸುತ್ತಿದ್ದಾರೆ. ಇದು ಹಳೆಯ ಸಮಾಚಾರ ಆದರೆ ಇವರ ಜೊತೆ ಉಪೇಂದ್ರ ದಂಪತಿ, ಮಾಲಾಶ್ರೀ ಮತ್ತು ‘ಕಾಟೇರ’ ಸುಂದರಿ ಆರಾಧನಾ ಕೂಡ ಕಾಣಿಸಿಕೊಂಡಿದ್ದಾರೆ. ಕೆಡಿ ಚಿತ್ರದ ನಿರ್ಮಾಪಕರು ಕೂಡ ಈ ವೇಳೆ ಹಾಜರಿ ಹಾಕಿದ್ದಾರೆ. ಹಾಗಾಗಿ ಯಾವ ವಿಚಾರವಾಗಿ ಎಲ್ಲರೂ ಒಟ್ಟಾಗಿದ್ದಾರೆ ಎಂದು ಈಗ ಚರ್ಚೆ ಶುರುವಾಗಿದೆ.

    ಎಲ್ಲರೂ ಜೊತೆಯಾಗಿ ಹೊಸ ಸಿನಿಮಾ ಮಾಡ್ತಿದ್ದಾರಾ? ಅಥವಾ ಕೆಡಿ ಚಿತ್ರದ ಪಾರ್ಟಿಯಲ್ಲಿ ಜೊತೆಯಾದ್ರಾ ಎಂಬುದರ ಬಗ್ಗೆ ಕ್ಲ್ಯಾರಿಟಿ ಇಲ್ಲ. ಇದರ ಜೊತೆಗೆ ಧ್ರುವ ಸರ್ಜಾ ಪತ್ನಿ ಪ್ರೇರಣಾ ಕೂಡ ಶಿಲ್ಪಾ ಶೆಟ್ಟಿ ಜೊತೆಗಿನ ವಿಶೇಷ ಫೋಟೋ ಶೇರ್ ಮಾಡಿದ್ದಾರೆ. ಇದೀಗ ಸ್ಟಾರ್ ಕಲಾವಿದರು ಒಟ್ಟಾಗಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಇದನ್ನೂ ಓದಿ:ತಮಿಳಿನತ್ತ ರೂಪೇಶ್ ಶೆಟ್ಟಿ- ಯೋಗಿ ಬಾಬು ಜೊತೆ ‘ಬಿಗ್ ಬಾಸ್’ ವಿನ್ನರ್


    ಅಂದಹಾಗೆ, ‘ಕೆಡಿ’ ಚಿತ್ರಕ್ಕೆ ಡೈರೆಕ್ಟರ್ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ರೀಷ್ಮಾ ನಾಣಯ್ಯ, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ, ಸಂಜಯ್ ದತ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಸದ್ಯದಲ್ಲೇ ರಿಲೀಸ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

  • ‘ಮಾರ್ಟಿನ್’ ಡಬ್ಬಿಂಗ್ ಮುಗಿಸಿದ ಧ್ರುವ ಸರ್ಜಾ

    ‘ಮಾರ್ಟಿನ್’ ಡಬ್ಬಿಂಗ್ ಮುಗಿಸಿದ ಧ್ರುವ ಸರ್ಜಾ

    ಅಂತೂ ಇಂತೂ ‘ಮಾರ್ಟಿನ್’ ಸಿನಿಮಾದ ಡಬ್ಬಿಂಗ್ (Dubbing) ಕೂಡ ಮುಗಿದಿದೆ. ಸುದೀರ್ಘ ಶೂಟಿಂಗ್ ನಂತರ ಮಾರ್ಟಿನ್ ಕೆಲಸಗಳು ಜೋರಾಗಿಯೇ ನಡೆಯುತ್ತಿವೆ. ಶೂಟಿಂಗ್ ಮುಗಿದ ಬೆನ್ನಲ್ಲೇ ತಮ್ಮ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮುಗಿಸಿದ್ದಾರೆ. ಆ ಫೋಟೋವನ್ನು ನಿರ್ದೇಶಕ ಎ.ಪಿ. ಅರ್ಜುನ್ (AP Arjun) ಹಂಚಿಕೊಂಡಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾದ ಕಂಪ್ಲೀಟ್ ಶೂಟಿಂಗ್ ಮುಗಿಸಿದ್ದರು ನಿರ್ದೇಶಕರು. ಹಲವು ತಿಂಗಳಿಂದ ಈ ಚಿತ್ರದ ಶೂಟಿಂಗ್ ನಡೆಯುತ್ತಲೇ ಇತ್ತು. ಇದೀಗ ಬದಾಮಿಯಲ್ಲಿ ಕೊನೆಯ ಹಂತದ ಚಿತ್ರೀಕರಣ ಮಾಡುವ ಮೂಲಕ ಕುಂಬಳಕಾಯಿ ಒಡೆಯಲಾಗಿದೆ. ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ ಸಿನಿಮಾ ಎಲ್ಲಿಗೆ ಬಂತು ಎಂದು ಅವರ ಅಭಿಮಾನಿಗಳು ಅನೇಕ ಸಲ ಕೇಳಿದ್ದಿದೆ. ಅದಕ್ಕೀಗ ಉತ್ತರ ಸಿಕ್ಕಿದೆ.

    ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದಾರೆ ಫ್ಯಾನ್ಸ್. ಯಾವಾಗ ಸಿನಿಮಾ ಬಿಡುಗಡೆ ಮಾಡೋದು ಎನ್ನುವ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

     

    ಸದ್ಯಕ್ಕೆ ಶೂಟಿಂಗ್ ಮುಗಿಸಿಕೊಂಡು, ಡಬ್ಬಿಂಗ್ ಕೂಡ ಪೂರೈಸಿದ್ದಾರೆ. ಮಾರ್ಟಿನ್ ಮೊದಲು ಬರತ್ತಾ ಅಥವಾ ಕೆಡಿ ಬರತ್ತಾ ಕಾದು ನೋಡಬೇಕು. ಮಾರ್ಟಿನ್ ಗಿಂತ ಮುಂಚೆಯೇ ಕೆಡಿ ಮುಗಿದಿರೋದ್ರಿಂದ ಚರ್ಚೆಯಂತೂ ಶುರುವಾಗಿದೆ.

  • ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಪ್ರಮೋದ್, ಪೃಥ್ವಿ ಚಿತ್ರಕ್ಕೆ ಸಾಥ್ ನೀಡಿದ ಧ್ರುವ ಸರ್ಜಾ

    ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ (Pramod) ಹಾಗೂ ದಿಯಾ ಪೃಥ್ವಿ ಅಂಬಾರ್ (Prithvi) ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ.ರಾಜಕುಮಾರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.

    ಟೀಸರ್ ರಿಲೀಸ್ ಬಳಿಕ ಧ್ರುವ ಸರ್ಜಾ ಮಾತನಾಡಿ, ಚಿತ್ರದ ಟೈಟಲ್ ಕೇಳಿದ ತಕ್ಷಣ ನನಗೆ ನೆನಪಾಗಿದ್ದು, ಭುವನಂ ಗಗನಂ (Bhuvanam Gaganam) ಸಾಂಗ್. ವಂಶಿ ಚಿತ್ರದ್ದು. ಪುನೀತ್ ಸರ್ ನೆನಪಾದರು. ಅಪ್ಪು ಸರ್ ಗೆ ಬರ್ತ್ ಡೇ ವಿಷ್ ಮಾಡ್ತಾ ಮಾತನಾಡಲು ಶುರು ಮಾಡುತ್ತೇನೆ. ನಾನು ಇವತ್ತು ಇಲ್ಲಿಗೆ ಬರಲು ಮುಖ್ಯ ಕಾರಣ ಈ ಚಿತ್ರದ ಟೆಕ್ನಿಷಿಯನ್ಸ್. ನಮ್ಮ ಅಣ್ಣ ಹಾಗೂ ಸುದೀಪ್ ಸರ್ ನಟಿಸಿದ ವರದನಾಯಕ ಸಿನಿಮಾದಲ್ಲಿ  ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದವರು ಗಿರೀಶ್ ಮೂಲಿಮನಿ.‌ ಅವರು ಈ ಚಿತ್ರದ ನಿರ್ದೇಶಕ ಗಿರೀಶ್. ಈ ಸಿನಿಮಾದ ಟ್ರೇಲರ್ ನೋಡಿದರೇ ಟೇಕಿಂಗ್ ಚೆನ್ನಾಗಿದೆ. ಈ ಚಿತ್ರದ ಡಿಒಪಿ ಉದಯ್ ಅವರು. ಅವರ ಜೊತೆ ಬಹದ್ದೂರು, ಭರ್ಜರಿ ಮಾಡಿದ್ದೇವೆ. ಅವರು ಅದ್ಭುತ ವರ್ಕರ್. ಮ್ಯೂಸಿಕ್ ಡೈರೆಕ್ಟರ್ ಜೊತೆಯೂ ಕೆಲಸ ಮಾಡಿದ್ದೇವೆ. ನಮ್ಮ ಎಡಿಟರ್ ಸುನಿಲ್ ಸರ್. ಇವತ್ತು ನಿರ್ಮಾಪಕ ಮುನೇಗೌಡರು ಜನ್ಮದಿನ.ಅವರಿಗೆ ಒಳ್ಳೆಯದು ಆಗಲಿ. ಸಿನಿಮಾದ ಹೀರೋ ಪ್ರಮೋದ್, ಹಾಗೂ ಪೃಥ್ವಿ ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿ. ಈ ಸಿನಿಮಾ ಸೂಪರ್ ಹಿಟ್ ಆಗುತ್ತದೆ  ಎಂದರು.

    ನಟ ಪ್ರಮೋದ್ ಮಾತನಾಡಿ, ಭುವನಂ ಗಗನಂ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಸಿನಿಮಾ. ಯಾಕಂದರೆ ನಾನು ಲವ್ ಸ್ಟೋರಿ ಮಾಡಿರಲಿಲ್ಲ. ಗಿರೀಶ್ ಸರ್ ಕಥೆ ಹೇಳಿದಾಗ, ಸೀನ್ಸ್ ಹೇಳಿದಾಗ ಖುಷಿಯಾಯ್ತು. ಅಂದರೆ ಈ ತರಹದ್ದು ಸಿನಿಮಾ ಮಾಡಿದರೆ ತುಂಬಾ ಜನ, ಫ್ಯಾಮಿಲಿ, ಹೆಣ್ಮಕ್ಕಳಿಗೆ ರೀಚ್ ಆಗುತ್ತದೆ.  ಅಂತಾ ಖುಷಿಪಟ್ಟು ಒಪ್ಪಿಕೊಂಡಿದ್ದೇನೆ. ಗಿರೀಶ್ ಸರ್ ಶೂಟ್ ಮಾಡಿದಾಗ ಯಾಕೆ ಇಷ್ಟು ಇವರು ನಿಧಾನ ಇದ್ದಾರೆ ಎಂದು ಗಾಬರಿಯಾಗಿತ್ತು. ಡಬ್ಬಿಂಗ್ ಶುರುವಾಗಿದೆ. ಸಿನಿಮಾ ನೋಡುತ್ತಿದ್ದೇವೆ. ಈಗ ಅವರು ಯಾಕೆ ನಿಧಾನ ಶೂಟ್ ಮಾಡಿದ್ದಾರೆ ಅನ್ನೋದು ಗೊತ್ತಾಗಿದೆ. ಪ್ರತಿಯೊಬ್ಬರು ಅವರು ಅಂದುಕೊಂಡಂತೆ ಬರಲು ತಡವಾಗಿದೆ ಎಂದು ಅರ್ಥವಾಯ್ತು. ಎಲ್ಲರಿಗೂ ಸಿನಿಮಾ ಇಷ್ಟವಾಗುತ್ತದೆ. ಮುನೇಗೌಡ ತುಂಬಾ ಫ್ಯಾಷನೇಟೆಡ್ ನಿರ್ಮಾಪರು ಎಂದರು.

    ನಿರ್ದೇಶಕ ಗಿರೀಶ್ ಮಾತನಾಡಿ, ಭುವನಂ ಗಗನಂ ಟೀಸರ್ ಲಾಂಚ್ ಮಾಡಿದ್ದೇವೆ.  ಟೀಸರ್ ಲಾಂಚ್ ಮಾಡಲು ಕಾರಣ ನಿರ್ಮಾಪಕ ಹುಟ್ಟುಹಬ್ಬ. ಅವರ ಬರ್ತ್ ಡೇಗೆ ಏನಾದರೂ ಗಿಫ್ಟ್ ಕೊಡಲು ಟೀಸರ್ ಲಾಂಚ್ ಮಾಡಿದ್ದೇವೆ. ಸಿನಿಮಾ ಜರ್ನಿ ಬಗ್ಗೆ ಹೇಳಲು ತುಂಬಾ ಇದೆ. ಇದು ಜಸ್ಟ್ ಟೀಸರ್. ಮುಂದೆ ಸಾಂಗ್ ಇದೆ. ಟ್ರೇಲರ್ ಇದೆ. ಸಿನಿಮಾ ಚೆನ್ನಾಗಿದೆ. ಅದರಲ್ಲೂ ಯೂತ್ಸ್ ಗೆ ಕನೆಕ್ಟ್ ಆಗುತ್ತದೆ. ಫ್ಯಾಮಿಲಿ ಎಂಟರ್ ಟೈನರ್ ಕಥೆ ಇದೆ. ಸಿನಿಮಾದ ಪ್ರತಿ ಹಂತದಲ್ಲಿಯೂ ನಿರ್ಮಾಪಕರು ಬೆಂಬಲವಾಗಿ ನಿಂತಿದ್ದಾರೆ ಎಂದರು. ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ಭುವನಂ ಗಗನಂ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಇವರು ರಾಜರು ಎಂಬ ಚಿತ್ರ ಮಾಡಿದ್ದರು. ಇದೀಗ ಭುವನಂ ಗಗನಂ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂಗೆ ಹಣ ಹಾಕಿದ್ದಾರೆ.

    ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ. ಮಾನ್ಸೂನ್ ಗೆ ಭುವನಂ ಗಗನಂ ಸಿನಿಮಾ ತೆರೆಗೆ ಬರಲಿದೆ.

  • ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ಧ್ರುವ ಸರ್ಜಾ

    ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ಧ್ರುವ ಸರ್ಜಾ

    ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಶೂಟಿಂಗ್‌ಗೆ ಬ್ರೇಕ್ ನೀಡಿ ‘ಭುವನಂ ಗಗನಂ’ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಚಿತ್ರದ ಟೀಸರ್ ರಿಲೀಸ್ ಮಾಡಿ ತಂಡಕ್ಕೆ ಶುಭಕೋರಿದ್ದಾರೆ. ಈ ವೇಳೆ, ಅಭಿಮಾನಿಗಳಿಗೆ ಧ್ರುವ ಸರ್ಜಾ ಮನವಿವೊಂದನ್ನು ಮಾಡಿದ್ದಾರೆ.

    ಪ್ರಮೋದ್, ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಟೀಸರ್ ಲಾಂಚ್ ಇವೆಂಟ್‌ಗೆ ಧ್ರುವ ಸರ್ಜಾ ಅತಿಥಿಯಾಗಿ ಆಗಮಿಸಿದ್ದರು. ನಾನು ಅವರ ಅಭಿಮಾನಿಗಳು ಎನ್ನಬೇಡಿ. ಪ್ರತಿ ಸಿನಿಮಾಗೂ ಪ್ರೀತಿ ತೋರಿಸಿ ಎಂದು ನಟ ಫ್ಯಾನ್ಸ್‌ಗೆ ಸಲಹೆ ನೀಡಿದ್ದಾರೆ.

    ನಾಳೆ ಅಪ್ಪು ಸರ್ ಹುಟ್ಟುಹಬ್ಬ ಎಂದು ಧ್ರುವ ಸರ್ಜಾ, ಪುನೀತ್‌ರನ್ನು ಸ್ಮರಿಸಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಫ್ಯಾನ್ಸ್ ವಾರ್ ಇತ್ತೀಚೆಗೆ ತುಸು ಹೆಚ್ಚಾಗಿದೆ. ಸ್ಟಾರ್ ನಟರ ಅಭಿಮಾನಿಗಳು ಇನ್ನೊಬ್ಬ ನಟನನ್ನು ಸಾಮಾಜಿಕ ಜಾಲತಾಣದಲ್ಲಿ ಹೀಯಾಳಿಸುವುದು, ಇನ್ನೊಬ್ಬ ನಟನ ಅಭಿಮಾನಿಗಳೊಟ್ಟಿಗೆ ಜಗಳ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕಿಂತಲೂ ಮುಂದೆ ಹೋಗಿ, ಇತರೆ ನಟನ ಸಿನಿಮಾವನ್ನೇ ತುಳಿಯುವ ಪ್ರಯತ್ನಗಳೂ ನಡೆದಿವೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಮತ್ತೆ ಸೆಕ್ಸಿಯಾಗಿ ಡಾನ್ಸ್ ಮಾಡಲಾರೆ: ನಟಿ ಸಮಂತಾ ಘೋಷಣೆ

    ನಾವೆಲ್ಲರೂ ಒಂದೇ ಎಂದಿದ್ದಾರೆ. ಯಾರ ಫ್ಯಾನ್ ಆದರೂ ಆಗಿರಿ ಆದರೆ ಕನ್ನಡ ಸಿನಿಮಾಗಳನ್ನು ತಪ್ಪದೇ ನೋಡಿರಿ ಎಂದು ಮನವಿ ಮಾಡಿದ್ದಾರೆ. ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ ಬೆಂಬಲಿಸಿ ಎಂದು ಧ್ರುವ ಮಾತನಾಡಿದ್ದಾರೆ.

  • ಟ್ಯಾಂಕರ್ ಮೂಲಕ ಉಚಿತ ನೀರು ಕೊಟ್ಟ ನಟ ಧ್ರುವ ಸರ್ಜಾ

    ಟ್ಯಾಂಕರ್ ಮೂಲಕ ಉಚಿತ ನೀರು ಕೊಟ್ಟ ನಟ ಧ್ರುವ ಸರ್ಜಾ

    ಬೇಸಿಗೆ ಕೇವಲ ಬೆಂಕಿ ಮಾತ್ರ ಉಗುಳುತ್ತಿಲ್ಲ, ಅದರ ಜೊತೆಗೆ ನೀರಿನ ಹಾಹಾಕಾರವನ್ನೂ ಸೃಷ್ಟಿ ಮಾಡಿದೆ. ಅದರಲ್ಲೂ ಬೆಂಗಳೂರಿನ ಸಾಕಷ್ಟು ಬಡಾವಣೆಗಳಲ್ಲಿ ನೀರೇ ಸಿಗುತ್ತಿಲ್ಲ. ವಾರಕ್ಕೆ ಇಂತಿಷ್ಟು ದಿನ ಅಂತ ಕಾವೇರಿ ನೀರನ್ನು ಒದಗಿಸಲಾಗುತ್ತಿದೆ. ಜೊತೆಗೆ ಟ್ಯಾಂಕರ್ ಮೂಲಕ ಸರಕಾರವು ನೀರನ್ನು ಪೂರೈಸುತ್ತಿದೆ. ಇಷ್ಟೆಲ್ಲ ಕಷ್ಟವನ್ನು ನೋಡಿರುವ ಧ್ರುವ ಸರ್ಜಾ ಅಭಿಮಾನಿಗಳು, ಧ್ರುವ (Dhruva Sarja) ಹೆಸರಿನಲ್ಲಿ ಟ್ಯಾಂಕರ್ ಮೂಲಕ ಉಚಿತವಾಗಿ ನೀರು ಸರಬರಾಜು ಮಾಡುತ್ತಿದ್ದಾರೆ.

    ಬೆಂಗಳೂರಿನ (Bangalore) ಕಂಗೇರಿಯ ಏರಿಯಾದಲ್ಲಿ ಧ್ರುವ ಸರ್ಜಾ ಅಭಿಮಾನಿಗಳ ಪೋಸ್ಟರ್ ಅಂಟಿಸಿದ ಟ್ಯಾಂಕರ್ ಅಲ್ಲಿನ ನಿವಾಸಿಗಳಿಗೆ ಮನೆ ಮನೆಗೂ ತೆರಳಿ ನೀರು ಪೂರೈಸುತ್ತಿದೆ. ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

     

    ಬೇಸಿಗೆ ಸಮಯದಲ್ಲಿ ಈ ಹಿಂದೆ ಯಶ್ ಅಭಿಮಾನಿಗಳು ಕೂಡ ಗದಗ ಜಿಲ್ಲೆಯ ಅನೇಕ ಹಳ್ಳಿಗಳಿಗೆ ನೀರು ಕೊಟ್ಟಿದ್ದರು. ಸಾಕಷ್ಟು ಹಳ್ಳಿಗಳಲ್ಲಿ ಯಶ್ ಹೆಸರಿನಲ್ಲಿ ಈಗಲೂ ಅನೇಕ ರೀತಿಯ ಸಹಾಯ ಮಾಡುತ್ತಿರುತ್ತಾರೆ. ಈ ಬಾರಿಯೂ ಹಲವು ಹಳ್ಳಿಗಳಲ್ಲಿ ನೀರು ನೀಡಲಾಗುತ್ತಿದೆ ಎನ್ನುವ ಮಾಹಿತಿಯೂ ಇದೆ.