Tag: Dhruvanarayana

  • ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ

    ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರೇ ಕಾರ್ಯಕರ್ತರ ಕಿತ್ತಾಟ

    ಹಾಸನ: ಜಿಲ್ಲಾ ಕಾಂಗ್ರೆಸ್‌ನಲ್ಲಿ (Congress) ಬಣ ರಾಜಕೀಯ ಹಾಗೂ ಭಿನ್ನಮತ ಮುಂದುವರಿದಿದೆ. ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಆರ್.ಧ್ರುವನಾರಾಯಣ್ (R Dhruvanarayana) ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಮ್ಮ ಸಿಟ್ಟು ಹೊರ ಹಾಕಿದರು.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಆರಂಭ ಆಗುತ್ತಿದ್ದಂತೆಯೇ ಮಾತನಾಡಿದ ಹಲವು ಮುಖಂಡರು, ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಅಸಮಾಧಾನ ಹೊರಹಾಕಿದರು. ಜಿಲ್ಲಾ ನಾಯಕರು ಹಾಗೂ ಮುಖಂಡರ ಅಭಿಪ್ರಾಯ ಪಡೆಯದೆ ಇ.ಹೆಚ್.ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ನಾಯಕರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ (Siddaramaiah) ಅವರನ್ನು ಬಿಜೆಪಿಯವರು (BJP) ಸಿದ್ರಾಮುಲ್ಲಾಖಾನ್ ಅಂತಾರೆ. ಅಂತಹ ಬಿಜೆಪಿಯಲ್ಲಿದ್ದವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದೀರಿ, ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು ಎಂದು ಕೆಂಡಾಮಂಡಲರಾದರು.

    ಇಪ್ಪತ್ತೈದು ವರ್ಷದಲ್ಲಿ ಉತ್ತಮ ಅಧ್ಯಕ್ಷರನ್ನು ನೇಮಕ ಮಾಡಲು ಆಗಿಲ್ಲ. ನಾಚಿಕೆ ಆಗಬೇಕು ನಿಮಗೆ, ನಿಮ್ಮ ಹತ್ರ ಹಣವಿರಬಹುದು, ನಾವಿಲ್ಲದಿದ್ದರೆ ನೀವು ಏನೂ ಮಾಡಲು ಆಗಲ್ಲ ಎಂದು ಬಹಿರಂಗ ಸಭೆಯಲ್ಲಿ ಸಿಟ್ಟಾದರು. ರಾಜ್ಯ ನಾಯಕರು ಪಕ್ಷದ ಹಿತದೃಷ್ಟಿ ಹಾಗೂ ಸಂಘಟನೆ ದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿರುತ್ತಾರೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಇದಾದ ಬಳಿಕವೂ ಇದೇ ವಿಷಯವಾಗಿ ಅಸಮಾಧಾನ, ಗದ್ದಲ, ಗೊಂದಲ ಮುಂದುವರಿಯಿತು. ಒಬ್ಬರ ಪರ ಇನ್ನೊಬ್ಬರು ಮಾತನಾಡಿದ್ದರಿಂದ ಸಭೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಮುಖಂಡರು ಮತ್ತು ಕಾರ್ಯಕರ್ತರ ನಡುವಿನ ವಾಗ್ವಾದ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ಕಾರ್ಯಕರ್ತರ ಗದ್ದಲ ನಿಯಂತ್ರಿಸಲಾಗದೆ ರಾಜ್ಯ ನಾಯಕರು ಮೂಕ ಪ್ರೇಕ್ಷಕರಾದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗಿದೆ ಎಂದು ಧ್ರುವನಾರಾಯಣ್ ಸಮ್ಮುಖದಲ್ಲೇ ಕೈಪಡೆ ಕಿತ್ತಾಡಿಕೊಂಡರು. ಇದನ್ನೂ ಓದಿ: ಅಫ್ತಾಬ್‌ನನ್ನು ಗಲ್ಲಿಗೇರಿಸಿ, ಪೋಷಕರಿಗೂ ಕಠಿಣ ಶಿಕ್ಷೆ ನೀಡಿ: ಶ್ರದ್ಧಾ ತಂದೆ ಆಕ್ರೋಶ

    ಈ ನಡುವೆ ಬೇಲೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಮಾಜಿಸಚಿವ ಬಿ.ಶಿವರಾಂ ಪರವಾಗಿ ಮಾತನಾಡಲು ಮುಂದಾದವರ ವಿರುದ್ಧ ಅನೇಕರು ಕಿಡಿಕಾರಿದರು. ಶಿವರಾಂ ಪರವಾಗಿ ಮಾತನಾಡುತ್ತಿದ್ದವರ ಮೇಲೆ ಕೆಲವರು ಮುಗಿ ಬಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಯಿತು. ವಾಗ್ವಾದ ನಡೆಸುತ್ತಿದ್ದವರನ್ನು ಸಭೆಯಿಂದ ಹೊರಕಳಿಸಿ ಉಳಿದ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು. ಆದರೂ ಸುಮ್ಮನಾಗದ ಕೆಲವರು, ಕಾಂಗ್ರೆಸ್ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದರು. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು, ಆಗಲೇ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದೀವಿ ಅನ್ಕೊಂಡಿದ್ದೀರಾ, ಇದೇ ರೀತಿ ಆದರೆ ಎಲ್ಲೂ ಗೆಲ್ಲಲು ಆಗಲ್ಲ ಎಂದು ಗುಡುಗಿದರು. ಇದನ್ನೂ ಓದಿ: ರಾಜ್ಯದ ಹಿತಕ್ಕಾಗಿ ಪ್ರಣಾಳಿಕೆ ಸಂಬಂಧ ವಿಶ್ವನಾಥ್ ಜೊತೆ ಚರ್ಚೆ ಮಾಡಿದ್ದೇನೆ: ಡಿಕೆಶಿ

    Live Tv
    [brid partner=56869869 player=32851 video=960834 autoplay=true]

  • ಸಿದ್ದುಗೆ ಡಬಲ್ ಟೆನ್ಷನ್ – ಪರಮಾಪ್ತ ಮಹದೇವಪ್ಪಗೆ ಸಿಗುತ್ತಾ ಟಿಕೆಟ್?

    ಸಿದ್ದುಗೆ ಡಬಲ್ ಟೆನ್ಷನ್ – ಪರಮಾಪ್ತ ಮಹದೇವಪ್ಪಗೆ ಸಿಗುತ್ತಾ ಟಿಕೆಟ್?

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ಒಂದು ಕಡೆ ತಾವು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಬೇಕು ಎಂಬ ಗೊಂದಲದ ಟೆನ್ಷನ್. ಮತ್ತೊಂದು ಕಡೆ ತಮ್ಮ ಪರಮಾಪ್ತನ ಕುಟುಂಬಕ್ಕೆ ಎರಡು ಟಿಕೆಟ್ ಕೊಡಿಸಲೇ ಬೇಕಾದ ಟೆನ್ಷನ್. ಈ ಎರಡು ಟೆನ್ಷನ್‌ಗಳ ನಡುವೆ ಸಿದ್ದರಾಮಯ್ಯ ಒದ್ದಾಡುತ್ತಿದ್ದಾರೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ (HC Mahadevappa) ಪರಮಾಪ್ತ ಸ್ನೇಹಿತರು. ಎರಡು ದೇಹ ಒಂದೇ ಮನಸ್ಸು ಎಂಬ ರೀತಿ ಇರುವ ಜೋಡಿ ಇದು. ಈಗ ಡಾ.ಎಚ್.ಸಿ. ಮಹಾದೇವಪ್ಪ ಮತ್ತು ಅವರ ಮಗ ಸುನೀಲ್ ಬೋಸ್ ಇಬ್ಬರು ವಿಧಾನಸಭಾ ಚುನಾವಣೆಯ (Assembly election 2022) ಅಖಾಡಕ್ಕೆ ಇಳಿಯುವ ತಯಾರಿಯಲ್ಲಿದ್ದಾರೆ. ಡಾ.ಮಹದೇವಪ್ಪ ತಾವು ಸ್ಪರ್ಧಿಸುತ್ತಿದ್ದ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಮಗನನ್ನು ಕಣಕ್ಕೆ ಇಳಿಸೋದು ತಾವು ಇದೇ ಕ್ಷೇತ್ರದ ಪಕ್ಕದ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ಲಾನ್ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಆಯಾ ಕ್ಷೇತ್ರಗಳಲ್ಲಿ ತಂದೆ – ಮಗ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ – ಮೂವರು ಸಾವು, ಇಬ್ಬರಿಗೆ ಗಾಯ

    ಈ ನಡುವೆ ಲೋಕಸಭಾ ಚುನಾವಣೆಯಲ್ಲಿ (MP Election) ಸೋತ ಬಳಿಕ ಕೆಪಿಸಿಸಿ (KPCC)  ಕಾರ್ಯಾಧ್ಯಕ್ಷ ಧ್ರುವ ನಾರಾಯಣ (R Dhruvanarayana) ರಾಜ್ಯ ರಾಜಕೀಯಕ್ಕೆ ಮರು ಪ್ರವೇಶಿಸಲು ನಿರ್ಧರಿಸಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಓಡಾಟ ಶುರು ಮಾಡಿಕೊಂಡಿದ್ದಾರೆ. ಧ್ರುವ ನಾರಾಯಣ ಅವರು ಓಡಾಟ ಶುರು ಮಾಡಿಕೊಂಡ ಮೇಲೆಯೇ ಸಿದ್ದರಾಮಯ್ಯಗೆ ಸ್ನೇಹಿತನ ಟಿಕೆಟ್ ವಿಚಾರದಲ್ಲಿ ಟೆನ್ಷನ್ ಹೆಚ್ಚಾಗಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವು

    ಧೃವನಾರಾಯಣ್ ಹೇಳಿ ಕೇಳಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷರೂ ಆಗಿದ್ದಾರೆ. ಕಾರಣ ಅವರನ್ನು ಟಿಕೆಟ್ ರೇಸ್‌ನಿಂದ ಹಿಂದೆ ಸರಿಸೋದು ಸುಲಭವಲ್ಲ. ನಂಜನಗೂಡು ಟಿಕೆಟ್ ವಿಚಾರದಲ್ಲಿ ಸಿದ್ದರಾಮಯ್ಯಗೆ ತಲೆ ಬೀಸಿ ಶುರು ಮಾಡಿಸಿದೆ. ಸಿದ್ದರಾಮಯ್ಯ ಅವರೇ ಇನ್ನೂ ತಾವು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯಬೇಕು ಎಂದು ನಿರ್ಧರಿಸಲಾಗದೇ ಗೊಂದಲದಲ್ಲಿ ಮುಳುಗಿರುವಾಗ ಇದರ ಜೊತೆಗೆ ಪರಮಾಪ್ತ ಸ್ನೇಹಿತನ ರಾಜಕೀಯ (Politics) ಭವಿಷ್ಯವೂ ಅವರನ್ನು ಚಿಂತೆಗೆ ಈಡು ಮಾಡಿದೆ. ಪರಮಾಪ್ತ ಸ್ನೇಹಿತನಿಗೂ ಟಿಕೆಟ್ ಕೊಡಿಸದೇ ಹೋದರೆ ಹೇಗೆ? ಎಂಬುದು ಸಿದ್ದರಾಮಯ್ಯರನ್ನ ಕಾಡುತ್ತಿರುವ ಪ್ರಶ್ನೆಯಾಗಿದೆ.

    ಮೈಸೂರು (Mysuru) ಜಿಲ್ಲೆಯ 11 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಪಾಲಿಗೆ ಟಿಕೆಟ್ ಹಂಚುವ ವಿಚಾರದಲ್ಲಿ ಹೆಚ್ಚು ಒತ್ತಡ ಇರೋದು ನಂಜನಗೂಡು ಕ್ಷೇತ್ರದ್ದು ಮಾತ್ರ. ಉಳಿದ ಕ್ಷೇತ್ರಗಳ ಟಿಕೆಟ್ ಹಂಚಿಕೆ ಸಿದ್ದರಾಮಯ್ಯರಂತಹ ರಾಜಕಾರಣಿಗೆ ನೀರು ಕುಡಿದಷ್ಟೆ ಸುಲಭ. ಆದರೆ ನಂಜನಗೂಡು ಕ್ಷೇತ್ರದ ಟಿಕೆಟ್ ವಿಚಾರ ಮಾತ್ರ ಸಲೀಸಾಗಿ ಇಲ್ಲ.

    ಡಾ.ಎಚ್.ಸಿ. ಮಹದೇವಪ್ಪ ತಮಗೆ ನಂಜನಗೂಡು ಟಿಕೆಟ್ ನಿಶ್ಚಿತ ಎಂಬಂತೆ ಬಹಳ ಆತ್ಮವಿಶ್ವಾಸದಲ್ಲಿ ಕಾರ್ಯಕರ್ತರ ಸಭೆಗಳನ್ನು ನಡೆಸಿ ಚುನಾವಣಾ ತಯಾರಿಯಲ್ಲಿ ಮುಳುಗಿದ್ದಾರೆ. ಧೃವನಾರಾಯಣ ಕೂಡ ಪಕ್ಷದ ದೊಡ್ಡ ಜವಾಬ್ದಾರಿ ಹೊತ್ತಿರೋ ಕಾರಣ ತಮಗೇ ಟಿಕೆಟ್ ಸಿಗಬಹುದು ಎಂದು ನಂಜನಗೂಡಿನ ಸಂಘಟನೆ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಹೀಗಾಗಿ ನಂಜನಗೂಡು ಕಾಂಗ್ರೆಸ್ ಕಾರ್ಯಕರ್ತರಿಗೆ ತಾವು ಯಾರ ಬೆನ್ನಿಗೆ ನಿಲ್ಲಬೇಕು ಎಂಬ ಗೊಂದಲವೂ ಕಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಕೆ: ಧ್ರುವನಾರಾಯಣ

    ಚಾಮರಾಜನಗರ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ವಿಸ್ತೃತ ಮೇಕೆದಾಟು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರಾಗಿ ಡಿ.ಕೆ ಶಿವಕುಮಾರ್ ಇದ್ದರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕೆಪಿಸಿಸಿ ಕಾರ್ಯದರ್ಶಿ ಧ್ರುವನಾರಾಯಣ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಸ್ತೃತ ಯೋಜನಾ ವರದಿ ಸಲ್ಲಿಸಿ ಒಂದೂವರೆ ವರ್ಷ ಕಳೆದಿದೆ. ಆದರೂ ಸರ್ಕಾರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತೇವೆ. ಇದು ರಾಜಕೀಯಕ್ಕೋಸ್ಕರ ಅಥವಾ ಜನರ ಮತ ಸೆಳೆಯಲು ಮಾಡುತ್ತಿಲ್ಲ. ಈ ವಿಚಾರವನ್ನು ಕುಮಾರಸ್ವಾಮಿ ಅರಿತುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಕಳೆದ ಒಂದೂವರೆ ವರ್ಷದಿಂದ ಈ ಯೋಜನೆಯ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಯೋಜನೆ ಜಾರಿಗೊಳಿಸುವಂತೆ ಒಂದು ರಾಜಕೀಯ ಪಕ್ಷವಾಗಿ ಒತ್ತಾಯಿಸುವುದು ತಪ್ಪೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ಹಿಂದೂಗಳಿಗೆ ಹಿಂದೂಗಳಾಗಿ ಹುಟ್ಟಿದ್ದೇ ತಪ್ಪು ಅನ್ನಿಸಬಾರದು: ಸಿ.ಟಿ.ರವಿ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ವಿಚಾರವಾಗಿ ಮಾತನಾಡಿದ ಅವರು, ಸಹಜವಾಗಿ ಆಡಳಿತ ಪಕ್ಷ ಹೆಚ್ಚಿನ ಸ್ಥಾನ ಗಳಿಸುತ್ತದೆ. ಆದರೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಸರ್ಕಾರ ಕೋವಿಡ್ ಸಂದರ್ಭದಲ್ಲಿ ಜನರ ಕಷ್ಟ ಕೇಳಲಿಲ್ಲ. ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡಲು ವಿಫಲವಾಗಿದೆ. ಅಷ್ಟೇ ಅಲ್ಲದೆ ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದರು. ಇದನ್ನೂ ಓದಿ: ಪಾದಯಾತ್ರೆಗೆ ಭಾಗವಹಿಸಿ ಏನು ಮಾಡಲಿ ಹೇಳಿ: ಡಿಕೆಶಿಗೆ ಟಾಂಗ್ ಕೊಟ್ಟ HDK

    ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಪ್ರಾರಂಭವಾಗಿದೆ. ಈ ಫಲಿತಾಂಶ ಮುಂಬರುವ ಜಿಪಂ, ತಾಪಂ, ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಜನಪರ ಆಡಳಿತ ನೀಡುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಪ್ರತಿಕ್ರಿಯಿಸಿದರು.

  • ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ಈಶ್ವರಪ್ಪ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಧ್ರುವನಾರಾಯಣ

    ರಾಯಚೂರು: ಪದೇ ಪದೇ ಬೇಜವಾಬ್ದಾರಿ ಹೇಳಿಕೆ ನೀಡುವ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಉಚ್ಛಾಟನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹೇಳಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ಧ್ರುವನಾರಾಯಣ, ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮೊದಲಿನಿಂದಲೂ ಇಂತಹ ಹೇಳಿಕೆ ನೀಡುವಲ್ಲಿ ಈಶ್ವರಪ್ಪ ನಿಸ್ಸೀಮರು. ನಾಲಿಗೆಗೆ ಎಲುಬಿಲ್ಲ, ಈಶ್ವರಪ್ಪಗೆ ಮೆದುಳು ಸಹ ಇದೆಯೋ, ಇಲ್ಲವೋ ಗೊತ್ತಿಲ್ಲಾ. ಮಾನಸಿಕ ಸ್ಥಿಮಿತತೆಯನ್ನು ಈಶ್ವರಪ್ಪ ಕಳೆದುಕೊಂಡಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದನ್ನು ಮುಂದೆಯಾದರೂ ಬಿಡಬೇಕು ಎಂದಿದ್ದಾರೆ.

    ಇತ್ತೀಚೆಗೆ ತಲೆಗಳನ್ನು ತೆಗೆಯುವ ಬಗ್ಗೆ ಮಾತನಾಡಿದ್ದರು. ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ್ವೇಷ ದಳ್ಳೂರಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಪದೇ ಪದೇ ನೀಡುವುದರಿಂದ ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಮುಖ್ಯಮಂತ್ರಿಗಳು ಇವರನ್ನು ಕೂಡಲೇ ಸಂಪುಟದಿಂದ ಉಚ್ಛಾಟಿಸಬೇಕು ಎಂದು ಧ್ರುವನಾರಾಯಣ ಹೇಳಿದ್ದಾರೆ.   ಇದನ್ನೂ ಓದಿ:ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ

  • ಬಾಲ್ಯದಲ್ಲಿ ಅಸ್ಪೃಶ್ಯತೆಯ ನೋವುಂಡಿದ್ದೇನೆ: ಧೃವನಾರಾಯಣ್

    ಬಾಲ್ಯದಲ್ಲಿ ಅಸ್ಪೃಶ್ಯತೆಯ ನೋವುಂಡಿದ್ದೇನೆ: ಧೃವನಾರಾಯಣ್

    ಮೈಸೂರು: ಏಸು ಪ್ರತಿಮೆ ಸ್ಥಾಪನೆಗೆ ಕನಕಪುರ ಹಾರೋಬೆಲೆಯಲ್ಲಿ ಜಮೀನು ನೀಡಿರುವ ವಿಚಾರಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಡೆಗೆ ಮಾಜಿ ಸಂಸದ ಧೃವನಾರಾಯಣ್ ಬೆಂಬಲ ನೀಡಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧೃವನಾರಾಯಣ್, ತಾವು ಬಾಲ್ಯದಲ್ಲಿ ಅಸ್ಪೃಶ್ಯತೆ ವಿಚಾರದಲ್ಲಿ ಅನುಭವಿಸಿದ ನೋವಿನ ಬಗ್ಗೆ ಬೇಸರದಿಂದ ಮಾತನಾಡಿದರು. ಅಸ್ಪೃಶ್ಯತೆ ನೋವುಂಡವರಿಗೆ ಮಾತ್ರ ಅದರ ನೋವು ಗೊತ್ತು. ನಾನು ಬಾಲ್ಯದಲ್ಲಿ ಅಸ್ಪೃಶ್ಯತೆಗೆ ಒಳಗಾಗಿದ್ದೆ ಎಂದು ತಮ್ಮ ನೋವನ್ನು ಬಿಚ್ಚಿಟ್ಟರು.

    ನಾನು ಸೆಂಟ್‍ಫಿಲೋಮಿನ ಬೋರ್ಡಿಂಗ್ ಶಾಲೆಯಲ್ಲಿ ಓದುತ್ತಿದ್ದಾಗ ಅಸ್ಪೃಶ್ಯತೆ ನೋವಿಗೆ ಒಳಗಾಗಿದ್ದೆ. 5ನೇ ತರಗತಿ ಓದುತ್ತಿದ್ದ ನಾನು ಹಾಸ್ಟೆಲ್‍ಗೆ ಹೋದ ಮೊದಲ ದಿನವೇ ಸಹಪಾಠಿಯೊಬ್ಬ ನನ್ನ ಜಾತಿ ಕೇಳಿದ್ದರು. ಹಾಸ್ಟೆಲ್ ಕೋಣೆಯಲ್ಲಿ ಬ್ಯಾಗ್ ಇಟ್ಟು ಬರುತ್ತಿದ್ದ ನನಗೆ ವಿದ್ಯಾರ್ಥಿಯೊಬ್ಬ ನೀನು ಯಾವ ಜಾತಿಯವ ಎಂದು ಕೇಳಿದ್ದ. ಆ ಸಂದರ್ಭದಲ್ಲಿ ಶಾಲೆಯಲ್ಲಿ ಇದ್ದ ಏಕೈಕ ದಲಿತ ವಿದ್ಯಾರ್ಥಿ ನಾನಾಗಿದ್ದೆ. ಈ ರೀತಿ ಯಾರು ಅಸ್ಪೃಶ್ಯತೆಗೆ ಒಳಗಾಗಿಲ್ಲವೋ ಅವರಿಗೆ ಅದು ಗೊತ್ತಾಗುವುದಿಲ್ಲ ಎಂದು ಜಾತಿ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

    ಹಬ್ಬದ ಸಂದರ್ಭದಲ್ಲಿ ಸಮುದಾಯಕ್ಕೆ ನೋವುಂಟು ಮಾಡುವುದು ಸಮಂಜಸವಲ್ಲ. ಆದ್ದರಿಂದ ನಾನು ಬಿಜೆಪಿ ನಾಯಕರಿಗೆ ಸಲಹೆ ನೀಡುತ್ತಿದ್ದೇನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದು, ಉತ್ತಮ ಆಡಳಿತ ನೀಡುವ ಅವಕಾಶ ಲಭಿಸಿದೆ. ಆದ್ದರಿಂದ ಇಂತಹ ಸಂಗತಿಗಳನ್ನು ರಾಜಕೀಯ ಮಾಡುವುದನ್ನು ಬಿಡಬೇಕು. ಆ ಗ್ರಾಮದಲ್ಲಿ ಶೇ.90 ರಷ್ಟು ಒಂದೇ ಧರ್ಮದವರಿದ್ದು, ಅವರ ಬೇಡಿಕೆಯಂತೆ ಸ್ಥಳೀಯ ಶಾಸಕರು ಕಾನೂನಿನ ಅಡಿ ಜಮೀನು ಮಂಜೂರು ಮಾಡಿದ್ದಾರೆ. ಒಂದು ಧರ್ಮದ ವಿರುದ್ಧ ವೈಷಮ್ಯ ಮೂಡಿಸುವ ಮೂಲಕ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.