Tag: dia film

  • ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಸಲಾರ್’ ಪ್ರಮೋದ್- ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ‘ಭುವನಂ ಗಗನಂ’ (Bhuvanam Gaganam Film) ಸಿನಿಮಾ ತನ್ನ ಟೈಟಲ್ ಮೂಲಕ ಗಾಂಧಿನಗರದ ಟಾಕ್ ಐಟಂ ಎನಿಸಿಕೊಂಡಿದೆ. ‘ಸಲಾರ್’ (Salaar) ಸಿನಿಮಾ ಖ್ಯಾತಿ ಪ್ರಮೋದ್, ‘ದಿಯಾ’ (Dia) ಖ್ಯಾತಿಯ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿ ಅದ್ಧೂರಿ ಸೆಟ್ ಹಾಕಿ ಕೊನೆ ದಿನ ಚಿತ್ರೀಕರಣ ನಡೆಸಲಾಗಿದೆ. ಈ ವೇಳೆ, ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.

    ನಟ ಪ್ರಮೋದ್ (Pramod) ಮಾತನಾಡಿ, ನನ್ನ ಭಾಗದ ಶೂಟಿಂಗ್ ಅಕ್ಟೋಬರ್ ತಿಂಗಳಲ್ಲಿಯೇ ಮುಗಿತ್ತು. ತುಂಬಾ ಚೆನ್ನಾಗಿ ಮೂಡಿಬಂದಿದೆ. ಅದ್ಭುತ ಶೂಟಿಂಗ್ ಸೆಟ್ ಹಾಕಿದ್ದಾರೆ. ಇದಕ್ಕೆಲ್ಲಾ ಮುನೇಗೌಡರ ಬೆಂಬಲವಿದೆ. ಅವರಿಗೆ ಸಿನಿಮಾ ಮೇಲೆ ಹೆಚ್ಚು ಫ್ಯಾಷನ್ ಇದೆ. ಸ್ಕ್ರಿನ್‌ ಪ್ಲೇ ಅದ್ಭುತವಾಗಿದೆ. ಈ ಚಿತ್ರದಲ್ಲಿ ನಾನು ಸ್ಟೈಲೀಶ್ ಆಗಿ ಲವ್ ಬಾಯ್ ಆಗಿ ಕಾಣಿಸಿಕೊಂಡಿದ್ದೇನೆ ಎಂದರು. ಇದನ್ನೂ ಓದಿ:ದೊಡ್ಮನೆಯಲ್ಲಿ ಬಿಗ್‌ ಫೈಟ್-‌ ಸಮರ್ಥ್‌ನ ಕೆನ್ನೆಗೆ ಬಾರಿಸಿ ಎಲಿಮಿನೇಟ್‌ ಆದ ಅಭಿಷೇಕ್‌

    ನಟ ಪೃಥ್ವಿ ಅಂಬರ್ (Pruthvi Ambar) ಮಾತನಾಡಿ, ಮುನೇಗೌಡರ ಎಸ್‌ವಿಸಿ ಫಿಲ್ಮಂಸ್ ದೊಡ್ಡ ಸಂಸ್ಥೆಯಾಗಿ ಚಿತ್ರರಂಗದಲ್ಲಿ ಹೊರಹೊಮ್ಮಬೇಕು. ಒಬ್ಬ ಸ್ಟ್ರಾಂಗ್ ಪ್ರೊಡ್ಯೂಸರ್ ಸಿಗುವುದು ಕಷ್ಟ. ಈ ಕಂಟೆಂಟ್‌ಗೆ ಏನು ಬೇಕೋ ಅದನ್ನು ಮನಸಾರೆ, ತುಂಬಾ ಪ್ರೀತಿ ಇಟ್ಟು ಕೊಟ್ಟಿದ್ದಾರೆ. ಈ ಸಂಸ್ಥೆಯಿಂದ ತುಂಬಾ ಒಳ್ಳೆಯ ಸಿನಿಮಾಗಳು ಬರಬೇಕು. ನನ್ನ ಪಾತ್ರ ತುಂಬಾ ಭಿನ್ನವಾಗಿ ಮೂಡಿ ಬಂದಿದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ಇದನ್ನೂ ಓದಿ:ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ನಿರ್ದೇಶಕ ಗಿರೀಶ್ ಮೂಲಿಮನಿ ಮಾತನಾಡಿ, ಒಂದೂವರೆ ವರ್ಷದ ಹಿಂದೆ ‘ಭುವನಂ ಗಗನಂ’ ಜರ್ನಿ ಶುರುವಾಗಿತ್ತು. ಅಲ್ಲಿಂದ ಇಲ್ಲಿವರೆಗೆ ನಾವು ನಿಮ್ಮನ್ನು ಭೇಟಿಯಾಗಲು ಆಗಿರಲಿಲ್ಲ. ಈಗ ಚಿತ್ರೀಕರಣ ಮುಕ್ತಾಯಗೊಂಡಿದೆ. ಎಲ್ಲರ ಸಹಕಾರ ನಮ್ಮ ಸಿನಿಮಾ ಮೇಲೆ ಇರಲಿ ಎಂದರು.

    ನಿರ್ಮಾಪಕ ಎಂ ಮುನೇಗೌಡ ಮಾತನಾಡಿ, ಒಂದೂವರೆ ವರ್ಷ ಹಿಂದೆ ಶುರುವಾದ ಜರ್ನಿ ಇದು. ಸುಮಾರು 75 ದಿನಗಳ ಕಾಲ ಮೈಸೂರು, ಹಾವೇರಿ, ಕುದುರೆಮುಖ, ಕಳಸ, ಕನ್ಯಾಕುಮಾರಿ, ಬೆಂಗಳೂರು ಇಷ್ಟು ಜಾಗ ಸುತ್ತಿಕೊಂಡು ಕೊನೆಯಲ್ಲಿ ಈ ಜಾಗದಲ್ಲಿ ಅದ್ಧೂರಿಯಾಗಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ಒಂದೊಳ್ಳೆ ಕಥೆ ಇಟ್ಕೊಂಡು ಸಿನಿಮಾ ಮಾಡಿದ್ದೇವೆ. ನನಗೆ ಹೋಪ್ ಇದೆ. ಈ ಸಿನಿಮಾ ಯಾವುದೋ ಒಂದು ರೇಂಜ್‌ನಲ್ಲಿ ಹೋಗುತ್ತದೆ ಎಂದರು.

    ಪೃಥ್ವಿ ಅಂಬಾರ್, ಸಲಾರ್ (Salaar) ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸ್ತಿರುವ ‘ಭುವನಂ ಗಗನಂ’ ಸಿನಿಮಾಗೆ ಗಿರೀಶ್ ಮೂಲಿಮನಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ರಾಜರು’ ಎಂಬ ಚಿತ್ರ ಮಾಡಿದ್ದರು. ಇದೀಗ ‘ಭುವನಂ ಗಗನಂ’ ಮೂಲಕ ಮತ್ತೊಂದು ಫ್ರೆಶ್ ಕಥೆಯನ್ನು ಹೇಳೋದಿಕ್ಕೆ ಬರುತ್ತಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ‘ಭುವನಂ ಗಗನಂ’ಗೆ ಹಣ ಹಾಕಿದ್ದಾರೆ.

    ‘ಭುವನಂ ಗಗನಂ’ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್‌ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್‌ಗೆ ಜೋಡಿಯಾಗಿ ‘ಲವ್ ಮಾಕ್ಟೇಲ್’ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ ಸಿನಿಮಾಕ್ಕಿದೆ.

  • ಮಾಲಿವುಡ್‌ಗೆ ಕಾಲಿಟ್ಟ ‘ದಿಯಾ’ ಹೀರೋ ದೀಕ್ಷಿತ್ ಶೆಟ್ಟಿ

    ಮಾಲಿವುಡ್‌ಗೆ ಕಾಲಿಟ್ಟ ‘ದಿಯಾ’ ಹೀರೋ ದೀಕ್ಷಿತ್ ಶೆಟ್ಟಿ

    ‘ದಿಯಾ’ (Dia) ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ (Dheekshith Shetty) ‘ದಸರಾ’ (Dasara) ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ್ದಾರೆ.

    ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಒಪ್ಪೀಸ್’ (Oppis) ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ.

    ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು ‘ದಿಯಾ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಶೆಟ್ಟಿ. ಸದ್ಯ ಅವರೀಗ ‘ಬ್ಲಿಂಕ್’ ಎಂಬ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ ‘ಬೆಂಗಳೂರು ಕಥೆ’ ಬರೆದು ನಿರ್ದೇಶನ ಮಾಡಿದ್ದಾರೆ. ಮಾರ್ಚ್ 8ಕ್ಕೆ ‘ಬ್ಲಿಂಕ್’ ರಿಲೀಸ್ ಆಗ್ತಿದೆ.

    ಇದರ ಹೊರತಾಗಿ ದೀಕ್ಷಿತ್, ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ ‘ಗರ್ಲ್ ಫ್ರೆಂಡ್’ ಸಿನಿಮಾದಲ್ಲಿಯೂ ರಶ್ಮಿಕಾ ಮಂದಣ್ಣ (Rashmika Mandanna) ಜೊತೆ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರಳವಾಗಿ ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ.ದೀಕ್ಷಿತ್ ಬರ್ತ್ ಡೇ ಸ್ಪೆಷಲ್ ಆಗಿ ‘ಗರ್ಲ್ ಫ್ರೆಂಡ್’ (Girl Friend) ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ. ಇದನ್ನೂ ಓದಿ:ಮಕ್ಕಳ ಕಲ್ಯಾಣಕ್ಕೆ 1 ಲಕ್ಷ ದೇಣಿಗೆ ನೀಡಿದ ರಣ್‌ಬೀರ್ ಕಪೂರ್

    ‘ರಂಗಿತರಂಗ’, ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘ಸ್ಪೂಕಿ ಕಾಲೇಜು’ ಗಳಂತಹ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ನಿರ್ಮಾಣದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದಲ್ಲಿಯೂ ದಿಯಾ ಹೀರೋ ಬಣ್ಣ ಹಚ್ಚಿದ್ದಾರೆ. ಇನ್ನೂ, ದೀಕ್ಷಿತ್ ನಟನೆಯ ‘ಕೆಟಿಎಂ’ ಫೆಬ್ರವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ತಮಿಳು ಸಿನಿಮಾವೊಂದು ತೆರೆಗೆ ಬರಲು ಅಣಿಯಾಗಿದೆ.

  • ತೆಲುಗಿನಲ್ಲಿ ಖುಷಿ ರವಿ ಮೇನಿಯಾ ಶುರು

    ತೆಲುಗಿನಲ್ಲಿ ಖುಷಿ ರವಿ ಮೇನಿಯಾ ಶುರು

    ಸ್ಯಾಂಡಲ್‌ವುಡ್‌ನಲ್ಲಿ ದಿಯಾ (Dia), ಸ್ಪೂಕಿ ಕಾಲೇಜ್ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಾಯಕಿ ಖುಷಿ ರವಿ (Kushee Ravi) ಅವರು ಇದೀಗ ತೆಲುಗಿನತ್ತ (Tollywood) ಮುಖ ಮಾಡಿದ್ದಾರೆ. ಕನ್ನಡ ಸಿನಿಮಾಗಳ ಜೊತೆಗೆ ತೆಲುಗಿನಲ್ಲೂ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಹೊಸ ಸಿನಿಮಾಗಳನ್ನ ಒಪ್ಪಿಕೊಳ್ಳುವ ಮೂಲಕ ಟಾಲಿವುಡ್‌ನಲ್ಲಿ ಖುಷಿ ಮೇನಿಯಾ ಶುರುವಾಗಿದೆ.

    ಕನ್ನಡದ ದಿಯಾ ಬ್ಯೂಟಿ ಖುಷಿ ಅವರು ಈಗಾಗಲೇ ರುದ್ರ (Rudra) ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಿದೆ. ಮೊದಲ ಸಿನಿಮಾ ತೆರೆಗೆ ಬರುವ ಮುಂಚೆಯೇ ಖುಷಿ, ಮತ್ತೊಂದು ಬಂಪರ್ ಚಾನ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ ಹೆಸರಿಡದ ತೆಲುಗಿನ ಹಾರಾರ್ ಚಿತ್ರದಲ್ಲಿ ಖುಷಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ:Captain Miller Trailer: ಮಾಸ್‌ ಆಗಿ ಎಂಟ್ರಿ ಕೊಟ್ರು ಧನುಷ್‌-ಶಿವಣ್ಣ

    ನವ ನಿರ್ದೇಶಕ ಸಾಯಿಕಿರಣ್ ಅವರು ಖುಷಿ ಅವರ ಹೊಸ ಪ್ರಾಜೆಕ್ಟ್‌ಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರವು 90ರ ದಶಕದ ಕಥೆಯನ್ನು ಒಳಗೊಂಡಿದ್ದು, ನಟಿ ಖುಷಿ ಗರ್ಭಿಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸವಾಲಿನ ಪಾತ್ರವಾಗಿದೆ. ವಿಭಿನ್ನ ರೀತಿಯಲ್ಲಿ ಟೈಟಲ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡವು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ತೆಲುಗು, ತಮಿಳಿನ ಜನಪ್ರಿಯ ನಟ ಶ್ರೀಕಾಂತ್ (Srikanth)  ಅವರು ಈ ಸಿನಿಮಾದ ಹೀರೋ ಆಗಿದ್ದಾರೆ.

    ನಟಿ ಖುಷಿಯ ಅವರ ಕೈಯಲ್ಲಿ ತೆಲುಗಿನ ಎರಡು ಸಿನಿಮಾ, ಕನ್ನಡದ ‘ಕೇಸ್ ಆಫ್ ಕೊಂಡಾಣ’, ‘ಫುಲ್ ಮೀಲ್ಸ್’ ಚಿತ್ರಗಳಿವೆ. ಒಟ್ನಲ್ಲಿ ಬಗೆ ಬಗೆಯ ಪಾತ್ರದ ಮೂಲಕ ಮೋಡಿ ಮಾಡಲು ಖುಷಿ ರವಿ ರೆಡಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಮೋಡಿ ಮಾಡಿದ ಹಾಗೆಯೇ ತೆಲುಗಿನಲ್ಲಿ ಪ್ರತಿಭಾನ್ವಿತ ನಟಿ ಖುಷಿ ಅದೃಷ್ಟ ಖುಲಾಯಿಸುತ್ತಾ ಎಂದು ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ

    ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ

    `ಸೀತಾರಾಮ್ ಬಿನೋಯ್’ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ದೇವಿ ಪ್ರಸಾದ್ ಶೆಟ್ಟಿ (Devi Prasad Shetty) ತಮ್ಮ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಪ್ರಸಾದ್ ಶೆಟ್ಟಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ `ಕೇಸ್ ಆಫ್ ಕೊಂಡಾಣ’ (Case Of Kondana) ಸರಳವಾಗಿ ಮುಹೂರ್ತ ನೆರವೇರಿಸಿದೆ.

     

    View this post on Instagram

     

    A post shared by Kushee Ravi (@iamkusheeraviofficial)

    ನಟ ವಿಜಯ್ ಮಾತನಾಡಿ, `ಸೀತಾರಾಮ್ ಬಿನೋಯ್’ ಕೇಸ್ ನಂಬರ್ 18ರ ನಂತರ ಇವರು ನನಗೆ ಮತ್ತೊಮ್ಮೆ ನಟಿಸಲು ಅವಕಾಶ ಕೊಟ್ಟಿದ್ದಾರೆ. ಸಾಧಾರಣವಾಗಿ ಒಂದೊಳ್ಳೆ ತಂಡ ಸಿಗುವುದು ಅಪರೂಪ. ದೇವಿ ಡೆಡಿಕೇಷನ್, ಕೆಲಸದ ಬಗ್ಗೆ ಇರುವ ಸೀರಿಯಸ್‌ನೆಸ್ ನೋಡಿದ್ದೇನೆ. ಪ್ರತಿಯೊಬ್ಬರೂ ಈ ಸಿನಿಮಾಗೆ ಪ್ರೋತ್ಸಾಹಿಸಿ ಎಂದರು. ಇದನ್ನೂ ಓದಿ:‘ಯಶೋದಾ’ ಟೀಸರ್ನಲ್ಲಿ ಸಮಂತಾ ಮತ್ತೊಂದು ಮುಖ ಅನಾವರಣ

    ಕ್ರೈಮ್ ಸಿನಿಮಾಗಳ ಬಗ್ಗೆ ಹೆಚ್ಚು ಒಲವಿರುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈ ಬಾರಿ ತನಿಖಾ ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ. 19/2018 ಎಂಬ ಅಡಿಬರಹವಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ (Vijay Raghavendra) ಹಾಗೂ ಭಾವನಾ ಮೆನನ್ (Bhavana Menon) ಇಬ್ಬರು ಪೊಲೀಸ್ ಅಧಿಕಾರಿಗಳಾಗಿ ನಟಿಸಲಿದ್ದಾರೆ. `ದಿಯಾ’ ಸಿನಿಮಾ ಖ್ಯಾತಿಯ ಖುಷಿ ರವಿ (Kushee Ravi) ವೈದ್ಯೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಮಾಹಿತಿಯನ್ನು ಚಿತ್ರತಂಡ ಶೀಘ್ರವಾಗಿ ನೀಡಲಿದೆ.

    ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಜೊತೆಗೆ ಅರವಿಂದ್ ಶೆಟ್ಟಿ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ʻಕೇಸ್ ಆಫ್ ಕೊಂಡಾಣ’ಕ್ಕೆ ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನವಿದೆ. ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಸೆಪ್ಟೆಂಬರ್ 28ರಿಂದ ಶೂಟಿಂಗ್ ಆರಂಭವಾಗಲಿದೆ. ಸಂಪೂರ್ಣ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]