ಬೆಂಗಳೂರು: ನನಗೆ ಶುಗರ್ (Diabetes) ಇದೆ, ಅನ್ನ ಬಿಟ್ಟು, ಚಪಾತಿ ತಿಂತಾ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ನಡೆದ ಬಾಬು ಜಗಜೀವನರಾಂ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅನ್ನಭಾಗ್ಯದ ಬಗ್ಗೆ ಅವರು ಮಾತನಾಡಿದರು. ಈ ವೇಳೆ, ಎಲ್ಲರೂ ಕೂಡ ಎರಡು ಹೊತ್ತು ಊಟ ಮಾಡಲೇಬೇಕು ಎಂದು ಅನ್ನಭಾಗ್ಯ ಯೋಜನೆ ತಂದಿದ್ದು. ಇಲ್ಲಿ ಎಷ್ಟು ಜನ ಇದ್ದಾರೋ ಗೊತ್ತಿಲ್ಲ ಅನ್ನ ಉಣ್ಣೋರು. ಜಾತ್ರೆ, ಹಬ್ಬ ಇದ್ದಾಗ ಮಾತ್ರ ನಾವು ಅನ್ನ ಉಣ್ಣೋರು. ನಮಗೆ ಅನ್ನನೇ ಸಿಕ್ತಾನೇ ಇರಲಿಲ್ಲ. ಎಲ್ಲರೂ ಕೂಡ ಅನ್ನ ಉಣ್ಣಲೇಬೇಕೆಂದು ಅನ್ನಭಾಗ್ಯ ಯೋಜನೆ ತಂದಿರೋದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಮಾಡಿಯೇ ಮಾಡ್ತೀವಿ, ಯಾರಿಗೂ ಅನ್ಯಾಯ ಮಾಡಲ್ಲ: ಸಿದ್ದರಾಮಯ್ಯ
ಇದೇ ವೇಳೆ ಅವರ ಆರೋಗ್ಯದ ಬಗ್ಗೆ ಮಾತನಾಡಿ, ನನಗೆ ಈಗ ಶುಗರ್ ಕಾಯಿಲೆ ಬಂದಿದೆ. ನಾನು ಅನ್ನನೇ ತಿನ್ನೋದನ್ನು ಬಿಟ್ಟು ಬಿಟ್ಟಿದ್ದೇನೆ. ಚಪಾತಿ ತಿಂತಾ ಇದೀನಿ. ಸಿರಿ ಧಾನ್ಯಗಳನ್ನೂ ತಿನ್ನುವ ರೂಢಿ ಮಾಡಿಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಸೋಲಿನ ಕಹಿ ಬಗ್ಗೆ ಸಿಎಂ ಎದುರೇ ಸಚಿವ ಮುನಿಯಪ್ಪ ನೋವಿನ ಮಾತು
ನವದೆಹಲಿ: ಮಧುಮೇಹಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಮಧುಮೇಹಿಗಳು ಬಳಸುವ ಎಂಪಾಗ್ಲಿಫ್ಲೋಜಿನ್ ಅಂಶದ ಮಾತ್ರೆಯ ಬೆಲೆ 90% ರಷ್ಟು ಕಡಿತವಾಗಿದೆ.
ಪೇಟೆಂಟ್ ಅವಧಿ ಮುಗಿದ ಕಾರಣ ಹಲವಾರು ದೇಶೀಯ ಔಷಧ ತಯಾರಕರು ಜೆನೆರಿಕ್ ಮಾದರಿ ಬಿಡುಗಡೆ ಮಾಡುವುದಾಗಿ ಘೋಷಿಸಿವೆ. ಮಧುಮೇಹ ಔಷಧ ಎಂಪಾಗ್ಲಿಫ್ಲೋಜಿನ್‌ನ ಬೆಲೆ 90% ರಷ್ಟು ಕುಸಿದಿದೆ. ಮ್ಯಾನ್‌ಕೈಂಡ್ ಫಾರ್ಮಾ, ಅಲ್ಕೆಮ್ ಲ್ಯಾಬೊರೇಟರೀಸ್, ಗ್ಲೆನ್‌ಮಾರ್ಕ್, ಕೊರೊನಾ ರೆಮಿಡೀಸ್ ಕೆಲವು ಕಂಪನಿಗಳನ್ನು ಬಿಡುಗಡೆ ಮಾಡಿದ್ದು, ಹೆಚ್ಚಿನ ಭಾರತೀಯ ರೋಗಿಗಳಿಗೆ ಈ ಔಷಧವನ್ನು ಕೈಗೆಟುಕುವಂತೆ ಮಾಡಿದೆ.
ಮಾರುಕಟ್ಟೆ ಪಾಲಿನ ದೃಷ್ಟಿಯಿಂದ ಭಾರತದ ನಾಲ್ಕನೇ ಅತಿದೊಡ್ಡ ಕಂಪನಿಯಾದ ಮ್ಯಾನ್‌ಕೈಂಡ್ ಫಾರ್ಮಾ, 10 ಮಿಗ್ರಾಂ ಟ್ಯಾಬ್ಲೆಟ್‌ಗೆ 5.49 ರೂ. ಮತ್ತು 25 ಮಿಗ್ರಾಂ ಟ್ಯಾಬ್ಲೆಟ್‌ಗೆ 9.9 ರೂ.ಗೆ ಮಾರಾಟ ಮಾಡುವುದಾಗಿ ತಿಳಿಸಿದೆ. ಇದು 90% ಕ್ಕಿಂತ ಹೆಚ್ಚು ಅಗ್ಗವಾಗಿದೆ.
ಎಂಪಾಗ್ಲಿಫ್ಲೋಜಿನ್‌ನ ಬೆಲೆ ಈ ಹಿಂದೆ 10 ಮಿಗ್ರಾಂ ಡೋಸೇಜ್ ರೂಪದ ಟ್ಯಾಬ್ಲೆಟ್‌ಗೆ 58.7 ರೂ. ಮತ್ತು 25 ಮಿಗ್ರಾಂಗೆ 71.1 ರೂ. ಇತ್ತು.
ಇತ್ತೀಚಿನ ದಿನಗಳಲ್ಲಿ ಬಿಪಿ, ಡಯಾಬಿಟಿಸ್ (Diabetes) ಸಾಮಾನ್ಯವಾಗಿದೆ. ಯುವಜನರಲ್ಲೂ ಈ ಬಿಪಿ ಹಾಗೂ ಮಧುಮೇಹ ಕಾಣಿಸಿಕೊಳ್ಳುತ್ತಿದೆ. ಈ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಆಹಾರ, ಔಷಧಿ ಜೊತೆಗೆ ಕೆಲವು ಜೀವನಶೈಲಿ ಸಹಾಯ ಮಾಡುತ್ತದೆ. ಅದಕ್ಕಾಗಿ ಇಲ್ಲಿದೆ ಕೆಲವೊಂದಿಷ್ಟು ಸಲಹೆಗಳು.
ಸರಿಯಾದ ನಿದ್ದೆ: ಕಡಿಮೆ ನಿದ್ರೆಯಿಂದ ರಕ್ತದಲ್ಲಿನ ಸಕ್ಕರೆಯ ಅಂಶ ಹೆಚ್ಚಳ ಆಗುವ ಸಾಧ್ಯತೆಯಿರುತ್ತದೆ. ನಿದ್ರೆಯ ಕೊರತೆಯಿಂದಾಗಿ ಮಧುಮೇಹಿಗಳಿಗೆ ಅನೇಕ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಮಧುಮೇಹಿಗಳು ಗುಣಮಟ್ಟ ನಿದ್ರೆಯನ್ನು ಮಾಡುವುದು ಅವಶ್ಯಕವಾಗಿದೆ.
ಒತ್ತಡ ನಿರ್ವಹಣೆ: ನೀವು ಒತ್ತಡಕ್ಕೆ ಒಳಗಾಗಿದ್ದರೇ ಇದರಿಂದಾಗಿ ನಿಮ್ಮ ದೇಹದಲ್ಲಿನ ಹಾರ್ಮೋನ್‍ಗಳ ಸಮಸ್ಯೆ ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಅಷ್ಟೇ ಅಲ್ಲದೇ ಹೆಚ್ಚು ಒತ್ತಡದಿಂದಾಗಿ ಮಧುಮೇಹಿಗಳು ತಮ್ಮ ದಿನಚರಿಯನ್ನು ಅನುಸರಿಸಲು ಕಷ್ಟವಾಗಬಹುದು. ಇದರಿಂದಾಗಿ ಒತ್ತಡಕ್ಕೆ ಒಳಗಾಗದಂತೆ ಇಟ್ಟುಕೊಳ್ಳುವುದು ಅವಶ್ಯಕವಾಗಿದೆ. ಇದನ್ನೂ ಓದಿ: ಪೀರಿಯಡ್ಸ್ ಸಮಯದಲ್ಲಾಗುವ ಹೊಟ್ಟೆನೋವಿಗೆ ಇಲ್ಲಿದೆ ಮನೆ ಮದ್ದು
ಆಹಾರ ಮೇಲೆ ಗಮನವಿರಲಿ: ನಿಮ್ಮ ಆಹಾರದಲ್ಲಿ ಫೈಬರ್ ಪ್ರಮಾಣವನ್ನು ಹೆಚ್ಚಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ದಾಲ್, ಓಟ್ಸ್, ಸೇಬು ನಂತರ ಆಹಾರಗಳು ಸಕ್ಕರೆಯ ಅಂಶವನ್ನು ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸಲು ಸಹಾಯವಾಗುತ್ತದೆ.
ತರಕಾರಿ ಸೇವನೆ: ತರಕಾರಿಗಳನ್ನು ಮಧುಮೇಹ ಇರುವವರು ದಿನಕ್ಕೆ ಕನಿಷ್ಠ 4-5 ಬಾರಿ ತಿನ್ನಬೇಕು. ತರಕಾರಿಗಳು ಆರೋಗ್ಯಕರವಾಗಿರುತ್ತವೆ. ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳಿಂದ ತುಂಬಿರುತ್ತವೆ. ಜೊತೆಗೆ ನಿಮಗೆ ಹೆಚ್ಚು ಅಗತ್ಯವಿರುವ ಫೈಬರ್ ಅನ್ನು ನೀಡುತ್ತವೆ. ಇದನ್ನೂ ಓದಿ: ಚಳಿಗಾಲದಲ್ಲಿ ಕೀಲುನೋವಿನಿಂದ ಮುಕ್ತಿ ಪಡೆಯಲು ಈ ಆಹಾರ ಸೇವಿಸಿ
LIVE TV
[brid partner=56869869 player=32851 video=960834 autoplay=true]
ಮೈಸೂರು: ಕ್ರಿಮಿನಲ್ ಆರೋಪಿ ಸ್ಯಾಂಟ್ರೋ ರವಿಯನ್ನು (Santro Ravi) ರಾಜ್ಯಕ್ಕೆ ಕರೆತಂದಿರುವ ಪೊಲೀಸರು ಶನಿವಾರ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಎಸಿಪಿ ಶಿವಶಂಕರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ (VijayaNagara Police Station) ಪ್ರಾಥಮಿಕ ತನಿಖೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ಉಳಿದಿರುವ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಶನಿವಾರ ವಿಜಯನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ.
ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನ ಕೇಳ್ತೀವಿ. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನ ಎಲ್ಲೆಲ್ಲಿ ಓಡಾಡಿದ್ದ? ಯಾರು-ಯಾರು ಸಹಾಯ ಮಾಡಿದ್ದರು? ಇದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ. ಸ್ಯಾಂಟ್ರೋ ರವಿ ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ
ಇದೇ ವೇಳೆ ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿಗೆ ಮಧುಮೇಹ (Diabetes) ಕಾಯಿಲೆಯಿದೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇಂದಂತೆ ಕಾಣ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ಇನ್ನೂ ನಾಲ್ವರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸ್ಯಾಂಟ್ರೋ ರವಿ ಬಂಧಿಸಿದ್ದು ಹೇಗೆ?
4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ತಂಡಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದರು. ಆತ ಪದೇ ಪದೇ ಸಿಮ್ ಕಾರ್ಡ್ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಡಯಾಬಿಟಿಸ್ ಇರುವವರು ಆಲೂಗಡ್ಡೆ ತಿನ್ನಬಹುದೇ ಅಥವಾ ಬೇಡವೆ? ತಿಂದರೆ ಏನಾಗಬಹುದು? ತಿನ್ನುವುದಾದರೆ ಯಾವ ಪ್ರಮಾಣದಲ್ಲಿ ತಿನ್ನಬೇಕು ಎಂಬೆಲ್ಲ ಪ್ರಶ್ನೆಗಳಿಗೆ ಇತ್ತೀಚೆಗೆ ನಡೆದ ಸಂಶೋಧನೆಯೊಂದು ಉತ್ತರ ನೀಡಿದೆ.
ಮಧುಮೇಹಿಗಳು ಆಲೂಗಡ್ಡೆಯಿಂದ ಯಾಕೆ ದೂರ ಇರುತ್ತಾರೆ?
ಮಧುಮೇಹ ಇರುವವರು ತಾವು ಸೇವಿಸುವ ಆಹಾರದಲ್ಲಿನ ಕಾರ್ಬೋಹೈಡ್ರೇಟ್‌ನ್ನು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ರಕ್ತದಲ್ಲಿನ ಸಕ್ಕರೆ ಮಟ್ಟ ಅಧಿಕವಾಗುತ್ತದೆ. ಕಾರ್ಬೋಹೈಡ್ರೇಟ್ ಸಮೃದ್ಧ ಮೂಲವಾಗಿರುವ ಆಲೂಗಡ್ಡೆಯು ಸಕ್ಕರೆಯ ಅಸಮತೋಲನ ಉಂಟುಮಾಡುತ್ತದೆ. ಹೀಗಾಗಿ ಮಧುಮೇಹ ರೋಗಿಗಳು ಯಾವಾಗಲೂ ಅದರಿಂದ ದೂರವಿರುತ್ತಾರೆ. ಇದನ್ನೂ ಓದಿ: ಎಕ್ಕದ ಗಿಡದಿಂದ ಆರೋಗ್ಯಕ್ಕೆ ಸಿಗುತ್ತೆ ಹಲವಾರು ಪ್ರಯೋಜನ
ಮಧುಮೇಹಕ್ಕೆ ಯಾವ ಪದಾರ್ಥ ಕಾರಣ?
ಆಲೂಗಡ್ಡೆ ಫ್ರೈಸ್/ಚಿಪ್ಸ್, ಬೇಯಿಸಿದ, ಹುರಿದ ಮತ್ತು ಹಿಸುಕಿ ತಯಾರಿಸಿದ ಆಲೂಗಡ್ಡೆ ಪದಾರ್ಥಗಳ ಸೇವನೆಯು ಮಧುಮೇಹಕ್ಕೆ ಕಾರಣವಾಗುತ್ತೆ ಎಂದು ಅಧ್ಯಯನವು ತಿಳಿಸಿದೆ. ಇಂತಹ ಪದಾರ್ಥಗಳ ಸೇವನೆಯ ವಿಚಾರವಾಗಿ ಮಧುಮೇಹಿಗಳು ಎಚ್ಚರಿಕೆ ವಹಿಸಬೇಕು.
ಆಲೂಗಡ್ಡೆಯಲ್ಲಿ ಪೊಟ್ಯಾಸಿಯಮ್ ಮತ್ತು ಬಿ ವಿಟಮಿನ್ ಸಮೃದ್ಧವಾಗಿವೆ. ಮಧುಮೇಹ ಹೊಂದಿರುವವರು, ಆಲೂಗಡ್ಡೆಯ ಅಂಶವು ರಕ್ತದಲ್ಲಿನ ಗ್ಲೂಕೋಸ್ ಮಟ್ಟದ ಮೇಲೆ ಪರಿಣಾಮ ಬೀರುವ ವಿಚಾರವನ್ನು ಅರಿಯಬೇಕು. ಆಲೂಗಡ್ಡೆಗಳು ಹೆಚ್ಚಿನ ಕಾರ್ಬೋಹೈಡ್ರೇಟ್ ಆಹಾರವಾಗಿದ್ದು, ಅದು ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಅಸಮತೋಲ ಉಂಟು ಮಾಡುತ್ತದೆ. ಇದನ್ನೂ ಓದಿ: ಈ ಕ್ರಮ ಅನುಸರಿಸಿದ್ರೆ ʼಆಲ್‌ಝೈಮರ್ʼ ರೋಗ ತಡೆಗಟ್ಟಬಹುದು
ಮಧುಮೇಹಿಗಳು ಆಲೂಗಡ್ಡೆ ಸೇವಿಸುವಂತಿಲ್ಲವೇ?
ಮಧುಮೇಹಿಗಳು ಸಂಪೂರ್ಣವಾಗಿ ಆಲೂಗಡ್ಡೆ ಸೇವಿಸುವುದನ್ನು ಬಿಡಬೇಕು ಅಂತಾ ಸಂಶೋಧನೆ ಹೇಳುವುದಿಲ್ಲ. ಮಿತ ಪ್ರಮಾಣದಲ್ಲಿ ಆಹಾರದಲ್ಲಿ ಆಲೂಗಡ್ಡೆ ಸೇರಿಸಿ ಸೇವಿಸುವುದು ಒಳಿತು. ತರಕಾರಿ ಜೊತೆ ನಿಗದಿತ ಪ್ರಮಾಣದಲ್ಲಿ ಆಲೂಗಡ್ಡೆಯನ್ನು ಸೇರಿಸಿ ತಿಂದರೆ ತೊಂದರೆಯಿಲ್ಲ ಎಂದು ಹೇಳುತ್ತದೆ ಸಂಶೋಧನೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಆರೋಗ್ಯ ದೃಷ್ಟಿಯಿಂದ ಮಧುಮೇಹ ಹೊಂದಿರುವವರಿಗೆ ಹಾಗೂ ಶಿಶುಗಳಿಗೆ ಸೂಕ್ತವಾದ ಆಹಾರವನ್ನು ನೀಡಲು ಸ್ಥಳೀಯ ಮತ್ತು ಪ್ರಾದೇಶಿಕ ಆಹಾರ ಪದ್ಧತಿಗಳ ಮೆನುವನ್ನು ಕಸ್ಟಮೈಸ್ ಮಾಡಲು ರೈಲ್ವೆ ಮಂಡಳಿಯು (Railway Board) ಐಆರ್‌ಟಿಸಿಗೆ (IRCTC) ಅನುಮೋದನೆಯನ್ನು ನೀಡಿದೆ.
ಈ ಕ್ರಮವನ್ನು ರೈಲುಗಳಲ್ಲಿನ ಅಡುಗೆ ಸೇವೆಗಳನ್ನು ಸುಧಾರಿಸಲು ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ರೈಲ್ವೆ ಮಂಡಳಿಯು ಕಳುಹಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತೀಯ ವರನ ಮದುವೆಗೆ ಸೀರೆಯುಟ್ಟು ಮಿಂಚಿದ ಇಬ್ಬರು ಪುರುಷ ಸ್ನೇಹಿತರು
ರೈಲುಗಳಲ್ಲಿ ಅಡುಗೆ ಸೇವೆಯನ್ನು ಸುಧಾರಿಸುವ ಸಲುವಾಗಿ, ಪ್ರಾದೇಶಿಕ ಆಹಾರಪದ್ಧತಿಗಳು, ಸೀಸನ್‍ಗೆ ತಕ್ಕಂತೆ ಮಾಡಬಹುದಾದ ಭಕ್ಷ್ಯಗಳು, ಹಬ್ಬಗಳ ಸಮಯದಲ್ಲಿ ಹೀಗೆ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ಒಳಗೊಂಡಂತೆ ಮೆನುವನ್ನು ಕಸ್ಟಮೈಸ್ ಮಾಡಲು ಐಆರ್‌ಟಿಸಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಶುಗರ್ ಇರುವವರಿಗೆ, ಮಗುವಿಗೆ, ಆರೋಗ್ಯ ಸಮಸ್ಯೆ ಹೊಂದಿರುವ ಪ್ರಯಾಣಿಕರಿಗೆ ರಾಗಿ ಆಧಾರಿತ ಸ್ಥಳೀಯ ಉತ್ಪನ್ನಗಳನ್ನು ನೀಡುವಂತೆ ಪ್ರಕಟಿಸಲಾಗಿದೆ. ಇದನ್ನೂ ಓದಿ: ಲವ್ ಜಿಹಾದ್‌ಗೆ ಬಲಿಯಾದ್ರೆ ಇದೇ ಗತಿ – ಹೊಸ ಆಯಾಮದಲ್ಲಿ ತನಿಖೆ ನಡೆಸುವಂತೆ VHP ಮನವಿ
Live Tv
[brid partner=56869869 player=32851 video=960834 autoplay=true]
ನಿದ್ರೆ (Sleep) ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಬದಲಾದ ಜೀವನಶೈಲಿ, ಒತ್ತಡದ ಬದುಕಿನಿಂದಾಗಿ ಬಹುಪಾಲು ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಎಷ್ಟೋ ಮಂದಿ ನಿದ್ರೆಗಿಂತ ತಮ್ಮ ಕೆಲಸಗಳಿಗೇ ಹೆಚ್ಚು ಆದ್ಯತೆ ನೀಡುತ್ತಾರೆ. ಇನ್ನೂ ಕೆಲವರಿಗೆ ಮೊಬೈಲ್, ಲ್ಯಾಪ್‌ಟಾಪ್ ಕೈಯಲಿದ್ರೆ ಸಾಕು, ನಿದ್ರೆಯನ್ನೇ ಮರೆತುಬಿಡ್ತಾರೆ. ಇಂಥವರಿಗೆ ಅಧ್ಯಯನವೊಂದು ಶಾಕಿಂಗ್ ನ್ಯೂಸ್ ಕೊಟ್ಟಿದೆ. ಅದರಲ್ಲೂ ಮುಖ್ಯವಾಗಿ 50 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ನಿದ್ರೆಗೂ ಹೆಚ್ಚಿನ ಒತ್ತು ನೀಡಬೇಕು.
50 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರು ದಿನಕ್ಕೆ ಐದು ಗಂಟೆ ಅಥವಾ ಅದಕ್ಕಿಂತ ಕಡಿಮೆ ಸಮಯ ನಿದ್ರೆ ಮಾಡಿದರೆ ಹೃದ್ರೋಗ (Heart Disease), ಮಧುಮೇಹ (Diabetes) ಮತ್ತು ಕ್ಯಾನ್ಸರ್‌ನಂತಹ (Cancer) ಬಹು ದೀರ್ಘಕಾಲದ ಕಾಯಿಲೆಗಳು ಎದುರಾಗುವ ಸಮಸ್ಯೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಇದನ್ನೂ ಓದಿ: ಸದಾ ಹ್ಯಾಪಿಯಾಗಿರುವವರ ಸೀಕ್ರೆಟ್ ಗುಣಗಳೇನು ಗೊತ್ತಾ?
ಈಚೆಗೆ ಪೀರ್-ರಿವ್ಯೂಡ್ ಜರ್ನಲ್ PLOS ಮೆಡಿಸಿನ್‌ನಲ್ಲಿ ತಮ್ಮ ಸಂಶೋಧನೆಗಳನ್ನು ಸಂಶೋಧಕರ ತಂಡವು ಪ್ರಕಟಿಸಿದೆ. 50, 60 ಮತ್ತು 70 ವರ್ಷ ವಯಸ್ಸಿನ 7,864 ಬ್ರಿಟಿಷ್ ನಾಗರಿಕ ಸೇವಕರ ಡೇಟಾವನ್ನು ಸಂಶೋಧಕರ ತಂಡವು ವಿಶ್ಲೇಷಿಸಿದೆ.
ಸಂಶೋಧನೆಗಳ ಪ್ರಕಾರ, 50ನೇ ವಯಸ್ಸಿನಲ್ಲಿ ಐದು ಗಂಟೆಗಳ ಅಥವಾ ಅದಕ್ಕಿಂತ ಕಡಿಮೆ ಅವಧಿ ನಿದ್ರೆ ಮಾಡುವವರಲ್ಲಿ ದೀರ್ಘಕಾಲದ ಕಾಯಿಲೆಗಳು ಶೇ.20 ವೃದ್ಧಿಯಾಗುತ್ತದೆ.
ಜನರು ವಯಸ್ಸಾದಂತೆ ಅವರ ನಿದ್ರೆಯ ಅಭ್ಯಾಸಗಳು ಮತ್ತು ನಿದ್ರೆಯ ರಚನೆಯು ಬದಲಾಗುತ್ತದೆ. ಆದಾಗ್ಯೂ ರಾತ್ರಿಯಲ್ಲಿ 7 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವುದು ಒಳಿತು. ಅದಕ್ಕಿಂತ ಕಡಿಮೆ ಅವಧಿಯ ನಿದ್ರೆಯಿಂದ ದೀರ್ಘಕಾಲದ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಧ್ಯಯನದ ಪ್ರಮುಖ ಲೇಖಕ ಡಾ. ಸೆವೆರಿನ್ ಸಬಿಯಾ ತಿಳಿಸಿದ್ದಾರೆ.
ನೀವು ಮಲಗುವ ಕೋಣೆ ಶಾಂತ, ಕತ್ತಲೆ, ಆರಾಮದಾಯಕ ತಾಪಮಾನದಲ್ಲಿರಬೇಕು. ರಾತ್ರಿ ಹೊತ್ತು ಅತಿಯಾಗಿ ಊಟ ಸೇವಿಸುವುದು ಸರಿಯಲ್ಲ. ಹಗಲಿನಲ್ಲಿ ವ್ಯಾಯಾಮ, ದೈಹಿಕ ಶ್ರಮ ಹಾಕಿದರೆ ರಾತ್ರಿ ವೇಳೆ ಚೆನ್ನಾಗಿ ನಿದ್ರೆ ಮಾಡಬಹುದು ಎನ್ನುತ್ತಾರೆ ಡಾ. ಸಬಿಯಾ. ಇದನ್ನೂ ಓದಿ: ಮಕ್ಕಳೊಂದಿಗೆ ಜಗಳವಾಡುವ ಮುನ್ನ ಪೋಷಕರು ಈ ಅಂಶಗಳನ್ನು ನೆನಪಿಡಿ..
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ಇಡೀ ವಿಶ್ವಕ್ಕೆ ಭಾರತ ರಾಜಧಾನಿಯಾಗುತ್ತಿದೆ. ಇದಕ್ಕೆ ಕಾರಣಗಳನ್ನು ಹುಡುಕುವ ಸಂಶೋಧನೆಗಳು ಹೆಚ್ಚಾಗುವ ಜೊತೆಗೆ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸ ಸಂಸ್ಥೆಗಳಿಂದ ಆಗಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್ ಹೆಲ್ತ್ ಟ್ರಸ್ಟ್ ನೂತನ ಕ್ಯಾಂಪಸ್‌ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಒನ್ ಹೆಲ್ತ್ ಟ್ರಸ್ಟ್ ನಡೆಸುತ್ತಿರುವ ಸಂಶೋಧನೆ ಶ್ಲಾಘನೀಯ ಎಂದರು.
ಸೇವಿಸುವ ಆಹಾರದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮತ್ತು ಆಹಾರದಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕಿದೆ. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಕಾಯಿಲೆಗಳು ಅಧಿಕವಾಗುತ್ತಿರುವುದರ ಹಿಂದೆ ಇರುವ ಸಮಸ್ಯೆಗಳನ್ನು ಕಂಡುಹಿಡಿದು, ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಇದನ್ನೂ ಓದಿ: ಮೊಟ್ಟೆ ಹೊಡೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಅಲ್ಲ – ಪಕ್ಕಾ RSS ಕಾರ್ಯಕರ್ತ: ಸಿದ್ದರಾಮಯ್ಯ
ಜನರ ಆರೋಗ್ಯವನ್ನು ನೈಸರ್ಗಿಕವಾಗಿ ಕಾಪಾಡುವತ್ತ ಗಮನ ಹರಿಸಬೇಕು. ಅಭಿವೃದ್ಧಿಯ ಹೆಸರಿನಲ್ಲಿ ಕೀಟನಾಶಕ, ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಬೇಕು. ರೈತರು ವೈಜ್ಞಾನಿಕ ಬೆಳೆ ಬೆಳೆಯುವುದರಲ್ಲಿ ಪರಿಣಿತರಾಗಿದ್ದಾರೆ, ಆದರೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಯಾಗುತ್ತಿರುವುದು ಹಲವು ಅನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ನೈಸರ್ಗಿಕ ಕೃಷಿಯತ್ತ ಗಮನಹರಿಸಬೇಕೆಂದು ಹೇಳಿದರು.
ಮಣ್ಣಿನ ಸಂರಕ್ಷಣೆ ಕುರಿತು ಸಂಶೋಧನೆಯಾಗಬೇಕು. ಮುಂದಿನ 18 ತಿಂಗಳಲ್ಲಿ ಕ್ಯಾಂಪಸ್ ಪೂರ್ಣ ಪ್ರಮಾಣದಲ್ಲಿ ಸಿದ್ಧಪಡಿಸಲಾಗುವುದು. ಇದಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ನೀಡಲು ಸರ್ಕಾರ ಸಿದ್ಧವಾಗಿದ್ದು, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವ ಬೆದರಿಕೆ- ತನಿಖೆ ಮಾಡಿಸ್ತೀವಿ ಎಂದ ಸಿಎಂ
Live Tv
[brid partner=56869869 player=32851 video=960834 autoplay=true]
ತಮಿಳಿನ ಹೆಸರಾಂತ ಹಿರಿಯ ನಟ, ಡಿಎಂಡಿಕೆ ಪಕ್ಷದ ಅಧ್ಯಕ್ಷರೂ ಆಗಿರುವ ವಿಜಯ್ ಕಾಂತ್ ಮಧುಮೇಹದಿಂದ ಬಳಲುತ್ತಿದ್ದರು. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧುಮೇಹ ವಿಪರೀತವಾಗಿದ್ದರಿಂದ ಮತ್ತು ಬೆರಳುಗಳಿಗೆ ರಕ್ತ ಸಂಚಾರ ಆಗದೇ ಇರುವ ಕಾರಣದಿಂದಾಗಿ ಅವರ ಕಾಲಿನ ಮೂರು ಬೆರಳುಗಳನ್ನು ಕತ್ತರಿಸಿದ್ದಾರೆ ಎಂದು ಡಿಎಂಡಿಕೆ ಪಕ್ಷ ಮಾಹಿತಿ ನೀಡಿದೆ. ರಕ್ತ ಸಂಚಾರಕ್ಕೆ ತೊಂದರೆ ಆಗುತ್ತಿದ್ದರಿಂದ ಬೆರಳುಗಳನ್ನು ಕತ್ತರಿಸುವುದು ಅನಿವಾರ್ಯವಾಗಿತ್ತು ಎಂದು ವೈದ್ಯರು ತಿಳಿಸಿದ್ದರಂತೆ.
ವಿಜಯ್ ಕಾಂತ್ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳನ್ನು ಮಾಡಿದ್ದಾರೆ. ತಮ್ಮದೇ ಆದ ಅಭಿಮಾನ ಬಳಗ ಹೊಂದಿದ್ದರು. ಸಿನಿಮಾ ರಂಗದಿಂದ ರಾಜಕೀಯ ರಂಗಕ್ಕೆ ಜಿಗಿದು, 2005ರಿಂದ ತಮ್ಮದೇ ಡಿಎಂಡಿಕೆ ಪಕ್ಷ ಸ್ಥಾಪನೆ ಮಾಡಿ, ಸಮಾಜಸೇವೆಗೆ ಮುಂದಾಗಿದ್ದರು. ಹತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿದ್ದು, ನಂತರ ಸಿನಿಮಾ ಮತ್ತು ರಾಜಕೀಯ ರಂಗದಿಂದಲೇ ಅವರು ದೂರ ಉಳಿದರು. ಅನಾರೋಗ್ಯದ ಕಾರಣದಿಂದಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದರು. ಇದನ್ನೂ ಓದಿ: ಆಗಸ್ಟ್ 11ಕ್ಕೆ ಅಕ್ಷಯ್ ಕುಮಾರ್ ಮತ್ತು ಆಮೀರ್ ಖಾನ್ ನಡುವೆ ಬಿಗ್ ಫೈಟ್ : ಗೆಲುವು ಯಾರ ಪಾಲಿಗೆ?
ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಅನೇಕ ನಟರ ಜೊತೆ ಒಂದೊಳ್ಳೆ ಬಾಂಧವ್ಯ ಇಟ್ಟುಕೊಂಡಿದ್ದ ವಿಜಯ್ ಕಾಂತ್ ಆರೋಗ್ಯ ಸ್ಥಿರವಾಗಿದ್ದು, ಮಧುಮೇಹಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲೇ ವಿಶ್ರಾಂತಿ ತಗೆದುಕೊಳ್ಳುತ್ತಿದ್ದು, ಕೆಲವು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರಂತೆ. ವಿಜಯ್ ಕಾಂತ್ ಆರೋಗ್ಯದ ಬಗ್ಗೆ ವಿಷಯ ತಿಳಿದುಕೊಂಡಿರುವ ರಜನಿಕಾಂತ್ ಸೇರಿದಂತೆ ಹಲವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಕೊಲಂಬೊ: ದಶಕಗಳಲ್ಲೇ ಅತ್ಯಂತ ಕೆಟ್ಟ ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿರುವ ಶ್ರೀಲಂಕಾ, ತನ್ನ ರಾಷ್ಟ್ರದ ಜನತೆಗೆ ಮತ್ತೊಂದು ಶಾಕ್ ನೀಡಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ಔಷಧಿಗಳ ಮೇಲಿನ ದರವೂ ಶೇ.40 ರಷ್ಟು ಏರಿಕೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಇಂಧನ ಕೊರತೆ, ವಿದ್ಯುತ್ ಸಂಪರ್ಕ ಕಡಿತ, ನಿರುದ್ಯೋಗ ಸಮಸ್ಯೆ ಹಾಗೂ ಔಷಧಗಳ ಕೊರತೆ ಜನರನ್ನು ಬಾಧಿಸುತ್ತಿದೆ. ಇದರಿಂದಾಗಿ ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಈ ಬೆನ್ನಲ್ಲೇ ಔಷಧಿಗಳ ಬೆಲೆ ಏರಿಕೆ ಮಾಡಿರುವುದನ್ನು ಸಂಕಷ್ಟಕ್ಕೆ ದೂಡಿದೆ. ಇದನ್ನೂ ಓದಿ: ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ
ಕೆಲ ಆಸ್ಪತ್ರೆಗಳಲ್ಲಿ ಅರಿವಳಿಕೆ ಔಷಧ ಖಾಲಿಯಾಗಿದ್ದು, ಸಾಮಾನ್ಯ ಶಸ್ತ್ರಚಿಕಿತ್ಸೆಗಳು ರದ್ದುಗೊಂಡಿವೆ. ಹಾಗಾಗಿ ಸರ್ಕಾರ ಔಷಧಿಯ ದರವನ್ನು ಶೇ.40 ರಷ್ಟು ಹೆಚ್ಚಿಸುವುದಾಗಿ ಆದೇಶಿಸಿದ್ದು, ಇದು ಕೊರತೆಯಿರುವ 60 ಔಷಧಿಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ಆಂಟಿಬಯೋಟಿಕ್ಸ್, ನೋವು ನಿವಾರಕ ಮಾತ್ರೆ, ಹೃದ್ರೋಗ ಮತ್ತು ಮಧುಮೇಹಕ್ಕೆ ಸಂಬಂಧಿಸಿದ ಔಷಧಿಗಳೆಲ್ಲವೂ ಬೆಲೆ ಏರಿಕೆಗೆ ಒಳಪಟ್ಟಿರುತ್ತವೆ ಎಂದು ಆರೋಗ್ಯ ಸಚಿವ ಚನ್ನ ಜಯಸುಮನ ಹೇಳಿದ್ದಾರೆ. ಇದನ್ನೂ ಓದಿ: ಕಾಬೂಲ್ ಮಸೀದಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ಸಾವು
ಕಳೆದ 6 ವಾರಗಳಲ್ಲಿ ಇದು 2ನೇ ಬಾರಿಗೆ ಔಷಧಗಳ ಬೆಲೆ ಏರಿಕೆಯಾಗಿದೆ. ಮಾರ್ಚ್ ಮಧ್ಯಂತರದಲ್ಲಿ ಶೇ.30 ಪ್ರತಿಶತದಷ್ಟು ಬೆಲೆ ಏರಿಕೆ ವಿಧಿಸಲಾಗಿತ್ತು. ಡಿಸೆಂಬರ್‌ನಿಂದ ದ್ವಿಗುಣಗೊಳಿಸಿರುವ ಇಂಧನಗಳ ಬೆಲೆ ಏರಿಕೆಯನ್ನು ಸರಿದೂಗಿಸಲು ಬೆಲೆ ಏರಿಕೆ ಅಗತ್ಯವೆಂದು ಉದ್ಯಮಿಗಳು ತಿಳಿಸಿದ್ದಾರೆಂದು ಸುದ್ದಿಸಂಸ್ಥೆ ವರದಿ ಮಾಡಿದೆ.