Tag: Dialysis

  • ಕಿಡ್ನಿ ರೋಗಿಗಳ ನೆರವಿಗಾಗಿ ʻಬಿರಿಯಾನಿ ಚಾಲೆಂಜ್ʼ – ಕೊಡಗಿನ ಯುವಕರ ತಂಡದಿಂದ ವಿಭಿನ್ನ ಆಲೋಚನೆ!

    ಕಿಡ್ನಿ ರೋಗಿಗಳ ನೆರವಿಗಾಗಿ ʻಬಿರಿಯಾನಿ ಚಾಲೆಂಜ್ʼ – ಕೊಡಗಿನ ಯುವಕರ ತಂಡದಿಂದ ವಿಭಿನ್ನ ಆಲೋಚನೆ!

    ಮಡಿಕೇರಿ: ಆ ಊರಿನಲ್ಲಿ ಬಡ ಜನರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ (Kidney Patients) ಖಾಸಗಿ ಸಂಸ್ಥೆಯೊಂದು ಉಚಿತವಾಗಿ ಡಯಾಲಿಸಿಸ್ ಮಾಡುವ ಮೂಲಕ ಆಶ್ರಯವಾಗಿತ್ತು. ಆದರೆ ದಿನ ಕಳೆದಂತೆ ಆ ಸಂಸ್ಥೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಉಚಿತವಾಗಿ ಡಯಲಿಸಿಸ್ ಮಾಡುವುದೇ ಕಷ್ಟಕರವಾಗಿದ್ದ ಸಂದರ್ಭದಲ್ಲಿ ಯುವಕರ ತಂಡ ವಿಭಿನ್ನ ಚಿಂತನೆಯೊಂದಿಗೆ ನೆರವಾಗಿದೆ. ʻಬಿರಿಯಾನಿ ಚಾಲೆಂಜ್ʼ (Biryani Challenge) ಎನ್ನುವ ವಿಭಿನ್ನ ಚಿಂತನೆಯೊಂದಿಗೆ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಆ ಸಂಸ್ಥೆಗೆ ನೀಡಿದೆ. ಏನ್ನಿದು ಬಿರಿಯಾನಿ ಚಾಲೆಂಜ್ ಅಂತೀರಾ ಮುಂದೆ ಓದಿ…

    ಮನುಷ್ಯರು ಒಳ್ಳೆಯವರಾದ್ರೆ ಸಾಲದು ಒಳ್ಳೆಯ ಕೆಲಸಗಳನ್ನ ಮಾಡಬೇಕು ಆಗ ಮಾತ್ರ ನಾವು ಸಮಾಜ ಸೇವಕರು ಎನಿಸಿಕೊಳ್ಳಲು ಸಾಧ್ಯ. ಯೆಸ್ ಅಂಥಹದ್ದೊಂದು ಕೆಲಸವನ್ನ ಕೊಡಗಿನ ಯುವಕರ ಗುಂಪು ಮಾಡ್ತಿದೆ. ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಡಿಮೆ ವೆಚ್ಚದಲ್ಲಿ ಡಯಾಲಿಸಿಸ್ ಸೇವೆ ನೀಡಲು ಯುವಕರ ತಂಡವೊಂದು ನಿರ್ಧರಿಸಿದೆ. ಇದರಿಂದ ಬಡ ರೋಗಿಗಳ ಪಾಲಿನ ಆಶಾಕಿರಣ ಎನಿಸಿದ್ದಾರೆ. ತಾಲ್ಲೂಕಿನಲ್ಲಿ ʻದಯಾ ರಿಯಾಬ್ಲಿಟೇಷನ್ ಟ್ರಸ್ಟ್ ತಣಲ್ʼ ಸಂಸ್ಥೆಯ ಸಹಯೋಗದೊಂದಿಗೆ ಪ್ರಾರಂಭಿಸಲಾದ ಡಯಾಲಿಸಿಸ್ ಕೇಂದ್ರವು ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿತ್ತು. ದಾನಿಗಳ ಸಹಕಾರದೊಂದಿಗೆ ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಸೇವೆಯನ್ನ ನೀಡುತ್ತಿರುವ ಈ ಸಂಸ್ಥೆ ಈಗ ಸಾಲದ ಸುಳಿಯಲ್ಲಿ ಸಿಲುಕಿದೆ. ಕಳೆದ 6 ವರ್ಷಗಳಲ್ಲಿ ಸುಮಾರು 34 ರೋಗಿಗಳಿಗೆ 8,208 ಡಯಾಲಿಸಿಸ್ ಸೇವೆಯನ್ನ ನೀಡಿದ್ದು, 7 ಮಂದಿ ಬಡ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆಯನ್ನು ನೀಡುತ್ತಿದೆ.

    ಡಯಾಲಿಸಿಸ್ ಘಟಕ ಆರ್ಥಿಕ ಸಂಕಷ್ಟದಿಂದ ಪಾರುಮಾಡುವ ನಿಟ್ಟಿನಲ್ಲಿ ಬಿರಿಯಾನಿ ಚಾಲೆಂಜ್ ಎಂಬ ವಿನೂತನ ಕಾರ್ಯಕ್ರಮವನ್ನು ಯುವಕರ ತಂಡ ಪರಿಚಯಿಸಿತ್ತು. ದಾನಿಗಳಿಂದ ಬಿರಿಯಾನಿ ತಯಾರಿಕೆಗೆ ಬೇಕಾದ ಅಕ್ಕಿ, ಮಾಂಸ, ಸಂಬಾರ ಪದಾರ್ಥಗಳನ್ನು ಸಂಗ್ರಹಿಸಿ ಬಿರಿಯಾನಿ ತಯಾರಿಸಿ ನಂತರ ಇದನ್ನು ಸಂಘ ಸಂಸ್ಥೆಗಳು, ಕಚೇರಿಗಳು, ಮನೆಗಳಿಗೆ ಮಾರಾಟ ಮಾಡಿ, ಬಂದ ಹಣವನ್ನು ಸಂಸ್ಥೆಗೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ನೆಲ್ಲಿಹುದಿಕೇರಿ ಗ್ರಾಮದಲ್ಲಿರುವ ಶಾದಿ ಮಾಹಲ್‌ನಲ್ಲಿ ಬಿರಿಯಾನಿ ತಯಾರಿಸಿ 200ಕ್ಕೂ ಅಧಿಕ ಯುವಕರು ಮಧ್ಯಾಹ್ನ ಸಮಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಬಿರಿಯಾನಿಗಳನ್ನು ಮಾರಾಟ ಮಾಡಿದ್ದಾರೆ. ಸುಮಾರು 12 ಲಕ್ಷಕ್ಕೂ ಅಧಿಕ ಹಣವನ್ನು ಸಂಗ್ರಹಿಸಿ ಡಯಾಲಿಸಿಸ್ ಸೆಂಟರ್‌ನ ವ್ಯವಸ್ಥಾಪಕರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

    ಒಟ್ನಲ್ಲಿ ಬಡ ಕಿಡ್ನಿ ರೋಗಿಗಳಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿರುವ ಡಯಾಲಿಸಿಸ್ ಕೇಂದ್ರ ನಿರ್ವಹಣೆಗೆ 1.75 ಲಕ್ಷ ರೂ.ಗಳಿಂದ 2 ಲಕ್ಷ ರೂ.ಗಳವರೆಗೆ ವೆಚ್ಚವಾಗುತ್ತಿದೆ. ಅಲ್ಲದೆ ಸಂಸ್ಥೆ ಪ್ರಸ್ತುತ 5 ಲಕ್ಷ ರೂ. ಸಾಲ ಹೊಂದಿದೆ. ಬಿರಿಯಾನಿ ಚಾಲೆಂಜ್ ಮೂಲಕ ಈ ಸಾಲ ಪಾವತಿಸುವುದರೊಂದಿಗೆ ನೆರವು ಒದಗಿಸುವ ಪ್ರಯತ್ನವನ್ನು ಯುವಕರ ತಂಡ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.

  • RCB ಖರೀದಿಸಿದ ದುಬಾರಿ ಆಟಗಾರನಿಗೆ ದೀರ್ಘಕಾಲದ ಕಿಡ್ನಿ ಕಾಯಿಲೆ – ಸತ್ಯ ಬಹಿರಂಗಪಡಿಸಿದ ಗ್ರೀನ್‌

    RCB ಖರೀದಿಸಿದ ದುಬಾರಿ ಆಟಗಾರನಿಗೆ ದೀರ್ಘಕಾಲದ ಕಿಡ್ನಿ ಕಾಯಿಲೆ – ಸತ್ಯ ಬಹಿರಂಗಪಡಿಸಿದ ಗ್ರೀನ್‌

    ಕ್ಯಾನ್ಬೆರಾ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಫ್ರಾಂಚೈಸಿಯು ಟ್ರೇಡ್‌ ವಿಂಡೋ (T) ನಿಯಮದ ಮೂಲಕ 17.5 ಕೋಟಿ ರೂ.ಗೆ ಖರೀದಿಸಿದ ದೈತ್ಯ ಆಸೀಸ್‌ ಆಟಗಾರ ಕ್ಯಾಮರೂನ್‌ ಗ್ರೀನ್‌ (Cameron Green) ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (Chronic Kidney Disease) ಬಳಲುತ್ತಿರುವ ಸತ್ಯ ಬಹಿರಂಗವಾಗಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿರುವ ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್, ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಹುಟ್ಟಿನಿಂದಲೇ ಗ್ರೀನ್‌ ಅವರಿಗೆ ಈ ಕಾಯಿಲೆ ಇದೆ. ಗ್ರೀನ್‌ ತಾಯಿ ಬೀ ಟ್ರೇಸಿ ಅವರು 19 ವಾರಗಳ ಗರ್ಭಿಣಿಯಾಗಿದ್ದಾಗ ಸ್ಕ್ಯಾನಿಂಗ್ ವೇಳೆಯೇ ಈ ಸಮಸ್ಯೆ ಗೊತ್ತಾಗಿತ್ತು ಎಂದು ಗ್ರೀನ್ ತಿಳಿಸಿದ್ದಾರೆ.

    ಆಸೀಸ್‌ ತಂಡದ ಕಾಯಂ ಪ್ಲೇಯರ್‌ ಆಗಿರುವ ಗ್ರೀನ್‌, ಐಪಿಎಲ್‌ನಲ್ಲೂ (IPL) ಮಿಂಚುತ್ತಿದ್ದಾರೆ. 2023ರಲ್ಲಿ ಐಪಿಎಲ್‌ ಪ್ರವೇಶಿಸಿದ ಗ್ರೀನ್‌ ಮುಂಬೈ ಇಂಡಿಯನ್ಸ್‌ (Mumbai Indians) ತಂಡಕ್ಕೆ ಸೇರ್ಪಡೆಯಾಗಿದ್ದರು. ಆದ್ರೆ ತಮ್ಮ 2ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ಇದನ್ನೂ ಓದಿ: RCB ಸೇರಿದ ದೈತ್ಯ ಆಸೀಸ್‌ ಆಟಗಾರ – ರಾಯಲ್‌ ಚಾಲೆಂಜರ್ಸ್‌ ಪರ್ಸ್‌ನಲ್ಲಿ ಇನ್ನೆಷ್ಟು ಹಣವಿದೆ?

    ಕ್ಯಾಮರೂನ್‌ ಗ್ರೀನ್‌ 12 ವರ್ಷ ದಾಟಿದಾಗ ಬದುಕುಳಿಯುತ್ತಾರೆ ಅನ್ನುವ ಬಗ್ಗೆ ಅನುಮಾನವಿತ್ತು ಎಂದು ತಂದೆ ಗ್ಯಾರಿ ಹೇಳಿಕೊಂಡಿದ್ದಾರೆ. ಹೀಗಿದ್ದೂ ಗ್ರೀನ್‌ ಕ್ರಿಕೆಟ್‌ ವೃತ್ತಿ ಬದುಕನ್ನು ರೂಪಿಸುವಲ್ಲಿ ಅವರ ಪಾತ್ರ ಅಪಾರವಾಗಿದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

    2022ರಲ್ಲಿ ಆಸೀಸ್‌ ಟಿ20 ತಂಡದ ಭಾಗವಾಗಿದ್ದ ಗ್ರೀನ್‌ ಒಂದು ವರ್ಷದಲ್ಲೇ ಬ್ಯಾಟಿಂಗ್‌, ಬೌಲಿಂಗ್‌ ಫೀಲ್ಡಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಗುರುತಿಸಿಕೊಂಡರು. ಬಳಿಕ ಭಾರತದ ವಿರುದ್ಧವೇ ನಡೆದ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಟ್ರೋಫಿ ಸರಣಿಯ ತಮ್ಮ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಸಾಧನೆ ಮಾಡಿದರು. ಇದರಿಂದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ (WTC) ಫೈನಲ್‌ನಲ್ಲೂ ಆಡುವ ಅವಕಾಶ ಪಡೆದುಕೊಂಡರು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲೂ ಅವರು ಸ್ಥಾನ ಪಡೆದುಕೊಂಡಿದ್ದರು. ಮುಂದೆ ಪಾಕ್‌ ವಿರುದ್ಧ ನಡೆಯಲಿರುವ ಟೆಸ್ಟ್‌ ತಂಡಕ್ಕೂ ಆಯ್ಕೆಯಾಗಿದ್ದಾರೆ.

    ಈ ಕುರಿತು ಸಂದರ್ಶನದಲ್ಲಿ ಮಾತನಾಡಿರುವ ಗ್ರೀನ್‌, ನನಗೆ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಇದೆ ಎಂದು ನನ್ನ ಹೆತ್ತವರಿಗೆ ನಾನು ಹುಟ್ಟಿದಾಗಲೇ ವೈದ್ಯರು ಹೇಳಿದ್ದರು. ಆರಂಭದಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ. ಅಲ್ಟ್ರಾಸೌಂಡ್ ಮೂಲಕ ಇದು ತಿಳಿದುಬಂತು. ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯು ಮೂತ್ರಪಿಂಡದ ಆರೋಗ್ಯ ಕಾರ್ಯದ ಮೇಲೆ ಪ್ರಭಾವ ಬೀರುವ ಕಾಯಿಲೆಯಾಗಿದೆ. ದುರದೃಷ್ಟವಶಾತ್, ನನ್ನ ಕಿಡ್ನಿ ರಕ್ತವನ್ನು ಫಿಲ್ಟರ್ ಮಾಡುವುದಿಲ್ಲ. ಸದ್ಯ ನನಗೆ 2ನೇ ಸ್ಟೇಜ್‌ನಲ್ಲಿ ಕಾಯಿಲೆ ಇದ್ದು, ಸಮಸ್ಯೆಯೊಂದಿಗೆ ಕ್ರಿಕೆಟ್‌ ಬದುಕನ್ನು ಸಾಗಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 89 ಸಾವಿರ ಕೋಟಿ ತಲುಪಿತು ಐಪಿಎಲ್‌ ಬ್ರ್ಯಾಂಡ್‌ ಮೌಲ್ಯ- ಯಾವ ತಂಡದ್ದು ಎಷ್ಟು?

    ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯಲ್ಲಿ 5 ಹಂತಗಳಿವೆ. ಮೊದಲ ಹಂತವು ಕಡಿಮೆ ತೀವ್ರತೆಯದ್ದು. ಐದನೇ ಹಂತವು ಕಿಡ್ನಿ ಕಸಿ ಅಥವಾ ಡಯಾಲಿಸಿಸ್ ಮಾಡುವಂಥದ್ದು. ಅದೃಷ್ಟವಶಾತ್, ನನ್ನದು 2ನೇ ಹಂತದಲ್ಲಿದೆ. ನಾನು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುತ್ತಿರಲಿಲ್ಲ, ಆಹಾರ ಸೇವಿಸುತ್ತಿರಲಿಲ್ಲ. ಅಲ್ಲದೇ ಆಟದ ಸಮಯದಲ್ಲೂ ನನ್ನ ಆರೋಗ್ಯ ಸರಿಯಾಗಿ ನೋಡಿಕೊಳ್ಳಲಿಲ್ಲ ಅಂತ ಅನ್ನಿಸುತ್ತೆ. ಕಾಲಾನಂತರದಲ್ಲಿ ನಿಧಾನವಾಗಿ ನಾನು ಎಲ್ಲವನ್ನೂ ಸರಿಯಾಗಿ ಅನುಸರಿಸುತ್ತಿದ್ದೇನೆ. ಆದರೂ ನನಗೆ ಅದರ ಸೆಳೆತವಿದೆ ಎಂದಿದ್ದಾರೆ.

  • ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

    ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

    ಬೆಂಗಳೂರು: ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ (Dialysis) ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.

    ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ (Freedom Park) ಅನಿರ್ಧಿಷ್ಟಾವಧಿ ಪ್ರತಿಭಟನೆ (Protest) ಮಾಡಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

    ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಆರ್‌ಎಸ್ ಮತ್ತು ಸಂಜೀವಿನಿ ಸಂಸ್ಥೆಗಳ ಅಡಿಯಲ್ಲಿ ಕೆಲಸ ಮಾಡುತ್ತಿರುವ ಡಯಾಲಿಸಿಸ್ ನೌಕರರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆದಿದ್ದರು. ಇದನ್ನೂ ಓದಿ: ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಲೂಕು, ಜಿಲ್ಲಾ ಆಸ್ಪತ್ರೆಗಳ ಅವ್ಯವಸ್ಥೆ – ಎಂಆರ್‌ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಸಿಎಂ ಗರಂ

    ತಾಲೂಕು, ಜಿಲ್ಲಾ ಆಸ್ಪತ್ರೆಗಳ ಅವ್ಯವಸ್ಥೆ – ಎಂಆರ್‌ಐ, ಡಯಾಲಿಸಿಸ್ ಯಂತ್ರ ಅಳವಡಿಸದ್ದಕ್ಕೆ ಸಿಎಂ ಗರಂ

    ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ (MRI Scan) ಹಾಗೂ ಡಯಾಲಿಸಿಸ್ (Dialysis) ಯಂತ್ರಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಗ್ಯ ಇಲಾಖೆ ಅಧಿಕಾರಿಗಳನ್ನು (Health Department) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗಿಲ್ಲ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಮುಂದಿನ ಸಭೆಯೊಳಗೆ ಸರಿಪಡಿಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ

    ಅಲ್ಲದೇ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‍ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವ ಬಗ್ಗೆ, ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ 52% ರಷ್ಟು ತಜ್ಞ ವೈದ್ಯರ ಕೊರತೆ ಇದೆ. 31% ರಷ್ಟು ವೈದ್ಯರ ಕೊರತೆ ಹಾಗೂ 18% ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇರುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಖಾಲಿ ಇರುವ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ಬಳಕೆ ಮಾಡಬೇಕು. ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂಡಿ ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.

    ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾಧ್ಯ? ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ ಈ ಎಲ್ಲಾ ಸಮಸ್ಯೆಗಳು ಮೂರು ತಿಂಗಳಲ್ಲಿ ಸರಿಪಡಿಸಬೇಕು. ಇದು ಮುಂದುವರೆದರೆ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

  • ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಆರೋಗ್ಯ ಸ್ಥಿತಿ ಗಂಭೀರ

    ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಆರೋಗ್ಯ ಸ್ಥಿತಿ ಗಂಭೀರ

    ಭಾರತ ಸಿನಿಮಾ ರಂಗದ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಶ್ಯಾಮ್ ಬೆನಗಲ್ (Shyam Benegal) ಆರೋಗ್ಯ (Health) ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಎರಡೂ ಕಿಡ್ನಿ ಫೇಲ್ (Kidney) ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲೇ ಅವರು ಡಯಾಲಿಸಿಸ್ ಗೆ (Dialysis) ಒಳಗಾಗಿದ್ದು, ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಅವರ ಕಛೇರಿ ಸಿಬ್ಬಂದಿ ತಿಳಿಸಿದ್ದಾರೆ ಎಂದು ವರದಿ ಮಾಡಿದೆ.

    ಭಾರತ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ಮತ್ತು ವಿಶೇಷ ಸಿನಿಮಾಗಳನ್ನು ನೀಡಿದ ನಿರ್ದೇಶಕರು. ಎಂಟು ರಾಷ್ಟ್ರ ಪ್ರಶಸ್ತಿಗಳನ್ನು ಇವರ ಚಿತ್ರಗಳು ಪಡೆದುಕೊಂಡಿವೆ. ಅಲ್ಲದೇ, ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮಭೂಷಣವನ್ನೂ ಪಡೆದಿದ್ದಾರೆ. ಸಿನಿಮಾ ರಂಗಕ್ಕೆ ಸಲ್ಲಿಸಿದ ಸೇವೆಗಾಗಿ ಭಾರತ ಸರಕಾರವು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು 2005ರಲ್ಲೇ ನೀಡಿ ಗೌರವಿಸಿದೆ. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಶಬಾನಾ ಅಜ್ಮಿ ಮತ್ತು ಅನಂತ್ ನಾಗ್ ಕಾಂಬಿನೇಷನ್ ನ ಅಂಕುರ್ ಇವರ ಮೊದಲ ಸಿನಿಮಾ. ಆನಂತರ ಮಥಣ್, ಭೂಮಿಕಾ: ದಿ ರೋಲ್, ವೆಲ್ ಡನ್ ಅಬ್ಬಾ, ಆರೋಹನ್, ನೇತಾಜಿ ಸುಭಾಸ್ ಚಂದ್ರ ಬೋಸ್ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಇವರ ಗರಡಿಯಲ್ಲಿ ಪಳಗಿದ ಅನೇಕ ಕಲಾವಿದರು ಸೂಪರ್ ಸ್ಟಾರ್ ಆಗಿ ಮಿಂಚಿದ್ದಾರೆ. ಸ್ಟಾರ್ ಗಳನ್ನು ತಯಾರಿಸಿದ ಅಪರೂಪದ ನಿರ್ದೇಶಕರು ಕೂಡ ಇವರಾಗಿದ್ದಾರೆ.

  • ಹುಬ್ಬಳ್ಳಿಯಲ್ಲಿ ಮಗನಿಗೆ ಕಿಡ್ನಿ ದಾನ ಮಾಡಿದ ತಾಯಿ

    ಹುಬ್ಬಳ್ಳಿಯಲ್ಲಿ ಮಗನಿಗೆ ಕಿಡ್ನಿ ದಾನ ಮಾಡಿದ ತಾಯಿ

    ಹುಬ್ಬಳ್ಳಿ: ಮಹಾತಾಯಿಯೊಬ್ಬರು ಮಗನಿಗೆ ಕಿಡ್ನಿ ಕೊಟ್ಟು ತ್ಯಾಗದ ಸಂದೇಶ ಸಾರಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ 22 ವರ್ಷದ, ಯುವಕ ಮೂತ್ರಪಿಂಡ ಸೋಂಕಿನಿಂದ ಬಳಲುತ್ತಿದ್ದರು. ಆದರೆ ಮೊದಮೊದಲು ರೋಗದ ಲಕ್ಷಣ ಕಾಣಿಸಿರಲಿಲ್ಲ ಹೀಗಾಗಿ ಯುವಕ ಆರೋಗ್ಯವಾಗಿರುವಂತೆಯೇ ಕಾಣುತ್ತಿದ್ದ. ಆದರೆ ಏಕಾಏಕಿ ಸೋಂಕು ಉಲ್ಬಣಗೊಂಡ ಹಿನ್ನೆಲೆ ಕಳೆದ 6-7 ತಿಂಗಳಿಂದ ಹುಬ್ಬಳ್ಳಿ ಕಿಮ್ಸ್‍ನಲ್ಲಿ ಡಯಾಲಿಸಸ್ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ರಾಜ್ಯದ ಮೊದಲ ಕಿಡ್ನಿ ಕಸಿಮಾಡಲು ಅನುಮತಿ ಪಡೆದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ

    ಯುವಕನ ಕಿಡ್ನಿ ಕೆಲಸ ಮಾಡದ ಹಿನ್ನೆಲೆ ಯುವಕನಿಗೆ ಕಸಿ ಮಾಡುವುದು ಅನಿವಾರ್ಯತೆಯಿತ್ತು. ಆದರೆ ಕಿಡ್ನಿ ದಾನಮಾಡುವವರು ಯಾರೂ ಸಿಗಲಿಲ್ಲ, ಅಲ್ಲದೆ ಯುವಕ ಬಡ ಕುಟುಂಬವನಾಗಿದ್ದು, ಕಿಡ್ನಿ ದಾನ ಪಡೆಯುವಷ್ಟು ಆರ್ಥಿಕ ಶಕ್ತಿಯೂ ಇರಲಿಲ್ಲ. ಹೀಗಾಗಿ ಯುವಕನ ತಾಯಿ ಮುಂದೆ ಬಂದು ತನ್ನ ಮಗನಿಗೆ ಕಿಡ್ನಿ ದಾನ ಮಾಡಿದ್ದಾಳೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬ್ರಾಹ್ಮಣರನ್ನು ಸಿಎಂ ಆಗಿ ನೋಡಲು ಬಯಸುತ್ತೇನೆ: ರಾವ್‍ಸಾಹೇಬ್ ಪಾಟೀಲ್ ದಾನ್ವೆ

    ಕಿಮ್ಸ್ ಮೂತ್ರಪಿಂಡಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಮೊಗೇರ, ಅವರ ನೇತೃತ್ವದ ತಂಡ ಏಪ್ರಿಲ್ 13 ರಂದು ಯಶಸ್ವಿ ಆಪರೇಷನ್ ಮಾಡಿದೆ. ಸದ್ಯ ತಾಯಿ ಮತ್ತು ಮಗ ಇಬ್ಬರು ಸಹ ಆರೋಗ್ಯವಾಗಿದ್ದಾರೆ.