Tag: diamond crown

  • ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

    ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

    ಉಡುಪಿ: ಕೊಲ್ಲೂರು ಮೂಕಾಂಬಿಕೆ (Kollur Mookambika) ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು (Diamond crown) ಅರ್ಪಿಸಿದ್ದಾರೆ.

    ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ (Ilaiyaraaja) ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್

    ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

  • ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

    ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆಯನ್ನು ತೀರಿಸಿಕೊಂಡಿದ್ದಾರೆ.

    ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ ಶುಕ್ರವಾರ ಕಿರೀಟವನ್ನು ಶಬರಿಮಲೆ ದೇವಸ್ಥಾನದ ಮುಖ್ಯ ಅರ್ಚಕರಿಗೆ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ:  ಯೋಗಿ ಗೋರಖ್‍ಪುರದಲ್ಲಿಯೇ ಇರಲಿ, ಮತ್ತೆ ಬರುವುದು ಬೇಡ : ಅಖಿಲೇಶ್ ಯಾದವ್

    ವೆಂಕಟಸುಬ್ಬಯ್ಯ ಅವರು ಅಯ್ಯಪ್ಪನ ಭಕ್ತರಾಗಿದ್ದಾರೆ. ಕಳೆದ 30 ವರ್ಷಗಳಿಂದ ಶಬರಿಗಿರಿಗೆ ಭೇಟಿ ನೀಡುತ್ತಿದ್ದಾರೆ. ವೆಂಕಟಸುಬ್ಬಯ್ಯ ಅವರು ಕಳೆದ ವರ್ಷ ಕೊರೊನಾ ಸೋಂಕಿಗೆ ಒಳಗಾಗಿದ್ದರು. 15 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಾವು-ಬದುಕಿನ ನಡುವೆ ಹೋರಾಡಿ ಬದುಕುಳಿದಿದ್ದರು. ಇದನ್ನೂ ಓದಿ: ರಸ್ತೆಗಳನ್ನು ಕಂಗನಾ ಕೆನ್ನೆಗಿಂತ ಸುಗಮವಾಗಿಸುತ್ತೇನೆ: ಇರ್ಫಾನ್ ಅನ್ಸಾರಿ

    ಚೇತರಿಸಿಕೊಂಡಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರದ ಕಿರೀಟವನ್ನ ನೀಡುವುದಾಗಿ ಹರಕೆ ಹೊತ್ತಿದ್ದರು. ಅದೇ ರೀತಿಯಾಗಿ ಆ ಹರಕೆಯ ಭಾಗವಾಗಿ ಚಿನ್ನದ ಕಿರೀಟವನ್ನ ದೇವಾಲಯಕ್ಕೆ ಕಾಣಿಕೆಯಾಗಿ ನೀಡಿದ್ದಾರೆ. ಅಯ್ಯಪ್ಪನ ಆಶೀರ್ವಾದಿಂದಲೇ ನಾನು ಮತ್ತೆ ಬದುಕಲು ಸಾಧ್ಯವಾಯಿತು ಎಂದು ವೆಂಕಟಸುಬ್ಬಯ್ಯ ಅವರು ಹೇಳಿದ್ದಾರೆ. ಈ ಕಿರೀಟದ ನಿಖರವಾದ ಬೆಲೆ ಎಷ್ಟು ಎನ್ನುವ ಮಾಹಿತಿ ಇಲ್ಲ.