Tag: Diesel Vehicles

  • ಡೀಸೆಲ್‌ ವಾಹನಗಳ ಮೇಲೆ 10% ಹೆಚ್ಚುವರಿ ತೆರಿಗೆ ಇಲ್ಲ: ಗಡ್ಕರಿ ಸ್ಪಷ್ಟನೆ

    ಡೀಸೆಲ್‌ ವಾಹನಗಳ ಮೇಲೆ 10% ಹೆಚ್ಚುವರಿ ತೆರಿಗೆ ಇಲ್ಲ: ಗಡ್ಕರಿ ಸ್ಪಷ್ಟನೆ

    ನವದೆಹಲಿ: ಡೀಸೆಲ್‌ ವಾಹನಗಳ (Diesel Vehicles) ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸಲಾಗುವುದು ಎಂದು ಹರಿದಾಡುತ್ತಿದ್ದ ಸುದ್ದಿಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ (Nitin Gadkari) ಸ್ಪಷ್ಟನೆ ನೀಡಿದ್ದಾರೆ. ಅಂತಹ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ.

    ನವದೆಹಲಿಯಲ್ಲಿ ನಡೆದ 63 ನೇ ವಾರ್ಷಿಕ SIAM ಸಮಾವೇಶದಲ್ಲಿ ಮಾತನಾಡಿದ್ದ ಗಡ್ಕರಿ, ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಡೀಸೆಲ್‌ಗೆ ವಿದಾಯ ಹೇಳಿ. ದಯವಿಟ್ಟು ಡೀಸೆಲ್‌ ವಾಹನಗಳನ್ನು ತಯಾರಿಸುವುದನ್ನು ನಿಲ್ಲಿಸಿ. ಇಲ್ಲದಿದ್ದರೆ ಅಂತಹ ವಾಹನಗಳ ಮಾರಾಟ ಕಷ್ಟವಾಗುವಷ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತೇವೆ ಎಂದು ಸಚಿವರು ಎಚ್ಚರಿಸಿದ್ದಾರೆಂದು ವರದಿಯಾಗಿತ್ತು. ಇದನ್ನೂ ಓದಿ: G20 ಶೃಂಗಸಭೆಗೆ ನಿಗದಿಗಿಂತ 300 ಪಟ್ಟು ಅಧಿಕ ಹಣ ಖರ್ಚು- ಆರೋಪ ತಳ್ಳಿ ಹಾಕಿದ ಕೇಂದ್ರ ಸರ್ಕಾರ

    ಡೀಸೆಲ್‌ ವಾಹನಗಳ ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸುವ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯಲಿದ್ದೇವೆ. ಬಹುತೇಕ ರಾಷ್ಟ್ರಗಳಲ್ಲಿ ಡೀಸೆಲ್‌ ವಾಹನಗಳ ಮೇಲೆ ಇಂಥ ತೆರಿಗೆ ವಿಧಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ ಎನ್ನಲಾಗಿತ್ತು.

    ಈ ರೀತಿಯ ಸುದ್ದಿ ಹರಿದಾಡುತ್ತಿದ್ದಂತೆ ಸಚಿವ ಗಡ್ಕರಿ ಟ್ವೀಟ್‌ ಮಾಡಿದ್ದಾರೆ. ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10% ತೆರಿಗೆ ವಿಧಿಸುವ ಮಾಧ್ಯಮ ವರದಿಗಳ ಬಗ್ಗೆ ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾಪವು ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಪರಿಸರಕ್ಕೆ ಡೀಸೆಲ್‌ ಮಾರಕ. ಹೀಗಾಗಿ ಪರಿಸರ ಸ್ನೇಹಿ ಇಂಧನಗಳತ್ತ ಕೈಗಾರಿಕೆಗಳು ಮುಖ ಮಾಡಬೇಕಾದ ಅಗತ್ಯವಿದೆ. ಪರ್ಯಾಯ ಇಂಧನದ ಬೇಡಿಕೆ ಪೂರೈಸಲು ಆಮದು ಮಾಡುವ ಅಗತ್ಯವಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್

    ಸದ್ಯ ವಾಹನಗಳ ಮೇಲೆ 28% ಜಿಎಸ್‌ಟಿ ಇದೆ. ಜತೆಗೆ 1% ನಿಂದ 22% ರಷ್ಟು ಹೆಚ್ಚುವರಿ ಸೆಸ್‌ ವಿಧಿಸಲಾಗುತ್ತದೆ. ಇದು ವಾಹನಗಳ ಮಾದರಿಯನ್ನು ಅವಲಂಬಿಸಿರುತ್ತದೆ. ಎಸ್‌ಯುವಿಗಳ ಮೇಲೆ ಅತ್ಯಧಿಕ 28% ತೆರಿಗೆ ಮತ್ತು ಪರಿಹಾರದ ಸೆಸ್‌ ಆಗಿ 22% ಇದೆ ಎಂದು ವರದಿಯಾಗಿದೆ.

    ಮಾರುತಿ ಸುಜುಕಿ ಮತ್ತು ಹೋಂಡಾದಂತಹ ಕಾರು ತಯಾರಕ ಕಂಪನಿಗಳು ಡೀಸೆಲ್ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು

    ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿರುವುದರಿಂದಾಗಿ ಇದನ್ನು ತಡೆಗಟ್ಟಲು ದೆಹಲಿ ಸರ್ಕಾರ ಮುಂದಾಗಿದೆ. ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

    ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯ ನಿರ್ದೇಶನದ ಪ್ರಕಾರ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲು ತಯಾರಿ ನಡೆಸಿದೆ. ಆದರೆ ಈ ವಾಹನಗಳಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಹಾಗಾಗಿ ಈ ವಾಹನಗಳನ್ನು ಬೇರೆ ಕಡೆಗಳಲ್ಲಿ ನೋಂದಣಿ ಮಾಡಿಕೊಂಡು ಬಳಸಬಹುದಾಗಿದೆ. ಇದನ್ನೂ ಓದಿ: ಹಳೆ ವಾಹನಗಳ ಗುಜರಿ ನೀತಿಯ ಕರಡು ರೆಡಿ – ಮರು ನೋಂದಣಿ, ನವೀಕರಣಕ್ಕೆ 8 ಪಟ್ಟು ಶುಲ್ಕ

    ಎನ್‍ಜಿಟಿ ಪ್ರಕಾರ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿ ಮತ್ತು ಓಡಾಟದ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಿದೆ. ಜುಲೈ 2016 ರಲ್ಲಿ ಎನ್‍ಜಿಟಿ ನೀಡಿದ ಆದೇಶದಲ್ಲಿ, 10 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ನೋಂದಣಿ ರದ್ದುಗೊಳಿಸುವ ನಿರ್ದೇಶನವನ್ನು ತಪ್ಪದೆ ಜಾರಿಗೊಳಿಸಬೇಕು ಎಂದು ಮತ್ತೊಮ್ಮೆ ತಾಕೀತು ಮಾಡಿದೆ. ಇದನ್ನೂ ಓದಿ: ಆಟೋಮೊಬೈಲ್ ಕ್ಷೇತ್ರ ಕುಸಿತ – ಹಳೆ ವಾಹನಗಳ ನೋಂದಣಿ ಶುಲ್ಕ ಭಾರೀ ಪ್ರಮಾಣದಲ್ಲಿ ಏರಿಕೆ?