Tag: Diganth Manchale

  • ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕಾಗಿ ಒಂದಾದ ‘ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕಾಗಿ ಒಂದಾದ ‘ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು

    ಸ್ಯಾಂಡಲ್‌ವುಡ್‌ನಲ್ಲಿ ಯಾವ ಸಿನಿಮಾಗಳು ಸಕ್ಸಸ್‌ನ ಹಾದಿ ಕಂಡಿಲ್ಲ. ಸಪ್ಪೆಯಾಗಿರುವ ಚಂದನವನದಿಂದ ಈಗ ಭರ್ಜರಿ ಸುದ್ದಿ ಹೊರಬಂದಿದೆ. 2024ರಲ್ಲಿ ರಿಲೀಸ್ ಆಗಿದ್ದ ಸೂಪರ್ ಸಕ್ಸಸ್ ಸಿನಿಮಾಗಳಾದ ‘ಬ್ಲಿಂಕ್’ (Blink) ಮತ್ತು ‘ಶಾಖಾಹಾರಿ’ ಸಿನಿಮಾದ ನಿರ್ಮಾಪಕರು ಒಟ್ಟಿಗೆ ಸೇರಿ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾ ರಿಲೀಸ್ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ:ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

    ದಿಗಂತ್ ಮಂಚಾಲೆ(Diganth Manchale) ನಟನೆಯ ಸಮರ್ಥ್ ಕಡ್ಕೊಳ್ ಚೊಚ್ಚಲ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಅನೇಕ ಕಾರಣಗಳಿಂದ ರಿಲೀಸ್ ಆಗದೆ ಮುಂದಕ್ಕೆ ಹೋಗುತ್ತಿತ್ತು. ಆದರೆ ಈಗ ನಿರ್ಮಾಪಕ ರವಿಚಂದ್ರ ಎ.ಜೆ ಹಾಗೂ ನಿರ್ಮಾಪಕ ರಾಜೇಶ್ ಕೀಳಂಬಿ ಸೇರಿ ಈ ಸಿನಿಮಾವನ್ನ ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ. ಈ ಮೂಲಕ ಈಗ ಈ ಸಿನಿಮಾಗೆ ಮತ್ತೆ ಜೀವ ಬಂದಿದೆ. ರವಿಚಂದ್ರ ಅವರು ದಿಗಂತ್‌ ನಟನೆಯ ಸಿನಿಮಾಗೆ ವಿತರಕರಾಗಿ ಎಂಟ್ರಿ ಕೊಟ್ಟರೆ ‘ಶಾಖಾಹಾರಿ’ ನಿರ್ಮಾಪಕರು ಈ ಚಿತ್ರಕ್ಕೆ ಸಹ ನಿರ್ಮಾಪಕಾಗಿ ಎಂಟ್ರಿ ಕೊಟ್ಟಿದ್ದಾರೆ. ‘ಶಾಖಾಹಾರಿ’ ಸಿನಿಮಾ ಬಳಿಕ ನಿರ್ಮಾಪಕರು ಯಾವುದೇ ಸಿನಿಮಾವನ್ನು ಕೈಗೆತ್ತಿಕೊಂಡಿರಲಿಲ್ಲ. ಆದರೆ ಈಗ ದಿಗಂತ್‌ ಸಿನಿಮಾ ಸಾಥ್‌ ನೀಡಿದ್ದಾರೆ ಎಂದರೆ ಈ ಸಿನಿಮಾದ ಕಂಟೆಂಟ್ ಅದ್ಭುತವಾಗಿದೆ ಎನ್ನುವುದು ಗೊತ್ತಾಗುತ್ತದೆ. ನಿರ್ಮಾಪಕರಾದ ರಾಜೇಶ್ ಮತ್ತು ರವಿಚಂದ್ರ ಇಬ್ಬರೂ ಈ ಸಿನಿಮಾ ನೋಡಿ ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ. ಇದನ್ನೂ ಓದಿ:‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ – ಸನ್ನಿ ಡಿಯೋಲ್ ಸೇರಿ 7 ಮಂದಿ ವಿರುದ್ಧ FIR

    ನಿರ್ಮಾಪಕ ರಾಜೇಶ್ ಕೀಳಂಬಿ ಮಾತನಾಡಿ, ಈ ಸಿನಿಮಾದ ಕಂಟೆಂಟ್ ಕ್ವಾಲಿಟಿ ಅದ್ಭುತವಾಗಿದೆ. ಈ ಸಿನಿಮಾದಿಂದ ನನ್ನ ಪ್ರೊಡಕ್ಷನ್ ವ್ಯಾಲ್ಯೂ ಕೂಡ ಜಾಸ್ತಿ ಆಗುತ್ತೆ ಹಾಗಾಗಿ ಈ ಸಿನಿಮಾ ರಿಲೀಸ್ ಮಾಡಲು ಕೈಜೋಡಿಸಿದ್ದೇನೆ. ‘ಶಾಖಾಹಾರಿ’ ಮತ್ತು ‘ಬ್ಲಿಂಕ್’ ಸಿನಿಮಾ ಮಾಡುವಾಗ ನಾವಿಬ್ಬರು ಹೊಸ ನಿರ್ಮಾಪಕರು ಆದರೀಗ ಇಬ್ಬರ ಅನುಭವ ಈ ಸಿನಿಮಾಗೆ ಸಹಾಯವಾಗಲಿದೆ ಎಂದಿದ್ದಾರೆ.

     

    View this post on Instagram

     

    A post shared by Diganth Manchale (@diganthmanchale)

    ನಿರ್ದೇಶಕ ಸಮರ್ಥ್ ಈ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಇಬ್ಬರೂ ಸ್ಟ್ರಾಂಗ್ ನಿರ್ಮಾಪಕರ ಸೇರ್ಪಡೆಯಿಂದ ತಂಡಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ. ಎರಡು ಸೂಪರ್ ಸಕ್ಸಸ್ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನನ್ನ ಸಿನಿಮಾಗೆ ಕೈಜೋಡಿಸಿರೋದ್ರಿಂದ ತುಂಬಾ ಖುಷಿಯಾಗಿದ ಎಂದಿದ್ದಾರೆ.

    ರವಿಚಂದ್ರ ಎಜೆ ಮಾತನಾಡಿ, ‘ಕಳೆದ ಆರು ತಿಂಗಳುಗಳಲ್ಲಿ ನನಗೆ ಅನೇಕ ಕನ್ನಡ ಚಲನಚಿತ್ರಗಳನ್ನು ನೋಡುವ ಅವಕಾಶ ಸಿಕ್ಕಿದೆ. ಅವಗಳಲ್ಲಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ನಿಜವಾಗಿಯೂ ಅತ್ಯುತ್ತಮವಾದ ಚಿತ್ರವಾಗಿದೆ. ನಮ್ಮ ಬ್ಯಾನರ್ ಜನನಿ ಸಂಸ್ಥೆ ಅಡಿಯಲ್ಲಿ ನೋಡಿದವರು ಏನಂತಾರೆ, ಅನಮಧೇಯ ಅಶೋಕ್ ಕುಮಾರ್ ಮತ್ತು ಭಾವ ತೀರ ಯಾನ ಸೇರಿದಂತೆ ಹಲವಾರು ಸಿನಿಮಾಗಳನ್ನು ಹೆಮ್ಮೆಯಿಂದ ವಿತರಿಸಿದ್ದೇವೆ. ಈ ದಿಗಂತ್‌ ಸಿನಿಮಾ ವಿತರಣೆ ಮಾಡುತ್ತಿದ್ದೇನೆ ಇದು 2025ರ ಸಕ್ಸಸ್‌ಫುಲ್ ಸಿನಿಮಾ ಆಗಲಿದೆ ಎಂದಿದ್ದಾರೆ.

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಈಗಾಗಲೇ ಪೋಸ್ಟರ್ ಮತ್ತು ಟೀಸರ್‌ಗಳ ಮೂಲಕ ಕುತೂಹಲವನ್ನು ಹೆಚ್ಚಿಸಿದೆ. ಯಾವಾಗಲೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಈ ಚಿತ್ರದಲ್ಲಿ ದಿಗಂತ್‌ಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ಧನು ಹರ್ಷ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಶೀಘ್ರದಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

  • ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಹೊಸ ಪೋಸ್ಟರ್ ರಿಲೀಸ್

    ದಿಗಂತ್ ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಹೊಸ ಪೋಸ್ಟರ್ ರಿಲೀಸ್

    ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನದ ಅಂಗವಾಗಿ ‘ಎಡಗೈ ಅಪಘಾತಕ್ಕೆ ಕಾರಣ’ (Edgaiye Apghatakke Karana) ಸಿನಿಮಾ ತಂಡದಿಂದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಚಿತ್ರ ಕಟ್ಟಿಕೊಡಲಾಗಿದೆ. ಅದರಂತೆಯೇ ಪೋಸ್ಟರ್ ಕೂಡ ಆಕರ್ಷಕವಾಗಿದೆ. ಸೆಟ್ಟೇರಿದ ದಿನದಂದಲೂ ಚಿತ್ರತಂಡ ವಿಭಿನ್ನ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರೇಕ್ಷಕರ ಕುತೂಹಲವನ್ನು ಹೆಚ್ಚು ಮಾಡಿದೆ. ಇದನ್ನೂ ಓದಿ:ಪತ್ರಕರ್ತ ಹರೀಶ್ ನಟನೆಯ ‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಸರ್ಜಾ ಚಾಲನೆ

     

    View this post on Instagram

     

    A post shared by Hyphen Pictures (@hyphenpictures)

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ದೂದ್ ಪೇಡ ದಿಗಂತ್ (Diganth) ನಾಯಕನಾಗಿ ನಟಿಸಿದ್ದು, ಅವರಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸಿದ್ದಾರೆ. ನಿಧಿ ಸುಬ್ಬಯ್ಯ(Nidhi Subbaiah), ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

  • ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆ ದೇಣಿಗೆ ನೀಡಿದ ದಿಗಂತ್ ದಂಪತಿ

    ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆ ದೇಣಿಗೆ ನೀಡಿದ ದಿಗಂತ್ ದಂಪತಿ

    ತ್ತೀಚೆಗೆ ಕೇರಳದ ದೇವಸ್ಥಾನವೊಂದಕ್ಕೆ ಕನ್ನಡತಿ ಪ್ರಿಯಾಮಣಿ ಎಲೆಕ್ಟ್ರಿಕಲ್ ಆನೆಯೊಂದನ್ನು (Electrical Elephant) ದೇಣಿಗೆ ನೀಡಿದ್ದರು. ಇದೀಗ ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ ಸ್ಯಾಂಡಲ್‌ವುಡ್ ನಟ ದಿಗಂತ್ (Diganth) ಮತ್ತು ಐಂದ್ರಿತಾ ರೇ  (Aindrita Ray) ದಂಪತಿ ನೀಡಿದ್ದಾರೆ. ಇದನ್ನೂ ಓದಿ:ಅನಂತ್ ಅಂಬಾನಿ ಹುಟ್ಟುಹಬ್ಬದಲ್ಲಿ ಕುಣಿದು ಕುಪ್ಪಳಿಸಿದ ಸಲ್ಮಾನ್

    ಸುತ್ತೂರು ಮಠಕ್ಕೆ ಭೇಟಿ ನೀಡಿ ಎಲೆಕ್ಟ್ರಿಕಲ್ ಆನೆಯನ್ನು ದೇಣಿಗೆ ನೀಡಿದ್ದು, ದಿಗಂತ್ ದಂಪತಿಯ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ದಿಗಂತ್ ದಂಪತಿಯ ಕಾರ್ಯಕ್ಕೆ ಬಿಗ್ ಬಾಸ್ ಬೆಡಗಿ ಸಂಗೀತಾ ಶೃಂಗೇರಿ (Sangeetha Sringeri) ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ನಟ ದಿಗಂತ್ ಕನ್ನಡದ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಐಂದ್ರಿತಾ ರೇ ಕನ್ನಡದ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಆ್ಯಕ್ಟೀವ್ ಆಗಿದ್ದಾರೆ.

  • ‘ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ-ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್

    ‘ಬೊಂಬಾಟ್ ಭೋಜನ’ದಲ್ಲಿ ಯುಗಾದಿ ಸಂಭ್ರಮ-ಹಬ್ಬದೂಟಕ್ಕೆ ಆಗಮಿಸಿದ ಸ್ಯಾಂಡಲ್ವುಡ್ ಸ್ಟಾರ್ಸ್

    ಸ್ಟಾರ್ ಸುವರ್ಣ ವಾಹಿಯಲ್ಲಿ ಸಾವಿರ ಸಂಚಿಕೆಗಳನ್ನು ದಾಟಿ, ಹೊಸ ಮೈಲಿಗಲ್ಲು ಸೃಷ್ಟಿಸಿ ಕರುನಾಡಿನ ಮನಗೆದ್ದ ಅಡುಗೆ ಶೋ ಬೊಂಬಾಟ್ ಭೋಜನದಲ್ಲಿ (Bombat Bhojana) ಇದೀಗ ನವ ಸಂವತ್ಸರದ ಮೊದಲ ಹಬ್ಬ ಯುಗಾದಿಯ (Ugadi) ಸಂಭ್ರಮಾಚರಣೆ ಬೊಂಬಾಟ್ ಆಗಿ ನಡೆಯುತ್ತಿದೆ. ಇದನ್ನೂ ಓದಿ: ಮದುವೆಗೂ ಮುನ್ನ ಮೊದಲ ಪ್ರೀತಿಯ ಬಗ್ಗೆ ಸನ್ನಿ ಶಾಕಿಂಗ್ ಕಾಮೆಂಟ್

    ಸಿಹಿ ಕಹಿ ಚಂದ್ರು (Sihi Kahi Chandru) ಅವರ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಶೋ, ಮನೆ ಮಂದಿಗೆ ರುಚಿಕರವಾದ ಅಡುಗೆಯನ್ನು ಮಾಡಿ ಬಡಿಸುವಲ್ಲಿ ವೀಕ್ಷಕರಿಗೆ ಸಹಾಯಕವಾಗಿದೆ. ಪ್ರಸ್ತುತ 4ನೇ ಆವೃತ್ತಿಯೊಂದಿಗೆ ಮುಂದುವರಿಯುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮದಲ್ಲಿ ಈ ಬಾರಿ ವರ್ಷದ ಮೊದಲ ಹಬ್ಬ ಯುಗಾದಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ವಾರವಿಡೀ ಸ್ಯಾಂಡಲ್‌ವುಡ್ ತಾರೆಗಳು ಆಗಮಿಸಲಿದ್ದಾರೆ.

    ಬೇವು ಬೆಲ್ಲದ ಸವಿ ಹಂಚಲು ಇದೇ ಏಪ್ರಿಲ್ 8ರಂದು ಸೋಮವಾರ ನಟ ಸತೀಶ್ ನೀನಾಸಂ, ಮಂಗಳವಾರ ನಟಿ ನಿಶ್ವಿಕಾ ನಾಯ್ಡು (Nishvika Naidu) ಹಾಗೂ ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಬುಧವಾರ ನಟ ದಿಗಂತ್, ಗುರುವಾರ ಶಿವರಾಜ್ ಕೆಆರ್ ಪೇಟೆ, ಶುಕ್ರವಾರ ಕಿರುತೆರೆ ನಟ ಕಿರಣ್ ರಾಜ್ (Kiran Raj) ಹಾಗೂ ಶನಿವಾರ ‘ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು’ ಸಿನಿಮಾ ಖ್ಯಾತಿಯ ದಡ್ಡ ಪ್ರವೀಣ ಆಗಮಿಸುತ್ತಿದ್ದಾರೆ. ಹೀಗಾಗಿ ವಾರಪೂರ್ತಿ ಮಧ್ಯಾಹ್ನ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ.

    ಯುಗಾದಿಯ ಪ್ರಯುಕ್ತ ಬೊಂಬಾಟ್ ಭೋಜನದಲ್ಲಿ ಬರುತ್ತಿದೆ ಹಬ್ಬದ ವಿಶೇಷ ಸಂಚಿಕೆಗಳು ಏಪ್ರಿಲ್ 8ರಿಂದ ಏಪ್ರಿಲ್ 14 ರವರೆಗೆ ಸೋಮ-ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

  • ದಿಗಂತ್‌ ಚಿತ್ರಕ್ಕೆ ಕಿಚ್ಚನ ಬೆಂಬಲ- ‘ಎಡಗೈ ಅಪಘಾತಕ್ಕೆ ಕಾರಣ’ ಟೀಸರ್‌ ರಿಲೀಸ್‌ ಮಾಡಲಿದ್ದಾರೆ ಸುದೀಪ್

    ದಿಗಂತ್‌ ಚಿತ್ರಕ್ಕೆ ಕಿಚ್ಚನ ಬೆಂಬಲ- ‘ಎಡಗೈ ಅಪಘಾತಕ್ಕೆ ಕಾರಣ’ ಟೀಸರ್‌ ರಿಲೀಸ್‌ ಮಾಡಲಿದ್ದಾರೆ ಸುದೀಪ್

    ಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghakke Karana) ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೀಸರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ನಾಳೆ (ಡಿ.28) ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ನ್ನು ಕಿಚ್ಚ ಸುದೀಪ್ (Sudeep) ಅನಾವರಣಗೊಳಿಸಲಿದ್ದಾರೆ. ಈ ಮೂಲಕ ದಿಗಂತ್ (Diganth Manchale) ಸಿನಿಮಾಗೆ ಸುದೀಪ್ ಸಾಥ್ ಕೊಡಲಿದ್ದಾರೆ.

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಇದನ್ನೂ ಓದಿ:‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಫಿದಾ

    ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ದೂದ್ ಪೇಡ ದಿಗಂತ್ ನಾಯಕನಾಗಿ ನಟಿಸಿದ್ದು, ದಿಗ್ಗಿಗೆ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

  • ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಪೋಸ್ಟರ್

    ದೀಪಾವಳಿಗೆ ಬಂತು ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಪೋಸ್ಟರ್

    ಡಗೈ ಬಳಸುವವರ ಕಥೆಯಾಧಾರಿತ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗಿರುವುದು ಗೊತ್ತಿರುವ ವಿಚಾರ. ಯುವ ನಿರ್ದೇಶಕ ಸಮರ್ಥ್ ಕಡಕೋಳ್ ಸಾರಥ್ಯದಲ್ಲಿ ಮೂಡಿಬಂದಿರುವ ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಹೊಸ ಪೋಸ್ಟರ್ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:Bigg Boss: ಡ್ರೋನ್‌ಗೆ ಸಿಕ್ತು ಈ ವಾರದ ಕಿಚ್ಚನ ಚಪ್ಪಾಳೆ

    ದಿಗಂತ್ ಮಂಚಾಲೆ (Diganth Manchale) ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಚಿತ್ರದ ಪೋಸ್ಟರ್‌ನಲ್ಲಿ ಟೇಬಲ್ ಹಿಂಬದಿಯಲ್ಲಿ ಬಚ್ಚಿಟ್ಟುಕೊಂಡು ಕುಳಿತಿರುವ ನಾಯಕ ಹಾಗೂ ನಾಯಕಿ ಅವರ ಬೆನ್ನಿಂದೆ ವ್ಯಕ್ತಿಯೋರ್ವ ನಿಂತಿದ್ದಾರೆ. ಅವರು ಯಾರು ಅನ್ನೋದನ್ನು ರಿವೀಲ್ ಮಾಡದೇ ಚಿತ್ರತಂಡ ಕುತೂಹಲ ಕಾಯ್ದುಕೊಂಡಿದೆ.

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾ ಹಂದರ ಈ ಸಿನಿಮಾದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಹೊಸ ನಟಿ ಧನು ಹರ್ಷ ನಟಿಸುತ್ತಿದ್ದು ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಕೂಡಾ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಮತ್ತು ಗುರುದತ್ ಗಾಣಿಗ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ. ಒಂದಷ್ಟು ಪೋಸ್ಟರ್, ಝಲಕ್ ಮೂಲಕ ಗಮನಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

  • ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ದೂದ್ ಪೇಡ ದಿಗಂತ್ ಇದೀಗ ಹೊಸ ಸಿನಿಮಾಗಾಗಿ ‘ಗುಳ್ಟು'(Gultoo) ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಅಣ್ಣಾವ್ರ ಮೊಮ್ಮಗಳು ಧನ್ಯಾ ಮತ್ತು ‘ಗಾಳಿಪಟ 2’ ನಟಿ ಶರ್ಮಿಳಾ ಮಾಂಡ್ರೆ (Sharmiela Mandre) ಜೊತೆ ಡ್ಯುಯೇಟ್ ಹಾಡಲು ದಿಗಂತ್ ಮಂಚಾಲೆ (Diganth Manchale) ರೆಡಿಯಾಗಿದ್ದಾರೆ.

    ‘ಗುಳ್ಟು’ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ (Janardhan Chikkanna) ಇದೀಗ ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ.  ನಟ ದಿಗಂತ್ ಕೂಡ ಕಥೆ ಕೇಳಿ ಥ್ರಿಲ್ ಆಗಿ ಸಿನಿಮಾಗೆ ಓಕೆ ಎಂದಿದ್ದಾರೆ. ಇದನ್ನೂ ಓದಿ:ಘೋಸ್ಟ್ ಸಿನಿಮಾ ರಿಲೀಸ್ ಡೇಟ್ ಘೋಷಣೆ: ದಸರಾಗೆ ತೆರೆಯ ಮೇಲೆ ಶಿವಣ್ಣ

    ಈಗಾಗಲೇ ‌’ದಿ ಜಡ್ಜ್‌ಮೆಂಟ್’ ಸಿನಿಮಾದಲ್ಲಿ ದಿಗಂತ್- ಧನ್ಯಾ ಒಟ್ಟಿಗೆ ನಟಿಸಿದ್ದಾರೆ. ಮತ್ತೆ ಈ ಹೊಸ ಚಿತ್ರದ ಮೂಲಕ ದಿಗಂತ್‌ಗೆ ನಟಿ ಧನ್ಯಾ ರಾಮ್‌ಕುಮಾರ್ ಜೊತೆಯಾಗಿದ್ದಾರೆ. ಮತ್ತೊಂದು ವಿಶೇಷ ಅಂದರೆ, 13 ವರ್ಷಗಳ ನಂತರ ಶರ್ಮಿಳಾ ಮಾಂಡ್ರೆ- ದಿಗಂತ್ ಈ ಚಿತ್ರದ ಮೂಲಕ ಒಟ್ಟಿಗೆ ಕಾಣಿಸಿಕೊಳ್ತಿದ್ದಾರೆ.

    2010ರಲ್ಲಿ ‘ಸ್ವಯಂವರ’ ಸಿನಿಮಾದಲ್ಲಿ ದಿಗಂತ್-ಶರ್ಮಿಳಾ ಜೋಡಿಯಾಗಿ ನಟಿಸಿದ್ದರು.  ಗುಳ್ಟು ನಿರ್ದೇಶಕನ ಹೆಸರಿಡದ ಹೊಸ ಸಿನಿಮಾದ ಮೂಲಕ ಧನ್ಯಾ(Dhanya Ramkumar), ಶರ್ಮಿಳಾ, ದಿಗಂತ್ ಜೊತೆಯಾಗಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.‌ ಟ್ರೈಯಾಂಗಲ್‌ ಲವ್‌ ಸ್ಟೋರಿ ಬೆಳ್ಳಿಪರದೆಯಲ್ಲಿ ಹೇಗೆ ಮೂಡಿ ಬರಲಿದೆ ಎಂದು ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್- ದಿಗಂತ್‌ & ಟೀಮ್‌ ಸಾಥ್

    ಎಡಗೈ ಬಳಕೆದಾರರಿಗೆಂದೇ ವಿಶೇಷವಾದ ಹೆಲ್ಮೆಟ್ ಲಾಂಚ್- ದಿಗಂತ್‌ & ಟೀಮ್‌ ಸಾಥ್

    ಇಂದು ಅಂತಾರಾಷ್ಟ್ರೀಯ ಎಡಗೈ ಬಳಕೆದಾರರ ದಿನ. ಈ ದಿನದ‌ ಅಂಗವಾಗಿ ವೇಗಾ ಹೆಲ್ಮೆಟ್ ಕಂಪನಿ ವಿಶೇಷವಾದ ಹೆಲ್ಮೆಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದೆ. ವೇಗಾ ಕಂಪನಿಗೆ ಇಂತಹದೊಂದು ಐಡಿಯಾ ಬರಲು ಕಾರಣ ಎಡಗೈ ಬಳಸುವವರನ್ನೇ ಕಥಾಹಂದರವಾಗಿ ಹೊಂದಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ. ಈ ಚಿತ್ರದ ಪ್ರೇರಣೆಯಿಂದ ವೇಗಾ 1308 ಸೌತ್ ಪಾವ್ ಎಂಬ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಇದು ಎಗಡೈ ಬಳಕೆದಾರರಿಗೆ ಬಹಳಷ್ಟು ಸುಲಭವಾಗಿದೆ. ಈ ಹೆಲ್ಮೆಟ್ ISI ಮತ್ತು ಸರ್ಟಿಫೈಡ್ ಹೊಂದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಭಾಗಿಯಾಗಿ ಸಿನಿಮಾ ಬಗ್ಗೆ ಹಾಗೂ ವೇಗಾ ಹೆಲ್ಮೆಟ್ ತಮ್ಮ ಚಿತ್ರಕ್ಕೆ ಬೆಂಬಲವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

    ವೇಗಾ ಹೆಲ್ಮೆಟ್ ಕಂಪನಿ ಮನ್ಮತ್ ಶೆಟ್ಟಿ, ಒಂದು ದಿನಕ್ಕೆ 20 ಸಾವಿರ ಹೆಲ್ಮೆಟ್ ಕಂಪನಿ ಮಾರಾಟ ಮಾಡುತ್ತೇವೆ. ಎಡಗೈ ಬಳಸುವವರಿಗೆ ಸುಲಭವಾಗುವ ರೀತಿ ಹೊಸ ಹೆಲ್ಮೆಟ್ ತಯಾರಿಸಲಾಗಿದೆ. ನಾವು ದಿನನಿತ್ಯ ಹೊಸತನವನ್ನು ಕಲಿಯುತ್ತಿದ್ದೇನೆ. ಅದರಂತೆ ಇಂದು ವಿಶೇಷ ಹೆಲ್ಮೆಟ್ ಲಾಂಚ್  ಮಾಡಲಾಗಿದೆ. ಎಡಗೈ ಬಳಸುವ ಶೇಖಡ ಹತ್ತರಷ್ಟು ಮಂದಿಗೆ ಈ ಹೆಲ್ಮೆಟ್ ಉಪಯೋಗವಾಗಲಿದೆ‌ ಎಂದರು.

    ನಿರ್ಮಾಪಕ ಗುರುದತ್ ಗಣಿಗ ಮಾತನಾಡಿ, ಐಡಿಯಾ ಎಲ್ಲಾ ಶುರುವಾಗಿದ್ದು, ಸಮರ್ಥ್ ಅವರಿಂದ. ಇದೊಂದು ವಿಭಿನ್ನ ಕಥೆ. ಈ ರೀತಿ ಸಿನಿಮಾ ಬೇರೆ ಇಂಡಸ್ಟ್ರಿಯಲ್ಲಿ ಬಂದಾಗ ವಾವ್ ಎನ್ನುತ್ತಾರೆ. ಇಂತಹ ಕಥೆಗೆ ನಿರ್ಮಾಪಕರು ಸಿಗಲ್ಲ. ಸ್ನೇಹಿತರು , ಇಡೀ ತಂಡದ ಬೆಂಬಲದಿಂದ ಇಲ್ಲಿವರೆಗೂ ಬಂದಿದ್ದೇವೆ. ನಿರ್ದೇಶಕರು ತುಂಬಾ ಚೆನ್ನಾಗಿ ಕಥೆ ಮಾಡಿದ್ದಾರೆ ಎಂದರು. ನಿರ್ದೇಶಕ ಸಮರ್ಥ್ ಬಿ ಕಡಕೋಳ್, ಲಾಕ್ ಡೌನ್ ಟೈಮ್ ನಲ್ಲಿ ಬರೆದ ಕಥೆ ಇದು. ಈ ಕಥೆ ಇಟ್ಕೊಂಡು ಸುಮಾರು ನಿರ್ಮಾಪಕರ ಬಳಿ ಹೋದೆ.‌ ಕೊನೆಗೆ ಗುರು ಭೇಟಿಯಾದೆ. ನನ್ನ ಸ್ನೇಹಿತರು, ಮಂಜು ಸರ್ ಬೆಂಬಲದಿಂದ ಸಿನಿಮಾ ಆಗಿದೆ ಎಂದು ತಿಳಿಸಿದರು.‌ ಇದನ್ನೂ ಓದಿ:ಸಮುದಾಯವೊಂದನ್ನು ನಿಂದಿಸಿದ್ದಕ್ಕೆ ಉಪೇಂದ್ರ ಮೇಲೆ ಎಫ್‌ಐಆರ್ ದಾಖಲು

    ನಟ ದಿಗಂತ್ (Diganth) ಮಾತನಾಡಿ, ನಮ್ಮ ಸಿನಿಮಾಗೆ ಸಾಥ್ ಕೊಟ್ಟ ವೇಗಾದವರಿಗೆ ದೊಡ್ಡ ಧನ್ಯವಾದ. ದಿನಕ್ಕೆ 20 ಸಾವಿರ ಹೆಲ್ಮೆಟ್ ಮಾರಾಟವಾಗುತ್ತದೆ. ಅವರು ಹೆಲ್ಮೆಟ್ ಜೊತೆ ನಮ್ಮ ಸಿನಿಮಾ ಕಾರ್ಡ್ ಹಾಕಿ ಎಲ್ಲರಿಗೂ ಪ್ರಮೋಷನ್ ಮಾಡುತ್ತಿದ್ದಾರೆ. ಎಡಗೈ ಬಳಸುವವರಿಗೆ ವೇಗಾ ವಿಶೇಷ ಹೆಲ್ಮೆಟ್ ಲಾಂಚ್ ಮಾಡಿದೆ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾದ ಕಥೆ ಅದ್ಭುತವಾಗಿದೆ. ಒಂದೊಳ್ಳೆ ತಂಡದ ಜೊತೆ ಒಳ್ಳೆ ಪ್ರಯತ್ನ ಮಾಡಿದ್ದೇವೆ ಎಂಬ ಹಾರೈಕೆ ಇರಲಿ ಎಂದರು.

    ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್ ‘ವೇಗ’ (Vega) ಹೆಲ್ಮೆಟ್ ಕಂಪನಿಯವರಿಗೆ ಇಷ್ಟವಾಗಿದ್ದು, ಅವರು ಈ ವಿಶೇಷ ಹೆಲ್ಮೆಟ್ ಮೂಲಕ ಚಿತ್ರತಂಡದ ಜತೆ ಕೈಜೋಡಿಸಿದ್ದಾರೆ. ಅಂದಹಾಗೆ ಇಂಥದ್ದೊಂದು ಹೆಲ್ಮೆಟ್ ರೂಪಿಸಿ ಮಾರುಕಟ್ಟೆಗೆ ಬಿಡುಗಡೆ ಆಗುತ್ತಿರುವುದು ಇದೇ ಮೊದಲು. ಇದನ್ನೂ ಓದಿ:ಚಿತ್ರೀಕರಣಕ್ಕೆ ಬ್ರೇಕ್‌ – ಅಮೆರಿಕದಲ್ಲಿ ಪ್ರಭಾಸ್‌ಗೆ ಶಸ್ತ್ರಚಿಕಿತ್ಸೆ

    ನಿರ್ದೇಶಕ ಸಮರ್ಥ್ ಬಿ ಕಡಕೋಳ್ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apagathakke Karana Film) ಸಿನಿಮಾಗೆ ನಿರ್ದೇಶನ ಮಾಡಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಈ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರ. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್ (Radhika Narayan), ನಿಧಿ ಸುಬ್ಬಯ್ಯ (Nidhi Subbaih) ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್​​ನಡಿ ಗುರುದತ್ ಗಾಣಿಗ- ನಿರ್ದೇಶಕ ಸಮರ್ಥ್ ಬಿ ಕಡಕೋಳ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಈ ಸಿನಿಮಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ದಿಗಂತ್ ಬಾಳಲ್ಲಿ ಇದು 2ನೇ ದುರಂತ..!

    ನಟ ದಿಗಂತ್ ಬಾಳಲ್ಲಿ ಇದು 2ನೇ ದುರಂತ..!

    ಸ್ಯಾಂಡಲ್‌ವುಡ್‌ಗೆ `ಮಿಸ್ ಕ್ಯಾಲಿಫೋರ್ನಿಯ’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ದಿಗಂತ್‌ಗೆ ಆರೋಗ್ಯದ ವಿಚಾರದಲ್ಲಿ ಲಕ್ ಕೈಕೊಟ್ಟಂತಿದೆ. ಈ ನಟನ ಬದುಕಲ್ಲಿ ಈಗಾಗಲೇ ಕರಾಳ ಘಟನೆಯೊಂದು ನಡೆದಿದ್ದು, ಇದೀಗ ಇದಕ್ಕೆ ಮತ್ತೊಂದು ಘಟನೆ ಸೇರಿಕೊಂಡಿದೆ.

    ಪಂಚರಂಗಿ, ಮನಸಾರೆ, ಲೈಫು ಇಷ್ಟೇನೆ, ಸಿನಿಮಾಗಳ ಮೂಲಕ ಹೆಚ್ಚು ಖ್ಯಾತಿಯನ್ನು ಪಡೆದ ನಟನ ಬಾಳಲ್ಲಿ ಈ ಎರಡು ಕರಾಳ ಘಟನೆ ನಡೆದಿದೆ. ಈ ಹಿಂದೆ ಚಿತ್ರೀಕರಣವೊಂದರಲ್ಲಿ ಬಲಗಣ್ಣಿಗೆ ಪೆಟ್ಟು ಬಿದ್ದಿತ್ತು. ಈಗ ಸ್ಪೈನಲ್ ಮೈನರ್ ಇಂಜುರಿ ಆಗಿದೆ. ಆರೋಗ್ಯದ ವಿಚಾರದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ದಿಗಂತ್ ಸುದ್ದಿಯಾಗುತ್ತಲೇ ಇರುತ್ತಾರೆ.‌ ಇದನ್ನೂ ಓದಿ: ದಿಗಂತ್‌ಗೆ ಆಗಿರೋದು ಸಣ್ಣ ಗಾಯ, ಗಾಬರಿಪಡುವ ಅಗತ್ಯವಿಲ್ಲ: ಯೋಗರಾಜ್ ಭಟ್

    ಸ್ಯಾಂಡಲ್‌ವುಡ್ ನಟ ದಿಗಂತ್ ಕನ್ನಡ ಚಿತ್ರರಂಗದಲ್ಲಿ ಪೀಕ್‌ನಲ್ಲಿರುವಾಗ `ಟಿಕೆಟ್ ಟು ಬಾಲಿವುಡ್’ ಹಿಂದಿ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಬಲಕಣ್ಣಿಗೆ ಬಲವಾಗಿ ಪೆಟ್ಟು ಬಿದ್ದು ಸಂಕಷ್ಟ ದಿಗಂತ್ ಅನುಭವಿಸಿದ್ದರು. ೨೦೧೬ರಲ್ಲಿ ಈ ಅವಘಡ ಸಂಭವಿಸಿ ಬಲಕಣ್ಣಿನ ತೊಂದರೆಗೆ ನಟ ದಿಗಂತ್ ಒಳಗಾಗಿದ್ದರು. ಈ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿಯೇ ನಾಯಕಿಯ ಹೀಲ್ಡ್ ಚಪ್ಪಲಿ ಎಸೆಯುವ ಸೀನ್‌ನಲ್ಲಿ ದಿಗಂತ್ ಕಣ್ಣಿಗೆ ಏಟಾಗಿತ್ತು.

    ಈಗ ಮತ್ತೊಮ್ಮೆ ಗೋವಾದಲ್ಲಿ ಬೀಚ್ ಬದಿಯಲ್ಲಿ ಸೊಮಾರ್ ಸಾಲ್ಟ್ ಮಾಡುವಾಗ ಬೆನ್ನು ಹಾಗೂ ಕತ್ತಿಗೆ ಏಟು ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಇನ್ನು ನೆಚ್ಚಿನ ನಟನ ಆರೋಗ್ಯದಲ್ಲಿ ಚೇತರಿಕೆಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

    Live Tv

  • ದಿಗಂತ್‌ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ:  ನಟನ ಕುಟುಂಬಸ್ಥರು

    ದಿಗಂತ್‌ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ: ನಟನ ಕುಟುಂಬಸ್ಥರು

    ಸ್ಯಾಂಡಲ್‌ವುಡ್ ನಟ ದಿಗಂತ್ ಮಂಚಾಲೆ ಅವರ ಕುತ್ತಿಗೆಗೆ ಪೆಟ್ಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಏರ್‌ಲಿಫ್ಟ್‌ ಮೂಲಕ ಬಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ದಿಗಂತ್‌ಗೆ ಏನೂ ಆಗಿಲ್ಲ, ಆತಂಕ ಪಡಬೇಡಿ ಎಂದು ಅಭಿಮಾನಿಗಳಿಗೆ ದಿಗಂತ್‌ ಕುಟುಂಬಸ್ಥರು ಮನವಿ ಮಾಡಿದ್ದಾರೆ.

    ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ನಟ ತೆರಳಿದ್ದರು. ಸಮುದ್ರ ತಟದಲ್ಲಿ ಸೊಮರ್ ಸಾಲ್ಟ್ ಹೊಡೆಯುವ ವೇಳೆ ಮಿಸ್ಸಾಗಿ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ.  ಕೂಡಲೇ ಗೋವಾದಲ್ಲಿಯೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ಪತ್ನಿ ಐಂದ್ರಿತಾ ರೇ ಕೂಡ ದಿಗಂತ್‌ ಜೊತೆ ಇದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ದಿಗಂತ್‌ಗೆ ಪೆಟ್ಟು: ಕೆಲವೇ ಕ್ಷಣಗಳಲ್ಲಿ ಬೆಂಗ್ಳೂರಿಗೆ ಏರ್‌ಲಿಫ್ಟ್

    Live Tv