Tag: Digital Arrest

  • ದೇಶಾದ್ಯಂತ ʻಡಿಜಿಟಲ್ ಅರೆಸ್ಟ್ʼ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು

    ದೇಶಾದ್ಯಂತ ʻಡಿಜಿಟಲ್ ಅರೆಸ್ಟ್ʼ ಹಾವಳಿ – ಸಿಬಿಐ ತನಿಖೆಗೆ ಸುಪ್ರೀಂ ಒಲವು

    – ಎಫ್‌ಐಆರ್‌ ವಿವರ ನೀಡಲು ಎಲ್ಲಾ ರಾಜ್ಯಗಳಿಗೆ ನಿರ್ದೇಶನ

    ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ʻಡಿಜಿಟಲ್ ಅರೆಸ್ಟ್ʼ (Digital Arrest) ವಂಚನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಈ ಪ್ರಕರಣಗಳ ತನಿಖೆಯನ್ನ ಕೇಂದ್ರೀಯ ತನಿಖಾ ದಳಕ್ಕೆ (CBI) ವಹಿಸುವ ಕುರಿತು ಚಿಂತನೆ ನಡೆಸಿದೆ.

    ನ್ಯಾಯಾಧೀಶರು ಮತ್ತು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ನಕಲಿ ದಾಖಲೆಗಳನ್ನ ಬಳಸಿ ವಂಚಕರು ನಡೆಸುತ್ತಿರುವ ಈ ಕೃತ್ಯಗಳ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರೊಂದಿಗೆ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳಿಗೆ ಸಂಬಂಧ ದಾಖಲಾಗಿರುವ ಎಫ್‌ಐಆರ್‌ಗಳ ವಿವರ ನೀಡುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

    ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ. ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ತನಿಖೆಯನ್ನ ಕೇಂದ್ರ ತನಿಖಾ ದಳಕ್ಕೆ (CBI) ಹಸ್ತಾಂತರಿಸುವ ಬಗ್ಗೆಯೂ ಚಿಂತನೆ ನಡೆಸಿದೆ. ಈ ಬಗ್ಗೆ ದೇಶಾದ್ಯಂತದ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನ ನಿರ್ವಹಿಸಲು ಸಿಬಿಐಗೆ ಸಂಪನ್ಮೂಲಗಳಿವೆಯೇ ಎಂದು ಪ್ರಶ್ನಿಸಿತು. ಆಗ ಸಿಬಿಐ ಈಗಾಗಲೇ ಕೆಲವು ಪ್ರಕರಣಗಳನ್ನು ನಿಭಾಯಿಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಬಾಗ್ಚಿ, ಎಲ್ಲಾ ಪ್ರಕರಣಗಳನ್ನ ನಿರ್ವಹಿಸಲು ಸಿಬಿಐ ಬಳಿ ಅಗತ್ಯ ಸಂಪನ್ಮೂಲಗಳಿವೆಯೇ ಪರಿಶೀಲಿಸುವಂತೆ ಸೂಚಿಸಿದರು.

    ಸೈಬರ್ ಅಪರಾಧದಲ್ಲಿ (Cyber Crime) ಅವರಿಗೆ ತಜ್ಞರು ಬೇಕಾದರೆ ನಮಗೆ ಹೇಳಬಹುದು ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದರು. ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ಸಿಬಿಐ ಗೃಹ ಸಚಿವಾಲಯದ ಸೈಬರ್ ಅಪರಾಧ ವಿಭಾಗದ ಸಹಾಯ ಪಡೆಯುತ್ತಿದೆ ಎಂದು ವಿವರಿಸಿದರು.

    Digital Arrest

    ಅಂತಿಮವಾಗಿ ಏಕರೂಪದ ತನಿಖೆ ನಡೆಯುವಂತೆ ನೋಡಿಕೊಳ್ಳಲು ನಾವು ಇಂದು ನಿರ್ದೇಶನಗಳನ್ನು ನೀಡುತ್ತಿಲ್ಲ. ನಾವು ಎಲ್ಲ ರಾಜ್ಯಗಳಿಗೆ ನೋಟಿಸ್ ನೀಡುತ್ತಿದ್ದೇವೆ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು. ದೇಶಾದ್ಯಂತ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್‌ ಹಗರಣಗಳ ಬೆದರಿಕೆಯನ್ನ ಪರಿಹರಿಸಲು ಅಕ್ಟೋಬರ್ 17 ರಂದು ನ್ಯಾಯಾಲಯವು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ.

    ಡಿಜಿಟಲ್ ಅರೆಸ್ಟ್ ಎಂದರೇನು?
    ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಒಂದು ವಿಧಾನ. ಇದರಲ್ಲಿ ವಂಚಕರು ಕಾನೂನು ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ. ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳನ್ನಾಗಿ ಮಾಡಿ ಹಣ ಪೀಕುತ್ತಾರೆ.

  • ಕಾಲ್‌ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – ಹೊರರಾಜ್ಯದವರನ್ನೇ ಟಾರ್ಗೆಟ್ ಮಾಡ್ತಿದ್ದ 16 ಜನರ ಗ್ಯಾಂಗ್ ಬಂಧನ

    ಕಾಲ್‌ಸೆಂಟರ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ – ಹೊರರಾಜ್ಯದವರನ್ನೇ ಟಾರ್ಗೆಟ್ ಮಾಡ್ತಿದ್ದ 16 ಜನರ ಗ್ಯಾಂಗ್ ಬಂಧನ

    ಬೆಂಗಳೂರು: ಕಾಲ್‌ಸೆಂಟರ್ (Call Center) ಹೆಸರಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ಮಾಡಿ ಜನರಿಗೆ ವಂಚಿಸುತ್ತಿದ್ದ ಅಡ್ಡೆ ಮೇಲೆ ಹೆಚ್‌ಎಸ್‌ಆರ್ ಲೇಔಟ್ (HSR Layout) ಪೊಲೀಸರು ದಾಳಿ ನಡೆಸಿ, 16 ಜನರ ಗ್ಯಾಂಗ್‌ವೊಂದನ್ನು ಬಂಧಿಸಿದ್ದಾರೆ.

    ಹೌದು, ಇತ್ತೀಚಿನ ದಿನಗಳಲ್ಲಿ ಇಡಿ, ಸಿಸಿಬಿ, ಸಿಬಿಐ, ಜಡ್ಜ್‌ಗಳ ಹೆಸರಲ್ಲಿ ವಿವಿಧ ಕಾರಣಗಳನ್ನ ನೀಡಿ ಜನರಿಗೆ ಬೆದರಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದರು. ಆದರೆ ಇದೀಗ ಗ್ಯಾಂಗ್‌ವೊಂದು ಬೆಂಗಳೂರಿನಲ್ಲಿ ಕಾಲ್‌ಸೆಂಟರ್ ರೀತಿಯಲ್ಲಿ ಎರಡು ಫ್ಲೋರ್‌ನಲ್ಲಿ ವ್ಯವಸ್ಥಿತವಾಗಿ ಕೆಲಸಗಾರರನ್ನು ಸಂಬಳ ಕೊಟ್ಟು ಡಿಜಿಟಲ್ ಅರೆಸ್ಟ್ ಮಾಡಿ, ಜನರ ಬಳಿ ಸುಲಿಗೆ ಮಾಡಿರೋದು ಬೆಳಕಿಗೆ ಬಂದಿದೆ.ಇದನ್ನೂ ಓದಿ: ಡಿಕೆಶಿಗೆ ಹಾಸನಾಂಬೆ ಮಹಾಪ್ರಸಾದ – ಪೂಜೆ ವೇಳೆ ಬಲಗಡೆ ಹೂವು ವರ ನೀಡಿದ ದೇವಿ

    ಬಂಧಿತರನ್ನ ವಿಚಾರಣೆ ಮಾಡಿದಾಗ ಮೋಸಹೋದವರು ಬಹುತೇಕ ದೆಹಲಿ ಸೇರಿದಂತೆ ಹೊರರಾಜ್ಯದವರು ಎಂದು ತಿಳಿದುಬಂದಿದೆ. ಹೀಗಾಗಿ ಪೊಲೀಸರು ಮೋಸ ಹೋದವರನ್ನ ಸಂಪರ್ಕಿಸಿ, ಅವರಿಂದ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ.

    ಇನ್ನೂ ದುಪ್ಪಟ್ಟು ಹಣದಾಸೆಗಾಗಿ ಯಾವುದೇ ಕಾರಾರು ಬರೆಸಿಕೊಳ್ಳದೆ ಮಾಲೀಕ ಎರಡು ಫ್ಲೋರ್‌ಗಳನ್ನು ಬಾಡಿಗೆ ಕೊಟ್ಟಿರುವುದು ಕಂಡುಬಂದಿದೆ. ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡುತ್ತಿದ್ದಂತೆ ವಿಷಯ ತಿಳಿದು ಮಾಲೀಕರು ತಲೆಮರಿಸಿಕೊಂಡಿದ್ದಾರೆ. ಸದ್ಯ ಮಾಲೀಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇತ್ತ ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡ ಮುಂಬೈಯಲ್ಲಿ ವಂಚಕರಿಗಾಗಿ ಹುಡಕಾಟ ನಡೆಸುತ್ತಿದ್ದಾರೆ.ಇದನ್ನೂ ಓದಿ:ಕೇರಳ ಶೈಲಿಯ ಫಿಶ್ ಫ್ರೈ ಸವಿದರೆ ಮತ್ತೆ ಮತ್ತೆ ಅದೇ ಬೇಕು ಅಂತೀರ

  • ನಾವು ಮಾಡುವ ಈ ಸಣ್ಣ ತಪ್ಪುಗಳೇ ಸೈಬರ್‌ ಅಪರಾಧಕ್ಕೆ ದಾರಿ – 7 ತಿಂಗಳಲ್ಲಿ ಬರೋಬ್ಬರಿ 861 ಕೋಟಿ ಲೂಟಿ

    ನಾವು ಮಾಡುವ ಈ ಸಣ್ಣ ತಪ್ಪುಗಳೇ ಸೈಬರ್‌ ಅಪರಾಧಕ್ಕೆ ದಾರಿ – 7 ತಿಂಗಳಲ್ಲಿ ಬರೋಬ್ಬರಿ 861 ಕೋಟಿ ಲೂಟಿ

    – ಕರ್ನಾಟಕಕ್ಕೆ ಕಾಡುತ್ತಿದೆ ಸೈಬರ್‌ ಭೂತ

    ತಂತ್ರಜ್ಞಾನ ಬೆಳೆದಂತೆ ಆನ್‌ಲೈನ್‌ ವಹಿವಾಟು ಹೆಚ್ಚಾಗುತ್ತಲೇ ಇದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ (Bank Account) ಕನ್ನ ಇಡಲು ಶುರು ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಬಿಡುಗಡೆಯಾದ ವಿಶ್ವ ಸೈಬರ್‌ ಅಪರಾಧ ಸೂಚ್ಯಂಕದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ 10ನೇ ಸ್ಥಾನದಲ್ಲಿದೆ ಎಂಬುದನ್ನು ತೋರಿಸಿದೆ. ಸೈಬರ್‌ ಅಪರಾಧದ ಮೂಲ ಹಾಗೂ ಯಾವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಸೈಬರ್‌ ಅಪರಾಧಗಳು ಘಟಿಸುತ್ತವೆ ಎಂಬುದನ್ನು ಪತ್ತೆ ಹಚ್ಚಲು ಆಕ್ಸ್‌ಫರ್ಡ್‌ ವಿವಿ, ನ್ಯೂ ಸೌತ್‌ ವೇಲ್ಸ್‌ ವಿವಿ, ಮೊನಾಶ್‌ ವಿವಿ ಹಾಗೂ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆಯಾದ ಸೈನ್ಸ್‌ ಪೊ ನಡೆಸಿದ ಅಧ್ಯಯನ ಇದಾಗಿದೆ. ಇದೀಗ ಡಿಜಿಟಲ್‌ ಅರೆಸ್ಟ್‌, ಇತರ ಸೈಬರ್‌ ವಂಚನೆ ಮುನ್ನೆಲೆಗೆ ಬಂದಿದ್ದಕ್ಕೆ ಕಾರಣವೂ ಇದೆ.

    ಇದೀಗ ಕರ್ನಾಟಕಕ್ಕೂ ಈ ಸೈಬರ್‌ ಭೂತ ಕಾಡುತ್ತಿದೆ. ಈ ವರ್ಷ ಜನವರಿಯಿಂದ ಜುಲೈವರೆಗೆ ನಡೆದ ಒಟ್ಟು ಸೈಬರ್‌ ಅಪರಾಧಗಳಲ್ಲಿ ವಂಚಕರು ಸುಮಾರು 861 ಕೋಟಿಯಷ್ಟು ಹಣ ದೋಚಿದ್ದಾರೆಂದು ತಿಳಿದುಬಂದಿದೆ. ಬೆರಳೆಣಿಕೆಯ ಪ್ರಕರಣಗಳಿಗಷ್ಟೇ ಪರಿಹಾರ ಸಿಕ್ಕರೂ ಉಳಿದ ಪ್ರಕರಣಗಳ ಸುಳಿವು ಪತ್ತೆಯಾಗದಂತಾಗಿದೆ.

    ಕಳೆದ ವರ್ಷ ಡಿಜಿಟಲ್ ಅರೆಸ್ಟ್ ಮತ್ತು ಇತರ ಸೈಬರ್ ವಂಚನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ತಮ್ಮ ʻಮನದ ಮಾತು’ ಬಾನುಲಿ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿರುವುದು ಎಷ್ಟು ಗಂಭೀರ ಎಂಬುದನ್ನು ಸೂಚಿಸಿತ್ತು. ವಂಚಕರು ಪೊಲೀಸ್, ಸಿಬಿಐ, ಡ್ರಗ್ಸ್ ತಡೆ ಘಟಕ ಮತ್ತು ಕೆಲವೊಮ್ಮೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಧಿಕಾರಿಗಳ ಹೆಸರು ಹೇಳಿಕೊಂಡು ವಂಚಿಸಲು ಯತ್ನಿಸುತ್ತಾರೆ. ಅವರು ಒಡ್ಡುವ ಮಾನಸಿಕ ಒತ್ತಡ ಎಷ್ಟಿರುತ್ತದೆ ಎಂದರೆ ಸಂತ್ರಸ್ತರು ದಿಗಿಲುಗೊಳ್ಳುತ್ತಾರೆ ಎಂದು ಪ್ರಧಾನಿ ಹೇಳಿದ್ದರು. ಆದಾಗ್ಯೂ ಕೆಲ ಜನರು ದುಪ್ಪಟ್ಟು ಹಣದ ಆಸೆಗೆ, ಇನ್ನೂ ಕೆಲವರು ಕಾಮಪ್ರಚೋದನೆಗೆ ಸಿಲುಕಿ ಸೈಬರ್‌ ಅಪರಾಧಗಳಿಗೆ ಒಳಗಾಗುತ್ತಿದ್ದಾರೆ. ಯಾವ ಯಾವ ರೀತಿ ಸೈಬರ್‌ ಅಪರಾಧಗಳಿಗೆ ಒಳಗಾಗ್ತಿದ್ದಾರೆ? ನೀವು ಹೇಗೆಲ್ಲಾ ಮೋಸ ಹೋಗ್ತಿದ್ದೀರಿ? ವಂಚಕರು ನಿಮ್ಮ ಬ್ಯಾಂಕ್‌ ಖಾತೆಗೆ ನೇರವಾಗಿ ಕೈಹಾಕಲು ನೀವೆ ದಾರಿ ಮಾಡಿಕೊಡ್ತಿರೋದು ಹೇಗೆ ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಬೇಕಿದ್ದರೆ ಮುಂದೆ ಓದಿ..

    ಡಿಜಿಟಲ್ ಅರೆಸ್ಟ್ ಎಂದರೇನು?
    ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಒಂದು ವಿಧಾನ. ಇದರಲ್ಲಿ ವಂಚಕರು ಕಾನೂನು ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ. ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳನ್ನಾಗಿ ಮಾಡಿ ಹಣ ಪೀಕುತ್ತಾರೆ.

    ನಾವು ವಂಚನೆಗೆ ಒಳಗಾಗ್ತಿರೋದು ಹೇಗೆ?
    ಹೆಚ್ಚಾಗಿ ಈ ಸೈಬರ್‌ ವಂಚನೆಗೆ ಬಲಿಯಾಗಿರೋದು ವಿದ್ಯಾರ್ಥಿಗಳು, ಪಿಂಚಣಿದಾರರು, ಅನುಭವಿ ವೃತ್ತಿಪರರು. ಗಿಫ್ಟ್‌ ಹೆಸರಿನಲ್ಲಿ ಬರುವ ನಕಲಿ ಲಿಂಕ್‌ಗಳನ್ನು ಕ್ಲಿಕ್‌ ಮಾಡುವುದು, ಒಟಿಪಿ (ಒನ್‌ ಟೈಮ್‌ ಪಾಸ್‌ವರ್ಡ್‌) ಹಂಚಿಕೊಳ್ಳುವುದು, ಬ್ಲ್ಯಾಕ್‌ಮೇಲ್‌ಗೆ ಒಳಗಾಗುವುದು ಹಾಗೂ ಡೇಟಿಂಗ್‌ ಆಪ್‌ಗಳಲ್ಲಿ ಹುಡುಗಿಯರ ಮೋಹಕ್ಕೆ ಸಿಕ್ಕಿ ಬಳಿಕ ಬೆದರಿಕೆಗೆ ಒಳಗಾಗುವುದು. ಕೆಲವರು ಎಟಿಎಂ ಪಡೆದು ಹಣ ಡಬಲ್‌ ಮಾಡಿಕೊಡುವುದಾಗಿ ವಂಚಿಸುವುದು. ವಿದ್ಯಾವಂತರಿಗೆ ಕ್ರಿಪ್ಟೋ ಕರೆನ್ಸಿ ಮೂಲಕ ದುಪ್ಪಟ್ಟು ಹಣ ಮಾಡುವ ಆಮಿಷ ಒಡ್ಡುವುದು. ಈ ರೀತಿಯ ಕೃತ್ಯಗಳಿಂದಲೇ ಹೆಚ್ಚಾಗಿ ಹಣ ಕಳೆದುಕೊಂಡಿರುವುದಾಗಿ ಸೈಬರ್‌ ತಜ್ಞರು ಹೇಳಿದ್ದಾರೆ.

    ಸೈಬರ್‌ ತನಿಖಾಧಿಕಾರಿಗಳು ಹೇಳುವಂತೆ ಅಪರಾಧ ನಡೆದ 24 ಗಂಟೆಯಲ್ಲಿ ವರದಿ ಮಾಡಿದ್ರೆ, ಬ್ಯಾಂಕ್‌ಗಳನ್ನ ಅಲರ್ಟ್‌ ಮಾಡಬಹುದು, ಅಪರಾಧಿಯ ಪತ್ತೆಗೆ ಪ್ರಯತ್ನಿಸಬಹುದು. ಆದ್ರೆ ಕೆಲವರು ಭಯದಿಂದ, ಇನ್ನು ಕೆಲವರು ಮರ್ಯಾದೆಗೆ ಅಂಜಿ ಪ್ರಕರಣವನ್ನು ಹೇಳಿಕೊಳ್ಳದೇ ಮುಚ್ಚಿಡುತ್ತಿದ್ದಾರೆ. ಕೆಲವರು 2-3 ದಿನ ಕಳೆದು ವರದಿ ಮಾಡುವ ಹೊತ್ತಿಗೆ ಹಣವೆಲ್ಲ ಡಜನ್‌ಗಟ್ಟಲೇ ಖಾತೆಗಳಿಗೆ ಹಂಚಿಹೋಗಿರುತ್ತದೆ. ಬಳಿಕ ಸೈಬರ್‌ ವಂಚಕರು ಅದನ್ನು ಕ್ರಿಪ್ಟೋ ಕರೆನ್ಸಿ ಆಗಿ ಬದಲಾಯಿಸಿಕೊಂಡು ಕಣ್ಮರೆಯಾಗ್ತಿದ್ದಾರೆ. ಹೀಗಾಗಿ ವಂಚಕರನ್ನ ಪತ್ತೆಹಚ್ಚುವುದು ಕಷ್ಟಸಾಧ್ಯವಾಗುತ್ತಿದೆ ಎನ್ನುತ್ತಾರೆ ಸೈಬರ್‌ ತಜ್ಞರು.

    ಯಾವ ರೀತಿ ವಂಚನೆ ನಡೆಯುತ್ತೆ?
    * ಆನ್‌ಲೈನ್ ಡೇಟಿಂಗ್ ಆ್ಯಪ್‌ಗಳ ಮೂಲಕ ಪರಿಚಯಿಸಿಕೊಂಡು ಭಾವನಾತ್ಮಕವಾಗಿ ಕಟ್ಟಿಹಾಕಿ, ವೈದ್ಯಕೀಯ ಚಿಕಿತ್ಸೆ ಮತ್ತಿತರ ನೆಪಗಳನ್ನು ಮುಂದಿಟ್ಟುಕೊಂಡು ಹಣ ಪಡೆದು ವಂಚಿಸುತ್ತಾರೆ.
    * ದೊಡ್ಡ ದೊಡ್ಡ ಸ್ಯಾಲರಿ ಆಫರ್‌ಗಳನ್ನು ತೋರಿಸಿ ಉದ್ಯೋಗ ಒದಗಿಸುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಾರೆ.
    * ತಂತ್ರಜ್ಞಾನ ಕುರಿತ ಬಳಕೆದಾರರ ಸೀಮಿತ ಜ್ಞಾನವನ್ನೇ ಬಂಡವಾಳವಾಗಿ ಮಾಡಿಕೊಂಡು, ಸಂತ್ರಸ್ತರ ಕಂಪ್ಯೂಟರ್‌ನ ಪಾಸ್‌ವರ್ಡ್ ಪಡೆದು ವೈಯಕ್ತಿಕ ಮತ್ತು ಗೌಪ್ಯ ಮಾಹಿತಿ ಕದಿಯುತ್ತಾರೆ.
    * ನಕಲಿ ವೆಬ್‌ಸೈಟ್ ಅಥವಾ ಸಾಮಾಜಿಕ ಜಾಲತಾಣ ಖಾತೆ ತೆರೆದು ವಿಪತ್ತು ಪರಿಹಾರ, ಆರೋಗ್ಯ ನಿಧಿಗೆ ಸಂಬಂಧಿಸಿದ ಕಾರ್ಯಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡುತ್ತಾರೆ.
    * ಕೆಲ ವಂಚಕರು ಇ-ಮೇಲ್ ಅಥವಾ ಜಾಲತಾಣಗಳ ಮೂಲಕ ಸಂಪರ್ಕಿಸಿ, ತಪ್ಪಾಗಿ ನಿಮ್ಮ ಖಾತೆಗೆ ಹಣ ವರ್ಗಾವಣೆಯಾಗಿದೆ. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಬೇಕೆಂದಿದ್ದರೆ ಕೂಡಲೇ ಹಣ ವರ್ಗಾಯಿಸಿ ಎಂದು ಕೇಳುತ್ತಾರೆ.
    * ನಕಲಿ ಆನ್‌ಲೈನ್ ಸ್ಟೋರ್ ಸೃಷ್ಟಿಸಿ ʻಕ್ಯಾಶ್ ಆನ್ ಡೆಲಿವರಿ’ ಅಯ್ಕೆ ನೀಡುತ್ತಾರೆ. ಆದರೆ ವಿಳಾಸಕ್ಕೆ ತಲುಪಿದ ವಸ್ತುವು ನಕಲಿಯಾಗಿರುತ್ತದೆ ಅಥವಾ ಆರ್ಡರ್ ಮಾಡಿದ್ದಕ್ಕಿಂತ ಕಳಪೆಯಾಗಿರುತ್ತದೆ.
    * ಟೆಲಿಕಾಂ ನಿಯಂತ್ರಣ ಸಂಸ್ಥೆ ಹೆಸರಿನಲ್ಲಿ ಸಂತ್ರಸ್ತರಿಗೆ ಕರೆ ಮಾಡಿ, ʻಸೇವೆಯಲ್ಲಿ ಸಮಸ್ಯೆ ತಲೆದೋರಿದೆ. ಅದಕ್ಕಾಗಿ ಗುರುತು ಪರಿಶೀಲನೆಗಾಗಿ ಒಟಿಪಿ (ಒನ್ ಟೈಮ್ ಪಾಸ್‌ವರ್ಡ್) ಮತ್ತು ಬ್ಯಾಂಕ್ ಮಾಹಿತಿ ಹಂಚಿಕೊಳ್ಳಿ’ ಎಂದು ಕೇಳುತ್ತಾರೆ. ಹೀಗೆ ಅನೇಕ ರೀತಿಯಲ್ಲಿ ಡಿಜಿಟಲ್‌ ವಂಚಕರು ಹಣ ಪೀಕುತ್ತಿದ್ದಾರೆ.

    ಹೆಚ್ಚುತ್ತಲೇ ಇದೆ ಪ್ರಕರಣಗಳ ಸಂಖ್ಯೆ
    2024ರಲ್ಲಿ ವರ್ಷಾಂತ್ಯದವರೆಗೆ ಸೈಬರ್‌ ಪ್ರಕರಣಗಳ ಸಂಖ್ಯೆ ಕರ್ನಾಟಕದಲ್ಲಿ 8,620 ಪ್ರಕರಣ ದಾಖಲಾಗಿತ್ತು. ಈ ಪೈಕಿ ಕೇವಲ 399 ಪ್ರಕರಣಕ್ಕೆ ಮಾತ್ರವೇ ಪರಿಹಾರ ಸಿಕ್ಕಿದ್ದವು. ಇನ್ನೂ 2023ರಲ್ಲಿ 22,000 ಪ್ರಕರಣಗಳು ಸೇರಿ 2023ರಿಂದ ಈವರೆಗೆ ಒಟ್ಟು 53 ಸಾವಿರ ಪ್ರಕರಣಗಳು ವರದಿಯಾಗಿದೆ. ಆದ್ರೆ ಈ ವರ್ಷ 7 ತಿಂಗಳಲ್ಲೇ 8,620 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಬೆಂಗಳೂರು ಒಂದರಲ್ಲೇ 6,311 ಕೇಸ್‌ಗಳು ದಾಖಲಾಗಿವೆ. ಜೊತೆಗೆ ಬೆಂಗಳೂರು ಗ್ರಾಮಾಂತರದಲ್ಲಿ 258, ವಿಜಯಪುರದಲ್ಲಿ 250, ತುಮಕೂರಿನಲ್ಲಿ 151 ಪ್ರಕರಣಗಳು, ಉಡುಪಿಯಲ್ಲಿ 100ಕ್ಕೂ ಹೆಚ್ಚು ಹಾಗೂ ಮೈಸೂರಿನಲ್ಲಿ 7 ತಿಂಗಳಲ್ಲಿ 98 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇತ್ತೀಚೆಗೆ ಬೆಂಗಳೂರಿನ ಸುಮಾರು 90 ಮೊಬೈಲ್‌ ಸರ್ವಿಸ್‌ ಮಳಿಗೆಗಳು ಸುಳ್ಳು ಗುರುತಿನ ಚೀಟಿಗಳಿಗೆ ಸಿಮ್‌ ಕಾರ್ಡ್‌ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿಯೇ ನಕಲಿ ದಾಖಲೆಯಲ್ಲಿ ಸಿಮ್‌ ಖರೀದಿಸಿದ ವಂಚಕರು ಕೃತ್ಯದ ಬಳಿಕ ಸಿಮ್‌, ಕೃತ್ಯಕ್ಕೆ ಬಳಸಿದ ಮೊಬೈಲ್‌ ಬಿಸಾಡಿ ಎಸ್ಕೇಪ್‌ ಆಗ್ತಿದ್ದಾರೆ.

    ಕರ್ನಾಟಕ ಸೈಬರ್‌ ಫಾರೆನ್ಸಿಕ್‌ ವಿಭಾಗವು ಈ ಕೃತ್ಯಗಳಿಗೆ ಕಡಿವಾಣ ಹಾಕಲೆಂದೇ ಇತ್ತೀಚೆಗೆ 43 ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ತೆರೆದಿದೆ. ಅಧಿಕಾರಿಗಳಿಗೆ ಮಾಲ್‌ವೇರ್ ವಿಶ್ಲೇಷಣೆ ಮತ್ತು ಡಿಜಿಟಲ್ ಫೋರೆನ್ಸಿಕ್ಸ್‌ನಲ್ಲಿ ತರಬೇತಿ ನೀಡಲಾಗಿದೆ. ಆದಾಗ್ಯೂ ಕಳ್ಳರಯ ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಆದ್ರೆ ಪೂರಕ ಸಾಕ್ಷ್ಯಗಳು ಸಿಗದೇ ಇದ್ದ ಕಾರಣ ಕೆಲವೊಂದು ಪ್ರಕರಣಗಳಲ್ಲಿ ಆರೋಪಿ ಸಿಕ್ಕರೂ ಶಿಕ್ಷೆಗೆ ಒಳಪಡಿಸುವುದು ಕಷ್ಟವಾಗುತ್ತಿದೆ.

    ಪ್ರಧಾನಿ ತಲುಪಿದ ʻಪಬ್ಲಿಕ್‌ ಟಿವಿʼ ವರದಿ
    ವಿಜಯಪುರ ಜಿಲ್ಲೆಯ ಸಂತೋಷ್ ಎಂಬುವವರಿಗೆ ಮುಂಬೈನಿಂದ ಕರೆ ಮಾಡಿ ಬ್ಲ್ಯಾಕ್‌ಮೇಲ್‌ ಮಾಡಿ, ಹೆದರಿಸಿರುವ ಸುದ್ದಿಯನ್ನು ನಿಮ್ಮ `ಪಬ್ಲಿಕ್ ಟಿವಿ’ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಈ ಸುದ್ದಿ ಪ್ರಧಾನಿ ಮೋದಿಯವರಿಗೆ ತಲುಪಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಮಾತನಾಡಿದ್ದರು. ಪ್ರಧಾನಿ ಮೋದಿ ಮನ್ ಕಿ ಬಾತ್‌ನ 115ನೇ ಸಂಚಿಕೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ ಹಿನ್ನೆಲೆ ದೇಶದ ಜನರಿಗೆ ಜಾಗೃತಿ ಮೂಡಿಸಿದ್ದರು. ವಿಜಯಪುರದ ನಿವಾಸಿ ಸಂತೋಷ್ ಎಂಬುವವರಿಗೆ ಮುಂಬೈನಿಂದ ಕರೆ ಮಾಡಿ, ನಾವು ಮುಂಬೈ ಕ್ರೈಂ ಬ್ರ್ಯಾಂಚ್‌ ಪೊಲೀಸರು ಎಂದು ಹೇಳಿ ಬ್ಲ್ಯಾಕ್‌ಮೇಲ್‌ ಮಾಡಿ, ಹೆದರಿಸಿದ್ದರು. ಇದರ ಸಂಪೂರ್ಣ ದೃಶ್ಯವನ್ನು ಸಂತೋಷ್ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ಕುರಿತು ವಿಸ್ತೃತ ವರದಿಯನ್ನು ಪಬ್ಲಿಕ್ ಟಿವಿ ಬಿತ್ತರಿಸಿತ್ತು. ಈ ಸುದ್ದಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತಲ್ಲದೇ, ಪ್ರಧಾನಿ ಮೋದಿಯವರೆಗೂ ತಲುಪಿತ್ತು. ಇದೇ ಪ್ರಕರಣವನ್ನು ಪ್ರಧಾನಿ ಮೋದಿ ಇತ್ತೀಚೆಗೆ ಉಲ್ಲೇಖಿಸಿ ಮಾತನಾಡಿದರು. ಅಲ್ಲದೇ ಬೆಳಗ್ಗೆ 11 ಗಂಟೆಗೆ ಆರಂಭವಾದ ʻಮೋದಿ ಮನ್ ಕಿ ಬಾತ್ʼನಲ್ಲಿ ಸಂತೋಷ್ ಸೆರೆ ಹಿಡಿದಿದ್ದ ಸಂಪೂರ್ಣ ವಿಡಿಯೋವನ್ನು ಕಾರ್ಯಕ್ರಮದಲ್ಲಿ ಪ್ರಸಾರ ಮಾಡಲಾಯಿತು.

    ಮೋಸ ಹೋಗದಿರಲು ಈ ಅಂಶ ಗಮನಿಸಬೇಕು
    * ಕರೆ ಮಾಡಿ ಹಣ ಅಕ್ರಮ ವರ್ಗಾವಣೆ, ಡ್ರಗ್ ಕಳ್ಳಸಾಗಣೆಯಂತಹ ಆರೋಪ ಮಾಡಿದ ಸಂದರ್ಭದಲ್ಲಿ ಆತಂಕ ಗೊಳ್ಳಬೇಡಿ. ನಿಮ್ಮ ಭಯ ಮತ್ತು ಆತುರವನ್ನೇ ವಂಚಕರು ಬಂಡವಾಳವಾಗಿ ಮಾಡಿಕೊಳ್ಳುತ್ತಾರೆ.
    * ಫೋನ್ ಅಥವಾ ಸಾಮಾಜಿಕ ಮಾಧ್ಯಮಗಳ ಮೂಲಕ ವೈಯಕ್ತಿಕ ಮಾಹಿತಿ, ಬ್ಯಾಂಕ್ ಮಾಹಿತಿಯನ್ನು ಹಂಚಿಕೊಳ್ಳಬೇಡಿ
    * ವಂಚಕರಿಗೆ ಪ್ರತಿಕ್ರಿಯಿಸುವ ಮುನ್ನ ತಾಳ್ಮೆಯಿಂದ ಯೋಚಿಸಿ. ಒತ್ತಡದಲ್ಲಿದ್ದಾಗ ಹಣ ವರ್ಗಾವಣೆ ಮಾಡಬೇಡಿ. ತನಿಖಾ ಸಂಸ್ಥೆಗಳು ತಕ್ಷಣ ಹಣ ವರ್ಗಾವಣೆ ಮಾಡುವಂತೆ ಎಂದಿಗೂ ಒತ್ತಡ ಹೇರುವುದಿಲ್ಲ. ಫೋನ್ ಅಥವಾ ಆನ್‌ಲೈನ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಬಹುತೇಕ ಅದು ಆನ್‌ಲೈನ್ ವಂಚನೆಯೇ ಆಗಿರುತ್ತದೆ
    * ಆನ್‌ಲೈನ್ ವಂಚನೆಯ ಅನುಮಾನ ಬಂದರೆ, ಸಂಬಂಧಿತ ಸಂಸ್ಥೆಗಳನ್ನು ಸಂಪರ್ಕಿಸಿ ಪರಿಶೀಲಿಸಿ ಎಚ್ಚರಿಕೆಯಿಂದ ಇರುವುದು ಆನ್‌ಲೈನ್‌ ವಂಚನೆಯಿಂದ ಪಾರಾಗುವ ಪ್ರಮುಖ ʻಅಸ್ತ್ರʼ.

  • ನಿವೃತ್ತ ಬ್ಯಾಂಕ್‌ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್‌ ಅರೆಸ್ಟ್‌ – 23 ಕೋಟಿ ವಂಚನೆ

    ನಿವೃತ್ತ ಬ್ಯಾಂಕ್‌ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್‌ ಅರೆಸ್ಟ್‌ – 23 ಕೋಟಿ ವಂಚನೆ

    – ಪುಲ್ಪಾಮಾ ದಾಳಿಯಲ್ಲಿ ಆಧಾರ್ ಬಳಕೆಯಾಗಿದೆ ಅಂತ ಹೆದರಿಸಿ ವಂಚನೆ

    ನವದೆಹಲಿ: ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣ ಇತ್ತೀಚೆಗೆ ಜಾಸ್ತಿ ಆಗ್ತಿವೆ. ಖುದ್ದು ಪ್ರಧಾನಿ ಮೋದಿ (PM Modi) ಅವರೇ ಜಾಗೃತಿ ಮೂಡಿಸಿದ್ರೂ ಎಚ್ಚೆತ್ತುಕೊಳ್ಳದ ಜನ, ಇಂತಹ ಕೃತ್ಯಗಳಿಗೆ ಒಳಗಾಗುತ್ತಿದ್ದಾರೆ. ಅದರಂತೆ ದೆಹಲಿಯ ನಿವೃತ್ತ ಬ್ಯಾಂಕರ್ ಒಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 23 ಕೋಟಿ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ತಾವು ಇಡಿ ಮತ್ತು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು, ಸೈಬರ್ ವಂಚಕರು ಒಂದು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಬೆದರಿಕೆ ಹಾಕುವ ಮೂಲಕ 23 ಕೋಟಿ ರೂ.ಗಳನ್ನು ವಂಚಿಸಿದ್ದಾರೆ. ಆರೋಪಿಗಳು, ನಿವೃತ್ತ ಬ್ಯಾಂಕರ್‌ಗೆ ನಿಮ್ಮ ಆಧಾರ್ ಕಾರ್ಡ್, ಡ್ರಗ್ಸ್ ಸಾಗಣೆ, ಉಗ್ರರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ (Pulwama Terror Attack) ಬಳಕೆಯಾಗಿದೆ ಎಂದು ಹೇಳಿದ್ದಾರೆ. ಬಳಿಕ ಸಿಬಿಐ, ಇಡಿ ಅಂತ ಹೇಳಿಕೊಳ್ಳುವ ಕೆಲ ಅಧಿಕಾರಿಗಳು ನಿವೃತ್ತ ಬ್ಯಾಂಕ್‌ ಅಧಿಕಾರಿಯನ್ನ ಸಂಪರ್ಕಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ ಕಡಲ ತೀರದಲ್ಲಿ ಸೋಮಾಲಿಯಕ್ಕೆ ಹೊರಡಬೇಕಿದ್ದ ಹಡಗಿಗೆ ಬೆಂಕಿ – ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

    ತನಿಖೆಯ ನೆಪದಲ್ಲಿ ಆತನನ್ನು ಫ್ಲಾಟ್ ಒಳಗೆ ಇರಿಸಿ ಮನೆಯಿಂದ ಹೊರಗೆ ಹೋಗದಂತೆ ಹೇಳಿದ್ದಾರೆ. ಆಗಸ್ಟ್‌ 4ರಿಂದ ಒಂದು ತಿಂಗಳ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ಭಯದಿಂದ ಬಲಿಪಶು, ಅವರು ಹೇಳಿದಂತೆಲ್ಲಾ ಕೇಳಿದ್ದಾರೆ. ಬಳಿಕ ಮೋಸಹೋಗಿರುವುದು ಅರಿತ ಬ್ಯಾಂಕರ್, ಸೆಪ್ಟೆಂಬರ್‌ 19ರಂದು NCRP ಸೈಬರ್ ಪೊಲೀಸ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ಸೈಬರ್ ಕ್ರೈಂ, ವಂಚನೆಗೊಳಗಾದ ಮೊತ್ತದಲ್ಲಿ 12.11 ಕೋಟಿ ರೂ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಲಾಗಿದೆ.

    ಬಹುಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ದೇಶದ ವಿವಿಧ ಭಾಗದ ಬ್ಯಾಂಕ್‌ಗಳಿಂದ ರಿಕವರಿ ಮಾಡಲಾಗಿದೆ. ಹಲವು ತಂಡಗಳನ್ನು ತಖೆಗೆ ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವರಾತ್ರಿ ಮೊದಲ ದಿನ ತ್ರಿಪುರ ಸುಂದರಿ ದೇವಿ ದರ್ಶನ ಪಡೆದ ಮೋದಿ – ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ

    ಡಿಜಿಟಲ್ ಅರೆಸ್ಟ್ ಎಂದರೇನು?
    ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಹೊಸ ವಿಧಾನವಾಗಿದೆ. ಇದರಲ್ಲಿ ವಂಚಕರು ಕಾನೂನು ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ ಮತ್ತು ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳನ್ನಾಗಿ ಮಾಡಿ ಹಣ ಪೀಕುತ್ತಾರೆ. ಇದನ್ನೂ ಓದಿ: Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

  • ಡಿಜಿಟಲ್ ಅರೆಸ್ಟ್ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ

    ಡಿಜಿಟಲ್ ಅರೆಸ್ಟ್ – 30 ಲಕ್ಷ ರೂ. ಕಳೆದುಕೊಂಡ ಮಾಜಿ ಶಾಸಕ

    ಬೆಂಗಳೂರು: ಡಿಜಿಟಲ್ ಅರೆಸ್ಟ್‌ಗೆ (Digital Arrest) ಒಳಗಾಗಿ ಔರದ್ (Aurad) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ (Gundappa Vakil) 30 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.

    ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದು, ಮಾಜಿ ಶಾಸಕರಿಂದ ಹಂತ ಹಂತವಾಗಿ 30 ಲಕ್ಷ ರೂ. ಹಣವನ್ನು ಖದೀಮರು ವರ್ಗಾಯಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಈದ್‌ಮಿಲಾದ್ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್ ದಾಖಲು

    ಮೊದಲು ಆಗಸ್ಟ್ 12ರಂದು ಸಿಬಿಐ ಆಫೀಸರ್ ಎಂದು ಕರೆ ಮಾಡಿದ್ದ ಖದೀಮರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌ನಲ್ಲಿ ಭಾಗಿಯಾಗಿದ್ದೀರಿ. ನರೇಶ್ ಗೋಯಲ್ ಜೊತೆ ಅಕ್ರಮ ವ್ಯವಹಾರ ಮಾಡಿದ್ದೀರಿ ಎಂದು ಹೆದರಿಸಿದ್ದರು. ಆ.13ರಂದು ಸಿಬಿಐ ಡಿಸಿಪಿ ಎಂದು ಮತ್ತೋರ್ವ ಕರೆ ಮಾಡಿ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಾ, ಕಾಲ್ ಕಟ್ ಮಾಡಬೇಡಿ ಎಂದು ಹೆದರಿಸಿದ್ದ. ಬಳಿಕ ಆನ್‌ಲೈನ್‌ನಲ್ಲಿ ಫೇಕ್ ಜಡ್ಜ್ ಮುಂದೆ ಹಾಜರು ಪಡಿಸಿದ್ದ ಖದೀಮರು ಕೋರ್ಟ್ ಹಾಲ್ ರೀತಿ ಸೆಟಪ್ ಮಾಡಿ ನಂಬಿಕೆ ಹುಟ್ಟಿಸಿದ್ದರು. ನಮ್ಮದು ತಪ್ಪಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಿ ಎಂದು 10 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದರು. ಬಳಿಕ ಪ್ರಾಪರ್ಟಿ ತನಿಖೆ ಮಾಡಬೇಕೆಂದು 20 ಲಕ್ಷ ರೂ. ಡೆಪಾಸಿಟ್ ಮಾಡಿಸಿಕೊಂಡಿದ್ದರು. ಹೀಗೆ ಖದೀಮರ ಮಾತು ನಂಬಿ ಹಂತ-ಹಂತವಾಗಿ 30.99 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಹಣ ಹಾಕಿಸಿಕೊಂಡು ತನಿಖೆ ಮುಗಿದ ನಂತರ ಮರಳಿ ಕೊಡುವುದಾಗಿ ನಂಬಿಸಿದ್ದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಹಣ ಮರಳಿ ಬಾರದಿದ್ದಾಗ ಮಾಜಿ ಶಾಸಕ ಗುಂಡಪ್ಪ ವಕೀಲ್ ಸಿಸಿಬಿ ಸೈಬರ್ ಕ್ರೈಂ (CCB) ಪೊಲೀಸರಿಗೆ ದೂರು ನೀಡಿದ್ದಾರೆ. ಗುಂಡಪ್ಪ ವಕೀಲ್ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ

  • Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

    Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

    – ರಿಕವರಿಯಾದ ಹಣ ಕೇವಲ ಒಂದೂವರೆ ಲಕ್ಷ

    ಮಂಡ್ಯ: ಆನ್‌ಲೈನ್ ದೋಖಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಆನ್‌ಲೈನ್ ದೋಖಾದ ಲಿಸ್ಟ್‌ಗೆ ಡಿಜಿಟಲ್ ಅರೆಸ್ಟೆ ಎಂಬ ವಂಚನೆ ಜಾಲವೊಂದು ಸೇರಿಕೊಂಡಿದೆ. ಈ ಜಾಲಕ್ಕೆ ಸಿಲುಕಿದ ಬ್ಯಾಂಕ್ ಅಧಿಕಾರಿ (Bank Officer) ಒಬ್ಬರು ಲಕ್ಷ ಲಕ್ಷ ಹಣ ಕಳೆದುಕೊಂಡಿರೋದು ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

    ಹೌದು. ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಬ್ಯಾಂಕ್‌ನ ರೀಜನಲ್ ಮ್ಯಾನೇಜರ್ ಡಿಜಿಟಲ್ ಅರೆಸ್ಟ್ (Digital Arrest) ಜಾಲಕ್ಕೆ ಸಿಲುಕಿ 56 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

    ಬ್ಯಾಂಕ್ ಮ್ಯಾನೇಜರ್‌ಗೆ ಕಳೆದ ತಿಂಗಳು ವಾಟ್ಸಪ್‌ ಮೂಲಕ ಸಿಬಿಐ ಅಧಿಕಾರಿ ಎಂದು ಕರೆ ಮಾಡಿ ನಿಮ್ಮ ಅಕೌಂಟ್‌ಗೆ ಮನಿ ಲ್ಯಾಂಡ್ರಿಂಗ್‌, ಹವಾಲ ದಂಧೆ ಮೂಲಕ ಲಕ್ಷಾಂತರ ರೂಪಾಯಿ ಹಣ ಬಂದಿದೆ ಎಂದು ಬೆದರಿಸಿದ್ದಾನೆ. ನಕಲಿ ಅರೆಸ್ಟ್ ವಾರಂಟ್‌ ಕಳುಹಿಸಿ ಅಧಿಕಾರಿಯ ಅಕೌಂಟ್‌ನಲ್ಲಿದ್ದ 56 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚಿಸಿದ್ದಾನೆ. ಬ್ಯಾಂಕ್ ಅಧಿಕಾರಿ ಮಂಡ್ಯ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: 1988ರ ರೇಪ್ ಕೇಸ್‌ಗೆ ಶಿಕ್ಷೆ ಪ್ರಕಟಿಸಿದ ಸುಪ್ರೀಂ – 53 ವರ್ಷದ ವ್ಯಕ್ತಿ ಈಗ ಬಾಲಾಪರಾಧಿ

    ತನಿಖೆ ಕೈಗೆತ್ತಿಕೊಂಡ ಮಂಡ್ಯ ಸೆನ್ ಠಾಣೆ ಪೊಲೀಸರಿಗೆ ಹಣ ಸಂದಾಯವಾದ ಬ್ಯಾಂಕ್ ಖಾತೆಗಳು ನಕಲಿ ಎಂದು ತಿಳಿದುಬಂದಿದೆ. ತಾಂತ್ರಿಕ ಸಾಕ್ಷ್ಯವನ್ನು ಆಧರಿಸಿದಾಗ ಡಿಜಿಟಲ್ ಅರೆಸ್ಟ್ ಮಾಡಿದ ವಂಚನೆಯ ಜಾಲ ರಾಜಸ್ಥಾನದಲ್ಲಿ ಇದೆ ಎಂದು ತಿಳಿದುಬಂದಿದೆ. ನಂತರ ಒಂದು ತಂಡ ವಂಚಕರನ್ನು ಖೆಡ್ಡಾಗೆ ಕೆಡವಲು ರಾಜಸ್ಥಾನಕ್ಕೆ ತೆರಳಿ ವಿಚಾರಣೆ ಮಾಡಿದ ಈ ವಂಚನೆಯ ದಾಳ ದೆಹಲಿಯಲ್ಲಿ ಇದೆ ಎಂದು ಗೊತ್ತಾಗಿದೆ. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

    ರಾಜಸ್ಥಾನದಿಂದ ಈ ತಂಡ ನೇರವಾಗಿ ದೆಹಲಿಗೆ ಹೋದಾಗ ಅಲ್ಲಿ ಪ್ರಥಮವಾಗಿ ಗೋಪಾಲ್ ಬಿಷ್ಣೋಯಿ ಎಂಬ ಆರೋಪಿಯನ್ನ ಬಂಧಿಸಿತು. ಬಳಿಕ ರಾಜಸ್ಥಾನ ಮೂಲದ ಮಹಿಪಾಲ್, ಬಿಷ್ಣೋಯಿ, ಜಿತೇಂದ್ರ ಸಿಂಗ್ ಎಂಬ ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರು ಬ್ಯಾಂಕ್ ರಿಜನಲ್ ಮ್ಯಾನೇಜರ್ ಅಕೌಂಟ್‌ನಿಂದ ಬಂದ ಹಣವನ್ನು 29 ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದರಿಂದ ಕೇವಲ ಒಂದೂವರೆ ಲಕ್ಷ ರೂಪಾಯಿ ಅಷ್ಟೇ ರಿಕವರಿ ಆಗಿದೆ.

    ಒಟ್ಟಾರೆ ಜನರಿಗೆ ಅವರ ಹಣದ ಬಗ್ಗೆ ಜಾಗೃತಿ ಮೂಡಿಸುವ ಬ್ಯಾಂಕ್ ಅಧಿಕಾರಿಗಳೇ ಈ ರೀತಿ ಮೋಸದ ಜಾಲಕ್ಕೆ ಸಿಲುಕಿಕೊಂಡು ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿರುವುದು ವಿಪರ್ಯಾಸದ ಸಂಗತಿ.

  • ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ ಲಕ್ಷ ಲಕ್ಷ ವಸೂಲಿ – ಡೆತ್‌ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

    ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ ಲಕ್ಷ ಲಕ್ಷ ವಸೂಲಿ – ಡೆತ್‌ನೋಟ್ ಬರೆದಿಟ್ಟು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ

    ರಾಮನಗರ: ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಕೆ ಹಾಕಿ ಲಕ್ಷ ಲಕ್ಷ ಹಣ ದೋಚಿದ್ದಲ್ಲದೇ, ಮತ್ತೆ ಹಣ ಕೊಡುವಂತೆ ಬೆದರಿಕೆ ಹಾಕಿದ ಹಿನ್ನೆಲೆ ಬೆಸ್ಕಾಂ (BESCOM) ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ಸೈಬರ್ ವಂಚಕರ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣಿಗೆ ಶರಣಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

    ಬೆಸ್ಕಾಂ ಸಿಬ್ಬಂದಿ 42 ವರ್ಷದ ಕುಮಾರ್ ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೇ ಕುಮಾರ್ ಡೆತ್‌ನೋಟ್‌ನಲ್ಲಿ ಡಿಜಿಟಲ್ ಅರೆಸ್ಟ್ ಕಿರುಕುಳದ ಬಗ್ಗೆ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

    ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಬೆಸ್ಕಾಂ ಹೊರಗುತ್ತಿಗೆ ನೌಕರರನಾಗಿ ಕುಮಾರ್ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕಾಲ್ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿದ್ದ. ಕೇಸ್‌ನಿಂದ ಕೈಬಿಡಲು ಅಕೌಂಟ್‌ಗೆ ಹಣ ಹಾಕು ಎಂದು ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಅಕೌಂಟ್‌ಗೆ ಹಾಕಿಸಿಕೊಂಡಿದ್ದ. ಆದರೆ ಮತ್ತೆ ಹಣ ನೀಡುವಂತೆ ಬೆದರಿಸಿದ್ದ. ಕಿರುಕುಳಕ್ಕೆ ಬೇಸತ್ತ ಕುಮಾರ್ ಡೆತ್‌ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಅನಾರೋಗ್ಯದ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

    ಡೆತ್‌ನೋಟ್‌ನಲ್ಲಿ ಏನಿದೆ?
    ವಿಕ್ರಂ ಗೋಸ್ವಾಮಿ, ಸಿಬಿಐ ಅಂತ ನನಗೆ 8109931663ರ ನಂಬರ್‌ನಿಂದ ಫೋನ್ ಮಾಡಿ ನಿನ್ನ ಮೇಲೆ ಅರೆಸ್ಟ್ ವಾರೆಂಟ್ ಇದೆ ಎಂದು ಹೆದರಿಸಿ ನನ್ನ ಅಕೌಂಟಿಗೆ 1,95,000 ರೂ. ಹಾಕು ಎಂದು ಅಕೌಂಟ್ ನಂಬರ್ ಕಳುಹಿಸಿದ್ದು, ನಾನು ಭಯಪಟ್ಟು ಹಣವನ್ನು ಹಾಕಿದೆ. ನಂತರ ಮತ್ತೆ ಫೋನ್ ಮಾಡಿ ಆ ಅಕೌಂಟ್‌ಗೆ ಹಾಕು, ಈ ಅಕೌಂಟ್‌ಗೆ ಹಾಕು ಎಂದು ನನ್ನಿಂದ ಸುಮಾರು 11 ಲಕ್ಷ ಹಾಕಿಸಿಕೊಂಡಿರುತ್ತಾರೆ. ನಂತರ ನನ್ನ ಪರ್ಸನಲ್ ನಂಬರ್ ಹಾಗೂ ವಾಟ್ಸಪ್ ನಂಬರ್‌ಗೆ 9752140613 ಹಾಗೂ 9812177540ರ ನಂಬರಿಗೆ 2,75,000 ರೂ. ಕಳುಹಿಸು ಎಂದು ಕಾಡಿಸುತ್ತಿದ್ದಾರೆ. ಆದ ಕಾರಣ ನನ್ನ ಸಾವನ್ನ ನಾನೇ ತಂದುಕೊಂಡಿದ್ದೇನೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

    ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡೆತ್‌ನೋಟ್ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸದ್ಯ ಈ ಪ್ರಕರಣ ಸೈಬರ್ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ಇದನ್ನೂ ಓದಿ: ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

  • ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

    ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

    ಬಂದ ಹಣದಿಂದ ಶ್ರೀಲಂಕಾ ಕೆಸಿನೋದಲ್ಲಿ ಮಜಾ ಮಾಡಿದ್ದ ಸೈಬರ್ ಕಳ್ಳರು

    ಬೆಂಗಳೂರು: ಡಿಜಿಟಲ್ ಅರೆಸ್ಟ್ (Digital Arrest) ಹೆಸರಲ್ಲಿ ವೃದ್ಧ ದಂಪತಿಯಿಂದ ಸೈಬರ್ ಕಳ್ಳರು 4.79 ಕೋಟಿ ರೂ. ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

    ವಂಚನೆಗೊಳಗಾದವರನ್ನು ಮಂಜುನಾಥ್ ದಂಪತಿ ಹಾಗೂ ಆರೋಪಿಗಳನ್ನು ಈಶ್ವರ್ ಸಿಂಗ್, ನಾರಾಯಣ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕಲಬುರಗಿ | ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ

    ಮಂಜುನಾಥ್ ನೈಜಿರೀಯಾದಲ್ಲಿ (Nigeria) ಇಂಜಿನಿಯರ್ ಆಗಿ ಕೆಲಸ ಮಾಡಿ ಇದೀಗ ನಿವೃತ್ತಿಯಾಗಿದ್ದಾರೆ. ಸೈಬರು ಕಳ್ಳರು ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್ ಓವರ್ ಡ್ಯೂ ಆಗಿದೆ ಎಂದು ದಂಪತಿಗೆ ಕರೆ ಮಾಡಿದ್ದಾರೆ. ಬಳಿಕ ನಿಮ್ಮ ಅಕೌಂಟ್‌ನಲ್ಲಿ ಮನಿ ಲಾಂಡರಿಂಗ್ ಆಗಿದೆ. ಹೀಗಾಗಿ ಇಡಿ, ಸಿಬಿಐನಲ್ಲಿ ನಿಮ್ಮ ವಿರುದ್ಧ ಕೇಸ್ ಆಗಿದೆ ಎಂದು ಹೆದರಿಸಿದ್ದಾರೆ. ಜೊತೆಗೆ ನಿಮ್ಮನ್ನು ಅರೆಸ್ಟ್ ಮಾಡಿ, ತಿಹಾರ್ ಜೈಲಿಗೆ ಹಾಕುತ್ತೇವೆ ಎಂದು ನಕಲಿ ವಾರಂಟ್ ಕಳಿಸಿದ್ದಾರೆ.

    ದಂಪತಿಯನ್ನು ಹೆದರಿಸಿ ಹಂತ ಹಂತವಾಗಿ 4.79 ಕೋಟಿ ರೂ. ಸುಲಿಗೆ ಮಾಡಿದ್ದಾರೆ. ಈ ಕುರಿತು ದಂಪತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಸೆನ್ ಪೊಲೀಸರು ಸದ್ಯ ಇಬ್ಬರನ್ನು ಬಂಧಿಸಿದ್ದಾರೆ.

    ಈಶ್ವರ್ ಸಿಂಗ್ ಅಕೌಂಟ್‌ಗೆ 10 ಲಕ್ಷ ರೂ. ಹಾಗೂ ನಾರಾಯಣ್ ಸಿಂಗ್ ಅಕೌಂಟ್‌ಗೆ 1.8 ಕೋಟಿ ರೂ. ವರ್ಗಾವಣೆ ಆಗಿದೆ. ಇನ್ನೂ ತನಿಖೆ ವೇಳೆ ಆರೋಪಿಗಳಿಗೆ ಶ್ರೀಲಂಕಾ ಕೆಸಿನೋ ಜೊತೆಗೆ ನಂಟು ಇರುವುದಾಗಿ ಪತ್ತೆಯಾಗಿದೆ. ಜೊತೆಗೆ ಡಿಜಿಟಲ್ ಅರೆಸ್ಟ್ನಿಂದ ಬಂದ ಹಣದಲ್ಲಿ ಶ್ರೀಲಂಕಾಗೆ ಹೋಗಿ ಕೆಸಿನೊದಲ್ಲಿ ಆಟವಾಡಿರೋದು ಬೆಳಕಿಗೆ ಬಂದಿದೆ. ಕೆಸಿನೊ ಮತ್ತು ಸೈಬರ್ ವಂಚಕರು ಒಟ್ಟಾಗಿರುವ ಶಂಕೆಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗುತ್ತಾ- ಸತೀಶ್ ಜಾರಕಿಹೊಳಿಗೆ ತುರ್ತು ಬುಲಾವ್ ನೀಡಿದ್ಯಾಕೆ?

  • ಡಿಜಿಟಲ್ ಅರೆಸ್ಟ್ – 37 ಲಕ್ಷ ಕಳೆದುಕೊಂಡ ಮಾಜಿ ನೌಕರ!

    ಡಿಜಿಟಲ್ ಅರೆಸ್ಟ್ – 37 ಲಕ್ಷ ಕಳೆದುಕೊಂಡ ಮಾಜಿ ನೌಕರ!

    ಚಿಕ್ಕಮಗಳೂರು: ನಿವೃತ್ತ ಸರ್ಕಾರಿ ನೌಕರನೊಬ್ಬ ನಕಲಿ ಸಿಬಿಐ ಅಧಿಕಾರಿಗಳಿಂದ ಡಿಜಿಟಲ್ ಅರೆಸ್ಟ್‌ (Digital Arrest) ಆಗಿ 37 ಲಕ್ಷ ರೂ. ಹಣ ಕಳೆದುಕೊಂಡಿರುವುದು ಶೃಂಗೇರಿಯಲ್ಲಿ ನಡೆದಿದೆ.

    ವಂಚಕರು ದೆಹಲಿಯಿಂದ ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ವಾಟ್ಸಪ್ ವೀಡಿಯೋ ಕಾಲ್ ಮಾಡಿ, ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡನ್ನು ಬೇರೊಬ್ಬರು ಉಪಯೋಗಿಸಿ ಮನಿ ಲಾಂಡರಿಂಗ್ ಮಾಡುತ್ತಿದ್ದಾರೆ. ಆ ಆರೋಪಿಯನ್ನು ಬಂಧಿಸಲಾಗಿದೆ. ಈ ಕೇಸ್ ಕೋರ್ಟ್‌ನಲ್ಲಿದೆ. ಹೀಗಾಗಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್‌ಬಿಐನಿಂದ ಪರಿಶೀಲನೆ ಮಾಡಿಸಿ, ಮರಳಿ ನೀಡುವುದಾಗಿ ಹೇಳಿ ವಂಚಿಸಿದ್ದಾರೆ. ಅಲ್ಲದೇ, ಯಾವುದೇ ಕಾರಣಕ್ಕೂ ರಿಟರ್ನ್ ಕಾಲ್ ಮಾಡದಂತೆ ನಕಲಿ ಸಿಬಿಐ ಐಡಿ ಕಾರ್ಡ್ ತೋರಿಸಿ ಬೆದರಿಸಿದ್ದಾರೆ. ಇದನ್ನೂ ಓದಿ: Cyber Crime| ಚಿತ್ರದುರ್ಗದಲ್ಲಿ ಹಿರಿಯ ವೈದ್ಯರಿಗೆ 1.27 ಕೋಟಿ ವಂಚನೆ

    ನಿವೃತ್ತ ನೌಕರ ಹಂತ-ಹಂತವಾಗಿ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣದ ಜೊತೆಗೆ ತಮ್ಮ ಪತ್ನಿಯ ಖಾತೆಯಲ್ಲಿದ್ದ ಒಟ್ಟು 37 ಲಕ್ಷ ರೂ. ಹಣವನ್ನು ನಕಲಿ ಆರ್‌ಬಿಐ ಖಾತೆ ವರ್ಗಾಯಿಸಿದ್ದಾನೆ. ಬಳಿಕ, ಈ ವಿಷಯವನ್ನು ಯಾರಿಗೂ ಹೇಳದೆ 6 ತಿಂಗಳು ಕಳೆದಿದ್ದಾನೆ. ಹಣ ವಾಪಸ್ ಬರದೇ ಇದ್ದಿದ್ದರಿಂದ ವಂಚನೆಗೆ ಒಳಗಾಗಿರುವುದು ತಿಳಿದು, ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

    ಇತ್ತೀಚೆಗೆ ಸೈಬರ್ ಕ್ರೈಂ (Cyber Crime) ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದು ವೇಳೆ ಯಾರಾದರೂ ಸೈಬರ್ ಕ್ರೈಂ ಗೆ ಒಳಗಾದರೆ, ಸಹಾಯವಾಣಿ 1930 ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕೆಂದು ಚಿಕ್ಕಮಗಳೂರು (Chikkamagaluru) ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: Cyber Attack | ಸ್ಟಾರ್‌ ಹೆಲ್ತ್‌ ವಿಮಾ ಸಂಸ್ಥೆಯಿಂದ 3.1 ಕೋಟಿ ಗ್ರಾಹಕರ ಡೇಟಾ ಕಳವು

  • ಸತತ 40 ಗಂಟೆ ಡಿಜಿಟಲ್ ಅರೆಸ್ಟ್ – ಕರಾಳ ಅನುಭವ ಹಂಚಿಕೊಂಡ ಖ್ಯಾತ ಯೂಟ್ಯೂಬರ್!

    ಸತತ 40 ಗಂಟೆ ಡಿಜಿಟಲ್ ಅರೆಸ್ಟ್ – ಕರಾಳ ಅನುಭವ ಹಂಚಿಕೊಂಡ ಖ್ಯಾತ ಯೂಟ್ಯೂಬರ್!

    ನವದೆಹಲಿ: ಖುದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ಎಚ್ಚರಿಕೆಯ ಸಂದೇಶ ನೀಡಿದ ಬಳಿಕ ಡಿಜಿಟಲ್ ಅರೆಸ್ಟ್‌ನಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ನಡುವೆ ಸುಮಾರು 40 ಗಂಟೆಗಳ ಕಾಲ ಡಿಜಿಟಲ್ ಅರೆಸ್ಟ್‌ಗೆ (Digital Aresst) ಒಳಗಾಗಿದ್ದ ಯೂಟ್ಯೂಬರ್ ಅಂಕುಶ್ ಬಹುಗುಣ ತಮ್ಮ ಘಟನೆಯ ಕಹಿ ಅನುಭವವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

    ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಂಕುಶ್, ನಾನು ಡಿಜಿಟಲ್ ಅರೆಸ್ಟ್ನಿಂದ ಹಣ, ಮಾನಸಿಕ ಶಾಂತಿ ಹಾಗೂ ನಂಬಿಕೆಯನ್ನು ಕಳೆದುಕೊಂಡಿದ್ದೆ. ಮೂರು ದಿನಗಳ ಕಾಲ ಡಿಜಿಟಲ್ ಅರೆಸ್ಟ್‌ನಲ್ಲಿದ್ದ ಕಾರಣ ಸೋಷಿಯಲ್ ಮೀಡಿಯಾದಿಂದ ನಾಪತ್ತೆಯಾಗಿದ್ದೆ ಎಂದು ಹೇಳಿಕೊಂಡಿದ್ದಾರೆ.ಇದನ್ನೂ ಓದಿ:ಯಶ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌: ‘ಟಾಕ್ಸಿಕ್‌’ ಚಿತ್ರದ ಬಗ್ಗೆ ಬಿಗ್‌ ನ್ಯೂಸ್‌

    ಆ ದಿನ ಜಿಮ್‌ನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದೇಶಿ ಸಂಖ್ಯೆಯಿದ ಕರೆಯೊಂದು ಬಂತು, ಹೆಚ್ಚು ಯೋಚಿಸದೇ ಆ ಕರೆಯನ್ನು ಸ್ವೀಕರಿಸಿದೆ. ಆಗ ನಿಮ್ಮ ಕೊರಿಯರ್ ಡೆಲಿವರಿ ಕ್ಯಾನ್ಸಲ್ ಆಗಿದೆ. ಸಹಾಯಕ್ಕಾಗಿ ಸೊನ್ನೆಯನ್ನು ಒತ್ತಿ ಎಂದು ಹೇಳಿದರು. ಯೋಚಿಸದೇ ಸೊನ್ನೆಯನ್ನು ಒತ್ತಿದೆ. ಅದು ನನ್ನ ಜೀವನದಲ್ಲಿ ನಾನು ಮಾಡಿದ ಅತಿ ದೊಡ್ಡ ತಪ್ಪು. ಸೊನ್ನೆ ಒತ್ತಿದ ತಕ್ಷಣ ಕರೆ ಗ್ರಾಹಕ ಸೇವಾ ಸಿಬ್ಬಂದಿಗೆ ವರ್ಗಾವಣೆ ಮಾಡಿದರು.

    ಬಳಿಕ ನಿಮ್ಮ ಪ್ಯಾಕೇಜ್ ಚೀನಾಕ್ಕೆ ಕಳುಹಿಸುತ್ತಿದ್ದೇನೆ. ಅದನ್ನು ಕಸ್ಟಮ್ಸ್ ಈಗ ವಶಪಡಿಸಿಕೊಂಡಿದೆ. ಆದರೆ ನಾನು ಏನನ್ನೂ ಕಳುಹಿಸಿಲ್ಲ ಎಂದು ಹೇಳಿದೆ. ಆದರೆ ಪ್ಯಾಕೇಜ್‌ನಲ್ಲಿ ನಿಮ್ಮ ಹೆಸರು, ಆಧಾರ್ ಸಂಖ್ಯೆ ಎಲ್ಲವನ್ನೂ ನಮೂದಿಸಲಾಗಿದೆ. ಇದು ಅತ್ಯಂತ ಗಂಭೀರವಾದ ಅಪರಾಧವಾಗಿದ್ದು, ಈಗ ನೀವು ಡಿಜಿಟಲ್ ಬಂಧನಕ್ಕೆ ಒಳಗಾಗುತ್ತೀರಿ. ನಿಮ್ಮ ಹೆಸರಿನಲ್ಲಿ ಈಗಾಗಲೇ ಅರೆಸ್ಟ್ ವಾರೆಂಟ್ ಇದೆ ಎಂದರು.

    ಏನನ್ನೂ ತಿಳಿಯದ ಅಂಕುಶ್, ತಕ್ಷಣವೇ ನಾನು ಈ ಕುರಿತು ಪೊಲೀಸರ ಜೊತೆ ಮಾತನಾಡಬೇಕು ಎಂದು ಹೇಳಿದರು. ಆಗ ಪೊಲೀಸ್ ಠಾಣೆಗೆ ಹೋಗುವಷ್ಟು ಸಮಯವಿಲ್ಲ. ನಾವೇ ಪೊಲೀಸ್‌ಗೆ ಕರೆಯನ್ನು ಸಂಪರ್ಕಿಸುತ್ತೇವೆ ಎಂದು ತಿಳಿಸಿದರು. ಅದೇ ಸಮಯದಲ್ಲಿ ವಿಡಿಯೋ ಕರೆಯಲ್ಲಿ ಕಾಣಿಸಿಕೊಂಡ ಪೊಲೀಸ್ ಅಧಿಕಾರಿ ಅಂಕುಶ್ ಅವರನ್ನು ವಿಚಾರಣೆ ನಡೆಸಲು ಪ್ರಾರಂಭಿಸಿದರು. ಈ ವೇಳೆ ಯಾವುದೇ ಕರೆ, ಸಂದೇಶಗಳನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ. ಅದಾದ 40 ಗಂಟೆಗಳವರೆಗೆ ಅಂಕುಶ್ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದರು.

    ಅವರು ಎಲ್ಲಾ ರೀತಿಯ ಗ್ಯಾಜೆಟ್‌ಗಳನ್ನು ಸ್ವೀಚ್ ಆಫ್ ಮಾಡಲು ತಿಳಿಸಿದರು. ಯಾರನ್ನಾದರೂ ಸಂಪರ್ಕಿಸಲು ಪ್ರಯತ್ನಿಸಿದರೆ ನಿಮ್ಮನ್ನು ಬಂಧಿಸಲಾಗುವುದು ಎಂದು ಬೆದರಿಕೆ ಹಾಕಿದ್ದರು. ಸ್ನೇಹಿತರಿಗೆ, ಪೋಷಕರಿಗೆ ಯಾರಿಗೂ ಸಂಪರ್ಕಿಸುವಂತಿರಲಿಲ್ಲ. ಜೊತೆಗೆ ಒತ್ತಾಯಪೂರ್ವಕವಾಗಿ ಹಣ ವರ್ಗಾವಣೆ ಮಾಡುವಂತೆ ತಿಳಿಸಿದರು. ಇದನ್ನು ನೀವು ಮಾಡದಿದ್ದರೆ ನಿಮ್ಮ ಜೀವನ ನಾಶವಾಗುತ್ತದೆ. ನಿಮ್ಮ ಕುಟುಂಬ ಅಪಾಯದಲ್ಲಿ ಸಿಲುಕಿಕೊಳ್ಳುತ್ತದೆ ಎಂದು ಬೆದರಿಕೆಯೊಡ್ಡಿದರು. ಜೊತೆಗೆ ಎಲ್ಲಾ ರೀತಿಯ ಸ್ಕ್ರೀನ್‌ ಶಾಟ್‌ಗಳನ್ನು ಕಳುಹಿಸುವಂತೆ ತಿಳಿಸಿದ್ದರು.

    ಬ್ಯಾಂಕಿಗೆ ತೆರಳಿ ಬ್ಯಾಂಕಿನ ವಹಿವಾಟುಗಳನ್ನು ನಿರ್ವಹಿಸುವಂತೆ ತಿಳಿಸಿದರು. ಅದರ ಹೊರತಾಗಿ ನನಗೆ ಬೇರೆ ಆಯ್ಕೆಗಳು ಇರಲಿಲ್ಲ. ಬಳಿಕ ಹೋಟೆಲ್‌ಗೆ ಚೆಕ್ ಇನ್ ಆಗುವಂತೆ ತಿಳಿಸಿದರು. ಈ ಸಮಯದಲ್ಲಿ ನಿಜಕ್ಕೂ ನನಗೇನಾಗುತ್ತಿದೆ? ಎಂದು ತಿಳಿದಿರಲಿಲ್ಲ. ಆ ಸಮಯದಲ್ಲಿ ಅಳುತ್ತಾ ಅವರ ಮುಂದೆ ಬೇಡಿಕೊಂಡೆ. 40 ಗಂಟೆಗಳ ಬಳಿಕ ಕುಟುಂಬ ಹಾಗೂ ಸ್ನೇಹಿತರನ್ನು ಸಂಪರ್ಕಿಸಲು ಸಾಧ್ಯವಾಯಿತು ಎಂದು ಹೇಳಿದರು.ಇದನ್ನೂ ಓದಿ: ಶಿವಮೊಗ್ಗ | ಸಾಗರದ ಹಿರಿಯ ಸಾಹಿತಿ ಡಾ.ನಾ ಡಿಸೋಜ ನಿಧನ