Tag: Dinesh Gundoorao

  • ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಕನಿಷ್ಠ ಬೆಂಬಲ ಬೆಲೆ ಘೋಷಣೆ ಗಿಮಿಕ್, ಈ ವಿಚಾರದಲ್ಲಿ ಮೋದಿ ನಿಸ್ಸೀಮ: ಪರಮೇಶ್ವರ್

    ಬೆಂಗಳೂರು: ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ನಡೆ ಲೋಕಸಭಾ ಚುನಾವಣೆ ಗಿಮಿಕ್, ಪ್ರಧಾನಿ ನರೇಂದ್ರ ಮೋದಿ ಅವರು ಇಂತಹದಕ್ಕೆ ನಿಸ್ಸೀಮರು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವ್ಯಂಗ್ಯವಾಡಿದ್ದಾರೆ.

    ನಾಲ್ಕು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಬಹುದಿತ್ತು. ಆದರೆ ಹಾಗೇ ಮಾಡಲಿಲ್ಲ. ಈಗ ಕೇಂದ್ರದ ಬಿಜೆಪಿ ಸರ್ಕಾರದ ಅಧಿಕಾರ ಅವಧಿ ಪೂರ್ಣಗೊಳ್ಳಲು ಒಂದು ವರ್ಷ ಮಾತ್ರ ಬಾಕಿ ಇದೆ. ನಾಲ್ಕು ವರ್ಷ ಏರಿಕೆ ಮಾಡದೇ ಈಗ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಲೋಕಸಭಾ ಚುನಾವಣೆ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರೈತರಿಗೆ ಮೋದಿಯಿಂದ ಬಂಪರ್ ಗಿಫ್ಟ್: ಯಾವ ಬೆಳೆಗೆ ಎಷ್ಟು ಕನಿಷ್ಠ ಬೆಂಬಲ ಬೆಲೆ? ಇಲ್ಲಿದೆ ಪೂರ್ಣ ಮಾಹಿತಿ

    ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ನನಗೆ ಅವಕಾಶ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ಯೂತ್ ಅಧ್ಯಕ್ಷರಾಗಿದ್ದರು. ಅಲ್ಲದೇ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿದ್ದವರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸಾರಥ್ಯ ಅವರಿಗೆ ದೊರೆತಿದೆ ಎಂದು ಹೇಳಿದರು.

  • ಮುಲ್ಲಾ ಅಥವಾ ಮೌಲ್ವಿಗೆ ಹೊಡೀಬೇಕು ಅಂತ ಹೇಳಿದ್ರೆ, ನಿಮ್ಮ ಹೆಂಡ್ತಿಯೇ ನಿಮ್ಗೆ ಹೊಡೀತಿದ್ರು: ಗುಂಡೂರಾವ್ ವಿರುದ್ಧ ಸಿಂಹ ಕೆಂಡಾಮಂಡಲ

    ಮುಲ್ಲಾ ಅಥವಾ ಮೌಲ್ವಿಗೆ ಹೊಡೀಬೇಕು ಅಂತ ಹೇಳಿದ್ರೆ, ನಿಮ್ಮ ಹೆಂಡ್ತಿಯೇ ನಿಮ್ಗೆ ಹೊಡೀತಿದ್ರು: ಗುಂಡೂರಾವ್ ವಿರುದ್ಧ ಸಿಂಹ ಕೆಂಡಾಮಂಡಲ

    ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.

    ದಿನೇಶ್ ಗುಂಡುರಾವ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಟ್ವಿಟ್ಟರ್ ನಲ್ಲಿ ಲೈವ್ ಗೆ ಬಂದು ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯೋಗಿ ಕರ್ನಾಟಕಕ್ಕೆ ಬಂದ್ರೆ ಚಪ್ಪಲಿಯಲ್ಲಿ ಹೊಡೆಯಿರಿ: ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ

    `ಶನಿವಾರ ರಾತ್ರಿ ಬೆಂಗಳೂರಿನಲ್ಲಿ ನಡೆದಂತಹ ಮೇಣದ ಬತ್ತಿ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷರು ತುಚ್ಚಾ ಮಾತುಗಳನ್ನು ಆಡಿದ್ದಾರೆ. ಯೋಗಿ ಆದಿತ್ಯನಾಥ್ ಅವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಅಂದಿದ್ದೀರಲ್ಲಾ ಗುಂಡೂರಾವ್ ಅವರೇ. ಯೋಗಿ ಬದಲು ಒಬ್ಬ ಮುಲ್ಲಾ ಅಥವಾ ಮೌಲ್ವಿ ಬಗ್ಗೆನೋ ಇದೇ ಮಾತನ್ನು ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸವನ್ನು ನಿಮಗೆ ಮಾಡಿರುತ್ತಿದ್ದರು. ಮಾತನಾಡಬೇಕಾದರೆ ಸ್ವಲ್ಪ ಎಚ್ಚರಿಕೆ ಇರಬೇಕು. ನಾಲಿಗೆಯ ಮೇಲೆ ನಿಗಾ ಇರಬೇಕು. ಇಲ್ಲ ಅಂದರೆ ನಿಮಗೆ ತಕ್ಕ ಉತ್ತರ ಕೊಡಬೇಕಾಗುತ್ತದೆ’ ಎಂದು ಕೆಂಡಾಮಂಡಲರಾಗಿದ್ದಾರೆ.

    ಉತ್ತರ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಮಾತನಾಡಿದ್ದರು. ಈ ವೇಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನಿಡಿದ್ದರು.