Tag: Diploma

  • ಡಿಪ್ಲೊಮಾ ಕೋರ್ಸ್ ಇನ್ನು ಮುಂದೆ ಪಿಯುಸಿಗೆ ಸಮಾನ

    ಡಿಪ್ಲೊಮಾ ಕೋರ್ಸ್ ಇನ್ನು ಮುಂದೆ ಪಿಯುಸಿಗೆ ಸಮಾನ

    ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

    ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದು, ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೇ ಎಂಬ ವಿಷಯವನ್ನು ನಿರ್ಧರಿಸುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಲಾಯಿತು. ಸಮಿತಿಯು ವಿಸ್ತಾರವಾಗಿ ಚರ್ಚಿ, ಸಾಧಕ-ಬಾಧಕಗನ್ನು ಪರಿಗಣಿಸಿ, ಅಭಿಪ್ರಾಯದೊಂದಿಗೆ 2021ರ ಮಾರ್ಚ್ 31ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಸಾರಿ ಮಮ್ಮಿ, ಪಪ್ಪಾ – ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ: ಸೌಜನ್ಯ ಡೆತ್‍ನೋಟ್

    ಈ ವರದಿಯನ್ನು ಆಧರಿಸಿ, ನೇರ ನೇಮಕಾತಿ, ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯುಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ ಗೆ ತತ್ಸಮಾನವೆಂದು ಪರಿಗಣಿಸುವುದು. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜೊತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದುವುದು ಎಂಬುದಾಗಿ ಆದೇಶಿಸಲಾಗಿದೆ.

  • ಪದವಿ, ಡಿಪ್ಲೂಮಾ, ವಿದ್ಯಾರ್ಥಿಗಳಿಗೆ KSRTC ಗುಡ್ ನ್ಯೂಸ್- ಬಸ್ ಪಾಸ್ ವಿಸ್ತರಣೆ

    ಪದವಿ, ಡಿಪ್ಲೂಮಾ, ವಿದ್ಯಾರ್ಥಿಗಳಿಗೆ KSRTC ಗುಡ್ ನ್ಯೂಸ್- ಬಸ್ ಪಾಸ್ ವಿಸ್ತರಣೆ

    ಬೆಂಗಳೂರು : ಪದವಿ, ಡಿಪ್ಲೂಮಾ, ಬಿಇಡಿ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಈ ಬಾರಿಯ ಪರೀಕ್ಷಾ ಅವಧಿವರೆಗೆ ವಿಸ್ತರಿಸಿದೆ.

    ಅಕ್ಟೋಬರ್​ನಲ್ಲಿ ಡಿಪ್ಲೂಮಾ, ಬಿಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಕೆಎಸ್ಆರ್‌ಟಿಸಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ನವೆಂಬರ್ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 8 ತಿಂಗಳಿಂದ ಸಾಮೂಹಿಕ ಅತ್ಯಾಚಾರ – 26 ಆರೋಪಿಗಳ ಬಂಧನ!

    ಈ ಮೂರು ಕೋರ್ಸ್‍ಗಳ ಪರೀಕ್ಷೆಗಳು ನವೆಂಬರ್‌ಗೆ ಮುಂಚಿತವಾಗಿ ಮುಗಿದರೆ ಪರೀಕ್ಷಾ ಅವಧಿವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳು ಪಾಸ್ ಕೌಂಟರ್ ನಲ್ಲಿ ಅವಧಿ ವಿಸ್ತರಣೆಯ ಸಹಿ ಹಾಗೂ ಮೊಹರು ಪಡೆಯುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಏರಿಕೆ ಆಯ್ತು ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು

  • ಕೊನೆಗೂ ವಿಟಿಯು ಪರೀಕ್ಷೆಗಳು ಮುಂದಕ್ಕೆ ಹೋಯ್ತು

    ಕೊನೆಗೂ ವಿಟಿಯು ಪರೀಕ್ಷೆಗಳು ಮುಂದಕ್ಕೆ ಹೋಯ್ತು

    ಬೆಂಗಳೂರು: ಪಬ್ಲಿಕ್ ಟಿವಿಯ ಸತತ ವರದಿಯಿಂದ ಕೊನೆಗೂ ಉನ್ನತ ಶಿಕ್ಷಣ ಇಲಾಖೆ ತನ್ನ ನಿರ್ಧಾರವನ್ನು ಬದಲಾಯಿಸಿದೆ. ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ 14 ದಿನ ‘ಕೊರೊನಾ ಕರ್ಫ್ಯೂ’ ಜಾರಿ ಹಿನ್ನಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ.

    ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಎಂಜಿನಿಯರಿಂಗ್, ಪಾಲಿಟೆಕ್ನಿಕ್‍ನ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಎರಡನೇ ಅಲೆಯ ನಡುವೆ ನಾಡಿನ ಕ್ಷೇಮಕ್ಕಾಗಿ ಕೊರೊನಾ ಕರ್ಫ್ಯೂ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಪರೀಕ್ಷೆಗಳು ಯಾವಾಗ ನಡೆಯುತ್ತವೆ ಎಂಬುದನ್ನು ಕೊರೊನಾ ಕರ್ಫ್ಯೂ ಮುಗಿದ ನಂತರ ತಿಳಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಈಗಾಗಲೇ 10ನೇ ತರಗತಿಯ ಸಿಬಿಎಸ್‍ಸಿ ಪರೀಕ್ಷೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ.

    ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳು ಪರೀಕ್ಷೆಯನ್ನು ಮುಂದೂಡಿದ್ದರೂ ವಿಟಿಯು ಮಾತ್ರ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಶ್ವತ್ಥ ನಾರಾಯಣ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಪಬ್ಲಿಕ್ ಟಿವಿ ಸಹ ವಿದ್ಯಾರ್ಥಿಗಳ ಪರವಾಗಿ ವರದಿಯನ್ನು ಪ್ರಸಾರ ಮಾಡಿ ಉನ್ನತ ಶಿಕ್ಷಣ ಇಲಾಖೆಯನ್ನು ಪ್ರಶ್ನೆ ಮಾಡಿತ್ತು.

  • ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್

    ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್

    – ಶೇ.15ರಷ್ಟು ಮೀರದಂತೆ ವರ್ಗ, ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
    – ಐದು ವಲಯವಾಗಿ ವಿಂಗಡನೆ

    ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.15ರಷ್ಟು ಮೀರದಂತೆ ವರ್ಗಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ, ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಬಗ್ಗೆ ಪದವಿ ಹಾಗೂ ತಾಂತ್ರಿಕ ಕಾಲೇಜುಗಳ ಬೋಧನಾ ಸಿಬ್ಬಂದಿ ವರ್ಗಕ್ಕೆ ಹೊಸ ನಿಯಮಾವಳಿ ರೂಪಿಸಿ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಒಂದೇ ಕಡೆ 4 ವರ್ಷ ಕೆಲಸ ಮಾಡಿರುವ ಬೋಧಕರು ವರ್ಗಾವಣೆಗೆ ಅರ್ಹರಾಗಿದ್ದು, ಈ ಅಂಶವನ್ನು ಆಧಾರವಾಗಿಟ್ಟುಕೊಂಡು ವರ್ಗಾವಣೆ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಬೋಧಕರಿಗೆ ಇದು ಅನ್ವಯವಾಗುತ್ತದೆ ಎಂದು ಎಂದು ಅವರು ತಿಳಿಸಿದ್ದಾರೆ.

    ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವರ್ಗಾವಣೆಗೆ ಚಾಲನೆ ಸಿಗಲಿದೆ. ಆದಷ್ಟು ಬೇಗ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸಲಾಗುವುದು. ಎಲ್ಲರಿಗೂ ಇಷ್ಟವಾಗುವ ಹಾಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ವಿವರಿಸಿದರು.

    ಐದು ವಲಯ:
    ರಾಜ್ಯವನ್ನು ಎ, ಬಿ, ಸಿ, ಡಿ ಮತ್ತು ಇ ವಲಯ ಎಂದು ಐದು ವಿಭಾಗ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯನ್ನು ‘ಎ’ ವಲಯವೆಂದು; ಬಿಡಿಎ ಮತ್ತು ಬೆಂಗಳೂರು ಹೊರತುಪಡಿಸಿದ ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯನ್ನು ‘ಬಿ’ ವಲಯವೆಂದು; ಜಿಲ್ಲಾ ಕೇಂದ್ರ ಹಾಗೂ ನಗರಸಭೆಗಳ ವ್ಯಾಪ್ತಿಯನ್ನು ‘ಸಿ’ ವಲಯ; ತಾಲ್ಲೂಕು ಕೇಂದ್ರ ಹಾಗೂ ಪಟ್ಟಣ ಪಂಚಾಯತಿಗಳನ್ನು ‘ಡಿ’ ವಲಯ ಹಾಗೂ ಮೇಲಿನ ಎಲ್ಲ ವಲಯಗಳ ವ್ಯಾಪ್ತಿಯನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಕಾಲೇಜುಗಳನ್ನು ‘ಇ’ ವಲಯಗಳೆಂದು ವಿಂಗಡಿಸಲಾಗಿದೆ. ಯಾರು ಯಾವ ವಲಯದಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸುತ್ತಾರೊ ಅವರು ಬೇರೊಂದು ವಲಯಕ್ಕೆ ವರ್ಗವಾಗಲು ಅರ್ಹತೆ ಪಡೆಯುತ್ತಾರೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

    ವರ್ಗಾವಣೆ ಹೇಗೆ?
    ರಾಜ್ಯದ ಐದೂ ಶೈಕ್ಷಣಿಕ ವಿಭಾಗಗಳ ವ್ಯಾಪ್ತಿಯ ಪದವಿ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ.9ರಷ್ಟು ಬೋಧಕರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕಡ್ಡಾಯವಾಗಿ ವರ್ಗ ಮಾಡಲಾಗುವುದು. ಪತಿ-ಪತ್ನಿಯರ ಪ್ರಕರಣಗಳಲ್ಲಿ ಶೇ.3ರಷ್ಟು ಸಿಬ್ಬಂದಿಯನ್ನು ಮಾತ್ರ ವರ್ಗ ಮಾಡಲಾಗುವುದು. ವಿಧವೆಯರು, ಡಿವೋರ್ಸ್‌ ಪಡೆದ ಬೋಧಕಿಯರು, ವಿಕಲಚೇತನರ ಹೊಣೆಗಾರಿಕೆ ಇರುವವರು, ಸೇನೆ ಅಥವಾ ಅರೆ ಸೇನಾಪಡೆಯಲ್ಲಿ ಕೆಲಸ ಮಾಡುತ್ತಿರುವವರ ಪ್ರಕರಣಗಳಲ್ಲಿ ಶೇ.1ರಷ್ಟು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಯ ಶೇ.1ರಷ್ಟು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳು ಇರುವವರ ಪೈಕಿ ಶೇ.1ರಷ್ಟು ಬೋಧಕರನ್ನು ವರ್ಗಾವಣೆಗೆ ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

    ಪಾರದರ್ಶಕತೆ:
    ವರ್ಗಾವಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. 4 ವರ್ಷಗಳಿಗೂ ಹೆಚ್ಚು ಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿರುವ ಬೋಧನಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ವರ್ಗ ಮಾಡಲಾಗುವುದು. ಇದಕ್ಕೆ ಸಂಬಂಧಿತ ಎಲ್ಲ ನಿಯಮಗಳನ್ನು ಪ್ರಕಟಿಸಲಾಗಿದೆ ಎಂದಿದ್ದಾರೆ.

    ಈ ಹಿಂದೆ ವರ್ಗಾವಣೆ ಎಂದರೆ ದೊಡ್ಡ ಪ್ರಹಸನದಂತೆ ನಡೆಯುತ್ತಿತ್ತು. ಆದರೆ, ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಣೆಗೊಳಪಡಿಸಿ ಎಲ್ಲವೂ ಆನ್‌ಲೈನ್‌ ಮೂಲಕವೇ ನಡೆಸಲಾಗುತ್ತಿದೆ. ವೈಜ್ಞಾನಿಕವಾಗಿ ಎಲ್ಲವೂ ನಡೆಯಲಿದೆ. ಉಪನ್ಯಾಸಕರು ಇನ್ನು ಮುಂದೆ ಸಚಿವರು, ಅಧಿಕಾರಿಗಳ ಕಚೇರಿಗಳ ಸುತ್ತ ಅಲೆಯುವ ಅವ್ಯವಸ್ಥೆ ಇರುವುದಿಲ್ಲ. ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

  • ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಬಾಳಲ್ಲಿ ಕರ್ನಾಟಕ ಪರೀಕ್ಷಾ ಮಂಡಳಿಯ ಚೆಲ್ಲಾಟ

    ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಬಾಳಲ್ಲಿ ಕರ್ನಾಟಕ ಪರೀಕ್ಷಾ ಮಂಡಳಿಯ ಚೆಲ್ಲಾಟ

    ತುಮಕೂರು: ಕರ್ನಾಟಕ ಪರೀಕ್ಷಾ ಮಂಡಳಿಯ ಎಡವಟ್ಟು ಮುಂದುವರಿದಿದ್ದು ಡಿಪ್ಲೋಮ ವಿದ್ಯಾರ್ಥಿನಿ ಜೊತೆ ಚೆಲ್ಲಾಟ ಆಡಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ.

    ಎಂಜಿನಿಯರಿಂಗ್ ಮಾಡಲು ಚಂದನಾ ಎಂಬವರು 2016 ರಲ್ಲಿ ಸಿಇಟಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದರೂ ಈಗ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಬಿಡುಗಡೆ ಮಾಡದೇ ಆಟ ಆಡುತ್ತಿದೆ ಎಂದು ಚಂದನಾ ಪೋಷಕರು ಆರೋಪಿಸಿದ್ದಾರೆ.

    ಯಾಕೆ ಫಲಿತಾಂಶವನ್ನು ತಡೆ ಹಿಡಿಯಲಾಗಿದೆ ಎಂದು ಸಂಬಂಧಪಟ್ಟವರನ್ನು ಪ್ರಶ್ನಿಸಿದರೆ, ಅಪ್ಲಿಕೇಷನ್ ತುಂಬುವಾಗ ನೀವು ಡಿಪ್ಲೋಮ ಮೊದಲ ವರ್ಷದ ಅಂಕಪಟ್ಟಿಯನ್ನೇ ನೀಡಿಲ್ಲ. ಹಾಗಾಗಿ ರಿಸಲ್ಟ್ ಬಂದಿಲ್ಲ ಎಂದು ಉತ್ತರಿಸಿದ್ದಾರೆ.

    ಆದರೆ ಚಂದನಾ ಅಪ್ಲಿಕೇಷನ್ ತುಂಬಿದ ನಂತರ ಅದರ ನಕಲಿ ಪ್ರತಿಯನ್ನು ಇಟ್ಟುಕೊಂಡಿದ್ದು ಅದರಲ್ಲಿ ಎಲ್ಲಾ ಮಾಹಿತಿಯನ್ನು ತುಂಬಿರುವ ದಾಖಲೆ ಸ್ಪಷ್ಟವಾಗಿದೆ. ಈಗ ಅಪ್ಲಿಕೇಷನ್ ಸರಿಯಿಲ್ಲ ಎಂದು ಹೇಳಿರುವ ಪರೀಕ್ಷಾ ಮಂಡಳಿ ಚಂದನಾರ ಅಪ್ಲಿಕೇಷನ್ ನೋಡಿ ಪರೀಕ್ಷೆ ಬರೆಯಲು ಅನುಮತಿ ನೀಡಿದ್ದು ಯಾಕೆ ಎನ್ನುವ ಪ್ರಶ್ನೆ ಈಗ ಎದ್ದಿದೆ.

    ಅಷ್ಟೇ ಅಲ್ಲದೇ ಅಲ್ಲದೆ ಅಪ್ಲಿಕೇಷನ್ ಪರಿಶೀಲನೆಯ ಕೊನೆಯ ದಿನದ ನಂತರದ ದಿನ ನೀವೇ ಮಾಹಿತಿಗಳನ್ನು ಬದಲಾಯಿಸಿದ್ದೀರಿ ಎಂದು ಐಪಿ ಅಡ್ರೆಸ್ ವೊಂದನ್ನು ಅಧಿಕಾರಿಗಳು ನೀಡಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂಗೆ ದೂರು ಸಲ್ಲಿಸಲು ಚಂದನಾ ಪೋಷಕರು ನಿರ್ಧರಿಸಿದ್ದಾರೆ.