Tag: disabled

  • ವಿಶೇಷ ಚೇತನರ ಅನುದಾನಕ್ಕೂ ಸರ್ಕಾರ ಕೊಕ್ಕೆ – 80% ರಷ್ಟು ಅನುದಾನ ಕಡಿತ ಆರೋಪ!

    ವಿಶೇಷ ಚೇತನರ ಅನುದಾನಕ್ಕೂ ಸರ್ಕಾರ ಕೊಕ್ಕೆ – 80% ರಷ್ಟು ಅನುದಾನ ಕಡಿತ ಆರೋಪ!

    – ಡಿ.2ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಕರೆ

    ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ (Guarantee Scheme) ಹಣ ನೀಡೋ ಬರದಲ್ಲಿ ಉಳಿದ ಎಲ್ಲ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನವೇ ಹರಿಸುತ್ತಿಲ್ಲ ಅನ್ನೋ ಆರೋಪಗಳು ಮತ್ತೊಮ್ಮೆ ಕೇಳಿಬಂದಿದೆ.

    ಈಗ ಸರ್ಕಾರ ಅಂಗವಿಕಲರ ಅನುದಾನಕ್ಕೂ (Grant for the disabled) ಕೊಕ್ಕೆ ಹಾಕಿದ್ದು ಕಳೆದ ವರ್ಷಕ್ಕಿಂತ 80% ರಷ್ಟು ಅನುದಾನ ಕಡಿತ ಮಾಡಿದೆ ಅಂತಾ ವಿಕಲಚೇತರ ಫೆಡರೇಷನ್‌ ಧ್ವನಿ ಎತ್ತಿದೆ. ನಮ್ಮ ಯೋಜನೆಗಳಿಗೆ ನೀಡಬೇಕಾದ ಅನುದಾನವನ್ನ ನೀಡಿ ಎಂದು ಮನವಿ ಮಾಡಿದ್ದಾರೆ. ಸರ್ಕಾರ ನಮ್ಮ ಮನವಿಯನ್ನ ಪೂರೈಸದೆ ಹೋದ್ರೆ ಇದೇ ಡಿಸೆಂಬರ್ 2ರಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಸಹ ನೀಡಿದ್ದಾರೆ. ಇದನ್ನೂ ಓದಿ: ಒಂದೇ ಎನ್‌ಕೌಂಟರ್‌ಗೆ ಕಾಫಿನಾಡ ಕಾಡು ಬಿಟ್ರಾ ನಕ್ಸಲರು? – ಎರಡೇ ತಿಂಗಳಿಗೆ ಕೇರಳಕ್ಕೆ ಎಸ್ಕೇಪ್?

    ಈ ಕುರಿತು ರಾಷ್ಟ್ರೀಯ ವಿಕಲಚೇತನರ ಫೆಡರೇಷನ್ ಕರ್ನಾಟಕ ಶಾಖೆಯ ವ್ಯವಸ್ಥಾಪಕ ಹೇಮಂತ್‌ ʻಪಬ್ಲಿಕ್‌ ಟಿವಿʼಜೊತೆಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನ ನೀಡುವ ಬರದಲ್ಲಿ ಅಂಗವಿಕಲರಿಗೆ ಅನ್ಯಾಯ ಮಾಡ್ತಿದೆ. ರಾಜ್ಯದಲ್ಲಿರೋ ಅಂಗವಿಕಲರು ಸೇವಾಸಿಂಧು ಮೂಲಕ ಅನುದಾನಕ್ಕೆ ಅರ್ಜಿ ಹಾಕಿದ್ರೂ ಅನುಕೂಲವಾಗ್ತಿಲ್ಲ, ವ್ಹೀಲ್‌ ಚೇರ್ ಆಗಿರಬಹುದು, ಲ್ಯಾಪ್‌ಟ್ಯಾಪ್ ಆಗಿರಬಹುದು ಹೀಗೆ ಎಲ್ಲ ಸ್ಕೀಮ್‌ಗೂ ತೊಡಕಾಗಿದೆ. ಈ ಬಗ್ಗೆ ಸಿಎಂ, ಡಿಸಿಎಂಗೂ ಮನವಿ ಮಾಡಿದ್ದೇವೆ. ಇದೇ ಡಿಸೆಂಬರ್ 3 ಅಂಗವಿಕಲರ ದಿನಾಚರಣೆ ಇದೆ. ಸರ್ಕಾರ ಡಿಸೆಂಬರ್ 2ರೊಳಗೆ ಅನುದಾನ ನೀಡದೇ ಹೋದ್ರೇ ಅಂದಿನಿಂದಲೇ ಪ್ರತಿಭಟನೆ ಮಾಡುತ್ತೇವೆ ಅಂತಾ ಹೇಳಿದ್ದಾರೆ. ಇದನ್ನೂ ಓದಿ: Davanagere| ವಿದ್ಯುತ್ ಅವಘಡಕ್ಕೆ ಒಂದೂವರೆ ಎಕರೆ ಅಡಿಕೆ ತೋಟ ಸುಟ್ಟು ಕರಕಲು

    ಸರ್ಕಾರ ಕಳೆದ ವರ್ಷ 40 ಕೋಟಿ ರೂ. ಅನುದಾನ ಕೊಟ್ಟಿದೆ. ಆದ್ರೆ ಈ ವರ್ಷ ಕೇವಲ 10 ಕೋಟಿ ರೂ. ಕೊಟ್ಟಿದ್ದು, ಶೇ.80 ರಷ್ಟು ಅನುದಾನ ಕಡಿತಗೊಳಿಸಿದೆ. ಆದ್ರೆ ಗ್ಯಾರಂಟಿಗಳಿಗೆ 58,000 ಕೋಟಿ ರೂ. ಮೀಸಲಿಟ್ಟಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಗಳನ್ನ ನೀಡುತ್ತಿಲ್ಲ, ಗ್ಯಾರಂಟಿ ಸ್ಕೀಂನಿಂದ ಸರ್ಕಾರಕ್ಕೆ ಹಣದ ಕೊರತೆ ಉಂಟಾಗಿ, ನಮ್ಮ ಯೋಜನೆಗಳಿಗೆ ಕತ್ತರಿ ಹಾಕಿರಬಹುದು. ಕೆಲ ವರ್ಷಗಳಿಂದ ಯೋಜನೆ ಮುಂದುವರಿಸಿಕೊಂಡು ಬರಲಾಗ್ತಿದೆ. ಹೊಸ ಯೋಜನೆಗಳನ್ನ ಘೋಷಿಸಿಲ್ಲ. ಕಳೆದ ವರ್ಷ 54 ಕೋಟಿ ರೂ. ವೆಚ್ಚದಲ್ಲಿ 4 ಸಾವಿರ ವೆಹಿಕಲ್ ನೀಡಿದ್ರು, 400 ಲ್ಯಾಪ್‌ಟಾಪ್ ಅಂಧ ವಿದ್ಯಾರ್ಥಿಗಳಿಗೆ ನೀಡಿದ್ರು. 183 ಬ್ರೈಲ್‌ ಕಿಟ್ ಕೊಟ್ಟಿದ್ದಾರೆ. ಈ ವರ್ಷದ ಅನುದಾನದಲ್ಲಿ 350 ವೆಹಿಕಲ್ ಕೊಡಬಹುದು, 30 ಲ್ಯಾಪ್‌ಟಾಪ್, 130 ಬ್ರೈಲ್‌ ಕಿಟ್‌ ನೀಡಬಹುದು. ಆದ್ರೆ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಎಲ್ಲಾ ಶಾಸಕರಿಗೆ ಮನವಿ ಕೊಟ್ಟಿದ್ದೆ, ಅವರೂ ಸ್ಪಂದಿಸಿಲ್ಲ. ಹಾಗಾಗಿ ಡಿಸೆಂಬರ್‌ 2ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲೂ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ.

    2023-24ರ ವರ್ಷದಲ್ಲಿ ಬಿಡುಗಡೆಯಾದ ಅನುದಾನ?
    ಯೋಜನೆ- ಹಣ ಬಿಡುಗಡೆ- ಫಲಾನುಭವಿಗಳ ಸಂಖ್ಯೆ
    1. ಯಂತ್ರಚಾಲಿತ ದ್ವಿಚಕ್ರವಾಹನ – 3980 ಲಕ್ಷ ರೂ – 4000 ಫಲಾನುಭವಿಗಳು
    2. ಟಾಕಿಂಗ್ ಲ್ಯಾಪ್‌ಟಾಪ್ – 397.43 ಲಕ್ಷ ರೂ. – 411 ಫಲಾನುಭವಿಗಳು
    3. ಬ್ಯಾಟರಿ ಆಪರೇಟಿವ್ ವ್ಹೀಲ್‌ಚೇರ್ – 499.20 ಲಕ್ಷ ರೂ. – 520 ಫಲಾನುಭವಿಗಳು
    4. ಬ್ರೈಲ್‌ಕಿಟ್ – 44.03 ಲಕ್ಷ ರೂ. – 183 ಫಲಾನುಭವಿಗಳು
    5. ಹೊಲಿಗೆ ಯಂತ್ರ – 19.95 ಲಕ್ಷ ರೂ. – 179 ಫಲಾನುಭವಿಗಳು
    6. ಸಾಧನ ಸಲಕರಣೆ – 145.34ಲಕ್ಷ ರೂ. – 266 ಫಲಾನುಭವಿಗಳು

    2024-25ನೇ ಸಾಲಿನಲ್ಲಿ ಸರ್ಕಾರ ಮೀಸಲಿಟ್ಟ ಅನುದಾನ & ಸಲ್ಲಿಕೆಯಾಗಿರುವ ಅರ್ಜಿಗಳು
    1. ಯಂತ್ರಚಾಲಿತ ದ್ವಿಚಕ್ರವಾಹನ – 350 ಲಕ್ಷ ರೂ. – ಅರ್ಜಿಗಳ ಸಂಖ್ಯೆ – 9,744
    2. ಟಾಕಿಂಗ್ ಲ್ಯಾಪ್‌ಟಾಪ್ – 30 ಲಕ್ಷ ರೂ. – ಅರ್ಜಿಗಳ ಸಂಖ್ಯೆ 553
    3. ಬ್ಯಾಟರಿ ಆಪರೇಟೆಡ್ ವ್ಹೀಲ್‌ಚೇರ್ – ಅರ್ಜಿಗಳ ಸಂಖ್ಯೆ 350
    4. ಬ್ರೈಲ್‌ಕಿಟ್ – 35 ಲಕ್ಷ ರೂ. – ಅರ್ಜಿಗಳ ಸಂಖ್ಯೆ 311
    5. ಹೊಲಿಗೆ ಯಂತ್ರ – 25 ಲಕ್ಷ ರೂ. – ಅರ್ಜಿಗಳ ಸಂಖ್ಯೆ 862
    6. ಸಾಧನ ಸಲಕರಣೆ – 100 ಲಕ್ಷ ರೂ. – ಅರ್ಜಿಗಳ ಸಂಖ್ಯೆ 5,173

  • ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

    ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

    ಚೆನ್ನೈ: ಶನಿವಾರದಂದು ಚೆನ್ನೈಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತ ತಿರು ಎಸ್.ಮಣಿಕಂದನ್ (Tiru.S.Manikandan) ಅವರನ್ನು ಭೇಟಿಯಾಗಿ ವಿಶೇಷ ಸೆಲ್ಫಿ (Selfie) ತೆಗೆದುಕೊಂಡು ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ಮೋದಿ (Narendra Modi) ಶನಿವಾರ ಚೆನ್ನೈಗೆ (Chennai) ಭೇಟಿ ನೀಡಿದ್ದರು. ಈ ವೇಳೆ ಅಂಗವಿಕಲರಾಗಿ (Disabled) ಒಂದು ಅಂಗಡಿಯನ್ನು ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ತಿರು.ಎಸ್.ಮಣಿಕಂದನ್ ಅವರನ್ನು ಭೇಟಿಯಾಗಿ ಅವರೊಡನೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಬಳಿಕ ಇದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅನೇಕರು ಪ್ರೇರೇಪಿತರಾಗಲಿ ಎಂದು ಅವರ ಜೀವನಕ್ಕೆ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನು ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಚೆನ್ನೈನಲ್ಲಿ ನಾನು ತಿರು ಎಸ್.ಮಣಿಕಂದನ್ ಅವರನ್ನು ಭೇಟಿಯಾದೆ. ಅವರು ಈರೋಡ್‌ನ (Erode) ಬಿಜೆಪಿ ಕಾರ್ಯಕರ್ತ ಹಾಗೂ ಬೂತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಬ್ಬ ಅಂಗವಿಕಲನಾಗಿ ಅವರು ತನ್ನದೇ ಸ್ವಂತ ಅಂಗಡಿಯನ್ನು ನಡೆಸುತ್ತಿರುವುದು ಎಲ್ಲರಿಗೂ ಪ್ರೇರಣೆಯಾಗಿದೆ. ಅಲ್ಲದೇ ಅವರು ತಮಗೆ ಬಂದ ದೈನಂದಿನ ಲಾಭದಲ್ಲಿ ಗಣನೀಯ ಭಾಗವನ್ನು ಬಿಜೆಪಿಗೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರ ಫೋಟೋದೊಂದಿಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸಚಿವ ಕಿರಣ್‌ ರಿಜಿಜು ಕಾರು ಅಪಘಾತ 

    ತಿರು ಎಸ್.ಮಣಿಕಂದನ್ ಅವರಂತಹ ಕಾರ್ಯಕರ್ತರನ್ನು ಹೊಂದಿರುವ ಬಿಜೆಪಿ ಪಕ್ಷದಲ್ಲಿ ನಾನು ಕಾರ್ಯಕರ್ತನಾಗಿರುವುದಕ್ಕೆ ನನಗೆ ತುಂಬಾ ಹೆಮ್ಮೆಯಿದೆ ಎಂದು ಮಣಿಕಂದನ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇದನ್ನು ಓದಿ: ಯುದ್ಧ ವಿಮಾನದಲ್ಲಿ ಮೊದಲ ಬಾರಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

  • ಬಹಿರಂಗವಾಗಿ ಕ್ಷಮೆ ಕೇಳಿದ ಮಲಯಾಳಂ ಖ್ಯಾತ ನಟ ಪೃಥ್ವಿ ಸುಕುಮಾರನ್

    ಬಹಿರಂಗವಾಗಿ ಕ್ಷಮೆ ಕೇಳಿದ ಮಲಯಾಳಂ ಖ್ಯಾತ ನಟ ಪೃಥ್ವಿ ಸುಕುಮಾರನ್

    ಲಯಾಳಂನ ಖ್ಯಾತ ನಟ, ಇದೀಗ ಕನ್ನಡದಲ್ಲೂ ಸಿನಿಮಾ ಮಾಡುತ್ತಿರುವ ಪೃಥ್ವಿ ಸುಕುಮಾರನ್ ನಡೆಸಿದ್ದ ಕಡುವ ಸಿನಿಮಾ ದೇಶಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಆದರೆ, ಇದೇ ಸಿನಿಮಾದ ಕಾರಣಕ್ಕಾಗಿ ಪೃಥ್ವಿ ಸುಕುಮಾರನ್ ಅವರಿಗೆ ಕ್ಷಮೆ ಕೇಳುವಂತಹ ಪರಿಸ್ಥಿತಿ ಎದುರಾಗಿದೆ. ಈ ಸಿನಿಮಾದಲ್ಲಿ ವಿಶೇಷ ಚೇತನ ಮಕ್ಕಳ ಪೋಷಕರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪ ಎದುರಾಗಿತ್ತು.

    ಪೃಥ್ವಿ ಸುಕುಮಾರನ್ ಅದ್ಭುತ ನಟ ಮತ್ತು ನಿರ್ದೇಶಕ. ಸೆನ್ಸಿಬಲ್ ನಟ ಎಂದೇ ಖ್ಯಾತರಾದವರು. ಆದರೆ, ಕಡುವ ಸಿನಿಮಾದಲ್ಲಿ ವಿಶೇಷ ಚೇತನ ಮಕ್ಕಳ ಪಾಲಕರನ್ನು ಅವಮಾನಿಸಿದ್ದರು. ಪಾಲಕರ ತಪ್ಪಿನಿಂದಾಗಿಯೇ ಇಂತಹ ಮಕ್ಕಳು ಜನಿಸುತ್ತಾರೆ ಎಂದು ಅರ್ಥ ಬರುವಂತಹ ಸಂಭಾಷಣೆಯನ್ನು ಬಳಸಲಾಗಿತ್ತು. ಹಾಗಾಗಿ ಪೋಷಕರು ಆಕ್ಷೇಪ ವ್ಯಕ್ತ ಪಡಿಸಿದ್ದರು. ಕಾನೂನು ಮೊರೆ ಹೋಗುವುದಾಗಿಯೂ ತಿಳಿಸಿದ್ದರು. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ತೆಲುಗು ನಟ ತ್ರಿಗುಣ್ ಪಾದಾರ್ಪಣೆ

    ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ವಿರುದ್ಧ ಕೂಗು ಹೆಚ್ಚಾಗುತ್ತಿದ್ದಂತೆಯೇ ಮೊದಲು ಆ ದೃಶ್ಯಕ್ಕೆ ಕತ್ತರಿ ಹಾಕಲಾಗಿದೆ. ಆನಂತರ ನಟ ಪೃಥ್ವಿ ಸುಕುಮಾರನ್ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ನಮ್ಮಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕೇಳಿಕೊಂಡಿದ್ದಾರೆ. ಕಡುವ ಚಿತ್ರದ ನಿರ್ದೇಶಕ ಶಾಜಿ ಕೈಲಾಸ್ ಕೂಡ ಬಹಿರಂಗವಾಗಿಯೇ ಪಾಲಕರಿಗೆ ಕ್ಷಮೆ ಕೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಕಲಚೇತನ ಯುವತಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    ವಿಕಲಚೇತನ ಯುವತಿ ಮೇಲೆ ಅತ್ಯಾಚಾರ – ಆರೋಪಿ ಅರೆಸ್ಟ್

    ಹಾವೇರಿ: 18 ವರ್ಷದ ವಿಕಲಚೇತನ ಯುವತಿಯನ್ನು ಇಬ್ಬರು ಅತ್ಯಾಚಾರ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ.

    ವಿಕಲಚೇತನ ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿಗಳು ಅತ್ಯಾಚಾರ ಮಾಡಿದ್ದಾರೆ. ಆರೋಪಿಯನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ್ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಪರಶುರಾಮನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರೇಮ ನಿವೇದನೆಯನ್ನ ಒಪ್ಪದ್ದಕ್ಕೆ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ 

    ಪ್ರಸ್ತುತ ಪೊಲೀಸರು ಪರಾರಿಯಾಗಿರುವ ಆರೋಪಿ ಯಶವಂತ್‍ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಯುವತಿ ಮೇಲೆ ಅತ್ಯಾಚಾರ ಮಾಡಲು ಪರಶುರಾಮಗೆ ಯಶವಂತ್ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬರುತ್ತಿದೆ.

    ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

  • ವಿಕಲಾಂಗರು, ಗರ್ಭಿಣಿಯರಿಗೆ ವರ್ಕ್‌ ಫ್ರಮ್‌ ಹೋಮ್‌ – ದೆಹಲಿ ಸರ್ಕಾರ ಆದೇಶ

    ವಿಕಲಾಂಗರು, ಗರ್ಭಿಣಿಯರಿಗೆ ವರ್ಕ್‌ ಫ್ರಮ್‌ ಹೋಮ್‌ – ದೆಹಲಿ ಸರ್ಕಾರ ಆದೇಶ

    ನವದೆಹಲಿ: ವಿಕಲಾಂಗರಿಗೆ ಮತ್ತು ನಗರ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅವಕಾಶ ನೀಡಿದೆ. ಈ ನೌಕರರು ಇನ್ನು ಮುಂದೆ ಕಚೇರಿಗಳಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಡಿಡಿಎಂಎ ತಿಳಿಸಿದೆ.

    ಪಿಎಸ್‍ಯುಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಆಗಮಿಸುವ ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಚೇರಿಗೆ ಆಗಮಿಸುವ ಬದಲಾಗಿ ಮನೆಯಲ್ಲಿಯೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ವರ್ಕ್ ಫ್ರಮ್ ಹೋಂ ಮಾಡುವ ಉದ್ಯೋಗಿಗಳು ತಮ್ಮ ಕಚೇರಿಗಳೊಂದಿಗೆ ಮೊಬೈಲ್ ಫೋನ್ ಅಥವಾ ಇ-ಮೇಲ್ ಮೂಲಕ ಸಂವಹನ ನಡೆಸಬಹುದಾಗಿದೆ ಎಂದು ತಿಳಿಸಲಾಗಿದೆ. ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಡಿಡಿಎಂಎ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಆದಾಯ ತೆರಿಗೆ ಇಲಾಖೆಯ ಉದ್ಯೋಗಿಗಳು ಸೇರಿದಂತೆ ಹಲವಾರು ಕಚೇರಿಯ ಉದ್ಯೋಗಿಗಳಿಗೆ ದೆಹಲಿ ಸರ್ಕಾರಿ ವರ್ಕ್ ಫ್ರಮ್ ಹೋಮ್ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಅಗತ್ಯವಿದ್ದರೆ ಮಾತ್ರ ಉದ್ಯೋಗಿಗಳು ತಮ್ಮ ಕಚೇರಿಗಳಿಗೆ ಆಗಮಿಸಿ ಕೆಲಸ ಮಾಡಬಹುದು ಎಂದು ಸೂಚಿಸಿತ್ತು. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

  • ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ಗರ್ಭಿಣಿಯರು, ವಿಕಲಚೇತನರು ಮನೆಯಿಂದ್ಲೇ ಸರ್ಕಾರಿ ಕೆಲಸ ಮಾಡ್ಬೋದು: ಜಿತೇಂದ್ರ ಸಿಂಗ್

    ನವದೆಹಲಿ: ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಇನ್ನೂ ಮುಂದೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದರು.

    ಧಾರಕ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕೋವಿಡ್ ಕಂಟೈನ್‍ಮೆಂಟ್ ವಲಯದಲ್ಲಿ ವಾಸಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗೆ ಬರುವುದರಿಂದ ವಿನಾಯಿತಿ ನೀಡಲಾಗಿದೆ. ಅಧೀನ ಕಾರ್ಯದರ್ಶಿ ಮಟ್ಟಕ್ಕಿಂತ ಕೆಳಗಿರುವ ಸರ್ಕಾರಿ ನೌಕರರ ದೈಹಿಕ ಹಾಜರಾತಿಯನ್ನು 50% ಕ್ಕೆ ನಿರ್ಬಂಧಿಸಲಾಗಿದೆ. ಉಳಿದ 50% ರಷ್ಟು ಜನರು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಸಿಬ್ಬಂದಿ ಸಚಿವಾಲಯ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಈ ಕುರಿತು ಮಾಹಿತಿ ನೀಡಿದ ಸಿಂಗ್ ಅವರು, ಭಾರತದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಗರ್ಭಿಣಿಯರು ಮತ್ತು ‘ದಿವ್ಯಾಂಗ್’ (ವಿಕಲಚೇತನ) ಉದ್ಯೋಗಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅವರು ಮನೆಯಿಂದಲೇ ಕೆಲಸ ಮಾಡಬಹುದು ಎಂದು ತಿಳಿಸಿದರು.

    ಸಂಬಂಧಪಟ್ಟ ಎಲ್ಲ ಇಲಾಖೆಗಳಿಂದ ರೋಸ್ಟರ್‍ಗಳನ್ನು ಸಿದ್ಧಪಡಿಸಲಾಗುವುದು. ಕಚೇರಿಗೆ ಹಾಜರಾಗದ ಮತ್ತು ಮನೆಯಿಂದಲೇ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವಾಗಲೂ ದೂರವಾಣಿ ಮತ್ತು ಇತರ ಎಲೆಕ್ಟ್ರಾನಿಕ್ ಸಂವಹನಗಳ ಮೂಲಕ ಲಭ್ಯವಿರುತ್ತಾರೆ ಎಂದು ಹೇಳಿದರು.

    ದೆಹಲಿಯಲ್ಲಿ ನಿನ್ನೆ ಕೋವಿಡ್‍ನಿಂದಾಗಿ ಏಳು ಸಾವುಗಳು ಮತ್ತು 20,181 ಹೊಸ ಪ್ರಕರಣಗಳು ದಾಖಲಾಗಿದೆ. ಪಾಸಿಟಿವ್ ಪ್ರಮಾಣವು 19.60 ಪ್ರತಿಶತಕ್ಕೆ ಏರಿದೆ. ನವೀಕರಿಸಿದ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇಂದು ದೆಹಲಿಯಲ್ಲಿ ಒಂದೇ ದಿನದಲ್ಲಿ 1,59,632 ಪ್ರಕರಣಗಳು ಮತ್ತು 327 ಸಾವುಗಳು ಸಂಭವಿಸಿವೆ ಎಂದು ಆತಂಕ ವ್ಯಕ್ತಪಡಿಸಿದರು.

    ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(ಡಿಒಪಿಟಿ) ಆದೇಶವನ್ನು ಹೊರಡಿಸಿದೆ. ಇದರ ಪ್ರಕಾರ ಸಾಧ್ಯವಾದಷ್ಟು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಅಧಿಕೃತ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

    ಕಚೇರಿ ಆವರಣದಲ್ಲಿ ನೂಕುನುಗ್ಗಲು ಉಂಟಾಗುವುದನ್ನು ತಪ್ಪಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯ ಪಾಲನೆ ಮಾಡಬೇಕು. ಆಗಾಗ್ಗೆ ಕೈ ತೊಳೆಯುವುದು, ಸ್ವಚ್ಫವಾಗಿರುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಬೇಕು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಟೈರ್ ಕೆಳಗೆ ಸಿಕ್ಕ ನೋಟ್ ತೆಗೆದುಕೊಳ್ಳಲು ವ್ಯಕ್ತಿ ಸರ್ಕಸ್

    ಡಿಒಪಿಟಿ ಆದೇಶದ ಪ್ರಕಾರ, ಪ್ರಸ್ತುತ ಹೊರಡಿಸಲಾದ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದರು.

  • ರಾಹುಲ್ ಗಾಂಧಿ ಹುಟ್ಟುಹಬ್ಬ- ವಿಶೇಷಚೇತನರ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಫ್ರೀ

    ರಾಹುಲ್ ಗಾಂಧಿ ಹುಟ್ಟುಹಬ್ಬ- ವಿಶೇಷಚೇತನರ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಫ್ರೀ

    ಚಿಕ್ಕಬಳ್ಳಾಪುರ: ಜಿಲ್ಲಾ ಕಾಂಗ್ರೆಸ್‍ನಿಂದ ನಗರದಲ್ಲಿ ವಿಶೇಷಚೇತನರ ವಾಹನಗಳಿಗೆ ಉಚಿತವಾಗಿ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಲಾಗಿದೆ.

    ನಗರದ ಹೊರವಲಯದ ಡಿಸಿ ಕಚೇರಿ ಪಕ್ಕದಲ್ಲಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ 80ಕ್ಕೂ ಹೆಚ್ಚು ಮಂದಿ ವಿಶೇಷಚೇತನರ ವಾಹನಗಳಿಗೆ ಉಚಿತವಾಗಿ ಪೆಟ್ರೋಲ್ ಹಾಕಿಸುವ ಮೂಲಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಯಿತು. ಈ ವೇಳೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾನವ ಹಕ್ಕುಗಳ ವಿಭಾಗದ ಕೆ.ಎನ್.ರಘು ಮಾತನಾಡಿ, ರಾಹುಲ್ ಗಾಂಧಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷಚೇತನರ ವಾಹನಗಳಿಗೆ ಉಚಿತವಾಗಿ ಪೆಟ್ರೋಲ್ ವಿತರಣೆ ಮಾಡುತ್ತಿದ್ದೇವೆ ಎಂದರು.

    ಪೆಟ್ರೋಲ್, ಡಿಸೇಲ್ ಮತ್ತು ದಿನ ಬಳಕೆಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಡವರು, ಜನ ಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. ಇದರಲ್ಲಿ ಒಂದು ಭಾಗ ಈ ವಿಶೇಷಚೇತನರು, ಇವರಿಗೆ ದುಡಿಮೆ ಕಡಿಮೆ, ಓಡಾಟಕ್ಕೆ ಗಾಡಿ ಇದ್ದು, ಬೆಲೆ ಏರಿಕೆಯಿಂದ ಪೆಟ್ರೋಲ್ ಹಾಕಿಸಿಕೊಳ್ಳುವುದು ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ತೆರಿಗೆ ಹೇರಿದ್ದರಿಂದ ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಹೀಗಾಗಿ ಪೆಟ್ರೋಲ್ ಮೇಲೆ ವಿಧಿಸಿರುವ ತೆರಿಗೆ ಇಳಿಸಬೇಕು, ಇಲ್ಲವಾದರೆ ಜನಸಾಮಾನ್ಯರ ಗತಿ ಏನು? ಈ ಸರ್ಕಾರಕ್ಕೆ ಮಾನವೀಯತೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುವ ವೈಫಲ್ಯಗಳ ಕಾರಣದಿಂದ ಜನ ಕಷ್ಟ ಅನುಭವಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಜನ ಇವರಿಗೆ ಬುದ್ಧಿ ಕಲಿಸಬೇಕು ಎಂದರು. ಇದೇ ವೇಳೆ ಕೊರೊನಾ ಸಂಕಷ್ಟದಲ್ಲಿರುವ ಶಿಕ್ಷಕಿಯರಿಗೆ ಉಚಿತ ಆಹಾರದ ಕಿಟ್ ಕೂಡ ವಿತರಿಸಲಾಯಿತು.

  • ದಕ್ಷಿಣ ಕನ್ನಡದಲ್ಲಿ ಅಶಕ್ತರ ಮನೆಗೆ ತೆರಳಿ ಲಸಿಕೆ- ಜಿಲ್ಲಾಡಳಿತ ನಿರ್ಧಾರ

    ದಕ್ಷಿಣ ಕನ್ನಡದಲ್ಲಿ ಅಶಕ್ತರ ಮನೆಗೆ ತೆರಳಿ ಲಸಿಕೆ- ಜಿಲ್ಲಾಡಳಿತ ನಿರ್ಧಾರ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ತೆರಳಿ ಲಸಿಕೆ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮನೆಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ.

    ನೀವು ಮನೆಯಲ್ಲೇ ಲಸಿಕೆ ಪಡೆಯಲು ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ dk.nic.in ನಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿಯಾದ ಬಳಿಕ ದಿನ ನಿಗದಿಪಡಿಸಿ, ಮನೆ ಮನೆಗೆ ಬಂದು ಲಸಿಕೆ ನೀಡಲು ನಿರ್ಧರಿಸಲಾಗಿದೆ. ಮನೆ ಮನೆ ಲಸಿಕಾ ವಾಹನಕ್ಕೆ ಜೂ.19ರಂದು ಬೆಳಗ್ಗೆ 9.30ಕ್ಕೆ ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಯುನಿವರ್ಸಿಟಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಗುತ್ತಿದೆ.

  • ವಿಶೇಷ ಚೇತನ ಯುವತಿಯ ಕೈ ಹಿಡಿದ ಯುವಕ- ಅದ್ಧೂರಿ ಮದುವೆ

    ವಿಶೇಷ ಚೇತನ ಯುವತಿಯ ಕೈ ಹಿಡಿದ ಯುವಕ- ಅದ್ಧೂರಿ ಮದುವೆ

    ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ.

    ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ ಯುವಕ ಮೀನಾಕ್ಷಿಯನ್ನು ವರಿಸಿಕೊಳ್ಳಲು ಒಪ್ಪಿದ್ದು, ನಗರದ ಸೈದಾಪೂರದ ನಿವಾಸಿಯಾದ ಮೀನಾಕ್ಷಿ ಜೊತೆ ಕಮಲಾಪುರದ ನಿವಾಸಿ ವಿನಾಯಕ ವಿವಾಹವಾಗಿದ್ದಾರೆ. ಇದನ್ನೂ ಓದಿ: ಪೋಲಿಯೋ ಪೀಡಿತೆಯ ಬಾಳಲ್ಲಿ ಬೆಳಕು ಮೂಡಿಸಿದ ಸಂದೀಪ್

    ವಿನಾಯಕ್ ಮೊದಲಿನಿಂದಲೂ ವಿಶೇಷ ಚೇತನ ಹುಡುಗಿ ಕೈ ಹಿಡಿಯಬೇಕೆಂಬ ಸಂಕಲ್ಪ ಹೊಂದಿದ್ದರು. ಮೀನಾಕ್ಷಿ ವಿಶೇಷ ಚೇತನ ಯುವತಿ ಎಂಬುದನ್ನು ಅರಿತು ಪೋಷಕರ ಸಮ್ಮುಖದಲ್ಲಿ ಮೀನಾಕ್ಷಿಯವರನ್ನು ನೋಡಿ ಬಂದಿದ್ದರು. ಎಲ್ಲರೂ ಒಪ್ಪಿಗೆ ಸೂಚಿಸಿದ್ದರಿಂದ ಧಾರವಾಡ ಅಕ್ಕನ ಬಳಗ ಕಲ್ಯಾಣ ಮಂಟಪದಲ್ಲಿ ಇಂದು ಮದುವೆ ನಡೆಯಿತು.

    ಈ ವಿವಾಹದಿಂದ ವರ ಎಷ್ಟು ಸಂತೋಷವಾಗಿದ್ದಾನೋ ಗೊತ್ತಿಲ್ಲ. ಆದರೆ ವಧು ಮಾತ್ರ ಸಂತೋಷವಾಗಿದ್ದಾಳೆ. ತನ್ನ ಈ ಸಮಸ್ಯೆಯಿಂದ ಯಾರಾದರೂ ಬಾಳ ಸಂಗಾತಿ ಸಿಗುತ್ತಾನೋ ಇಲ್ಲವೋ ಎಂದುಕೊಂಡಿದ್ದ ಮೀನಾಕ್ಷಿಗೆ ಇವತ್ತು ಅದ್ಧೂರಿ ವಿವಾಹವಾಯಿತು. ಎರಡು ಕುಟುಂಬದ ಸದಸ್ಯರ ಜೊತೆ ಸ್ನೇಹಿತರು ಸಾಕ್ಷಿಯಾದರು.

  • ಅಂಗವಿಕಲ ಮಗಳ ಆರೈಕೆಗಾಗಿ ತಾಯಿಯನ್ನು ಕರೆತಂದ ಕಾಂಗ್ರೆಸ್ ಮುಖಂಡರು

    ಅಂಗವಿಕಲ ಮಗಳ ಆರೈಕೆಗಾಗಿ ತಾಯಿಯನ್ನು ಕರೆತಂದ ಕಾಂಗ್ರೆಸ್ ಮುಖಂಡರು

    ಹುಬ್ಬಳ್ಳಿ: ಅಂಗವಿಕಲ ಮಗಳ ಆರೈಕೆಗಾಗಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಯೇ ಸಿಲುಕಿಕೊಂಡಿದ್ದ ತಾಯಿಯನ್ನು ಹುಬ್ಬಳ್ಳಿಗೆ ಕರೆದುಕೊಂಡು ಬರುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದ ಅಗೆನೆಸ್ಟ್ ಕೋವಿಡ್-19 ಸಹಾಯ ಗುಂಪು ಮಾನವೀಯತೆ ಮೆರೆದಿದ್ದಾರೆ.

    ಅಂಗವಿಕಲೆ ಪೂಜಾ ಮಲಕಾಪುರ ತಾಯಿ ಶಾಂತಾ ಮಲಕಾಪುರ ಒಂದು ದಿನದ ಲಗ್ನದ ಕಾರ್ಯಕ್ರಮ ನಿಮಿತ್ತ ಅಂಗವಿಕಲೆ ಮಗಳನ್ನು ಹುಬ್ಬಳ್ಳಿಯಲ್ಲಿ ಬಿಟ್ಟು ಬೆಳಗಾವಿ ಸಂಬಂಧಿಕರ ಮದುವೆಗಾಗಿ ಹೋಗಿದ್ದರು. ಆದರೆ ದೀರ್ಘ ಅವಧಿಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅವರು ಅನಿವಾರ್ಯವಾಗಿ ಬೆಳಗಾವಿಯಲ್ಲಿಯೇ ಉಳಿಯಬೇಕಾಯಿತು. ಆದರೆ ಅಂಗವಿಕಲ ಮಗುವಿನ ಊಟೋಪಚಾರ ಮತ್ತು ಆರೈಕೆಯನ್ನು ಕಳೆದ 20 ದಿನಗಳಿಂದ ಸ್ಥಳೀಯ ಜೈನ ಸಮಾಜದವರು ಮಾಡುತ್ತಿದ್ದರು.

    ಆದರೆ ಪುನಃ ದೀರ್ಘ ಅವದಿಯ ಲಾಕಡೌನ್ ಘೋಷಿಸಿದ್ದರಿಂದ ಅಂಗವಿಕಲ ಮಗಳು ಮತ್ತು ತಾಯಿ ತುಂಬಾ ಆತಂಕಕ್ಕೆ ಒಳಗಾಗಿದ್ದು, ಕಳೆದ ಎಂಟು ದಿನಗಳಿಂದ ಬಹಳಷ್ಟು ಪ್ರಯತ್ನ ಮಾಡಿದರು ಬರಲು ಆಗಿರಲಿಲ್ಲ. ನಂತರ ಈ ವಿಚಾರವನ್ನು ಸ್ಥಳೀಯರು ಸಹಾಯ ಗುಂಪು ಅಗೆನೆಸ್ಟ್ ಕೋವಿಡ್-19 ಗಮನಕ್ಕೆ ತಂದರು. ನಂತರ ಕಾಂಗ್ರೆಸ್ ಮುಖಂಡರಾದ ಶಾಕಿರ್ ಸನದಿ ಮತ್ತು ರಾಜಶೇಖರ್ ಮೆಣಸಿನಕಾಯಿ ಅವರು ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಕುಮಾರ್ ಪಾಟೀಲ್ ರವರ ಗಮನಕ್ಕೆ ತಂದು ಘಟನೆಯ ಸಂಪೂರ್ಣ ವಿವರಣೆ ನೀಡಿದರು.

    ಆಗ ಅವರು ಈ ವಿಷಯವನ್ನು ಪೊಲೀಸರಿಗೆ ಹೇಳಿದರು. ಬೆಳಗಾವಿಯಲ್ಲಿ ಸಿಲುಕಿರುವ ಅಂಗವಿಕಲೆಯ ತಾಯಿಯನ್ನು ಕರೆತರುವುದು ಅನಿವಾರ್ಯವಾಗಿದ್ದರಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಆಡಳಿತ ಯಂತ್ರದ ಮುಖ್ಯಸ್ಥರನ್ನು ಸಂಪರ್ಕಿಸಿ ಬೆಳಗಾವಿಯಿಂದ ಈ ಅಂಗವಿಕಲೆಯ ತಾಯಿಯನ್ನು ಕರೆತರಲು ವಾಹನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಿ ಮಾನವೀಯತೆ ಮರೆದಿದ್ದಾರೆ.