Tag: disciplinary committee

  • ಸದ್ಯ ಯಾವುದೇ ನೋಟಿಸ್ ಬಂದಿಲ್ಲ, ಬಂದ್ರೆ ಉತ್ತರಿಸುತ್ತೇನೆ – ಯತ್ನಾಳ್

    ಸದ್ಯ ಯಾವುದೇ ನೋಟಿಸ್ ಬಂದಿಲ್ಲ, ಬಂದ್ರೆ ಉತ್ತರಿಸುತ್ತೇನೆ – ಯತ್ನಾಳ್

    ಬೆಂಗಳೂರು: ಸದ್ಯದವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ, ಬಂದರೆ ಉತ್ತರಿಸುತ್ತೇನೆ ಎಂದು ಶೋಕಾಸ್ ನೋಟಿಸ್ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪ್ರತಿಕ್ರಿಯಿಸಿದ್ದಾರೆ.

    ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಶಿಸ್ತು ಸಮಿತಿಯಿಂದ ನನಗೆ ನೋಟಿಸ್ ಕೊಡಲಾಗಿದೆ ಎನ್ನಲಾಗುತ್ತಿದೆ. ಆದರೆ ಸದ್ಯದವರೆಗೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಸಿಕ್ಕರೆ ಅದಕ್ಕೆ ಉತ್ತರಿಸುತ್ತೇನೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ ಬಗ್ಗೆ ತಿಳಿಸುತ್ತೇನೆ. ಸರ್ಕಾರದ ವಿರುದ್ಧ ಹೋರಾಡುವಲ್ಲಿ ಪಕ್ಷ ವಿಫಲವಾಗಿದೆ. ಹೊಂದಾಣಿಕೆ ರಾಜಕೀಯದ ಬಗ್ಗೆ ತಿಳಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ:ಸಮಜಾಯಿಷಿ ನೀಡಿದಂತೆ ನಡೆದುಕೊಂಡಿಲ್ಲ – ಬಿಜೆಪಿ ಶಿಸ್ತುಸಮಿತಿಯಿಂದ ಯತ್ನಾಳ್‌ಗೆ 2ನೇ ನೋಟಿಸ್

    ಪೋಸ್ಟ್‌ನಲ್ಲಿ ಏನಿದೆ?
    ನನಗೆ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿರುವುದಿಲ್ಲ. ನೋಟಿಸ್ ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

    ಸೋಮವಾರ ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ ಎನ್ನಲಾಗಿತ್ತು. ನೋಟಿಸ್‌ನಲ್ಲಿ ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ. ಪಕ್ಷ ವಿರೋಧ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ಹೀಗಾಗಿ ಈ ಬಗ್ಗೆ 72 ಗಂಟೆಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚನೆ ನೀಡಿತ್ತು ಎಂದು ಮೂಲಗಳು ತಿಳಿಸಿದ್ದವು.

    ಇದಕ್ಕೂ ಮುನ್ನ ಕಳೆದ ವರ್ಷದ ಡಿಸೆಂಬರ್ 02 ರಂದು ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಮೊದಲ ಶೋಕಾಸ್ ನೋಟಿಸ್ ನೀಡಿತ್ತು. ಆಗ ಯತ್ನಾಳ್ ಬಹಿರಂಗ ಹೇಳಿಕೆ ಕೊಡುವುದಿಲ್ಲ ಎಂದು ಭರವಸೆ ನೀಡಿ, ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು.ಇದನ್ನೂ ಓದಿ: ಸಿದ್ದರಾಮಯ್ಯ 660 ಕೆವಿ ಕರೆಂಟ್, ಮುಟ್ಟಿದ್ರೆ ಸುಟ್ಟು ಹೋಗ್ತಾರೆ: ಮುನಿರತ್ನ

  • ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    ಮೊದಲ ಪತ್ನಿಯನ್ನು ಬಿಟ್ಟು ಕಾಲೇಜು ಯುವತಿಯನ್ನು ಮದ್ವೆಯಾದ ಬಿಜೆಪಿ ಶಾಸಕ!

    – ಬಿಜೆಪಿ ಶಿಸ್ತು ಸಮಿತಿಗೆ ಪತ್ನಿಯಿಂದ ದೂರು

    ಶ್ರೀನಗರ: ಜಮ್ಮು ಕಾಶ್ಮೀರ ಬಿಜೆಪಿ ಶಾಸಕರೊಬ್ಬರ ಪತ್ನಿ ತಮ್ಮ ಪತಿ ಕಾಲೇಜು ಯುವತಿಯೊಂದಿಗೆ ಮದುವೆಯಾಗಿರುವುದಾಗಿ ಆರೋಪ ಮಾಡಿ, ಬಿಜೆಪಿ ಶಿಸ್ತು ಸಮಿತಿಗೆ ದೂರು ನೀಡಿದ್ದಾರೆ.

    ಜಮ್ಮು ಜಿಲ್ಲೆಯ ಶಾಸಕ ಗಗನ್ ಭಗತ್ ವಿರುದ್ಧ ಪತ್ನಿ ಮೋನಿಕಾ ಶರ್ಮಾ ಈ ಆರೋಪ ಮಾಡಿದ್ದು, 19 ವರ್ಷದ ಕಾಲೇಜು ಯುವತಿಯೊಂದಿಗೆ ಮದುವೆಯಾಗಿ ಆಕೆಯೊಂದಿಗೆ ವಾಸಿಸುತ್ತಿದ್ದಾರೆ ಎಂದು ದೂರಿದ್ದಾರೆ.

    ಸದ್ಯ ಶಾಸಕ ಪತ್ನಿ ಆರೋಪದೊಂದಿಗೆ ಕಾಲೇಜು ಯುವತಿಯ ತಂದೆಯೂ ಸಹ ತಮ್ಮ ಮಗಳನ್ನು ಪಂಜಾಬ್ ಕಾಲೇಜಿನಿಂದ ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪಗಳನ್ನು ಯುವತಿ ಹಾಗೂ ಶಾಸಕ ಗಗನ ಭಗತ್ ನಿರಾಕರಿಸಿದ್ದು, ತಮ್ಮ ರಾಜಕೀಯ ಜೀವನಕ್ಕೆ ಕಪ್ಪು ಚುಕ್ಕೆ ತರಲು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಅಂದಹಾಗೇ 13 ವರ್ಷಗಳ ಹಿಂದೆ ಶಾಸಕ ಗಗನ್ ಭಗತ್ ಹಾಗೂ ಮೋನಿಕಾ ಶರ್ಮಾ ಮದುವೆಯಾಗಿರುವುದಾಗಿ ತಿಳಿಸಿದ್ದು, ಸದ್ಯ ಶಾಸಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶರ್ಮಾ ದೂರು ನೀಡಿದ್ದಾರೆ. ಅಲ್ಲದೇ ಈ ಹಿಂದೆ ತಮ್ಮ ದೈನಂದಿನ ಜೀವನ ನಿರ್ವಹಣೆಗಾಗಿ ಮಾಸಿಕ 1 ಲಕ್ಷ ರೂ. ಹಣ ನೀಡುವುದಾಗಿ ಗಗನ್ ಭಗತ್ ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಹಣವನ್ನು ನೀಡಿಲ್ಲ. ಇದರಿಂದ ನನಗೆ ಹಾಗೂ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ.

    ಜಮ್ಮು ಕಾಶ್ಮೀರದ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿರುವ ನಾನು ತನ್ನ ಕುಟುಂಬ ಒಳಿತಿಗಾಗಿ ಒಂದು ವರ್ಷದಿಂದ ಈ ಕುರಿತು ಮಾಹಿತಿ ಬಹಿರಂಗ ಪಡಿಸಿಲ್ಲ. ತನಗೆ 12 ವರ್ಷದ ಮಗ ಹಾಗೂ 4 ವರ್ಷದ ಮಗಳು ಇದ್ದಾರೆ. ಪತಿ ವಿರುದ್ಧ ಆರೋಪದ ಕುರಿತು ಸಾಕ್ಷಿ ನೀಡಲು ತಮ್ಮ ಬಳಿ ಆಧಾರಗಳು ಇದ್ದು, ಅವುಗಳನ್ನು ಬಿಜೆಪಿ ಶಿಸ್ತು ಸಮಿತಿಗೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ಈ ಆಧಾರಗಳನ್ನು ಸಮಿತಿಗೆ ನೀಡದಿರಲು ಗಗನ್ ಭಗತ್ ತಮ್ಮ ಬಳಿ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

    ತಮ್ಮ ಪತಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದು, ಅವರು ಇಂತಹ ಕೆಲಸ ಮಾಡಿ ಸಮಾಜಕ್ಕೆ ಯಾವ ಸಂದೇಶ ನೀಡುತ್ತಾರೆ. ಆದರೆ ಅವರು ಮದುವೆಯಾಗುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಅದನ್ನು ಬಹಿರಂಗ ಪಡಿಸಲಿ ಎಂದು ತಿಳಿಸಿದ್ದಾರೆ.