ಕರಾವಳಿ ಭಾಗದ ದೈವಗಳ (Daiva) ಬಗ್ಗೆ ಇತ್ತೀಚಿನ ದಿನಗಳಲ್ಲಿ ವ್ಯಾಪಕ ಪ್ರಚಾರ ಸಿಗುತ್ತಿದೆ. ಕಾಂತಾರ (Kantara) ಸಿನಿಮಾ ರಿಲೀಸ್ ಆಗಿ, ಅದು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆಯೇ ಅನೇಕರು ದೈವಗಳ ಹೊಸ ಹೊಸ ವಿಚಾರಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. ಹಾಗಾಗಿ ಈ ದೈವಗಳ ನಂಬಿಕೆ ಮತ್ತು ಅಪನಂಬಿಕೆಗಳ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ (Discussion) ನಡೆಯುತ್ತಿದೆ. ಈ ಚರ್ಚೆಗೆ ಕಾರಣವಾಗಿದ್ದು ನಟ ಕಿಶೋರ್ (Kishor) ಹಾಕಿರುವ ಪೋಸ್ಟ್ ಎನ್ನುವುದು ಗಮನಿಸಬೇಕಾದ ಅಂಶ.
ಇತ್ತೀಚೆಗಷ್ಟೇ ದೈವಗಳಿಗೆ ಅಪಮಾನ ಮಾಡಿದವರು ಹೇಗೆ ರಕ್ತಕಾರಿಕೊಂಡು ಸತ್ತರು ಎಂದು ತೋರಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇಂಥದ್ದೊಂದು ವಿಡಿಯೋ ನೋಡಿದ್ದ ಕಿಶೋರ್ ಅವರು, ನಂಬಿಕೆ ಮತ್ತು ಮೂಢನಂಬಿಕೆ ಕುರಿತಾಗಿ ಸುದೀರ್ಘ ಬರೆದು ಪೋಸ್ಟ್ ಮಾಡಿದ್ದರು. ಆ ಫೋಸ್ಟ್ ಕುರಿತಾಗಿಯೇ ಚರ್ಚೆ ನಡೆದಿದೆ. ಕಿಶೋರ್ ಹೇಳಿದ ಮಾತಿಗೆ ಕೆಲವರು ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ
ನಂಬಿಕೆ ಮತ್ತು ಮೂಢನಂಬಿಕೆ ಬಗ್ಗೆ ಮಾತನಾಡಿದ ಕಿಶೋರ್, ತಾವೇ ನಟಿಸಿದ್ದ ಕಾಂತಾರ ಸಿನಿಮಾದಲ್ಲೂ ಅಂಥದ್ದೊಂದು ದೃಶ್ಯವಿದೆ. ಮೂಢನಂಬಿಕೆಯ ಬಗ್ಗೆ ಮಾತನಾಡುವವರು ಅದನ್ನು ಪ್ರಚೋದಿಸುವಂತಹ ಚಿತ್ರದಲ್ಲಿ ನಟಿಸಿದ್ದು ಯಾಕೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಅವರವರ ನಂಬಿಕೆ ಬಗ್ಗೆ ಯಾರೂ ಮಾತನಾಡಬಾರದು. ಅದನ್ನು ಅವರ ಪಾಲಿಗೆ ಬಿಟ್ಟುಬಿಡಬೇಕು ಎಂದೂ ಸಲಹೆ ನೀಡಿದ್ದಾರೆ.
ಕಾಂತಾರ ಸಿನಿಮಾ ಬಂದ ನಂತರ ದೈವಗಳ ಬಗ್ಗೆ ರೀಲ್ಸ್ ಮಾಡಲಾಯಿತು. ಬೇರೆ ಬೇರೆ ಸನ್ನಿವೇಶಗಳಿಗೆ ಆ ಸಿನಿಮಾದ ದೃಶ್ಯಗಳನ್ನು ಹೋಲಿಸಲಾಯಿತು. ಹಾಗೆ ಮಾಡಬೇಡಿ ಎಂದು ಸ್ವತಃ ರಿಷಬ್ ಶೆಟ್ಟಿ (Rishabh Shetty) ಅವರೇ ಕೇಳಿಕೊಂಡರೂ, ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಲೇ ಇವೆ. ಈ ಕಾರಣದಿಂದಾಗಿಯೇ ಕಿಶೋರ್ ಸುದೀರ್ಘ ಬರಹವೊಂದನ್ನು ಬರೆದರು, ಇದೀಗ ಆ ಬರಹದ ಬಗ್ಗೆಯೂ ಚರ್ಚೆ ಆಗುತ್ತಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ:ಯಾದಗಿರಿಯಲ್ಲಿ ಪೊಲೀಸರ ದೌರ್ಜನ್ಯಕ್ಕೆ ಬಡ ಜೀವ ಬಲಿ
ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಚರ್ಚೆ ನಡೆಸಲು ಸರ್ಕಾರಕ್ಕೆ ಭಯವಿದೆ. ರೈತರು ಪ್ರತಿನಿಧಿಸುವ ಭಾರತೀಯ ಜನರ ಬಲವನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಉತ್ತಮ ಕಾರ್ಯ ನಿರ್ವಹಣೆ: ನಿರಾಣಿ ಹೇಳಿಕೆ
ಚಿಕ್ಕಮಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುವವರಿಗೆ ಸಚಿವ ಸಿ.ಟಿ.ರವಿ ಸಾರ್ವಜನಿಕ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ವಿರೋಧಕ್ಕಾಗಿ ವಿರೋಧ ಮಾಡೋದು ಅರ್ಥಹೀನ. 2003ರಲ್ಲಿ ಡ್ರಾಫ್ಟ್ ಆಯ್ತು. ಯುಪಿಎ ಸರ್ಕಾರದ ಅವಧಿಯಲ್ಲಿ ಆ ಡ್ರಾಫ್ಟ್ ನ ಪರಿಷ್ಕರಣೆ ಮಾಡಿ ಮಾಡೆಲ್ ಡ್ರಾಫ್ಟ್ ಆದ ಬಳಿಕ 16 ರಾಜ್ಯಗಳು ಅದನ್ನು ಒಪ್ಪಿಕೊಂಡವು. ಈಗ ಅದನ್ನು ಇನ್ನಷ್ಟು ಸುಧಾರಣೆ ಮಾಡಿ ರೈತ ಸ್ನೇಹಿಯಾಗಿ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಅದನ್ನು ವಿರೋಧ ಮಾಡುವವರಿಗೆ ನಾನು ಸಾರ್ವಜನಿಕ ಚರ್ಚೆಗೆ ಆಹ್ವಾನ ಮಾಡುತ್ತೇನೆ ಎಂದಿದ್ದಾರೆ.
ಈ ಕಾಯ್ದೆಯಿಂದ ರೈತರಿಗೆ ಏನು ತೊಂದರೆ ಆಗುತ್ತೆ ಹೇಳಿ ಎಂದು ವಿರೋಧಿಸುವವರಿಗೆ ಪ್ರಶ್ನಿಸಿದ್ದಾರೆ. ಹೆಚ್ಚು ಜನ ಖರೀದಿದಾರರು ಹುಟ್ಟಿಕೊಂಡರೆ ರೈತರಿಗೆ ಲಾಭ ಹೆಚ್ಚೋ ವಿನಃ ನಷ್ಟವಲ್ಲ. ಯಾರು ಹೆಚ್ಚು ಬೆಲೆ ಕೊಡುತ್ತಾರೆ. ಎಲ್ಲಿ ಹೆಚ್ಚು ಲಾಭ ಸಿಗುತ್ತೆ ರೈತರು ಅಲ್ಲಿ ಹೋಗಿ ಮಾರಬಹುದು. ಸ್ಪರ್ಧೆ ಬೆಳೆಯುತ್ತೆ, ಅವಕಾಶ ಹೆಚ್ಚಾದಾಗ ರೈತರು ಮುಕ್ತವಾಗಿ ಮಾರಾಟ ಮಾಡಲು ಅವಕಾಶ ಸಿಗುತ್ತೆ ಎಂದು ತಿಳಿಸಿದರು.
ಹೋಗಿ ಬೀದಿಗೆ ಸುರಿಯಬೇಕು. ಇಲ್ಲ ಕೇಳಿದಷ್ಟು ದರಕ್ಕೆ ಕೊಡುವ ವ್ಯವಸ್ಥೆ ಹೋಗಿ ಹಲವು ಮಾರ್ಗ, ಮಾರುಕಟ್ಟೆಗಳು ಹುಟ್ಟಿಕೊಂಡಾಗ ಮಾರುವ ಅವಕಾಶ ಹೆಚ್ಚಿರುತ್ತೆ. ಎಲ್ಲಿ ಲಾಭ ಸಿಗುತ್ತೊ ಅಲ್ಲಿಗೆ ರೈತರು ಮಾರುತ್ತಾರೆ. ಇದನ್ನು ವಿರೋಧ ಮಾಡೋದು ಅರ್ಥಹೀನ ಎಂದು ವಿರೋಧಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ತೊಂದರೆಯಾಗುತ್ತೆ. ಯಾರಿಗೆ ಅಂದರೆ ತಮ್ಮದೆ ವಿಂಗ್ ಮಾಡಿಕೊಂಡು ರೇಟ್ ರೈಸ್ ಆಗದಂತೆ ನೋಡಿಕೊಳ್ಳುತ್ತಿದ್ದ ಯಂಕ, ನಾಣಿ, ಸೀನರ ಆಟ ಬಂದ್ ಆಗಲಿದೆ ಎಂದಿದ್ದಾರೆ. ಅಂದರೆ ಈ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದ್ದು, ಮಧ್ಯವರ್ತಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಈ ಕಾಯ್ದೆಗೆ ವಿರೋಧ ವ್ಯಕ್ತಪಡಿಸುವವರು ಚರ್ಚೆಗೆ ಬನ್ನಿ ಎಂದು ಆಹ್ವಾನ ನೀಡಿದ್ದಾರೆ.
ಬೆಂಗಳೂರು: ವಿಧಾನ ಮಂಡಲದ ಅಧಿವೇಶನದಲ್ಲಿ ಐತಿಹಾಸಿವಾಗಿ ಸಂವಿಧಾನ ಮೇಲೆ ಚರ್ಚೆ ನಡೆಯುತ್ತಿದೆ. ಪ್ರತಿಯೊಬ್ಬ ಶಾಸಕರು ಸಂವಿಧಾನದ ಮೇಲೆ ಅರ್ಥ ಗರ್ಭೀತವಾಗಿ ಚರ್ಚೆ ಮಾಡುತ್ತಿದ್ದಾರೆ. ಸಂವಿಧಾನದ ಚರ್ಚೆಯಲ್ಲಿ ಹೊಸ ಹೊಸ ಇತಿಹಾಸದ ವಿಷಯಗಳ ಬೆಳಕಿಗೆ ಬರುತ್ತಿವೆ. ಇವತ್ತು ಕೂಡ ವಿಧಾನ ಪರಿಷತ್‍ನಲ್ಲಿ ನಡೆದ ಸಂವಿಧಾನದ ಚರ್ಚೆ ವೇಳೆ ಕಾಂಗ್ರೆಸ್ ಸದಸ್ಯ ರವಿ ಅವರು ಸಂವಿಧಾನ ರಚನೆಯ ಕುತೂಹಲಕಾರಿ ಅಂಶಗಳನ್ನು ಸದನಕ್ಕೆ ತಿಳಿಸಿದರು.
ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಯಾರು ಮರೆಯುವಂತಹದ್ದಲ್ಲ. ಸಂವಿಧಾನ ಶಿಲ್ಪ ಅಂಬೇಡ್ಕರ್ ಭಾರತ ಸಂವಿಧಾನದ ಜೀವಾಳ ಇದ್ದಂತೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಇದರ ಜೊತೆ ಜೊತೆಗೆ ಈ ಸಂವಿಧಾನವನ್ನು ತಮ್ಮ ಸುಂದರವಾದ ಕೈಬರಹದ ಮೂಲಕ ಬರೆದವರ ಕುತೂಹಲಕಾರಿ ಅಂಶವನ್ನು ಸದಸ್ಯ ರವಿ ಬಿಚ್ಚಿಟ್ಟರು.
479 ಪುಟಗಳ ಭಾರತ ಸಂವಿಧಾನವನ್ನು ತಮ್ಮ ಸುಂದರವಾದ ಕೈಬರಹದಿಂದ ಬರೆದವರು ಪ್ರೇಮ್ ಬಿಹಾರಿ ನಾರಾಯಣ ರಾಯ್ಜಾದಾ. ದೆಹಲಿಯ ಸೆಂಟ್ ಸ್ಟೀಫನ್ ಸನ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದರು. ಅವರ ಸುಂದರ ಬರಹವನ್ನು ಮೆಚ್ಚಿದ್ದ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರೇ ಸಂವಿಧಾನವನ್ನು ಬರೆದು ಕೊಡುವಂತೆ ಪ್ರೇಮ್ ಬಿಹಾರಿ ಅವರಿಗೆ ಮನವಿ ಮಾಡಿದ್ದರು. ನೆಹರು ಮನವಿಗೆ ಒಪ್ಪಿದ ಪ್ರೇಮ್ ಬಿಹಾರಿ ಅವರು ಸಂವಿಧಾನ ಬರೆದುಕೊಡಲು ಒಪ್ಪಿದರು.
ಕೈ ಬರಹದ ಮೂಲಕ ಪ್ರೇಮ್ ಬಿಹಾರಿ ನಾರಾಯಣ ರಾಯ್ಜಾದಾ ಸಂವಿಧಾನ ಬರೆಯಲು ಸುಮಾರು 6 ತಿಂಗಳು ಸಮಯ ತೆಗೆದುಕೊಂಡರಂತೆ. ಈ ಸಂವಿಧಾನ ಬರೆಯಲು ಸುಮಾರು 254 ಪೆನ್ ನಿಬ್ಬುಗಳನ್ನ ಬಳಸಲಾಗಿದೆ ಅಂತೆ. ವಿಶೇಷ ಅಂದ್ರೆ ಸಂವಿಧಾನವನ್ನ ಕೈಬರಹದ ಮೂಲಕ ಬರೆದುಕೊಡಲು ಪ್ರೇಮ್ ಬಿಹಾರಿ ಅವರು ಯಾವುದೇ ಸಂಭಾವನೆ ಪಡೆದಿಲ್ಲ. ಗೌರವ ಧನ ಸ್ವೀಕಾರ ಮಾಡುವಂತೆ ನೆಹರು ಅವರು ಕೇಳಿದರೂ ಅದಕ್ಕೆ ಪ್ರೇಮ್ ಬಿಹಾರಿ ಬೇಡ ಅಂತ ನಿರಾಕರಿಸಿದ್ದರಂತೆ.
ಗೌರವ ಧನದ ಬದಲಾಗಿ ಸಂವಿಧಾನದ ಪ್ರತಿ ಪುಟದ ಅಂತ್ಯದಲ್ಲಿ ತಮ್ಮ ಹೆಸರನ್ನು ಹಾಗೂ ಕೊನೆಯ ಪುಟದಲ್ಲಿ ತಮ್ಮ ಹೆಸರು ಜೊತೆ ತಮ್ಮ ತಾತನ ಹೆಸರು ಬರೆಯಲು ಅನುಮತಿ ಕೊಡಿ ಅಂತ ನೆಹರು ಬಳಿ ಕೇಳಿದ್ದರು. ನೆಹರು ಅವರು ಕೂಡ ಇದಕ್ಕೆ ಒಪ್ಪಿಗೆ ನೀಡಿದ್ದಂತೆ.
ಇನ್ನೊಂದು ಇಂಟ್ರಸ್ಟಿಂಗ್ ವಿಷಯ ಅಂದ್ರೆ ಸಂವಿಧಾನಕ್ಕೆ ಸುಂದರ ಕಲೆ ಸ್ಪರ್ಶ ನೀಡಿದವರು ನಂದಲಾಲ್ ಬೋಸ್ ಅವರು. ರವೀಂದ್ರನಾಥ ಠಾಗೂರ್ ಅವರಿಂದ ಪ್ರೇರಣೆ ಪಡೆದಿದ್ದ ನಂದಲಾಲ್ ಅವರು ಶಾಂತಿನಿಕೇತನದ ಪ್ರಾಂಶುಪಾಲರಾಗಿದ್ದರು. ದೇಶದ ಮಹಾನ್ ಕಲಾವಿದರಲ್ಲಿ ಒಬ್ಬರಾದ ನಂದಲಾಲ್ ಅವರು ತಮ್ಮ ಶಿಷ್ಯರನ್ನ ಒಳಗೂಡಿ ಸಂವಿಧಾನಕ್ಕೆ ಚಿತ್ತಾರ ಮಾಡಿದ್ದರಂತೆ.
ಬೆಂಗಳೂರು: ಇಂದಿನ ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆಗೆ ಸಮಯ ಕೋರಿದ ಬೆನ್ನಲ್ಲೇ ಬಿ.ಎಸ್. ಯಡಿಯೂರಪ್ಪ ತಮ್ಮ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ.
ಸದನದಲ್ಲಿ ಸಿಎಂ ಅವರು ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ನಾನು ವಿಶ್ವಾಸ ಮತ ಮಂಡನೆ ಮಾಡಲು ತೀರ್ಮಾನಿಸಿದ್ದೇನೆ. ಇದನ್ನು ಸದನದ ಸದಸ್ಯರ ಗಮನಕ್ಕೆ ತರುತ್ತಿದ್ದೇನೆ. ನಾನು ಎಲ್ಲದಕ್ಕೂ ತಯಾರಾಗಿ ಬಂದಿದ್ದು, ಸದನದ ಮುಖಾಂತರ ಒಂದು ಉತ್ತಮ ನಿರ್ಧಾರ ಮಾಡುವ ಅವಕಾಶ ಕೋರುತ್ತಿದ್ದೇನೆ ಎಂದರು. ಇದೇ ಸದನದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು ಸಿಎಂ ಮಾತನ್ನು ಕೇಳಿದ್ದ ತಕ್ಷಣ ಕಲಾಪದ ಮಧ್ಯೆ ತಮ್ಮ ಕೊಠಡಿಗೆ ಎದ್ದು ಹೋಗಿದ್ದಾರೆ.
ಕೊಠಡಿಯಲ್ಲಿ ಯಡಿಯೂರಪ್ಪ ಕೆಲ ಬಿಜೆಪಿ ಶಾಸಕರೊಂದಿಗೆ ಚರ್ಚೆ ಮಾಡಿದ್ದಾರೆ. ವಿಶ್ವಾಸ ಮತಕ್ಕೆ ಕೋರಿದ ಹಿನ್ನೆಲೆಯಲ್ಲಿ 14 ದಿನಗಳ ಒಳಗಡೆ ಸ್ಪೀಕರ್ ಯಾವ ದಿನ ಬೇಕಾದರೂ ಅನುಮತಿ ನೀಡಬಹುದು.
ಸಿಎಂ ವಿಶ್ವಾಸಮತಯಾಚನೆಗೆ ಸಮಯ ಕೇಳುತ್ತಾರೆ ಎಂದು ಬಿಜೆಪಿಯವರು ಊಹಿಸಿರಲಿಲ್ಲ. ಸಿಎಂ ಅವರ ನಿರ್ಧಾರ ಬಿಜೆಪಿ ಅಚ್ಚರಿ ಮೂಡಿಸಿದ್ದು, ಸರ್ಕಾರ ರಕ್ಷಣೆಗೆ ದೋಸ್ತಿ ನಾಯಕರು ಏನು ಪ್ಲಾನ್ ಮಾಡಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಬಿಎಸ್‍ವೈ ಸಿಎಂ ಅವರು ಪ್ಲಾನ್ ಏನು, ನಮ್ಮ ಮುಂದಿನ ನಡೆ ಏನು? ಎಂಬುದರ ಬಗ್ಗೆ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ.
ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ ಮಂಗಳವಾರದವರೆಗೂ ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆದೇಶ ನೀಡಿದೆ. ಈ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತಿಲ್ಲ, ಜೊತೆಗೆ ಅವರನ್ನು ಅನರ್ಹ ಮಾಡುವಂತಿಲ್ಲ ಎಂದು ಆದೇಶಿಸಿದೆ. ಕೋರ್ಟಿನ ಇಂದಿನ ಆದೇಶದಿಂದ ದೋಸ್ತಿ ಸರ್ಕಾರ ತಾತ್ಕಾಲಿಕವಾಗಿ ಸೇಫ್ ಆಗಿದೆ. ಇತ್ತ ಅನರ್ಹ ಭೀತಿಯಲ್ಲಿದ್ದ ಅತೃಪ್ತರು ಕೂಡ ರಿಲೀಫ್ ಆಗಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆಗೂ ಮೊದಲೇ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಶುರುವಾಗಿದ್ದು, ಈಗಾಗಲೇ ಒಂದು ವಿಕೆಟ್ ಉರುಳಿಸಿ ಆಗಿದೆ. ಇನ್ನೂ ಮೂರು ವಿಕೆಟ್ ಬೀಳಿಸಲು ತಮ್ಮ ಭಂಟನ ಮೂಲಕ ಸದ್ದಿಲ್ಲದೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಮ್ಮೆ `ಆಪರೇಷನ್’ ಕಸರತ್ತು ಮಾಡುತ್ತಿದ್ದಾರೆ.
ಬಿಎಸ್‍ವೈ ದೇವದುರ್ಗ ಶಾಸಕ ಶಿವನಗೌಡ ನಾಯಕ್ ರನ್ನು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡುವಂತೆ ಸೂಚಿಸಿದ್ದಾರೆ. ಹೀಗಾಗಿ ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ನಲ್ಲಿರುವ ರಮೇಶ್ ಜಾರಕಿಹೊಳಿ ಮನೆಯಲ್ಲಿಯೇ ಭೇಟಿ ನೀಡಿ ಬರೋಬ್ಬರಿ ಒಂದೂವರೆ ಗಂಟೆ ಚರ್ಚೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ಸಿಗೆ ರಾಜೀನಾಮೆ ಕೊಟ್ಟಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ ರಾಜೀನಾಮೆಯ ಸುಳಿವು ಬೆನ್ನಲ್ಲೇ ಅವರ ಮನವೊಲಿಸಲು ಕುಮಾರಸ್ವಾಮಿ ದಿಢೀರ್ ಮಾತುಕತೆ ನಡೆಸಿದ್ದರು. ಆದಾದ ಬಳಿಕ ಸ್ಪೀಕರ್ ಅವರಿಂದ ನಾಲ್ವರು ಅತೃಪ್ತ ನಾಯಕರಿಗೆ ಸಭೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು. ಸ್ಪೀಕರ್ ನೋಟಿಸ್ ಕೊಟ್ಟ ಬೆನ್ನಲ್ಲೇ ಬಿಜೆಪಿಯಿಂದ ಮಾತುಕತೆ ನಡೆಯುತ್ತಿದೆ.
ರಮೇಶ್ ಜಾರಕಿಹೊಳಿ ತಂಡ ಸೆಳೆಯಲು ಬಿಜೆಪಿಯಿಂದ ಕಸರತ್ತು ಮುಂದುವರಿದಿದ್ದು, ಇವತ್ತು ಸಹ ರಮೇಶ್ ಜಾರಕಿಹೊಳಿಗೆ ಬಿಜೆಪಿ ಗಾಳ ಹಾಕಿದೆ. ಬಿಜೆಪಿಯ ಪ್ರಮುಖ ದೇವದುರ್ಗ ಶಾಸಕ ಶಿವನಗೌಡ ನಾಯಕ್ ರಿಂದ ರಮೇಶ್ ಜಾರಕಿಹೊಳಿ ಭೇಟಿ ಮಾಡಿಸಲಾಗಿದೆ. ಬೆಂಗಳೂರಿನ ಸೆವೆನ್ ಮಿನಿಸ್ಟರ್ಸ್ ಕ್ವಾರ್ಟರ್ಸ್ ಮನೆಯಲ್ಲಿ ಮಹತ್ವದ ಮಾತುಕತೆ ನಡೆದಿದ್ದು, ರಮೇಶ್ ಜಾರಕಿಹೊಳಿ ಮನೆಯಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಕೂಡ ಹಾಜರಾಗಿದ್ದರು.
ಯಡಿಯೂರಪ್ಪ ಅವರು ಕಾಂಗ್ರೆಸ್ ಅತೃಪ್ತರಿಗೆ ಹೊಸ ಆಫರ್ ಕೊಟ್ಟಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಜಾರಕಿಹೊಳಿಗೆ ಟಿಕೆಟ್ ಆಫರ್ ಮಾಡಿದ್ದಾರೆ. ಯಡಿಯೂರಪ್ಪ ದೆಹಲಿಯಲ್ಲಿ ಕೂತೇ ಶಿವನಗೌಡ ನಾಯಕ್ ಮೂಲಕ ಮಾತುಕತೆಗೆ ಸ್ಕೆಚ್ ಹಾಕಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಮೇಶ್ ಜಾರಕಿಹೊಳಿ ಜೊತೆ ಶಿವನಗೌಡ ನಾಯಕ್ ಚರ್ಚೆ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ಮುಗಿಸಿ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಯಾವುದೇ ಪ್ರತಿಕ್ರಿಯೆ ಕೊಡದೇ ಕಾರೊಳಗೆ ಕೂತು ಮುಖ ಆಕಡೆ ತಿರುಗಿಸಿಕೊಂಡು ಹೊರಟ್ಟಿದ್ದಾರೆ.
ನವದೆಹಲಿ: ವಿದ್ಯಾರ್ಥಿಗಳ ಜೊತೆಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.
ಶನಿವಾರ ರಾತ್ರಿ ಸ್ಮಾರ್ಟ್ ಇಂಡಿಯಾ ಹ್ಯಾಕಾಥಾನ್‍ನಲ್ಲಿ ಪ್ರಧಾನಿ ಜೊತೆಗಿನ ಸಂವಾದದ ವೇಳೆ ಡೆಹ್ರಾಡೂನ್‍ನ ವಿದ್ಯಾರ್ಥಿನಿಯೊಬ್ಬಳು ಡೈಲೆಕ್ಸಿಕ್ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳು ಅಂದರೆ ಓದು-ಬರಹದ ಕಲಿಕೆ ನಿಧಾನಗತಿಯಲ್ಲಿರುವ ಮಕ್ಕಳಿಗೆ ಸಹಾಯ ಮಾಡಲು ನಿರ್ಧರಿಸಿದ್ದೇವೆ. ತಾರೇ ಜಮೀನ್ ಪರ್ ಸಿನಿಮಾದಲ್ಲಿ ನೋಡಿದಂತೆ ಈ ಮಕ್ಕಳು ಅತ್ಯಂತ ಬುದ್ಧಿವಂತರು ಮತ್ತು ಸೃಜನಶೀಲರು ಆಗಿರುತ್ತಾರೆ ಎಂದು ಹೇಳಿದಳು.
ಈ ವೇಳೆ ಮಧ್ಯಪ್ರವೇಶಿಸಿದ ಪ್ರಧಾನಿ ಮೋದಿ 40-50 ವರ್ಷದ ಮಕ್ಕಳಿಗೂ ಈ ಕಾರ್ಯಕ್ರಮ ಉಪಯೋಗ ಆಗುತ್ತಾ ಎಂದು ಪರೋಕ್ಷವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾಲೆಳೆದರು. ಮೋದಿ ಅವರ ಈ ಉತ್ತರ ಕೇಳಿ ಅಲ್ಲಿ ಕುಳಿತ್ತಿದ್ದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿದರು. ಬಳಿಕ “ಆಗುತ್ತೆ ಸರ್” ಎಂದು ವಿದ್ಯಾರ್ಥಿನಿ ಮೋದಿ ಅವರಿಗೆ ಉತ್ತರಿಸಿದ್ದಳು.
ವಿದ್ಯಾರ್ಥಿನಿಯಿಂದ ಈ ಉತ್ತರ ಬಂದ ಕೂಡಲೇ “ಅಂಥ ಮಕ್ಕಳ ತಾಯಂದಿರು ತುಂಬಾ ಖುಷಿ ಆಗಬಹುದು” ಎಂದು ಹೇಳಿದರು. ಮಕ್ಕಳ ಕಲಿಕೆಯ ಸಮಸ್ಯೆಯನ್ನೂ ರಾಜಕೀಯಕ್ಕಾಗಿ ತಮಾಷೆ ಮಾಡಿದ ಮೋದಿ ಎಷ್ಟು ಸರಿ ಎಂದು ಪ್ರಶ್ನಿಸಿ ನೆಟ್ಟಿಗರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
PM #Modi cracks a crude joke about dyslexia & then vulgarly laughs at it.
In the past, he has mocked the pain of parents losing a child by saying that they forget the child in a year.
ಬೆಂಗಳೂರು: ರಾಜ್ಯ ರಾಜಕೀಯ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆಪರೇಷನ್ ಕಮಲ, ಕಾಂಗ್ರೆಸ್ ಒಳ ಬೇಗುದಿಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಅತೃಪ್ತ ಶಾಸಕರೊಂದಿಗೆ ಸಂಧಾನ ಮಾತುಕತೆ ನಡೆಸಿದ್ದಾರೆ.
ಈ ಮಾತುಕತೆ ವೇಳೆ ಬೆಳಗಾವಿ ರಾಜಕೀಯದಲ್ಲಿ ಮೂಗು ತೂರಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಕೆಶಿಗೆ ಹೈಕಮಾಂಡಿನಿಂದಲೇ ಎಚ್ಚರಿಕೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಒತ್ತಡ ಹೇರಿದ್ದಾರೆ. ಇದು ಸಾಧ್ಯವಾಗದಿದ್ದರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡಿ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಖಡಕ್ ಆಗಿ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನು ಓದಿ: ಕೊನೆಗೂ ಸಚಿವ ರಮೇಶ್ ಜಾರಕಿಹೊಳಿಗೆ ಮಣಿದ ರಾಜ್ಯ ಸರ್ಕಾರ
ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಸೂಚಿಸಿರುವ ಸಿದ್ದರಾಮಯ್ಯ, ಹೈಕಮಾಂಡ್ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೊಂದಿಗೂ ಸಭೆ ನಡೆಸಿದ ಸಿದ್ದರಾಮಯ್ಯ, ಸೆ.30ರವರೆಗೆ ಕಾಯುವಂತೆ ಸೂಚಿಸಿದ್ದಾರೆ.
ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಅತೃಪ್ತರಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಧಾನ ಮಾತುಕತೆಗಳ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ಸಹಿತ ರಾಜ್ಯ ನಾಯಕರು ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದನ್ನು ಓದಿ: ಸ್ವ ಕ್ಷೇತ್ರದಲ್ಲೇ ಸಿಎಂಗೆ ಮುಖಭಂಗ: ಕೈ ಬೆಂಬಲಿತ ಬಿಜೆಪಿ ಅಭ್ಯರ್ಥಿಗೆ ಜಯ
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೆಹಲಿಗೆ ಪ್ರಯಾಣಿಸುತ್ತಿದ್ದು, ಹೈಕಮಾಂಡ್ ಬುಲಾವ್ ನೀಡಿಲ್ಲ ಸ್ಪಷ್ಪಪಡಿಸಿದ್ದಾರೆ. ಕಾಂಗ್ರೆಸ್ ಒಳ ಬೇಗುದಿಯ ನಡುವೆಯೇ, ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯರೇ ಶ್ರೀರಕ್ಷೆ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯರೇ ಕಂಟಕ ಅನ್ನೋದೆಲ್ಲಾ ಸುಳ್ಳು. ಅವರ ಶ್ರೀರಕ್ಷೆಯಿಂದಲೇ ಈ ಸರ್ಕಾರ ಐದು ವರ್ಷ ಅಧಿಕಾರ ಪೂರೈಸಲಿದೆ ಅಂತ ತಿಳಿಸಿದ್ದಾರೆ. ನಮ್ಮ ಬಳಿ 104 ಶಾಸಕರಿದ್ದಾರೆ ಅಂತ ಹೇಳುವವರೇ ಈ ಸರ್ಕಾರಕ್ಕೆ ವಿಲನ್ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಸುಧಾಕರ್ ದೂರು:
ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅವರಂತೂ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಇವರಿಬ್ಬರ ನಿರ್ಲಿಪ್ತತೆಯಿಂದಾಗಿ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗಿದೆ ಅಂತ ದೂರಿದ್ದಾರೆ. ಸಚಿವ ಜಾರಕಿಹೊಳಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ ಅತೃಪ್ತ ಶಾಸಕರು ದು:ಖ-ದುಮ್ಮಾನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ: ಸಾಂಬಾರ್ ಬಡಿಸುವ ವೇಳೆ ಅನ್ನದ ತಟ್ಟೆ ಕಿತ್ಕೊಂಡ್ರು- ಪಕ್ಷೇತರ ಶಾಸಕ ನಾಗೇಶ್ ಸಿಟ್ಟು
ಕ್ಷೇತ್ರಗಳ ಅಭಿವೃದ್ಧಿ, ಮಂತ್ರಿ ಮಾಡದಿರುವುದಕ್ಕೆ ಅಸಮಾಧಾನವಿದ್ದು ಮಂಗಳವಾರ ಅತೃಪ್ತ ಶಾಸಕರೆಲ್ಲಾ ಸೇರಿ ನಮ್ಮ ಮನಸ್ಸಿನಲ್ಲಿ ಏನಿದೆ ಅಂತ ಹೇಳುತ್ತೇವೆ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ. ಶಾಸಕ ಭೀಮಾನಾಯ್ಕ್ ಕೂಡ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. ಈ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕವಾಗಲಿದ್ದು, ಅಲ್ಲಿಯವರೆಗೆ ಕಾಯಿರಿ ಅಂತ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನು ಓದಿ: ನಾನ್ಯಾಕೆ ರಾಜೀನಾಮೆ ಕೊಡ್ಲಿ ಸ್ವಾಮಿ: ರಮೇಶ್ ಜಾರಕಿಹೊಳಿ
ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವೇನು?
– ದೋಸ್ತಿ ಸರ್ಕಾರವಿದ್ದರೂ ನಮ್ಮನ್ನು ಕಡೆಗಣನೆ ಮಾಡಲಾಗಿದೆ
– ಡಿಸಿಎಂ ಪರಮೇಶ್ವರ್, ಸಚಿವ ಡಿಕೆಶಿ ಸ್ಪಂದಿಸುತ್ತಿಲ್ಲ
– ನಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಯಾರೂ ಅಲಿಸುತ್ತಿಲ್ಲ
– ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕರಿಗೆ ಸೀಮಿತವಾಗಿದ್ದಾರೆ
– ಸರ್ಕಾರ ಮಟ್ಟದಲ್ಲಿ ನಮ್ಮ ಸಮಸ್ಯೆಗಳು ಬಗೆಹರಿಯುತ್ತಿಲ್ಲ
– ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಹೋಗಲು ಆಗುತ್ತಿಲ್ಲ
– ನಾವು 3-4 ಬಾರಿ ಗೆದ್ದಿದ್ದೇವೆ ನಮಗೂ ಸಚಿವ ಸ್ಥಾನ ಬೇಕು
ಬೆಂಗಳೂರು: ವಿಧಾನಸಭೆಯಲ್ಲಿ ಮೊದಲ ಬಾರಿಗೆ ಚರ್ಚೆಯಲ್ಲಿ ಪಾಲ್ಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಪಕ್ಷದ ನಾಯಕ ಸಚಿವ ಹೆಚ್‍ಡಿ ರೇವಣ್ಣಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಯಡಿಯೂರಪ್ಪ ಇರುವಾಗ ಹಾಲಿಗೆ ಎರಡು ರೂ. ಪ್ರೋತ್ಸಾಹ ಧನ ಇತ್ತು. ನಾನು ಅದನ್ನು 4-5 ರೂ. ಮಾಡಿದೆ. ಆದಾದ್ಮೇಲೆ 50,000 ಹಾಲು ಒಂದು ದಿನಕ್ಕೆ ಬರುತ್ತಿದ್ದದ್ದು, 75 ಲಕ್ಷ ಹಾಲು ಒಂದು ದಿನಕ್ಕೆ ಹೆಚ್ಚಾಗಿತ್ತು. ಆಗಂತ ನಾನು ಕೆಎಂಎಫ್‍ನಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಲ್ಲ. ಅನಗತ್ಯ ನೇಮಕಾಗಿ ಮಾಡಿಕೊಂಡಿದ್ದಾರೆ. ಅಗತ್ಯಕ್ಕಿಂತ ಹೆಚ್ಚು ಸಂಬಳ ಕೊಡುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಕೊಟ್ಟಿದ್ದ ಪ್ರೋತ್ಸಾಹ ಧನ ದುರುಪಯೋಗ ಆಗಿಲ್ಲ ಅಂತ ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಮಾತನಾಡಿದ ಬಳಿಕ ಕೆಲವು ಹಾಲು ಉತ್ಪಾದಕರ ಸಂಘಗಳಲ್ಲಿ ಸದಸ್ಯರೇ ರೈತರ ಹೆಸರಲ್ಲಿ ನಕಲಿ ಖಾತೆಗಳನ್ನು ತೆರೆದು ಪ್ರೋತ್ಸಾಹ ಧನ ಕಬಳಿಸುತ್ತಿರುವುದು ನಿಜ. ಇದನ್ನು ತಪ್ಪಿಸಿ ನೈಜ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಅಂತ ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಉತ್ತರ ನೀಡಿದರು.