Tag: Disproportionate Assets

  • ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

    ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ – ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಯತ್ನಾಳ್

    ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ (Disproportionate Assets) ಸಂಪಾದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಆದೇಶದ ಅನ್ವಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

    ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿತ್ತು. ಸಿಬಿಐಗೆ (CBI) ನೀಡಿದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: FIRE ಮನವಿಯನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ : ಸಿಎಂ

    ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಎರಡು ಅರ್ಜಿಗಳನ್ನು ವಜಾ ಮಾಡಿತ್ತು. ಈ ಹಿನ್ನೆಲೆ ಸುಪ್ರೀಂಕೋರ್ಟ್‌ಗೆ ಯತ್ನಾಳ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹೋಟೆಲ್‌ಗೆ ನುಗ್ಗಿದ ಟಿಪ್ಪರ್ – ಇಬ್ಬರ ದುರ್ಮರಣ

    ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ತಮ್ಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಶಾಲಾ-ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

    ಹೈಕೋರ್ಟ್ ಆದೇಶದ ವಿರುದ್ಧ ಪಿಸಿಬಿ ಅರ್ಜಿ:
    ಚಿಂಚೋಳಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಹೈಕೋರ್ಟ್ ಆದೇಶ ನೀಡಿದ ಹಿನ್ನೆಲೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ನಿಯಮಗಳನ್ನು ಉಲ್ಲಂಘಿಸಿರುವ ಕಾರ್ಖಾನೆ ತೆರೆಯಲು ಅನುಮತಿ ನೀಡಬಾರದು ಎಂದು ಅದು ಅರ್ಜಿಯಲ್ಲಿ ಒತ್ತಾಯಿಸಿದೆ. ಪಿಸಿಬಿ ಅರ್ಜಿ ಸಲ್ಲಿಕೆ ಹಿನ್ನೆಲೆ ದೆಹಲಿಯಲ್ಲಿ ಬೀಡು ಬಿಟ್ಟಿರುವ ಯತ್ನಾಳ್ ಕಾನೂನು ಸಮರಕ್ಕೆ ತಯಾರಿ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೂರು ತಿಂಗಳಲ್ಲಿ ದರ್ಶನ್‌ ಬಿಡುಗಡೆ ಆಗ್ತಾರೆ – ಬೀರಲಿಂಗೇಶ್ವರ ದೈವ ಭವಿಷ್ಯವಾಣಿ

  • ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಜಮೀರ್‌ ಲಾಕ್‌

    ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಜಮೀರ್‌ ಲಾಕ್‌

    ಬೆಂಗಳೂರು: ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್‌ ಅಹ್ಮದ್‌ ಲಾಕ್‌ ಆಗಿದ್ದಾರೆ.

    ಲೋಕಾಯುಕ್ತ ಪ್ರಬಲವಾಗಿದ್ದಾಗ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ತೆರೆದಿದ್ದೆ ಕಾಂಗ್ರೆಸ್ ಸರ್ಕಾರ. ಸಿದ್ದರಾಮಯ್ಯ ಅವಧಿಯಲ್ಲಿ ಎಸಿಬಿಯನ್ನು ತರಲಾಗಿತ್ತು.

    ಲೋಕಾಯುಕ್ತಗಿಂತ ಎಸಿಬಿಯನ್ನು ಪ್ರಬಲ ಮಾಡುತ್ತೇವೆ ಎಂದು ಸರ್ಕಾರ ಹೇಳಿದ್ದರೂ ಕೆಳಹಂತದ ಅಧಿಕಾರಿಗಳ ಬಂಧನಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ಈಗ ಕಾಂಗ್ರೆಸ್‌ನ ಪ್ರಭಾವಿ ಶಾಸಕನ ಮನೆ ಮೇಲೆ ಎಸಿಬಿ ದಾಳಿ ಮಾಡಿ ಸುದ್ದಿಯಾಗಿದೆ.  ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಪೋಷಿಸುತ್ತಿದೆ ಬಿಜೆಪಿ
    ಲೋಕಾಯುಕ್ತರ ಬಳಿ ಇದ್ದ ಭ್ರಷ್ಟಾಚಾರದ ವಿರುದ್ಧದ ದಾಳಿ, ತನಿಖೆ ನಡೆಸುವ ಅಧಿಕಾರವನ್ನು ಕಸಿದುಕೊಂಡು ಎಸಿಬಿಗೆ ನೀಡಲು 2016ರ ಮಾರ್ಚ್ 14 ರಂದು ಅಂದಿನ ಕಾಂಗ್ರೆಸ್‌ ಸರಕಾರ ಆದೇಶ ಹೊರಡಿಸಿತು. ಅದರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ ಮುಂದೆ ಬಾಕಿ ಇದೆ.

    ಎಸಿಬಿ ರದ್ದು ಮಾಡಿದಾಗ ಪ್ರತಿಪಕ್ಷದಲ್ಲಿದ್ದ ಬಿಜೆಪಿ ತಾನು ಅಧಿಕಾರಕ್ಕೆ ಬಂದರೆ ತಕ್ಷಣವೇ ಎಸಿಬಿ ರದ್ದು ಮಾಡಿ, ಲೋಕಾಯುಕ್ತಕ್ಕೆ ಮರಳಿ ಅಧಿಕಾರ ನೀಡಲಾಗುವುದೆಂದು ಹೇಳಿತ್ತು. ಆದರೆ ಸದ್ಯ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಇಲ್ಲಿಯವರೆಗೆ ರದ್ದು ಮಾಡುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ.

    Live Tv

    [brid partner=56869869 player=32851 video=960834 autoplay=true]

  • ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ

    ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ  ಶಾಸಕ ಜಮೀರ್‌ ಅಹ್ಮದ್‌ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ.

    ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆ ಸೇರಿದಂತೆ ಜಮೀರ್‌ಗೆ ಸಂಬಂಧಿಸಿದ 5 ಕಡೆ ದಾಳಿ ನಡೆದಿದೆ.

    ಈ ಹಿಂದೆ ಇಡಿ ಜಮೀರ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೇ ವಲಯದಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲ್ಯಾಟ್‌, ಸದಾಶಿವನಗರದಲ್ಲಿರುವ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದ್ದು ಎಸಿಬಿ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ.

    ಇಡಿ ಅಧಿಕಾರಿಗಳ ದಾಳಿ ವೇಳೆ ಸರ್ಕಾರಿ ಯೋಜನೆಯೊಂದರಲ್ಲಿ ಬಾರಿ ಅವ್ಯವಹಾರ ಆಗಿರುವ ಸಂಬಂಧ ದಾಖಲೆ ಲಭ್ಯವಾಗಿತ್ತು. 6 ತಿಂಗಳ ಹಿಂದೆ ಇಡಿ ಈ ಬಗ್ಗೆ ವರದಿ ನೀಡಿತ್ತು. 2 ತಿಂಗಳ ಎರಡನೇ ಬಾರಿಗೆ ವರದಿ ನೀಡಿತ್ತು. ಈ ದಾಖಲೆ ಅಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಸಿಬಿ ಪ್ರಕರಣ ದಾಖಲಿಸಿತ್ತು.

    ಜಮೀರ್‌ ಮೇಲಿರುವ ಆರೋಪ ಏನು?
    ಮುಂಬೈನಲ್ಲಿ ಈಗಾಗಲೇ ಟ್ರಾವೆಲ್ಸ್ ಕಂಪನಿಯ ಮಾಲೀಕತ್ವ ಹೊಂದಿರುವ ಜಮೀರ್‌ ವಿದೇಶದಲ್ಲೂ ಆಸ್ತಿ ಮಾಡಿದ್ದಾರೆ ಎಂಬ ಆರೋಪ ಇದೆ. ದುಬೈನಲ್ಲಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪವಿದ್ದು, ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್ ಜೊತೆ ಸಂಬಂಧ ಹೊಂದಿದ್ದು ಮನ್ಸೂರ್ ಖಾನ್ ಕಂಪನಿಯ ಮೂಲಕ ಹಣಕಾಸಿನ ವ್ಯವಹಾರ ನಡೆಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಶ್ರೀಲಂಕಾದಲ್ಲಿ ಶಿಷ್ಯರ ಹೆಸರಿನಲ್ಲಿ ಕ್ಯಾಸಿನೋ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಇದೆ.