Tag: disproportionate assets case

  • ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

    ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

    ಬೆಂಗಳೂರು: ಸಚಿವ ಜಮೀರ್ ಅಹ್ಮದ್ (Zameer Ahmed) ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ (Dinesh Gundurao) ಲೋಕಾಯುಕ್ತ ಪೊಲೀಸರು (Lokayuktha Police) ನೋಟಿಸ್ ನೀಡಿದ್ದಾರೆ.

    ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿದ್ದ ದಿನೇಶ್ ಗುಂಡೂರಾವ್‌ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್‌ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.

    ಏನಿದು ಪ್ರಕರಣ?
    2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್ ಅಹಮದ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

    ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.

    ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು.

    ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಸಚಿವ ಜಮೀರ್‌ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್‌

  • ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    – ಜಮೀರ್ ಮನೆ ಖರೀದಿಗೆ ಸಾಲ ಕೊಟ್ಟಿದ್ದ ಉದ್ಯಮಿ

    ಬೆಂಗಳೂರು: ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು (KGF Babu) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ (Lokayukta) ಪೊಲೀಸರು ನೋಟಿಸ್ ನೀಡಿದ್ದಾರೆ.

    ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್ ಬಾಬು ಮತ್ತು ಜಮೀರ್ ಅಹ್ಮದ್ ನಡುವೆ ಹಣದ ವ್ಯವಹಾರ ನಡೆದಿರೋದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಅವರಿಗೆ ನೋಟಿಸ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು, 7 ದಿನಗಳ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌

     ತನಿಖೆ ವೇಳೆ ಸಚಿವ ಜಮೀರ್ ಅಹ್ಮದ್‌ಗೆ ಕೆಜಿಎಫ್ ಬಾಬು ಅವರು 2013ರಲ್ಲಿ ಮನೆ ಖರೀದಿಗೆ 3.70 ಕೋಟಿ ರೂ. ಸಾಲ ನೀಡಿರುವುದು ತಿಳಿದುಬಂದಿದೆ. ಹಾಗಾಗಿ ಯಾವ ಕಾರಣಕ್ಕಾಗಿ ಹಣ ನೀಡಿದ್ದೀರಿ? ಇಬ್ಬರ ವ್ಯವಹಾರಗಳೇನು? ಈ ಸಂಬಂಧ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾನ್‌ಸ್ಟೆಬಲ್‌, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ

    ಇದೇ ಪ್ರಕರಣದಲ್ಲಿ ಜಮೀರ್‌ಗೆ 2 ಕೋಟಿ ರೂ. ಸಾಲ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಅವರೂ ಕಳೆದ ವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದರು.

  • ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

    ಬಿಜೆಪಿಯವರ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ: ಡಿಕೆಶಿ

    -ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? 

    ಬೆಂಗಳೂರು: ಬಿಜೆಪಿಯವರು (BJP) ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ (Disproportionate assets case) ಸಂಬಂಧ ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಈ ವೇಳೆ, ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

    ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

    ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

    ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

  • ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ – ಸಿಬಿಐ ವಿಚಾರಣೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

    ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ (Disproportionate Assets Case) ಸಿಬಿಐಗೆ (CBI) ಅನುಮತಿಸಿದ್ದ ಆದೇಶವನ್ನು ಸರ್ಕಾರವು ಹಿಂಪಡೆದಿರುವುದರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ (High Court) ಆದೇಶವನ್ನು ಕಾಯ್ದಿರಿಸಿದೆ.

    ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಡಿ.ಕೆ ಶಿವಕುಮಾರ್ ಎಫ್‍ಐಆರ್ ರದ್ದಿಗೆ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ ಎಂದು ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದರು.

    ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ, ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಸಿಬಿಐ ಎಫ್‍ಐಆರ್ ದಾಖಲಿಸಿದೆ. ಈಗ ರಾಜ್ಯ ಸರ್ಕಾರ ಒಪ್ಪಿಗೆ ಹಿಂಪಡೆದಿದೆ. ಅನುಮತಿ ಹಿಂಪಡೆದ ನಂತರ ಎಫ್‍ಐಆರ್ ಏನಾಗಲಿದೆ? ಸಿಬಿಐ ತನಿಖೆಯ ಕುರಿತ ಪ್ರಶ್ನೆ ಹೈಕೋರ್ಟ್ ಮುಂದಿದೆ ಎಂದು ವಾದ ಮಂಡಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

    ಸಿಬಿಐಗೆ ಅನುಮತಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

    ಡಿಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‍ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‍ಐಆರ್‍ನಲ್ಲಿ ಉಲ್ಲೇಖಿಸಿದೆ.

    2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

    ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

    ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ. ಸಿಬಿಐ ಕೂಡಾ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್ ಆದೇಶದ ಮೇಲೆ ಡಿಕೆ ಶಿವಕುಮಾರ್ ಭವಿಷ್ಯ ನಿಂತಿದೆ.

  • ಲೋಕಾಯುಕ್ತಕ್ಕೆ ತನಿಖೆ ವರ್ಗಾಯಿಸಿದ್ರೂ ಸಿಬಿಐ ನೋಟಿಸ್‌ ನೀಡೋದು ಸರಿಯಲ್ಲ: ಸಿಂಘ್ವಿ ವಾದ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ (Disproportionate Assets Case) ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ (High Court) ಅರ್ಜಿ ವಿಚಾರಣೆ ನಡೆಯಿತು.

    ಸರ್ಕಾರ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್‌ ಪಡೆದ ಬಗ್ಗೆ ನ್ಯಾ. ಕೆ. ಸೋಮಶೇಖರ್, ನ್ಯಾ. ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಈಗಾಗಲೇ ಈ ಪ್ರಕರಣದ ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿವಾದಿಯಾಗಿಸಲು ಮನವಿ ಮಾಡಲಾಯಿತು.  ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

    ಈ ವೇಳೆ ಸಿಬಿಐ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ, ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದರೂ ಸಿಬಿಐ ನೋಟಿಸ್‌ ನೀಡುತ್ತಿದೆ. ನೋಟಿಸ್‌ ನೀಡುತ್ತಿರುವ ಸಿಬಿಐ ಕ್ರಮ ಸರಿಯಲ್ಲ ಎಂದು ಮನವಿ ಮಾಡಿದರು.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಬಿಐ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿತು.

  • ಅಕ್ರಮ ಆಸ್ತಿಗಳಿಕೆ ಕೇಸ್‌ – ಈಗ ಡಿಕೆಶಿ ವಿರುದ್ಧ ಲೋಕಾಯುಕ್ತದಿಂದಲೂ ತನಿಖೆ

    ಅಕ್ರಮ ಆಸ್ತಿಗಳಿಕೆ ಕೇಸ್‌ – ಈಗ ಡಿಕೆಶಿ ವಿರುದ್ಧ ಲೋಕಾಯುಕ್ತದಿಂದಲೂ ತನಿಖೆ

    ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು (Disproportionate Assets Case) ಈಗ ಎರಡು ಸಂಸ್ಥೆಗಳು ತನಿಖೆ ನಡೆಸಲಿದೆ.

    ಹೌದು. ಅಕ್ರಮ ಆಸ್ತಿ ಪ್ರಕರಣದ ತನಿಖೆಯನ್ನು ಲೋಕಾಯುಕ್ತದಿಂದ (Lokayukta) ನಡೆಸಲು ಸರ್ಕಾರ ಮುಂದಾಗಿದೆ. ಡಿಕೆ ಶಿವಕುಮಾರ್‌ ಅವರೇ ಈ ವಿಚಾರವನ್ನು ತಿಳಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಆಗಿದೆ ಎಂದು ಹೇಳಿದ್ದಾರೆ.

     

    2013ರಿಂದ 2018ರವರೆಗೆ 74 ಕೋಟಿ ರೂ. ಅಕ್ರಮ ಆಸ್ತಿಯನ್ನು ಡಿಕೆಶಿ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈಗ ಸಿಬಿಐ (CBI) ತನಿಖೆ ನಡೆಸಿದ್ದು ಚಾರ್ಜ್‌ಶೀಟ್‌ (Chargesheet) ಸಲ್ಲಿಕೆ ಮಾಡಲು ಮಾತ್ರ ಬಾಕಿಯಿದೆ.  ಇದನ್ನೂ ಓದಿ: ಫ್ಯಾನ್‍ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಏನಿದು ಪ್ರಕರಣ?
    2017 ರಲ್ಲಿ ಡಿ.ಕೆ.ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‌ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ (Income Tax Department) ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ.ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದ ಇಡಿ ಪಿಸಿ ಆ್ಯಕ್ಟ್ ನಡಿ ತನಿಖೆ ನಡೆಸಲು ಸಿಬಿಐಗೆ ನೀಡಲು ಶಿಫಾರಸು ಮಾಡಿತ್ತು. ಶಿಫಾರಸು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು.

     

  • ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ- ಡಿಕೆಶಿಗೆ ಮತ್ತೆ ನೋಟಿಸ್ ನೀಡುತ್ತಾ ಸಿಬಿಐ?

    ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ- ಡಿಕೆಶಿಗೆ ಮತ್ತೆ ನೋಟಿಸ್ ನೀಡುತ್ತಾ ಸಿಬಿಐ?

    ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ (Disproportionate Assets Case) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೆ ನೋಟಿಸ್ ನೀಡುತ್ತಾ ಎಂಬ ಪ್ರಶ್ನೆಯೊಂದು ಎದ್ದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯ ಬಳಿ ಹೈಕೋರ್ಟ್ ಆದೇಶದ ಪ್ರತಿ ಲಭ್ಯವಿದೆ. ಹಾಗಿದ್ರೆ ಹೈಕೋರ್ಟ್ (High Court) ಆದೇಶ ಪ್ರತಿಯಲ್ಲಿರುವ ಅಂಶಗಳೇನು..?, ಡಿಕೆ ಶಿವಕುಮಾರ್ ಇನ್ನೂ ರಿಲೀಫ್ ಸಿಕ್ಕಿಲ್ವಾ…?, ಕೇಸಿನಲ್ಲಿ ಸಿಬಿಐ ಮತ್ತೆ ನೋಟಿಸ್ ನೀಡುತ್ತಾ…? ಹೀಗೊಂದು ಅನುಮಾನ ಶುರುವಾಗಿದೆ.

    karnataka highcourt

    ಹೈಕೋರ್ಟ್ ಹೇಳಿದ್ದೇನು?: ರಾಜಕೀಯ ಪಕ್ಷಗಳು ಬರುತ್ತವೆ. ಅಧಿಕಾರಕ್ಕೆ ಬರುವ ಸರ್ಕಾರಗಳು ಬೇರೆ ಬೇರೆ ತೀರ್ಮಾನಗಳನ್ನು ಕೈಗೊಳ್ಳುತ್ತವೆ. ಅದರ ಬಗ್ಗೆ ನಾವೇನೂ ಹೇಳಲ್ಲ. ನಾವು ಗಮನಿಸಿರುವ ಹಾಗೆ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ. ಆದರೆ ಎಫ್‍ಐಆರ್ ವಿಚಾರದಲ್ಲಿ ಮೈಲಿಗಳಷ್ಟು ದೂರು ಉಳಿಯುತ್ತೇವೆ. ಇದು ಮೇಲ್ಮನವಿ ಹಿಂಪಡೆಯುವ ವಿಚಾರವಷ್ಟೇ. ಅದನ್ನು ಹೊರತು ಪಡಿಸಿ ವಿಶೇಷವಾಗಿ ಯಾವ ಅಂಶವನ್ನು ಪರಿಗಣಿಸಿಲ್ಲ ಎನ್ನುವ ಮೂಲಕ ಕೋರ್ಟ್ ಕೇವಲ ಮೇಲ್ಮನವಿ ವಾಪಸ್ಸಾತಿ ವಿಚಾರವನ್ನು ಮಾತ್ರ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಬಹುದಾಗಿದೆ. ಇದನ್ನೂ ಓದಿ: ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ- CBIಗೆ ವಹಿಸಿದ್ದ ಕೇಸ್ ಹಿಂಪಡೆಯಲು ಸಂಪುಟ ಸಮ್ಮತಿ

    ಸದ್ಯ ಪ್ರಕರಣದಲ್ಲಿ ಹೈಕೋರ್ಟ್‍ನ ಆದೇಶದಿಂದ ಸಿಬಿಐ ನಿರಾಳವಾಗಿದೆ. ಹಾಗಾದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಕರಣದಲ್ಲಿ ಸಿಬಿಐ ಮುಂದೇನು ಮಾಡಬಹುದು ಎನ್ನುವ ಕುತೂಹಲವೂ ಇದೆ. ಡಿಕೆಶಿಗೆ ಸಿಬಿಐ ನೋಟಿಸ್ ಕೊಡಲು ಅವಕಾಶ ಇದೆ. ಈಗಾಗಲೇ 90% ತನಿಖೆ ಮುಕ್ತಾಯಗೊಳಿಸಿರೋ ಸಿಬಿಐ, ಮತ್ತೆ ನೋಟಿಸ್ ನೀಡಿ ವಿಚಾರಣೆ ಹಾಜರಾಗಲು ಸೂಚಿಸುತ್ತಾ..?, ಅಥವಾ ಅದರ ಬದಲಾಗಿ ನೇರವಾಗಿ ಕೋರ್ಟಿಗೆ ದೋಷಾರೋಪ ಪಟ್ಟಿ ಹಾಕ್ತಾರಾ…? ಎಂಬ ಕುತೂಹಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

  • ಸಿಬಿಐ ಅರ್ಜಿ ವಜಾ – ಶಿವಕುಮಾರ್‌ಗೆ ಸುಪ್ರೀಂನಿಂದ ಬಿಗ್‌ ರಿಲೀಫ್

    ಸಿಬಿಐ ಅರ್ಜಿ ವಜಾ – ಶಿವಕುಮಾರ್‌ಗೆ ಸುಪ್ರೀಂನಿಂದ ಬಿಗ್‌ ರಿಲೀಫ್

    ನವದೆಹಲಿ: ಆದಾಯಕ್ಕೂ ಮೀರಿ‌ ಆಸ್ತಿಗಳಿಕೆ ಪ್ರಕರಣದಲ್ಲಿ (Disproportionate Assets Case) ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಸಿಬಿಐ (CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾ ಮಾಡಿದೆ.

    2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆಗೆ ಡಿಕೆ ಶಿವಕುಮಾರ್ ರಾಜ್ಯ ಹೈಕೋರ್ಟ್‌ನಿಂದ ಮಧ್ಯಂತರ ತಡೆ ತಂದಿದ್ದರು. ಆದೇಶ ವಿಸ್ತರಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಫೆಬ್ರವರಿ 10ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

    ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಆರ್ ಗವಾವಿ, ನ್ಯಾ.ಸಿ.ಟಿ.ರವಿಕುಮಾರ್ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠ ಮಧ್ಯಂತರ ತಡೆಯಾಗಿರುವ ಹಿನ್ನಲೆ ಈ ಹಂತದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿದೆ.  ಇದನ್ನೂ ಓದಿ: ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

    ಫೆಬ್ರವರಿ 10 ರಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಹೈಕೋರ್ಟ್ ಸೂಚಿಸಿತ್ತು. ಶಿವಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣಗಳು 2020 ರಂದು ರದ್ದಾಗಿವೆ ಎಂದು ಸೂಚಿಸಿದ್ದ ಹೈಕೋರ್ಟ್, ಕಳೆದ ಎರಡು ವರ್ಷಗಳ ತನಿಖೆಯ ಪ್ರಗತಿಯ ಕುರಿತು ಸಿಬಿಐ ಅನ್ನು ಪ್ರಶ್ನಿಸಿತ್ತು. ಅಷ್ಟೇ ಅಲ್ಲದೇ ಅಂತಿಮ ವರದಿಯನ್ನು ಯಾವಾಗ ಸಲ್ಲಿಸುತ್ತೀರಿ ಎಂದು ಕೇಳಿ ಮಧ್ಯಂತರ ತಡೆ ನೀಡಿತ್ತು.

    ಏನಿದು ಪ್ರಕರಣ?
    2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೆರೋಲ್ ಮೇಲೆ ರಿಲೀಸ್‍ಗೆ ಶಶಿಕಲಾ ಪ್ಲಾನ್

    ಪೆರೋಲ್ ಮೇಲೆ ರಿಲೀಸ್‍ಗೆ ಶಶಿಕಲಾ ಪ್ಲಾನ್

    ಬೆಂಗಳೂರು: ಹಾಗೂ ಹೀಗೂ ತನ್ನ ಬಂಟನನ್ನ ಅಧಿಕಾರಕ್ಕೆ ತಂದ ಶಶಿಕಲಾ ಅಲಿಯಾಸ್ ಚಿನ್ನಮ್ಮ ತನ್ನಾಸೆಯಂತೆಯೇ ತನ್ನ ಮುಂದೆಯೇ ಅನಧಿಕೃತವಾಗಿಯಾದ್ರೂ ಸಚಿವ ಸಂಪುಟ ಸಭೆ ನಡೆಸೋ ಪ್ಲಾನ್ ಮಾಡಿದ್ದಾರೆ. ಆದ್ರೆ, ಸಿಎಂ ಆಗೋ ಕನಸು ಅರಳುವ ಮುನ್ನವೇ ಕಮರಿ ಹೋಗಿರೊದ್ರಿಂದ ಚಿನ್ನಮ್ಮ ಮತ್ತೊಂದು ಪ್ಲಾನ್ ಮಾಡಿದ್ದಾರೆ. ಅದು ಬೇರೇನೂ ಅಲ್ಲ ಪೆರೋಲ್ ಪ್ಲಾನ್.

    ಮೊನ್ನೆಯಷ್ಟೇ ಜೈಲು ಸೇರಿರೋ ಶಶಿಕಲಾ ರಾಜಕೀಯ ದಾಳವನ್ನ ಜೈಲಿನಲ್ಲಿಯೇ ಕುಳಿತು ಉರುಳಿಸ್ತಾ ಇದ್ದಾರೆ. ಇನ್ನು ಪಗಡೆಯಾಗಿರೋ ಪಳನಿಸ್ವಾಮಿ ಅಂಡ್ ಗ್ಯಾಂಗ್ ಚಿನ್ನಮ್ಮನ ಮಾತನ್ನ ಕೇಳಿಯೇ ಸರ್ಕಾರ ನಡೆಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದ್ರೆ ಶಶಿಕಲಾ ಜೈಲಿನಲ್ಲಿಯೇ ಕುಳಿತು ಆಟ ಆಡೋದಕ್ಕೆ ಇಷ್ಟ ಪಟ್ಟಂತಿಲ್ಲ. ಕಣ್ಣ ಮುಂದೆಯೇ ಸರ್ಕಾರ ನಡೆಸಬೇಕು ಅಂದುಕೊಂಡಿರೋದ್ರಿಂದ ಶಶಿಕಲಾ ಹತ್ತು ದಿನ ಕಳೆದ ಬಳಿಕ ಅನಾರೋಗ್ಯದ ನೆಪ ಹೇಳಿ ಜೈಲಾಧಿಕಾರಿಯ ಮುಂದೆ ಪೆರೋಲ್ ಕೇಳುವ ಎಲ್ಲಾ ಲಕ್ಷಣಗಳೂ ಇದೆ.

    ಸಂಜಯ್ ದತ್ತ್ ಪ್ಲಾನ್ ಫಾಲೋ?!: ಸುಪ್ರೀಂ ಕೋರ್ಟ್ ಅನಿರೀಕ್ಷಿತವಾಗಿ ಆದೇಶವನ್ನು ನೀಡ್ತು. ಮೊದ್ಲೇ ನಾನು ಅನಾರೋಗ್ಯದಲ್ಲಿ ಇದ್ದೆ. ತಯಾರಿ ಮಾಡಿಕೊಳ್ಳುವ ಸಲುವಾಗಿ ನಾಲ್ಕು ವಾರ ಗಡವು ಕೇಳಿದ್ರೂ ಕೋರ್ಟ್ ನಿರಾಕರಣೆ ಮಾಡಿದ್ರಿಂದ ಪೆರೋಲ್ ನೀಡುವಂತೆ ಜೈಲಾಧಿಕಾರಿಗೆ ಚಿನ್ನಮ್ಮ ಮನವಿ ಮಾಡಿಕೊಳ್ಳಲಿದ್ದಾರೆ. ಜೈಲಾಧಿಕಾರಿಗಳು ಚೆನ್ನೈನ ಜಿಲ್ಲಾಧಿಕಾರಿಗೆ ಪತ್ರ ಬರೆದು ಶಶಿಕಲಾಗೆ ಪೆರೋಲ್ ನೀಡೋದ್ರಿಂದ ತೊಂದರೆಯಾಗೋಲ್ವಾ ಅಂತ ವರದಿಯನ್ನು ತರಿಸಿಕೊಂಡು ಬಳಿಕ ಶಶಿಕಲಾಗೆ ಪೆರೋಲ್ ನೀಡುವ ಸಾಧ್ಯತೆಗಳಿವೆ. ಈ ಹಿಂದೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಕಾರಣ ಜೈಲು ಪಾಲಾಗಿದ್ದ ಸಂಜಯ್ ದತ್ ಕೂಡ ಇದೇ ಪ್ಲಾನ್ ಮಾಡಿ ಜೈಲಿನಿಂದ ಹೊರಬಂದಿದ್ರು.

    ಜೈಲಿಗೆ ಬರೋವಾಗ ರೋಡ್ ಶೋ ಮಾಡಿ ಬಂದ ಶಶಿಕಲಾ ಪೆರೋಲ್ ಸಿಕ್ರೆ ಈ ಎಲ್ಲಾ ಅವಕಾಶಗಳಿಗೂ ಬ್ರೇಕ್ ಹಾಕಿ ವಿಶೇಷ ವಿಮಾನದಲ್ಲಿ ಚೆನ್ನೈಗೆ ಪ್ರಯಾಣ ಬೆಳಸೋ ಸಾಧ್ಯತೆಗಳಿವೆ. ಇನ್ನೊಂದು ಹತ್ತು ದಿನದ ಒಳಗೆ ಶಶಿಕಲಾ ತನ್ನ ಕಣ್ಣು ಮುಂದೆಯೇ ಅಧಿಕಾರ ನಡೆಸೋ ಎಲ್ಲಾ ಪ್ಲಾನ್ ಮಾಡಿಕೊಂಡಿದ್ದಾರೆ.